< ಲೂಕನು 11 >

1 ಒಮ್ಮೆ ಯೇಸು ಒಂದು ಸ್ಥಳದಲ್ಲಿ ಪ್ರಾರ್ಥನೆ ಮಾಡಿ ಮುಗಿಸಿದಾಗ ಆತನ ಶಿಷ್ಯರಲ್ಲಿ ಒಬ್ಬನು ಆತನಿಗೆ, “ಕರ್ತನೇ, ಯೋಹಾನನು ತನ್ನ ಶಿಷ್ಯರಿಗೆ ಕಲಿಸಿದ ಹಾಗೆ ನಮಗೂ ಪ್ರಾರ್ಥನೆ ಮಾಡುವುದನ್ನು ಕಲಿಸು” ಎಂದು ಕೇಳಿದನು.
Y ACONTECIÓ que estando él orando en un lugar, como acabó, uno de sus discípulos le dijo: Señor, enséñanos á orar, como tambien Juan enseñó á sus discípulos.
2 ಅದಕ್ಕಾತನು, “ನೀವು ಪ್ರಾರ್ಥಿಸುವಾಗ ಈ ರೀತಿಯಾಗಿ ಪ್ರಾರ್ಥಿಸಿರಿ, “ತಂದೆಯೇ, ನಿನ್ನ ನಾಮವು ಪರಿಶುದ್ಧವೆಂದು ಎಣಿಸಲ್ಪಡಲಿ. ನಿನ್ನ ರಾಜ್ಯವು ಬರಲಿ.
Y les dijo: Cuando orareis, decid: Padre nuestro que estás en los cielos, sea tu nombre santificado. Venga tu reino. Sea hecha tu voluntad, como en el cielo, así tambien en la tierra.
3 ನಮ್ಮ ಅನುದಿನದ ಆಹಾರವನ್ನು ಪ್ರತಿದಿನವೂ ದಯಪಾಲಿಸು.
El pan nuestro de cada dia, dános[le] hoy.
4 ನಮಗೆ ತಪ್ಪುಮಾಡಿರುವ ಪ್ರತಿಯೊಬ್ಬನನ್ನು ನಾವು ಕ್ಷಮಿಸುವುದರಿಂದ ನಮ್ಮ ಪಾಪಗಳನ್ನು ಕ್ಷಮಿಸು. ನಮ್ಮನ್ನು ಶೋಧನೆಯೊಳಗೆ ಸೇರಿಸದಂತೆ ಪಾರುಮಾಡು ಎಂದು ಹೇಳಿರಿ” ಅಂದನು.
Y perdónanos nuestros pecados, porque tambien nosotros perdonamos á todos los que nos deben. Y no nos metas en tentacion, mas líbranos del malo.
5 ಮತ್ತು ಯೇಸು ಅವರಿಗೆ ಹೇಳಿದ್ದೇನಂದರೆ, “ನಿಮ್ಮಲ್ಲಿ ಒಬ್ಬನು ತನ್ನ ಸ್ನೇಹಿತನ ಮನೆಗೆ ನಡುರಾತ್ರಿಯಲ್ಲಿ ಹೋಗುತ್ತಾನೆಂದು ಭಾವಿಸೋಣ, ಅವನು, ‘ಸ್ನೇಹಿತನೆ, ನನಗೆ ಮೂರು ರೊಟ್ಟಿಗಳನ್ನು ಸಾಲವಾಗಿ ಕೊಡು.
Díjoles tambien: ¿Quien de vosotros tendrá un amigo, é irá á él á media noche, y le dirá: Amigo, préstame tres panes:
6 ಪ್ರಯಾಣದಲ್ಲಿದ್ದ ನನ್ನ ಸ್ನೇಹಿತನೊಬ್ಬನು ಅನಿರೀಕ್ಷಿತವಾಗಿ ನನ್ನ ಮನೆಗೆ ಬಂದಿದ್ದಾನೆ. ಅವನಿಗೆ ಊಟಕ್ಕೆ ಕೊಡಲು ನನ್ನಲ್ಲಿ ಏನೂ ಇಲ್ಲ’ ಎಂದು ಕೇಳಲು,
Porque un amigo mio ha venido á mí de camino, y no tengo qué ponerle delante?
7 ಆ ಸ್ನೇಹಿತನು, ‘ನನಗೆ ತೊಂದರೆ ಕೊಡಬೇಡ; ಈಗ ಬಾಗಿಲು ಹಾಕಿದೆ, ನನ್ನ ಮಕ್ಕಳು ನನ್ನೊಂದಿಗೆ ಮಲಗಿದ್ದಾರೆ, ನಾನು ಎದ್ದು ನಿನಗೆ ಕೊಡುವುದಕ್ಕಾಗುವುದಿಲ್ಲ, ಎಂದು ಒಳಗಿನಿಂದ ಉತ್ತರಕೊಡುವನು.’
