< ಲೂಕನು 13 >

1 ಅದೇ ಸಮಯದಲ್ಲಿ ಕೆಲವರು ಯೇಸುವಿನ ಹತ್ತಿರದಲ್ಲಿದ್ದು, ಪಿಲಾತನು ಗಲಿಲಾಯದವರ ರಕ್ತವನ್ನು ಅವರು ಕೊಟ್ಟ ಬಲಿಗಳ ಸಂಗಡ ಬೆರಸಿದನೆಂದು ಆತನಿಗೆ ತಿಳಿಸಿದರು.
E naquele mesmo tempo estavam ali presentes alguns, que lhe contavam dos galileus cujo sangue Pilatos tinha misturado com seus sacrifícios.
2 ಅದಕ್ಕೆ ಯೇಸು ಅವರಿಗೆ, “ಆ ಗಲಿಲಾಯದವರು ಇಂಥಾ ಕೊಲೆಯನ್ನು ಅನುಭವಿಸಿದ್ದರಿಂದ ಅವರನ್ನು ಎಲ್ಲಾ ಗಲಿಲಾಯದವರಿಗಿಂತ ಪಾಪಿಷ್ಠರೆಂದು ಭಾವಿಸುತ್ತೀರೋ?
E respondendo Jesus, disse-lhes: Vós pensais que estes galileus foram mais pecadores, por terem sofrido estas coisas?
3 ಹಾಗೆ ಭಾವಿಸಕೂಡದೆಂದು ನಿಮಗೆ ಹೇಳುತ್ತೇನೆ. ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳದಿದ್ದರೆ ನೀವೆಲ್ಲರೂ ಅವರಂತೆ ನಾಶವಾಗುವಿರಿ.
Não, eu vos digo; antes, se vós não vos arrependerdes, todos de modo semelhante perecereis.
4 ಇಲ್ಲವೆ ಸಿಲೊವಾಮಿನಲ್ಲಿ ಗೋಪುರ ಬಿದ್ದು ಸತ್ತ ಆ ಹದಿನೆಂಟು ಮಂದಿಯು ಯೆರೂಸಲೇಮಿನಲ್ಲಿ ವಾಸವಾಗಿರುವ ಎಲ್ಲಾ ಮನುಷ್ಯರಿಗಿಂತಲೂ ಕೆಟ್ಟವರೆಂದು ನೀವು ಭಾವಿಸುತ್ತೀರೋ?
Ou aqueles dezoito, sobre os quais a torre em Siloé caiu, matando-os; pensais que eram mais culpados dos que todos as pessoas que moravam em Jerusalém?
5 ಹಾಗಲ್ಲವೆಂದು ನಿಮಗೆ ಹೇಳುತ್ತೇನೆ. ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳದಿದ್ದರೆ ನೀವೆಲ್ಲರೂ ಅವರಂತೆ ನಾಶವಾಗುವಿರಿ” ಎಂದು ಹೇಳಿದನು.
Não, eu vos digo; antes, se vós não vos arrependerdes, todos de modo semelhante perecereis.
6 ಆ ಮೇಲೆ ಯೇಸು ಒಂದು ಸಾಮ್ಯವನ್ನು ಹೇಳಿದನು. ಅದೇನೆಂದರೆ, “ಒಬ್ಬನು ತನ್ನ ದ್ರಾಕ್ಷಿಯ ತೋಟದಲ್ಲಿ ಒಂದು ಅಂಜೂರದ ಗಿಡವನ್ನು ನೆಡಿಸಿದನು. ಸ್ವಲ್ಪಕಾಲದ ನಂತರ ಅವನು ಆ ಮರದಲ್ಲಿ ಹಣ್ಣನ್ನು ಹುಡುಕುತ್ತಾ ಬಂದನು. ಸಿಕ್ಕಲಿಲ್ಲ.
E dizia esta parábola: Um certo [homem] tinha uma figueira plantada em sua vinha, e veio até ela para buscar fruto, e não achou.
