< ಲೂಕನು 5 >
1 ೧ ಒಮ್ಮೆ ಯೇಸು ಗೆನೆಜರೇತ್ ಸರೋವರದ ದಡದಲ್ಲಿ ನಿಂತಿದ್ದಾಗ ಜನರು ಗುಂಪಾಗಿ ಬಂದು ದೇವರ ವಾಕ್ಯವನ್ನು ಕೇಳುವುದಕ್ಕಾಗಿ ಆತನನ್ನು ಸುತ್ತುವರೆದು ನೂಕಾಡುತ್ತಿದ್ದರು.
Dag einn var hann að predika niðri við strönd Genesaretvatnsins. Fólkið þyrptist að og þrengdi að honum, því allir vildu heyra orð Guðs.
2 ೨ ಯೇಸು ಆ ಸರೋವರದ ದಡದಲ್ಲಿದ್ದ ಎರಡು ದೋಣಿಗಳನ್ನು ಕಂಡನು. ಬೆಸ್ತರು ಅವುಗಳೊಳಗಿಂದ ಹೊರಗೆ ಬಂದು ತಮ್ಮ ಬಲೆಗಳನ್ನು ತೊಳೆಯುತ್ತಿದ್ದರು.
Hann tók þá eftir tveim mannlausum bátum í fjörunni – áhafnirnar voru þar skammt frá að þvo net sín.
3 ೩ ಆ ದೋಣಿಗಳಲ್ಲಿ, ಸೀಮೋನನ ದೋಣಿಯನ್ನು ಯೇಸು ಹತ್ತಿ ದಡದಿಂದ ಸ್ವಲ್ಪ ದೂರಕ್ಕೆ ನೂಕಬೇಕೆಂದು ಅವನನ್ನು ಕೇಳಿಕೊಂಡನು. ತರುವಾಯ ಯೇಸು ಕುಳಿತುಕೊಂಡು ದೋಣಿಯೊಳಗಿಂದಲೇ ಆ ಜನರ ಗುಂಪಿಗೆ ಉಪದೇಶಮಾಡಿದನು.
Jesús fór út í annan bátinn og bað eigandann, Símon, að leggja lítið eitt frá landi, svo hann gæti setið í bátnum og talað þaðan til mannfjöldans.
4 ೪ ಮಾತನಾಡುವುದನ್ನು ಮುಗಿಸಿದ ಮೇಲೆ ಸೀಮೋನನಿಗೆ, “ಆಳವಾದ ಸ್ಥಳಕ್ಕೆ ದೋಣಿಯನ್ನು ನಡೆಸಿ ಮೀನುಹಿಡಿಯಲು ನಿಮ್ಮ ಬಲೆಗಳನ್ನು ಬೀಸಿರಿ” ಎಂದು ಹೇಳಿದನು.
Þegar hann hafði lokið máli sínu sagði hann við Símon: „Farðu nú út á dýpið og leggðu netin.“
5 ೫ ಅದಕ್ಕೆ ಸೀಮೋನನು, “ಗುರುವೇ, ನಾವು ರಾತ್ರಿಯೆಲ್ಲಾ ಪ್ರಯತ್ನಪಟ್ಟರೂ ಏನೂ ಸಿಕ್ಕಲಿಲ್ಲ; ಆದರೆ ನಿನ್ನ ಮಾತಿನ ಮೇಲೆ ಬಲೆಗಳನ್ನು ಬೀಸುತ್ತೇವೆ” ಅಂದನು.
„Herra, “svaraði Símon, „við höfum verið að í alla nótt og ekki orðið varir, en fyrst þú segir það, þá skulum við reyna.“
6 ೬ ಅವರು ಬಲೆಗಳನ್ನು ಬೀಸಿದ ಮೇಲೆ ಮೀನುಗಳು ರಾಶಿರಾಶಿಯಾಗಿ ಬಲೆಗೆ ಸಿಕ್ಕಿಕೊಂಡಿದ್ದರ ಪರಿಣಾಮ ಬಲೆಗಳು ಹರಿದುಹೋಗುವಂತ್ತಿದವು.