Y [si] él de dentro respondiendo, dijere: No me seas molesto; la puerta está ya cerrada, y mis niños están conmigo en cama; no puedo levantarme, y darte:
8 ಆದರೂ, ಸ್ನೇಹದ ನಿಮಿತ್ತವಾಗಿ ಎದ್ದು ಬಂದು ಕೊಡದೆ ಇದ್ದರೂ, ನಾಚಿಕೆಪಡದೆ ಕೇಳುತ್ತಲೇ ಇದ್ದಾನಲ್ಲಾ ಎಂಬ ಕಾರಣದಿಂದಾದರೂ ಅವನು ಎದ್ದು ಬಂದು ಕೇಳಿದಷ್ಟು ರೊಟ್ಟಿಗಳನ್ನು ಕೊಡುತಾನೆಂಬುದು ನಿಜ.
Os digo, que aunque no se levante á darle por ser su amigo, cierto por su importunidad se levantará, y le dará todo lo que habrá menester.
9 ಹಾಗೆಯೇ ನಾನು ನಿಮಗೆ ಹೇಳುವುದೇನಂದರೆ, ಬೇಡಿಕೊಳ್ಳಿರಿ, ನಿಮಗೆ ದೊರೆಯುವುದು; ಹುಡುಕಿರಿ, ನಿಮಗೆ ಸಿಕ್ಕುವುದು; ತಟ್ಟಿರಿ, ನಿಮಗೆ ತೆರೆಯುವುದು.
Y yo os digo: Pedid, y se os dará: buscad, y hallaréis; tocad, y os será abierto.
10 ೧೦ ಏಕೆಂದರೆ ಬೇಡಿಕೊಳ್ಳುವ ಪ್ರತಿಯೊಬ್ಬನು ಹೊಂದುವನು, ಹುಡುಕುವವನಿಗೆ ಸಿಕ್ಕುವುದು, ತಟ್ಟುವವನಿಗೆ ತೆರೆಯುವುದು.
Porque todo aquel que pide, recibe; y el que busca halla; y al que toca, se abre.
11 ೧೧ ನಿಮ್ಮಲ್ಲಿ ತಂದೆಯಾದವನು ಮೀನನ್ನು ಕೇಳುವ ಮಗನಿಗೆ ಮೀನು ಕೊಡದೆ ಹಾವನ್ನು ಕೊಡುವನೇ?
¿Y cuál padre de vosotros, si su hijo le pidiere pan, le dará una piedra? ó, si pescado, ¿en lugar de pescado le dará una serpiente?
12 ೧೨ ಅಥವಾ ಮೊಟ್ಟೆಯನ್ನು ಕೇಳಿದರೆ ಚೇಳನ್ನು ಕೊಡುವನೇ?
O, si [le] pidiere un huevo, ¿le dará un escorpion?
13 ೧೩ ಕೆಟ್ಟವರಾದ ನೀವು ನಿಮ್ಮ ಮಕ್ಕಳಿಗೆ ಒಳ್ಳೆಯ ಪದಾರ್ಥಗಳನ್ನು ಕೊಡಬಲ್ಲವರಾದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ತನ್ನನ್ನು ಬೇಡಿಕೊಳ್ಳುವವರಿಗೆ ಎಷ್ಟೋ ಹೆಚ್ಚಾಗಿ ಪವಿತ್ರಾತ್ಮವನ್ನೇ ಕೊಡುವನಲ್ಲವೇ?” ಅಂದನು.
Pues si vosotros, siendo malos, sabeis dar buenas dádivas á vuestros hijos, ¿cuánto más vuestro Padre celestial dará el Espíritu Santo á los que lo pidieren de él?
14 ೧೪ ಒಮ್ಮೆ ಯೇಸು ಮೂಗದೆವ್ವವನ್ನು ಬಿಡಿಸುತ್ತಿದ್ದನು. ಆ ದೆವ್ವವು ಬಿಟ್ಟು ಹೋದ ಮೇಲೆ ಮೂಕನು ಮಾತನಾಡಿದನು; ಅದನ್ನು ನೋಡಿದ ಜನರು ಆಶ್ಚರ್ಯಪಟ್ಟರು.
Y estaba él lanzando un demonio el cual era mudo: y aconteció que salido fuera el demonio, el mudo habló, y las gentes se maravillaron.
