< ಮಲಾಕಿಯನು 3 >

1 “ಇಗೋ, ನನ್ನ ದೂತನನ್ನು ಕಳುಹಿಸುತ್ತೇನೆ, ಆತನು ನನ್ನ ಮುಂದೆ ದಾರಿಯನ್ನು ಸರಿಮಾಡುವನು; ನೀವು ಹಂಬಲಿಸುವ ಕರ್ತನು ತನ್ನ ಆಲಯಕ್ಕೆ ಪಕ್ಕನೇ ಬರುವನು; ಆಹಾ, ನಿಮಗೆ ಇಷ್ಟನಾದ ಒಡಂಬಡಿಕೆಯ ದೂತನು ಬರುತ್ತಾನೆ” ಇದು ಸೇನಾಧೀಶ್ವರನಾದ ಯೆಹೋವನ ನುಡಿ.
הִנְנִ֤י שֹׁלֵחַ֙ מַלְאָכִ֔י וּפִנָּה־דֶ֖רֶךְ לְפָנָ֑י וּפִתְאֹם֩ יָב֨וֹא אֶל־הֵיכָל֜וֹ הָאָד֣וֹן ׀ אֲשֶׁר־אַתֶּ֣ם מְבַקְשִׁ֗ים וּמַלְאַ֨ךְ הַבְּרִ֜ית אֲשֶׁר־אַתֶּ֤ם חֲפֵצִים֙ הִנֵּה־בָ֔א אָמַ֖ר יְהוָ֥ה צְבָאֽוֹת׃
2 ಆತನು ಬರುವ ದಿನವನ್ನು ಯಾರು ತಾಳಾರು? ಆತನು ಕಾಣಿಸಿಕೊಳ್ಳುವಾಗ ಯಾರು ನಿಂತಾರು? ಆತನು ಅಕ್ಕಸಾಲಿಗನ ಬೆಂಕಿಗೂ, ಅಗಸನ ಸಾಬೂನಿಗೂ ಸಮಾನನಾಗಿದ್ದಾನೆ.
וּמִ֤י מְכַלְכֵּל֙ אֶת־י֣וֹם בּוֹא֔וֹ וּמִ֥י הָעֹמֵ֖ד בְּהֵרָֽאוֹת֑וֹ כִּֽי־הוּא֙ כְּאֵ֣שׁ מְצָרֵ֔ף וּכְבֹרִ֖ית מְכַבְּסִֽים׃
3 ಬೆಳ್ಳಿಯನ್ನು ಶೋಧಿಸುವ ಅಕ್ಕಸಾಲಿಗನಂತೆ ಕುಳಿತು ಲೇವಿ ವಂಶದವರನ್ನು ಶೋಧಿಸಿ ಬೆಳ್ಳಿಬಂಗಾರಗಳನ್ನೋ ಎಂಬಂತೆ ಶುದ್ಧೀಕರಿಸುವನು; ಅವರು ಸದ್ಧರ್ಮಿಗಳಾಗಿ ಯೆಹೋವನಿಗೆ ನೈವೇದ್ಯಗಳನ್ನು ತಂದೊಪ್ಪಿಸುವರು.
וְיָשַׁ֨ב מְצָרֵ֤ף וּמְטַהֵר֙ כֶּ֔סֶף וְטִהַ֤ר אֶת־בְּנֵֽי־לֵוִי֙ וְזִקַּ֣ק אֹתָ֔ם כַּזָּהָ֖ב וְכַכָּ֑סֶף וְהָיוּ֙ לַֽיהוָ֔ה מַגִּישֵׁ֥י מִנְחָ֖ה בִּצְדָקָֽה׃
4 ಆಗ ಯೆಹೂದದ ಮತ್ತು ಯೆರೂಸಲೇಮಿನ ನೈವೇದ್ಯವು, ಪೂರ್ವದಿನಗಳಲ್ಲಿ ಪುರಾತನ ಕಾಲದಲ್ಲಿ ಯೆಹೋವನಿಗೆ ಮೆಚ್ಚಿಕೆಯಾದಂತೆ ಆಗಿರುವುದು.