7 ಬಳಿಕ ಅವನು ತೋಟಗಾರನಿಗೆ, ‘ನೋಡು, ನಾನು ಮೂರು ವರ್ಷದಿಂದಲೂ ಈ ಅಂಜೂರದ ಮರದಲ್ಲಿ ಹಣ್ಣನ್ನು ಹುಡುಕುತ್ತಾ ಬಂದಿದ್ದೇನೆ; ಆದರೂ ನನಗೆ ಸಿಕ್ಕಲಿಲ್ಲ. ಇದನ್ನು ಕಡಿದು ಹಾಕು. ಇದರಿಂದ ಭೂಮಿಯು ಯಾಕೆ ವ್ಯರ್ಥವಾಗಬೇಕು’ ಎಂದು ಹೇಳಿದನು.
E disse ao que cuidava da vinha: Eis que há três anos, que venho para buscar fruto nesta figueira, e não [o] acho; corta-a; por que ainda ocupa inutilmente a terra?
8 ಅದಕ್ಕೆ ಆ ತೋಟಗಾರನು, ‘ಯಜಮಾನನೇ ಈ ವರ್ಷವೂ ಇದನ್ನು ಬಿಡು, ಅಷ್ಟರಲ್ಲಿ ನಾನು ಇದರ ಸುತ್ತಲು ಅಗೆದು ಗೊಬ್ಬರ ಹಾಕುತ್ತೇನೆ.
E respondendo ele, disse-lhe: Senhor, deixa-a [ainda] este ano, até que eu a escave ao redor, e a adube;
9 ಮುಂದೆ ಅದರಲ್ಲಿ ಹಣ್ಣು ಬಿಟ್ಟರೆ ಸರಿ, ಇಲ್ಲದಿದ್ದರೆ ಇದನ್ನು ಕಡಿದುಹಾಕಬಹುದು’” ಎಂದು ಉತ್ತರ ಕೊಟ್ಟನು.
E se der fruto, [deixa-a ficar]; se não, tu a cortarás depois.
10 ೧೦ ಒಂದು ಸಬ್ಬತ್ ದಿನದಲ್ಲಿ ಯೇಸು ಒಂದು ಸಭಾಮಂದಿರದೊಳಗೆ ಉಪದೇಶಮಾಡುತ್ತಾ ಇದ್ದನು.
E ensinava em uma das sinagogas num sábado.
11 ೧೧ ಅಲ್ಲಿ ಹದಿನೆಂಟು ವರ್ಷಗಳಿಂದ ದುರಾತ್ಮನಿಂದ ಬಾಧಿತಳಾಗಿ ಬೆನ್ನು ಬಗ್ಗಿ ಹೋಗಿ ಗೂನಿಯಾಗಿದ್ದು ಸ್ವಲ್ಪವಾದರೂ ಮೈಯನ್ನು ಮೇಲಕ್ಕೆ ಎತ್ತಲಾರದೆ ಇದ್ದ ಒಬ್ಬ ಹೆಂಗಸು ಇದ್ದಳು.
E eis que estava ali uma mulher, que havia dezoito anos que tinha um espírito de enfermidade; e andava encurvada, e de maneira nenhuma ela podia se endireitar.
12 ೧೨ ಯೇಸು ಆಕೆಯನ್ನು ನೋಡಿ ಹತ್ತಿರಕ್ಕೆ ಕರೆದು ಆಕೆಗೆ, “ನಿನ್ನ ರೋಗವು ಬಿಡುಗಡೆಯಾಯಿತು” ಎಂದು ಹೇಳಿ
E Jesus vendo-a, chamou-a para si, e disse-lhe: Mulher, livre estás de tua enfermidade.
13 ೧೩ ಆಕೆಯ ಮೇಲೆ ತನ್ನ ಕೈಗಳನ್ನಿಟ್ಟನು. ಇಟ್ಟಕೂಡಲೆ ಆಕೆ ನೆಟ್ಟಗಾದಳು, ದೇವರನ್ನು ಕೊಂಡಾಡಿದಳು.
E pôs as mãos sobre ela, e logo ela se endireitou, e glorificava a Deus.
