< ಲೂಕನು 14 >
1 ೧ ಆತನು ಸಬ್ಬತ್ ದಿನದಲ್ಲಿ ಫರಿಸಾಯರ ಮುಖ್ಯಸ್ಥರಲ್ಲಿ ಒಬ್ಬನ ಮನೆಗೆ ಊಟಕ್ಕೆ ಹೋದಾಗ ಅವರು ಆತನನ್ನು ಹೊಂಚಿನೋಡುತ್ತಿದ್ದರು.
Ühel hingamispäeval läks Jeesus einestama ühe variseride ülema koju, kus nad teda hoolikalt jälgisid.
2 ೨ ಆಗ ಯೇಸು ತನ್ನೆದುರಿಗೆ ಜಲೋದರವುಳ್ಳ ಒಬ್ಬ ಮನುಷ್ಯನಿರುವುದನ್ನು ನೋಡಿ,
Seal oli üks mees, kelle käed ja jalad olid tursunud.
3 ೩ “ಸಬ್ಬತ್ ದಿನದಲ್ಲಿ ಸ್ವಸ್ಥಮಾಡುವುದು ಸರಿಯೋ ಅಥವಾ ಸರಿಯಲ್ಲವೋ?” ಎಂದು ಧರ್ಮೋಪದೇಶಕರನ್ನೂ ಫರಿಸಾಯರನ್ನೂ ಕೇಳಿದನು.
Niisiis küsis Jeesus vaimuliku seaduse tundjatelt ja variseridelt: „Kas seadus lubab hingamispäeval terveks teha või mitte?“
4 ೪ ಅವರು ಸುಮ್ಮನೇ ಇರಲು ಆತನು ಅವನ ಕೈ ಹಿಡಿದು ಅವನನ್ನು ವಾಸಿಮಾಡಿ ಕಳುಹಿಸಿ,
Aga nad vaikisid. Jeesus puudutas meest, tegi ta terveks ja saatis oma teed.
5 ೫ “ನಿಮ್ಮಲ್ಲಿ ಯಾವನೊಬ್ಬನ ಮಗನಾಗಲಿ ಎತ್ತಾಗಲಿ ಬಾವಿಯಲ್ಲಿ ಬಿದ್ದರೆ ಅವನು ತಡಮಾಡದೆ ಸಬ್ಬತ್ ದಿನದಲ್ಲಾದರೂ ಮೇಲಕ್ಕೆ ತೆಗೆಯುವುದಿಲ್ಲವೇ?” ಎಂದು ಅವರನ್ನು ಕೇಳಿದನು.
Siis ütles Jeesus neile: „Kui teie poeg või härg kukuks juhtumisi hingamispäeval kaevu, kas te ei tõmbaks teda siis kohe välja?“
6 ೬ ಅವರು ಅದಕ್ಕೆ ಉತ್ತರಕೊಡಲಾರದೆ ಇದ್ದರು.
Nad ei suutnud vastust anda.
7 ೭ ಊಟಕ್ಕೆ ಕರಿಸಿಕೊಂಡವರು ಪಂಕ್ತಿಯ ಮುಖ್ಯ ಸ್ಥಾನವನ್ನು ಆರಿಸಿಕೊಳ್ಳುವುದನ್ನು ನೋಡಿ ಯೇಸು ಒಂದು ಸಾಮ್ಯವನ್ನು ಹೇಳಿದನು.
Nii rääkis ta loo külalistele, sest ta märkas, kuidas nad olid valinud istumiseks aukohti.
8 ೮ ಅದೇನೆಂದರೆ, “ಯಾವನಾದರೂ ನಿನ್ನನ್ನು ಮದುವೆ ಊಟಕ್ಕೆ ಕರೆದರೆ ಪಂಕ್ತಿಯೊಳಗೆ ಮುಖ್ಯ ಸ್ಥಾನದಲ್ಲಿ ಕುಳಿತುಕೊಳ್ಳಬೇಡ, ಒಂದು ವೇಳೆ ನಿನಗಿಂತ ಗೌರವವುಳ್ಳವನನ್ನು ಅವನು ಕರೆದಿರಬಹುದು
„Kui sind on kutsutud pulmapeole, siis ära istu aukohale, sest võib-olla on kutsutud keegi, kes on sinust tähtsam, “alustas ta.
