< ಲೂಕನು 16 >
1 ೧ ಯೇಸು ತನ್ನ ಶಿಷ್ಯರಿಗೂ ಹೇಳಿದ್ದೇನಂದರೆ, “ಐಶ್ವರ್ಯವಂತನಾದ ಒಬ್ಬ ಮನುಷ್ಯನಿಗೆ ಒಬ್ಬ ಪಾರುಪಾತ್ಯಗಾರನಿದ್ದನು. ಅವನ ಕುರಿತು ಯಜಮಾನನ ಬಳಿಯಲ್ಲಿ, ಇವನು ನಿನ್ನ ಆಸ್ತಿಯನ್ನು ಹಾಳುಮಾಡುತ್ತಾ ಇದ್ದಾನೆ ಎಂದು ಯಾರೋ ದೂರು ಹೇಳಿರಲಾಗಿ,
E dizia também a seus discípulos: Havia um certo homem rico, o qual tinha um mordomo; e este lhe foi acusado de fazer perder seus bens.
2 ೨ ಯಜಮಾನನು ಅವನನ್ನು ಕರೆದು, ‘ಇದೇನು ನಾನು ನಿನ್ನ ವಿಷಯದಲ್ಲಿ ಕೇಳುವ ಸಂಗತಿ? ನಿನ್ನ ಪಾರುಪಾತ್ಯೆಯ ಲೆಕ್ಕವನ್ನು ಒಪ್ಪಿಸು, ನೀನು ಇನ್ನು ಪಾರುಪಾತ್ಯಗಾರನಾಗಿರುವುದಕ್ಕೆ ಯೋಗ್ಯನಲ್ಲ’ ಎಂದು ಹೇಳಿದನು.
E ele, chamando-o, disse-lhe: Como ouço isto sobre ti? Presta contas de teu trabalho, porque não poderás mais ser [meu] mordomo.
3 ೩ ಹೀಗಿರಲಾಗಿ ಆ ಪಾರುಪಾತ್ಯಗಾರನು, ‘ನಾನೇನು ಮಾಡಲಿ? ನನ್ನ ಯಜಮಾನನು ನನ್ನಿಂದ ಈ ಪಾರುಪಾತ್ಯೆಯ ಕೆಲಸವನ್ನು ತೆಗೆದುಬಿಡುತ್ತಾನಲ್ಲಾ. ಅಗೆಯುವದಕ್ಕೆ ನನಗೆ ಬಲವಿಲ್ಲ, ಭಿಕ್ಷೆ ಬೇಡುವುದಕ್ಕೆ ನನಗೆ ನಾಚಿಕೆಯಾಗುತ್ತದೆ.
E disse o mordomo para si mesmo: O que farei, agora que meu senhor está me tirando o trabalho de mordomo? Cavar eu não posso; mendigar eu tenho vergonha.
4 ೪ ಈ ಪಾರುಪಾತ್ಯೆಯ ಕೆಲಸದಿಂದ ನನ್ನನ್ನು ತೆಗೆದ ಮೇಲೆ ಜನರು ನನ್ನನ್ನು ತಮ್ಮ ಮನೆಗಳೊಳಗೆ ಸೇರಿಸಿಕೊಳ್ಳುವಂತೆ ನಾನು ಏನು ಮಾಡಬೇಕೆಂದು ನನಗೆ ಗೊತ್ತಿದೆ’ ಎಂದು ತನ್ನೊಳಗೆ ಅಂದುಕೊಂಡು,
Eu sei o que farei, para que, quando eu for expulso do meu trabalho de mordomo, me recebam em suas casas.
5 ೫ ತನ್ನ ಯಜಮಾನನ ಸಾಲಗಾರರಲ್ಲಿ ಪ್ರತಿಯೊಬ್ಬನನ್ನೂ ಕರೆದು ಮೊದಲನೆಯವನನ್ನು, ‘ನೀನು ನನ್ನ ಯಜಮಾನನಿಗೆ ಎಷ್ಟು ಕೊಡಬೇಕು?’ ಎಂದು ಕೇಳಲು,
E chamando a si a cada um dos devedores de seu senhor, disse ao primeiro: Quanto deves a meu senhor?