15 ೧೫ ಆದರೆ ಅವರಲ್ಲಿ ಕೆಲವರು, “ಇವನು ದೆವ್ವಗಳ ಒಡೆಯನಾದ ಬೆಲ್ಜೆಬೂಲನ ಶಕ್ತಿಯಿಂದ ದೆವ್ವಗಳನ್ನು ಬಿಡಿಸುತ್ತಾನೆ” ಅಂದರು.
Y algunos de ellos decian: En Beelzebul, príncipe de los demonios, echa fuera los demonios.
16 ೧೬ ಬೇರೆ ಕೆಲವರು ಆತನನ್ನು ಪರೀಕ್ಷಿಸುವುದಕ್ಕಾಗಿ, “ನೀನು ಪರಲೋಕದಿಂದ ಒಂದು ಸೂಚಕಕಾರ್ಯವನ್ನು ಮಾಡಿತೋರಿಸು” ಎಂದು ಕೇಳಿದರು.
Y otros, tentando, pedian de el señal del cielo.
17 ೧೭ ಯೇಸು ಅವರ ಆಲೋಚನೆಗಳನ್ನು ಅರಿತುಕೊಂಡು ಅವರಿಗೆ ಹೇಳಿದ್ದೇನಂದರೆ, “ತಮ್ಮತಮ್ಮೊಳಗೆ ಭೇದ ಹುಟ್ಟಿದ ರಾಜ್ಯವು ನಾಶವಾಗುವುದು ಮತ್ತು ತನ್ನಲ್ಲಿ ಕಚ್ಚಾಡಿ ಭೇದಹುಟ್ಟಿಸುವ ಕುಟುಂಬ ಬಿದ್ದುಹೋಗುವುದು.
Mas él, conociendo los pensamientos de ellos, les dijo: Todo reino dividido contra sí mismo es asolado, y una casa [dividida] contra sí misma, cae.
18 ೧೮ ಅದರಂತೆ ಸೈತಾನ ಪಕ್ಷದವರು ಒಬ್ಬರ ವಿರುದ್ಧ ಒಬ್ಬರು ಜಗಳ ಆಡಿದರೆ ಅವನ ರಾಜ್ಯವು ಹೇಗೆ ಉಳಿದೀತು? ಬೆಲ್ಜೆಬೂಲನ ಬಲದಿಂದ ದೆವ್ವಗಳನ್ನು ಬಿಡಿಸುತ್ತೀ ಎಂದು ನನಗೆ ಹೇಳುತ್ತೀರಲ್ಲಾ,
Y si tambien Satanás está dividido contra sí mismo, ¿cómo estará en pié su reino? porque decís, que en Beelzebul echo yo fuera los demonios.
19 ೧೯ ನಾನು ಬೆಲ್ಜೆಬೂಲನ ಬಲದಿಂದ ದೆವ್ವಗಳನ್ನು ಬಿಡಿಸುವುದಾದರೆ ನಿಮ್ಮವರು ಯಾರ ಬಲದಿಂದ ಬಿಡಿಸುತ್ತಾರೆ? ಆದುದರಿಂದ ನೀವು ಹೇಳುವುದು ತಪ್ಪೆಂದು ನಿಮ್ಮವರೇ ತೀರ್ಪುಕೊಡುವರು.
Pues si yo echo fuera los demonios en Beelzebul, ¿vuestros hijos en quién los echan fuera? por tanto ellos serán vuestros jueces.
20 ೨೦ ನಾನು ದೇವರ ಬಲದಿಂದಲೇ ದೆವ್ವಗಳನ್ನು ಬಿಡಿಸುವುದಾದರೆ ದೇವರ ರಾಜ್ಯವು ನಿಮ್ಮಲ್ಲಿಗೆ ಈಗಾಗಲೇ ಬಂದಿದೆ ಎಂಬುದು ಸ್ಪಷ್ಟ.
Mas si en el dedo de Dios echo fuera los demonios, cierto el reino de Dios ha llegado á vosotros.
21 ೨೧ “ಒಬ್ಬ ಬಲಿಷ್ಠನು ಸರ್ವಾಯುಧಗಳನ್ನು ಧರಿಸಿಕೊಂಡು ತನ್ನ ಮನೆಯನ್ನು ಕಾಪಾಡಿಕೊಂಡಿರುವಾಗ ಅವನ ವಸ್ತುಗಳು ಭದ್ರವಾಗಿಯೇ ಇರುವವು;
Cuando el fuerte armada guarda su atrio, en paz está lo que posee.
