< ಲೂಕನು 4 >
1 ೧ ಯೇಸು ಪವಿತ್ರಾತ್ಮಭರಿತನಾಗಿ ಯೊರ್ದನ್ ಹೊಳೆಯಿಂದ ಹಿಂತಿರುಗಿ ಬಂದು ದೇವರಾತ್ಮನಿಂದ,
Yesuusi Geeshsha Ayyaanan kumidi Yorddaanose Shaafappe simmida mela Ayyaanay iya bazzo efis.
2 ೨ ನಲವತ್ತು ದಿನ ಮರುಭೂಮಿಯಲ್ಲಿ ನಡಿಸಲ್ಪಡುತ್ತಾ, ಸೈತಾನನಿಂದ ಶೋಧಿಸಲ್ಪಟ್ಟನು. ಆ ದಿನಗಳಲ್ಲಿ ಆತನು ಏನನ್ನೂ ತಿನ್ನಲಿಲ್ಲ. ಆ ದಿನಗಳು ಮುಗಿದ ಮೇಲೆ ಆತನಿಗೆ ಹಸಿವಾಯಿತು.
Yan oytamu gallasinne qamma xalahen paacettis. He gallasatan aykkoka moonna gam77ida gisho wurssethan koshattis.
3 ೩ ಆಗ ಸೈತಾನನು ಆತನಿಗೆ, “ನೀನು ದೇವರ ಮಗನಾಗಿದ್ದರೆ ಈ ಕಲ್ಲನ್ನು ರೊಟ್ಟಿಯಾಗುವಂತೆ ಅಪ್ಪಣೆ ಕೊಡು” ಎಂದು ಹೇಳಲು,
Xalahey iyaakko, “Neeni Xoossaa na7a gidikko ane hayssi shuchchay uythu gido gada kiitta” yaagis.
4 ೪ ಯೇಸು ಅವನಿಗೆ, “‘ಮನುಷ್ಯನು ರೊಟ್ಟಿ ತಿಂದ ಮಾತ್ರದಿಂದ ಬದುಕುವುದಿಲ್ಲ’ ಎಂದು ಬರೆದದೆ” ಎಂದು ಉತ್ತರಕೊಟ್ಟನು.
Yesuusi zaaridi, “Asi uytha xalaalan deenna geetettidi xaafettis” yaagis.
5 ೫ ಬಳಿಕ ಸೈತಾನನು ಆತನನ್ನು ಎತ್ತರಕ್ಕೆ ಕರೆದುಕೊಂಡು ಹೋಗಿ, ಕ್ಷಣಮಾತ್ರದಲ್ಲಿ ಲೋಕದ ಎಲ್ಲಾ ರಾಜ್ಯಗಳನ್ನು ಆತನಿಗೆ ತೋರಿಸಿ,
Hessafe guye, Xalahey Yesuusa adussa dere bolla kessidi ha alamiya kawotethata ayfe qiphi zaaranaw bessis.
6 ೬ “ಇವೆಲ್ಲವುಗಳ ಅಧಿಕಾರವನ್ನೂ ಇವುಗಳ ವೈಭವವನ್ನೂ ನಿನಗೆ ಕೊಡುವೆನು; ಇದೆಲ್ಲಾ ನನಗೆ ಕೊಡಲ್ಪಟ್ಟಿದೆ, ಇದನ್ನು ನನ್ನ ಮನಸ್ಸು ಬಂದವನಿಗೆ ಕೊಡುತ್ತೇನೆ;
Xalahey, “Ha ubbaas maataynne bonchchoy taw imettis. Taani dosida oodeskka immiya gisho new immana.
7 ೭ ನೀನು ನನ್ನ ಮುಂದೆ ಅಡ್ಡಬಿದ್ದರೆ ಇದೆಲ್ಲಾ ನಿನ್ನದಾಗುವುದು” ಎಂದು ಆತನಿಗೆ ಹೇಳಿದನು.
Hessa gisho, neeni taw goynniko ubbay new gidana” yaagis.
