< ಮಾರ್ಕನು 12 >
1 ೧ ಆಗ ಯೇಸು ಅವರೊಂದಿಗೆ ಸಾಮ್ಯಗಳಿಂದ ಮಾತನಾಡುವುದಕ್ಕೆ ಪ್ರಾರಂಭಿಸಿದನು, “ಒಬ್ಬ ಮನುಷ್ಯನುಒಂದು ದ್ರಾಕ್ಷಿಯ ತೋಟವನ್ನು ಮಾಡಿ ಸುತ್ತಲೂ ಬೇಲಿ ಹಾಕಿಸಿ ದ್ರಾಕ್ಷಿಯ ಆಲೆಗಾಗಿ ಒಂದು ಗುಂಡಿಯನ್ನು ತೆಗೆಸಿಕಾವಲು ಗೋಪುರವನ್ನು ಕಟ್ಟಿಸಿದನು. ಬಳಿಕ ಆ ತೋಟವನ್ನು ದ್ರಾಕ್ಷಿಯ ತೋಟಗಾರರಿಗೆ ಗುತ್ತಿಗೆಗೆ ಕೊಟ್ಟು, ಹೊರದೇಶಕ್ಕೆ ಹೊರಟು ಹೋದನು.
Jesu go den maadi leni ba leni mi kpanjama. O joa den ŋuni o dunven kuanu. O den lindi u leni li konkonnagili, ki gbiidi ku buogu, ki maa u bilinu, ki guuni bi koaguudiba ki ǹani u dogu nni.
2 ೨ ಫಲಕಾಲವು ಬಂದಾಗ ತನಗೆ ಬರತಕ್ಕ ಪಾಲನ್ನು ತೆಗೆದುಕೊಳ್ಳುವುದಕ್ಕಾಗಿ ಒಬ್ಬ ಸೇವಕನನ್ನು ಗುತ್ತಿಗೆದಾರರ ಬಳಿಗೆ ಕಳುಹಿಸಿದನು.
O jetaagu yogunu o den soani o nacemo bi koaguudiba kani ke wan gaa u biinu u kuanu n luoni yaala.
3 ೩ ಆದರೆ ಅವರು ಅವನನ್ನು ಹಿಡಿದುಕೊಂಡು ಹೊಡೆದು ಏನೂ ಕೊಡದೆ ಬರಿಗೈಯಲ್ಲಿ ಕಳುಹಿಸಿಬಿಟ್ಟರು.
Bi den cuo o ki puo o ki ŋa o i nikuomi.
4 ೪ ಆ ತೋಟದ ಯಜಮಾನನು ಪುನಃ ಮತ್ತೊಬ್ಬ ಸೇವಕನನ್ನು ಅವರ ಬಳಿಗೆ ಕಳುಹಿಸಲು ಅವರು ಅವನ ತಲೆಯ ಮೇಲೆ ಹೊಡೆದು ಗಾಯಗೊಳಿಸಿ ಅಪಮಾನಮಾಡಿ ಕಳುಹಿಸಿಬಿಟ್ಟರು.
O go den soani nacentoa bi kani ke bi pua o yuli ki poagili o.
5 ೫ ಆದರೂ ಇನ್ನೊಬ್ಬ ಸೇವಕನನ್ನು ಕಳುಹಿಸಿದನು. ಇವನನ್ನು ಅವರು ಕೊಂದು ಹಾಕಿದರು. ಇನ್ನೂ ಅನೇಕರಿಗೆ ಅವರು ಹಾಗೆಯೇ ಮಾಡಿ, ಅವರಲ್ಲಿ ಕೆಲವರನ್ನು ಹೊಡೆದರು ಮತ್ತು ಕೆಲವರನ್ನು ಕೊಂದು ಹಾಕಿದರು.
O den soani o taalo ke bi ku o, ke o go soani toaba boncianla ke bi pua ba ki kpa ba.
