< ಯಾಜಕಕಾಂಡ 1 >
1 ೧ ಯೆಹೋವನು ಮೋಶೆಯನ್ನು ಕರೆದು ದೇವದರ್ಶನದ ಗುಡಾರದೊಳಗಿಂದ ಅವನ ಸಂಗಡ ಮಾತನಾಡಿ ಹೀಗೆಂದನು,
Na ka karanga a Ihowa ki a Mohi, ka korero ki a ia i roto i te tapenakara o te whakaminenga, ka mea,
2 ೨ “ನೀನು ಇಸ್ರಾಯೇಲರಿಗೆ ಆಜ್ಞಾಪಿಸಬೇಕಾದದ್ದೇನೆಂದರೆ, ‘ನಿಮ್ಮಲ್ಲಿ ಯಾವನಾದರೂ ಯೆಹೋವನಿಗೆ ಪಶುವನ್ನು ಕಾಣಿಕೆಯಾಗಿ ಸಮರ್ಪಿಸಬೇಕೆಂದಿದ್ದರೆ ಅವನು ಅದನ್ನು ಹಿಂಡಿನ ದನಗಳಿಂದಾಗಲಿ ಅಥವಾ ಆಡುಕುರಿಗಳ ಹಿಂಡಿನಿಂದ ತೆಗೆದುಕೊಂಡು ಸಮರ್ಪಿಸಬೇಕು.
Korero ki nga tama a Iharaira, mea atu ki a ratou, Ki te kawea e tetahi tangata o koutou he whakahere ki a Ihowa, me kawe ta koutou whakahere i roto i nga kararehe, ara i roto i nga kau, i roto ranei i nga hipi.
3 ೩ “‘ಅವನು ದನವನ್ನು ಸರ್ವಾಂಗಹೋಮವಾಗಿ ಸಮರ್ಪಿಸುವುದಾದರೆ ಪೂರ್ಣಾಂಗವಾದ ಗಂಡನ್ನು ತರಬೇಕು. ತನ್ನನ್ನು ಯೆಹೋವನು ಮೆಚ್ಚುವಂತೆ ದೇವದರ್ಶನದ ಗುಡಾರದ ಬಾಗಿಲಿಗೆ ಅದನ್ನು ತರಬೇಕು.
Ki te mea he tahunga tinana tana whakahere no nga kau, me tapae e ia he toa, he kohakore: ka tuku ai ki te whatitoka o te tapenakara o te whakaminenga, hei mea e manakohia ai ia i te aroaro o Ihowa.
4 ೪ ಅವನು ಆ ಯಜ್ಞ ಪಶುವಿನ ತಲೆಯ ಮೇಲೆ ಕೈಯಿಡಬೇಕು; ಆಗ ಅದು ಅವನಿಗೋಸ್ಕರ ದೋಷಪರಿಹಾರವನ್ನು ಮಾಡುವುದಕ್ಕಾಗಿ ಅಂಗೀಕಾರವಾಗುವುದು.
A me popoki tona ringa ki te pane o te tahunga tinana; a ka manakohia tana, hei whakamarie mona.
5 ೫ “‘ಅವನು ಆ ಹೋರಿಯನ್ನು ಯೆಹೋವನ ಎದುರಿನಲ್ಲಿ ವಧಿಸಿದ ಮೇಲೆ ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ತೆಗೆದುಕೊಂಡು ದೇವದರ್ಶನದ ಗುಡಾರದ ಬಾಗಿಲಿಗೆ ಎದುರಾಗಿರುವ ಯಜ್ಞವೇದಿಯ ಸುತ್ತಲೂ ಎರಚಬೇಕು.
Na me patu te kau ki te aroaro o Ihowa: a me kawe te toto e nga tohunga, e nga tama a Arona, me tauhiuhi te toto ki te aata a tawhio noa, ki tera i te whatitoka o te tapenakara o te whakaminenga.
6 ೬ ಅನಂತರ ಅವನು ಆ ಯಜ್ಞಪಶುವಿನ ಚರ್ಮವನ್ನು ಸುಲಿದು ಅದರ ದೇಹವನ್ನು ತುಂಡು ತುಂಡಾಗಿ ಕಡಿಯಬೇಕು.
