< ಮಲಾಕಿಯನು 4 >
1 ೧ “ಇಗೋ, ಯೆಹೋವನ ದಿನವು ಬರುತ್ತಿದೆ, ಒಲೆಯಂತೆ ಉರಿಯುತ್ತಿದೆ; ಸಕಲ ಅಹಂಕಾರಿಗಳೂ, ದುಷ್ಕರ್ಮಿಗಳೂ ಒಣಹುಲ್ಲಿನಂತೆ ಇರುವರು. ಬರುತ್ತಿರುವ ಆ ದಿನವು ಅವರಿಗೆ ಅಗ್ನಿಪ್ರಳಯವಾಗುವುದು. ಬುಡ, ರೆಂಬೆಗಳಾವುದನ್ನೂ ಉಳಿಸದು.
Ordular Rəbbi deyir: «Budur, soba kimi yanan o gün gəlir. Bütün məğrurlar və pislik edənlər saman kimi olacaq. Gələn o gün onları yandıracaq. Onlardan nə kök, nə də budaq qalacaq.
2 ೨ ನನ್ನ ನಾಮದಲ್ಲಿ ಭಯಭಕ್ತಿಯಿಟ್ಟಿರುವ ನಿಮಗೋ ದೇವರ ಧರ್ಮವೆಂಬ ಸೂರ್ಯನು ಸ್ವಸ್ಥತೆಯನ್ನುಂಟುಮಾಡುವ ಕಿರಣಗಳುಳ್ಳವನಾಗಿ ಮೂಡುವನು; ಕೊಟ್ಟಿಗೆಯಿಂದ ಬಿಟ್ಟ ಕರುಗಳಂತೆ ನೀವು ಹೊರಟು ಬಂದು ಕುಣಿದಾಡುವಿರಿ; ದುಷ್ಟರನ್ನು ತುಳಿದುಬಿಡುವಿರಿ.
Ancaq adıma hörmət edən sizlər üçün şüalarında şəfa olan salehlik günəşi doğacaq. Tövlədən buraxılan danalar kimi oynayacaqsınız.
3 ೩ ನಾನು ಕಾರ್ಯಸಾಧಿಸುವ ದಿನದಲ್ಲಿ ಅಧರ್ಮಿಗಳು ನಿಮ್ಮ ಅಂಗಾಲುಗಳ ಕೆಳಗೆ ಬೂದಿಯಾಗಿ ಬಿದ್ದಿರುವರು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.
Pis adamları tapdalayacaqsınız. Bu işləri etdiyim gün onlar sizin ayağınızın altında kül olacaq» deyir Ordular Rəbbi.
4 ೪ “ನನ್ನ ಸೇವಕನಾದ ಮೋಶೆಯ ಧರ್ಮಶಾಸ್ತ್ರವನ್ನು ಅಂದರೆ, ನಾನು ಹೋರೇಬ್ ಬೆಟ್ಟದಲ್ಲಿ ಎಲ್ಲಾ ಇಸ್ರಾಯೇಲರಿಗಾಗಿ ಮೋಶೆಗೆ ನೇಮಿಸಿದ ನಿಯಮವಿಧಿಗಳನ್ನು ಜ್ಞಾಪಕಮಾಡಿಕೊಳ್ಳಿರಿ.
«Qulum Musanın qanununu – Xorevdə olarkən bütün İsrail üçün ona verdiyim qaydaları və hökmləri yadda saxlayın.
5 ೫ ನಾನು ಬಂದು ದೇಶವನ್ನು ಶಾಪದಿಂದ ಹತಮಾಡದಂತೆ ಯೆಹೋವನ ಆಗಮನದ ಭಯಂಕರವಾದ ಮಹಾದಿನವು ಬರುವುದಕ್ಕೆ ಮೊದಲೇ ಪ್ರವಾದಿಯಾದ ಎಲೀಯನನ್ನು ನಿಮ್ಮ ಬಳಿಗೆ ಕಳುಹಿಸುವೆನು;
Rəbbin böyük və dəhşətli günü gəlməzdən qabaq İlyas peyğəmbəri sizin yanınıza göndərəcəyəm.
6 ೬ ಅವನು ತಂದೆಗಳ ಮನಸ್ಸನ್ನು ಮಕ್ಕಳ ಕಡೆಗೂ, ಮಕ್ಕಳ ಮನಸ್ಸನ್ನು ತಂದೆಗಳ ಕಡೆಗೂ ತಿರುಗಿಸುವನು.”
O, ataların ürəklərini oğullarına, oğullarının ürəklərini isə atalarına tərəf döndərəcək ki, daha Mən gəlib ölkəni lənətləyib məhv etməyim».