8 ೮ ಅದಕ್ಕೆ ಯೇಸು, “‘ನಿನ್ನ ದೇವರಾಗಿರುವ ಕರ್ತನನ್ನು ಆರಾಧಿಸಿ, ಆತನೊಬ್ಬನನ್ನೇ ಸೇವಿಸಬೇಕು’ ಎಂಬುದಾಗಿ ಬರೆದದೆ” ಎಂದು ಉತ್ತರಕೊಟ್ಟನು.
Yesuusi zaaridi, “Ne Godaa, ne Xoossaa, iya xalaala goynna geetettidi xaafettis” yaagis.
9 ೯ ಇದಲ್ಲದೆ ಸೈತಾನನು ಆತನನ್ನು ಯೆರೂಸಲೇಮಿಗೆ ಕರೆದುಕೊಂಡು ಹೋಗಿ ದೇವಾಲಯದ ಗೋಪುರದ ತುದಿಯಲ್ಲಿ ನಿಲ್ಲಿಸಿ ಆತನಿಗೆ, “ನೀನು ದೇವರ ಮಗನಾಗಿದ್ದರೆ ಇಲ್ಲಿಂದ ಕೆಳಕ್ಕೆ ಧುಮುಕು.
Wurssethan Xalahey Yesuusa Yerusalaame efidi Xoossa Keethas huu7iya bolla essidi, “Neeni Xoossaa na7a gidikko ane duge sa7an nena yegga.
10 ೧೦ ‘ನಿನ್ನನ್ನು ಕಾಯುವುದಕ್ಕೆ ಕರ್ತನು ತನ್ನ ದೂತರಿಗೆ ಅಪ್ಪಣೆ ಕೊಡುವನು;
Ays giikko, ‘Nena naagiya Kiitanchchota Xoossay ne gisho kiittana.
11 ೧೧ ಮತ್ತು ನಿನ್ನ ಕಾಲು ಕಲ್ಲಿಗೆ ತಗಲದಂತೆ ಅವರು ನಿನ್ನನ್ನು ಕೈಗಳಲ್ಲಿ ಎತ್ತಿಕೊಳ್ಳುವರು’ ಎಂಬುದಾಗಿ ಬರೆದದೆಯಲ್ಲಾ” ಎಂದು ಹೇಳಿದನು.
Entti ne tohoy shuchchan dhubettonna mela, bantta kushiyan dhoqqu oothidi nena denthana’ geetettidi xaafettis” yaagis.
12 ೧೨ ಅದಕ್ಕೆ ಆತನು, “‘ನಿನ್ನ ದೇವರಾಗಿರುವ ಕರ್ತನನ್ನು ಪರೀಕ್ಷಿಸಬಾರದೆಂದು’ ಹೇಳಿದೆ” ಎಂದು ಉತ್ತರ ಕೊಟ್ಟನು.
Yesuusi zaaridi, “Ne Godaa Xoossaa paaccofa geetettidi xaafettis” yaagis.
13 ೧೩ ಹೀಗೆ ಸೈತಾನನು ನಾನಾ ವಿಧದಲ್ಲಿ ಶೋಧಿಸಿದ ನಂತರ, ತಕ್ಕ ಸಮಯ ಬರುವ ತನಕ ಆತನನ್ನು ಬಿಟ್ಟು ಹೊರಟುಹೋದನು.
Xalahey Yesuusa paaciya wurssidaappe guye hara injje wode demmana gakkanaw iyappe shaakettis.
14 ೧೪ ತರುವಾಯ ಯೇಸು ಪವಿತ್ರಾತ್ಮನ ಶಕ್ತಿಯಿಂದ ಕೂಡಿದವನಾಗಿ ಗಲಿಲಾಯಕ್ಕೆ ಹಿಂತಿರುಗಿದನು; ಆತನ ಸುದ್ದಿಯು ಸುತ್ತಲಿರುವ ಪ್ರಾಂತ್ಯದಲ್ಲೆಲ್ಲಾ ಹರಡಿತು.
Yesuusi Ayyaana wolqqan kumidi Galiila simmis. Iya sunthay heeran de7iya biitta ubban keyis.
