< ಲೂಕನು 23 >

1 ಅಲ್ಲಿ ಕೂಡಿದ್ದವರೆಲ್ಲರೂ ಎದ್ದು ಆತನನ್ನು ಪಿಲಾತನ ಬಳಿಗೆ ಕರೆದುಕೊಂಡು ಹೋಗಿ,
Усе зібрання піднялося, і повели Його до Пилата.
2 “ಇವನು ತಾನೇ ಕ್ರಿಸ್ತನು, ಅರಸನಾಗಿದ್ದೇನೆಂದು ಹೇಳುತ್ತಾ, ಕೈಸರನಿಗೆ ಸುಂಕ ಕೊಡಬಾರದೆಂದು ಬೋಧಿಸುತ್ತಾ, ನಮ್ಮ ದೇಶದವರ ಮನಸ್ಸು ಕೆಡಿಸುವುದನ್ನು ನಾವು ಕಂಡಿದ್ದೇವೆ” ಎಂಬುದಾಗಿ ಆತನ ಮೇಲೆ ದೂರು ಹೇಳುವುದಕ್ಕೆ ತೊಡಗಿದರು.
Там почали звинувачувати Його: ―Ми встановили, що Він вводить народ в оману, забороняє сплачувати Кесареві податок і називає Себе Христом, Царем.
3 ಪಿಲಾತನು ಯೇಸುವನ್ನು “ನೀನು ಯೆಹೂದ್ಯರ ಅರಸನೋ” ಎಂದು ಕೇಳಲು, ಆತನು, “ನೀನೇ ಹೇಳಿದ್ದೀ” ಎಂದು ಉತ್ತರ ಕೊಟ್ಟನು.
Пилат запитав Його: ―Ти Цар юдеїв? [Ісус] відповів: ―Ти кажеш це!
4 ಪಿಲಾತನು ಮುಖ್ಯಯಾಜಕರಿಗೂ, ಜನರ ಗುಂಪಿಗೂ, “ಈ ಮನುಷ್ಯನಲ್ಲಿ ನನಗೆ ಯಾವ ಅಪರಾಧವೂ ಕಾಣಿಸುತ್ತಿಲ್ಲವೆಂದು” ಹೇಳಿದನು.
Тоді Пилат сказав первосвященникам та натовпу: ―Я не знаходжу в Цій Людині жодної провини.
5 ಅದಕ್ಕೆ ಅವರು, “ಗಲಿಲಾಯದಿಂದ ಮೊದಲುಗೊಂಡು ಇಲ್ಲಿಯವರೆಗೂ ಯೂದಾಯ ಸೀಮೆಯಲ್ಲೆಲ್ಲಾ ಇವನು ಬೋಧನೆ ಮಾಡುತ್ತಾ ಜನರ ಮನಸ್ಸನ್ನು ಕದಲಿಸುತ್ತಾನೆ” ಎಂದು ಇನ್ನೂ ಒತ್ತಿ ಹೇಳಿದರು.
Але вони наполягали кажучи: ―Він підбурює народ, навчаючи всюди в Юдеї, почав із Галілеї, а тепер прийшов сюди.
6 ಇದನ್ನು ಪಿಲಾತನು ಕೇಳಿ, ಈ ಮನುಷ್ಯನು ಗಲಿಲಾಯದವನೋ ಎಂದು ವಿಚಾರಿಸಿ,
Почувши це, Пилат запитав, чи Він галілеянин.
7 ಈತನು ಹೆರೋದನ ಅಧಿಕಾರಕ್ಕೆ ಒಳಪಟ್ಟವನು ಎಂದು ತಿಳಿದುಕೊಂಡು ಯೇಸುವನ್ನು ಹೆರೋದನ ಬಳಿಗೆ ಕಳುಹಿಸಿದನು. ಹೆರೋದನು ಆ ದಿನಗಳಲ್ಲಿ ಯೆರೂಸಲೇಮಿನಲ್ಲೇ ಇದ್ದನು.
І дізнавшись, що Ісус із [території], яка підвладна Іродові, відіслав Його до Ірода, котрий був у ті дні в Єрусалимі.