14 ೧೪ ಆದರೆ ಆ ಸಭಾಮಂದಿರದ ಅಧಿಕಾರಿಯು ನಡೆದ ಸಂಗತಿಯನ್ನು ನೋಡಿ, ಸಬ್ಬತ್ ದಿನದಲ್ಲಿ ಯೇಸು ಸ್ವಸ್ಥ ಮಾಡಿದನಲ್ಲಾ ಎಂದು ಸಿಟ್ಟುಗೊಂಡು ಜನರಿಗೆ, “ಕೆಲಸ ಮಾಡುವುದಕ್ಕೆ ಆರು ದಿನಗಳು ಅವೆಯಷ್ಟೆ. ಆ ದಿನಗಳಲ್ಲಿ ಬಂದು ವಾಸಿಮಾಡಿಸಿಕೊಳ್ಳಿರಿ, ಸಬ್ಬತ್ ದಿನದಲ್ಲಿ ಮಾತ್ರ ಬೇಡ” ಎಂದು ಹೇಳಿದನು.
E o chefe da sinagoga, irritado por Jesus ter curado no sábado, respondendo, disse à multidão: Há seis dias em que se deve trabalhar; nestes dias, pois, vinde para ser curados, e não no dia de sábado.
15 ೧೫ ಆ ಮಾತನ್ನು ಕೇಳಿ ಕರ್ತನು ಅವನಿಗೆ, “ಕಪಟಿಗಳೇ, ನಿಮ್ಮಲ್ಲಿ ಪ್ರತಿಯೊಬ್ಬನು ಸಬ್ಬತ್ ದಿನದಲ್ಲಿ ತನ್ನ ಎತ್ತನ್ನಾಗಲಿ ಕತ್ತೆಯನ್ನಾಗಲಿ ಗೋದಲಿಯಿಂದ ಬಿಚ್ಚಿ ನೀರು ಕುಡಿಸುವುದಕ್ಕಾಗಿ ಹಿಡಿದುಕೊಂಡು ಹೋಗುತ್ತಾನಲ್ಲವೇ.
Porém o Senhor lhe respondeu, e disse: Hipócrita, no sábado cada um de vós não desata seu boi ou jumento da manjedoura, e o leva para dar de beber?
16 ೧೬ ಹಾಗಾದರೆ ಹದಿನೆಂಟು ವರ್ಷಗಳ ತನಕ ಸೈತಾನನು ಕಟ್ಟಿ ಹಾಕಿದ್ದವಳೂ ಅಬ್ರಹಾಮನ ವಂಶದವಳೂ ಆಗಿರುವ ಈಕೆಯನ್ನು ಸಬ್ಬತ್ ದಿನದಲ್ಲಿ ಈ ಬಂಧನದಿಂದ ಬಿಡಿಸಬಾರದೋ?” ಎಂದು ಕೇಳಿದನು.
E não convinha soltar desta ligadura no dia de sábado a esta [mulher], que é filha de Abraão, a qual, eis que Satanás já a havia ligado há dezoito anos?
17 ೧೭ ಈ ಮಾತುಗಳನ್ನು ಆತನು ಹೇಳುತ್ತಿರಲಾಗಿ ಆತನ ವಿರೋಧಿಗಳೆಲ್ಲರೂ ಅವಮಾನಿತರಾದರು. ಗುಂಪು ಕೂಡಿದ್ದ ಜನರೆಲ್ಲರೂ ಆತನಿಂದಾಗುತ್ತಿದ್ದ ಎಲ್ಲಾ ಮಹತ್ತಾದ ಕಾರ್ಯಗಳಿಗೆ ಸಂತೋಷಪಟ್ಟರು.
E ele, dizendo estas coisas, todos seus adversários ficaram envergonhados; e todo o povo se alegrava de todas as coisas gloriosas que eram feitas por ele.
18 ೧೮ ತರುವಾಯ ಯೇಸು ಕೇಳಿದ್ದೇನಂದರೆ, “ದೇವರ ರಾಜ್ಯವು ಏನನ್ನು ಹೋಲುತ್ತದೆ? ಅದನ್ನು ನಾನು ಯಾವುದಕ್ಕೆ ಹೋಲಿಸಲಿ?
E dizia: A que o Reino de Deus é semelhante? E a que eu o compararei?