9 ೯ ಮತ್ತು ನಿನ್ನನ್ನೂ ಅವನನ್ನೂ ಕರೆದವನು ಬಂದು, ‘ಇವನಿಗೆ ಸ್ಥಳ ಬಿಡು’ ಎಂದು ನಿನಗೆ ಹೇಳುವಾಗ ನೀನು ನಾಚಿಕೊಂಡು ಕಡೆಯ ಸ್ಥಾನದಲ್ಲಿ ಕುಳಿತುಕೊಳ್ಳುವುದಕ್ಕೆ ಹೋಗುವಿ.
„Sinu võõrustaja, kes on teid mõlemat kutsunud, tuleb ja ütleb sulle: „Anna oma koht sellele inimesele.“Siis pead sa piinlikkust tundes minema kohale, mis on järele jäänud.
10 ೧೦ ಆದರೆ ಯಾವನಾದರೂ ನಿನ್ನನ್ನು ಕರೆದಾಗ ನೀನು ಹೋಗಿ ಕಡೆಯ ಸ್ಥಾನದಲ್ಲಿ ಕುಳಿತುಕೋ. ಹೀಗೆ ಮಾಡಿದರೆ ನಿನ್ನನ್ನು ಕರೆದವನು ಬಂದು ನಿನ್ನನ್ನು ನೋಡಿ, ‘ಸ್ನೇಹಿತನೇ, ಇನ್ನೂ ಮೇಲಕ್ಕೆ ಬಾ’ ಅನ್ನುವನು. ಆಗ ನಿನ್ನ ಸಂಗಡ ಕುಳಿತಿರುವವರೆಲ್ಲರ ಮುಂದೆ ನಿನಗೆ ಗೌರವ ದೊರಕುವುದು.
Kui sind on kutsutud, siis vali hoopis kõige tagasihoidlikum koht, nii et kui su võõrustaja tuleb sisse, ütleb ta sulle: „Mu sõber, palun mine paremale kohale.“Siis oleksid sa austatud kõigi külaliste ees, kes koos sinuga istuvad.
11 ೧೧ ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನು ತಗ್ಗಿಸಲ್ಪಡುವನು, ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು” ಅಂದನು.
Sest neid, kes end ise ülendavad, alandatakse, ja neid, kes end ise alandavad, ülendatakse.“
12 ೧೨ ಆತನು ತನ್ನನ್ನು ಊಟಕ್ಕೆ ಕರೆದವನಿಗೆ ಸಹ ಒಂದು ಮಾತು ಹೇಳಿದನು; ಅದೇನೆಂದರೆ, “ನೀನು ಮಧ್ಯಾಹ್ನದ ಊಟಕ್ಕೆ ಅಥವಾ ಸಾಯಂಕಾಲದ ಊಟಕ್ಕೆ ನಿನ್ನ ಸ್ನೇಹಿತರನ್ನಾಗಲಿ, ನಿನ್ನ ಅಣ್ಣತಮ್ಮಂದಿರನ್ನಾಗಲಿ, ನಿನ್ನ ಬಂಧುಬಾಂಧವರನ್ನಾಗಲಿ, ಐಶ್ವರ್ಯವಂತರಾದ ನೆರೆಯವರನ್ನಾಗಲಿ ಕರೆಯಬೇಡ. ಒಂದು ವೇಳೆ ಅವರು ಸಹ ಪ್ರತಿಯಾಗಿ ನಿನ್ನನ್ನು ಕರೆದಾರು, ಮತ್ತು ನಿನಗೆ ಮುಯ್ಯಿಗೆಮುಯ್ಯಾಗುವುದು.