8 ಹೆರೋದನು ಯೇಸುವನ್ನು ನೋಡಿದಾಗ ಬಹಳ ಸಂತೋಷಪಟ್ಟನು. ಏಕೆಂದರೆ ಆತನ ವಿಷಯವಾಗಿ ಅನೇಕ ಸಂಗತಿಗಳನ್ನು ಕೇಳಿದ್ದರಿಂದ ಆತನನ್ನು ಕಾಣಬೇಕೆಂದು ಬಹು ಕಾಲದಿಂದ ಅಪೇಕ್ಷಿಸಿದ್ದನು. ಆತನಿಂದ ಯಾವುದಾದರೂ ಒಂದು ಸೂಚಕ ಕಾರ್ಯವಾಗುವುದನ್ನು ನೋಡಬೇಕೆಂದು ನಿರೀಕ್ಷಿಸಿದನು.
Коли Ірод побачив Ісуса, то дуже зрадів, бо давно бажав побачити Його. Він багато чув про [Ісуса] та сподівався побачити від Нього якесь знамення.
9 ಹೆರೋದನು ಅನೇಕ ಮಾತುಗಳಿಂದ ಯೇಸುವನ್ನು ಪ್ರಶ್ನೆ ಮಾಡಿದಾಗ್ಯೂ ಆತನು ಅವನಿಗೆ ಏನೂ ಉತ್ತರ ಕೊಡಲಿಲ್ಲ.
І ставив Йому багато запитань, але [Ісус] нічого не відповідав.
10 ೧೦ ಮುಖ್ಯಯಾಜಕರೂ ಶಾಸ್ತ್ರಿಗಳೂ ನಿಂತುಕೊಂಡು ಆತನ ಕುರಿತು ಬಹು ತೀವ್ರವಾಗಿ ಆರೋಪಿಸುತ್ತಿದ್ದರು.
Первосвященники та книжники, які там стояли, наполегливо звинувачували Його.
11 ೧೧ ಕಡೆಗೆ ಹೆರೋದನು ತನ್ನ ಸಿಪಾಯಿಗಳನ್ನು ಕೂಡಿಕೊಂಡು ಯೇಸುವನ್ನು ಅವಮಾನಗೊಳಿಸಿ, ಅಪಹಾಸ್ಯ ಮಾಡಿ ಶೋಭಾಯಮಾನವಾದ ಉಡುಪನ್ನು ಹಾಕಿಸಿ ಪಿಲಾತನ ಬಳಿಗೆ ತಿರುಗಿ ಕಳುಹಿಸಿಕೊಟ್ಟನು.
Але Ірод зі своїми воїнами, познущавшись та насміявшись із Нього, одягнув [Ісуса] в яскраву одежу й відіслав назад до Пилата.
12 ೧೨ ಅದೇ ದಿನ ಹೆರೋದನು ಪಿಲಾತನೂ ಒಬ್ಬರಿಗೊಬ್ಬರು ಸ್ನೇಹಿತರಾದರು. ಅದಕ್ಕಿಂತ ಮೊದಲು ಅವರಿಬ್ಬರೂ ವೈರಿಗಳಾಗಿದ್ದರು.
Того ж дня Ірод і Пилат стали друзями, хоч раніше вони ворогували один з одним.
13 ೧೩ ತರುವಾಯ ಪಿಲಾತನು ಮುಖ್ಯಯಾಜಕರನ್ನೂ, ಅಧಿಕಾರಿಗಳನ್ನೂ, ಪ್ರಜೆಗಳನ್ನೂ ಒಟ್ಟಾಗಿ ಕರೆಯಿಸಿ,
Пилат скликав разом первосвященників, старійшин і народ
14 ೧೪ ಅವರಿಗೆ, “ಈ ಮನುಷ್ಯನು ಪ್ರಜೆಗಳನ್ನು ತಿರಿಗಿ ಬೀಳುವಂತೆ ಮಾಡುವವನು ಎಂದು ಈತನನ್ನು ನನ್ನ ಬಳಿಗೆ ಕರೆತಂದಿರಲ್ಲಾ. ನೀವು ಈತನ ಮೇಲೆ ಮಾಡಿದ ದೂರುಗಳ ವಿಷಯವಾಗಿ ನಾನು ನಿಮ್ಮ ಮುಂದೆಯೇ ವಿಚಾರಣೆ ಮಾಡಿದರೂ ಈತನಲ್ಲಿ ಒಂದು ತಪ್ಪಾದರೂ ನನಗೆ ಕಾಣಲಿಲ್ಲ.