19 ೧೯ ಅದು ಸಾಸಿವೆ ಕಾಳಿಗೆ ಹೋಲಿಕೆಯಾಗಿದೆ. ಒಬ್ಬ ಮನುಷ್ಯನು ಅದನ್ನು ತೆಗೆದುಕೊಂಡು ಹೋಗಿ ತನ್ನ ತೋಟದಲ್ಲಿ ಹಾಕಿದನು. ಅದು ಬೆಳೆದು ಮರವಾಯಿತು. ಮತ್ತು ಆಕಾಶದಲ್ಲಿ ಹಾರಾಡುವ ಪಕ್ಷಿಗಳು ಅದರ ಕೊಂಬೆಗಳಲ್ಲಿ ಗೂಡು ಕಟ್ಟಿದವು” ಅಂದನು.
Semelhante é ao grão da mostarda, que um homem, tomando-o, lançou-o em sua horta; e cresceu, e fez-se uma grande árvore, e as aves dos céus fizeram ninhos em seus ramos.
20 ೨೦ ಆತನು ಇನ್ನೂ ಹೇಳಿದ್ದೇನಂದರೆ, “ದೇವರ ರಾಜ್ಯವನ್ನು ನಾನು ಯಾವುದಕ್ಕೆ ಹೋಲಿಸಲಿ?
E disse outra vez: A que compararei o Reino de Deus?
21 ೨೧ ಅದು ಹುಳಿಹಿಟ್ಟಿಗೆ ಹೋಲಿಕೆಯಾಗಿದೆ. ಅದನ್ನು ಒಬ್ಬ ಹೆಂಗಸು ತೆಗೆದು ಮೂರು ಸೇರು ಹಿಟ್ಟಿನಲ್ಲಿ ಕಲಸಿಡಲು ಆ ಹಿಟ್ಟೆಲ್ಲಾ ಹುಳಿಯಾಯಿತು” ಅಂದನು.
Semelhante é ao fermento, que a mulher, tomando-o, o escondeu em três medidas de farinha, até tudo ficar levedado.
22 ೨೨ ಯೇಸು ಊರೂರಿಗೂ ಗ್ರಾಮ ಗ್ರಾಮಕ್ಕೂ ಹೋಗಿ ಉಪದೇಶ ಮಾಡುತ್ತಾ ಯೆರೂಸಲೇಮಿಗೆ ಪ್ರಯಾಣ ಮಾಡುತ್ತಿದ್ದನು.
E andava de cidade em cidade, e de aldeia em aldeia ensinando, e caminhando para Jerusalém.
23 ೨೩ ಆಗ ಒಬ್ಬನು, “ಕರ್ತನೇ, ರಕ್ಷಣೆ ಹೊಂದುವವರು ಸ್ವಲ್ಪ ಜನರೋ?” ಎಂದು ಕೇಳಲು,
E disse-lhe um: Senhor, são também poucos os que se salvam? E ele lhes disse:
24 ೨೪ ಆತನು ಅವರಿಗೆ, “ಇಕ್ಕಟ್ಟಾದ ಬಾಗಿಲಿನಿಂದ ಒಳಗೆ ಹೋಗುವುದಕ್ಕೆ ಪ್ರಯಾಸಪಡಿರಿ. ಏಕೆಂದರೆ ಬಹು ಜನರು ಒಳಗೆ ಹೋಗುವುದಕ್ಕೆ ನೋಡುವರು. ಆದರೆ ಅವರಿಂದಾಗುವುದಿಲ್ಲ ಎಂದು ನಿಮಗೆ ಹೇಳುತ್ತೇನೆ.
Trabalhai para entrar pela porta estreita; porque eu vos digo, [que] muitos procuraram entrar, e não puderam.
25 ೨೫ ಮನೆ ಯಜಮಾನನು ಎದ್ದು ಬಾಗಿಲು ಮುಚ್ಚಿದ ಮೇಲೆ ನೀವು ಹೊರಗೆ ನಿಂತುಕೊಂಡು ಬಾಗಿಲು ತಟ್ಟಿ, ‘ಕರ್ತನೇ ನಮಗೆ ಬಾಗಿಲು ತೆರೆಯಿರಿ’ ಎಂದು ಬಾಗಿಲು ಬಡಿಯುವುದಕ್ಕೆ ತೊಡಗುವಾಗ ಅವನು, ‘ನೀವು ಎಲ್ಲಿಯವರೋ? ನಿಮ್ಮ ಗುರುತು ನನಗಿಲ್ಲ’ ಅಂದಾನು
Porque quando o chefe da casa se levantar, e fechar a porta, e se estiverdes de fora, e começardes a bater à porta, dizendo: Senhor, senhor, abre-nos! E respondendo ele, vos disser: Não vos conheço, [nem sei] de onde vós sois.
