< ಯಾಜಕಕಾಂಡ 8 >

1 ಯೆಹೋವನು ಮೋಶೆಯೊಂದಿಗೆ ಮಾತನಾಡಿ,
परमेश्वर मोशेला म्हणाला,
2 “ನೀನು ಆರೋನನನ್ನು ಮತ್ತು ಅವನ ಗಂಡು ಮಕ್ಕಳನ್ನು ಕರೆದುಕೊಂಡು ಅವರಿಗೆ ಬೇಕಾದ ದೀಕ್ಷಾವಸ್ತ್ರಗಳನ್ನು ಮತ್ತು ಅಭಿಷೇಕತೈಲವನ್ನು, ದೋಷಪರಿಹಾರಕ್ಕಾಗಿ ಸಮರ್ಪಿಸಬೇಕಾದ ಹೋರಿಯನ್ನು, ಎರಡು ಟಗರುಗಳನ್ನು ಮತ್ತು ಹುಳಿಯಿಲ್ಲದ ಭಕ್ಷ್ಯಗಳು ತುಂಬಿರುವ ಪುಟ್ಟಿಯನ್ನು ತೆಗೆದುಕೊಂಡುಬಂದು,
अहरोन व त्याच्याबरोबर त्याचे पुत्र ह्यांना आणि त्यांची वस्त्रे अभिषेकाचे तेल, पापार्पणाचा गोऱ्हा दोन मेंढे आणि बेखमीर भाकरीची टोपली घेऊन,
3 ಜನಸಮೂಹವನ್ನೆಲ್ಲಾ ದೇವದರ್ಶನದ ಗುಡಾರದ ಬಾಗಿಲಿನ ಹತ್ತಿರಕ್ಕೆ ಕರೆದುಕೊಂಡು ಬಾ” ಎಂದು ಹೇಳಿದನು.
दर्शनमंडपाच्या दाराजवळ सर्व मंडळीला एकत्र जमवून आण.
4 ಯೆಹೋವನು ಹೇಳಿದಂತೆಯೇ ಮೋಶೆಯು ಮಾಡಿದನು. ಜನಸಮೂಹವೆಲ್ಲಾ ದೇವದರ್ಶನದ ಗುಡಾರದ ಬಾಗಿಲಿನ ಹತ್ತಿರ ಕೂಡಿಬಂದರು.
परमेश्वराच्या आज्ञेप्रमाणे मोशेने केले. मंडळी दर्शनमंडपाच्या प्रवेशद्वाराशी जमली.
5 ಆಗ ಮೋಶೆ ಅವರಿಗೆ, “ನಾನು ಈಗ ಮಾಡುವ ಕಾರ್ಯವು ಯೆಹೋವನು ಆಜ್ಞಾಪಿಸಿದ್ದು” ಎಂದು ಹೇಳಿದನು.
मग मोशे मंडळीला म्हणाला, “परमेश्वराने जे करायचे आज्ञापिले, ते हे.”
6 ಆಗ ಮೋಶೆ ಆರೋನನನ್ನು ಮತ್ತು ಅವನ ಮಕ್ಕಳನ್ನು ಹತ್ತಿರಕ್ಕೆ ಬರಮಾಡಿಕೊಂಡು ಸ್ನಾನಮಾಡಿಸಿದನು.
मग मोशेने अहरोन व त्याच्या मुलांना आणवून पाण्याने आंघोळ घातली.
7 ಆ ಮೇಲೆ ಯೆಹೋವನು ಆಜ್ಞಾಪಿಸಿದಂತೆ ಆರೋನನಿಗೆ ನಿಲುವಂಗಿಯನ್ನು ತೊಡಿಸಿ, ನಡುಕಟ್ಟನ್ನು ಸುತ್ತಿ, ಮೇಲಂಗಿಯನ್ನು ತೊಡಿಸಿ, ಏಫೋದ್ ಕವಚವನ್ನು ಹಾಕಿಸಿ, ಕವಚದ ಮೇಲೆ ಸೊಗಸಾಗಿ ನೇಯ್ದ ನಡುಕಟ್ಟನ್ನು ಕಟ್ಟಿದನು, ಅದರಿಂದ ಕವಚವನ್ನು ಅವನಿಗೆ ಹೊದಿಸಿದನು.