Na me tihore e ia te tahunga tinana, a me tapatapahi tenei wahi ona, tenei wahi ona.
7 ೭ ಆರೋನನ ವಂಶದವರಾದ ಯಾಜಕರು ಯಜ್ಞವೇದಿಯ ಮೇಲೆ ಬೆಂಕಿಯನ್ನಿಟ್ಟು, ಅದರ ಮೇಲೆ ಕಟ್ಟಿಗೆಯನ್ನು ಕೂಡಿಸಿ ಇಡಬೇಕು.
Na me maka he ahi e nga tama a Arona tohunga ki runga ki te aata, me whakapai hoki nga wahie ki runga ki te ahi:
8 ೮ ಆಮೇಲೆ ಯಾಜಕರು ಅಂದರೆ ಆರೋನನ ಮಕ್ಕಳು, ಆ ತುಂಡುಗಳನ್ನು, ತಲೆಯನ್ನು ಮತ್ತು ಕೊಬ್ಬನ್ನು ಅದರ ಮೇಲೆ ಕ್ರಮವಾಗಿ ಇಡಬೇಕು.
Na ka whakararangi ai nga tohunga, nga tama a Arona, i nga pihi, te pane me te ngako, ki nga wahie o te ahi i te aata.
9 ೯ ಅದರ ಕರುಳುಗಳನ್ನು ಮತ್ತು ಕಾಲುಗಳನ್ನು ನೀರಿನಲ್ಲಿ ತೊಳೆದನಂತರ ಯಾಜಕನು ಅದನ್ನು ಪೂರ್ತಿಯಾಗಿ ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಅದು ಅಗ್ನಿಯ ಮೂಲಕ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವ ಸರ್ವಾಂಗಹೋಮವಾಗುತ್ತದೆ.
Ko ona whekau ia, me ona waewae, me horoi ki te wai, ka tahu katoa ai te tohunga ki runga ki te aata hei tahunga tinana, hei whakahere ahi, hei kakara reka ki a Ihowa.
10 ೧೦ “‘ಒಬ್ಬನು ಆಡನ್ನಾಗಲಿ ಅಥವಾ ಕುರಿಯನ್ನಾಗಲಿ ಸರ್ವಾಂಗಹೋಮವನ್ನಾಗಿ ಅರ್ಪಿಸಬೇಕೆಂದಿದ್ದರೆ ಅವನು ಪೂರ್ಣಾಂಗವಾದ ಗಂಡನ್ನು ತರಬೇಕು.
Na, no te kahui tana whakahere no nga hipi, no nga koati ranei, hei tahunga tinana; me kawe e ia he toa, he mea kohakore,
11 ೧೧ ಅದನ್ನು ಯೆಹೋವನ ಸನ್ನಿಧಿಯಲ್ಲಿ ಯಜ್ಞವೇದಿಯ ಉತ್ತರ ಭಾಗದಲ್ಲಿ ವಧಿಸಬೇಕು. ತರುವಾಯ ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ಯಜ್ಞವೇದಿಯ ಸುತ್ತಲೂ ಹಾಕಬೇಕು.
Ka patu ai ki te taha ki te raki o te aata, ki te aroaro o Ihowa: a ma nga tohunga, ma nga tama a Arona, e tauhiuhi ona toto ki te aata a tawhio noa.
12 ೧೨ ಅವನು ಆ ಪಶುವಿನ ದೇಹವನ್ನು ತುಂಡು ತುಂಡಾಗಿ ಕಡಿದ ಮೇಲೆ ಯಾಜಕನು ಆ ತುಂಡುಗಳನ್ನು, ತಲೆಯನ್ನು ಮತ್ತು ಕೊಬ್ಬನ್ನು ಯಜ್ಞವೇದಿಯ ಮೇಲಣ ಬೆಂಕಿಯಲ್ಲಿ ಕಟ್ಟಿಗೆಯ ಮೇಲೆ ಕ್ರಮವಾಗಿ ಇಡಬೇಕು.