26 ೨೬ ಅದಕ್ಕೆ ನೀವು, ‘ನಿನ್ನ ಸಂಗಡ ನಾವು ಊಟ ಮಾಡಿದೆವು, ಕುಡಿದೆವು, ನಮ್ಮ ಬೀದಿಗಳಲ್ಲಿ ನೀನು ಉಪದೇಶ ಮಾಡಿದ್ದಿ’ ಎಂದು ಹೇಳುವುದಕ್ಕೆ ತೊಡಗುವಿರಿ.
Então começareis a dizer: Em tua presença temos comido e bebido, e tens ensinado em nossas ruas.
27 ೨೭ ಆದರೆ ಅವನು, ‘ನೀವು ಎಲ್ಲಿಯವರೋ? ನಿಮ್ಮ ಗುರುತು ನನಗಿಲ್ಲ. ಅಧರ್ಮಮಾಡುವ ನೀವೆಲ್ಲರೂ ನನ್ನ ಕಡೆಯಿಂದ ಹೊರಟು ಹೋಗಿರಿ’ ಎಂದು ನಿಮಗೆ ಹೇಳುತ್ತೇನೆ ಅನ್ನುವನು.
E ele dirá: Digo-vos que não vos conheço, [nem sei] de onde vós sois; afastai-vos de mim, vós todos praticantes de injustiça.
28 ೨೮ ಅಬ್ರಹಾಮ, ಇಸಾಕ, ಯಾಕೋಬರು ಮತ್ತು ಎಲ್ಲಾ ಪ್ರವಾದಿಗಳು ದೇವರ ರಾಜ್ಯದಲ್ಲಿರುವುದನ್ನೂ ನೀವು ನೋಡುವಿರಿ. ಆದರೆ ನಿಮ್ಮನ್ನು ಮಾತ್ರ ಹೊರಗೆ ಹಾಕಲಾಗುವುದು ಅಲ್ಲಿ ನಿಮಗೆ ಗೋಳಾಟವೂ ಕಟಕಟನೆ ಹಲ್ಲು ಕಡಿಯೋಣವೂ ಉಂಟಾಗುವವು.
Ali haverá choro e ranger de dentes, quando virdes a Abraão, a Isaque, a Jacó, e a todos os profetas no Reino de Deus; mas vós [sendo] lançados fora.
29 ೨೯ ಇದಲ್ಲದೆ ಪೂರ್ವ ಪಶ್ಚಿಮ ಉತ್ತರ ದಕ್ಷಿಣಗಳಿಂದಲೂ ಜನರು ಬಂದು ದೇವರ ರಾಜ್ಯದಲ್ಲಿ ಔತಣಕ್ಕೆ ಕುಳಿತುಕೊಳ್ಳುವರು.
E virão [pessoas] do oriente, e do ocidente, e do norte, e do sul, e se sentarão [à mesa] no Reino de Deus.
30 ೩೦ ಇಗೋ ಕಡೆಯವರಾಗಿರುವ ಕೆಲವರು ಮೊದಲಿನವರಾಗುವರು. ಮೊದಲಿನವರಾಗಿರುವ ಕೆಲವರು ಕಡೆಯವರಾಗುವರು” ಅಂದನು.
E eis que há [alguns] dos últimos que serão primeiros, e há [alguns] dos primeiros que serão últimos.
