< ಲೂಕನು 20 >

1 ಆ ದಿನಗಳಲ್ಲಿ ಒಂದು ದಿನ ಆತನು ದೇವಾಲಯದಲ್ಲಿ ಜನರಿಗೆ ಉಪದೇಶಮಾಡುತ್ತಾ ಸುವಾರ್ತೆಯನ್ನು ಸಾರುತ್ತಿರಲಾಗಿ ಮುಖ್ಯಯಾಜಕರೂ ಶಾಸ್ತ್ರಿಗಳೂ ಸಭೆಯ ಹಿರಿಯರನ್ನು ಕೂಡಿಸಿಕೊಂಡು ಫಕ್ಕನೆ ಬಂದು,
And on one of those days as He was teaching the people in the temple and preaching the gospel, the chief priests and the scribes and elders came upon Him, saying,
2 “ನೀನು ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತೀ? ಈ ಅಧಿಕಾರವನ್ನು ನಿನಗೆ ಕೊಟ್ಟವರು ಯಾರು? ನಮಗೆ ಹೇಳು” ಎಂದು ಆತನನ್ನು ಕೇಳಲು,
Tell us by what authority thou dost these things? or who it is that gave thee this authority?
3 ಯೇಸು ಅವರಿಗೆ, “ನಾನು ಸಹ ನಿಮ್ಮನ್ನು ಒಂದು ಮಾತು ಕೇಳುತ್ತೇನೆ, ನನಗೆ ಹೇಳಿರಿ.
And He answered and said unto them, I will also ask you one question, tell me,
4 ದೀಕ್ಷಾಸ್ನಾನ ಮಾಡಿಸುವ ಅಧಿಕಾರವು ಯೋಹಾನನಿಗೆ ಪರಲೋಕದಿಂದ ಬಂದಿತೋ ಅಥವಾ ಮನುಷ್ಯರಿಂದ ಬಂದಿತೋ?” ಎಂದು ಅವರನ್ನು ಕೇಳಿದನು.
Was the baptism of John from heaven or from men?
5 ಆಗ ಅವರು, “‘ಪರಲೋಕದಿಂದ ಬಂದಿತೆಂದು ನಾವು ಹೇಳಿದರೆ ಮತ್ತೆ ನೀವು ಅವನನ್ನು ಯಾಕೆ ನಂಬಲಿಲ್ಲ ಅಂದಾನು,
And they reasoned among themselves, saying, If we say, From heaven, He will say, Why then did ye not believe him?
6 ಮನುಷ್ಯರಿಂದ ಬಂದಿತೆಂದು ಹೇಳಿದರೆ ಜನರೆಲ್ಲರೂ ಯೋಹಾನನನ್ನು ಪ್ರವಾದಿಯೆಂದು ನಂಬಿರುವುದರಿಂದ ಅವರು ನಮ್ಮನ್ನು ಕಲ್ಲೆಸೆದು ಕೊಂದಾರು’” ಎಂದು ತಮ್ಮ ತಮ್ಮೊಳಗೆ ಮಾತನಾಡಿಕೊಂಡು,
but if we say, Of men, the people will all stone us: for they are persuaded that John was a prophet.
7 ಅದು ಎಲ್ಲಿಂದ ಬಂದಿತೋ ನಾವರಿಯೆವು ಎಂದು ಉತ್ತರಕೊಟ್ಟರು.
And they answered, they did not know whence it was.
8 ಆಗ ಯೇಸು ಅವರಿಗೆ, “ಇದನ್ನೆಲ್ಲಾ ಯಾವ ಅಧಿಕಾರದಿಂದ ಮಾಡುತ್ತೇನೋ ಅದನ್ನು ನಾನೂ ನಿಮಗೆ ಹೇಳುವುದಿಲ್ಲ” ಎಂದು ಹೇಳಿದನು.
And Jesus said unto them, Neither will I tell you by what authority I do these things.