Seejärel ütles ta mehele, kes oli teda kutsunud: „Kui sa korraldad lõuna- või õhtusöögi, siis ära kutsu oma sõpru, vendi, sugulasi või rikkaid naabreid, et nad võiksid omakorda sind kutsuda ja nii saaksid sa tasu.
13 ೧೩ ಆದರೆ ನೀನು ಔತಣ ಮಾಡಿಸುವಾಗ ಬಡವರು, ಅಂಗಹೀನವಾದವರು, ಕುಂಟರು, ಕುರುಡರು ಇಂಥವರನ್ನು ಕರೆ,
Kui sa korraldad pidusöögi, kutsu hoopis vaeseid, vigaseid, sante ja pimedaid,
14 ೧೪ ಆಗ ನೀನು ಧನ್ಯನಾಗುವಿ. ಏಕೆಂದರೆ, ಅವರು ನಿನಗೆ ಪ್ರತಿಯಾಗಿ ಏನು ಮಾಡಲೂ ಇಲ್ಲದವರು. ನೀತಿವಂತರು ಪುನರುತ್ಥಾನ ಹೊಂದುವಾಗ ನಿನಗೆ ಪ್ರತಿಫಲ ದೊರಕುವುದು.”
ning sa saad õnnistatud, sest neil ei ole sulle millegagi tasuda, ja sa saad tasu heade ülestõusmisel.“
15 ೧೫ ಊಟಕ್ಕೆ ಕುಳಿತವರಲ್ಲಿ ಒಬ್ಬನು ಈ ಮಾತುಗಳನ್ನು ಕೇಳಿ, “ದೇವರ ರಾಜ್ಯದಲ್ಲಿ ಊಟಮಾಡುವವನೇ ಧನ್ಯನು” ಎಂದು ಹೇಳಲು,
Kui üks neist, kes koos Jeesusega lauas sõi, kuulis seda, ütles ta Jeesusele: „Kui imetore on neil, kes söövad peolauas Jumala riigis!“
16 ೧೬ ಯೇಸು ಅವನಿಗೆ ಹೇಳಿದ್ದೇನಂದರೆ, “ಒಬ್ಬ ಮನುಷ್ಯನು ಮಹಾ ಔತಣ ಮಾಡಿಸಿ ಅನೇಕರನ್ನು ಆಮಂತ್ರಿಸಿದನು.
„Elas kord üks mees, kes valmistas suure pidusöögi ja kutsus palju külalisi, “vastas Jeesus.
17 ೧೭ ಊಟವು ಸಿದ್ಧವಾದಾಗ, ಅವನು ಊಟಕ್ಕೆ ಆಹ್ವಾನಿಸಲ್ಪಟ್ಟವರ ಬಳಿಗೆ ಬಂದು, ‘ಈಗ ಔತಣವು ಸಿದ್ಧವಾಗಿದೆ ಊಟಕ್ಕೆ ಬರಬೇಕು’ ಎಂದು ಹೇಳುವುದಕ್ಕೆ ತನ್ನ ಆಳನ್ನು ಕಳುಹಿಸಿದನು.
„Kui saabus söögiaeg, saatis ta oma sulased kõigile kutsutuile ütlema: „Tulge, sest pidusöök on valmis!“
18 ೧೮ ಆದರೆ ಅವರೆಲ್ಲರೂ ಒಂದೇ ಮನಸ್ಸಿನಿಂದ ನೆವ ಹೇಳುವುದಕ್ಕೆ ತೊಡಗಿದರು. ಮೊದಲನೆಯವನು ಆ ಆಳನ್ನು ನೋಡಿ, ‘ನಾನು ಒಂದು ಹೊಲವನ್ನು ಕ್ರಯಕ್ಕೆ ತೆಗೆದುಕೊಂಡಿದ್ದೇನೆ, ಅದನ್ನು ಹೋಗಿ ನೋಡಬೇಕಾಗಿದೆ. ನನ್ನನ್ನು ಕ್ಷಮಿಸಬೇಕು’ ಎಂದು ಕೇಳಿಕೊಂಡನು.