मग त्याने अहरोनाला विणलेला सदरा घातला, त्याच्या कमरेला कमरबंद बांधला; मग त्यास झगा घातला, नंतर त्याच्यावर एफोद चढवला आणि त्यावर कुशलतेने विणलेली पट्टी आवळून बांधली.
8 ಅವನು ಎದೆಯ ಮೇಲೆ ಪದಕವನ್ನು ಬಿಗಿದು ಆರೋನನಿಗೆ ಹಾಕಿ ಅದರೊಳಗೆ ಊರೀಮ್ ಮತ್ತು ತುಮ್ಮೀಮ್ ಎಂಬ ವಸ್ತುಗಳನ್ನು ಇಟ್ಟನು.
मग मोशेने त्याच्यावर ऊरपट बांधला आणि त्याच्यात उरीम व थुम्मीम ठेवले;
9 ಅವನ ತಲೆಗೆ ಪೇಟವನ್ನು ಇಟ್ಟು, ಅದರ ಮುಂಭಾಗದಲ್ಲಿ ಬಂಗಾರದ ಪಟ್ಟಿಯನ್ನು ಕಟ್ಟಿದನು; ಅದೇ ಅವನಿಗೆ ಪರಿಶುದ್ಧವಾದ ಕಿರೀಟದಂತೆ ಇತ್ತು. ಯೆಹೋವನು ಆಜ್ಞಾಪಿಸಿದಂತೆಯೇ ಮೋಶೆಯು ಮಾಡಿದನು.
नंतर त्याच्या डोक्यावर फेटा ठेवला; आणि फेट्याच्या पुढल्या भागावर सोन्याची पट्टी म्हणजे पवित्र मुकुट ठेवला; परमेश्वराने जसे करण्यास सांगितले होते, तसेच मोशेने केले.
10 ೧೦ ಅನಂತರ ಮೋಶೆ ಅಭಿಷೇಕತೈಲವನ್ನು ತೆಗೆದುಕೊಂಡು, ದೇವದರ್ಶನದ ಗುಡಾರವನ್ನು ಮತ್ತು ಅದರಲ್ಲಿದ್ದ ಎಲ್ಲವನ್ನು ಅಭಿಷೇಕಿಸಿ ಪ್ರತಿಷ್ಠಿಸಿದನು.
१०मग मोशेने अभिषेकाचे तेल घेतले आणि पवित्र निवासमंडपावर व त्यातील सर्व वस्तूंना आभिषेक करुन त्यांना पवित्र केले.
11 ೧೧ ಯಜ್ಞವೇದಿಯ ಮೇಲೆ ಏಳು ಸಾರಿ ಆ ತೈಲವನ್ನು ಚಿಮುಕಿಸಿ, ಯಜ್ಞವೇದಿಯನ್ನು ಅದರ ಎಲ್ಲಾ ಉಪಕರಣಗಳನ್ನು, ಬೋಗುಣಿಯನ್ನು ಅದರ ಪೀಠವನ್ನು ಅಭಿಷೇಕಿಸಿ ಪ್ರತಿಷ್ಠಿಸಿದನು.
११अभिषेकाच्या तेलातून थोडे घेऊन त्याने ते वेदीवर सात वेळा शिंपडले आणि वेदी, तिची सर्व उपकरणे, गंगाळ व त्याची बैठक यांच्यावरही त्याने अभिषेकाचे तेल शिंपडून पवित्र केले.
12 ೧೨ ಆರೋನನನ್ನು ಪ್ರತಿಷ್ಠಿಸುವುದಕ್ಕಾಗಿ ಆ ತೈಲದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಆರೋನನ ತಲೆಯ ಮೇಲೆ ಹೊಯ್ದು ಅವನನ್ನು ಅಭಿಷೇಕಿಸಿದನು.
१२मग मोशेने थोडे अभिषेकाचे तेल अहरोनाच्या डोक्यावर ओतले व अशा प्रकारे त्याने अभिषेक करून त्यास पवित्र केले.
13 ೧೩ ಆ ಮೇಲೆ ಯೆಹೋವನು ಆಜ್ಞಾಪಿಸಿದಂತೆ ಮೋಶೆ ಆರೋನನ ಮಕ್ಕಳನ್ನು ಹತ್ತಿರಕ್ಕೆ ಕರೆದು, ಅವರಿಗೆ ನಿಲುವಂಗಿಗಳನ್ನು ತೊಡಿಸಿ, ನಡುಕಟ್ಟುಗಳನ್ನು ಸುತ್ತಿ, ತಲೆಗೆ ಪೇಟಗಳನ್ನು ಇಟ್ಟನು.