15 ೧೫ ಆತನು ಅವರ ಸಭಾಮಂದಿರಗಳಲ್ಲಿ ಬೋಧಿಸುತ್ತಿದ್ದನು; ಎಲ್ಲರೂ ಆತನನ್ನು ಹೊಗಳಿದರು.
I Ayhude Woosa Keethi gelidi tamaarssis; asay ubbay iya galatidosona.
16 ೧೬ ಹೀಗಿರಲಾಗಿ ಆತನು ತಾನು ಬೆಳೆದುಬಂದ ಊರಾದ ನಜರೇತಿಗೆ ಬಂದು, ತನ್ನ ವಾಡಿಕೆಯ ಪ್ರಕಾರ ಸಬ್ಬತ್ ದಿನದಲ್ಲಿ ಸಭಾಮಂದಿರದೊಳಗೆ ಹೋಗಿ ಪವಿತ್ರಗ್ರಂಥವನ್ನು ಓದುವುದಕ್ಕಾಗಿ ಎದ್ದು ನಿಂತನು.
Yaappe I diccida katamaa Naazirete yis. Kase meezetidayssada Sambbaata gallas Ayhude Woosa Keethi gelis. Nabbabanawukka denddi eqqis.
17 ೧೭ ಆಗ ಯೆಶಾಯನೆಂಬ ಪ್ರವಾದಿಯು ಬರೆದ ಗ್ರಂಥದ ಸುರುಳಿಯನ್ನು ಆತನ ಕೈಗೆ ಕೊಡಲಾಗಿ ಆತನು ಆ ಸುರುಳಿಯನ್ನು ಬಿಚ್ಚಿದಾಗ ಬರೆದಿರುವ ಈ ಭಾಗವನ್ನು ಕಂಡು ಓದಿದನು; ಅಲ್ಲಿ ಹೀಗೆ ಬರೆದಿತ್ತು,
Nabiya Isayaasa maxaafay iyaw imettin, maxaafaa dooyidi, geetettidi xaafettidayssa demmis:
18 ೧೮ “ಕರ್ತನ ಆತ್ಮವು ನನ್ನ ಮೇಲೆ ಅದೆ, ಆತನು ನನ್ನನ್ನು ಬಡವರಿಗೆ ಶುಭವಾರ್ತೆಯನ್ನು ಸಾರುವುದಕ್ಕಾಗಿ ಅಭಿಷೇಕಿಸಿರುವನು. ಸೆರೆಯಲ್ಲಿರುವವರನ್ನು ಬಿಡುಗಡೆಮಾಡುವುದಕ್ಕೂ, ಮತ್ತು ಕುರುಡರಿಗೆ ಕಣ್ಣು ಬರುವುದಕ್ಕೂ ಹಿಂಸಿಸಲ್ಪಟ್ಟವರನ್ನು ಬಿಡಿಸಿ ಕಳುಹಿಸುವುದಕ್ಕೂ
“Godaa Ayyaanay ta bolla de7ees, manqotas Wonggelaa odana mela Xoossay tana dooris. Qashettidayssatas biletethi, qooqidayssata xeelisanaasinne un77ettidayssata birshshana mela,
19 ೧೯ ಕರ್ತನು ನೇಮಿಸಿರುವ ಶುಭವರ್ಷವನ್ನು ಪ್ರಚಾರಪಡಿಸುವುದಕ್ಕೂ ಆತನು ನನ್ನನ್ನು ಕಳುಹಿಸಿದ್ದಾನೆ.”
Xoossay keehanaw qoppida laythaa odana mela tana kiittis” yaagis.
20 ೨೦ ಅದನ್ನು ಓದಿದ ಮೇಲೆ ಆತನು ಆ ಸುರುಳಿಯನ್ನು ಸುತ್ತಿ ಸಭಾಮಂದಿರದ ಸೇವಕನ ಕೈಗೆ ಕೊಟ್ಟು ಕುಳಿತುಕೊಂಡನು. ಅಲ್ಲಿ ನೆರೆದ್ದಿದವರೆಲ್ಲರ ಕಣ್ಣುಗಳೂ ಆತನ ಮೇಲಿರಲಾಗಿ,
Hessafe guye, maxaafaa xaaxidi haggaazeyssas immidi tamaarssanaw uttis. Ayhude Woosa Keethan de7iya asati ubbay caddi xeellosona.