Aga nad kõik hakkasid vabandusi esitama. Esimene ütles: „Ostsin just põllu ja pean minema seda vaatama. Palun vabanda mind.“
19 ೧೯ ಮತ್ತೊಬ್ಬನು, ‘ನಾನು ಐದು ಜೋಡಿ ಎತ್ತುಗಳನ್ನು ಕೊಂಡುಕೊಂಡಿದ್ದೇನೆ, ಅವುಗಳನ್ನು ಪರೀಕ್ಷಿಸುವುದಕ್ಕೆ ಹೋಗುತ್ತಿದ್ದೇನೆ, ನನ್ನನ್ನು ಕ್ಷಮಿಸಬೇಕು’ ಎಂದು ಕೇಳಿಕೊಂಡನು.
Teine ütles: „Ostsin just viis paari härgi ja ma pean minema neid katsetama. Palun vabanda mind.“Kolmas ütles:
20 ೨೦ ಇನ್ನೊಬ್ಬನು, ‘ನಾನು ಮದುವೆಮಾಡಿಕೊಂಡಿದ್ದೇನೆ, ಆದುದರಿಂದ ನಾನು ಬರುವುದಕ್ಕಾಗುವುದಿಲ್ಲ’ ಅಂದನು.
„Võtsin just naise, nii et ma ei saa tulla.“
21 ೨೧ ಆ ಆಳು ಬಂದು ತನ್ನ ಯಜಮಾನನಿಗೆ ಈ ಸಂಗತಿಗಳನ್ನು ತಿಳಿಸಲು ಮನೆಯ ಯಜಮಾನನು ಸಿಟ್ಟುಗೊಂಡು ಆಳಿಗೆ, ‘ನೀನು ತಟ್ಟನೆ ಈ ಊರಿನ ಬೀದಿಬೀದಿಗೂ ಸಂದುಸಂದಿಗೂ ಹೋಗಿ ಬಡವರು, ಅಂಗಹೀನರು, ಕುರುಡರು, ಕುಂಟರು, ಇಂಥವರನ್ನು ಇಲ್ಲಿಗೆ ಕರೆದುಕೊಂಡು ಬಾ’ ಎಂದು ಹೇಳಿದನು.
Sulane läks tagasi ja rääkis oma isandale, mida nad olid öelnud. Majaisand sai pahaseks ja ütles oma sulasele: „Mine ruttu välja linna tänavatele ja kõrvaltänavatele ning too sisse vaesed, vigased, pimedad ja sandid.“
22 ೨೨ ಬಳಿಕ ಆ ಆಳು, ‘ಅಯ್ಯಾ, ನೀನು ಅಪ್ಪಣೆಕೊಟ್ಟಂತೆ ಮಾಡಿದ್ದಾಯಿತು. ಆದರೂ ಇನ್ನೂ ಸ್ಥಳ ಉಳಿದಿದೆ’ ಅಂದನು.
Siis ütles sulane: „Isand, ma tegin nii, nagu sa käskisid, aga ikka on veel tühje kohti.“
23 ೨೩ ಆಗ ಆ ಯಜಮಾನನು ತನ್ನ ಆಳಿಗೆ ಹೇಳಿದ್ದೇನೆಂದರೆ, ‘ನೀನು ಹಾದಿಗಳಿಗೂ ಬೀದಿಗಳಿಗೂ ಹೋಗಿ ಅಲ್ಲಿ ಸಿಕ್ಕಿದವರನ್ನು ಬಲವಂತಮಾಡಿ ಒಳಕ್ಕೆ ಕರೆದುಕೊಂಡು ಬಾ, ನನ್ನ ಮನೆ ತುಂಬಲಿ.