9 ಆಗ ಆತನು ಜನರಿಗೆ ಒಂದು ಸಾಮ್ಯವನ್ನು ಹೇಳುವುದಕ್ಕೆ ತೊಡಗಿದನು. ಅದೇನೆಂದರೆ, “ಒಬ್ಬ ಮನುಷ್ಯನು ಒಂದು ದ್ರಾಕ್ಷಿಯ ತೋಟವನ್ನು ಮಾಡಿ, ಆದನ್ನು ಒಕ್ಕಲಿಗರಿಗೆ ಗುತ್ತಿಗೆಗೆ ಕೊಟ್ಟು, ಬೇರೊಂದು ದೇಶಕ್ಕೆ ಹೋಗಿ ಅಲ್ಲಿ ಬಹುಕಾಲ ಇದ್ದನು.
Then He began to speak unto the people this parable, A certain man planted a vineyard, and let it out to husbandmen and travelled abroad for a considerable time,
10 ೧೦ ಫಲಕಾಲ ಬಂದಾಗ ದ್ರಾಕ್ಷಿಯ ತೋಟದ ಪಾಲನ್ನು ತೆಗೆದುಕೊಳ್ಳುವುದಕ್ಕಾಗಿ ಒಬ್ಬ ಆಳನ್ನು ಒಕ್ಕಲಿಗರ ಬಳಿಗೆ ಕಳುಹಿಸಿದನು. ಆದರೆ ಆ ಒಕ್ಕಲಿಗರು ಅವನನ್ನು ಹೊಡೆದು ಬರಿಗೈಯಲ್ಲಿ ಕಳುಹಿಸಿಬಿಟ್ಟರು.
and at the fruit-season he sent a servant to the husbandmen that they should give him of the fruit of the vineyard; but the husbandmen beat him and sent him away empty.
11 ೧೧ ಆ ಧಣಿಯು ಬೇರೊಬ್ಬ ಆಳನ್ನು ಕಳುಹಿಸಲಾಗಿ ಅವರು ಅವನನ್ನೂ ಹೊಡೆದು ಅವಮಾನಪಡಿಸಿ ಬರಿಗೈಯಲ್ಲಿ ಕಳುಹಿಸಿಬಿಟ್ಟರು.
And he sent another servant; and they beat him also and abused him, and sent him away empty.
12 ೧೨ ಆ ಮೇಲೆ ಮೂರನೆಯವನನ್ನು ಕಳುಹಿಸಲು ಅವರು ಅವನನ್ನೂ ಗಾಯಗೊಳಿಸಿ ಹೊರಕ್ಕೆ ಅಟ್ಟಿದರು.
And he sent a third; and they wounded him also and drove him out.
13 ೧೩ ಆಗ ಆ ದ್ರಾಕ್ಷಿಯ ತೋಟದ ಧಣಿಯು, ‘ನಾನೇನು ಮಾಡಲಿ? ನನ್ನ ಮುದ್ದುಮಗನನ್ನು ಕಳುಹಿಸುತ್ತೇನೆ, ಒಂದು ವೇಳೆ ಅವನಿಗಾದರೂ ಮರ್ಯಾದೆ ತೋರಿಸಾರು’ ಅಂದುಕೊಂಡನು.
Then said the lord of the vineyard, What shall I do? I will send my beloved son: perhaps when they see Him they will reverence Him.
14 ೧೪ ಆದರೆ ಆ ಒಕ್ಕಲಿಗರು ದ್ರಾಕ್ಷಿಯ ತೋಟದ ಯಜಮಾನನ ಮಗನನ್ನು ಕಂಡು, ‘ಇವನೇ ಬಾಧ್ಯಸ್ಥನು; ಇವನನ್ನು ಕೊಂದು ಹಾಕೋಣ, ಇವನ ಪಿತ್ರಾರ್ಜಿತವೆಲ್ಲಾ ನಮ್ಮದಾಗುವುದು’ ಎಂದು ಒಬ್ಬರ ಸಂಗಡಲೊಬ್ಬರು ಮಾತನಾಡಿಕೊಂಡು,
But when the husbandmen saw Him, they reasoned among themselves, saying, This is the heir, come, let us kill him, that the inheritance may be ours.
15 ೧೫ ಅವನನ್ನು ದ್ರಾಕ್ಷಿಯ ತೋಟದಿಂದ ಹೊರಕ್ಕೆ ದೊಬ್ಬಿ, ಕೊಂದು ಹಾಕಿದರು. ಹಾಗಾದರೆ ದ್ರಾಕ್ಷಿಯ ತೋಟದ ಧಣಿಯು ಅವರಿಗೆ ಏನು ಮಾಡಿಯಾನು?