21 ೨೧ ಆತನು ಅವರಿಗೆ, “ಈ ಹೊತ್ತು ನೀವು ನನ್ನ ಮಾತನ್ನು ಕೇಳುವಲ್ಲಿ ಈ ವೇದೋಕ್ತಿ ನೆರವೇರಿದೆ” ಎಂದು ಹೇಳುತ್ತಿರುವಾಗ,
I, “Hayssi hintte haythan hintte si7iya ha maxaafaa qaalay hachchi polettis” yaagis.
22 ೨೨ ಎಲ್ಲರು ಆತನನ್ನು ಹೊಗಳಿ ಆತನ ಬಾಯಿಂದ ಹೊರಡುವ ಇಂಪಾದ ಮಾತುಗಳಿಗೆ ಆಶ್ಚರ್ಯಪಟ್ಟು, “ಇವನು ಯೋಸೇಫನ ಮಗನಲ್ಲವೇ?” ಎಂದು ಮಾತನಾಡಿಕೊಂಡರು.
Ubbay iyabaa darssidi odettoosona. Qassi iya doonappe keyaa aadho keehatethan kumida qaalan malaalettishe, “Hayssi Yoosefa na7aa gidenneyye?” yaagidosona.
23 ೨೩ ಅದಕ್ಕೆ ಯೇಸು ಅವರಿಗೆ, “‘ವೈದ್ಯನೇ, ನಿನ್ನನ್ನು ನೀನೇ ವಾಸಿಮಾಡಿಕೋ’ ಎಂಬ ಗಾದೆಯನ್ನು ನನಗೆ ನಿಸ್ಸಂದೇಹವಾಗಿ ಹೇಳಿ; ಕಪೆರ್ನೌಮಿನಲ್ಲಿ ನೀನು ಮಾಡಿದ ಕಾರ್ಯಗಳನ್ನು ನಾವು ಕೇಳಿದ್ದೇವೆ, ಅಂಥವುಗಳನ್ನು ಈ ನಿನ್ನ ಸ್ವಂತ ಸ್ಥಳದಲ್ಲಿಯೂ ಮಾಡು ಎಂದು ಹೇಳುವಿರಿ.
I, “‘Neno dhale aawaw nena ashsha, Qifirnahoomen ne oothidabaa nu si77oyssa qassi hayssan ne kataman ootha’ yaagiya leemisuwan hintte tana gaanayssas sidhey baawa” yaagis.
24 ೨೪ ಯಾವ ಪ್ರವಾದಿಯೂ ತನ್ನ ಸ್ವದೇಶದಲ್ಲಿ ಅಂಗೀಕರಿಸಲ್ಪಡುವುದಿಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
Qassi, “Tuma odays; nabey ba yelettida biittan bonchchettena.
25 ೨೫ ಕೇಳಿರಿ, ಎಲೀಯನ ಕಾಲದಲ್ಲಿ ಮೂರು ವರ್ಷ ಆರು ತಿಂಗಳು ಮಳೆಬಾರದೆ ದೇಶದಲ್ಲೆಲ್ಲಾ ದೊಡ್ಡ ಬರಗಾಲ ಉಂಟಾದಾಗ, ಇಸ್ರಾಯೇಲಿನಲ್ಲೇ ಅನೇಕ ವಿಧವೆಯರು ಇದ್ದದ್ದು ನಿಜ;
“Ta hinttew tuma odays; saloy heedzu laythinne bagga gorddettin mino koshi biitta ubban de7iya Eliyaasa wode daro am77eti Isra7eelen de7oosona.