6 ೬ ಅವನು ‘ನೂರು ಬುದ್ದಲಿ ಎಣ್ಣೆ’ ಎಂದಾಗ ಅವನಿಗೆ, ‘ಈ ನಿನ್ನ ಪತ್ರವನ್ನು ತೆಗೆದುಕೊಂಡು ಬೇಗ ಐವತ್ತು ಬುದ್ದಲಿ ಎಂದು ಬರೆ’ ಎಂದು ಹೇಳಿದನು.
E ele disse: Cem medidas de azeite. E disse-lhe: Pega a tua conta, senta, e escreve logo cinquenta.
7 ೭ ಬಳಿಕ ಮತ್ತೊಬ್ಬನನ್ನು, ‘ನೀನು ಎಷ್ಟು ಕೊಡಬೇಕು?’ ಎಂದು ಕೇಳಲು ಅವನು, ‘ನೂರು ಖಂಡುಗ ಗೋದಿ’ ಅಂದಾಗ ಅವನಿಗೆ, ‘ಈ ನಿನ್ನ ಪತ್ರವನ್ನು ತೆಗೆದುಕೊಂಡು ಎಂಭತ್ತು ಖಂಡುಗ ಎಂದು ಬರೆ’ ಎಂದು ಹೇಳಿದನು.
Depois disse a outro: E tu, quanto deves? E ele disse: Cem volumes de trigo. E disse-lhe: Toma tua conta, e escreve oitenta.
8 ೮ ಯಜಮಾನನು ಇದನ್ನು ಕೇಳಿ ಅಪ್ರಾಮಾಣಿಕನಾದ ಆ ಪಾರುಪಾತ್ಯಗಾರನನ್ನು ಕುರಿತು, ಇವನು ಜಾಣತನ ಮಾಡಿದನು ಎಂದು ಹೊಗಳಿದನು. ಏಕೆಂದರೆ ಈ ಲೋಕದ ಜನರು ತಮ್ಮ ವಿಷಯಗಳಲ್ಲಿ ಬೆಳಕಿನ ಜನರಿಗಿಂತಲೂ ಜಾಣರಾಗಿದ್ದಾರೆ. (aiōn )
E aquele senhor elogiou o injusto mordomo, por ter feito prudentemente; porque os filhos deste mundo são mais prudentes do que os filhos da luz com esta geração. (aiōn )
9 ೯ “ಅನ್ಯಾಯದ ಧನದ ಮೂಲಕವಾಗಿ ನಿಮಗೆ ಸ್ನೇಹಿತರನ್ನು ಮಾಡಿಕೊಳ್ಳಿರಿ. ಹೀಗೆ ಮಾಡಿದರೆ ಅದು ನಿಮ್ಮ ಕೈಬಿಟ್ಟುಹೋದಾಗ ಅವರು ನಿಮ್ಮನ್ನು ಶಾಶ್ವತವಾದ ವಾಸಸ್ಥಾನಗಳಲ್ಲಿ ಸೇರಿಸಿಕೊಳ್ಳುವರು ಎಂದು ನಾನು ನಿಮಗೆ ಹೇಳುತ್ತೇನೆ. (aiōnios )
E eu vos digo: fazei amigos para vós com as riquezas da injustiça, para que quando vos faltar, vos recebam nos tabernáculos eternos. (aiōnios )
10 ೧೦ ಸ್ವಲ್ಪವಾದದ್ದರಲ್ಲಿ ನಂಬಿಗಸ್ತನಾದವನು ಬಹಳವಾದದ್ದರಲ್ಲಿಯೂ ನಂಬಿಗಸ್ತನಾಗುವನು. ಸಣ್ಣ ವಿಷಯಗಳಲ್ಲಿ ಅಪ್ರಾಮಾಣಿಕನಾಗಿರುವವನು ಬಹಳವಾದದ್ದರಲ್ಲಿಯೂ ಅಪ್ರಾಮಾಣಿಕನಾಗಿರುವನು.