Nii käskis isand sulast: „Mine välja maanteedele ja külatänavatele ning sunni inimesi tulema. Ma tahan, et koda saaks täis.
24 ೨೪ ಆದರೆ ಔತಣಕ್ಕೆ ಮೊದಲು ಆಮಂತ್ರಿಸಲ್ಪಟ್ಟವರಲ್ಲಿ ಒಬ್ಬನಾದರೂ ನಾನು ಮಾಡಿಸಿದ ಅಡಿಗೆಯ ರುಚಿಯನ್ನು ಸವಿಯಬಾರದು’ ಎಂದು ನಿಮಗೆ ಹೇಳುತ್ತೇನೆ” ಅಂದನು.
Ma ütlen sulle, ükski neist kutsututest ei saa mu pidusööki maitsta.““
25 ೨೫ ಬಹು ಜನರು ಗುಂಪುಗುಂಪಾಗಿ ಯೇಸುವಿನ ಸಂಗಡ ಹೋಗುತ್ತಾ ಇರಲು ಆತನು ತಿರುಗಿಕೊಂಡು ಅವರಿಗೆ ಹೇಳಿದ್ದೇನಂದರೆ,
Jeesusega käis kaasas suur rahvahulk. Ta pöördus ja ütles neile:
26 ೨೬ “ಯಾವನಾದರೂ ನನ್ನ ಬಳಿಗೆ ಬಂದು ತನ್ನ ತಂದೆತಾಯಿ, ಹೆಂಡತಿ, ಮಕ್ಕಳು, ಅಣ್ಣತಮ್ಮಂದಿರು, ಅಕ್ಕತಂಗಿಯರು ಇವರನ್ನೂ ತನ್ನ ಪ್ರಾಣವನ್ನು ಸಹ ಹಗೆಮಾಡದಿದ್ದರೆ ಅವನು ನನ್ನ ಶಿಷ್ಯನಾಗಿರಲಾರನು.
„Kui te tahate mind järgida, kuid ei vihka oma isa ja ema, naist ja lapsi, vendi ja õdesid − koguni oma elu −, ei saa te mu jüngrid olla.
27 ೨೭ ಯಾವನಾದರೂ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನ ಹಿಂದೆ ಬರದ ಹೊರತು ಅವನು ನನ್ನ ಶಿಷ್ಯನಾಗಿರಲಾರನು.
Kui te ei võta oma risti ega järgne mulle, ei saa te mu jüngrid olla.
28 ೨೮ ನಿಮ್ಮಲ್ಲಿ ಯಾವನಾದರೂ ಒಂದು ಗೋಪುರವನ್ನು ಕಟ್ಟಿಸಬೇಕೆಂದು ಯೋಚಿಸಿದರೆ ಅವನು ಮೊದಲು ಕುಳಿತುಕೊಂಡು, ಅದಕ್ಕೆ ಎಷ್ಟು ಖರ್ಚು ಆದೀತು, ಅದನ್ನು ತೀರಿಸುವುದಕ್ಕೆ ಸಾಕಾಗುವಷ್ಟು ಹಣ ನನ್ನಲ್ಲಿ ಇದೆಯೋ ಎಂದು ಲೆಕ್ಕಮಾಡುವುದಿಲ್ಲವೇ?
Kui kavatsete torni ehitada, kas ei arvuta te kõigepealt, kui palju see maksma läheb, ega vaata, kas teil on piisavalt raha selle lõpetamiseks?
29 ೨೯ ಹೀಗೆ ಲೆಕ್ಕಮಾಡದೆ ಅದಕ್ಕೆ ಅಸ್ತಿವಾರ ಹಾಕಿದ ಮೇಲೆ ಆ ಕೆಲಸವನ್ನು ಪೂರೈಸಲಾರದೆ ಹೋದರೆ ನೋಡುವವರೆಲ್ಲರು,
Kui te pärast vundamendi rajamist ei suuda seda valmis teha, siis naeraksid kõik, kes teid näevad, ja ütleksid:
30 ೩೦ ‘ಈ ಮನುಷ್ಯನು ಕಟ್ಟಿಸುವುದಕ್ಕಂತೂ ತೊಡಗಿದನು, ಕೆಲಸಪೂರೈಸಲಾರದೆ ಹೋದನು’ ಎಂದು ಅವನನ್ನು ಹಾಸ್ಯಮಾಡಾರು.