26 ೨೬ ಆದರೆ ಅವರಾರ ಬಳಿಗೂ ದೇವರು ಎಲೀಯನನ್ನು ಕಳುಹಿಸದೆ, ಸೀದೋನ್ ದೇಶಕ್ಕೆ ಸೇರಿದ ಸರೆಪ್ತ ಊರಿನಲ್ಲಿದ್ದ ಒಬ್ಬ ವಿಧವೆಯ ಬಳಿಗೆ ಮಾತ್ರ ಅವನನ್ನು ಕಳುಹಿಸಿದನು.
Eliyaasi enttafe issinnekokka kiitettibeenna. Shin Serapitan de7iya am77eeko kiitettis.
27 ೨೭ ಮತ್ತು ಎಲೀಷನೆಂಬ ಪ್ರವಾದಿಯ ಕಾಲದಲ್ಲಿ ಇಸ್ರಾಯೇಲ್ ಜನರೊಳಗೆ ಅನೇಕ ಕುಷ್ಠರೋಗಿಗಳು ಇದ್ದಾಗ್ಯೂ, ಅವರಲ್ಲಿ ಒಬ್ಬನಾದರೂ ಶುದ್ಧನಾಗದೆ ಸಿರಿಯ ದೇಶದವನಾದ ನಾಮಾನನು ಮಾತ್ರ ಶುದ್ಧನಾದನು” ಎಂದು ಹೇಳಿದನು.
Nabiya Elssa7e wode Isra7eelen daro baro hargganchchoti de7oosona. Shin Soore uraa Ni7imaaneppe attin oonikka paxibeenna” yaagis.
28 ೨೮ ಸಭಾಮಂದಿರದಲ್ಲಿದ್ದ ಎಲ್ಲರೂ ಈ ಮಾತುಗಳನ್ನು ಕೇಳಿ ಬಹಳವಾಗಿ ಸಿಟ್ಟುಗೊಂಡು,
Ayhude Woosa Keethan de7iya asay ubbay hessa si7ida wode daro yilotidosona.
29 ೨೯ ಎದ್ದು ಆತನನ್ನು ಊರಹೊರಕ್ಕೆ ಎಳೆದುಕೊಂಡು, ತಮ್ಮ ಊರು ಕಟ್ಟಲ್ಪಟ್ಟಿದ್ದ ಗುಡ್ಡದ ಅಂಚಿಗೆ ನಡಿಸಿಕೊಂಡು ಹೋಗಿ ಅಲ್ಲಿಂದ ಕೆಳಕ್ಕೆ ದೊಬ್ಬಿಬಿಡಬೇಕೆಂದಿದ್ದರು.
Bantta uttida bessaafe denddidi zuma bolla keexettida katamaappe gaxa kessidi sugi yeddanaw aafo doona efidosona.
30 ೩೦ ಆದರೆ ಆತನು ಅವರ ಮಧ್ಯದಿಂದ ನಡೆದು ತನ್ನ ಪಾಡಿಗೆ ತಾನು ಹೊರಟು ಹೋದನು.
Shin I entta giddora kanthidi aadhdhis.
31 ೩೧ ಬಳಿಕ ಆತನು ಘಟ್ಟಾ ಇಳಿದು ಗಲಿಲಾಯಕ್ಕೆ ಸೇರಿದ ಕಪೆರ್ನೌಮೆಂಬ ಊರಿಗೆ ಬಂದನು. ಅಲ್ಲಿ ಸಬ್ಬತ್ ದಿನದಲ್ಲಿ ಅವರಿಗೆ ಉಪದೇಶಮಾಡುತ್ತಿರಲು,
Yaappe Galiila biittan de7iya Qifirnahoome katama bis. Yan Sambbaata gallas asaa tamaarssis.
32 ೩೨ ಆತನ ಮಾತು ಅಧಿಕಾರವುಳ್ಳದ್ದಾಗಿದ್ದದರಿಂದ ಅವರು ಆತನ ಉಪದೇಶಕ್ಕೆ ಅತ್ಯಾಶ್ಚರ್ಯಪಟ್ಟರು.
I tamaarssey maatara gidiya gisho ubbay iya timirttiyan malaalettidosona.