So they cast him out of the vineyard and killed him. What therefore will the lord of the vineyard do unto them?
16 ೧೬ ಅವನು ಬಂದು ಆ ಒಕ್ಕಲಿಗರನ್ನು ಸಂಹರಿಸಿ ತನ್ನ ತೋಟವನ್ನು ಬೇರೆ ಜನರಿಗೆ ಮಾಡುವುದಕ್ಕೆ ಕೊಡುವನು” ಅಂದನು. ಇದನ್ನು ಜನರು ಕೇಳಿ, “ಹಾಗಾಗಬಾರದು” ಅಂದರು.
He will come and destroy these husbandmen, and will give the vineyard to others. And when they heard this they said, God forbid.
17 ೧೭ ಆದರೆ ಯೇಸು ಅವರನ್ನು ದೃಷ್ಟಿಸಿ ನೋಡಿ, ಹಾಗಾದರೆ “‘ಮನೆ ಕಟ್ಟುವವರು ಬೇಡವೆಂದು ತಿರಸ್ಕರಿಸಲ್ಪಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು’ ಎಂದು ಬರೆದಿರುವ ಮಾತೇನು?
And He looked upon them and said, What then is this, which is written, The stone which the builders refused, is become the head of the corner?
18 ೧೮ “ಈ ಕಲ್ಲಿನ ಮೇಲೆ ಬೀಳುವ ಪ್ರತಿಯೊಬ್ಬನು ತುಂಡುತುಂಡಾಗುವನು. ಆ ಕಲ್ಲು ಯಾರ ಮೇಲೆ ಬೀಳುವುದೋ ಅದು ಅವನನ್ನು ಪುಡಿಪುಡಿ ಮಾಡುವುದು” ಅಂದನು.
Whosoever falleth on that stone shall be bruised; but on whomsoever it falleth, it will crush him to pieces.
19 ೧೯ ಶಾಸ್ತ್ರಿಗಳೂ ಮುಖ್ಯಯಾಜಕರೂ ಈ ಮಾತುಗಳನ್ನು ಕೇಳಿ ತಮ್ಮನ್ನೇ ಕುರಿತು ಈ ಸಾಮ್ಯವನ್ನು ಹೇಳಿದನು ಎಂದು ತಿಳಿದುಕೊಂಡು ಅದೇ ಗಳಿಗೆಯಲ್ಲಿ ಆತನನ್ನು ಹಿಡಿಯುವುದಕ್ಕೆ ಸಂದರ್ಭನೋಡಿದರು. ಆದರೆ ಜನರಿಗೆ ಭಯಪಟ್ಟರು.
And the chief priests and the scribes would have laid hands on Him at that very time, but were afraid of the people: for they perceived that He had spoken this parable against them.
20 ೨೦ ಆಮೇಲೆ ಅವರು ಯೇಸುವನ್ನು ಅಧಿಪತಿಯ ವಶಕ್ಕೂ ಅಧಿಕಾರಿಗಳಿಗೂ ಒಪ್ಪಿಸಬೇಕೆಂದು ಹೊಂಚು ಹಾಕುತ್ತಾ, ನೀತಿವಂತರಂತೆ ನಟಿಸುತ್ತಿರುವ ಗೂಢಚಾರರನ್ನು ಆತನ ಮಾತಿನಲ್ಲಿ ಏನನ್ನಾದರೂ ತಪ್ಪುಗಳನ್ನು ಕಂಡುಹಿಡಿಯುವುದಕ್ಕೆ (ಆತನ ಬಳಿಗೆ) ಕಳುಹಿಸಿದರು.
And they watched Him and sent out spies, pretending to be righteous men, to lay hold of his words, that they might deliver Him up to the power and authority of the governor.
21 ೨೧ ಗೂಢಚಾರರು, “ಬೋಧಕನೇ, ನೀನು ಸರಿಯಾಗಿ ಮಾತನಾಡುತ್ತಾ ಉಪದೇಶಮಾಡುತ್ತೀ, ನೀನು ಮುಖದಾಕ್ಷಿಣ್ಯವಿಲ್ಲದೆ ದೇವರ ಮಾರ್ಗವನ್ನು ಸತ್ಯವಾಗಿ ಬೋಧಿಸುವವನಾಗಿದ್ದೀ ಎಂದು ಬಲ್ಲೆವು.