6 ೬ ಅವನಿಗೆ ಕಳುಹಿಸಲು ಇನ್ನು ಒಬ್ಬನಿದ್ದನು. ಯಾರೆಂದರೆ ತನಗೆ ಪ್ರಿಯನಾಗಿದ್ದ ಒಬ್ಬನೇ ಮಗನು. ತನ್ನ ಮಗನಿಗೆ ಅವರು ಮರ್ಯಾದೆ ಕೊಡಬಹುದೆಂದು ಯಜಮಾನನು ಕೊನೆಗೆ ಅವನನ್ನು ಅವರ ಬಳಿಗೆ ಕಳುಹಿಸಿದನು.
O go den pia o bijoa buadiga; o den juodi ki soano ki yedi: Bi ba ya pia li fangili n bijoa po.
7 ೭ ಆದರೆ ಆ ಗುತ್ತಿಗೆದಾರರು, ‘ತೋಟಕ್ಕೆ ಇವನೇ ಉತ್ತರಾಧಿಕಾರಿ; ಬನ್ನಿ ಇವನನ್ನು ನಾವು ಕೊಂದು ಹಾಕೋಣ. ಆಗ ಆಸ್ತಿ ನಮ್ಮದಾಗುವುದು’ ಎಂದು ತಮ್ಮತಮ್ಮಲ್ಲಿ ಮಾತನಾಡಿಕೊಂಡು,
Ama laa koaguudiba den yedi biyaba: diidi ki le o faajielo n kpendi yeni, tin kpa o, ke li faali n tua ti yaali.
8 ೮ ಅವರು ಅವನನ್ನು ಹಿಡಿದು ಕೊಂದು ಹಾಕಿ ದ್ರಾಕ್ಷಿಯ ತೋಟದಿಂದ ಹೊರಗೆ ಬಿಸಾಡಿದರು.
Lani bi den cuo o, ki ku o, ki kandi ki luni o o duven tiidi kuanu puoli po.
9 ೯ ಹಾಗಾದರೆ ಆ ದ್ರಾಕ್ಷಾ ತೋಟದ ಯಜಮಾನನು ಏನು ಮಾಡುವನು? ಅವನು ಬಂದು ಆ ಗುತ್ತಿಗೆದಾರರನ್ನು ಸಂಹರಿಸಿ ತನ್ನ ದ್ರಾಕ್ಷಾತೋಟವನ್ನು ಬೇರೆಯವರಿಗೆ ಒಪ್ಪಿಸುವನು.
Moala, o duven kuanu daano baa tieni be? O ba cua, ki bolini laa koaguudiba, ki teni o duven kuanu toaba.
10 ೧೦ “‘ಮನೆಕಟ್ಟುವವರು ಬೇಡವೆಂದು ತಿರಸ್ಕರಿಸಲ್ಪಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು.
Naani yi cogi laa maama i diani nni: ya tanli ke bi tanmaaba den luni n tua u tanjigu.
11 ೧೧ ಇದು ಕರ್ತನಿಂದಲೇ ಆಯಿತು, ಇದು ನಮ್ಮ ಕಣ್ಣುಗಳಿಗೆ ಆಶ್ಚರ್ಯವಾಗಿ ತೋರುತ್ತದೆ ಎಂಬ ಶಾಸ್ತ್ರವಚನಗಳನ್ನೂ ನೀವು ಓದಲಿಲ್ಲವೇ?’” ಎಂದನು.
Li tie U TIENU yanbuama po yo ke laa tanli tua yeni, ti nuni po mo li tie bonlidinkaala.
12 ೧೨ ಯೇಸು ತಮ್ಮನ್ನೇ ಕುರಿತು ಈ ಸಾಮ್ಯವನ್ನು ಹೇಳಿದ್ದಾನೆ ಎಂದು ಅವರು ತಿಳಿದುಕೊಂಡು ಆತನನ್ನು ಹಿಡಿಯುವುದಕ್ಕೆ ಸಂದರ್ಭನೋಡುತ್ತಿದ್ದರು. ಆದರೆ ಜನರಿಗೆ ಭಯಪಟ್ಟು ಆತನನ್ನು ಬಿಟ್ಟುಹೋದರು.
