< ಲೂಕನು 10 >
1 ೧ ಇದಾದ ಮೇಲೆ ಕರ್ತನು ಇನ್ನೂ ಎಪ್ಪತ್ತು ಮಂದಿಯನ್ನು ತನ್ನ ಶಿಷ್ಯರನ್ನಾಗಿ ನೇಮಿಸಿ, ಅವರನ್ನು ಇಬ್ಬಿಬ್ಬರಾಗಿ ತಾನು ಹೋಗಬೇಕೆಂದಿದ್ದ ಪ್ರತಿಯೊಂದು ಊರಿಗೂ ಪ್ರತಿಯೊಂದು ಸ್ಥಳಕ್ಕೂ ಮುಂದಾಗಿ ಕಳುಹಿಸಿದನು.
Niin asetti Herra toiset seitsemänkymmentä, ja lähetti heitä kaksin ja kaksin edellänsä joka kaupunkiin ja paikkaan, kuhunka hän itse oli tuleva.
2 ೨ ಕಳುಹಿಸುವಾಗ ಅವರಿಗೆ ಹೇಳಿದ್ದೇನಂದರೆ, “ಬೆಳೆಯು ಹೇರಳವಾಗಿದೆ, ಕೊಯ್ಲುಗಾರರು ಕೆಲವರೂ ಮಾತ್ರ ಇದ್ದಾರೆ; ಆದುದರಿಂದ ಕೊಯ್ಲಿಗೆ ಆಳುಗಳನ್ನು ಕಳುಹಿಸಬೇಕೆಂದು ಬೆಳೆಯ ಯಜಮಾನನನ್ನು ಬೇಡಿಕೊಳ್ಳಿರಿ.
Niin hän sanoi heille: eloa tosin on paljo, vaan työväkeä on vähä: rukoilkaat siis elon Herraa, työväkeä lähettämään eloonsa.
3 ೩ ಹೋಗಿರಿ, ತೋಳಗಳ ನಡುವೆ ಕುರಿಮರಿಗಳಂತೆ ನಾನು ನಿಮ್ಮನ್ನು ಕಳುಹಿಸಿಕೊಡುತ್ತಿದ್ದೇನೆ.
Menkäät: katso, minä lähetän teidät niinkuin karitsat sutten keskelle.
4 ೪ ನೋಡಿರಿ, ನೀವು ಹೋಗುವಾಗ ಹಣದ ಚೀಲವನ್ನಾಗಲಿ, ಪ್ರವಾಸದ ಚೀಲವನ್ನಾಗಲಿ, ಕಾಲಿಗೆ ಕೆರಗಳನ್ನಾಗಲಿ ತೆಗೆದುಕೊಂಡು ಹೋಗಬೇಡಿರಿ. ದಾರಿಯಲ್ಲಿ ಯಾರಿಗೂ ವಂದಿಸಬೇಡಿರಿ.
Älkäät ottako säkkiä, eikä kukkaroa, eikä kenkiä, ja älkäät ketään tervehtikö tiellä.
5 ೫ ಇದಲ್ಲದೆ ನೀವು ಯಾವ ಮನೆಯೊಳಗೆ ಹೋದರೂ, ‘ಈ ಮನೆಗೆ ಸಮಾಧಾನವಾಗಲಿ’ ಎಂದು ಮೊದಲು ಹೇಳಿರಿ.
Mutta kuhunka huoneesen te menette sisälle, niin sanokaat ensisti: rauha olkoon tälle huoneelle!
6 ೬ ಸಮಾಧಾನ ಹೊಂದಲು ಯೋಗ್ಯನು ಆ ಮನೆಯಲ್ಲಿ ಇದ್ದರೆ ನಿಮ್ಮ ಸಮಾಧಾನವು ಅವನ ಮೇಲೆ ನಿಲ್ಲುವುದು, ಇಲ್ಲದಿದ್ದರೆ ಅದು ನಿಮಗೆ ಹಿಂತಿರುಗುವುದು.