१३मग मोशेने अहरोनाच्या मुलांना आणले, त्यांना विणलेले सदरे घातले, कमरेस कमरबंद घातले व त्यांच्या डोक्यांना फेटे बांधले; परमेश्वराने मोशेला आज्ञा दिल्याप्रमाणे त्याने हे केले.
14 ೧೪ ಅನಂತರ ಅವನು ದೋಷಪರಿಹಾರಕ್ಕಾಗಿ ಹೋರಿಯನ್ನು ತರಿಸಿದನು. ಆಗ ಆರೋನನೂ ಮತ್ತು ಅವನ ಮಕ್ಕಳೂ ತಮ್ಮ ಕೈಗಳನ್ನು ಅದರ ತಲೆಯ ಮೇಲೆ ಇಟ್ಟರು.
१४मग मोशेने पापार्पणाचा गोऱ्हा आणला आणि अहरोन व त्याचे पुत्र ह्यांनी त्या गोऱ्ह्याच्या डोक्यावर आपले हात ठेवले.
15 ೧೫ ಆ ಹೋರಿಯನ್ನು ವಧಿಸಿದ ಮೇಲೆ ಮೋಶೆ ಅದರ ರಕ್ತವನ್ನು ತನ್ನ ಬೆರಳಿನಿಂದ ಯಜ್ಞವೇದಿಯ ಕೊಂಬುಗಳಿಗೆ ಸುತ್ತಲೂ ಹಚ್ಚಿ, ಯಜ್ಞವೇದಿಯನ್ನು ಶುದ್ಧಪಡಿಸಿ, ಉಳಿದ ರಕ್ತವನ್ನು ಯಜ್ಞವೇದಿಯ ಬುಡದಲ್ಲಿ ಸುರಿದುಬಿಟ್ಟನು. ಇದರ ನಿಮಿತ್ತ ದೋಷಪರಿಹಾರಕ ಆಚಾರವನ್ನು ನಡೆಸಿ, ಅದನ್ನು ಪ್ರತಿಷ್ಠಿಸಿದನು.
१५मग मोशेने तो वधला व त्याचे रक्त घेऊन आपल्या बोटाने वेदीच्या सर्व शिंगांना ते लावले, अशाप्रकारे त्याने वेदी शुद्ध केली आणि उरलेले रक्त वेदीच्या पायथ्यावर ओतले, देवासाठी त्याने ती वेगळी केली. या प्रकारे ती पवित्र करण्यासाठी त्याने प्रायश्चित्त केले.
16 ೧೬ ಆ ಹೋರಿಯ ಕರುಳುಗಳ ಮೇಲಣ ಕೊಬ್ಬನ್ನು, ಕಳಿಜದ ಹತ್ತಿರವಿರುವ ಕೊಬ್ಬನ್ನು, ಎರಡು ಮೂತ್ರಪಿಂಡಗಳನ್ನು ಅವುಗಳ ಮೇಲಿರುವ ಕೊಬ್ಬನ್ನು ಮೋಶೆ ತೆಗೆದುಕೊಂಡು ಯಜ್ಞವೇದಿಯ ಮೇಲೆ ಹೋಮ ಮಾಡಿದನು.
१६गोऱ्हाच्या आंतड्यावरील सर्व चरबी, काळजावरील चरबीचा पडदा आणि चरबीसहीत दोन्ही गुरदे घेऊन मोशेने वेदीवर त्यांचा होम केला.
17 ೧೭ ಯೆಹೋವನು ಆಜ್ಞಾಪಿಸಿದಂತೆ ಅದರಲ್ಲಿ ಉಳಿದದ್ದನ್ನೆಲ್ಲಾ ಅಂದರೆ ಅದರ ಚರ್ಮವನ್ನು, ಮಾಂಸವನ್ನು ಮತ್ತು ಕಲ್ಮಷವನ್ನು ಪಾಳೆಯದ ಹೊರಗೆ ತೆಗೆದುಕೊಂಡು ಹೋಗಿ ಬೆಂಕಿಯಿಂದ ಸುಡಿಸಿಬಿಟ್ಟನು.