וְעָֽרְבָה֙ לַֽיהוָ֔ה מִנְחַ֥ת יְהוּדָ֖ה וִירֽוּשָׁלִָ֑ם כִּימֵ֣י עוֹלָ֔ם וּכְשָׁנִ֖ים קַדְמֹנִיּֽוֹת׃
5 “ನಾನು ನ್ಯಾಯತೀರಿಸುವುದಕ್ಕೆ ನಿಮ್ಮ ಬಳಿಗೆ ಬರುವೆನು; ಮಾಟಗಾರನು, ವ್ಯಭಿಚಾರಿಯೂ, ಸುಳ್ಳುಸಾಕ್ಷಿ ಹೇಳುವವನು, ಕೂಲಿ ಹಿಡಿದು ಕೂಲಿಯವನನ್ನು ಮೋಸಪಡಿಸುವವನು, ವಿಧವೆಯರನ್ನು ಮತ್ತು ಅನಾಥರನ್ನೂ ಬಾಧಿಸುವವನು, ವಿದೇಶಿಯ ನ್ಯಾಯತಪ್ಪಿಸುವವನು ಅಂತು ನನಗೆ ಹೆದರದಿರುವ ಇವರೆಲ್ಲರಿಗೆ ವಿರುದ್ಧವಾಗಿ ನಾನು ಶೀಘ್ರವಾಗಿ ನ್ಯಾಯತೀರಿಸಿ ಸಾಕ್ಷಿಯಾಗಿರುವೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.
וְקָרַבְתִּ֣י אֲלֵיכֶם֮ לַמִּשְׁפָּט֒ וְהָיִ֣יתִי ׀ עֵ֣ד מְמַהֵ֗ר בַּֽמְכַשְּׁפִים֙ וּבַמְנָ֣אֲפִ֔ים וּבַנִּשְׁבָּעִ֖ים לַשָּׁ֑קֶר וּבְעֹשְׁקֵ֣י שְׂכַר־שָׂ֠כִיר אַלְמָנָ֨ה וְיָת֤וֹם וּמַטֵּי־גֵר֙ וְלֹ֣א יְרֵא֔וּנִי אָמַ֖ר יְהוָ֥ה צְבָאֽוֹת׃
6 “ಆದರೂ ಯೆಹೋವನಾದ ನಾನು ಮಾರ್ಪಟ್ಟಿಲ್ಲ. ಆದುದರಿಂದ ಯಾಕೋಬ ಸಂತತಿಯವರೇ ನೀವು ಅಳಿಯದೆ ಉಳಿದಿದ್ದೀರಿ.”
כִּ֛י אֲנִ֥י יְהוָ֖ה לֹ֣א שָׁנִ֑יתִי וְאַתֶּ֥ם בְּנֵֽי־יַעֲקֹ֖ב לֹ֥א כְלִיתֶֽם׃
7 “ನಿಮ್ಮ ಪೂರ್ವಿಕರ ಕಾಲದಿಂದಲೂ ನೀವು ನನ್ನ ವಿಧಿಗಳನ್ನು ಅನುಸರಿಸಿ ನಡೆಯಲ್ಲಿಲ್ಲ. ನನ್ನ ಕಡೆಗೆ ಪುನಃ ತಿರುಗಿರಿ; ತಿರುಗಿದರೆ, ನಾನು ನಿಮ್ಮ ಕಡೆಗೆ ಪುನಃ ತಿರುಗುವೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ. “ಯಾವ ವಿಷಯದಲ್ಲಿ ತಿರುಗೋಣ?” ಎನ್ನುತ್ತೀರಿ.