Ja jos siellä on rauhan lapsi, niin teidän rauhanne jää hänen päällensä; mutta jos ei, niin se palajaa teille.
7 ೭ ಆ ಮನೆಯಲ್ಲಿಯೇ ಇದ್ದುಕೊಂಡು ಅವರು ಕೊಡುವಂಥದನ್ನು ಊಟಮಾಡಿರಿ, ಕುಡಿಯಿರಿ. ಆಳು ತನ್ನ ಕೂಲಿಗೆ ಯೋಗ್ಯನಷ್ಟೆ. ಒಂದು ಮನೆಯನ್ನು ಬಿಟ್ಟು ಮತ್ತೊಂದು ಮನೆಗೆ ಹೋಗಿ ಇಳಿದುಕೊಳ್ಳಬೇಡಿರಿ.
Mutta siinä huoneessa viipykäät, syökäät ja juokaat sitä, mitä heillä on; sillä työmies on palkkansa ansiollinen. Älkäät huoneesta huoneeseen käykö.
8 ೮ ಮತ್ತು ನೀವು ಯಾವ ಊರಿಗಾದರೂ ಹೋದ ಮೇಲೆ ಆ ಊರಿನ ಜನರು ನಿಮ್ಮನ್ನು ಸೇರಿಸಿಕೊಂಡರೆ ಅವರು ನಿಮಗೆ ಬಡಿಸಿದ್ದನ್ನು ಊಟಮಾಡಿರಿ.
Mutta kuhunka kaupunkiin te tulette sisälle, ja he teitä ottavat vastaan, niin syökäät mitä teidän eteenne pannaan,
9 ೯ ಅಲ್ಲಿರುವ ರೋಗಿಗಳನ್ನು ವಾಸಿಮಾಡಿ ಅವರಿಗೆ, ‘ದೇವರ ರಾಜ್ಯವು ನಿಮ್ಮ ಸಮೀಪಕ್ಕೆ ಬಂದಿದೆ’ ಎಂದು ಹೇಳಿರಿ.
Ja parantakaat sairaita, joita siinä on, ja sanokaat heille: Jumalan valtakunta on teitä lähestynyt.
10 ೧೦ ಆದರೆ ನೀವು ಯಾವ ಊರಿಗಾದರೂ ಹೋದ ಮೇಲೆ ಆ ಜನರು ನಿಮ್ಮನ್ನು ಸ್ವೀಕರಿಸದ್ದಿದ್ದರೆ, ನೀವು ಆ ಊರ ಬೀದಿಗಳಿಗೆ ಬಂದು,
Mutta kuhunka kaupunkiin te tulette sisälle, ja ei he teitä ota vastaan, niin menkäät ulos sen kaduille, ja sanokaat:
11 ೧೧ ‘ನಮ್ಮ ಪಾದಗಳಿಗೆ ಅಂಟಿರುವ ನಿಮ್ಮ ಊರಿನ ಧೂಳನ್ನು ಕೂಡ ನಿಮ್ಮ ವಿರುದ್ಧವಾಗಿ ಝಾಡಿಸಿಬಿಡುತ್ತೇವೆ. ಆದಾಗ್ಯೂ ದೇವರ ರಾಜ್ಯವು ಸಮೀಪಿಸಿದೆ ಎಂಬುದನ್ನು ಮಾತ್ರ ನೀವು ಗಮನದಲ್ಲಿಡಿ’ ಎಂಬುದಾಗಿ ಹೇಳಿರಿ.
Tomunkin, joka teidän kaupungistanne tarttui meihin, me pudistamme teille: kuitenkin se tietäkäät, että Jumalan valtakunta oli teitä lähestynyt.