Í þetta skipti varð veiðin svo mikil að netin rifnuðu!
7 ೭ ಆಗ ಅವರು ಮತ್ತೊಂದು ದೋಣಿಯಲ್ಲಿದ್ದ ತಮ್ಮ ಸಂಗಡಿಗರನ್ನೂ ಕರೆದು, ನೀವು ಬಂದು ನಮಗೆ ನೆರವಾಗಬೇಕೆಂದು ಸನ್ನೆಮಾಡಿದರು. ಅವರು ಬಂದು ಆ ಎರಡು ದೋಣಿಗಳಲ್ಲಿ ಮೀನುಗಳನ್ನು ತುಂಬಿಸಲು, ಅವು ಮುಳುಗುವ ಹಾಗಾದವು.
Þá kölluðu þeir til félaga sinna á hinum bátnum og báðu þá að hjálpa sér. Ekki leið á löngu uns þeir höfðu drekkhlaðið báða bátana.
8 ೮ ಸೀಮೋನ್ ಪೇತ್ರನು ಇದನ್ನು ಕಂಡು ಯೇಸುವಿನ ಮೊಣಕಾಲಿಗೆ ಬಿದ್ದು, “ಕರ್ತನೇ, ನಾನು ಪಾಪಾತ್ಮನು; ನನ್ನನ್ನು ಬಿಟ್ಟುಹೋಗು” ಅಂದನು.
Þegar Símon Pétur sá þetta, féll hann að fótum Jesú og sagði: „Farðu frá mér, herra, ég er of syndugur til að vera nálægt þér.“
9 ೯ ಏಕೆಂದರೆ ಅವನಿಗೂ ಅವನ ಸಂಗಡ ಇದ್ದವರೆಲ್ಲರಿಗೂ ತಾವು ಹಿಡಿದ ಮೀನುಗಳ ನಿಮಿತ್ತ ಆಶ್ಚರ್ಯಪಟ್ಟಿದ್ದರು.
Bæði hann og félagar hans, Jakob og Jóhannes Sebedeussynir, voru gagnteknir af undrun á öllum þessum afla. En Jesús sagði við Símon: „Vertu óhræddur! Héðan í frá skaltu veiða menn.“
10 ೧೦ ಸೀಮೋನನ ಸಂಗಡಿಗರಾಗಿದ್ದ ಜೆಬೆದಾಯನ ಮಕ್ಕಳಾದ ಯಾಕೋಬ ಮತ್ತು ಯೋಹಾನರೂ ಹಾಗೆಯೇ ಆಶ್ಚರ್ಯಪಟ್ಟರು. ಯೇಸು ಸೀಮೋನನಿಗೆ, “ಅಂಜಬೇಡ, ಇಂದಿನಿಂದ ನೀನು ಮನುಷ್ಯರನ್ನು ಹಿಡಿಯುವ ಬೆಸ್ತನಾಗಿರುವಿ” ಎಂದು ಹೇಳಿದನು.
11 ೧೧ ಅವರು ತಮ್ಮ ದೋಣಿಗಳನ್ನು ದಡಕ್ಕೆ ತಂದು ಮತ್ತು ಎಲ್ಲವನ್ನು ಬಿಟ್ಟು ಅಂದಿನಿಂದ ಯೇಸುವನ್ನು ಹಿಂಬಾಲಿಸಿದರು.
Þegar þeir höfðu landað aflanum yfirgáfu þeir allt og fylgdu honum.
12 ೧೨ ಆತನು ಒಂದಾನೊಂದು ಊರಿನಲ್ಲಿದ್ದಾಗ ಮೈಯೆಲ್ಲಾ ಕುಷ್ಠರೋಗ ತುಂಬಿದ್ದ ಒಬ್ಬ ಮನುಷ್ಯನು ಯೇಸುವನ್ನು ಕಂಡು ಸಾಷ್ಟಾಂಗವೆರಗಿ, “ಕರ್ತನೇ, ನಿನಗೆ ಮನಸ್ಸಿದ್ದರೆ ನನ್ನನ್ನು ಶುದ್ಧಮಾಡಬಲ್ಲೆ” ಎಂದು ಬೇಡಿಕೊಂಡನು.
