< ಲೂಕನು 17 >
1 ೧ ಯೇಸು ತನ್ನ ಶಿಷ್ಯರಿಗೆ, “ಶೋಧನೆಗಳು ಬರುವುದು ಸಹಜ, ಆದರೂ ಅವು ಯಾವನಿಂದ ಬರುತ್ತವೆಯೋ ಅವನ ಗತಿಯನ್ನು ಏನು ಹೇಳಲಿ?
Jisua'n a ruoisingei kôma, inpalna hih omloi thei nimak, ania inpalna min ompu chung chu ântak bah na!
2 ೨ ಅಂಥವನು ಈ ಚಿಕ್ಕವರಲ್ಲಿ ಒಬ್ಬನಿಗೆ ಪಾಪಮಾಡುವುದಕ್ಕೆ ಕಾರಣನಾಗುವುದಕ್ಕಿಂತ ತನ್ನ ಕುತ್ತಿಗೆಗೆ ಬೀಸುವ ಕಲ್ಲನ್ನು ಕಟ್ಟಿಸಿಕೊಂಡು ಸಮುದ್ರದಲ್ಲಿ ಹಾಕಿಸಿಕೊಳ್ಳುವುದೇ ಲೇಸು.
Hi mi chînte ngei lâia inkhatlam minpal chu, a minpalpu ringa han bunôilung minlîn tuikhangliena vôrpai ni senla, ata rangin sa uol a tih.
3 ೩ ನಿಮ್ಮ ವಿಷಯದಲ್ಲಿ ಎಚ್ಚರಿಕೆಯಾಗಿರಿ. ನಿನ್ನ ಸಹೋದರನು ತಪ್ಪುಮಾಡಿದರೆ ಅವನನ್ನು ಗದರಿಸು. ಅವನು ಪಶ್ಚಾತ್ತಾಪಪಟ್ಟರೆ ಅವನ ತಪ್ಪನ್ನು ಕ್ಷಮಿಸಿಬಿಡು.
Singthei roi, na lâibungin nunsie a thôn chu ngo roh, ânsîrin chu ngâidam roh.
4 ೪ ಅವನು ದಿನಕ್ಕೆ ಏಳು ಸಾರಿ ನಿನಗೆ ತಪ್ಪುಮಾಡಿ ಏಳು ಸಾರಿಯೂ ನಿನ್ನ ಕಡೆಗೆ ತಿರುಗಿಕೊಂಡು, ‘ನಾನು ಪಶ್ಚಾತ್ತಾಪಪಡುತ್ತೇನೆ ನನ್ನನ್ನು ಕ್ಷಮಿಸು’ ಎಂದು ಕೇಳಿಕೊಂಡರೆ ಅವನನ್ನು ಕ್ಷಮಿಸು” ಎಂದು ಹೇಳಿದನು.
nu chunga sûnkhatin voi sari saloi a thôn, voi sari kênsîr tiin, no kôm a hongin chu, na ngâidam ngêt rang ani.
5 ೫ ಅಪೊಸ್ತಲರು ಕರ್ತನಿಗೆ, “ನಮ್ಮ ನಂಬಿಕೆಯನ್ನು ಹೆಚ್ಚಿಸು” ಎಂದು ಹೇಳಲು,
Ruoisingei han a kôma, “Pumapa, kin taksônna mi min detpe uol roh,” an tia.
6 ೬ ಕರ್ತನು, “ಸಾಸಿವೇ ಕಾಳಷ್ಟು ನಂಬಿಕೆ ನಿಮಗಿರುವುದಾದರೆ ನೀವು ಈ ಅತ್ತಿಮರಕ್ಕೆ, ‘ನೀನು ಬೇರುಸಹಿತ ಕಿತ್ತುಕೊಂಡುಹೋಗಿ ಸಮುದ್ರದಲ್ಲಿ ನಾಟಿಕೊ’ ಎಂದು ಹೇಳಿದರೂ ಅದು ನಿಮ್ಮ ಮಾತನ್ನು ಕೇಳುವುದು” ಅಂದನು.
Hanchu, Pumapa han, “Ancham ru dôra hih taksônna nin neia anîn chu hi thingtheimu kung hih hong inphôi inla, tuikhangliena hong inphun roh, tîng nin ta nin he rangâi kelen atih,” tiin a thuona.