12 ೧೨ ಆ ದಿನದಲ್ಲಿ ಅಂತಹ ಊರಿನ ಗತಿಯು ಸೊದೋಮ್ ಊರಿನ ಗತಿಗಿಂತಲೂ ಕಠಿಣವಾಗಿರುವುದು ಎಂದು ನಿಮಗೆ ಹೇಳುತ್ತೇನೆ.
Minä sanon teille: Sodomalle pitää sinä päivänä huokiampi oleman kuin sille kaupungille.
13 ೧೩ ಅಯ್ಯೋ ಖೊರಾಜಿನೇ, ಅಯ್ಯೋ ಬೇತ್ಸಾಯಿದವೇ, ನಿಮ್ಮಲ್ಲಿ ನಡೆದ ಮಹತ್ಕಾರ್ಯಗಳು ತೂರ್ ಮತ್ತು ಸೀದೋನ್ ಪಟ್ಟಣಗಳಲ್ಲಿ ನಡೆದಿದ್ದರೆ ಅಲ್ಲಿಯವರು ಆಗಲೇ ಗೋಣಿತಟ್ಟು ಹೊದ್ದುಕೊಂಡು, ಬೂದಿಯಲ್ಲಿ ಕುಳಿತುಕೊಂಡು ಪಶ್ಚಾತ್ತಾಪಪಡುತ್ತಿದ್ದರು.
Voi sinua Koratsin! voi sinua Betsaida! sillä jos Tyrossa ja Sidonissa olisivat senkaltaiset voimalliset työt tehdyt kuin teidän tykönänne ovat tehdyt, niin he olisivat jo aikaa säkissä ja tuhassa istuneet ja parannuksen tehneet.
14 ೧೪ ಆದರೆ ನ್ಯಾಯವಿಚಾರಣೆಯಲ್ಲಿ ನಿಮ್ಮ ಗತಿಗಿಂತಲೂ ತೂರ್ ಸೀದೋನ್ ಪಟ್ಟಣಗಳ ಗತಿಯು ಮೇಲಾಗಿರುವುದು.
Kuitenkin Tyrolle ja Sidonille pitää huokiampi tuomiolle oleman kuin teille.
15 ೧೫ ಎಲೈ ಕಪೆರ್ನೌಮೇ, ನೀನು ಪರಲೋಕಕ್ಕೆ ಏರಿಸಲ್ಪಡುವಿಯಾ? ಇಲ್ಲ! ಪಾತಾಳಕ್ಕೇ ಇಳಿಯುವಿ. (Hadēs )
Ja sinä Kapernaum, joka olet taivaasen asti korotettu, sinä pitää hamaan helvettiin alas sysättämän. (Hadēs )
16 ೧೬ ನಿಮ್ಮ ಮಾತನ್ನು ಕೇಳುವವನು ನನ್ನ ಮಾತನ್ನು ಕೇಳುವವನಾಗಿದ್ದಾನೆ, ನಿಮ್ಮನ್ನು ತಿರಸ್ಕರಿಸುವವನು ನನ್ನನ್ನು ತಿರಸ್ಕರಿಸುವವನಾಗಿದ್ದಾನೆ, ನನ್ನನ್ನು ತಿರಸ್ಕಾರ ಮಾಡುವವನು ನನ್ನನ್ನು ಕಳುಹಿಸಿಕೊಟ್ಟಾತನನ್ನೇ ತಿರಸ್ಕಾರ ಮಾಡುವವನಾಗಿದ್ದಾನೆ” ಅಂದನು.
Joka teitä kuulee, se minua kuulee, ja joka teidät katsoo ylön, se katsoo ylön minun; mutta joka minun katsoo ylön, hän katsoo ylön sen, joka minun lähetti.