Svo bar við, er Jesús var staddur í einu þorpinu, að hann mætti manni sem þjáðist af holdsveiki. Þegar maðurinn sá Jesú, fleygði hann sér í götuna fyrir framan hann og grátbað hann að lækna sig. „Herra, þú getur læknað mig ef þú vilt, “sagði hann.
13 ೧೩ ಆತನು ಕೈನೀಡಿ ಅವನನ್ನು ಮುಟ್ಟಿ, “ನನಗೆ ಮನಸ್ಸುಂಟು, ಶುದ್ಧನಾಗು” ಅಂದನು. ಕೂಡಲೆ ಅವನ ಕುಷ್ಠವು ವಾಸಿಯಾಯಿತು.
Jesús rétti út höndina, snerti manninn og sagði: „Ég vil að þú verðir heilbrigður.“Um leið hvarf holdsveikin!
14 ೧೪ ಆಗ ಆತನು ಅವನಿಗೆ, “ನೀನು ಯಾರಿಗೂ ಹೇಳಬೇಡ; ಆದರೆ ಹೋಗಿ ಯಾಜಕನಿಗೆ ನಿನ್ನ ಮೈ ತೋರಿಸಿ ಮೋಶೆಯು ಆಜ್ಞಾಪಿಸಿರುವ ಕಾಣಿಕೆಯನ್ನು ಅರ್ಪಿಸಿ ನಿನ್ನ ಶುದ್ಧಾಚಾರವನ್ನು ನೆರವೇರಿಸು, ಅದು ಜನರಿಗೆ ಸಾಕ್ಷಿಯಾಗಲಿ” ಎಂದು ಅಪ್ಪಣೆಕೊಟ್ಟನು.
Jesús bað manninn að segja þetta engum, en fara strax og láta prestinn skoða sig. „Fórnaðu síðan því sem lög Móse fyrirskipa þeim sem læknast af holdsveiki, “bætti Jesús við, „því það er sönnun þess að þér sé batnað.“
15 ೧೫ ಆದರೂ ಆತನ ಸುದ್ದಿಯು ಮತ್ತಷ್ಟು ಹಬ್ಬಿತು, ಮತ್ತು ಜನರು ಯೇಸುವಿನ ಉಪದೇಶವನ್ನು ಕೇಳುವುದಕ್ಕೂ, ತಮ್ಮ ತಮ್ಮ ರೋಗರುಜಿನಗಳನ್ನು ವಾಸಿಮಾಡಿಸಿಕೊಳ್ಳುವುದಕ್ಕೂ, ಗುಂಪುಗುಂಪಾಗಿ ಬಂದು ಸೇರಿದರು.
Orðrómurinn um mátt Jesú breiddist nú æ hraðar út og mikill mannfjöldi kom til að hlusta á hann og fá bót meina sinna.
16 ೧೬ ಆದರೆ ಯೇಸು ಜನರಿಂದ ಪ್ರತ್ಯೇಕಿಸಿಕೊಂಡು ನಿರ್ಜನ ಪ್ರದೇಶಗಳಿಗೆ ಹೋಗಿ ಪ್ರಾರ್ಥನೆಯನ್ನು ಮಾಡುತ್ತಿದ್ದನು.
Oft dró hann sig þó út úr á óbyggða staði og var þar á bæn.