१७परंतु गोऱ्हा, त्याचे कातडे, त्याचे मांस व त्याचे शेण ही सर्व छावणीबाहेर नेऊन अग्नीत जाळून टाकली, परमेश्वराने आज्ञा दिल्याप्रमाणे मोशेने हे केले.
18 ೧೮ ತರುವಾಯ ಅವನು ಸರ್ವಾಂಗಹೋಮಕ್ಕಾಗಿ ಟಗರನ್ನು ತರಿಸಿದನು. ಆರೋನನೂ ಮತ್ತು ಅವನ ಮಕ್ಕಳೂ ಅದರ ತಲೆಯ ಮೇಲೆ ತಮ್ಮ ಕೈಗಳನ್ನು ಇಟ್ಟರು.
१८मग त्याने होमापर्णाचा मेंढा आणला. अहरोन व त्याचे पुत्र ह्यांनी त्याच्या डोक्यावर आपले हात ठेवले.
19 ೧೯ ಅದನ್ನು ವಧಿಸಿದ ಮೇಲೆ ಮೋಶೆ ಅದರ ರಕ್ತವನ್ನು ಯಜ್ಞವೇದಿಯ ಸುತ್ತಲೂ ಎರಚಿದನು.
१९मग मोशेने तो वधला व त्याचे रक्त त्याने वेदीवर व सभोवती शिंपडले.
20 ೨೦ ಆ ಟಗರನ್ನು ತುಂಡುತುಂಡಾಗಿ ಕಡಿದ ಮೇಲೆ ಮೋಶೆ ಅದರ ತಲೆಯನ್ನು, ಮಾಂಸಭಾಗಗಳನ್ನು ಮತ್ತು ಕೊಬ್ಬನ್ನು ಹೋಮಮಾಡಿದನು.
२०मग मोशेने त्या मेंढ्याचे कापून तुकडे केले, मग त्याचे डोके, तुकडे व चरबी हे सर्व घेऊन त्याने वेदीवर होम केला.
21 ೨೧ ಅದರ ಕರುಳುಗಳನ್ನು ಮತ್ತು ಕಾಲುಗಳನ್ನು ನೀರಿನಿಂದ ತೊಳೆದು, ಮೋಶೆ ಆ ಟಗರನ್ನು ಯಜ್ಞವೇದಿಯ ಮೇಲೆ ಪೂರ್ತಿಯಾಗಿ ಹೋಮ ಮಾಡಿದನು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಅದು ಅಗ್ನಿಯ ಮೂಲಕ ಯೆಹೋವನಿಗೆ ಪರಿಮಳಯುಕ್ತ ಸರ್ವಾಂಗಹೋಮವಾಗಿತ್ತು.
२१त्याची आतडी पाय पाण्याने धुवून मोशेने वेदीवर संपूर्ण मेंढ्याचे होमार्पण केले. ते परमेश्वरासाठी सुवासिक हव्य झाले, परमेश्वराने आज्ञा दिल्याप्रमाणे त्याने हे केले.
22 ೨೨ ಆ ಮೇಲೆ ಅವನು ಯಾಜಕ ಪಟ್ಟಾಭಿಷೇಕಕ್ಕಾಗಿ ಸಮರ್ಪಿಸಬೇಕಾದ ಎರಡನೆಯ ಟಗರನ್ನು ತರಿಸಿದನು. ಆರೋನನೂ ಮತ್ತು ಅವನ ಮಕ್ಕಳೂ ಅದರ ತಲೆಯ ಮೇಲೆ ತಮ್ಮ ಕೈಗಳನ್ನಿಟ್ಟರು.
२२मग मोशेने दुसरा मेंढा आणला; तो अहरोन व त्याची मुले यांची याजक म्हणून नेमणूक झाली हे दाखवण्याकरिता होता. अहरोन व त्याच्या मुलांनी आपले हात त्या मेंढ्याच्या डोक्यावर ठेवले.
23 ೨೩ ಅದನ್ನು ವಧಿಸಿದ ನಂತರ ಮೋಶೆ ಅದರ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಆರೋನನ ಬಲಗಿವಿಯ ತುದಿಗೂ, ಬಲಗೈಯ ಹೆಬ್ಬೆರಳಿಗೂ ಮತ್ತು ಬಲಗಾಲಿನ ಹೆಬ್ಬೆಟ್ಟಿಗೂ ಹಚ್ಚಿದನು.