Bi den lingi ki bua ki cu o, ama ki nan jie ku niligu. Bi den bandi ke Jesu maadi laa kpanjama bi yapo yo. Bi den ǹani o kani ki ban caa.
13 ೧೩ ಆ ಮೇಲೆ ಅವರು ಯೇಸುವನ್ನು ಮಾತುಗಳಲ್ಲಿ ಹಿಡಿಯಬೇಕೆಂದು ಫರಿಸಾಯರಲ್ಲಿಯೂ, ಹೆರೋದ್ಯರಲ್ಲಿಯೂ ಕೆಲವರನ್ನು ಆತನ ಬಳಿಗೆ ಕಳುಹಿಸಿದರು.
Bi den soani nitianba yaaba n tie falisieninba leni elodo buakaabaJesu kani, ke ban ludi o o maceli nni.
14 ೧೪ ಇವರು ಬಂದು, “ಬೋಧಕನೇ ನೀನು ಸತ್ಯವಂತನು, ಯಾವ ಮನುಷ್ಯನನ್ನು ಲಕ್ಷಿಸದವನೂ, ಮುಖದಾಕ್ಷಿಣ್ಯ ತೋರಿಸದವನೂ, ಸತ್ಯಕ್ಕನುಸಾರವಾಗಿ ದೈವಮಾರ್ಗವನ್ನು ಬೋಧಿಸುವವನೂ ಎಂದು ನಾವು ಬಲ್ಲೆವು. ಕೈಸರನಿಗೆ ಸುಂಕ ಕೊಡುವುದು ಧರ್ಮಸಮ್ಮತವೋ? ಅಲ್ಲವೋ? ನಾವದನ್ನು ಕೊಡಬೇಕೋ ಬೇಡವೋ?” ಎಂದು ಆತನನ್ನು ಕೇಳಿದರು.
Bi den cua ki yedi o: canbaa ti bani ke a tie moamoandaano, kaa go yagini a yama niloba kuli po; kelima ŋaa nua bi nisaaliba n tie maama, ama a bangi U TIENU sani leni i moamoani. Naani li puni u sanu bi laa puni, tin pa Sesa ti lubidi?
15 ೧೫ ಆದರೆ ಯೇಸು ಅವರ ಕಪಟತನವನ್ನು ಗ್ರಹಿಸಿ, “ನೀವು ನನ್ನನ್ನು ಪರೀಕ್ಷಿಸುವುದೇಕೆ? ಒಂದು ನಾಣ್ಯವನ್ನು ತಂದು ನನಗೆ ತೋರಿಸಿರಿ ನಾನು ಅದನ್ನು ನೋಡುತ್ತೇನೆ” ಎಂದು ಹೇಳಲು ಅವರು ತಂದರು.
ti baa pa, bi ti kan pa? Jesu den bandi bi yankpaagibiada, ki tuo bipo ki yedi: be jaapo ke yi bigidi nni? cuani mani n po li kujapienli ke min la li.
16 ೧೬ ಆಗ ಆತನು ಇದರ “ಮೇಲಿರುವುದು ಯಾರ ಮುಖಮುದ್ರೆ? ಮತ್ತು ಯಾರ ಲಿಪಿ?” ಎಂದು ಕೇಳಿದ್ದಕ್ಕೆ ಅವರು ಕೈಸರನದು ಅಂದರು.
Bi den cuani yenli, Jesu den buali ba: ŋmee nannanli leni ŋmee ya diani yo? bi den guani ki yedi Sesa.