та сказав їм: ―Ви привели до мене Цього Чоловіка та сказали, що Він вводить народ в оману. І ось, дослідивши Його перед вами, я не знайшов на Цьому Чоловікові ніякої провини в тому, у чому ви Його звинувачуєте.
15 ೧೫ ಹೆರೋದನಿಗೂ ಸಹ ಕಾಣಲಿಲ್ಲ. ಅದಕಾರಣ ಈತನನ್ನು ಹಿಂತಿರುಗಿ ನಮ್ಮ ಬಳಿಗೆ ಕಳುಹಿಸಿದನಲ್ಲಾ. ಆದುದರಿಂದ ಈತನು ಮರಣದಂಡನೆಗೆ ಯೋಗ್ಯವಾದದ್ದೇನೂ ಮಾಡಿದವನಲ್ಲವೆಂದಾಯಿತು.
Навіть Ірод, не знайшовши в Ньому жодної провини, відіслав Його назад. Отже, Він не зробив нічого, вартого смерті.
16 ೧೬ ಆದುದರಿಂದ ನಾನು ಈತನನ್ನು ಹೊಡಿಸಿ ಬಿಟ್ಟು ಬಿಡುತ್ತೇನೆ” ಎಂದು ಹೇಳಿದನು.
Тож я Його покараю й відпущу.
17 ೧೭ (ಪ್ರತಿ ಪಸ್ಕ ಹಬ್ಬದ ಸಂದರ್ಭದಲ್ಲಿ ಪಿಲಾತನು ಒಬ್ಬ ಸೆರೆಯಾಳನ್ನು ಬಿಡುಗಡೆ ಮಾಡುವ ರೂಢಿಯಿತ್ತು.)
На свято йому треба було відпустити одного з в’язнів.
18 ೧೮ ಆದರೆ ಅವರು, “ಅವನನ್ನು ಕೊಲ್ಲಿಸು, ನಮಗೆ ಬರಬ್ಬನನ್ನು ಬಿಟ್ಟುಕೊಡು” ಎಂದು ಒಟ್ಟಾಗಿ ಕೂಗಿಕೊಂಡರು.
Але вони всі разом закричали кажучи: ―Візьми Його! Та відпусти нам Варавву!
19 ೧೯ ಈ ಬರಬ್ಬನನ್ನು ಆ ಪಟ್ಟಣದಲ್ಲಿ ನಡೆದ ಒಂದು ದಂಗೆಯ ನಿಮಿತ್ತವಾಗಿಯೂ ಕೊಲೆಯ ನಿಮಿತ್ತವಾಗಿಯೂ ಸೆರೆಮನೆಯಲ್ಲಿ ಹಾಕಿದ್ದರು.
[Варавва] був ув’язнений за повстання, яке сталося в місті, та за вбивство.
20 ೨೦ ಪಿಲಾತನು ಯೇಸುವನ್ನು ಬಿಡಿಸಬೇಕೆಂದು ಮನಸ್ಸುಳ್ಳವನಾಗಿದ್ದು ಪುನಃ ಅವರ ಸಂಗಡ ಮಾತನಾಡಿದನು.
Пилат, бажаючи відпустити Ісуса, знову заговорив.
21 ೨೧ ಆದರೆ ಅವರು, “ಅವನನ್ನು ಶಿಲುಬೆಗೆ ಹಾಕಿಸು, ಶಿಲುಬೆಗೆ ಹಾಕಿಸು” ಎಂದು ಕೂಗುತ್ತಿದ್ದರು.
Але вони продовжували кричати: ―Розіпни, розіпни Його!