And they asked Him, saying, Master, we know that thou speakest and teachest rightly, and acceptest not the person of any, but teachest the way of God in truth:
22 ೨೨ ಕೈಸರನಿಗೆ ಕಂದಾಯ ಕೊಡುವುದು ಸರಿಯೋ ಸರಿಯಲ್ಲವೋ?” ಎಂದು ಆತನನ್ನು ಕೇಳಿದರು.
is it lawful for us to give tribute to Cesar, or not?
23 ೨೩ ಯೇಸು ಅವರ ಕುಯುಕ್ತಿಯನ್ನು ಅರಿತುಕೊಂಡು,
But He perceived their craftiness, and said unto them, Why do ye tempt me?
24 ೨೪ ಅವರಿಗೆ, “ನನಗೆ ಒಂದು ಬೆಳ್ಳಿನಾಣ್ಯವನ್ನು ತೋರಿಸಿರಿ. ಇದರಲ್ಲಿ ಯಾರ ತಲೆ ಹಾಗು ಮುದ್ರೆಯದೆ?” ಎಂದು ಕೇಳಿದ್ದಕ್ಕೆ ಅವರು, “ಕೈಸರನದು” ಅಂದರು.
Shew me a penny: whose image and inscription hath it? and they answered, Cesar's.
25 ೨೫ ಆತನು ಅವರಿಗೆ, “ಹಾಗಾದರೆ ಕೈಸರನದನ್ನು ಕೈಸರನಿಗೆ ಕೊಡಿರಿ, ದೇವರದನ್ನು ದೇವರಿಗೆ ಕೊಡಿರಿ” ಎಂದು ಹೇಳಿದನು.
Then said He unto them, Render therefore unto Cesar the things that are Cesar's, and to God the things that are God's.
26 ೨೬ ಯೇಸು ಜನರ ಮುಂದೆ ಹೇಳಿದ ಮಾತಿನಲ್ಲಿ ಅವರು ಯಾವ ತಪ್ಪನ್ನೂ ಹಿಡಿಯಲಾಗದೆ, ಆತನು ಕೊಟ್ಟ ಉತ್ತರಕ್ಕೆ ಆಶ್ಚರ್ಯಪಟ್ಟು ಸುಮ್ಮನಾದರು.
And they could not take hold of his word before the people: and they marvelled at his answer and said no more.
27 ೨೭ ತರುವಾಯ ಪುನರುತ್ಥಾನವಿಲ್ಲವೆಂದು ಹೇಳುವವರಾದ ಸದ್ದುಕಾಯರಲ್ಲಿ ಕೆಲವರು ಬಂದು ಆತನಿಗೆ ಪ್ರಶ್ನೆಮಾಡಿದ್ದೇನಂದರೆ,
And some of the Sadducees (who deny a resurrection) came to Him and asked Him,
28 ೨೮ “ಬೋಧಕನೇ, ಅಣ್ಣನಾದವನು ಹೆಂಡತಿಯುಳ್ಳವನಾಗಿದ್ದು ಮಕ್ಕಳಿಲ್ಲದೆ ಸತ್ತರೆ ಅವನ ತಮ್ಮನು ಆಕೆಯನ್ನು ಮದುವೆಮಾಡಿಕೊಂಡು ತನ್ನ ಅಣ್ಣನಿಗೆ ಸಂತಾನವನ್ನು ಪಡೆಯಬೇಕೆಂದು ಮೋಶೆಯು ನಮಗೆ ಬರೆದಿಟ್ಟನಷ್ಟೆ.
saying, Moses enjoined us, if any man's brother die, having a wife, and he die childless, that his brother should take his wife, and raise up seed to his brother.
29 ೨೯ ಒಳ್ಳೆಯದು, ಏಳು ಮಂದಿ ಅಣ್ಣತಮ್ಮಂದಿರಿದ್ದರು. ಮೊದಲನೆಯವನು ಮದುವೆಯಾಗಿ ಮಕ್ಕಳಿಲ್ಲದೆ ಸತ್ತನು.