17 ೧೭ ಯೇಸು, “ಕೈಸರನಿಗೆ ಸಂಬಂಧಪಟ್ಟವುಗಳನ್ನು ಕೈಸರನಿಗೂ ದೇವರಿಗೆ ಸಂಬಂಧಪಟ್ಟವುಗಳನ್ನು ದೇವರಿಗೂ ಸಲ್ಲಿಸಿರಿ” ಎಂದು ಹೇಳಿದನು. ಅದಕ್ಕೆ ಅವರು ಆತನ ವಿಷಯವಾಗಿ ಬಹು ಆಶ್ಚರ್ಯಪಟ್ಟರು.
Lanwani o den yedi ba: teni mani Sesa wan die yaala, ki teni U TIENU mo wan die yaala. Lani bi den noanlo leni li paakili.
18 ೧೮ ತರುವಾಯ ಪುನರುತ್ಥಾನವಿಲ್ಲವೆಂದು ಹೇಳುವ ಸದ್ದುಕಾಯರು ಆತನ ಬಳಿಗೆ ಬಂದು,
Sadusieninba yaaba n tua ke bi tinkpiba fiima ki ye den cua Jesu kani ki buali o ya buali n tie na.
19 ೧೯ ಆತನನ್ನು ಪ್ರಶ್ನೆಮಾಡಿದ್ದೇನಂದರೆ, “ಬೋಧಕನೇ, ‘ಅಣ್ಣನಾದವನು ಮಕ್ಕಳಿಲ್ಲದೆ ಹೆಂಡತಿಯನ್ನು ಬಿಟ್ಟು ಸತ್ತರೆ ಆಕೆಯನ್ನು ಅವನ ತಮ್ಮನು ಮದುವೆ ಮಾಡಿಕೊಂಡು ತನ್ನ ಅಣ್ಣನಿಗೆ ಸಂತಾನವನ್ನು ಪಡೆಯಬೇಕೆಂದು’ ಮೋಶೆಯು ನಮಗಾಗಿ ಬರೆದಿಟ್ಟಿದ್ದಾನಲ್ಲವೇ.
Canbaa, diidi Muusa n diani ti po ya diani: O nilo cuamo ya kpe, ki ŋa o pua ki naa pia a bila, o waalo ba taa o kpepuoli ki baa o ciamo po o buolu.
20 ೨೦ “ಒಮ್ಮೆ ಏಳು ಮಂದಿ ಸಹೋದರರಿದ್ದರು. ಮೊದಲನೆಯವನು ಮದುವೆ ಮಾಡಿಕೊಂಡು ಸಂತಾನವಿಲ್ಲದೆ ಸತ್ತನು.
Ki sua li den pia nataanjaba lele. O kpialo den ta pua ki kpe ki naa ŋa buolu.
21 ೨೧ ಎರಡನೆಯವನೂ ಆಕೆಯನ್ನು ಮದುವೆ ಮಾಡಿಕೊಂಡು ಸಂತಾನವಿಲ್ಲದೆ ಸತ್ತನು. ಅದರಂತೆ ಮೂರನೆಯವನು.
Olielo den ta li kpepuoli ke li tua o pua, ki mo den kpe ki naa ŋa o buolu. Li den tua yenma o bontaalo po.
22 ೨೨ ಇದೇ ಪ್ರಕಾರ ಏಳು ಮಂದಿಯೂ ಆಕೆಯನ್ನು ಮದುವೆಯಾಗಿ ಸಂತಾನವಿಲ್ಲದೆ ಸತ್ತರು. ಕೊನೆಯಲ್ಲಿ ಆ ಸ್ತ್ರೀಯೂ ಸತ್ತಳು.
Bani bonbi lele yeni o ba kuli naa den ŋa buolu. bikuli ya puoli po o pua moko den kpe.
23 ೨೩ ಪುನರುತ್ಥಾನದಲ್ಲಿ ಅವರು ಎದ್ದುಬರುವಾಗ ಅವರಲ್ಲಿ ಆಕೆಯು ಯಾರ ಹೆಂಡತಿಯಾಗಿರುವಳು? ಆ ಏಳು ಮಂದಿಗೂ ಆಕೆಯು ಹೆಂಡತಿಯಾಗಿದ್ದಳಲ್ಲಾ” ಎಂದರು.