२३मोशेने त्याचा वध केला व त्याचे थोडे रक्त घेऊन अहरोनाच्या उजव्या कानाच्या पाळीला: उजव्या हाताच्या अंगठ्याला व उजव्या पायाच्या अंगठ्याला लावले.
24 ೨೪ ಆಗ ಮೋಶೆ ಆರೋನನ ಮಕ್ಕಳನ್ನು ಹತ್ತಿರಕ್ಕೆ ಕರೆದು, ಆ ರಕ್ತದಲ್ಲಿ ಸ್ವಲ್ಪವನ್ನು ಅವರವರ ಬಲಗಿವಿಯ ತುದಿಗೂ, ಬಲಗೈಯ ಹೆಬ್ಬೆರಳಿಗೂ ಬಲಗಾಲಿನ ಹೆಬ್ಬೆಟ್ಟಿಗೂ ಹಚ್ಚಿ, ಉಳಿದ ರಕ್ತವನ್ನು ಯಜ್ಞವೇದಿಯ ಸುತ್ತಲೂ ಎರಚಿದನು.
२४मग मोशेने अहरोनाच्या मुलांना आणून त्याच्या उजव्या कानाच्या पाळीला, उजव्या हाताच्या अंगठ्याला व उजव्या पायाच्या अंगठ्याला, काही रक्त लावले व मग ते रक्त त्याने वेदीवर व सभोवती शिंपडले.
25 ೨೫ ಅವನು ಆ ಟಗರಿನ ಕೊಬ್ಬನ್ನು ಅಂದರೆ ಬಾಲದ ಕೊಬ್ಬು, ಕರುಳುಗಳ ಮೇಲಣ ಎಲ್ಲಾ ಕೊಬ್ಬು, ಕಳಿಜದ ಹತ್ತಿರವಿರುವ ಕೊಬ್ಬು, ಎರಡು ಮೂತ್ರಪಿಂಡಗಳು, ಅವುಗಳ ಮೇಲಿದ್ದ ಕೊಬ್ಬನ್ನು ಮತ್ತು ಬಲತೊಡೆಯನ್ನು,
२५मोशेने चरबी, चरबीदार शेपूट, आंतड्यावरील सर्व चरबी काळजावरील चरबीचा पडदा, दोन्ही गुरदे, त्यांच्यावरील चरबी व उजवी मांडी घेतली;
26 ೨೬ ಯೆಹೋವನ ಸನ್ನಿಧಿಯಲ್ಲಿ ಪುಟ್ಟಿಯಲ್ಲಿ ಇಟ್ಟಿದ್ದ ಹುಳಿಯಿಲ್ಲದ ಭಕ್ಷ್ಯಗಳಲ್ಲಿ ಒಂದು ರೊಟ್ಟಿಯನ್ನು, ಎಣ್ಣೆಮಿಶ್ರವಾದ ಒಂದು ಹೋಳಿಗೆಯನ್ನು ಹಾಗು ಒಂದು ಕಡುಬನ್ನು ತೆಗೆದುಕೊಂಡು ಈ ಭಕ್ಷ್ಯಗಳನ್ನು ಆ ಕೊಬ್ಬಿನ ಮತ್ತು ಬಲದೊಡೆಯ ಮೇಲೆ ಇಟ್ಟನು.
२६परमेश्वरासमोर ठेवलेल्या बेखमीर भाकरीच्या टोपलीतील एक बेखमीर पोळी, तेल लावलेली एक भाकर व एक पापडी घेऊन त्या, चरबीवर व मागच्या बाजूच्या उजव्या मांडीवर ठेवल्या.
27 ೨೭ ಅವನು ಅವೆಲ್ಲವುಗಳನ್ನು ಆರೋನನ ಮತ್ತು ಅವನ ಮಕ್ಕಳ ಕೈಗಳಿಗೆ ಕೊಟ್ಟು ನೈವೇದ್ಯವೆಂದು ಸೂಚಿಸುವುದಕ್ಕೆ ಯೆಹೋವನ ಸನ್ನಿಧಿಯಲ್ಲಿ ಅದನ್ನು ನಿವಾಳಿಸಿದನು.
२७हे सर्व त्याने अहरोन व त्याच्या मुलांच्या हातावर ठेवले आणि परमेश्वरासमोर ओवाळणीचे अर्पण म्हणून ते ओवाळले.