17 ೧೭ ತರುವಾಯ ಆ ಎಪ್ಪತ್ತು ಮಂದಿಯು ಸಂತೋಷವುಳ್ಳವರಾಗಿ ಹಿಂತಿರುಗಿ ಬಂದು, “ಕರ್ತನೇ, ದೆವ್ವಗಳು ಕೂಡಾ ನಿನ್ನ ಹೆಸರಿನಲ್ಲಿ ನಮಗೆ ಅಧೀನವಾಗುತ್ತವೆ” ಅಂದರು.
Niin ne seitsemänkymmentä palasivat ilolla, sanoen: Herra, perkeleetkin ovat sinun nimes kautta meidän allemme annetut.
18 ೧೮ ಯೇಸು ಅವರಿಗೆ, “ಸೈತಾನನು ಮಿಂಚಿನಂತೆ ಆಕಾಶದಿಂದ ಬೀಳುವುದನ್ನು ಕಂಡೆನು.
Niin hän sanoi heille: minä näin saatanan taivaasta lankeevan niinkuin pitkäisen tulen.
19 ೧೯ ನೋಡಿರಿ, ಹಾವುಗಳನ್ನೂ ಚೇಳುಗಳನ್ನೂ ವೈರಿಯ ಸಮಸ್ತ ಬಲವನ್ನೂ ತುಳಿಯುವುದಕ್ಕೆ ನಿಮಗೆ ಅಧಿಕಾರ ಕೊಟ್ಟಿದ್ದೇನೆ. ಯಾವುದೂ ನಿಮಗೆ ಕೇಡು ಮಾಡುವುದೇ ಇಲ್ಲ.
Katso, minä annan teille vallan tallata käärmeitä ja skorpioneja ja kaikkea vaihollisen voimaa, ja ei teitä mikään ole vahingoitseva,
20 ೨೦ ಆದರೂ ದೆವ್ವಗಳು ನಮಗೆ ಅಧೀನವಾಗಿವೆ ಎಂದು ಸಂತೋಷಪಡದೆ ನಿಮ್ಮ ಹೆಸರುಗಳು ಪರಲೋಕದಲ್ಲಿ ಬರೆಯಲ್ಪಟ್ಟಿವೆ ಎಂದು ಸಂತೋಷಪಡಿರಿ” ಎಂದು ಹೇಳಿದನು.
Kuitenkin älkäät siitä iloitko, että henget teidän allenne annetaan; vaan iloitkaat paremmin, että teidän nimenne ovat kirjoitetut taivaissa.
21 ೨೧ ಅದೇ ಗಳಿಗೆಯಲ್ಲಿ ಆತನು ಪವಿತ್ರಾತ್ಮನನಿಂದ ಉಲ್ಲಾಸಗೊಂಡು ಹೇಳಿದ್ದೇನಂದರೆ, “ತಂದೆಯೇ, ಪರಲೋಕ ಮತ್ತು ಭೂಲೋಕಗಳ ಒಡೆಯನೇ, ನೀನು ಜ್ಞಾನಿಗಳಿಗೂ ಮತ್ತು ವಿವೇಕಿಗಳಿಗೂ ಈ ವಿಷಯಗಳನ್ನು ಮರೆಮಾಡಿ, ಮಕ್ಕಳಿಗೆ ಪ್ರಕಟಮಾಡಿರುವುದರಿಂದ ನಿನ್ನನ್ನು ಕೊಂಡಾಡುತ್ತೇನೆ. ಹೌದು, ತಂದೆಯೇ, ಹೀಗೆ ಮಾಡುವುದೇ ಒಳ್ಳೆಯದೆಂದು ನಿನ್ನ ದೃಷ್ಟಿಗೆ ತೋರಿದ್ದರಿಂದ ನಿನ್ನನ್ನು ಕೊಂಡಾಡುತ್ತೇನೆ.
Sillä hetkellä riemuitsi Jesus hengessä ja sanoi: minä kiitän sinua, Isä, taivaan ja maan Herra, ettäs nämät salasit viisailta ja toimellisilta, ja olet ne ilmoittanut pienille: tosin, Isä, niin oli sinun hyvä tahtos.
