< ಮಲಾಕಿಯನು 1 >

1 ಯೆಹೋವನು ಇಸ್ರಾಯೇಲರ ಕುರಿತು ಮಲಾಕಿಯ ಮೂಲಕ ನುಡಿದ ದೈವೋಕ್ತಿ.
मलाकी के द्वारा इस्राएल के लिए कहा हुआ यहोवा का भारी वचन।
2 ಯೆಹೋವನು ಇಂತೆನ್ನುತ್ತಾನೆ, “ನಾನು ನಿಮ್ಮನ್ನು ಪ್ರೀತಿಸಿದ್ದೇನೆ.” ನೀವೋ “ಯಾವ ವಿಷಯದಲ್ಲಿ ನಮ್ಮನ್ನು ಪ್ರೀತಿಸಿದ್ದೀ?” ಅಂದುಕೊಳ್ಳುತ್ತೀರಲ್ಲಾ. ಏಸಾವನು ಯಾಕೋಬನ ಅಣ್ಣನಲ್ಲವೆ?
यहोवा यह कहता है, “मैंने तुम से प्रेम किया है, परन्तु तुम पूछते हो, ‘तूने हमें कैसे प्रेम किया है?’” यहोवा की यह वाणी है, “क्या एसाव याकूब का भाई न था?
3 “ಆದರೆ ನಾನು ಯಾಕೋಬನನ್ನು ಪ್ರೀತಿಸಿ, ಏಸಾವನನ್ನು ದ್ವೇಷಿಸಿ, ಅವನ ಬೆಟ್ಟಗಳನ್ನು ಹಾಳುಮಾಡಿ ಅವನ ಪಿತ್ರಾರ್ಜಿತ ಆಸ್ತಿಯನ್ನು ಕಾಡುನರಿಗಳ ಪಾಲುಮಾಡಿದ್ದೇನಷ್ಟೆ” ಇದು ಯೆಹೋವನ ನುಡಿ.
तो भी मैंने याकूब से प्रेम किया परन्तु एसाव को अप्रिय जानकर उसके पहाड़ों को उजाड़ डाला, और उसकी पैतृक भूमि को जंगल के गीदड़ों का कर दिया है।”
4 ಹೀಗಿರಲು ಎದೋಮ್ಯರು, “ನಾವು ಹಾಳಾದೆವು, ಆದರೆ ಹಾಳುಪ್ರದೇಶಗಳನ್ನು ಮತ್ತೆ ಕಟ್ಟುವೆವು” ಅಂದುಕೊಂಡರೆ ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಅವರು ಕಟ್ಟಿದರೂ ನಾನು ಕೆಡವಿಹಾಕುವೆನು; ಅವರು ದುಷ್ಟ ಕೇಡಿಗರು, ಯೆಹೋವನ ನಿತ್ಯ ಕೋಪಕ್ಕೆ ಗುರಿಯಾದ ಜನರೂ ಅನ್ನಿಸಿಕೊಳ್ಳುವರು.
एदोम कहता है, “हमारा देश उजड़ गया है, परन्तु हम खण्डहरों को फिर बनाएँगे;” सेनाओं का यहोवा यह कहता है, “यदि वे बनाएँ भी, परन्तु मैं ढा दूँगा; उनका नाम दुष्ट जाति पड़ेगा, और वे ऐसे लोग कहलाएँगे जिन पर यहोवा सदैव क्रोधित रहे।”
5 ನೀವೇ ಇದನ್ನು ಕಣ್ಣಾರೆ ಕಂಡು ಯೆಹೋವನು ಇಸ್ರಾಯೇಲಿನ ಮೇರೆಯ ಆಚೆಯೂ, ‘ಮಹಾ ಮಹಿಮೆಯುಳ್ಳವನು’” ಅಂದುಕೊಳ್ಳುವಿರಿ.
तुम्हारी आँखें इसे देखेंगी, और तुम कहोगे, “यहोवा का प्रताप इस्राएल की सीमा से आगे भी बढ़ता जाए।”
6 “ನನ್ನ ನಾಮವನ್ನು ಧಿಕ್ಕರಿಸುವ ಯಾಜಕರೇ, ಮಗನು ತಂದೆಗೆ ಸನ್ಮಾನ ಸಲ್ಲಿಸುತ್ತಾನಲ್ಲಾ, ಆಳು ಧಣಿಗೆ ಭಯಭಕ್ತಿ ತೋರಿಸುತ್ತಾನಷ್ಟೇ; ನಾನು ತಂದೆಯಾಗಿರಲು ನನಗೆ ಸಲ್ಲುವ ಸನ್ಮಾನವೆಲ್ಲಿ? ನಾನು ದಣಿಯಾಗಿರಲು ನನಗೆ ತೋರಿಸುವ ಭಯಭಕ್ತಿಯೆಲ್ಲಿ?” ಎಂದು ಸೇನಾಧೀಶ್ವರನಾದ ಯೆಹೋವನು ನಿಮಗೇ ನುಡಿಯುತ್ತಾನೆ. ಆದರೆ ನೀವು, “ಯಾವ ವಿಷಯದಲ್ಲಿ ನಿನ್ನ ನಾಮವನ್ನು ಧಿಕ್ಕರಿಸಿದ್ದೇವೆ?” ಅನ್ನುತ್ತೀರಿ.