22 ೨೨ ಅವನು ಮೂರನೆಯ ಸಾರಿ, “ಯಾಕೆ? ಕೆಟ್ಟದ್ದೇನು ಮಾಡಿದನು? ನಾನು ಇವನಲ್ಲಿ ಮರಣದಂಡನೆಗೆ ತಕ್ಕ ಅಪರಾಧವೇನೂ ಕಾಣಲಿಲ್ಲ ಆದುದರಿಂದ ಇವನನ್ನು ಹೊಡಿಸಿ ಬಿಟ್ಟುಬಿಡುತ್ತೇನೆ” ಎಂದು ಅವರಿಗೆ ಹೇಳಿದನು.
Пилат утретє звернувся до них: ―Яке ж зло Він скоїв? Ніякої провини, вартої смерті, я не знайшов у Ньому! Тож, покаравши Його, відпущу!
23 ೨೩ ಆದರೆ ಅವರು ಜೋರಾಗಿ ಕೂಗುತ್ತಾ, ಅವನನ್ನು ಶಿಲುಬೆಗೆ ಹಾಕಿಸಬೇಕೆಂದು ಕೇಳಿಕೊಂಡು ಬಲವಂತ ಮಾಡಿದರು. ಅವರ ಕೂಗಾಟವು ಗೆದ್ದಿತು.
Але вони продовжували кричати та наполягати, щоб [Ісуса] було розіп’ято. І своїми криками вони домоглися свого.
24 ೨೪ ಆಗ ಪಿಲಾತನು, ಅವರು ಕೇಳಿಕೊಂಡಂತೆ ಆಗಲಿ ಎಂದು ನಿರ್ಣಯಿಸಿ,
Пилат погодився виконати їхню вимогу.
25 ೨೫ ದಂಗೆ ಕೊಲೆಗಳ ನಿಮಿತ್ತವಾಗಿ ಸೆರೆಮನೆಯಲ್ಲಿ ಬಿದ್ದ ಆ ಮನುಷ್ಯನನ್ನು ಅವರು ಕೇಳಿಕೊಳ್ಳುತ್ತಿದ್ದ ಪ್ರಕಾರ ಬಿಟ್ಟುಕೊಟ್ಟು, ಯೇಸುವನ್ನು ಅವರ ಚಿತ್ತಾನುಸಾರ ದಂಡಿಸಲು ಒಪ್ಪಿಸಿದನು.
Він відпустив того, хто за повстання та вбивство був у тюрмі, а Ісуса віддав на [розп’яття], як вони вимагали.
26 ೨೬ ಅವರು ಯೇಸುವನ್ನು ಕರೆದುಕೊಂಡು ಹೋಗುತ್ತಿರುವಾಗ ಹೊಲದಿಂದ ಬರುತ್ತಿದ್ದ, ಕುರೇನೆ ಪಟ್ಟಣದ ಸೀಮೋನನೆಂಬುವನನ್ನು ಕರೆದು, ಶಿಲುಬೆಯನ್ನು ಅವನ ಮೇಲೆ ಹೊರಿಸಿ ಯೇಸುವಿನ ಹಿಂದೆ ಹೊತ್ತುಕೊಂಡು ಬರುವ ಹಾಗೆ ಮಾಡಿದರು.
Коли повели [Ісуса], то, схопивши Симона з Кирени, що повертався з поля, поклали на нього хрест, щоб він ніс його за Ісусом.
27 ೨೭ ಜನರ ದೊಡ್ಡ ಗುಂಪು ಯೇಸುವಿನ ಹಿಂದೆ ಹೊರಟಿತು. ಆ ಗುಂಪಿನಲ್ಲಿ ಕೆಲವು ಸ್ತ್ರೀಯರು ಎದೆಬಡಿದುಕೊಳ್ಳುತ್ತಾ ಯೇಸುವಿಗಾಗಿ ಗೋಳಾಡುತ್ತಾ ಇದ್ದರು.
Серед великого натовпу людей, що йшли за Ним, були й жінки, які плакали та жаліли Його.