Bi tinkpiba fiima daali bi siiga ŋme ba die o pua? kelima bani bonbi lele yeni kuli taa o ke o tua o pua
24 ೨೪ ಅದಕ್ಕೆ ಯೇಸು, “ನೀವು ಶಾಸ್ತ್ರವಚನಗಳನ್ನಾದರೂ, ದೇವರ ಶಕ್ತಿಯನ್ನಾದರೂ ತಿಳಿಯದೆ ಇರುವುದರಿಂದಲೇ ತಪ್ಪುವವರಾಗಿದ್ದೀರಿ?
Jesu den guani ki yedi ba, yi ye mi tudima nni, kelima yii bani i diani, yii go bani u TIENU paalu.
25 ೨೫ ಸತ್ತವರು ಬದುಕಿ ಎದ್ದಮೇಲೆ ಮದುವೆ ಮಾಡಿಕೊಳ್ಳುವುದೂ ಇಲ್ಲ, ಮದುವೆ ಮಾಡಿಕೊಡುವುದೂ ಇಲ್ಲ. ಆದರೆ ಅವರು ಪರಲೋಕದಲ್ಲಿರುವ ದೇವದೂತರಂತೆ ಇರುತ್ತಾರೆ.
Kelima bi tinkpiba fiima yogunu bi jaba kan go taa bi puoba bi puoba mo kan go kuni bi jaba, ama bi baa ya tie nani malekinba yeni tanpoli po.
26 ೨೬ ಆದರೆ ಸತ್ತವರು ಬದುಕಿ ಬರುತ್ತಾರೆಂಬುದನ್ನು ಕುರಿತು ಹೇಳಬೇಕಾದರೆ‘ನಾನು ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರು ಆಗಿದ್ದೇನೆ ಎಂದು ಪೊದೆಯಲ್ಲಿ ದೇವರು ಮೋಶೆಯ ಸಂಗಡ ಮಾತನಾಡಿದನೆಂದು ನೀವು ಮೋಶೆಯ ಗ್ರಂಥದಲ್ಲಿ ಓದಲಿಲ್ಲವೋ?’
Yaala n tie bi tinkpiba fiima ya po, naani yii cogi muusa tili nni U TIENU n yedi o yaala yaala n tie ku fatuugu kani: n tie Abalahama TIENU Isaaka TIENU leni Jakoabo TIENU.
27 ೨೭ ಆತನು ಜೀವಂತರಿಗೆ ದೇವರಾಗಿದ್ದಾನೆ ಹೊರತು ಸತ್ತವರಿಗಲ್ಲ. ಈ ವಿಷಯದಲ್ಲಿ ನೀವು ಬಹು ತಪ್ಪಾದ ಅಭಿಪ್ರಾಯವುಳ್ಳವರಾಗಿದ್ದಿರಿ” ಎಂದು ಹೇಳಿದನು.
U TIENU naa tie yaaba n kpe TIENU ka ama yaaba n fo. Yi ye li tudicianli nni.
28 ೨೮ ಶಾಸ್ತ್ರಿಗಳಲ್ಲಿ ಒಬ್ಬನು ಅವರ ವಾದವನ್ನು ಕೇಳಿ ಯೇಸು ಅವರಿಗೆ ಸರಿಯಾಗಿ ಉತ್ತರ ಕೊಟ್ಟನೆಂದು ತಿಳಿದು ಆತನ ಹತ್ತಿರಕ್ಕೆ ಬಂದು, “ಎಲ್ಲಾ ಆಜ್ಞೆಗಳಲ್ಲಿ ಮುಖ್ಯವಾದ್ದದು ಯಾವುದು?” ಎಂದು ಆತನನ್ನು ಕೇಳಿದರು.
Li balimaama diankoa yendo n den gbadi ke bi nia, ki banidi ke Jesu den guani sadusieninba ke li ŋani, o den nagini ki buali o: li bali maama nni mi le n tie mi kpiama?
