< ಮಾರ್ಕನು 13 >
1 ೧ ಯೇಸು ದೇವಾಲಯದಿಂದ ಹೊರಗೆ ಹೋಗುತ್ತಿದ್ದಾಗ ಆತನ ಶಿಷ್ಯರಲ್ಲಿ ಒಬ್ಬನು ಆತನಿಗೆ, “ಗುರುವೇ, ನೋಡು, ಎಂಥಾ ಅದ್ಭುತವಾದ ಕಲ್ಲುಗಳು! ಎಂಥಾ ಮಹಾಕಟ್ಟಡಗಳು!” ಎಂದು ಹೇಳಿದನು.
Kui Jeesus oli templist lahkumas, ütles üks jüngritest talle: „Õpetaja, vaata neid massiivseid kive ja suurejoonelisi hooneid!“
2 ೨ ಯೇಸು, “ಈ ದೊಡ್ಡ ಕಟ್ಟಡಗಳನ್ನು ನೋಡುತ್ತೀಯಲ್ಲವೇ? ಇಲ್ಲಿ ಕಲ್ಲಿನ ಮೇಲೆ ಕಲ್ಲು ಉಳಿಯುವುದಿಲ್ಲ; ಎಲ್ಲವೂ ಕೆಡವಲ್ಪಡುವುದು” ಎಂದನು.
„Kas näete kõiki neid uhkeid hooneid?“vastas Jeesus. „Siin ei jäeta ühtki kivi teise peale. Kõik kisutakse maha.“
3 ೩ ಬಳಿಕ ಆತನು ಎಣ್ಣೆ ಮರಗಳ ಗುಡ್ಡದ ಮೇಲೆ ದೇವಾಲಯಕ್ಕೆ ಎದುರಾಗಿ ಕುಳಿತುಕೊಂಡಿದ್ದಾಗ ಪೇತ್ರ, ಯಾಕೋಬ, ಯೋಹಾನ ಹಾಗೂ ಅಂದ್ರೆಯ,
Kui Jeesus istus Õlimäel ja vaatas alla templi poole, küsisid Peetrus, Jaakobus, Johannes ja Andreas omaette olles temalt:
4 ೪ ಇವರು ಪ್ರತ್ಯೇಕವಾಗಿ ಆತನಿಗೆ, “ಇವೆಲ್ಲಾ ಯಾವಾಗ ಆಗುವವು? ಇವೆಲ್ಲವು ನೆರವೇರುವುದಕ್ಕೆ ಸೂಚನೆ ಏನು? ನಮಗೆ ಹೇಳು” ಎಂದು ಆತನನ್ನು ಕೇಳಿದರು.
„Ütle meile: millal see toimub? Mis on selle kõige täitumise märgiks?“
5 ೫ ಯೇಸು ಅವರಿಗೆ ಹೇಳಿದ್ದೇನಂದರೆ, “ಯಾರೂ ನಿಮ್ಮನ್ನು ಮೋಸಗೊಳಿಸದಂತೆ ಎಚ್ಚರಿಕೆಯಾಗಿರಿ.
Jeesus hakkas neile rääkima: „Ärge laske end petta.
6 ೬ ಅನೇಕರು ಬಂದು ನನ್ನ ಹೆಸರನ್ನು ಹೇಳಿಕೊಂಡು, ‘ನಾನೇ ಕ್ರಿಸ್ತನು’ ಎಂದು ಹೇಳಿ ಎಷ್ಟೋ ಜನರನ್ನು ಮೋಸಗೊಳಿಸುವರು.
Paljud tulevad minu nimel ja ütlevad: „Mina olen Kristus.“Nad petavad paljusid.
7 ೭ ಇದಲ್ಲದೆ ಯುದ್ಧಗಳಾಗುವುದನ್ನೂ, ಯುದ್ಧವಾಗುವ ಹಾಗಿದೆ ಎಂಬ ಸುದ್ದಿಗಳನ್ನೂ ನೀವು ಕೇಳುವಾಗ ಕಳವಳಪಡಬೇಡಿರಿ. ಹಾಗಾಗುವುದು ಅಗತ್ಯ. ಆದರೂ ಇದು ಇನ್ನೂ ಅಂತ್ಯಕಾಲವಲ್ಲ.
Ärge muretsege, kui te kuulete sõdadest lähemal ja kaugemal. Kõik see peab toimuma, kuid see pole lõpp.
8 ೮ ಜನಾಂಗಕ್ಕೆ ವಿರೋಧವಾಗಿ ಜನಾಂಗವೂ, ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು. ಮತ್ತು ನಾನಾ ಕಡೆಗಳಲ್ಲಿ ಭೂಕಂಪಗಳೂ, ಬರಗಾಲಗಳೂ, ಉಂಟಾಗುವವು. ಆದರೆ ಇವೆಲ್ಲಾ ಪ್ರಸವ ವೇದನೆಯ ಪ್ರಾರಂಭ ