< ಯಾಜಕಕಾಂಡ 9 >
1 ೧ ಎಂಟನೆಯ ದಿನದಲ್ಲಿ ಮೋಶೆ ಆರೋನನನ್ನು, ಅವನ ಮಕ್ಕಳನ್ನು ಮತ್ತು ಇಸ್ರಾಯೇಲರ ಹಿರಿಯರನ್ನು ಕರೆದನು.
Sekizinci gün Musa Harun'la oğullarını ve İsrail ileri gelenlerini çağırdı.
2 ೨ ಅವನು ಆರೋನನಿಗೆ, “ನೀನು ದೋಷಪರಿಹಾರ ಯಜ್ಞಕ್ಕಾಗಿ ಪೂರ್ಣಾಂಗವಾದ ಹೋರಿಕರುವನ್ನು ಮತ್ತು ಸರ್ವಾಂಗಹೋಮಕ್ಕಾಗಿ ಪೂರ್ಣಾಂಗವಾದ ಟಗರನ್ನು ನಿನಗೋಸ್ಕರ ತೆಗೆದುಕೊಂಡು ಯೆಹೋವನ ಸನ್ನಿಧಿಯಲ್ಲಿ ಸಮರ್ಪಿಸಬೇಕು.
Harun'a, “Kendin için günah sunusu olarak kusursuz bir erkek buzağı, yakmalık sunu olarak da kusursuz bir koç al, RAB'be sun” dedi,
3 ೩ ನೀನು ಇಸ್ರಾಯೇಲರ ಸಂಗಡ ಮಾತನಾಡಿ ಅವರಿಗೆ, ‘ಈ ಹೊತ್ತು ಯೆಹೋವನು ಪ್ರತ್ಯಕ್ಷನಾಗುತ್ತಾನೆ, ಆದುದರಿಂದ ನೀವು ಆತನ ಸನ್ನಿಧಿಯಲ್ಲಿ ದೋಷಪರಿಹಾರಕ್ಕಾಗಿ ಸಮರ್ಪಿಸಲು ಒಂದು ಹೋತವನ್ನು, ಸರ್ವಾಂಗಹೋಮಕ್ಕಾಗಿ ಒಂದು ವರ್ಷದ ಪೂರ್ಣಾಂಗವಾದ ಕರುವನ್ನು,
“Sonra İsrail halkına de ki, ‘Günah sunusu olarak bir teke, yakmalık sunu olarak da bir yaşında kusursuz bir buzağı ile bir kuzu alın.
4 ೪ ಕುರಿಯನ್ನು ಸಮಾಧಾನಯಜ್ಞಕ್ಕಾಗಿ ಒಂದು ಹೋರಿಯನ್ನು, ಟಗರನ್ನು ಧಾನ್ಯನೈವೇದ್ಯಕ್ಕಾಗಿ ಎಣ್ಣೆಮಿಶ್ರವಾದ ಪದಾರ್ಥವನ್ನು ತೆಗೆದುಕೊಂಡು ಯೆಹೋವನ ಮುಂದೆ ಬರಬೇಕೆಂದು ಆಜ್ಞಾಪಿಸು’” ಅಂದನು.
RAB'bin huzurunda esenlik sunusu olarak kurban edilmek üzere bir sığır ve bir koçla birlikte zeytinyağıyla yoğrulmuş tahıl sunusu getirin. Çünkü RAB bugün size görünecektir.’”
5 ೫ ಮೋಶೆ ಆಜ್ಞಾಪಿಸಿದ ಮೇರೆಗೆ ಅವರು ಅವುಗಳನ್ನೆಲ್ಲಾ ದೇವದರ್ಶನ ಗುಡಾರದ ಹತ್ತಿರಕ್ಕೆ ತಂದರು. ಸರ್ವಸಮೂಹದವರೆಲ್ಲರೂ ಹತ್ತಿರಕ್ಕೆ ಬಂದು ಯೆಹೋವನ ಸನ್ನಿಧಿಯಲ್ಲಿ ನಿಂತರು.
Musa'nın buyurdukları Buluşma Çadırı'nın önüne getirildi. Herkes yaklaşıp RAB'bin huzurunda toplandı.
6 ೬ ಆಗ ಮೋಶೆ ಅವರಿಗೆ, “ನೀವು ಏನು ಮಾಡಬೇಕೆಂದು ಯೆಹೋವನು ಆಜ್ಞಾಪಿಸಿದ್ದು ಇದೇ; ಅದರಂತೆ ನಡೆದರೆ ಯೆಹೋವನ ಮಹಿಮೆ ನಿಮಗೆ ಪ್ರತ್ಯಕ್ಷವಾಗುವುದು” ಎಂದು ಹೇಳಿದನು.
Musa, “RAB şunları yapmanızı buyuruyor, o zaman RAB'bin yüceliği size görünecektir” dedi.
7 ೭ ಆಗ ಮೋಶೆ ಆರೋನನಿಗೆ, “ಯಜ್ಞವೇದಿಯ ಹತ್ತಿರಕ್ಕೆ ಬಂದು ನೀನು ಮಾಡಬೇಕಾದ ದೋಷಪರಿಹಾರಕ ಯಜ್ಞವನ್ನು, ಸರ್ವಾಂಗಹೋಮವನ್ನು ಸಮರ್ಪಿಸಿ ನಿನಗೋಸ್ಕರವೂ ಮತ್ತು ನಿನ್ನ ಜನರಿಗೋಸ್ಕರವೂ ದೋಷವನ್ನು ಪರಿಹರಿಸು; ಜನರು ತಂದದ್ದನ್ನು ಸಮರ್ಪಿಸಿ ಯೆಹೋವನ ಆಜ್ಞೆಯಂತೆ ಅವರಿಗಾಗಿ ದೋಷಪರಿಹಾರವನ್ನು ಮಾಡು” ಎಂದು ಹೇಳಿದನು.
Sonra Harun'a, “Sunağa git, günah ve yakmalık sunularını sun” dedi, “Hem kendinin, hem de halkın günahlarını bağışlat. RAB'bin buyurduğu gibi halkın sunusunu sun, günahlarını bağışlat.”
8 ೮ ಆರೋನನು ಯಜ್ಞವೇದಿಯ ಹತ್ತಿರಕ್ಕೆ ಹೋಗಿ ತನಗೋಸ್ಕರ ದೋಷಪರಿಹಾರಕ ಯಜ್ಞದ ಹೋರಿಯನ್ನು ವಧಿಸಿದನು.
Böylece Harun sunağa gidip kendisi için günah sunusu olarak sunulacak buzağıyı kesti.
9 ೯ ಆರೋನನ ಮಕ್ಕಳು ಅದರ ರಕ್ತವನ್ನು ಅವನಿಗೆ ಒಪ್ಪಿಸಿದಾಗ ಅವನು ಅದರಲ್ಲಿ ತನ್ನ ಬೆರಳನ್ನು ಅದ್ದಿ, ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ, ಉಳಿದ ರಕ್ತವನ್ನು ಯಜ್ಞವೇದಿಯ ಬುಡದಲ್ಲಿ ಹೊಯ್ದುಬಿಟ್ಟನು.
Oğulları buzağının kanını ona getirdiler. Harun parmağını kana batırıp sunağın boynuzlarına sürdü. Artan kanı sunağın dibine döktü.
10 ೧೦ ಆ ದೋಷಪರಿಹಾರಕ ಯಜ್ಞಪಶುವಿನ ಕೊಬ್ಬನ್ನು, ಮೂತ್ರಪಿಂಡಗಳನ್ನು, ಕಳಿಜದ ಹತ್ತಿರವಿರುವ ಕೊಬ್ಬನ್ನು ಯೆಹೋವನು ಮೋಶೆಯ ಮೂಲಕ ಆಜ್ಞಾಪಿಸಿದಂತೆ ಯಜ್ಞವೇದಿಯ ಮೇಲೆ ಹೋಮಮಾಡಿದನು.
RAB'bin Musa'ya verdiği buyruğa uygun olarak günah sunusunun yağını, böbreklerini, karaciğerinin perdesini sunakta yaktı.
11 ೧೧ ಅದರ ಮಾಂಸವನ್ನು ಮತ್ತು ಚರ್ಮವನ್ನು ಪಾಳೆಯದ ಹೊರಗೆ ಬೆಂಕಿಯಿಂದ ಸುಡಿಸಿಬಿಟ್ಟನು.
Etiyle derisini ise ordugahın dışında yaktı.
12 ೧೨ ತರುವಾಯ ಸರ್ವಾಂಗಹೋಮ ಪಶುವನ್ನು ವಧಿಸಿದನು. ಆರೋನನ ಮಕ್ಕಳು ಅದರ ರಕ್ತವನ್ನು ಅವನಿಗೆ ತಂದು ಒಪ್ಪಿಸಿದಾಗ ಅವನು ಅದನ್ನು ಯಜ್ಞವೇದಿಯ ಸುತ್ತಲೂ ಎರಚಿದನು.
Sonra yakmalık sunuyu kesti. Oğulları sununun kanını kendisine verdiler. O da kanı sunağın her yanına döktü.
13 ೧೩ ಅವರು ಆ ಪಶುವಿನ ಮಾಂಸಭಾಗಗಳನ್ನು ಮತ್ತು ತಲೆಯನ್ನು ಒಂದೊಂದಾಗಿ ಒಪ್ಪಿಸಿದಾಗ ಅವನು ಅವುಗಳನ್ನು ಯಜ್ಞವೇದಿಯ ಮೇಲೆ ಹೋಮಮಾಡಿದನು.
Sununun bütün parçalarını ve başını Harun'a verdiler. Harun hepsini sunağın üzerinde yaktı.
14 ೧೪ ಅದರ ಕರುಳುಗಳನ್ನು ಮತ್ತು ಕಾಲುಗಳನ್ನು ತೊಳೆದು ಯಜ್ಞವೇದಿಯಲ್ಲಿ ಸರ್ವಾಂಗಹೋಮದ್ರವ್ಯದ ಮೇಲಿಟ್ಟು ಹೋಮಮಾಡಿದನು.
Sununun işkembesini, bağırsaklarını, ayaklarını yıkayıp sunakta yakmalık sununun üzerinde yaktı.
15 ೧೫ ತರುವಾಯ ಜನಸಮೂಹವು ಸಮರ್ಪಿಸುವ ಪಶುಗಳನ್ನು ಆರೋನನು ತರಿಸಿ ಅವುಗಳಲ್ಲಿ ದೋಷಪರಿಹಾರಕ ಹೋತವನ್ನು ಮೊದಲನೆಯ ಪಶುವಿನಂತೆ ವಧಿಸಿ ಅವರಿಗೋಸ್ಕರ ದೋಷಪರಿಹಾರಕ್ಕಾಗಿ ಅದನ್ನು ಸಮರ್ಪಿಸಿದನು.
Bundan sonra Harun halkın sunusunu getirdi. Halkın günahları için sunulacak tekeyi kesti ve ilk sunu gibi bunu da günah sunusu olarak sundu.
16 ೧೬ ಸರ್ವಾಂಗಹೋಮ ಪಶುವನ್ನು ಯಥಾವಿಧಿಯಾಗಿ ಸಮರ್ಪಿಸಿದನು.
Yakmalık sunuyu da kurallara uygun biçimde sundu.
17 ೧೭ ಅವರು ತಂದ ಧಾನ್ಯನೈವೇದ್ಯ ದ್ರವ್ಯಗಳಲ್ಲಿ ಒಂದು ಹಿಡಿಯನ್ನು ತೆಗೆದುಕೊಂಡು, ಹೊತ್ತಾರೆಯ ಸರ್ವಾಂಗಹೋಮದ ಸಂಗಡ ಅದನ್ನು ಯಜ್ಞವೇದಿಯ ಮೇಲೆ ಹೋಮಮಾಡಿದನು.
Sonra tahıl sunusunu getirdi. Bir avuç alıp her sabah sunulan yakmalık sunuya ek olarak sunağın üzerinde yaktı.
18 ೧೮ ಬಳಿಕ ಜನರಿಗೋಸ್ಕರ ಸಮಾಧಾನಯಜ್ಞಕ್ಕಾಗಿ ನೇಮಕವಾದ ಹೋರಿಯನ್ನು ಮತ್ತು ಟಗರನ್ನು ವಧಿಸಿದನು. ಆರೋನನ ಮಕ್ಕಳು ಅವುಗಳ ರಕ್ತವನ್ನು ಒಪ್ಪಿಸಲಾಗಿ ಅವನು ಅದನ್ನು ಯಜ್ಞವೇದಿಯ ಸುತ್ತಲೂ ಎರಚಿದನು.
Halk için esenlik kurbanları olarak sunulacak sığırla koçu da kesti. Oğulları sunuların kanını kendisine verdiler. O da kanı sunağın her yanına döktü.
19 ೧೯ ಅವರು ಹೋರಿಯ ಕೊಬ್ಬನ್ನು, ಟಗರಿನ ಬಾಲದ ಕೊಬ್ಬನ್ನು, ಅಂಗಾಂಶದ ಕೊಬ್ಬನ್ನು, ಮೂತ್ರಪಿಂಡಗಳನ್ನು, ಕಳಿಜದ ಹತ್ತಿರವಿರುವ ಕೊಬ್ಬನ್ನು,
Sığırla koçun yağlarını, kuyruk yağını, bağırsak ve işkembe yağlarını, böbreklerini ve karaciğerlerinin perdesini
20 ೨೦ ಎದೆಯ ಭಾಗಗಳ ಮೇಲೆ ಇಟ್ಟು ಒಪ್ಪಿಸಲಾಗಿ ಅವನು ಆ ಕೊಬ್ಬನ್ನು ಯಜ್ಞವೇದಿಯ ಮೇಲೆ ಹೋಮಮಾಡಿದನು.
döşlerin üzerine koydular. Harun yağları sunakta yaktı.
21 ೨೧ ಮೋಶೆಯು ಆಜ್ಞಾಪಿಸಿದಂತೆ ಆರೋನನು ಅವುಗಳ ಎದೆಯ ಭಾಗಗಳನ್ನು ಮತ್ತು ಬಲತೊಡೆಯನ್ನು ನೈವೇದ್ಯವಾಗಿ ಯೆಹೋವನ ಸನ್ನಿಧಿಯಲ್ಲಿ ನಿವಾಳಿಸಿದನು.
Musa'nın buyurduğu gibi döşleri ve sağ budu sallamalık sunu olarak RAB'bin huzurunda salladı.
22 ೨೨ ಆರೋನನು ಆ ದೋಷಪರಿಹಾರಕ ಯಜ್ಞವನ್ನು, ಸರ್ವಾಂಗಹೋಮವನ್ನು ಮತ್ತು ಸಮಾಧಾನಯಜ್ಞಗಳನ್ನು ಸಮರ್ಪಿಸಿದ ನಂತರ ತನ್ನ ಕೈಗಳನ್ನು ಜನರ ಕಡೆಗೆ ಎತ್ತಿ ಅವರನ್ನು ಆಶೀರ್ವದಿಸಿ ಇಳಿದು ಬಂದನು.
Harun günah, yakmalık, esenlik sunularını sunduktan sonra ellerini halka doğru uzatarak onları kutsadı ve aşağıya indi.
23 ೨೩ ತರುವಾಯ ಮೋಶೆ ಮತ್ತು ಆರೋನನು ದೇವದರ್ಶನದ ಗುಡಾರದೊಳಗೆ ಹೋದರು. ಅವರು ಅಲ್ಲಿಂದ ಹೊರಗೆ ಬಂದಾಗ ಜನರನ್ನು ಆಶೀರ್ವದಿಸಿದರು. ಆಗ ಯೆಹೋವನ ಮಹಿಮೆಯು ಜನರೆಲ್ಲರಿಗೆ ಪ್ರತ್ಯಕ್ಷವಾಯಿತು.
Musa'yla Harun Buluşma Çadırı'na girdiler. Dışarı çıkınca halkı kutsadılar. O zaman RAB'bin yüceliği halka göründü.
24 ೨೪ ಯೆಹೋವನ ಸನ್ನಿಧಿಯಿಂದ ಬೆಂಕಿಯು ಹೊರಟು ಯಜ್ಞವೇದಿಯ ಮೇಲಿದ್ದ ಸರ್ವಾಂಗಹೋಮದ್ರವ್ಯವನ್ನು ಮತ್ತು ಕೊಬ್ಬನ್ನು ದಹಿಸಿಬಿಟ್ಟಿತು. ಜನರೆಲ್ಲರೂ ಅದನ್ನು ಕಂಡು ಉತ್ಸಾಹದಿಂದ ಆರ್ಭಟಿಸಿ, ಅಡ್ಡಬಿದ್ದು ನಮಸ್ಕರಿಸಿದರು.
RAB bir ateş gönderdi. Ateş sunağın üzerindeki yakmalık sunuyu, yağları yakıp küle çevirdi. Bunu gören halkın tümü sevinçle haykırarak yüzüstü yere kapandı.