22 ೨೨ ನನ್ನ ತಂದೆಯು ಎಲ್ಲವನ್ನೂ ನನಗೆ ಒಪ್ಪಿಸಿದ್ದಾನೆ. ಮಗನು ಎಂಥವನೆಂದು ತಂದೆಯ ಹೊರತು ಮತ್ತಾರೂ ತಿಳಿದಿರುವುದಿಲ್ಲ, ತಂದೆ ಎಂಥವನೆಂದು ಮಗನ ಹೊರತು ಇನ್ನಾರು ತಿಳಿದಿರುವುದಿಲ್ಲ ಮತ್ತು ಮಗನು ತಂದೆಯನ್ನು ಯಾರಿಗೆ ಪ್ರಕಟಪಡಿಸುವುದಕ್ಕೆ ಮನಸ್ಸುಳ್ಳವನಾಗಿದ್ದಾನೋ, ಅವನೂ ಆತನನ್ನು ತಿಳಿದವನಾಗಿದ್ದಾನೆ” ಅಂದನು.
Kaikki ovat minulle annetut Isältäni: ja ei tiedä kenkään, kuka on Poika, vaan Isä: ja kuka on Isä, vaan Poika ja kelle Poika tahtoo ilmoittaa.
23 ೨೩ ಆ ಮೇಲೆ ಆತನು ಶಿಷ್ಯರ ಕಡೆಗೆ ತಿರುಗಿಕೊಂಡು ಪ್ರತ್ಯೇಕವಾಗಿ ಹೇಳಿದ್ದೇನೆಂದರೆ, “ನೀವು ನೋಡುತ್ತಿರುವ ಸಂಗತಿಗಳನ್ನು ನೋಡುವವರು ಧನ್ಯರು.
Ja hän kääntyi opetuslastensa puoleen erinänsä, ja sanoi: autuaat ovat ne silmät, jotka näkevät, joita te näette:
24 ೨೪ ಬಹು ಮಂದಿ ಪ್ರವಾದಿಗಳೂ ಅರಸರೂ ನೀವು ನೋಡುತ್ತಿರುವ ಸಂಗತಿಗಳನ್ನು ನೋಡಬೇಕೆಂದು ಅಪೇಕ್ಷಿಸಿದರೂ ಸಾಧ್ಯವಾಗಲಿಲ್ಲ, ನೀವು ಕೇಳುತ್ತಿರುವ ಸಂಗತಿಗಳನ್ನು ಕೇಳಬೇಕೆಂದು ಅಪೇಕ್ಷಿಸಿದರೂ ಕೇಳಲಾಗಲಿಲ್ಲ ಎಂಬುದಾಗಿ ನಿಮಗೆ ಹೇಳುತ್ತೇನೆ” ಅಂದನು.
Sillä minä sanon teille: monta prophetaa ja kuningasta tahtoivat nähdä, joita te näette, ja ei nähneet, ja kuulla, joita te kuulette, ja ei kuulleet.
25 ೨೫ ಆಗ ಒಬ್ಬ ಧರ್ಮೋಪದೇಶಕನು ಎದ್ದು ಆತನನ್ನು ಪರೀಕ್ಷಿಸುವುದಕ್ಕಾಗಿ, “ಬೋಧಕನೇ, ನಾನು ನಿತ್ಯಜೀವವನ್ನು ಹೊಂದಿಕೊಳ್ಳಲು ಏನು ಮಾಡಬೇಕು?” ಎಂದು ಕೇಳಲು, (aiōnios )
Ja katso, yksi lainoppinut nousi ja kiusasi häntä, sanoen: Mestari, mitä minun pitää tekemän, että minä ijankaikkisen elämän perisin? (aiōnios )
26 ೨೬ ಆತನು ಅವನಿಗೆ, “ಧರ್ಮಶಾಸ್ತ್ರದಲ್ಲಿ ಏನು ಬರೆದದೆ? ಹೇಗೆ ಓದಿದ್ದೀ?” ಎಂದು ಕೇಳಿದನು.