22 ೨೨ ಆದರೆ ಅವನಿಗಿಂತ ಬಲಿಷ್ಠನು ಬಂದು ಅವನನ್ನು ಗೆದ್ದು ಅವನು ನೆಚ್ಚಿಕೊಂಡಿದ್ದ ಆಯುಧಗಳನ್ನೆಲ್ಲಾ ಅವನು ಕಿತ್ತುಕೊಂಡು, ಸುಲಿಗೆಮಾಡಿದ್ದನ್ನು ಹಂಚಿಕೊಡುತ್ತಾನೆ.
Mas si sobreviniendo [otro] más fuerte que él, le venciere, le toma todas sus armas en que confiaba, y reparte sus despojos.
23 ೨೩ ನನ್ನ ಪರವಾಗಿ ಇರದವನು ನನಗೆ ವಿರೋಧಿಯೇ ಸರಿ. ನನ್ನ ಜೊತೆಯಲ್ಲಿ ಒಟ್ಟುಗೂಡಿಸದವನು ಚದರಿಸುವವನಾಗುತ್ತಾನೆ.
El que no es conmigo, contra mí es, y el que conmigo no recoge, desparrama.
24 ೨೪ “ಬೋಧನೆಯನ್ನು ಮುಂದುವರಿಸುತ್ತಾ ಯೇಸು, ದೆವ್ವವು ಮನುಷ್ಯನನ್ನು ಬಿಟ್ಟುಹೋದ ಮೇಲೆ ವಿಶ್ರಾಂತಿಯನ್ನು ಹುಡುಕುತ್ತಾ ನೀರಿಲ್ಲದ ಸ್ಥಳಗಳಲ್ಲಿ ತಿರುಗಾಡುತ್ತದೆ. ವಿಶ್ರಾಂತಿ ಸಿಕ್ಕದ ಕಾರಣ ಅದು, ‘ನಾನು ಬಿಟ್ಟು ಬಂದ ನನ್ನ ಮನೆಗೆ ಹಿಂತಿರುಗಿ ಹೋಗುತ್ತೇನೆ’ ಅಂದುಕೊಂಡು ಬಂದು,
Cuando el espíritu inmundo saliere del hombre, anda por lugares secos buscando reposo; y no hallándo[le, ] dice: Me volveré á mi casa, de donde salí.
25 ೨೫ ಆ ಮನೆ ಗುಡಿಸಿ ವ್ಯವಸ್ಥಿತವಾಗಿರುವುದನ್ನು ಕಂಡು ಹೊರಟುಹೋಗಿ,
Y viniendo la halla barrida y adornada.
26 ೨೬ ತನಗಿಂತ ಕೆಟ್ಟವುಗಳಾದ ಬೇರೆ ಏಳು ದೆವ್ವಗಳನ್ನು ಕರೆದುಕೊಂಡು ಬರುವುದು. ಅವು ಒಳಹೊಕ್ಕು ಅಲ್ಲಿ ವಾಸಮಾಡುವವು, ಆಗ ಆ ಮನುಷ್ಯನ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗುವುದು” ಅಂದನು.
Entónces va, y toma otros siete espíritus peores que el; Y entrados, habitan allí; y lo postrero del tal hombre es peor que lo primero.
27 ೨೭ ಯೇಸು ಈ ಮಾತುಗಳನ್ನು ಹೇಳುತ್ತಿರುವಾಗ ಜನರಲ್ಲಿ ಒಬ್ಬ ಸ್ತ್ರೀಯು, “ನಿನ್ನನ್ನು ಹೊತ್ತ ಗರ್ಭವೂ, ನೀನು ಕುಡಿದ ಮೊಲೆಗಳೂ ಧನ್ಯವಾದವುಗಳು” ಎಂದು ಕೂಗಿದಳು.
Y aconteció que diciendo estas cosas, una mujer de la compañía levantando la voz, le dijo: Bienaventurado el vientre que te trajo, y los pechos, que mamaste.
28 ೨೮ ಅದಕ್ಕೆ ಯೇಸು, “ಹಾಗನ್ನ ಬೇಡ, ದೇವರ ವಾಕ್ಯವನ್ನು ಕೇಳಿ ಅದನ್ನು ಅನುಸರಿಸುವವನು ಹೆಚ್ಚು ಧನ್ಯನು” ಅಂದನು.
Y él dijo: Antes bienaventurados los que oyen la palabra de Dios y la guardan.
