< ಮಲಾಕಿಯನು 4 >

1 “ಇಗೋ, ಯೆಹೋವನ ದಿನವು ಬರುತ್ತಿದೆ, ಒಲೆಯಂತೆ ಉರಿಯುತ್ತಿದೆ; ಸಕಲ ಅಹಂಕಾರಿಗಳೂ, ದುಷ್ಕರ್ಮಿಗಳೂ ಒಣಹುಲ್ಲಿನಂತೆ ಇರುವರು. ಬರುತ್ತಿರುವ ಆ ದಿನವು ಅವರಿಗೆ ಅಗ್ನಿಪ್ರಳಯವಾಗುವುದು. ಬುಡ, ರೆಂಬೆಗಳಾವುದನ್ನೂ ಉಳಿಸದು.
万軍の主は言われる、見よ、炉のように燃える日が来る。その時すべて高ぶる者と、悪を行う者とは、わらのようになる。その来る日は、彼らを焼き尽して、根も枝も残さない。
2 ನನ್ನ ನಾಮದಲ್ಲಿ ಭಯಭಕ್ತಿಯಿಟ್ಟಿರುವ ನಿಮಗೋ ದೇವರ ಧರ್ಮವೆಂಬ ಸೂರ್ಯನು ಸ್ವಸ್ಥತೆಯನ್ನುಂಟುಮಾಡುವ ಕಿರಣಗಳುಳ್ಳವನಾಗಿ ಮೂಡುವನು; ಕೊಟ್ಟಿಗೆಯಿಂದ ಬಿಟ್ಟ ಕರುಗಳಂತೆ ನೀವು ಹೊರಟು ಬಂದು ಕುಣಿದಾಡುವಿರಿ; ದುಷ್ಟರನ್ನು ತುಳಿದುಬಿಡುವಿರಿ.
しかしわが名を恐れるあなたがたには、義の太陽がのぼり、その翼には、いやす力を備えている。あなたがたは牛舎から出る子牛のように外に出て、とびはねる。
3 ನಾನು ಕಾರ್ಯಸಾಧಿಸುವ ದಿನದಲ್ಲಿ ಅಧರ್ಮಿಗಳು ನಿಮ್ಮ ಅಂಗಾಲುಗಳ ಕೆಳಗೆ ಬೂದಿಯಾಗಿ ಬಿದ್ದಿರುವರು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.
また、あなたがたは悪人を踏みつけ、わたしが事を行う日に、彼らはあなたがたの足の裏の下にあって、灰のようになると、万軍の主は言われる。
4 “ನನ್ನ ಸೇವಕನಾದ ಮೋಶೆಯ ಧರ್ಮಶಾಸ್ತ್ರವನ್ನು ಅಂದರೆ, ನಾನು ಹೋರೇಬ್ ಬೆಟ್ಟದಲ್ಲಿ ಎಲ್ಲಾ ಇಸ್ರಾಯೇಲರಿಗಾಗಿ ಮೋಶೆಗೆ ನೇಮಿಸಿದ ನಿಯಮವಿಧಿಗಳನ್ನು ಜ್ಞಾಪಕಮಾಡಿಕೊಳ್ಳಿರಿ.
あなたがたは、わがしもべモーセの律法、すなわちわたしがホレブで、イスラエル全体のために、彼に命じた定めとおきてとを覚えよ。
5 ನಾನು ಬಂದು ದೇಶವನ್ನು ಶಾಪದಿಂದ ಹತಮಾಡದಂತೆ ಯೆಹೋವನ ಆಗಮನದ ಭಯಂಕರವಾದ ಮಹಾದಿನವು ಬರುವುದಕ್ಕೆ ಮೊದಲೇ ಪ್ರವಾದಿಯಾದ ಎಲೀಯನನ್ನು ನಿಮ್ಮ ಬಳಿಗೆ ಕಳುಹಿಸುವೆನು;
見よ、主の大いなる恐るべき日が来る前に、わたしは預言者エリヤをあなたがたにつかわす。
6 ಅವನು ತಂದೆಗಳ ಮನಸ್ಸನ್ನು ಮಕ್ಕಳ ಕಡೆಗೂ, ಮಕ್ಕಳ ಮನಸ್ಸನ್ನು ತಂದೆಗಳ ಕಡೆಗೂ ತಿರುಗಿಸುವನು.”
彼は父の心をその子供たちに向けさせ、子供たちの心をその父に向けさせる。これはわたしが来て、のろいをもってこの国を撃つことのないようにするためである」。

< ಮಲಾಕಿಯನು 4 >