Mutta hän sanoi hänelle: mitä laissa on kirjoitettu? kuinkas luet?
27 ೨೭ ಅದಕ್ಕೆ ಅವನು, “‘ನಿನ್ನ ದೇವರಾಗಿರುವ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ನಿನ್ನ ಪೂರ್ಣಶಕ್ತಿಯಿಂದಲೂ ನಿನ್ನ ಪೂರ್ಣ ಬುದ್ಧಿಯಿಂದಲೂ ಪ್ರೀತಿಸಬೇಕು.’ ಮತ್ತು ‘ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು’ ಎಂದು ಬರೆದದೆ” ಅಂದನು.
Ja hän vastasi ja sanoi: sinun pitää rakastaman Herraa sinun Jumalaas kaikesta sinun sydämestäs, ja kaikesta sinun sielustas, ja kaikesta sinun voimastas, ja kaikesta sinun mieleltäs: ja sinun lähimmäistäs niinkuin itsiäs.
28 ೨೮ ಆತನು ಅವನಿಗೆ, “ನೀನು ಸರಿಯಾಗಿ ಉತ್ತರಕೊಟ್ಟಿರುವಿ, ಅದರಂತೆ ಮಾಡು, ಮಾಡಿದರೆ ನಿತ್ಯಜೀವಕ್ಕೆ ಬಾಧ್ಯನಾಗುವಿ” ಎಂದು ಹೇಳಿದನು.
Niin hän sanoi hänelle: oikein sinä vastasit; tee se, niin sinä saat elää.
29 ೨೯ ಆದರೆ ಅವನು ತನ್ನನ್ನು ನೀತಿವಂತನೆಂದು ತೋರಿಸಿಕೊಳ್ಳುವುದಕ್ಕೆ ಅಪೇಕ್ಷಿಸಿ, “ನನ್ನ ನೆರೆಯವನು ಯಾರು?” ಎಂದು ಯೇಸುವನ್ನು ಕೇಳಲು,
Mutta hän tahtoi itsensa vanhurskaaksi tehdä ja sanoi Jesukselle: kukas minun lähimmäiseni on?
30 ೩೦ ಯೇಸು ಅವನಿಗೆ ಪ್ರತ್ಯುತ್ತರವಾಗಿ ಹೇಳಿದ್ದೇನಂದರೆ, “ಒಬ್ಬಾನೊಬ್ಬ ಮನುಷ್ಯನು ಯೆರೂಸಲೇಮಿನ ಬೆಟ್ಟದ ಪ್ರದೇಶದಿಂದ ಇಳಿದು ಯೆರಿಕೋ ಎಂಬ ಊರಿಗೆ ಹೋಗುತ್ತಿರುವಾಗ ಕಳ್ಳರ ಕೈಗೆ ಸಿಕ್ಕಿಬಿದ್ದನು. ಅವರು ಅವನನ್ನು ಸುಲಿಗೆ ಮಾಡಿಕೊಂಡು, ಹೊಡೆದು, ಅವನನ್ನು ಅರೆಜೀವಮಾಡಿ ಬಿಟ್ಟುಹೋದರು.
Jesus vastasi ja sanoi: yksi ihminen meni alas Jerusalemista Jerikoon, ja tuli ryövärien käsiin, jotka hänen alasti riisuivat ja haavoittivat, menivät pois ja jättivät hänen puolikuolleeksi.
31 ೩೧ ಆಗ ಒಬ್ಬ ಯಾಜಕನು ಆ ದಾರಿಯಲ್ಲಿ ಇಳಿದುಬರುತ್ತಾ ಅವನನ್ನು ಕಂಡು ಓರೆಯಾಗಿ ಹೋದನು.