28 ೨೮ ಯೇಸು ಅವರ ಕಡೆಗೆ ತಿರುಗಿಕೊಂಡು, “ಯೆರೂಸಲೇಮಿನ ಸ್ತ್ರೀಯರೇ ನನಗೋಸ್ಕರ ಅಳಬೇಡಿರಿ, ನಿಮಗೋಸ್ಕರವೂ ನಿಮ್ಮ ಮಕ್ಕಳಿಗೋಸ್ಕರವೂ ಅಳಿರಿ.
Ісус повернувся до них та промовив: «Доньки Єрусалима, не плачте за Мною, а плачте за собою та за дітьми вашими.
29 ೨೯ ಏಕೆಂದರೆ ‘ಬಂಜೆಯರೂ, ಬಸುರಾಗದವರೂ, ಮೊಲೆಕುಡಿಸದವರೂ ಧನ್ಯರು’ ಎಂದು ಜನರು ಹೇಳುವ ದಿನಗಳು ಬರುತ್ತವೆ.
Бо ось приходять дні, коли скажуть: „Блаженні неплідні, що не народжували й не годували грудьми!“
30 ೩೦ ಆ ಕಾಲದಲ್ಲಿ ಜನರು, ‘ಬೆಟ್ಟಗಳೇ ನಮ್ಮ ಮೇಲೆ ಬೀಳಿರಿ. ಗುಡ್ಡಗಳೇ ನಮ್ಮನ್ನು ಮುಚ್ಚಿಕೊಳ್ಳಿರಿ’ ಅನ್ನುವರು.
Тоді почнуть говорити горам: „Упадіть на нас!“і пагорбам: „Покрийте нас!“
31 ೩೧ ಹಸಿ ಮರಕ್ಕೆ ಇಷ್ಟೆಲ್ಲಾ ಮಾಡಿದರೆ ಒಣ ಮರದ ಗತಿ ಏನಾಗಬಹುದು?” ಅಂದನು.
Бо коли так обходяться із зеленим деревом, то що ж буде із сухим?»
32 ೩೨ ಆತನ ಸಂಗಡ ಶಿಲುಬೇಗೆರಿಸುವುದಕ್ಕಾಗಿ ದುಷ್ಕರ್ಮಿಗಳಾಗಿದ್ದ ಬೇರೆ ಇಬ್ಬರನ್ನೂ ಕರೆದುಕೊಂಡು ಹೋದರು.
Разом з [Ісусом] вели на страту двох злочинців.
33 ೩೩ ಅವರು ಕಪಾಲವೆಂಬ ಸ್ಥಳಕ್ಕೆ ಬಂದಾಗ ಅಲ್ಲಿ ಯೇಸುವನ್ನೂ ದುಷ್ಕರ್ಮಿಗಳನ್ನೂ ಶಿಲುಬೆಗೆ ಹಾಕಿದರು. ಒಬ್ಬನನ್ನು ಯೇಸುವಿನ ಬಲಗಡೆಯಲ್ಲಿಯೂ ಮತ್ತೊಬ್ಬನನ್ನು ಎಡಗಡೆಯಲ್ಲಿಯೂ ಹಾಕಿದರು.
Коли вони прийшли на місце, яке звалося «місце Черепа», там розіп’яли Його й злочинців: одного – праворуч, а іншого – ліворуч від Нього.
34 ೩೪ ಆಗ ಯೇಸು, “ತಂದೆಯೇ, ಅವರನ್ನು ಕ್ಷಮಿಸು ತಾವು ಏನು ಮಾಡುತ್ತೇವೆಂಬುದನ್ನು ಅವರು ಅರಿಯರು” ಅಂದನು. ಆ ಮೇಲೆ ಚೀಟು ಹಾಕಿ ಯೇಸುವಿನ ಬಟ್ಟೆಗಳನ್ನು ಪಾಲು ಮಾಡಿದರು.
Ісус же казав: «Отче, прости їм, бо не знають, що чинять!» Коли ж ділили Його одяг між собою, то кидали жереб.