29 ೨೯ ಅದಕ್ಕೆ ಯೇಸು, “‘ಇಸ್ರಾಯೇಲ್ ಜನರೇ ಕೇಳಿ, ನಮ್ಮ ದೇವರಾದ ಕರ್ತನುಒಬ್ಬನೇ ದೇವರು.
Jesu den tuo o po: diidi mi bonciama, cengi isalele, li Miali Diodo ti Tienu tie yendo.
30 ೩೦ ನಿನ್ನ ದೇವರಾದ ಕರ್ತನನ್ನು ಪೂರ್ಣಹೃದಯದಿಂದಲೂ, ಪೂರ್ಣಪ್ರಾಣದಿಂದಲೂ, ಪೂರ್ಣ ಬುದ್ಧಿಯಿಂದಲೂ, ಪೂರ್ಣ ಶಕ್ತಿಯಿಂದಲೂ ಪ್ರೀತಿಸಬೇಕು’ ಎಂಬುದೇ ಮುಖ್ಯವಾದ ಆಜ್ಞೆ.
ŋan bua li miali Diedo a TIENU leni a pali kuli leni a naano kuli leni a yantiali kuli leni a fidu kuli.
31 ೩೧ ‘ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು’ ಎಂಬುದೇ ಎರಡನೆಯ ಆಜ್ಞೆ. ಇವುಗಳಿಗಿಂತ ಹೆಚ್ಚಿನ ಆಜ್ಞೆ ಮತ್ತೊಂದಿಲ್ಲ” ಎಂದು ಉತ್ತರ ಕೊಟ್ಟನು.
Diidi mi bonliema, ŋan bua a nisaalilielo nani ŋan bua a yuli maama. Laa pia ya balimaama n go yabi ki cie yaama n tie na.
32 ೩೨ ಆಗ ಆ ಶಾಸ್ತ್ರಿಯು, “ಬೋಧಕನೇ, ನೀನು ಚೆನ್ನಾಗಿ ಹೇಳಿದೆ. ಸತ್ಯವನ್ನೇ ಹೇಳಿದಿ ದೇವರು ಒಬ್ಬನೇ, ಆತನ ಹೊರತು ಬೇರೊಬ್ಬ ದೇವರಿಲ್ಲ ಎಂದು ಹೇಳಿದನು.
Li balimaama diankoa n yedi o: li ŋani, canbaa a yedi leni i moamoani ke U TIENU tie yendo, ke toa ki ye kali wani.
33 ೩೩ ಆತನನ್ನು ಪೂರ್ಣಹೃದಯದಿಂದಲೂ, ಪೂರ್ಣ ಬುದ್ಧಿಯಿಂದಲೂ, ಪೂರ್ಣ ಶಕ್ತಿಯಿಂದಲೂ ಪ್ರೀತಿಸತಕ್ಕದ್ದು. ಇದಲ್ಲದೆ ತನ್ನನ್ನು ಪ್ರೀತಿಸಿಕೊಳ್ಳುವಂತೆ ತನ್ನ ನೆರೆಯವನನ್ನು ಪ್ರೀತಿಸುವುದು ಇವೆರಡೂ ಎಲ್ಲಾ ಸರ್ವಾಂಗಹೋಮಗಳಿಗಿಂತಲೂ ಎಲ್ಲಾ ಯಜ್ಞಗಳಿಗಿಂತಲೂ ಮೇಲಾದುವು” ಅಂದನು.
ki bua O leni a pali kuli leni a yantiali kuli leni a naano kuli leni a fidu kuli, ki go bua a nisaalilielo nani a yuli yeni cie apadijukaana leni ban padi ya pada buolu kuli.