„Vaadake teda: ta alustas ehitamist, kuid ei suutnud lõpetada.“
31 ೩೧ ಇಲ್ಲವೆ ಯಾವ ಅರಸನಾದರೂ ಮತ್ತೊಬ್ಬ ಅರಸನ ಸಂಗಡ ಯುದ್ಧಮಾಡುವುದಕ್ಕೆ ಹೋಗುವಾಗ ತನ್ನ ಮೇಲೆ ಇಪ್ಪತ್ತು ಸಾವಿರ ದಂಡು ತೆಗೆದುಕೊಂಡು ಬರುವವನನ್ನು ತಾನು ಹತ್ತು ಸಾವಿರ ದಂಡಿನಿಂದ ಎದುರಿಸುವುದಕ್ಕೆ ಶಕ್ತನಾಗುವೆನೋ ಇಲ್ಲವೋ ಎಂದು ಕುಳಿತುಕೊಂಡು ಆಲೋಚಿಸುವುದಿಲ್ಲವೇ?
Missugune kuningas läheb teise kuningaga sõtta, ilma et istuks enne koos nõuandjatega maha ega arvutaks, kas tema ja ta kümme tuhat meest suudavad võita tema vastu marssivad kakskümmend tuhat?
32 ೩೨ ತಾನು ಶಕ್ತನಲ್ಲದಿದ್ದರೆ ಬರುವ ಅರಸನು ಇನ್ನೂ ದೂರದಲ್ಲಿರುವಾಗಲೇ ರಾಯಭಾರಿಗಳನ್ನು ಕಳುಹಿಸಿ ಸಂಧಾನಕ್ಕೆ ಒಪ್ಪಂದವನ್ನು ಮಾಡಿಕೊಳ್ಳುವನು.
Kui ta ei suuda, saadab ta esindajad rahu paluma siis, kui teine kuningas on veel väga kaugel.
33 ೩೩ ಹಾಗೆಯೇ ನಿಮ್ಮಲ್ಲಿ ಯಾವನೇ ಆಗಲಿ ತನಗಿರುವುದನ್ನೆಲ್ಲಾ ಬಿಟ್ಟುಬಿಡದೆ ಹೋದರೆ ಅವನು ನನ್ನ ಶಿಷ್ಯನಾಗಿರಲಾರನು.
Samamoodi on igaühega teist: kes ei loobu kõigest, ei saa minu jünger olla.
34 ೩೪ “ಉಪ್ಪಂತೂ ಒಳ್ಳೆಯ ಪದಾರ್ಥವೇ. ಉಪ್ಪು ಸಪ್ಪಗಾದರೆ ಅದಕ್ಕೆ ಇನ್ನಾತರಿಂದ ರುಚಿಬರಿಸಲು ಸಾಧ್ಯ?
Sool on hea, aga kui see kaotab oma maitse, kuidas saab selle taas soolaseks muuta?
35 ೩೫ ಅದು ಭೂಮಿಗಾದರೂ ತಿಪ್ಪೆಗಾದರೂ ಉಪಯೋಗಕ್ಕೆ ಬರುವುದಿಲ್ಲ, ಅದನ್ನು ಹೊರಗೆ ಬಿಸಾಡುತ್ತಾರೆ. ಕೇಳುವುದಕ್ಕೆ ಕಿವಿಯುಳ್ಳವನು ಕೇಳಲಿ” ಅಂದನು.
Sellest pole kasu mulla ega väetisena – te viskate selle lihtsalt välja. Kellel kõrvad on, see kuulaku!“