29 ೨೯ ಜನರು ಗುಂಪುಗುಂಪಾಗಿ ಸೇರಿಬರುತ್ತಿರುವಾಗ ಯೇಸು ಹೇಳುವುದಕ್ಕೆ ತೊಡಗಿದ್ದೇನಂದರೆ, “ಈ ಸಂತತಿ ಕೆಟ್ಟ ಸಂತತಿಯೇ; ಇದು ಸೂಚಕಕಾರ್ಯವನ್ನು ಸಂಕೇತವಾಗಿ ನೋಡಬೇಕೆಂದು ಅಪೇಕ್ಷಿಸುತ್ತದೆ. ಆದರೆ ಯೋನನಲ್ಲಿ ಆದ ಸೂಚಕಕಾರ್ಯವೇ ಹೊರತು ಬೇರೆ ಯಾವುದೂ ಈ ಸಂತತಿಗೆ ಸಿಕ್ಕುವುದಿಲ್ಲ.
Y juntándose las gentes á él, comenzó á decir: Esta generacion mala es: señal busca, mas señal no le será dada, sino la señal de Jonás.
30 ೩೦ ಹೇಗೆಂದರೆ ಯೋನನು ನಿನೆವೆ ಪಟ್ಟಣದವರಿಗೆ ಗುರುತಾದ ಹಾಗೆಯೇ ಮನುಷ್ಯಕುಮಾರನು ಈ ಸಂತತಿಗೆ ಗುರುತಾಗಿರುವನು.
Porque como Jonás fué señal á los Ninivitas, así tambien será el Hijo del hombre á esta generacion.
31 ೩೧ ದಕ್ಷಿಣ ದೇಶದ ರಾಣಿಯು ನ್ಯಾಯವಿಚಾರಣೆ ದಿನದಲ್ಲಿ ಈ ಸಂತತಿಯವರೊಂದಿಗೆ ಎದ್ದುನಿಂತು ಇವರನ್ನು ಅಪರಾಧಿಗಳೆಂದು ಖಂಡಿಸುವಳು. ಆಕೆಯು ಸೊಲೊಮೋನನ ಜ್ಞಾನವನ್ನು ತಿಳಿದುಕೊಳ್ಳುವುದಕ್ಕೆ ಭೂಮಿಯ ಕಟ್ಟಕಡೆಯಿಂದ ಬಂದಳು. ಆದರೆ ಇಗೋ, ಸೊಲೊಮೋನನಿಗಿಂತಲೂ ಉನ್ನತನಾದವನು ಇಲ್ಲಿದ್ದಾನೆ.
La reina del Austro se levantará en juicio con los hombres de esta generacion, y los condenará; porque vino de los fines de la tierra á oir la sabiduría de Salomon; y hé aquí más que Salomon en este lugar.
32 ೩೨ ನ್ಯಾಯ ವಿಚಾರಣೆಯಲ್ಲಿ ನಿನೆವೆ ಪಟ್ಟಣದವರು ಈ ಸಂತತಿಯವರೊಂದಿಗೆ ನಿಂತು ಇವರನ್ನು ಅಪರಾಧಿಗಳೆಂದು ಖಂಡಿಸುವರು. ಅವರು ಯೋನನು ಸಾರಿದ ವಾಕ್ಯವನ್ನು ಕೇಳಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡರು. ಆದರೆ ಇಗೋ, ಯೋನನಿಗಿಂತಲೂ ಉನ್ನತನಾದವನು ಇಲ್ಲಿದ್ದಾನೆ.
los hombres de Nínive se levantarán en juicio con esta generacion, y la condenarán: porque á la predicacion de Jonás se arrepintieron; y hé aquí más que Jonás en este lugar.
33 ೩೩ “ಯಾರೂ ದೀಪವನ್ನು ಹಚ್ಚಿ ಮರೆಯಲ್ಲಾಗಲಿ ಕೊಳಗದೊಳಗಾಗಲಿ ಇಡುವುದಿಲ್ಲ. ಮನೆಯೊಳಗೆ ಬರುವವರಿಗೆ ಬೆಳಕು ಕಾಣಿಸುವಂತೆ ಆ ದೀಪವನ್ನು ದೀಪಸ್ತಂಭದ ಮೇಲೆ ಇಡುತ್ತಾರಷ್ಟೆ.
Nadie pone en oculto la antorcha encendida, ni debajo del almud; sino en el candelero, para que los que entran, vean la luz.
34 ೩೪ ನಿನ್ನ ಕಣ್ಣು ದೇಹಕ್ಕೆ ದೀಪವಾಗಿದೆ, ನಿನ್ನ ಕಣ್ಣು ನೆಟ್ಟಗಿರುವಾಗ ಅದರಂತೆ ನಿನ್ನ ದೇಹವೆಲ್ಲಾ ಬೆಳಕಾಗಿರುವುದು; ಅದು ಕೆಟ್ಟದ್ದಾಗಿರುವಾಗ ಅದರಂತೆ ನಿನ್ನ ದೇಹವು ಕತ್ತಲಾಗಿರುವುದು.