31 ೩೧ ಅದೇ ಗಳಿಗೆಯಲ್ಲಿ ಕೆಲವು ಮಂದಿ ಫರಿಸಾಯರು ಹತ್ತಿರ ಬಂದು ಯೇಸುವಿಗೆ, “ನೀನು ಇಲ್ಲಿಂದ ಹೊರಟು ಹೋಗು, ಹೆರೋದನು ನಿನ್ನನ್ನು ಕೊಲ್ಲಬೇಕೆಂದಿದ್ದಾನೆ” ಎಂದು ಹೇಳಲು,
Naquele mesmo dia, chegaram uns fariseus, dizendo-lhe: Sai, e vai-te daqui, porque Herodes quer te matar.
32 ೩೨ ಆತನು ಅವರಿಗೆ, “ನೀವು ಹೋಗಿ ‘ಇಗೋ, ನಾನು ಈಹೊತ್ತು ನಾಳೆ ದೆವ್ವಗಳನ್ನು ಬಿಡಿಸುತ್ತಾ ರೋಗಿಗಳನ್ನು ವಾಸಿಮಾಡುತ್ತಾ ಇದ್ದು, ಮೂರನೆಯ ದಿನದಲ್ಲಿ ಸಿದ್ಧಿಗೆ ಬರುತ್ತೇನೆ’ ಎಂದು ಆ ನರಿಗೆ ಹೇಳಿರಿ.
E disse-lhes: Ide, e dizei a aquela raposa: eis que expulso demônios, e faço curas hoje e amanhã, e ao terceiro dia eu terei completado.
33 ೩೩ ಹೇಗೂ ನಾನು ಈ ಹೊತ್ತು ನಾಳೆ ನಾಡಿದ್ದು ಸಂಚಾರ ಮಾಡಬೇಕು. ಪ್ರವಾದಿಯಾದವನು ಯೆರೂಸಲೇಮಿನಲ್ಲಿಯೇ ಹೊರತು ಬೇರೆ ಪಟ್ಟಣದಲ್ಲಿ ಕೊಲ್ಲಲ್ಪಡಕೂಡದಷ್ಟೆ.
Porém é necessário que hoje, e amanhã, e no [dia] seguinte eu caminhe; porque um profeta não pode morrer fora de Jerusalém.
34 ೩೪ ಯೆರೂಸಲೇಮೇ, ಯೆರೂಸಲೇಮೇ ಪ್ರವಾದಿಗಳ ಪ್ರಾಣ ತೆಗೆಯುವವಳೇ, ದೇವರು ನಿನ್ನ ಬಳಿಗೆ ಕಳುಹಿಸಿ ಕೊಟ್ಟವರನ್ನು ಕಲ್ಲೆಸೆದು ಕೊಲ್ಲುವವಳೇ, ಕೋಳಿ ತನ್ನ ಮರಿಗಳನ್ನು ರೆಕ್ಕೆಗಳ ಕೆಳಗೆ ಸೇರಿಸಿಕೊಳ್ಳುವಂತೆ ನಿನ್ನ ಮಕ್ಕಳನ್ನು ಸೇರಿಸಿಕೊಳ್ಳುವುದಕ್ಕೆ ನನಗೆ ಎಷ್ಟೋ ಸಾರಿ ಮನಸ್ಸಿತ್ತು ಆದರೆ ನಿನಗೆ ಮನಸ್ಸಿಲ್ಲದೆ ಹೋಯಿತು!
Jerusalém, Jerusalém, que matas aos profetas, e apedrejas aos que te são enviados: quantas vezes eu quis juntar teus filhos, como a galinha junta seus pintos debaixo de suas asas, e não quisestes?
35 ೩೫ ನೋಡಿರಿ, ನಿಮ್ಮ ಮನೆಯು ಪಾಳುಬೀಳುವುದು. ‘ಕರ್ತನ ಹೆಸರಿನಲ್ಲಿ ಬರುವವನು ಧನ್ಯನು’ ಎಂದು ನೀವು ಹೇಳುವ ವರೆಗೂ ನೀವು ನನ್ನನ್ನು ನೋಡುವುದೇ ಇಲ್ಲ” ಎಂದು ನಿಮಗೆ ಹೇಳುತ್ತೇನೆ.
Eis que vossa casa é deixada deserta para vós. E em verdade vos digo, que não me vereis até que venha [o tempo] em que digais: Bendito aquele que vem no nome do Senhor.

< ಲೂಕನು 13 >