Quem é fiel no mínimo, também é fiel no muito; e quem é injusto no mínimo, também é injusto no muito.
11 ೧೧ ಹೀಗಿರುವುದರಿಂದ ಅನ್ಯಾಯದ ಧನದ ವಿಷಯದಲ್ಲಿ ನೀವು ನಂಬಿಗಸ್ತರಲ್ಲದವರಾದರೆ ನಿಜವಾದ ಧನವನ್ನು ನಿಮ್ಮ ವಶಕ್ಕೆ ಯಾರು ಒಪ್ಪಿಸಿಕೊಟ್ಟಾರು?
Pois se nas riquezas da injustiça não fostes fiéis, quem vos confiará as verdadeiras [riquezas]?
12 ೧೨ ಮತ್ತೊಬ್ಬನ ಸೊತ್ತಿನ ವಿಷಯದಲ್ಲಿ ನೀವು ನಂಬಿಗಸ್ತರಲ್ಲದವರಾದರೆ ನಿಮ್ಮದನ್ನು ನಿಮಗೆ ಯಾರು ಒಪ್ಪಿಸಿಕೊಟ್ಟಾರು?
E se nas [coisas] dos outros não fostes fiéis, quem vos dará o que é vosso?
13 ೧೩ ಯಾವ ಆಳಾದರೂ ಇಬ್ಬರು ಯಜಮಾನರಿಗೆ ಸೇವೆಮಾಡಲಾರನು, ಅವನು ಒಬ್ಬನನ್ನು ದ್ವೇಷಿಸಿ ಮತ್ತೊಬ್ಬನನ್ನು ಪ್ರೀತಿಸುವನು, ಇಲ್ಲವೆ ಒಬ್ಬನನ್ನು ಹೊಂದಿಕೊಂಡು ಮತ್ತೊಬ್ಬನನ್ನು ತಾತ್ಸಾರಮಾಡುವನು. ನೀವು ದೇವರನ್ನೂ ಧನವನ್ನೂ ಒಟ್ಟಿಗೆ ಸೇವಿಸಲಾರಿರಿ” ಅಂದನು.
Nenhum servo pode servir a dois senhores; porque ou irá odiar a um, e a amar ao outro; ou irá se achegar a um, e desprezar ao outro. Não podeis servir a Deus e às riquezas.
14 ೧೪ ಫರಿಸಾಯರು ಹಣದಾಸೆಯುಳ್ಳವರಾಗಿದ್ದರಿಂದ ಈ ಮಾತುಗಳನ್ನೆಲ್ಲಾ ಕೇಳಿ ಆತನನ್ನು ಹಾಸ್ಯ ಮಾಡಿದರು.
E os fariseus também ouviram todas estas coisas, eles que eram avarentos. E zombaram dele.
15 ೧೫ ಆಗ ಆತನು ಅವರಿಗೆ ಹೇಳಿದ್ದೇನಂದರೆ, “ಮನುಷ್ಯರ ಮುಂದೆ ನೀತಿವಂತರೆಂದು ತೋರಿಸಿಕೊಳ್ಳುವವರು ನೀವು, ಆದರೆ ದೇವರು ನಿಮ್ಮ ಹೃದಯಗಳನ್ನು ಬಲ್ಲವನಾಗಿದ್ದಾನೆ. ಮನುಷ್ಯರ ದೃಷ್ಟಿಯಲ್ಲಿ ಶ್ರೇಷ್ಠವೆನಿಸಿಕೊಳ್ಳುವಂಥದು ದೇವರ ದೃಷ್ಟಿಯಲ್ಲಿ ಅಸಹ್ಯವಾಗಿದೆ.