לְמִימֵ֨י אֲבֹתֵיכֶ֜ם סַרְתֶּ֤ם מֵֽחֻקַּי֙ וְלֹ֣א שְׁמַרְתֶּ֔ם שׁ֤וּבוּ אֵלַי֙ וְאָשׁ֣וּבָה אֲלֵיכֶ֔ם אָמַ֖ר יְהוָ֣ה צְבָא֑וֹת וַאֲמַרְתֶּ֖ם בַּמֶּ֥ה נָשֽׁוּב׃
8 “ನರಮನುಷ್ಯನು ದೇವರಿಂದ ಕದ್ದುಕೊಳ್ಳಬಹುದೇ? ನೀವೋ ನನ್ನಿಂದ ಕದ್ದುಕೊಳ್ಳುತ್ತಿದ್ದೀರಿ. ‘ನಿನ್ನಿಂದ ಏನು ಕದ್ದುಕೊಂಡಿದ್ದೇವೆ?’ ಎಂದು ಕೇಳುತ್ತೀರೋ. ದಶಮಾಂಶವನ್ನು, ನನಗೋಸ್ಕರ ಪ್ರತ್ಯೇಕಿಸಬೇಕಾದ ಪದಾರ್ಥ, ಇವುಗಳನ್ನೇ.
הֲיִקְבַּ֨ע אָדָ֜ם אֱלֹהִ֗ים כִּ֤י אַתֶּם֙ קֹבְעִ֣ים אֹתִ֔י וַאֲמַרְתֶּ֖ם בַּמֶּ֣ה קְבַעֲנ֑וּךָ הַֽמַּעֲשֵׂ֖ר וְהַתְּרוּמָֽה׃
9 ನೀವು ಅಂದರೆ ಈ ಜನಾಂಗದವರೆಲ್ಲಾ ನನ್ನಿಂದ ಕದ್ದುಕೊಳ್ಳುವವರಾದ ಕಾರಣ ಶಾಪಗ್ರಸ್ತರಾಗಿದ್ದೀರಿ.
בַּמְּאֵרָה֙ אַתֶּ֣ם נֵֽאָרִ֔ים וְאֹתִ֖י אַתֶּ֣ם קֹבְעִ֑ים הַגּ֖וֹי כֻּלּֽוֹ׃
10 ೧೦ ನನ್ನ ಆಲಯವು ಆಹಾರದ ಕೊರತೆಯಿಲ್ಲದಂತೆ ನೀವು ದಶಮಾಂಶವನ್ನು ಯಾವಾಗಲೂ ಭಂಡಾರಕ್ಕೆ ತೆಗೆದುಕೊಂಡು ಬನ್ನಿರಿ; ನಾನು ಪರಲೋಕದ ದ್ವಾರಗಳನ್ನು ತೆರೆದು ನಿಮ್ಮಲ್ಲಿ ಸ್ಥಳಹಿಡಿಯಲಾಗದಷ್ಟು ಸುವರಗಳನ್ನು ಸುರಿಯುವೆನೋ ಇಲ್ಲವೋ ಎಂದು ಯೆಹೋವನಾದ ನನ್ನನ್ನು ಹೀಗೆ ಪರೀಕ್ಷಿಸಿರಿ.
הָבִ֨יאוּ אֶת־כָּל־הַֽמַּעֲשֵׂ֜ר אֶל־בֵּ֣ית הָאוֹצָ֗ר וִיהִ֥י טֶ֙רֶף֙ בְּבֵיתִ֔י וּבְחָנ֤וּנִי נָא֙ בָּזֹ֔את אָמַ֖ר יְהוָ֣ה צְבָא֑וֹת אִם־לֹ֧א אֶפְתַּ֣ח לָכֶ֗ם אֵ֚ת אֲרֻבּ֣וֹת הַשָּׁמַ֔יִם וַהֲרִיקֹתִ֥י לָכֶ֛ם בְּרָכָ֖ה עַד־בְּלִי־דָֽי׃
11 ೧೧ ನುಂಗುವ ಹುಳವನ್ನು ನಾನು ನಿಮಗಾಗಿ ತಡೆಯುವೆನು. ಅದು ನಿಮ್ಮ ಭೂಮಿಯ ಫಲವನ್ನು ನಾಶಮಾಡದು; ನಿಮ್ಮ ದ್ರಾಕ್ಷಿಯಹಣ್ಣು ತೋಟದಲ್ಲಿ ಉದುರಿಹೋಗದು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.