17 ೧೭ ಒಮ್ಮೆ ಆತನು ಉಪದೇಶಮಾಡುತ್ತಿರಲು ಗಲಿಲಾಯ ಮತ್ತು ಯೂದಾಯದ ಎಲ್ಲಾ ಗ್ರಾಮಗಳಿಂದಲೂ ಯೆರೂಸಲೇಮಿನಿಂದಲೂ ಬಂದಿದ್ದ ಫರಿಸಾಯರೂ ಧರ್ಮೋಪದೇಶಕರೂ ಆತನ ಹತ್ತಿರ ಕುಳಿತುಕೊಂಡಿದ್ದರು. ಮತ್ತು ಅವರನ್ನು ಗುಣಮಾಡುವ ದೇವರ ಶಕ್ತಿಯು ಆತನಲ್ಲಿತ್ತು.
Einn daginn, er hann var að kenna, sátu þar nokkrir af leiðtogum og fræðimönnum þjóðarinnar. (Þeir komu úr hverju þorpi í Galíleu og Júdeu og einnig frá Jerúsalem.) Lækningakraftur frá Guði var með Jesú þegar þetta var.
18 ೧೮ ಹೀಗಿರುವಲ್ಲಿ ಕೆಲವು ಮಂದಿ ಗಂಡಸರು ಒಬ್ಬ ಪಾರ್ಶ್ವವಾಯು ರೋಗಿಯನ್ನು ದೋಲಿಯಲ್ಲಿ ಹೊತ್ತುಕೊಂಡು ಬಂದರು. ಅವನನ್ನು ಒಳಗೆ ತೆಗೆದುಕೊಂಡು ಹೋಗಿ ಆತನ ಮುಂದೆ ಇರಿಸಬೇಕೆಂದು ಪ್ರಯತ್ನಿಸಿದರು.
Þá komu nokkrir menn og báru á milli sín lamaðan mann á dýnu. Þeir reyndu að olnboga sig í gegnum þvöguna og inn til Jesú, en án árangurs. Þá fóru þeir upp á þakið, losuðu nokkrar þakhellur og létu þann lamaða síga á dýnunni niður til Jesú.
19 ೧೯ ಜನರ ಗುಂಪು ದಟ್ಟವಾಗಿದ್ದ ಕಾರಣ ಅವನನ್ನು ಒಳಗೆ ತೆಗೆದುಕೊಂಡುಹೋಗುವ ಮಾರ್ಗವನ್ನು ಕಾಣದೆ ಮನೆಯ ಮೇಲೆ ಹತ್ತಿ ಹಂಚುಗಳನ್ನು ತೆಗೆದು ಅವನನ್ನು ಹಾಸಿಗೆಯ ಸಹಿತವಾಗಿ ಜನರ ನಡುವೆ ಯೇಸುವಿನ ಮುಂದೆ ಇಳಿಸಿದರು.
20 ೨೦ ಯೇಸು ಅವರ ನಂಬಿಕೆಯನ್ನು ನೋಡಿ, “ಸ್ನೇಹಿತನೇ, ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ” ಅಂದನು.
Þegar Jesús sá trú þeirra sagði hann við lamaða manninn: „Vinur minn, syndir þínar eru fyrirgefnar.“
21 ೨೧ ಅದಕ್ಕೆ ಆ ಶಾಸ್ತ್ರಿಗಳೂ ಮತ್ತು ಫರಿಸಾಯರೂ, “ದೇವದೂಷಣೆಯ ಮಾತನಾಡುವ ಇವನು ಎಷ್ಟರವನು? ಪಾಪಗಳನ್ನು ಕ್ಷಮಿಸಲು ದೇವರೊಬ್ಬನಿಂದ ಹೊರತು ಮತ್ತಾರಿಂದಾದೀತು?” ಎಂದು ಅಂದುಕೊಳ್ಳುತ್ತಿದ್ದರು.
„Hvað heldur maðurinn að hann sé, “sögðu farísearnir og lögvitringarnir hvorir við aðra. „Þetta er guðlast! Hver getur fyrirgefið syndir nema Guð?“
22 ೨೨ ಆದರೆ ಅವರು ಹಾಗಂದುಕೊಳ್ಳುವುದನ್ನು ಯೇಸುವು ತಿಳಿದುಕೊಂಡು ಅವರಿಗೆ, “ನೀವು ನಿಮ್ಮ ಮನಸ್ಸಿನಲ್ಲಿ ಅಂದುಕೊಳ್ಳುವುದೇನು?