35 ೩೫ ಜನರೆಲ್ಲರೂ ನೋಡುತ್ತಾ ನಿಂತರು. ಇದಲ್ಲದೆ ಅಧಿಕಾರಿಗಳು “ಅವನು ಮತ್ತೊಬ್ಬರನ್ನು ರಕ್ಷಿಸಿದನು, ಅವನು ದೇವರು ಆರಿಸಿಕೊಂಡ ಕ್ರಿಸ್ತನೇ ಆಗಿದ್ದರೆ ತನ್ನನ್ನು ತಾನೇ ರಕ್ಷಿಸಿಕೊಳ್ಳಲಿ” ಎಂದು ಗೇಲಿಮಾಡಿದರು.
Народ стояв та дивився. Керівники ж насміхалися з Нього, кажучи: «Інших рятував, нехай врятує Себе, якщо Він Христос, Божий Обранець!»
36 ೩೬ ಸಿಪಾಯಿಗಳೂ ಆತನನ್ನು ಪರಿಹಾಸ್ಯ ಮಾಡಿದರು. ಅವರು ಯೇಸುವಿನ ಹತ್ತಿರ ಬಂದು ಹುಳಿಮದ್ಯವನ್ನು ನೀಡಿ,
Глузували з Нього й воїни. Вони давали Йому кислого вина
37 ೩೭ “ನೀನು ಯೆಹೂದ್ಯರ ಅರಸನಾಗಿದ್ದರೆ ನಿನ್ನನ್ನು ನೀನು ರಕ್ಷಿಸಿಕೋ” ಅಂದರು.
й казали: «Якщо Ти Цар юдеїв, спаси Себе Самого!»
38 ೩೮ ಇದಲ್ಲದೆ ಆತನ ಶಿಲುಬೆಯ ಮೇಲೆ “ಇವನು ಯೆಹೂದ್ಯರ ಅರಸನು” ಎಂಬುದಾಗಿ ಲಿಖಿತವಾದ ಸೂಚನೆಯನ್ನು ಹಾಕಲಾಗಿತ್ತು.
Над Ним був напис: це цар юдеїв.
39 ೩೯ ಶಿಲುಬೇಗೆರಿಸಿದ್ದ ಆ ದುಷ್ಕರ್ಮಿಗಳಲ್ಲಿ ಒಬ್ಬನು ಯೇಸುವನ್ನು ದೂಷಿಸುತ್ತಾ, “ನೀನು ಬರಬೇಕಾದ ಕ್ರಿಸ್ತನಲ್ಲವೇ? ನಿನ್ನನ್ನು ರಕ್ಷಿಸಿಕೋ, ನಮ್ಮನ್ನು ರಕ್ಷಿಸು” ಎಂದು ಹೇಳಿದನು.
Один із розіп’ятих злочинців богохульствував проти Нього, кажучи: ―Хіба Ти не Христос? Спаси Себе й нас!
40 ೪೦ ಅದಕ್ಕೆ ಎರಡನೆಯವನು ಅವನನ್ನು ಗದರಿಸಿ, “ನೀನು ಇದೇ ದಂಡನೆಯಲ್ಲಿರುವಾಗಲೂ ದೇವರಿಗೆ ಹೆದರುವುದಿಲ್ಲವೋ?
А другий відповів, докоряючи йому: ―Чи ти не боїшся Бога, коли й сам на те саме засуджений?
41 ೪೧ ನಾವಂತೂ ನ್ಯಾಯವಾಗಿ ದಂಡನೆಯಲ್ಲಿದ್ದೇವೆ, ನಾವು ಮಾಡಿದ್ದಕ್ಕೆ ತಕ್ಕ ಪ್ರತಿಫಲವನ್ನು ಹೊಂದುತ್ತೇವೆ. ಈತನಾದರೋ ಅಂತಹದ್ದೇನನ್ನೂ ಮಾಡಲಿಲ್ಲ” ಎಂದು ಹೇಳಿ,
Ми покарані справедливо за те, що зробили, а Цей не зробив нічого поганого.
42 ೪೨ “ಯೇಸುವೇ ನೀನು ನಿನ್ನ ರಾಜ್ಯವನ್ನು ಪಡೆದವನಾಗಿ ಬರುವಾಗ ನನ್ನನ್ನು ನೆನಪಿಸಿಕೋ” ಅಂದನು.