La antorcha del cuerpo es el ojo: pues si tu ojo fuere simple, tambien todo tu cuerpo será resplandeciente: mas si fuere malo, tambien tu cuerpo será tenebroso.
35 ೩೫ ಆದುದರಿಂದ ನಿನ್ನೊಳಗಿರುವ ಬೆಳಕೇ ಕತ್ತಲಾಗಿದೆಯೋ ಏನೋ ನೋಡು.
Mira pues, si la lumbre que en tí hay, es tinieblas.
36 ೩೬ ನಿನ್ನ ದೇಹವೆಲ್ಲಾ ಬೆಳಕಾಗಿದ್ದು ಯಾವುದೊಂದು ಭಾಗದಲ್ಲೂ ಕತ್ತಲಿಲ್ಲದ್ದಾಗಿದ್ದರೆ, ದೀಪವು ಹೊಳೆದು ನಿನಗೆ ಬೆಳಕನ್ನು ಕೊಡುವ ಹಾಗೆಯೇ ನಿನ್ನ ದೇಹವು ಪೂರ್ಣವಾಗಿ ಬೆಳಕಾಗಿರುವುದು” ಅಂದನು.
Así que [siendo] todo tu cuerpo resplandeciente, no teniendo alguna parte de tiniebla, será todo luminoso, como cuando una antorcha de resplandor te alumbra.
37 ೩೭ ಯೇಸು ಮಾತನಾಡುತ್ತಿರುವಾಗ ಒಬ್ಬ ಫರಿಸಾಯನು ಆತನನ್ನು ಊಟಕ್ಕೆ ಬರಬೇಕೆಂದು ಕೇಳಿಕೊಳ್ಳಲು ಆತನು ಒಳಕ್ಕೆ ಹೋಗಿ ಊಟಕ್ಕೆ ಕುಳಿತುಕೊಂಡನು.
Y luego que hubo hablado, rogóle un Fariséo que comiese con él: y entrado Jesus, se sentó á la mesa.
38 ೩೮ ಆತನು ಕೈತೊಳೆದುಕೊಳ್ಳದೆ ಊಟಕ್ಕೆ ಕುಳಿತದ್ದನ್ನು ಆ ಫರಿಸಾಯನು ಕಂಡು ಆಶ್ಚರ್ಯಪಟ್ಟನು.
Y el Fariséo como [le] vió, maravillóse de que no se lavó ántes de comer.
39 ೩೯ ಆದರೆ ಕರ್ತನು ಅವನಿಗೆ, “ಫರಿಸಾಯರಾದ ನೀವು ಪಂಚಪಾತ್ರೆ ತಟ್ಟೆ ಇವುಗಳ ಹೊರಭಾಗವನ್ನು ಶುಚಿಮಾಡುತ್ತೀರಿ ಸರಿ, ಆದರೆ ನಿಮ್ಮ ಒಳಭಾಗವು ದುರಾಶೆಯಿಂದಲೂ ಕೆಟ್ಟತನದಿಂದಲೂ ತುಂಬಿರುತ್ತದೆ.
Y el Señor le dijo: Ahora vosotros los Fariséos lo de fuera del vaso y del plato limpiais; mas lo interior de vosotros está lleno de rapiña y de maldad.
40 ೪೦ ಬುದ್ಧಿಯಿಲ್ಲದವರೇ, ಹೊರಭಾಗವನ್ನು ಮಾಡಿದಾತನು ಒಳಭಾಗವನ್ನೂ ಮಾಡಿದನಲ್ಲವೇ.
Necios, ¿él que hizo lo de fuera, no hizo tambien lo de dentro?
41 ೪೧ ಹೇಗೂ ಒಳಗಿರುವಂಥದನ್ನು ದಾನಕೊಡಿರಿ, ಆಗ ಸಕಲವೂ ನಿಮಗೆ ಶುದ್ಧವಾಗಿರುವುದು.
Empero de lo que os resta dad limosna; y hé aquí, todo os será limpio.