7 ೭ “ನಿಮ್ಮಲ್ಲಿ ಯಾವನಿಗಾದರೂ ವ್ಯವಸಾಯ ಮಾಡುವ ಅಥವಾ ಕುರಿಮೇಯಿಸುವ ಆಳಿರಲಾಗಿ, ಅವನು ಹೊಲದಿಂದ ಮನೆಗೆ ಬಂದ ಆ ಆಳಿಗೆ, ‘ನೀನು ತಟ್ಟನೆ ಬಂದು ಊಟಕ್ಕೆ ಕುಳಿತುಕೋ’ ಎಂದು ಹೇಳುವನೇ?
“Hanchu, nin lâia tumakhatin, tîrlâm pil tukin mo, belri hôlin mo, nei ungla, chuon a hong tungin, ‘Bukhalâi hong ot kelen roh’ tumo a ti rang nin nia?
8 ೮ ಹಾಗೆ ಹೇಳದೆ, ‘ನೀನು ನನ್ನ ಊಟಕ್ಕೇನಾದರೂ ಸಿದ್ಧಮಾಡು, ನಾನು ಊಟಮಾಡುವ ತನಕ ನಡುಕಟ್ಟಿಕೊಂಡು ನನಗೆ ಸೇವೆಮಾಡು. ಆ ಮೇಲೆ ನೀನು ಊಟಮಾಡು, ಕುಡಿ’ ಎಂದು ಹೇಳುವನಲ್ಲವೇ.
Manêkin, ‘Ku bukhalâi ni do bak inla, rovo tho inla, ka sâk ke nêk suo mâka ni ngâk roh, masuole nêk ni tih,’ tumo a ti loi ranga?
9 ೯ ತನ್ನ ಅಪ್ಪಣೆಯಂತೆ ನಡೆದ ಆ ಆಳಿಗೆ, ನಿನ್ನಿಂದ ಉಪಕಾರವಾಯಿತೆಂದು ಅವನಿಗೆ ಹೇಳುವನೇ? ಇದರಂತೆಯೇ ನಿಮ್ಮ ಸಂಗತಿ.
Suokin chong a jôm sikin tumo râisânchong a ril ngâi?
10 ೧೦ ನೀವು ನಿಮಗೆ ಅಪ್ಪಣೆಯಾಗಿರುವುದನ್ನೆಲ್ಲಾ ಮಾಡಿದ ಮೇಲೆ ‘ನಾವು ಆಳುಗಳು, ಪ್ರಯೋಜನವಿಲ್ಲದವರು, ಮಾಡಬೇಕಾದದ್ದನ್ನೇ ಮಾಡಿದ್ದೇವೆ’ ಅನ್ನಿರಿ” ಎಂದು ಹೇಳಿದನು.
Ma ang tak han, nin sintum nin sin suonûk khomin, tîrlâm papai kêng ei ni, ei sintum ei sin chak kêng nin ti rang ani.”
11 ೧೧ ಯೇಸು ಯೆರೂಸಲೇಮಿಗೆ ಪ್ರಯಾಣಮಾಡುವಾಗ ಸಮಾರ್ಯ, ಗಲಿಲಾಯ ಸೀಮೆಗಳ ನಡುವೆ ಹಾದುಹೋದನು.
Hanchu, Jisua'n Jerusalem a se malamin, Samaria le Galilee kâra ramria a lôna.
12 ೧೨ ಒಂದು ಹಳ್ಳಿಗೆ ಬಂದಾಗ ಹತ್ತುಮಂದಿ ಕುಷ್ಠರೋಗಿಗಳು ಆತನ ಎದುರಿಗೆ ಬಂದು ದೂರದಲ್ಲಿ ನಿಂತು,
Khuo inkhat a lûtin chu miphâr sômin an intongpuia. Lâtaka an indinga,
13 ೧೩ “ಯೇಸುವೇ, ಗುರುವೇ, ನಮ್ಮ ಮೇಲೆ ದಯವಿಡು” ಎಂದು ಕೂಗಿ ಹೇಳಿದರು.
an inieka, “Jisua Minchupu, inrieng mi mu roh!” an tia.
14 ೧೪ ಆತನು ಅವರನ್ನು ನೋಡಿ, “ನೀವು ಹೋಗಿ ಯಾಜಕರಿಗೆ ನಿಮ್ಮ ಮೈ ತೋರಿಸಿಕೊಳ್ಳಿರಿ” ಎಂದು ಹೇಳಿದನು. ಅವರು ಹೋಗುತ್ತಿರುವಾಗಲೇ ಶುದ್ಧರಾದರು.