Jesús vissi hvað þeir hugsuðu og svaraði: „Hvers vegna kallið þið þetta guðlast?
23 ೨೩ ಯಾವುದು ಸುಲಭ? ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ ಅನ್ನುವುದೋ? ಎದ್ದು ನಡೆ ಅನ್ನುವುದೋ?
Hvort er auðveldara að fyrirgefa syndir hans eða lækna hann?
24 ೨೪ ಆದರೆ ಪಾಪಗಳನ್ನು ಕ್ಷಮಿಸುವುದಕ್ಕೆ ಮನುಷ್ಯಕುಮಾರನಿಗೆ ಭೂಲೋಕದಲ್ಲಿ ಅಧಿಕಾರ ಉಂಟೆಂಬುದು ನಿಮಗೆ ತಿಳಿಯಬೇಕು” ಎಂದು ಹೇಳಿ, ಆ ಪಾರ್ಶ್ವವಾಯು ರೋಗಿಯನ್ನು ನೋಡಿ, “ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ಮನೆಗೆ ಹೋಗು” ಎಂದು ಹೇಳಿದನು.
Nú ætla ég að lækna hann og sanna þar með að ég hef vald til að fyrirgefa syndir.“Síðan sneri hann sér að lamaða manninum og sagði ákveðinn: „Taktu dýnuna þína og farðu heim, því nú ertu orðinn heilbrigður.“
25 ೨೫ ಕೂಡಲೆ ಅವನು ಅವರ ಮುಂದೆ ಎದ್ದು ತಾನು ಮಲಗಿದ್ದ ಹಾಸಿಗೆಯನ್ನು ಎತ್ತಿಕೊಂಡು ದೇವರನ್ನು ಕೊಂಡಾಡುತ್ತಾ ಮನೆಗೆ ಹೋದನು.
Samstundis spratt maðurinn á fætur í augsýn allra, tók dýnuna sína, gekk heimleiðis og lofaði Guð!
26 ೨೬ ನೋಡಿದವರೆಲ್ಲರೂ ಬೆರಗಾಗಿ ದೇವರನ್ನು ಕೊಂಡಾಡಿದರು ಮತ್ತು ಅವರು ಭಯ ಹಿಡಿದವರಾಗಿ, “ನಾವು ಈ ಹೊತ್ತು ಅಪೂರ್ವ ಸಂಗತಿಯನ್ನು ಕಂಡೆವು” ಅಂದರು.
Fólkið varð óttaslegið, lofaði Guð og sagði hvað eftir annað: „Við höfum séð ótrúlega hluti í dag.“
27 ೨೭ ಅನಂತರ ಯೇಸು ಹೊರಟು ಸುಂಕ ವಸೂಲಿಮಾಡುವ ಸ್ಥಳದಲ್ಲಿ ಕುಳಿತಿದ್ದ ಲೇವಿಯೆಂಬ ಒಬ್ಬ ಸುಂಕದವನನ್ನು ಕಂಡು, “ನನ್ನನ್ನು ಹಿಂಬಾಲಿಸು” ಎಂದು ಅವನನ್ನು ಕರೆಯಲು,
Síðar er Jesús var á leið út úr þessum bæ, sá hann skattheimtumann, Leví að nafni, sitja hjá skattstofunni. Það var á allra vitorði að skattheimtumenn þessir sviku fé út úr fólki. Jesús gekk til Leví og sagði: „Komdu og vertu lærisveinn minn.“
28 ೨೮ ಅವನು ಎಲ್ಲವನ್ನೂ ಬಿಟ್ಟು ಎದ್ದು ಆತನ ಹಿಂದೆ ಹೋದನು.
Leví stóð þá samstundis upp, yfirgaf allt og fylgdi Jesú.