E disse-lhes: Vós sois os que justificais a vós mesmos diante dos seres humanos; mas Deus conhece vossos corações. Porque o que é excelente para os seres humanos é odiável diante de Deus.
16 ೧೬ “ಧರ್ಮಶಾಸ್ತ್ರವೂ ಪ್ರವಾದನೆಗಳೂ ಯೋಹಾನನ ತನಕವೇ. ಆ ನಂತರದ ದಿನಗಳಿಂದ ದೇವರ ರಾಜ್ಯದ ಸುವಾರ್ತೆಯು ಸಾರಲ್ಪಡುತ್ತಲಿದೆ. ಅದರಲ್ಲಿ ಎಲ್ಲರೂ ಬಲವಂತವಾಗಿ ನುಗ್ಗಲು ಯತ್ನಿಸುತ್ತಿದ್ದಾರೆ.
A Lei e os profetas [foram] até João; desde então, o Reino de Deus é anunciado, todo homem [tenta entrar] nele pela força.
17 ೧೭ ಧರ್ಮಶಾಸ್ತ್ರದೊಳಗಿನ ಒಂದು ಗುಡಸಾದರೂ ಬಿದ್ದು ಹೋಗುವುದಕ್ಕಿಂತಲೂ ಆಕಾಶವೂ ಭೂಮಿಯೂ ಅಳಿದುಹೋಗುವುದು ಸುಲಭ.
E é mais fácil passar o céu e a terra do que cair um traço de alguma letra da Lei.
18 ೧೮ “ತನ್ನ ಹೆಂಡತಿಯನ್ನು ಬಿಟ್ಟು ಬೇರೊಬ್ಬಳನ್ನು ಮದುವೆಮಾಡಿಕೊಳ್ಳುವ ಪ್ರತಿಯೊಬ್ಬನು ವ್ಯಭಿಚಾರ ಮಾಡುವವನಾಗಿದ್ದಾನೆ. ಮತ್ತು ಗಂಡಬಿಟ್ಟವಳನ್ನು ಮದುವೆಮಾಡಿಕೊಳ್ಳುವವನು ವ್ಯಭಿಚಾರ ಮಾಡುವವನಾಗಿದ್ದಾನೆ.
Qualquer que deixa sua mulher, e casa com outra, adultera; e qualquer que se casa com a deixada pelo marido, [também] adultera.
19 ೧೯ “ಐಶ್ವರ್ಯವಂತನಾದ ಒಬ್ಬ ಮನುಷ್ಯನಿದ್ದನು. ಅವನು ಬೆಲೆಬಾಳುವ ನಯವಾದ ನಾರುಮಡಿ ಮುಂತಾದ ವಸ್ತ್ರಗಳನ್ನು ಧರಿಸಿಕೊಂಡು, ಪ್ರತಿದಿನವು ಸುಖಸಂತೋಷಗಳಲ್ಲಿ ಜೀವಿಸುತ್ತಿದ್ದನು.
Havia porém um certo homem rico, e vestia-se de púrpura, e de linho finíssimo, e festejava todo dia com luxo.
20 ೨೦ ಅವನ ಮನೇ ಬಾಗಿಲಿನಲ್ಲಿ ಲಾಜರನೆಂಬ ಒಬ್ಬ ಭಿಕ್ಷುಕನು ಬಿದ್ದುಕೊಂಡಿದ್ದನು. ಇವನು ಮೈತುಂಬಾ ಹುಣ್ಣೆದ್ದವನು.
Havia também um certo mendigo, de nome Lázaro, o qual ficava deitado à sua porta cheio de feridas.