34 ೩೪ ಅವನು ಬುದ್ಧಿಯಿಂದ ಉತ್ತರಕೊಟ್ಟದ್ದನ್ನು ಯೇಸು ಕಂಡು, “ನೀನು ದೇವರ ರಾಜ್ಯಕ್ಕೆ ದೂರವಾದವನಲ್ಲ” ಎಂದನು. ಅಂದಿನಿಂದ ಆತನನ್ನು ಪ್ರಶ್ನೆಮಾಡುವುದಕ್ಕೆ ಯಾರಿಗೂ ಧೈರ್ಯವಿರಲಿಲ್ಲ.
Jesu n laa ke o guani o leni mi yanfuoma, o den yedi o: ŋaa foagi leni U TIENU diema. Obakuli ki go den tuo ki ba buali o mabuali ba.
35 ೩೫ ಯೇಸು ದೇವಾಲಯದಲ್ಲಿ ಉಪದೇಶಮಾಡುತ್ತಿರಲಾಗಿ ಆತನು ಅವರನ್ನು, “ಶಾಸ್ತ್ರಿಗಳು ಕ್ರಿಸ್ತನನ್ನು ದಾವೀದನ ಮಗನೆಂದು ಹೇಳುತ್ತಾರಲ್ಲಾ ಅದು ಹೇಗೆ?
Jesu den suagi o bangima u TIENU diegu nni ki yedi: li ga lede yo ke li balimaama diankaaba tua ke Kilisiti tie Dafidi bijoa?
36 ೩೬ “‘ನಾನು ನಿನ್ನ ಶತ್ರುಗಳನ್ನು ನಿನ್ನ ಪಾದದಡಿ ಹಾಕುವ ತನಕ ನೀನು ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು ಎಂದು ಕರ್ತನು ನನ್ನ ಒಡೆಯನಿಗೆ ನುಡಿದನು’ ಎಂಬುದಾಗಿ ದಾವೀದನೇ ಪವಿತ್ರಾತ್ಮನ ಪ್ರೇರಣೆಯಿಂದ ಹೇಳಿದ್ದಾನೆ.
Dafidi wani oba den gbie leni U TIENU fuomi yua ki yedi: oDiedo den yedi n Diedo: kali n jienu po, hali min ba teni a yibalinba n tua a taŋmaakanu.
37 ೩೭ ದಾವೀದನೇ ಆತನನ್ನು ‘ಕರ್ತನೆಂದು’ ಹೇಳಿರುವಲ್ಲಿ ಆತನು ಅವನಿಗೆ ಮಗನಾಗುವುದು ಹೇಗೆ?” ಎಂದು ಪ್ರಶ್ನಿಸಿದನು. ಜನರ ದೊಡ್ಡ ಸಮೂಹವು ಆತನ ಮಾತನ್ನು ಸಂತೋಷದಿಂದ ಕೇಳುತ್ತಿತ್ತು.
Dafidi wani oba yini o o Diodo, li nan ga lede yo ke o tie Dafidi biloa? lani ku niligu boncianla den cengi o leni li pamanli.
38 ೩೮ ಆತನು ಉಪದೇಶಮಾಡಿ ಹೇಳಿದ್ದೇನಂದರೆ, “ಶಾಸ್ತ್ರಿಗಳ ವಿಷಯದಲ್ಲಿ ಎಚ್ಚರಿಕೆಯಾಗಿರಿ. ನಿಲುವಂಗಿಯನ್ನು ಧರಿಸಿಕೊಂಡು ತಿರುಗಾಡುತ್ತಾ,
o den tua ba o bangima nni: fangi mani yi yula leni li balimaama diankaaba yaaba n bua ki ya goadi leni ya liada n foagi, leni ban ya go fuondi ba ku niligu nni;
39 ೩೯ ಸಂತೆಯ ಬೀದಿಗಳಲ್ಲಿ ನಮಸ್ಕಾರಗಳನ್ನೂ, ಸಭಾಮಂದಿರಗಳಲ್ಲಿ ಮುಖ್ಯ ಪೀಠಗಳನ್ನೂ, ಔತಣಗಳಲ್ಲಿ ಪ್ರಥಮ ಸ್ಥಾನಗಳನ್ನೂ ಅವರು ಇಷ್ಟಪಡುವವರಾಗಿದ್ದಾರೆ.