29 ೨೯ ತರುವಾಯ ಲೇವಿಯು ತನ್ನ ಮನೆಯಲ್ಲಿ ಯೇಸುವಿಗೆ ಒಂದು ದೊಡ್ಡ ಔತಣವನ್ನು ಏರ್ಪಡಿಸಿರಲು, ಸುಂಕದವರೂ ಇತರರೂ ಗುಂಪಾಗಿ ಕೂಡಿ ಬಂದು ಅವರ ಸಂಗಡ ಊಟಕ್ಕೆ ಕುಳಿತುಕೊಂಡಿದ್ದರು.
Stuttu síðar efndi Leví til veislu og var Jesús heiðursgesturinn. Þarna voru samankomnir margir vinnufélagar Leví, svo og aðrir gestir.
30 ೩೦ ಅದನ್ನು ಕಂಡು ಫರಿಸಾಯರು ಮತ್ತು ಅವರ ಪಂಥಕ್ಕೆ ಸೇರಿದ ಶಾಸ್ತ್ರಿಗಳೂ ಆತನ ಶಿಷ್ಯರ ಮೇಲೆ ಗೊಣಗುಟ್ಟುತ್ತಾ, “ನೀವು ಸುಂಕದವರ ಮತ್ತು ಪಾಪಿಗಳ ಸಂಗಡ ಊಟಮಾಡುವುದೇಕೆ?” ಎಂದು ಕೇಳಿದರು.
Farísearnir og lögvitringarnir komu þá til lærisveina Jesú og kvörtuðu um að Jesús borðaði með slíkum stórsyndurum.
31 ೩೧ ಅದಕ್ಕೆ ಯೇಸು, “ಕ್ಷೇಮದಿಂದಿರುವವರಿಗೆ ವೈದ್ಯನು ಬೇಕಾಗಿಲ್ಲ, ಕ್ಷೇಮವಿಲ್ಲದವರಿಗೆ ಬೇಕು;
Jesús varð fyrir svörum og sagði: „Ekki þurfa heilbrigðir læknis við, heldur þeir sem sjúkir eru.
32 ೩೨ ನಾನು ನೀತಿವಂತರನ್ನಲ್ಲ, ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಿರಿ ಎಂದು ಪಾಪಿಗಳನ್ನು ಕರೆಯುವುದಕ್ಕೆ ಬಂದಿದ್ದೇನೆ” ಎಂದು ಅವರಿಗೆ ಉತ್ತರಕೊಟ್ಟನು.
Ég kom til að kalla syndara burt frá syndinni, en ekki til að eyða tíma með þeim sem þegar telja sig nógu góða.“
33 ೩೩ ಅವರು ಆತನಿಗೆ, “ಯೋಹಾನನ ಶಿಷ್ಯರು ಪದೇಪದೇ ಉಪವಾಸದಿಂದ ವಿಜ್ಞಾಪನೆಗಳನ್ನು ಮಾಡುತ್ತಾ ಇರುತ್ತಾರೆ; ಅದರಂತೆ ಫರಿಸಾಯರ ಶಿಷ್ಯರೂ ಮಾಡುತ್ತಾರೆ; ಆದರೆ ನಿನ್ನ ಶಿಷ್ಯರು ಊಟಮಾಡುತ್ತಾರೆ ಕುಡಿಯುತ್ತಾರೆ” ಎಂದು ಹೇಳಲು,
Það næsta sem þeim fannst þeir þurfa að gera athugasemd við, var að lærisveinarnir væru í veislu í stað þess að fasta. „Lærisveinar Jóhannesar skírara fasta oft og biðja, “sögðu þeir, „einnig lærisveinar faríseanna, en af hverju eru þínir alltaf étandi og drekkandi?“
34 ೩೪ ಯೇಸು ಅವರಿಗೆ, “ಮದಲಿಂಗನು ಮದುವೆಯ ಅತಿಥಿಗಳ ಸಂಗಡ ಇರುವಲ್ಲಿ ಅವರಿಗೆ ಉಪವಾಸವಿರಿಸುವುದಕ್ಕೆ ನಿಮ್ಮಿಂದಾದೀತೇ?