І сказав: ―Ісусе, згадай мене, коли прийдеш у Царство Твоє!
43 ೪೩ ಅದಕ್ಕೆ ಯೇಸು, “ಈ ಹೊತ್ತೇ ನೀನು ನನ್ನ ಸಂಗಡ ಪರದೈಸಿನಲ್ಲಿರುವಿ ಎಂದು ನಿನಗೆ ಸತ್ಯವಾಗಿ ಹೇಳುತ್ತೇನೆ” ಎಂದು ಉತ್ತರಕೊಟ್ಟನು.
Ісус відповів: ―Істинно кажу тобі: сьогодні будеш зі Мною в раю.
44 ೪೪ ಇಷ್ಟರಲ್ಲಿ ಸುಮಾರು ನಡುಮಧ್ಯಾಹ್ನವಾಯಿತು. ಸೂರ್ಯನು ಕಾಂತಿಗುಂದಿ, ಮೂರು ಘಂಟೆಯ ತನಕ ಆ ದೇಶದ ಮೇಲೆಲ್ಲಾ ಕತ್ತಲೆ ಕವಿಯಿತು. ಇದಲ್ಲದೆ ದೇವಾಲಯದ ಪರದೆಯು ನಡುವೆ ಹರಿದು ಹೋಯಿತು.
Було вже близько шостої години, і настала темрява по всій землі – аж до дев’ятої години.
45 ೪೫
Сонце затьмарилось, і завіса в Храмі розірвалася навпіл.
46 ೪೬ ಆ ಮೇಲೆ ಯೇಸು, “ತಂದೆಯೇ, ನನ್ನ ಆತ್ಮವನ್ನು ನಿನ್ನ ಕೈಗೆ ಒಪ್ಪಿಸಿಕೊಡುತ್ತೇನೆ” ಎಂದು ಮಹಾಧ್ವನಿಯಿಂದ ಕೂಗಿದನು. ಇದನ್ನು ಹೇಳಿದ ಮೇಲೆ ಪ್ರಾಣಬಿಟ್ಟನು.
Ісус, голосно скрикнувши, промовив: «Отче, у руки Твої Я ввіряю дух Мій!» Сказавши це, віддав дух.
47 ೪೭ ಶತಾಧಿಪತಿಯು ನಡೆದ ಸಂಗತಿಯನ್ನು ನೋಡಿ, “ಈ ಮನುಷ್ಯನು ನಿಜವಾಗಲೂ ನೀತಿವಂತನೇ” ಆಗಿದ್ದನು ಎಂದು ದೇವರನ್ನು ಕೊಂಡಾಡಿದನು.
Коли сотник побачив, що сталося, він прославив Бога й сказав: «Цей Чоловік справді був праведником!»
48 ೪೮ ಇದನ್ನು ನೋಡಲು ಸೇರಿ ಬಂದಿದ್ದ ಜನರೆಲ್ಲರು ನಡೆದ ಘಟನೆಯನ್ನು ನೋಡಿ ಎದೆಬಡಿದುಕೊಳ್ಳುತ್ತಾ ಹಿಂತಿರುಗಿ ಹೋದರು.
Весь натовп, який зібрався подивитись на це видовище, побачивши, що сталося, повертався додому, б’ючи себе в груди.
49 ೪೯ ಇದಲ್ಲದೆ ಆತನ ಪರಿಚಿತರೆಲ್ಲರೂ, ಗಲಿಲಾಯದಿಂದ ಆತನ ಹಿಂದೆ ಬಂದಿದ್ದ ಸ್ತ್ರೀಯರೂ ದೂರದಲ್ಲಿ ನಿಂತು ಈ ಸಂಗತಿಗಳನ್ನು ನೋಡುತ್ತಿದ್ದರು.
Усі, хто знав [Ісуса], і жінки, які йшли за Ним із Галілеї, стояли поодаль і дивилися на це.