וְגָעַרְתִּ֤י לָכֶם֙ בָּֽאֹכֵ֔ל וְלֹֽא־יַשְׁחִ֥ת לָכֶ֖ם אֶת־פְּרִ֣י הָאֲדָמָ֑ה וְלֹא־תְשַׁכֵּ֨ל לָכֶ֤ם הַגֶּ֙פֶן֙ בַּשָּׂדֶ֔ה אָמַ֖ר יְהוָ֥ה צְבָאֽוֹת׃
12 ೧೨ “ಆಗ ಸಕಲ ಜನಾಂಗಗಳವರು ನಿಮ್ಮನ್ನು ಧನ್ಯರೆಂದು ಕೊಂಡಾಡುವರು; ನಿಮ್ಮ ದೇಶವು ಆನಂದವಾಗಿರುವುದು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.
וְאִשְּׁר֥וּ אֶתְכֶ֖ם כָּל־הַגּוֹיִ֑ם כִּֽי־תִהְי֤וּ אַתֶּם֙ אֶ֣רֶץ חֵ֔פֶץ אָמַ֖ר יְהוָ֥ה צְבָאֽוֹת׃ ס
13 ೧೩ “ನೀವು ನನಗೆ ವಿರುದ್ಧವಾಗಿ ಆಡಿದ ಮಾತುಗಳು ಬಹಳ ಕಠಿಣ” ಎಂದು ಯೆಹೋವನು ಅನ್ನುತ್ತಾನೆ. “ನಿನಗೆ ವಿರುದ್ಧವಾಗಿ ಏನು ಮಾಡಿದ್ದೇವೆ?” ಅನ್ನುತ್ತೀರಾ?
חָזְק֥וּ עָלַ֛י דִּבְרֵיכֶ֖ם אָמַ֣ר יְהוָ֑ה וַאֲמַרְתֶּ֕ם מַה־נִּדְבַּ֖רְנוּ עָלֶֽיךָ׃
14 ೧೪ ನೀವು “ದೇವರನ್ನು ಸೇವಿಸುವುದು ವ್ಯರ್ಥ; ನಾವು ಆತನ ನಿಯಮವನ್ನು ಅನುಸರಿಸಿ ಸೇನಾಧೀಶ್ವರನಾದ ಯೆಹೋವನ ಮುಂದೆ ದುಃಖದಿಂದ ವಿಕಾರಿಗಳಾಗಿ ನಡೆದುಕೊಂಡದ್ದರಿಂದ ಆದ ಲಾಭವೇನು?
אֲמַרְתֶּ֕ם שָׁ֖וְא עֲבֹ֣ד אֱלֹהִ֑ים וּמַה־בֶּ֗צַע כִּ֤י שָׁמַ֙רְנוּ֙ מִשְׁמַרְתּ֔וֹ וְכִ֤י הָלַ֙כְנוּ֙ קְדֹ֣רַנִּ֔ית מִפְּנֵ֖י יְהוָ֥ה צְבָאֽוֹת׃
15 ೧೫ ಈಗ ಅಹಂಕಾರಿಗಳನ್ನು ಭಾಗ್ಯವಂತರೆಂದು ಕೊಂಡಾಡಬೇಕಾಗಿ ಬಂತು; ಹೌದು, ದುಷ್ಕರ್ಮಿಗಳು ಏಳಿಗೆಗೆ ಬಂದಿದ್ದಾರೆ, ದೇವರನ್ನು ಪರೀಕ್ಷಿಸಿದರೂ ಸುರಕ್ಷಿತರಾಗಿದ್ದಾರೆ” ಅಂದುಕೊಂಡಿದ್ದೀರಲ್ಲಾ.