21 ೨೧ ಐಶ್ವರ್ಯವಂತನ ಮೇಜಿನಿಂದ ಬಿದ್ದ ಎಂಜಲನ್ನು ತಿಂದು ಹಸಿವು ತೀರಿಸಿಕೊಳ್ಳಬೇಕೆಂದಿದ್ದನು. ಇಷ್ಟು ಮಾತ್ರವಲ್ಲದೆ ನಾಯಿಗಳು ಸಹ ಬಂದು ಅವನ ಹುಣ್ಣುಗಳನ್ನು ನೆಕ್ಕುತ್ತಿದ್ದವು.
E desejava se satisfazer com as migalhas que caíam da mesa do rico; porém vinham também os cães, e lambiam suas feridas.
22 ೨೨ ಹೀಗಿರುವಲ್ಲಿ ಸ್ವಲ್ಪ ಕಾಲವಾದ ಮೇಲೆ ಆ ಭಿಕ್ಷುಕನು ಸತ್ತನು. ದೇವದೂತರು ಅವನನ್ನು ತೆಗೆದುಕೊಂಡು ಹೋಗಿ ಅಬ್ರಹಾಮನ ಎದೆಗೆ ಒರಗಿಸಿದರು. ಆ ಐಶ್ವರ್ಯವಂತನು ಸಹ ಸತ್ತನು. ಅವನನ್ನು ಹೂಣಿಟ್ಟರು.
E aconteceu que o mendigo morreu, e foi levado pelos anjos para o colo de Abraão. E o rico também morreu, e foi sepultado.
23 ೨೩ ಅವನು ಪಾತಾಳದೊಳಗೆ ಯಾತನೆಪಡುತ್ತಾ ಇರುವಲ್ಲಿ ಕಣ್ಣೆತ್ತಿ ದೂರದಿಂದ ಅಬ್ರಹಾಮನನ್ನೂ ಅವನ ಎದೆಗೆ ಒರಗಿಕೊಂಡಿದ್ದ ಲಾಜರನನ್ನೂ ನೋಡಿ, (Hadēs )
E estando no Xeol em tormentos, ele levantou seus olhos, e viu a Abraão de longe, e a Lázaro junto dele. (Hadēs )
24 ೨೪ ‘ತಂದೆಯೇ, ಅಬ್ರಹಾಮನೇ ನನ್ನ ಮೇಲೆ ಕರುಣೆ ಇಟ್ಟು ಲಾಜರನನ್ನು ಕಳುಹಿಸು ಅವನು ತನ್ನ ತುದಿ ಬೆರಳನ್ನು ನೀರಿನಲ್ಲಿ ಅದ್ದಿ ನನ್ನ ನಾಲಿಗೆಯನ್ನು ತಣ್ಣಗೆ ಮಾಡಲಿ, ಏಕೆಂದರೆ ಈ ಉರಿಯಲ್ಲಿ ಸಂಕಟಪಡುತ್ತಿದ್ದೇನೆ’ ಎಂದು ಕೂಗಿ ಹೇಳಿದನು.
E ele, chamando, disse: Pai Abraão, tem misericórdia de mim, e manda a Lázaro que molhe a ponta de seu dedo na água, e refresque a minha língua; porque estou sofrendo neste fogo.
25 ೨೫ ಆದರೆ ಅಬ್ರಹಾಮನು, ‘ಕಂದಾ, ನೀನು ಆಶಿಸಿದ ಸುಖಸಂಪತ್ತನ್ನು ನಿನ್ನ ಜೀವಮಾನದಲ್ಲಿ ಹೊಂದಿದ್ದಿ. ಹಾಗೆಯೇ ಲಾಜರನು ಕಷ್ಟವನ್ನು ಹೊಂದಿದನು ಎಂಬುದನ್ನು ನೆನಪಿಗೆ ತಂದುಕೋ. ಈಗಲಾದರೋ ಇಲ್ಲಿ ಇವನಿಗೆ ಸಮಾಧಾನ, ಆದರೆ ನಿನಗೆ ಸಂಕಟ.