yaaba n lingi u kaankpialu u TIENU diegu nni leni yi kaankpiali i badi nni;
40 ೪೦ ಇವರು ವಿಧವೆಯರ ಮನೆಗಳನ್ನು ದೋಚಿ ತೋರಿಕೆಗಾಗಿ ದೇವರಿಗೆ ಉದ್ದವಾದ ಪ್ರಾರ್ಥನೆಗಳನ್ನು ಮಾಡುತ್ತಾರೆ. ಇಂಥವರು ಹೆಚ್ಚಿನ ದಂಡನೆಯನ್ನು ಹೊಂದುವರು” ಎಂದನು.
yaaba n mudi a kpepuona diena ki nan jaandi i jaandifoagi ki bua ki doagidi bi yula. Bi ba jia bi po ya bujiali n bia ki cie.
41 ೪೧ ಯೇಸು ದೇವಾಲಯದ ಆವರಣದಲ್ಲಿ ಕಾಣಿಕೆ ಪೆಟ್ಟಿಗೆಯ ಎದುರಿಗೆ ಕುಳಿತುಕೊಂಡು ಜನರು ಅದರಲ್ಲಿ ಹಣ ಹಾಕುವುದನ್ನು ಗಮನಿಸುತ್ತಿದ್ದನು. ಅನೇಕ ಮಂದಿ ಐಶ್ವರ್ಯವಂತರು ಹೆಚ್ಚೆಚ್ಚು ಹಣ ಹಾಕುತ್ತಿದ್ದರು.
Jesu den kali ki tiegi ku ligitiagu ki diidi ku niligu n kpiendi i ligi maama. Piada boncianla den kpiendi boŋanla.
42 ೪೨ ಒಬ್ಬ ಬಡ ವಿಧವೆಯು ಬಂದು, ಎರಡು ಕಾಸು ಬೆಲೆಯುಳ್ಳ ಒಂದು ದುಗ್ಗಾಣಿ ಹಾಕಿದಳು.
O kpepoluodo den cua ki kpieni tanmo lie ke li tie o piama boagidinaama.
43 ೪೩ ಆಗ ಯೇಸು ತನ್ನ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಿಗೆ, “ಈ ಕಾಣಿಕೆ ಪೆಟ್ಟಿಗೆಯಲ್ಲಿ ಹಾಕಿದವರೆಲ್ಲರಿಗಿಂತಲೂ ಈ ಬಡ ವಿಧವೆಯು ಹೆಚ್ಚಾಗಿ ಹಾಕಿದ್ದಾಳೆ ಎಂದು ನಿಮಗೆ ನಿಜವಾಗಿ ಹೇಳುತ್ತೇನೆ.
Lanwani Jesu den yini o ŋoadikaaba ki yedi ba: n yedi yi moamoani o kpepoluodo ne puni ki cie yaaba n kpieni ku ligitiagu nni kuli.
44 ೪೪ ಹೇಗೆಂದರೆ, ಎಲ್ಲರೂ ತಮ್ಮ ಸಮೃದ್ಧಿಯಲ್ಲಿ ಹಾಕಿದರು. ಆದರೆ ಈ ವಿಧವೆಯೋ ತನ್ನ ಬಡತನದಲ್ಲಿಯೂ ತನಗಿದ್ದದ್ದನ್ನೆಲ್ಲಾ ಎಂದರೆ, ತನ್ನ ಜೀವನಕ್ಕೆ ಆಧಾರವಾಗಿದ್ದ ಎಲ್ಲವನ್ನೂ ಕಾಣಿಕೆಯಾಗಿ ಹಾಕಿದ್ದಾಳೆ” ಎಂದನು.
Kelima bikuli kpieni bi ligijodi yo, ama wan wani kpieni wan pia yaali kulio yema po.