Na ka tapatapahi ai ia he wahi, he wahi, tona pane, tona ngako; a ma te tohunga e whakararangi ki nga wahie o te ahi i runga i te aata:
13 ೧೩ ಅದರ ಕರುಳುಗಳನ್ನು ಹಾಗು ಕಾಲುಗಳನ್ನು ನೀರಿನಲ್ಲಿ ತೊಳೆದನಂತರ ಯಾಜಕನು ಅದನ್ನು ಪೂರ್ತಿಯಾಗಿ ಯಜ್ಞವೇದಿಯ ಮೇಲೆ ಸುಡಬೇಕು. ಅದು ಅಗ್ನಿಯ ಮೂಲಕ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವ ಸರ್ವಾಂಗಹೋಮವಾಗಿದೆ.
Ko nga whekau ia, me nga waewae, me horoi ki te wai: a ka kawe katoa ai te tohunga, ka tahu ai ki te aata: he tahunga tinana hoki, he whakahere ahi, he kakara reka ki a Ihowa.
14 ೧೪ “‘ಯೆಹೋವನಿಗೆ ಸರ್ವಾಂಗಹೋಮವಾಗಿ ಅರ್ಪಿಸುವಂಥದ್ದು ಪಕ್ಷಿಜಾತಿಯಾಗಿದ್ದರೆ ಅದು ಬೆಳವಕ್ಕಿಯಾಗಲಿ ಅಥವಾ ಪಾರಿವಾಳದ ಮರಿಯಾಗಲಿ ಆಗಿರಬೇಕು.
Na, mehemea he tahunga tinana no nga manu tana whakahere ki a Ihowa, na me kawe e ia tana whakahere i roto i nga kukupa, i roto ranei i nga pi kukupa.
15 ೧೫ ಯಾಜಕನು ಅದನ್ನು ಯಜ್ಞವೇದಿಯ ಬಳಿಗೆ ತಂದು, ಕುತ್ತಿಗೆ ಮುರಿದು ಅದನ್ನು ಯಜ್ಞವೇದಿಯ ಮೇಲೆ ಹೋಮ ಮಾಡಬೇಕು. ಅವನು ಅದರ ರಕ್ತವನ್ನು ಯಜ್ಞವೇದಿಯ ಪಕ್ಕದಲ್ಲಿ ಹರಿಯುವಂತೆ ಮಾಡಿ ಹಿಂಗಿಸಬೇಕು.
A ma te tohunga e kawe ki te aata, e whakawiri atu tona pane, ka tahu ai ki runga ki te aata; a ko ona toto me tuku kia heke ki te taha o te aata:
16 ೧೬ ಅದರ ಕರುಳುಗಳನ್ನು ಮತ್ತು ರೆಕ್ಕೆಗಳನ್ನು ತೆಗೆದುಬಿಟ್ಟು ಯಜ್ಞವೇದಿಯ ಪೂರ್ವದಿಕ್ಕಿನಲ್ಲಿರುವ ಬೂದಿಯ ಸ್ಥಳದಲ್ಲಿ ಹಾಕಬೇಕು.
A ko tona puku me tona paru me tango, a ka maka ki te taha ki te rawhiti o te aata, ki te wahi o nga pungarehu:
17 ೧೭ ಅವನು ಆ ಪಕ್ಷಿಯನ್ನು ರೆಕ್ಕೆಗಳ ಮಧ್ಯದಲ್ಲಿ ಇಬ್ಭಾಗವಾಗಿ ಹರಿಯಬೇಕು, ಅವನು ಅದನ್ನು ವಿಭಾಗಿಸಬಾರದು. ಆದರೆ ರೆಕ್ಕೆಗಳನ್ನು ಪೂರಾ ಕಿತ್ತುಹಾಕಬಾರದು. ಅನಂತರ ಯಾಜಕನು ಅದನ್ನು ಯಜ್ಞವೇದಿಯ ಮೇಲಣ ಬೆಂಕಿಯಲ್ಲಿರುವ ಕಟ್ಟಿಗೆಯ ಮೇಲೆ ಹೋಮಮಾಡಬೇಕು. ಅದು ಅಗ್ನಿಯ ಮೂಲಕ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವ ಸರ್ವಾಂಗಹೋಮವಾಗಿದೆ.
Na me hahae e ia ma ona parirau, otiia kaua e motuhia rawatia; a ma te tohunga e tahu ki runga ki te aata, ki nga wahie o te ahi: he tahunga tinana tena, he whakahere ahi, he kakara reka ki a Ihowa.