Niin tapahtui, että yksi pappi sitä tietä vaelsi, ja kuin hän hänen näki, meni hän ohitse.
32 ೩೨ ಅದೇ ರೀತಿಯಲ್ಲಿ ಒಬ್ಬ ಲೇವಿಯು ಆ ಸ್ಥಳಕ್ಕೆ ಬಂದು ಅವನನ್ನು ಕಂಡು ಓರೆಯಾಗಿ ಹೋದನು.
Niin myös Leviläinen, kuin hän tuli sille paikalle, ja näki hänen, ja meni ohitse.
33 ೩೩ ಆದರೆ ಒಬ್ಬ ಸಮಾರ್ಯದವನು ಪ್ರಯಾಣಮಾಡುತ್ತಾ ಅವನು ಬಿದಿದ್ದ ಸ್ಥಳಕ್ಕೆ ಬಂದಾಗ ಅವನನ್ನು ಕಂಡು ಕನಿಕರಿಸಿ,
Mutta yksi Samarialainen vaelsi, ja tuli hänen tykönsä, ja kuin hän näki hänen, armahti hän häntä,
34 ೩೪ ಅವನ ಹತ್ತಿರಕ್ಕೆ ಹೋಗಿ ಅವನ ಗಾಯಗಳಿಗೆ ಎಣ್ಣೆಯನ್ನೂ ದ್ರಾಕ್ಷಾರಸವನ್ನೂ ಹೊಯ್ದು ಗಾಯವನು ಕಟ್ಟಿ ತನ್ನ ಸ್ವಂತ ವಾಹನ ಪಶುವಿನ ಮೇಲೆ ಹತ್ತಿಸಿಕೊಂಡು ಛತ್ರಕ್ಕೆ ಕರೆದುಕೊಂಡು ಹೋಗಿ ಅವನನ್ನು ಆರೈಕೆಮಾಡಿದನು.
Ja tuli ja sitoi hänen haavansa ja vuodatti siihen öljyä ja viinaa, ja pani juhtansa päälle, ja vei hänen majaan, ja korjasi häntä.
35 ೩೫ ಮರುದಿನ ಅವನು ಎರಡು ದಿನಾರಿಗಳನ್ನುತೆಗೆದು ಛತ್ರದವನಿಗೆ ಕೊಟ್ಟು, ‘ಇವನನ್ನು ಆರೈಕೆಮಾಡು, ಇದಕ್ಕಿಂತ ಹೆಚ್ಚಾಗಿ ಏನಾದರೂ ವೆಚ್ಚಮಾಡಿದರೆ ನಾನು ಹಿಂತಿರುಗಿ ಬಂದಾಗ ನಿನಗೆ ಕೊಡುವೆನು’ ಅಂದನು.
Ja toisena päivänä matkusti hän, ja otti kaksi pennikiä ja antoi isännälle, ja sanoi hänelle: korjaa häntä, ja jos sinä enemmän kulutat, niin minä palatessani maksan sinulle.
36 ೩೬ ಈ ಮೂವರಲ್ಲಿ ಯಾವನು ಕಳ್ಳರ ಕೈಗೆ ಸಿಕ್ಕಿದವನಿಗೆ ನೆರೆಯವನಾದನೆಂದು ನಿನಗೆ ತೋರುತ್ತದೆ ಹೇಳು?” ಎಂದು ಕೇಳಿದ್ದಕ್ಕೆ,
Kuka siis näistä kolmesta oli sinun nähdäkses hänen lähimmäisensä, joka ryövärien käsiin oli tullut?
37 ೩೭ ಆ ಧರ್ಮೋಪದೇಶಕನು, “ಅವನಿಗೆ ದಯೆ ತೋರಿಸಿದವನೇ” ಅಂದನು. ಆಗ ಯೇಸು ಅವನಿಗೆ, “ಹೋಗು, ನೀನೂ ಅದರಂತೆ ಮಾಡು” ಎಂದು ಹೇಳಿದನು.