Now there were seven brethren: and the first took a wife, and died childless; and the second took the wife, and he died childless;
30 ೩೦ ಎರಡನೆಯವನೂ ಅವನ ತರುವಾಯ ಮೂರನೆಯವನೂ ಆಕೆಯನ್ನು ಮದುವೆಮಾಡಿಕೊಂಡರು. ಇದೇ ರೀತಿಯಾಗಿ ಏಳು ಮಂದಿಯೂ ಮದುವೆಯಾಗಿ ಮಕ್ಕಳಿಲ್ಲದೆ ಸತ್ತರು.
and the third took her;
31 ೩೧
and in like manner all the seven.
32 ೩೨ ಕಡೆಯಲ್ಲಿ ಆ ಹೆಂಗಸೂ ಸತ್ತಳು.
And they died and left no children. Last of all the woman also died.
33 ೩೩ ಹಾಗಾದರೆ ಪುನರುತ್ಥಾನದಲ್ಲಿ ಆ ಸ್ತ್ರೀಯು ಅವರೊಳಗೆ ಯಾರ ಹೆಂಡತಿಯಾಗಿರುವಳು? ಆಕೆಯನ್ನು ಏಳು ಮಂದಿಯೂ ಮದುವೆ ಮಾಡಿಕೊಂಡಿದ್ದರಲ್ಲಾ” ಅಂದರು.
Therefore at the resurrection whose wife is she? for all the seven had her to wife.
34 ೩೪ ಯೇಸು ಅವರಿಗೆ, “ಈ ಲೋಕದ ಜನರು ಮದುವೆಮಾಡಿಕೊಳ್ಳುತ್ತಾರೆ ಹಾಗೂ ಮದುವೆಮಾಡಿಕೊಡುತ್ತಾರೆ. (aiōn g165)
And Jesus answering said unto them, The children of this world marry and are given in marriage. (aiōn g165)
35 ೩೫ ಆದರೆ ಮುಂಬರುವ ಲೋಕವನ್ನೂ, ಸತ್ತವರೊಳಗಿಂದ ಪುನರುತ್ಥಾನವನ್ನೂ ಪಡೆಯುವುದಕ್ಕೆ ಯೋಗ್ಯರೆನಿಸಿಕೊಂಡಿರುವವರು ಮದುವೆಮಾಡಿಕೊಳ್ಳುವುದೂ ಇಲ್ಲ, ಮಾಡಿಕೊಡುವುದೂ ಇಲ್ಲ. (aiōn g165)
But they who are counted worthy to obtain that world, and the resurrection from the dead, neither marry, nor are given in marriage: (aiōn g165)
36 ೩೬ ಅವರು ಇನ್ನು ಮರಣಕ್ಕೆ ಗುರಿಯಾಗುವುದೇ ಇಲ್ಲ. ಏಕೆಂದರೆ ಅವರು ದೇವದೂತರಿಗೆ ಸರಿಸಮಾನರೂ, ಪುನರುತ್ಥಾನವನ್ನು ಹೊಂದಿದವರಾಗಿವುದ್ದರಿಂದ ಅವರು ದೇವರ ಮಕ್ಕಳೂ ಆಗಿರುತ್ತಾರೆ.
for they can die no more, being like the angels: and they are the children of God as being the children of the resurrection.
37 ೩೭ ಸತ್ತವರು ಬದುಕಿ ಏಳುತ್ತಾರೆಂಬುದನ್ನು ಮೋಶೆಯೂ ಸೂಚಿಸಿದ್ದಾನೆ. ಅವನು ಪೊದೆಯ ಸಂಗತಿಯಿರುವ ಅಧ್ಯಾಯದಲ್ಲಿಕರ್ತನನ್ನು ‘ಅಬ್ರಹಾಮನ ದೇವರು ಇಸಾಕನ ದೇವರು ಯಾಕೋಬನ ದೇವರು’ ಎಂದು ಹೇಳಿದ್ದಾನೆ.
Now that the dead are raised, even Moses shewed at the bush; for he calleth the Lord, the God of Abraham, and the God of Isaac, and the God of Jacob.
38 ೩೮ ದೇವರು ಜೀವಿತರಿಗೆ ದೇವರಾಗಿದ್ದಾನೆ ಹೊರತು ಜೀವವಿಲ್ಲದವರಿಗೆ ಅಲ್ಲ. ಆತನಿಗೆ ಎಲ್ಲರೂ ಜೀವಿಸುವವರೇ” ಎಂದು ಹೇಳಿದನು.