“पुत्र पिता का, और दास स्वामी का आदर करता है। यदि मैं पिता हूँ, तो मेरा आदर मानना कहाँ है? और यदि मैं स्वामी हूँ, तो मेरा भय मानना कहाँ? सेनाओं का यहोवा, तुम याजकों से भी जो मेरे नाम का अपमान करते हो यही बात पूछता है। परन्तु तुम पूछते हो, ‘हमने किस बात में तेरे नाम का अपमान किया है?’
7 ನನ್ನ ಯಜ್ಞವೇದಿಯ ಮೇಲೆ ಅಶುದ್ಧ ಪದಾರ್ಥಗಳನ್ನು ಅರ್ಪಿಸುತ್ತೀರಲ್ಲಾ. “ಯಾವ ವಿಷಯದಲ್ಲಿ ಅಶುದ್ಧಗೊಳಿಸಿದ್ದೇವೆ?” ಅನ್ನುತ್ತೀರಿ. “ಯೆಹೋವನ ಮೇಜಿಗೆ ಘನತೆಯೇನಿದೆ?” ಎಂದು ನೀವು ಅಂದುಕೊಳ್ಳುವುದರಲ್ಲಿಯೇ ಇದೆ.
तुम मेरी वेदी पर अशुद्ध भोजन चढ़ाते हो। तो भी तुम पूछते हो, ‘हम किस बात में तुझे अशुद्ध ठहराते हैं?’ इस बात में भी, कि तुम कहते हो, ‘यहोवा की मेज तुच्छ है।’
8 ಕುರುಡಾದ ಪಶುವನ್ನು ಯಜ್ಞಕ್ಕೆ ಒಪ್ಪಿಸುವುದು ದೋಷವಲ್ಲವೆಂದು ನೆನಸುತ್ತೀರೋ? ಕುಂಟಾದದ್ದನ್ನೂ, ರೋಗದ ಪಶುವನ್ನೂ ಅರ್ಪಿಸುವುದು ದೋಷವಲ್ಲವೆಂದು ನಂಬುತ್ತೀರೋ? ಇಂಥದ್ದನ್ನು ನಿನ್ನ ದೇಶಾಧಿಪತಿಗೆ ಒಪ್ಪಿಸು; ನಿನಗೆ ಮೆಚ್ಚುಗೆ ವ್ಯಕ್ತಪಡಿಸುವನೋ? ನಿಮ್ಮ ಕೋರಿಕೆಯನ್ನು ನೆರವೇರಿಸುವನೋ? ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ,
जब तुम अंधे पशु को बलि करने के लिये समीप ले आते हो तो क्या यह बुरा नहीं? और जब तुम लँगड़े या रोगी पशु को ले आते हो, तो क्या यह बुरा नहीं? अपने हाकिम के पास ऐसी भेंट ले जाओ; क्या वह तुम से प्रसन्न होगा या तुम पर अनुग्रह करेगा? सेनाओं के यहोवा का यही वचन है।
9 “ಹಾಗಾದರೆ ದೇವರ ದಯೆ ದೊರೆಯುವ ಹಾಗೆ ದೇವರನ್ನು ಬೇಡಿಕೊಳ್ಳಿರಿ; ಆಹಾ, ಇದೇ ನಿಮ್ಮ ಕೈಯ ಕಾಣಿಕೆ; ನಿಮ್ಮಲ್ಲಿ ಯಾರಿಗಾದರೂ ಆತನು ಪ್ರಸನ್ನನಾಗುವನೋ?” ಇದು ಸೇನಾಧೀಶ್ವರನಾದ ಯೆಹೋವನ ನುಡಿ.
“अब मैं तुम से कहता हूँ, परमेश्वर से प्रार्थना करो कि वह हम लोगों पर अनुग्रह करे। यह तुम्हारे हाथ से हुआ है; तब क्या तुम समझते हो कि परमेश्वर तुम में से किसी का पक्ष करेगा? सेनाओं के यहोवा का यही वचन है।
10 ೧೦ “ನನ್ನ ಯಜ್ಞವೇದಿಯ ಮೇಲೆ ಯಾರೂ ಬೆಂಕಿಯನ್ನು ವ್ಯರ್ಥವಾಗಿ ಉರಿಸದಂತೆ ನಿಮ್ಮಲ್ಲೊಬ್ಬನು ದೇವಾಲಯದ ಬಾಗಿಲುಗಳನ್ನು ಮುಚ್ಚಿಬಿಟ್ಟರೆ ಎಷ್ಟೋ ಒಳ್ಳೆಯದು! ನಾನು ನಿಮ್ಮನ್ನು ಮೆಚ್ಚೆನು, ನಿಮ್ಮ ಕೈಯಿಂದ ನೈವೇದ್ಯವನ್ನು ಸ್ವೀಕರಿಸೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.