Porém Abraão disse: Filho, lembra-te que em tua vida recebeste teus bens, e Lázaro do mesmo jeito [recebeu] males. E agora este é consolado, e tu [és] atormentado.
26 ೨೬ ಇದು ಮಾತ್ರವಲ್ಲದೆ ನಮಗೂ ನಿಮಗೂ ನಡುವೆ ದೊಡ್ಡದೊಂದು ಆಳವಾದ ಕಂದಕ ಇದೆ. ಆದಕಾರಣ ಈ ಕಡೆಯಿಂದ ನಿಮ್ಮ ಬಳಿಗೆ ಹೋಗಬೇಕೆಂದಿರುವವರು ಹೋಗಲಾರರು. ಮತ್ತು ಆ ಕಡೆಯಿಂದ ನಮ್ಮ ಬಳಿಗೆ ಯಾರಿಂದಲೂ ಬರಲಿಕ್ಕಾಗದು’ ಅಂದನು.
E, além de tudo isto, um grande abismo está posto entre nós e vós, para os que quisessem passar daqui para vós não possam; nem também os daí passarem para cá.
27 ೨೭ ಆಗ ಅವನು, ‘ಅಪ್ಪಾ, ಹಾಗಾದರೆ ಲಾಜರನನ್ನು ನನ್ನ ತಂದೆಯ ಮನೆಗೆ ಕಳುಹಿಸಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ.
E disse ele: Rogo-te, pois, ó pai, que o mandes à casa de meu pai.
28 ೨೮ ನನಗೆ ಐದು ಮಂದಿ ಅಣ್ಣತಮ್ಮಂದಿರಿದ್ದಾರೆ. ಅವರು ಸಹ ಈ ಯಾತನೆಯ ಸ್ಥಳಕ್ಕೆ ಬಾರದಂತೆ ಅವನು ತಾನು ಕಂಡದ್ದನ್ನು ಅವರಿಗೆ ಚೆನ್ನಾಗಿ ತಿಳಿಸಿ ಹೇಳಲಿ’ ಅಂದನು.
Porque tenho cinco irmãos, para que lhes dê testemunho; para que também não venham para este lugar de tormento.
29 ೨೯ ಅದಕ್ಕೆ ಅಬ್ರಹಾಮನು, ‘ಮೋಶೆಯ ಧರ್ಮಶಾಸ್ತ್ರವೂ ಪ್ರವಾದಿಗಳ ಗ್ರಂಥಗಳೂ ಅವರಲ್ಲಿ ಅವೆ, ಅವುಗಳನ್ನು ಕೇಳಲಿ’ ಅನ್ನಲು,
Disse-lhe Abraão: Eles têm a Moisés e aos profetas, ouçam-lhes.
30 ೩೦ ಅವನು ‘ತಂದೆಯೇ, ಅಬ್ರಹಾಮನೇ ಹಾಗಲ್ಲ. ಸತ್ತವರ ಕಡೆಯಿಂದ ಒಬ್ಬನು ಅವರ ಬಳಿಗೆ ಹೋದರೆ ಅವರು ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವರು’ ಅಂದನು.
E ele disse: Não, pai Abraão; mas se alguém dos mortos fosse até eles, eles se arrependeriam.
31 ೩೧ ಅಬ್ರಹಾಮನು ಅವನಿಗೆ, ‘ಅವರು ಮೋಶೆಯ ಮಾತನ್ನೂ ಪ್ರವಾದಿಗಳ ಮಾತನ್ನೂ ಕೇಳದಿದ್ದರೆ ಸತ್ತುಹೋಗಿದ್ದವನೊಬ್ಬನು ಜೀವಿತನಾಗಿ ಎದ್ದರೂ ಅವರು ಒಪ್ಪುವುದಿಲ್ಲ’ ಎಂದು ಹೇಳಿದನು.”
Porém [Abraão] lhe disse: Se não ouvem a Moisés e aos profetas, também não se deixariam convencer, ainda que alguém ressuscite dos mortos.