33 ೩೩ ಆ ಸಭಾಮಂದಿರದಲ್ಲಿ ದೆವ್ವಹಿಡಿದ ಒಬ್ಬ ಮನುಷ್ಯನಿದ್ದನು. ಆತನು, “ನಜರೇತಿನ ಯೇಸುವೇ, ನಮ್ಮ ಗೊಡವೆ ನಿನಗೇಕೆ? ನಮ್ಮನ್ನು ನಾಶಮಾಡುವುದಕ್ಕೆ ಬಂದೆಯಾ? ನಿನ್ನನ್ನು ಬಲ್ಲೆವು. ನೀನು ದೇವರಿಂದ ಬಂದ ಪರಿಶುದ್ಧನೇ” ಎಂದು ಜೋರಾಗಿ ಕೂಗಿ ಹೇಳಿದನು.
Ayhude Woosa Keethan tuna ayyaanay oykkida uray de7ees.
I, “Naazirete Yesuusa nuna ays waaysay nuuppe haakka; neeni yiday nuna dhayssanaaseyye? Neeni ooneekko taani erays. Neeni Xoossaafe yida Geeshsha” yaagidi waassis.
35 ೩೫ ಯೇಸು ದೆವ್ವವನ್ನು ಗದರಿಸಿ, “ಸುಮ್ಮನಿರು, ಇವನನ್ನು ಬಿಟ್ಟು ಹೋಗು” ಎನ್ನಲಾಗಿ ಆ ದೆವ್ವವು ಅವನನ್ನು ಎಲ್ಲರ ನಡುವೆ ಬೀಳಿಸಿ ಅವನಿಗೆ ಯಾವ ಕೇಡನ್ನೂ ಮಾಡದೆ ಬಿಟ್ಟುಹೋಯಿತು.
Yesuusi tuna ayyaanaakko, “Si7i gada ha uraappe keya” yaagidi hanqis. Tuna ayyaanay uraa asaa ubbaa sinthan holi yeggidi aykkoka qohonna yeddidi keyis.
36 ೩೬ ಅದಕ್ಕೆ ಎಲ್ಲರು ಬೆರಗಾಗಿ, “ಇದೆಂಥ ಮಾತಾಗಿರಬಹುದು? ಈತನು ಅಧಿಕಾರದಿಂದಲೂ, ಬಲದಿಂದಲೂ ದೆವ್ವಗಳಿಗೆ ಅಪ್ಪಣೆಕೊಡುತ್ತಾನೆ, ಅವು ಬಿಟ್ಟು ಹೋಗುತ್ತವೆ” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.
Asa ubbay malaalettidosona. Wolikko, “Hanos, hayssi aybi timirtte? Tuna ayyaanata maataninne wolqqan kiittees; enttika keyosona” yaagidosona.
37 ೩೭ ಮತ್ತು ಆತನ ಸುದ್ದಿಯು ಸುತ್ತಲಿರುವ ಪ್ರಾಂತ್ಯದ ಊರುಗಳಲ್ಲೆಲ್ಲಾ ಹರಡಿತು.
Iya sunthay heera ubban keyis.
38 ೩೮ ಆತನು ಸಭಾಮಂದಿರದಿಂದೆದ್ದು ಸೀಮೋನನ ಮನೆಗೆ ಬಂದನು. ಅಲ್ಲಿ ಸೀಮೋನನ ಅತ್ತೆಯು ವಿಪರೀತ ಜ್ವರದಿಂದ ಕಷ್ಟಪಡುತ್ತಿರಲಾಗಿ; ಆಕೆಯ ವಿಷಯದಲ್ಲಿ ಅಲಿದ್ದವರು ಆತನನ್ನು ಬೇಡಿಕೊಂಡರು.
Hessafe guye, Yesuusi Ayhude Woosa Keethafe keyidi Simoona soo gelis. Simoona machche aayiya mino qoxo misha harggen sakettasu. Iyo pathana mela Yesuusa woossidosona.