50 ೫೦ ಅರಿಮಥಾಯ ಎಂಬ ಯೆಹೂದ್ಯರದೊಂದು ಪಟ್ಟಣದಲ್ಲಿ ಒಬ್ಬ ಮನುಷ್ಯನಿದ್ದನು. ಅವನ ಹೆಸರು ಯೋಸೇಫನ. ಆತನು ಹಿರೀಸಭೆಯವನು, ಉತ್ತಮನು, ಸತ್ಪುರುಷನು ಹಾಗೂ ದೇವರ ರಾಜ್ಯವನ್ನು ಎದುರು ನೋಡುತ್ತಿದ್ದವನೂ ಆಗಿದ್ದನಲ್ಲದೆ ಮಂತ್ರಿಯೂ ಆಗಿದ್ದನು. ಅವನು ಹಿರೀಸಭೆಯವರ ಆಲೋಚನೆಗೂ ಕೃತ್ಯಗಳಿಗೂ ಅನುಮತಿಸಿರಲಿಲ್ಲ.
І був там один чоловік, на ім’я Йосиф, який був членом Синедріону, чоловік добрий та праведний.
51 ೫೧
Він не погодився з їхнім планом і рішенням. [Йосиф] походив з Ариматеї, юдейського міста, та очікував Царства Божого.
52 ೫೨ ಅವನು ಪಿಲಾತನ ಬಳಿಗೆ ಹೋಗಿ ಯೇಸುವಿನ ದೇಹವನ್ನು ತನಗೆ ಕೊಡಿಸಬೇಕೆಂದು ಬೇಡಿಕೊಂಡು,
Він пішов до Пилата та попросив тіло Ісуса.
53 ೫೩ ಅದನ್ನು ಇಳಿಸಿ ನಾರುಮಡಿಯಲ್ಲಿ ಸುತ್ತಿ, ಬಂಡೆಯಲ್ಲಿ ತೋಡಿದ್ದ ಸಮಾಧಿಯಲ್ಲಿ ಇಟ್ಟನು. ಅದರಲ್ಲಿ ಅದುವರೆಗೆ ಯಾರನ್ನು ಇಟ್ಟಿರಲಿಲ್ಲ.
І знявши [тіло], обгорнув його у льняну тканину й поклав до гробниці, яка була висічена в скелі, куди ще нікого не хоронили.
54 ೫೪ ಆ ದಿನವು ಸಿದ್ಧತೆಯ ದಿನವಾಗಿತ್ತು. ಮತ್ತು ಸಬ್ಬತ್ ದಿನ ಪ್ರಾರಂಭವಾಗುವುದಕ್ಕೆ ಸ್ವಲ್ಪ ಹೊತ್ತು ಮಾತ್ರ ಇತ್ತು.
Це був день Приготування до Суботи, яка вже наступала.
55 ೫೫ ಹೀಗಿರುವಲ್ಲಿ ಗಲಿಲಾಯದಿಂದ ಯೇಸುವಿನ ಸಂಗಡ ಬಂದಿದ್ದ ಸ್ತ್ರೀಯರು, ಯೋಸೇಫನ ಹಿಂದೆಯೇ ಹೋಗಿ ಆ ಸಮಾಧಿಯನ್ನೂ, ಯೇಸುವಿನ ದೇಹವನ್ನಿಟ್ಟ ರೀತಿಯನ್ನೂ ನೋಡಿ,
Жінки, які прийшли разом з [Ісусом] із Галілеї, ідучи за Йосифом, бачили гробницю і як до неї було покладено тіло [Ісуса].
56 ೫೬ ಹಿಂತಿರುಗಿ ಬಂದು ಪರಿಮಳದ್ರವ್ಯಗಳನ್ನೂ ಸುಗಂಧ ತೈಲವನ್ನೂ ಸಿದ್ಧಮಾಡಿಕೊಂಡರು. ಆ ಸ್ತ್ರೀಯರು ಸಬ್ಬತ್ ದಿನದಲ್ಲಿ ಧರ್ಮನಿಯಮದ ಪ್ರಕಾರ ವಿಶ್ರಮಿಸಿಕೊಂಡರು.
Повернувшись, приготували пахощі та миро. А в Суботу вони відпочили за заповіддю.

< ಲೂಕನು 23 >