28 ೨೮ ಆ ಮೇಲೆ ಮೋಶೆ ಅವುಗಳನ್ನು ಅವರ ಕೈಯಿಂದ ತೆಗೆದುಕೊಂಡು ಸರ್ವಾಂಗಹೋಮದ್ರವ್ಯದ ಮೇಲಿಟ್ಟು ಯಜ್ಞವೇದಿಯಲ್ಲಿ ಅದನ್ನು ಹೋಮಮಾಡಿದನು. ಅದು ಅಗ್ನಿಯ ಮೂಲಕ ಯೆಹೋವನಿಗೆ ಪರಿಮಳಯುಕ್ತ ಪಟ್ಟಾಭಿಷೇಕ ಯಜ್ಞವಾಗಿತ್ತು.
२८मग मोशेने ते त्यांच्या हातातून घेऊन वेदीवरील होमार्पणासहीत त्यांचा होम केला; अहरोन व त्याचे पुत्र ह्यांचे याजक म्हणून समर्पण करण्यासाठी हे अर्पण केले. हे होमार्पण होते हे सुवासीक हव्य होय. हे अग्नीद्वारे परमेश्वरास केलेले अर्पण होते.
29 ೨೯ ಮೋಶೆ ಅದರ ಎದೆಯ ಭಾಗವನ್ನು ತೆಗೆದುಕೊಂಡು ನೈವೇದ್ಯವಾಗಿ ಯೆಹೋವನ ಸನ್ನಿಧಿಯಲ್ಲಿ ನಿವಾಳಿಸಿದನು. ಯೆಹೋವನು ಆಜ್ಞಾಪಿಸಿದಂತೆ ಆ ಪಟ್ಟಾಭಿಷೇಕಯಜ್ಞದ ಟಗರಿನಲ್ಲಿ ಆ ಎದೆಯ ಭಾಗವೇ ಮೋಶೆಗೆ ಸಲ್ಲಬೇಕಾದದ್ದು.
२९मोशेने मेंढ्याच्या उराचा भाग घेऊन ओवाळणीचे अर्पण म्हणून तो परमेश्वरासमोर ओवाळला; याजकाच्या समर्पणासाठी असलेल्या मेंढ्याचा हा भाग मोशेच्या वाट्याचा होता; परमेश्वराने दिलेल्या आज्ञेप्रमाणे मोशेने हे केले.
30 ೩೦ ಆಗ ಮೋಶೆ ಅಭಿಷೇಕತೈಲದಲ್ಲಿ ಮತ್ತು ಯಜ್ಞವೇದಿಯ ಮೇಲಿದ್ದ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಆರೋನನ ಹಾಗೂ ಅವನ ವಸ್ತ್ರಗಳ ಮೇಲೆಯೂ, ಅವನ ಮಕ್ಕಳ ಮತ್ತು ಅವರ ವಸ್ತ್ರಗಳ ಮೇಲೆಯೂ ಚಿಮುಕಿಸಿದನು. ಹೀಗೆ ಆರೋನನನ್ನು ಅವನ ವಸ್ತ್ರಗಳನ್ನು, ಅವನ ಮಕ್ಕಳನ್ನು ಮತ್ತು ಅವರ ವಸ್ತ್ರಗಳನ್ನು ಪ್ರತಿಷ್ಠಿಸಿದನು.
३०मग मोशेने अभिषेकाचे काही तेल व वेदीवरील काही रक्त घेऊन अहरोन व त्याची वस्त्रे, व त्याच्यासहीत त्याचे पुत्र व त्यांची वस्त्रे ह्यांच्यावर शिंपडले आणि अहरोन व त्याची वस्त्रे व त्याच्याबरोबर त्याचे पुत्र व त्यांची वस्त्रे पवित्र केली.
31 ೩೧ ಮೋಶೆ ಆರೋನನಿಗೂ ಮತ್ತು ಅವನ ಮಕ್ಕಳಿಗೂ, “ಮಾಂಸವನ್ನು ನೀವು ದೇವದರ್ಶನದ ಗುಡಾರದ ಬಾಗಿಲಿನ ಹತ್ತಿರ ಬೇಯಿಸಿ ಅದನ್ನು ಮತ್ತು ಪಟ್ಟಾಭಿಷೇಕಕ್ಕಾಗಿ ಪುಟ್ಟಿಯಲ್ಲಿ ಇಟ್ಟಿರುವ ಭಕ್ಷ್ಯಗಳನ್ನು ಅಲ್ಲೇ ಊಟಮಾಡಬೇಕು. ‘ಆರೋನನೂ ಅವನ ಮಕ್ಕಳೂ ಅದನ್ನು ತಿನ್ನಬೇಕು’ ಎಂಬುದೇ ನನಗಾದ ಅಪ್ಪಣೆ.