42 ೪೨ “ಅಯ್ಯೋ ಫರಿಸಾಯರೇ, ನೀವು ಪುದೀನ, ಮರುಗಪತ್ರೆ ಸದಾಪು ಮುಂತಾದ ಸಕಲ ವಿಧವಾದ ಸೊಪ್ಪುಗಳಲ್ಲಿ ಹತ್ತರಲ್ಲೊಂದು ಪಾಲು ಕೊಡುತ್ತೀರಿ ಸರಿ, ಆದರೆ ನ್ಯಾಯವನ್ನೂ ದೇವರ ಪ್ರೀತಿಯನ್ನೂ ಲಕ್ಷಿಸದೆ ಬಿಟ್ಟಿದ್ದೀರಿ. ನೀವು ಅವುಗಳನ್ನು ಅಲಕ್ಷ್ಯ ಮಾಡದೆ, ಇವುಗಳನ್ನು ಮಾಡಬೇಕಾಗಿತ್ತು.
Mas ¡ay de vosotros, Fariséos! que diezmais la menta, y la ruda, y toda hortaliza: mas el juicio y la caridad de Dios pasais de largo. Pues estas cosas era necesario hacer, y no dejar las otras.
43 ೪೩ “ಅಯ್ಯೋ ಫರಿಸಾಯರೇ, ಸಭಾಮಂದಿರಗಳಲ್ಲಿ ಉನ್ನತ ಸ್ಥಾನಗಳನ್ನೂ ಅಂಗಡಿ ಬೀದಿಗಳಲ್ಲಿ ವಂದನೆಗಳನ್ನೂ ನೀವು ಬಯಸುತ್ತೀರಿ.
¡Ay de vosotros Fariséos! que amais las primeras sillas en las sinagogas, y las salutaciones en las plazas.
44 ೪೪ ನಿಮ್ಮ ಗತಿಯನ್ನು ಏನು ಹೇಳಲಿ, ನೆಲಸಮವಾದ ಸಮಾಧಿಗಳ ಹಾಗಿದ್ದೀರಿ. ಅವುಗಳ ಮೇಲೆ ತಿರುಗಾಡುವ ಜನರಿಗೆ ಇವು ಸಮಾಧಿಗಳೆಂದು ತಿಳಿಯದು” ಎಂದು ಹೇಳಿದನು.
¡Ay de vosotros! que sois como sepulcros que no se ven, y los hombres que andan encima no [lo] saben.
45 ೪೫ ಇದನ್ನು ಕೇಳಿ ಒಬ್ಬ ಧರ್ಮೋಪದೇಶಕನು ಯೇಸುವಿಗೆ, “ಬೋಧಕನೇ, ಈ ಮಾತುಗಳನ್ನು ಹೇಳುವುದರಿಂದ ನಮ್ಮನ್ನೂ ನಿಂದಿಸಿದ ಹಾಗಾಯಿತು” ಎಂದು ಹೇಳಲು,
Y respondiendo uno de los doctores de la ley, le dice: Maestro, cuando dices esto, tambien nos afrentas á nosotros.
46 ೪೬ ಆತನು, “ಧರ್ಮೋಪದೇಶಕರೇ, ನಿಮ್ಮ ಗತಿಯನ್ನೂ ಏನು ಹೇಳಲಿ? ನೀವು ಜನರ ಮೇಲೆ ಹೊರಲಾರದ ಹೊರೆಗಳನ್ನು ಹೊರಿಸುತ್ತೀರಿ, ನೀವಾದರೋ ಆ ಹೊರೆಗಳನ್ನು ಒಂದು ಬೆರಳಿನಿಂದಲೂ ಮುಟ್ಟುವುದಿಲ್ಲ.
Y el dijo: ¡Ay de vosotros tambien, doctores de la ley! que cargais los hombres con cargas que no pueden llevar; mas vosotros ni aun con un dedo tocais las cargas.
47 ೪೭ ನಿಮ್ಮ ಗತಿಯನ್ನು ಏನು ಹೇಳಲಿ? ನೀವು ಪ್ರವಾದಿಗಳ ಗೋರಿಗಳನ್ನು ಕಟ್ಟುತ್ತೀರಿ. ಅವರನ್ನು ಕೊಂದವರು ನಿಮ್ಮ ಪೂರ್ವಿಕರೇ.
¡Ay de vosotros! que edificais los sepulcros de los profetas, y los mataron vuestros padres.
48 ೪೮ ಹೀಗಿರುವುದರಿಂದ ನಿಮ್ಮ ಪೂರ್ವಿಕರು ಮಾಡಿದ್ದಕ್ಕೆ ನೀವೇ ಸಾಕ್ಷಿಗಳಾಗಿರುವವರಲ್ಲದೆ ಅವರ ಕೃತ್ಯಗಳಿಗೆ ಒಪ್ಪಿಕೊಂಡ ಹಾಗಾಯಿತು. ಹೇಗೆಂದರೆ ಅವರು ಪ್ರವಾದಿಗಳನ್ನು ಕೊಂದರು, ನೀವು ಗೋರಿಗಳನ್ನು ಕಟ್ಟುತ್ತೀರಿ.