Jisua'n a mu ngeia an kôma, “Se ungla, ochaingei kôma vân en roi” a tipe ngeia. Lampuia chu an dam zoia.
15 ೧೫ ಅವರಲ್ಲಿ ಒಬ್ಬನು ತನಗೆ ಗುಣವಾದದ್ದನ್ನು ನೋಡಿ, ಮಹಾಶಬ್ದದಿಂದ ದೇವರನ್ನು ಕೊಂಡಾಡುತ್ತಾ ಹಿಂತಿರುಗಿ ಬಂದು,
Inkhatin chu a dam zoi iti a rietin chu, rôl inringtakin, Pathien minpâk pumin a hongkîr nôka.
16 ೧೬ ಯೇಸುವಿನ ಪಾದಗಳಿಗೆ ಅಡ್ಡಬಿದ್ದು, ಆತನಿಗೆ ಕೃತಜ್ಞತಾಸುತ್ತಿಯನ್ನು ಸಲ್ಲಿಸಿದನು. ಅವನು ಸಮಾರ್ಯದವನು.
Jisua ke bula inbokin râisânchong a rila, ha mi hah Samaria mi ani.
17 ೧೭ ಯೇಸು ಇದನ್ನು ನೋಡಿ, “ಹತ್ತು ಮಂದಿ ಶುದ್ಧರಾದರಲ್ಲವೇ. ಮಿಕ್ಕ ಒಂಭತ್ತು ಮಂದಿ ಎಲ್ಲಿ?
Jisua'n, “A damngei hah mi sôm nin nia, adang ikuo ngei hah khonmo an om?
18 ೧೮ ದೇವರನ್ನು ಸ್ತುತಿಸುವುದಕ್ಕೆ ಈ ಅನ್ಯದೇಶದವನೇ ಹೊರತು ಇನ್ನಾರೂ ಹಿಂತಿರುಗಿ ಬರಲಿಲ್ಲವೇ?” ಎಂದು ಹೇಳಿ,
Ithomo hi ramdangmi vai himo Pathien minpâk ranga hongkîr nôk?” a tia.
19 ೧೯ ಅವನಿಗೆ, “ಎದ್ದು ಹೋಗು, ನಿನ್ನ ನಂಬಿಕೆಯು ನಿನ್ನನ್ನು ಸ್ವಸ್ಥಮಾಡಿಯದೆ” ಎಂದು ಹೇಳಿದನು.
Hanchu, a kôma, “Inthoi inla se ta roh, na taksônna hin nang a mindam ani,” a tipea.
20 ೨೦ ದೇವರ ರಾಜ್ಯವು ಯಾವಾಗ ಬರುವುದೆಂದು ಫರಿಸಾಯರು ಆತನನ್ನು ಕೇಳಿದಾಗ ಆತನು ಅವರಿಗೆ, “ದೇವರ ರಾಜ್ಯವು ನೀವು ಗಮನಿಸುತ್ತಾ ಕಾಯುತ್ತಿರುವಾಗ ಪ್ರತ್ಯಕ್ಷವಾಗಿ ಬರುವಂಥದಲ್ಲ.
Pharisee senkhat ngeiin Pathien Rêngram juongtung rang roi an rekela, Jisua'n, “Pathien Rêngram chu mu theiin juongtung no nih.
21 ೨೧ ‘ಇಗೋ ಇಲ್ಲಿ ಇದೆ, ಅಗೋ ಅಲ್ಲಿ ಅದೆ’ ಎಂದು ಹೇಳುವುದಕ್ಕಾಗದು. ದೇವರ ರಾಜ್ಯವು ನಿಮ್ಮಲ್ಲಿಯೇ ಅದೆ ಎಂದು ತಿಳಿದುಕೊಳ್ಳಿರಿ” ಎಂದು ಹೇಳಿದನು.
Tutên ‘En roh,’ hin kêng a om, son kêng a om ti no nih. Pathien Rêngram chu nin lâia kêng a om,” tiin a thuona.
22 ೨೨ ಮತ್ತು ಆತನು ತನ್ನ ಶಿಷ್ಯರಿಗೆ ಹೇಳಿದ್ದೇನಂದರೆ, “ಒಂದು ಕಾಲ ಬರುತ್ತದೆ, ಆ ಕಾಲದಲ್ಲಿ ನೀವು ಮನುಷ್ಯಕುಮಾರನ ದಿನಗಳೊಳಗೆ ಒಂದು ದಿನವನ್ನು ನೋಡಬೇಕೆಂದು ಅಪೇಕ್ಷಿಸಿದರೂ ಅದನ್ನು ನೋಡದೆ ಇರುವಿರಿ.