39 ೩೯ ಆತನು ಆಕೆಯ ಬಳಿ ನಿಂತು ಬಾಗಿ, ಜ್ವರವನ್ನು ಬಿಟ್ಟುಹೋಗೆಂದು ಗದರಿಸಲು; ಅದು ಆಕೆಯನ್ನು ಬಿಟ್ಟುಹೋಯಿತು. ಕೂಡಲೆ ಆಕೆಯು ಎದ್ದು ಅವರೆಲ್ಲರಿಗೆ ಉಪಚಾರಮಾಡಿದಳು.
I hiixaakko shiiqi hokkidi I harggiya hanqis. Mishay aggin ellesa denddada entta mokkasu.
40 ೪೦ ಸಂಜೆಯಾದಂತೆ ಜನರು ವಿವಿಧ ರೋಗಗಳಿಂದ ಅಸ್ವಸ್ಥವಾದವರನ್ನೆಲ್ಲಾ ಆತನ ಹತ್ತಿರಕ್ಕೆ ಕರತರಲು; ಆತನು ಪ್ರತಿಯೊಬ್ಬರ ಮೇಲೆಯೂ ಕೈಯಿಟ್ಟು ಅವರನ್ನು ವಾಸಿಮಾಡಿದನು.
Away wullana hanishin dumma dumma harggiyan oykettida asaa iyaakko ehidosona. I issuwa issuwa bolla ba kushiya wothidi pathis.
41 ೪೧ ದೆವ್ವಗಳು ಸಹ, ನೀನು ದೇವಕುಮಾರನು ಎಂದು ಅಬ್ಬರಿಸಿ, ಅನೇಕರನ್ನು ಬಿಟ್ಟುಹೋದವು. ಆತನು ಕ್ರಿಸ್ತನೆಂದು ದೆವ್ವಗಳಿಗೆ ಸ್ಪಷ್ಟವಾಗಿ ತಿಳಿದಿದ್ದರಿಂದ ಆತನು ಅವುಗಳನ್ನು ಮಾತನಾಡದಂತೆ ಗದರಿಸಿದನು.
Tuna ayyaanati qassi, “Neeni, Xoossaa na7aa” gidi waassishe daro asaappe keyidosona. Shin I enttana hanqis. I Kiristtoosa gideyssa entti eriya gisho, issibaakka odettonna mela diggis.
42 ೪೨ ಬೆಳಗಾದ ಮೇಲೆ ಆತನು ಹೊರಟು ನಿರ್ಜನವಾದ ಸ್ಥಳಕ್ಕೆ ಹೋದನು; ಜನರು ಗುಂಪುಗುಂಪಾಗಿ ಆತನನ್ನು ಹುಡುಕಿಕೊಂಡು ಆತನಿದ್ದಲ್ಲಿಗೆ ಬಂದು, ಆತನು ಅವರನ್ನು ಬಿಟ್ಟುಹೋಗಬಾರದೆಂದು ಅವರು ಆತನನ್ನು ತಡೆದರು.
Buroo wonttiya wode Yesuusi issi geema bessi bis. Asay koyishe I de7iya bessaa yidosona. Enttafe I shaakettidi boonna mela butetidosona.
43 ೪೩ ಆದರೆ ಆತನು ಅವರಿಗೆ, “ನಾನು ದೇವರ ರಾಜ್ಯದ ಸುವಾರ್ತೆಯನ್ನು ಬೇರೆ ಊರುಗಳಿಗೂ ಸಾರಿ ಹೇಳಬೇಕಾಗಿದೆ; ಇದಕ್ಕಾಗಿಯೇ ಕಳುಹಿಸಲ್ಪಟ್ಟಿದ್ದೇನೆ” ಎಂದು ಹೇಳಿದನು.
Shin I, “Taani hara katamata bada Xoossaa kawotethaa Wonggelaa markkattanaw bessees. Ta kiitettiday hessassa” yaagis.
44 ೪೪ ಬಳಿಕ ಆತನು ಯೂದಾಯ ದೇಶದ ಸಭಾಮಂದಿರಗಳಲ್ಲಿ ಸುವಾರ್ತೆಯನ್ನು ಸಾರುತ್ತಾ ಇದ್ದನು.
Yihuda biittan de7iya Ayhude Woosa Keethan sabbakis.