Niin hän sanoi: joka laupiuden teki hänen kohtaansa. Niin sanoi Jesus hänelle: mene ja tee sinä myös niin.
38 ೩೮ ಅವರು ಸಂಚಾರಮಾಡುತ್ತಿರುವಾಗ ಆತನು ಒಂದು ಹಳ್ಳಿಗೆ ಬಂದನು. ಅಲ್ಲಿ ಮಾರ್ಥಳೆಂಬ ಒಬ್ಬ ಸ್ತ್ರೀಯು ಆತನನ್ನು ತನ್ನ ಮನೆಯಲ್ಲಿ ಉಳಿಸಿಕೊಂಡಳು.
Niin tapahtui, kuin he vaelsivat, meni hän yhteen kylään, ja yksi vaimo, Martta nimeltä, otti hänen huoneesensa,
39 ೩೯ ಆಕೆಗೆ ಮರಿಯಳೆಂಬ ಒಬ್ಬ ತಂಗಿ ಇದ್ದಳು. ಈಕೆಯು ಯೇಸುವಿನ ಪಾದಗಳ ಬಳಿಯಲ್ಲಿ ಕುಳಿತುಕೊಂಡು ಆತನ ವಾಕ್ಯವನ್ನು ಕೇಳುತ್ತಿದ್ದಳು.
Ja hänellä oli sisar, joka kutsuttiin Maria, joka myös istui Jesuksen jalkain juureen ja kuulteli hänen puhettansa.
40 ೪೦ ಆದರೆ ಮಾರ್ಥಳು ಉಪಚಾರ ಸೇವೆಯ ವಿಷಯವಾಗಿ ಬಹಳ ಬೇಸತ್ತು ಯೇಸುವಿನ ಬಳಿಗೆ ಬಂದು, “ಕರ್ತನೇ, ನನ್ನ ತಂಗಿಯು ಸೇವೆಗೆ ನನ್ನೊಬ್ಬಳನ್ನೇ ಬಿಟ್ಟಿದ್ದಾಳೆ, ಇದಕ್ಕೆ ನಿನಗೆ ಚಿಂತೆಯಿಲ್ಲವೋ? ನನಗೆ ನೆರವಾಗಬೇಕೆಂದು ಆಕೆಗೆ ಹೇಳು” ಅಂದಳು.
Mutta Martta teki paljon askareita palvellen heitä; hän tuli ja sanoi: Herra, etkös tottele, että minun sisareni jätti minun yksin askaroitsemaan? Sano siis hänelle, että hän minua auttais.
41 ೪೧ ಆದರೆ, ಕರ್ತನು ಆಕೆಗೆ, “ಮಾರ್ಥಳೇ, ಮಾರ್ಥಳೇ, ನೀನು ಅನೇಕ ವಿಷಯಗಳಿಗಾಗಿ ಚಿಂತೆಯಲ್ಲಿಯೂ ಗಡಿಬಿಡಿಯಲ್ಲಿಯೂ ಸಿಕ್ಕಿಕೊಂಡಿದ್ದೀ.
Niin Jesus vastasi ja sanoi hänelle: Martta, Martta, paljon sinä suret ja pyrit.
42 ೪೨ ಆದರೆ ಅಗತ್ಯವಾದದ್ದು ಒಂದೇ, ಮರಿಯಳು ಆ ಉತ್ತಮ ಭಾಗವನ್ನು ಆರಿಸಿಕೊಂಡಿದ್ದಾಳೆ, ಅದು ಆಕೆಯಿಂದ ತೆಗೆಯಲ್ಪಡುವುದಿಲ್ಲ” ಎಂದು ಉತ್ತರಕೊಟ್ಟನು.
Vaan yksi on tarpeellinen: Maria on hyvän osan valinnut, joka ei häneltä pidä otettaman pois.