Hanchu, a ruoisingei kôma, “Miriem Nâipasal ringlâi sûn hi sûnkhat te luo nin mu nuom ni, la om a tih; ania mu khâi no tunui.”
23 ೨೩ ಜನರು ನಿಮಗೆ, ‘ಅಗೋ ಅಲ್ಲಿದ್ದಾನೆ, ಇಗೋ ಇಲ್ಲಿದ್ದಾನೆ’ ಎಂದು ಹೇಳಿದರೆ ನೀವು ಅವರು ಹೇಳುವಲ್ಲಿಗೆ ಹೊರಟುಹೋಗಬೇಡಿರಿ, ಅವರನ್ನು ಹಿಂಬಾಲಿಸಲೂ ಬೇಡಿರಿ.
Mîn nin kôma, “‘En roh sô soh!’ ‘En roh hi hih,’ tîng an tih, ania, a en rangin vase no roi.
24 ೨೪ ಏಕೆಂದರೆ ಮಿಂಚು ಮಿಂಚುತ್ತಾ ಆಕಾಶದಲ್ಲಿ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೆ ಹೇಗೆ ಹೊಳೆಯುವುದೋ ಹಾಗೆಯೇ ಮನುಷ್ಯಕುಮಾರನು ತನ್ನ ದಿನದಲ್ಲಿರುವನು.
Invâna kôl ânleka, kôlkung renga kôlmong dêna ai vâr ngâi anghan, Miriem Nâipasal juong ni lechu, nîng a tih.
25 ೨೫ ಆದರೆ ಮೊದಲು ಆತನು ಬಹು ಕಷ್ಟಗಳನ್ನನುಭವಿಸಿ ಈಗಿನ ಕಾಲದ ಸಂತತಿಯಿಂದ ತಿರಸ್ಕರಿಸಲ್ಪಡಬೇಕು.
Ania, ma mâna han tuong ok a ta, atûnlâi mingei hengpaiin om a tih.”
26 ೨೬ ನೋಹನ ದಿನಗಳಲ್ಲಿ ನಡೆದ ಹಾಗೆಯೇ ಮನುಷ್ಯಕುಮಾರನ ದಿನಗಳಲ್ಲಿಯೂ ನಡೆಯುವುದು.
Noah zora lâia anghan Miriem Nâipasal zora khom nîng a tih.
27 ೨೭ ನೋಹನು ನಾವೆಯಲ್ಲಿ ಸೇರಿದ ದಿನದ ತನಕ ಜನರು ಊಟಮಾಡುತ್ತಿದ್ದರು, ಕುಡಿಯುತ್ತಿದ್ದರು, ಮದುವೆಮಾಡಿಕೊಳ್ಳುತ್ತಿದ್ದರು, ಮದುವೆಮಾಡಿಕೊಡುತ್ತಿದ್ದರು. ಆಗ ಜಲಪ್ರಳಯವು ಬಂದು ಎಲ್ಲರನ್ನು ನಾಶಮಾಡಿತು.
Noah, rukuonga a lûta, tuilienin a that riei mâka chu mitinin an sâkin an nêka, nupang pasal omsiet an tho ngâi.
28 ೨೮ ಮತ್ತು ಲೋಟನ ದಿನಗಳಲ್ಲಿ ನಡೆದ ಪ್ರಕಾರ ನಡೆಯುವುದು. ಅವರು ಊಟಮಾಡುತ್ತಿದ್ದರು, ಕುಡಿಯುತ್ತಿದ್ದರು, ಕೊಂಡುಕೊಳ್ಳುತ್ತಿದ್ದರು, ಮಾರಾಟಮಾಡುತ್ತಿದ್ದರು, ನೆಡುತ್ತಿದ್ದರು ಮತ್ತು ಕಟ್ಟುತ್ತಿದ್ದರು.
Lot zora anghan mi tinin an sâkin an nêkin, an rochôka, an juora, an linga, in an sin ngâia.
29 ೨೯ ಆದರೆ ಲೋಟನು ಸೊದೋಮ್ ಊರನ್ನು ಬಿಟ್ಟುಹೋದ ದಿನದಲ್ಲಿ, ಆಕಾಶದಿಂದ ಬೆಂಕಿ ಗಂಧಕಗಳು ಸುರಿದು ಅವರೆಲ್ಲರನ್ನು ನಾಶಮಾಡಿದವು.