De cierto dais testimonio que consentís en los hechos de vuestros padres: porque á la verdad ellos los mataron, mas vosotros edificais sus sepulcros.
49 ೪೯ ಆದುದರಿಂದ ದೇವರ ಜ್ಞಾನವು ಹೇಳಿದ್ದೇನಂದರೆ, ‘ನಾನು ಅವರ ಬಳಿಗೆ ಪ್ರವಾದಿಗಳನ್ನೂ ಅಪೊಸ್ತಲರನ್ನೂ ಕಳುಹಿಸುವೆನು, ಅವರಲ್ಲಿ ಕೆಲವರನ್ನು ಕೊಲ್ಲುವರು, ಕೆಲವರನ್ನು ಹಿಂಸೆಪಡಿಸುವರು.’
Por tanto la sabiduría de Dios tambien dijo: Enviaré á ellos profetas, y apóstoles, y de ellos [á unos] matarán, y [á otros] perseguirán;
50 ೫೦ ಹೀಗೆ ಲೋಕಾದಿಯಿಂದ ಸುರಿಸಲಾದ ಎಲ್ಲಾ ಪ್ರವಾದಿಗಳ ರಕ್ತಕ್ಕೂ ಅಂದರೆ, ಹೇಬೆಲನ ರಕ್ತ ಮೊದಲುಗೊಂಡು, ಯಜ್ಞವೇದಿಗೂ ದೇವಾಲಯಕ್ಕೂ ನಡುವೆ ಕೊಲ್ಲಲ್ಪಟ್ಟ ಜಕರೀಯನ ರಕ್ತದವರೆಗೂ ಈ ಸಂತತಿಯವರು ಲೆಕ್ಕಕೊಡಬೇಕಾಗುವುದು ಎಂಬುದೇ. ಹೌದು, ಈ ಸಂತತಿಯವರೇ ಉತ್ತರಕೊಡಬೇಕೆಂದು ನಿಮಗೆ ಸ್ಪಷ್ಟವಾಗಿ ಹೇಳುತ್ತೇನೆ.
Para que de esta generacion sea demandada la sangre de todos los profetas, que ha sido derramada desde la fundacion del mundo;
51 ೫೧
Desde la sangre de Abel, hasta la sangre de Zacarías, que murió entre el altar y el templo: así os digo, será demandada de esta generacion.
52 ೫೨ ಅಯ್ಯೋ ಧರ್ಮೋಪದೇಶಕರೇ, ದೈವಿಕ ಜ್ಞಾನದ ಬೀಗದ ಕೈಯನ್ನು ನಿಮ್ಮಲ್ಲೇ ಇಟ್ಟುಕೊಂಡಿದ್ದೀರಿ. ನೀವೂ ಒಳಕ್ಕೆ ಪ್ರವೇಶಿಸಲಿಲ್ಲ, ಒಳಕ್ಕೆ ಹೋಗ ಬಯಸುವವರಿಗೂ ಅಡ್ಡಿಮಾಡಿದೀರಿ” ಅಂದನು.
¡Ay de vosotros, doctores de la ley! que habeis quitado la llave de la ciencia: vosotros mismos no entrasteis, y á los que entraban impedisteis.
53 ೫೩ ಬಳಿಕ ಯೇಸು ಅಲ್ಲಿಂದ ಹೊರಗೆ ಬಂದಾಗ ಶಾಸ್ತ್ರಿಗಳೂ ಫರಿಸಾಯರೂ ಆತನನ್ನು ಕಠಿಣವಾಗಿ ಕೆಣಕಿ, ವಿರೋಧಿಸಿ ಅನೇಕ ವಿಷಯಗಳನ್ನು ಕುರಿತು ಆತನನ್ನು ಅಡ್ಡಾದಿಡ್ಡೀ ಪ್ರಶ್ನೆಮಾಡುತ್ತಾ,
Y diciéndoles estas cosas, los escribas y los Fariséos comenzaron á apretar[lo] en gran manera, y á provocarle á que hablase de muchas cosas;
54 ೫೪ ಆತನ ಮಾತಿನಲ್ಲಿ ಏನಾದರೂ ತಪ್ಪು ಕಂಡುಹಿಡಿಯಲೇಬೇಕೆಂದು ಹೊಂಚುಹಾಕುತ್ತಿದ್ದರು.
Asechándole, y procurando cazar algo de su boca para acusarle.

< ಲೂಕನು 11 >