३१मोशे अहरोन व त्याचे पुत्र ह्याना म्हणाला, “मी सांगितल्याप्रमाणे, ‘अहरोन व त्याच्या मुलांनी हे मांस खावे;’ तेव्हा ही भाकरीची टोपली व याजकाच्या समर्पणासाठीचे हे मांस घ्या; दर्शनमंडपाच्या दारापाशी ते शिजवा आणि मी सांगितल्याप्रमाणे मांस व भाकर तेथेच खा.
32 ೩೨ ಆ ಮಾಂಸದಲ್ಲಿಯೂ, ಭಕ್ಷ್ಯಗಳಲ್ಲಿಯೂ ಉಳಿದದ್ದನ್ನು ನೀವು ಬೆಂಕಿಯಿಂದ ಸುಟ್ಟುಬಿಡಬೇಕು.
३२मांस व भाकर ह्यातून काही उरले तर ते अग्नीत जाळून टाका;
33 ೩೩ ಇದಲ್ಲದೆ ಈ ನಿಮ್ಮ ಯಾಜಕೋದ್ಯೋಗದ ದೀಕ್ಷೆಯು ಪೂರೈಸುವುದಕ್ಕೆ ಏಳು ದಿನಗಳು ಆಗುವುದರಿಂದ ನೀವು ದೇವದರ್ಶನದ ಗುಡಾರದ ಬಾಗಿಲಿನ ಆಚೆಗೆ ಹೋಗಬಾರದು.
३३तुमच्या समर्पणाचा विधी सात दिवस चालेल; ते सात दिवस पूर्ण होईपर्यंत तुम्ही दर्शनमंडपाच्या बाहेर जाऊ नये.
34 ೩೪ ನಿಮ್ಮ ದೋಷಪರಿಹಾರಕ್ಕಾಗಿ ಈ ಹೊತ್ತು ಏನೇನು ನಡೆಯಿತೋ ಅದನ್ನು ಏಳು ದಿನವೂ ನಡೆಸಬೇಕೆಂದು ಯೆಹೋವನು ಆಜ್ಞಾಪಿಸಿದ್ದಾನೆ.
३४परमेश्वराने आज्ञा केली आहे की आज केल्याप्रमाणे तुमच्यासाठी प्रायश्चित करावे.
35 ೩೫ ಆದುದರಿಂದ ನೀವು ಯೆಹೋವನ ಆಜ್ಞೆಯ ಮೇರೆಗೆ ಏಳು ದಿನವೂ ಹಗಲಿರುಳು ದೇವದರ್ಶನ ಗುಡಾರದ ಬಾಗಿಲಿನ ಹತ್ತಿರ ಇರಬೇಕು; ಇಲ್ಲದಿದ್ದರೆ ಸಾಯುವಿರಿ, ಹೀಗೆಯೇ ನನಗೆ ಅಪ್ಪಣೆಯಾಗಿದೆ” ಎಂದು ಹೇಳಿದನು.
३५तेव्हा दर्शनमंडपाच्या दारापाशी तुम्ही सात दिवस व रात्री राहा, ही परमेश्वराची आज्ञा तुम्ही पाळली नाहीतर तुम्ही मराल; कारण मला तशी आज्ञा दिली आहे.”
36 ೩೬ ಯೆಹೋವನು ಮೋಶೆಯ ಮೂಲಕವಾಗಿ ಆಜ್ಞಾಪಿಸಿದಂತೆ ಆರೋನನೂ ಮತ್ತು ಅವನ ಮಕ್ಕಳೂ ಅನುಸರಿಸಿ ನಡೆದರು.
३६तेव्हा मोशेच्याद्वारे परमेश्वराने ज्या गोष्टींविषयी आज्ञा दिली होती त्या सर्व अहरोन व त्याच्या मुलांनी केल्या.

< ಯಾಜಕಕಾಂಡ 8 >