Lot'n Sodom a mâk nin chu mei leh kât invân renga a juonga, a that riei ani.
30 ೩೦ ಮನುಷ್ಯಕುಮಾರನು ಪ್ರತ್ಯಕ್ಷವಾಗುವ ದಿನದಲ್ಲಿ ಅದೇ ರೀತಿಯಾಗಿ ಇರುವುದು.
Ma anghan, Miriem Nâipasal juong inlâr nîn chu juong om a tih.
31 ೩೧ ಆ ದಿನದಲ್ಲಿ ಮಾಳಿಗೆಯ ಮೇಲೆ ಇರುವವನು ಮನೆಯೊಳಗಿರುವ ತನ್ನ ವಸ್ತುಗಳನ್ನು ತೆಗೆದುಕೊಳ್ಳುವುದಕ್ಕೆ ಇಳಿದು ಬರಬಾರದು. ಅದೇ ಪ್ರಕಾರ ಹೊಲದಲ್ಲಿರುವವನು ಸಹ ತಿರುಗಿ ಹಿಂದಕ್ಕೆ ಹೋಗಬಾರದು.
Ha nîn chu inchunga ompûn, a neinun lâk rangin chum no rese. Ha angdênin, loia om khomin a ina hongkîr no rese.
32 ೩೨ ಲೋಟನ ಹೆಂಡತಿಯನ್ನು ನೆನಪಿಗೆ ತಂದುಕೊಳ್ಳಿರಿ.
Lot lômnu riettit ngâi roi.
33 ೩೩ ತನ್ನ ಪ್ರಾಣವನ್ನು ಉಳಿಸಿಕೊಳ್ಳಬೇಕೆಂದಿರುವವನು ಅದನ್ನು ಕಳೆದುಕೊಳ್ಳುವನು, ಪ್ರಾಣವನ್ನು ಕಳೆದುಕೊಂಡವನು ಅದನ್ನು ರಕ್ಷಿಸಿಕೊಳ್ಳುವನು.
Tutu a ringna mojôk rang bôk kaiin machân an ta, a machân kaiin jôk an tih.
34 ೩೪ ಆ ರಾತ್ರಿಯಲ್ಲಿ ಇಬ್ಬರು ಒಂದೇ ಹಾಸಿಗೆಯಲ್ಲಿ ಇರುವರು. ಒಬ್ಬನು ತೆಗೆದುಕೊಳ್ಳಲ್ಪಡುವನು, ಮತ್ತೊಬ್ಬನು ಕೈ ಬಿಡಲ್ಪಡುವನು.
Nangni ki ril, ha ni jânin chu, jâlmun khata mi inik jâl an ta, inkhat tuong nîng a ta, inkhat mâk nîng a tih.
35 ೩೫ ಇಬ್ಬರು ಹೆಂಗಸರು ಒಂದೇ ಕಲ್ಲಲ್ಲಿ ಬೀಸುತ್ತಿರುವರು. ಒಬ್ಬಳು ತೆಗೆದುಕೊಳ್ಳಲ್ಪಡುವಳು, ಮತ್ತೊಬ್ಬಳು ಬಿಡಲ್ಪಡುವಳು.”
Nupang inikin sângsuk an ta, inkhat tuong nîng a ta, inkhat mâk nîng a tih.
36 ೩೬ “ಹೊಲದಲ್ಲಿ ಇಬ್ಬರಿರುವರು; ಒಬ್ಬನು ತೆಗೆದುಕೊಳ್ಳಲ್ಪಡುವನು, ಮತ್ತೊಬ್ಬನು ಬಿಡಲ್ಪಡುವನು” ಅಂದನು.
Loia mi inik om an ta, inkhat tuong nîng a ta, inkhat mâk nîng a tih, a tia.
37 ೩೭ ಈ ಮಾತಿಗೆ ಶಿಷ್ಯರು, “ಕರ್ತನೇ, ಅದು ಎಲ್ಲಿ ಆಗುವುದು?” ಎಂದು ಕೇಳಲು ಆತನು ಅವರಿಗೆ, “ಹೆಣ ಎಲ್ಲಿಯೋ ಅಲ್ಲಿಯೇ ರಣಹದ್ದುಗಳು ಬಂದು ಸೇರುವವು” ಎಂದು ಉತ್ತರಕೊಟ್ಟನು.
Hanchu, ruoisingeiin, “Pumapa khotieng mo?” an tia. Jisua'n, “Ithi ruok omna kipa sêlkurungei intûp an tih,” a tia.