„Segið mér eitt, fasta menn þegar þeir halda hátíð?“sagði Jesús. „Er veislumatnum sleppt í brúðkaupsveislum?
35 ೩೫ ಆದರೆ ಮದಲಿಂಗನನ್ನು ಅವರ ಬಳಿಯಿಂದ ತೆಗೆದುಕೊಳ್ಳಲ್ಪಡುವ ಕಾಲ ಬರುತ್ತದೆ. ಆ ಕಾಲದಲ್ಲೆ ಅವರು ಉಪವಾಸಮಾಡುವರು” ಎಂದು ಉತ್ತರಕೊಟ್ಟನು.
Sá tími mun hins vegar koma er brúðguminn verður tekinn og líflátinn og þá mun þá ekki langa í mat.“
36 ೩೬ ಯೇಸು ಅವರಿಗೆ ಒಂದು ಸಾಮ್ಯವನ್ನು ಸಹ ಹೇಳಿದನು, ಅದೇನೆಂದರೆ, “ಯಾರೂ ಹೊಸ ವಸ್ತ್ರದಿಂದ ಒಂದು ತುಂಡನ್ನು ತೆಗೆದುಕೊಂಡು ಹಳೇ ವಸ್ತ್ರಕ್ಕೆ ತ್ಯಾಪೆ ಹಚ್ಚುವುದಿಲ್ಲ, ಹಚ್ಚಿದರೆ ಆ ಹೊಸದನ್ನು ಹರಿದು ಕೆಡಿಸಿದ ಹಾಗಾಗುವುದಲ್ಲದೆ, ಹೊಸದರಿಂದ ಹರಿದು ಹಚ್ಚಿದ ತ್ಯಾಪೆಯು ಹಳೆಯ ವಸ್ತ್ರಕ್ಕೆ ಒಪ್ಪುವದೂ ಇಲ್ಲ.
Jesús sagði þeim dæmisögu: „Enginn rífur pjötlu af nýjum fötum til að bæta gamla flík. Þá eyðileggjast ekki aðeins nýju fötin, heldur lítur gamla flíkin verr út en áður!
37 ೩೭ ಮತ್ತು ಹಳೇ ಬುದ್ದಲಿಗಳಲ್ಲಿ ಹೊಸ ದ್ರಾಕ್ಷಾರಸವನ್ನು ಯಾರೂ ಹಾಕಿಡುವುದಿಲ್ಲ; ಹಾಗೆ ಇಟ್ಟರೆ ಆ ಹೊಸ ದ್ರಾಕ್ಷಾರಸವು ಬುದ್ದಲಿಗಳನ್ನು ಒಡೆದು ಚೆಲ್ಲಿಹೋಗುವುದಲ್ಲದೆ ಬುದ್ದಲಿಗಳೂ ಒಡೆದು ಹೋಗುವವು.
Enginn setur nýtt vín á gamla belgi, því þá sprengir nýja vínið belgina og það fer til spillis og belgirnir eyðileggjast.
38 ೩೮ ಆದರೆ ಹೊಸ ದ್ರಾಕ್ಷಾರಸವನ್ನು ಹೊಸ ಬುದ್ದಲಿಗಳಲ್ಲಿ ಹಾಕಿಡತಕ್ಕದ್ದು.
Nýtt vín verður að láta á nýja belgi.
39 ೩೯ ಇದಲ್ಲದೆ ಹಳೇ ದ್ರಾಕ್ಷಾರಸವನ್ನು ಕುಡಿದವನು ಹೊಸದು ಬೇಕು ಅನ್ನುವುದಿಲ್ಲ, ‘ಹಳೆಯದೇ ಉತ್ತಮ’ ಅನ್ನುವನು.”
Sá sem drukkið hefur gamalt vín, hefur ekki áhuga á nýju. „Það gamla er ljúffengara segir hann.“