וְעַתָּ֕ה אֲנַ֖חְנוּ מְאַשְּׁרִ֣ים זֵדִ֑ים גַּם־נִבְנוּ֙ עֹשֵׂ֣י רִשְׁעָ֔ה גַּ֧ם בָּחֲנ֛וּ אֱלֹהִ֖ים וַיִּמָּלֵֽטוּ׃
16 ೧೬ ಇಂಥಾ ಮಾತುಗಳನ್ನು ಕೇಳಿ ಯೆಹೋವನ ಭಕ್ತರು ಒಬ್ಬರಿಗೊಬ್ಬರು ಮಾತನಾಡಿಕೊಳ್ಳಲು, ಯೆಹೋವನು ಕಿವಿಗೊಟ್ಟು ಆಲಿಸಿ ಭಯಭಕ್ತಿಯಿಂದ ತನ್ನ ನಾಮ ಸ್ಮರಣೆ ಮಾಡುವವರ ಹೆಸರುಗಳನ್ನು ತನ್ನ ಮುಂದೆ ಜ್ಞಾಪಕದ ಪುಸ್ತಕದಲ್ಲಿ ಬರೆಯಿಸಿದನು.
אָ֧ז נִדְבְּר֛וּ יִרְאֵ֥י יְהוָ֖ה אִ֣ישׁ אֶת־רֵעֵ֑הוּ וַיַּקְשֵׁ֤ב יְהוָה֙ וַיִּשְׁמָ֔ע וַ֠יִּכָּתֵב סֵ֣פֶר זִכָּר֤וֹן לְפָנָיו֙ לְיִרְאֵ֣י יְהוָ֔ה וּלְחֹשְׁבֵ֖י שְׁמֽוֹ׃
17 ೧೭ ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ನಾನು ಕಾರ್ಯಸಾಧಿಸುವ ದಿನದಲ್ಲಿ ಅವರು ನನಗೆ ಸ್ವಕೀಯ ಜನರಾಗಿರುವರು; ಒಬ್ಬನು ತನ್ನನ್ನು ಸೇವಿಸುವ ಸ್ವಂತ ಮಗನನ್ನು ಕರುಣಿಸುವಂತೆ ನಾನು ಅವರನ್ನು ಕರುಣಿಸುವೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.
וְהָ֣יוּ לִ֗י אָמַר֙ יְהוָ֣ה צְבָא֔וֹת לַיּ֕וֹם אֲשֶׁ֥ר אֲנִ֖י עֹשֶׂ֣ה סְגֻלָּ֑ה וְחָמַלְתִּ֣י עֲלֵיהֶ֔ם כַּֽאֲשֶׁר֙ יַחְמֹ֣ל אִ֔ישׁ עַל־בְּנ֖וֹ הָעֹבֵ֥ד אֹתֽוֹ׃
18 ೧೮ ಆಗ ಶಿಷ್ಟರಿಗೂ, ದುಷ್ಟರಿಗೂ, ದೇವರನ್ನು ಸೇವಿಸುವವರಿಗೂ, ಸೇವಿಸದೇ ಇರುವವರಿಗೂ ಇರುವ ವ್ಯತ್ಯಾಸವನ್ನು ಮತ್ತೆ ಕಾಣುವಿರಿ.
וְשַׁבְתֶּם֙ וּרְאִיתֶ֔ם בֵּ֥ין צַדִּ֖יק לְרָשָׁ֑ע בֵּ֚ין עֹבֵ֣ד אֱלֹהִ֔ים לַאֲשֶׁ֖ר לֹ֥א עֲבָדֽוֹ׃ ס

< ಮಲಾಕಿಯನು 3 >