१०भला होता कि तुम में से कोई मन्दिर के किवाड़ों को बन्द करता कि तुम मेरी वेदी पर व्यर्थ आग जलाने न पाते! सेनाओं के यहोवा का यह वचन है, मैं तुम से कदापि प्रसन्न नहीं हूँ, और न तुम्हारे हाथ से भेंट ग्रहण करूँगा।
11 ೧೧ “ಸೂರ್ಯನು ಮೂಡುವ ದಿಕ್ಕಿನಿಂದ ಮುಳುಗುವ ದಿಕ್ಕಿನವರೆಗೂ ನನ್ನ ನಾಮವು ಅನ್ಯಜನಾಂಗಗಳಲ್ಲಿ ಘನವಾಗಿದೆ; ಒಂದೊಂದು ಸ್ಥಳದಲ್ಲಿಯೂ ನನ್ನ ನಾಮಕ್ಕೆ ಧೂಪವನ್ನು ಶುದ್ಧ ನೈವೇದ್ಯವನ್ನೂ ಅರ್ಪಿಸುತ್ತಾರೆ. ಹೌದು, ಅನ್ಯ ಜನಾಂಗಗಳಲ್ಲಿಯೇ ನನ್ನ ನಾಮವು ಬಹು ಮಾನ್ಯವಾಗಿದೆ.” ಇದು ಸೇನಾಧೀಶ್ವರನಾದ ಯೆಹೋವನ ನುಡಿ.
११क्योंकि उदयाचल से लेकर अस्ताचल तक अन्यजातियों में मेरा नाम महान है, और हर कहीं मेरे नाम पर धूप और शुद्ध भेंट चढ़ाई जाती है; क्योंकि अन्यजातियों में मेरा नाम महान है, सेनाओं के यहोवा का यही वचन है।
12 ೧೨ ನೀವೋ, “ಯೆಹೋವನ ಮೇಜು ಅಶುದ್ಧ, ಅದರ ಮೇಲಣ ನೈವೇದ್ಯ ಅಸಹ್ಯ ಅಂದುಕೊಳ್ಳುವುದರಿಂದ ನನ್ನ ನಾಮವನ್ನು ಅಪಕೀರ್ತಿಗೆ ಗುರಿಮಾಡಿದ್ದೀರಿ.
१२परन्तु तुम लोग उसको यह कहकर अपवित्र ठहराते हो कि यहोवा की मेज अशुद्ध है, और जो भोजनवस्तु उस पर से मिलती है वह भी तुच्छ है।
13 ೧೩ ಅಯ್ಯೋ, ಈ ಸೇವೆಯು ಎಷ್ಟೋ ಬೇಸರವೆಂದು ನೀವು ಅಂದುಕೊಂಡು ಅದನ್ನು ತಾತ್ಸಾರ ಮಾಡುತ್ತೀರಿ” ಇದು ಸೇನಾಧೀಶ್ವರನಾದ ಯೆಹೋವನ ನುಡಿ. “ಕಳವಾದ ಪಶುವನ್ನೂ, ಊನವಾದದ್ದನ್ನೂ, ರೋಗ ಹಿಡಿದ ಪ್ರಾಣಿಯನ್ನು ತಂದೊಪ್ಪಿಸುತ್ತೀರಿ. ನಾನು ನಿಮ್ಮ ಕೈಯಿಂದ ಸ್ವೀಕರಿಸುವುದಿಲ್ಲ” ಇದು ಯೆಹೋವನ ನುಡಿ.
१३फिर तुम यह भी कहते हो, ‘यह कैसा बड़ा उपद्रव है!’ सेनाओं के यहोवा का यह वचन है। तुम ने उस भोजनवस्तु के प्रति नाक भौं सिकोड़ी, और अत्याचार से प्राप्त किए हुए और लँगड़े और रोगी पशु की भेंट ले आते हो! क्या मैं ऐसी भेंट तुम्हारे हाथ से ग्रहण करूँ? यहोवा का यही वचन है।
14 ೧೪ “ಒಬ್ಬನು ಹರಕೆ ಹೊತ್ತು ತನ್ನ ಹಿಂಡಿನಲ್ಲಿರುವ ಗಂಡುಪಶು ಹಾಗೂ ಕಳಂಕವಾದ ಪಶುವನ್ನು ಯೆಹೋವನಿಗೆ ಯಜ್ಞಮಾಡಿದರೆ ಆ ಮೋಸಗಾರನಿಗೆ ಶಾಪವು ತಟ್ಟಲಿ; ನಾನು ರಾಜಾಧಿರಾಜ, ನನ್ನ ನಾಮವು ಅನ್ಯಜನಾಂಗಗಳ ಭಯಭಕ್ತಿಗೆ ಪಾತ್ರವಾಗಿದೆ” ಇದು ಸೇನಾಧೀಶ್ವರನಾದ ಯೆಹೋವನ ನುಡಿ.
१४जिस छली के झुण्ड में नरपशु हो परन्तु वह मन्नत मानकर परमेश्वर को वर्जित पशु चढ़ाए, वह श्रापित है; मैं तो महाराजा हूँ, और मेरा नाम अन्यजातियों में भययोग्य है, सेनाओं के यहोवा का यही वचन है।

< ಮಲಾಕಿಯನು 1 >