And He is not the God of the dead, but of the living; for to Him they are all living.
39 ೩೯ ಶಾಸ್ತ್ರಿಗಳಲ್ಲಿ ಕೆಲವರು, “ಬೋಧಕನೇ, ಚೆನ್ನಾಗಿ ಹೇಳಿದಿ” ಅಂದರು.
And some of the scribes replied, Master, thou hast indeed said right.
40 ೪೦ ಆತನನ್ನು ಇನ್ನೇನು ಕೇಳುವುದಕ್ಕೂ ಅವರಿಗೆ ಧೈರ್ಯವಿಲ್ಲದೆ ಹೋಯಿತು.
And they dared not any more to ask Him any such question.
41 ೪೧ ಆಗ ಯೇಸು, “ಬರಬೇಕಾದ ಕ್ರಿಸ್ತನು ದಾವೀದನ ಮಗನೆಂದು ಹೇಳುತ್ತಾರಲ್ಲಾ, ಅದು ಹೇಗಾದೀತು?
And He said unto them, How do they say, that Christ is the son of David?
42 ೪೨ “‘ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದಗಳಿಗೆ ಪೀಠವನ್ನಾಗಿ ಮಾಡುವ ತನಕ ನೀನು ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು ಎಂದು ಕರ್ತನು ನನ್ನ ಒಡೆಯನಿಗೆ ನುಡಿದನು’ ಎಂಬುದಾಗಿ ಕೀರ್ತನೆಗಳ ಗ್ರಂಥದಲ್ಲಿ ದಾವೀದನೇ ಹೇಳುತ್ತಾನಲ್ಲಾ.
when David himself saith in the book of Psalms, "The Lord said unto my Lord,
43 ೪೩
Sit thou on my right hand, till I make thine enemies thy footstool."
44 ೪೪ “ದಾವೀದನು ಆತನನ್ನು ‘ಒಡೆಯನೆಂದು’ ಹೇಳಿದ ಮೇಲೆ ಆತನು ಅವನಿಗೆ ಮಗನಾಗುವುದು ಹೇಗೆ?” ಎಂದು ಅವರನ್ನು ಕೇಳಿದನು.
David therefore calleth Him Lord, and how is He then his son?
45 ೪೫ ಜನರೆಲ್ಲರು ಕೇಳುತ್ತಿರುವಲ್ಲಿ ಆತನು ತನ್ನ ಶಿಷ್ಯರಿಗೆ ಹೇಳಿದ್ದೇನಂದರೆ,
And He said to his disciples, in the audience of all the people,
46 ೪೬ “ಶಾಸ್ತ್ರಿಗಳ ವಿಷಯದಲ್ಲಿ ಎಚ್ಚರಿಕೆಯಾಗಿರಿ. ಅವರು ನಿಲುವಂಗಿಗಳನ್ನು ತೊಟ್ಟುಕೊಂಡು ತಿರುಗಾಡುವುದರಲ್ಲಿ ಮನಸ್ಸುಳ್ಳವರೂ, ಅಂಗಡಿಬೀದಿಗಳಲ್ಲಿ ನಮಸ್ಕಾರಗಳು, ಸಭಾಮಂದಿರಗಳಲ್ಲಿ ಮುಖ್ಯ ಪೀಠಗಳು, ಔತಣಕೂಟಗಳಲ್ಲಿ ಪ್ರಥಮಸ್ಥಾನ, ಇವುಗಳನ್ನು ಬಯಸುವವರೂ ಆಗಿದ್ದಾರೆ.
Beware of the scribes, who affect to walk in long robes, and love salutations in public places, and the chief seats in the Synagogues, and uppermost places at feasts;
47 ೪೭ ಅವರು ವಿಧವೆಯರ ಮನೆಗಳನ್ನು ನುಂಗಿ, ನಟನೆಗಾಗಿ ದೇವರಿಗೆ ಉದ್ದವಾದ ಪ್ರಾರ್ಥನೆಗಳನ್ನು ಮಾಡುತ್ತಾರೆ. ಇಂಥವರು ಹೆಚ್ಚಾದ ದಂಡನೆಯನ್ನು ಹೊಂದುವರು” ಅಂದನು.
who devour widows houses, and for a shew of religion make long prayers: these shall receive a heavier sentence.

< ಲೂಕನು 20 >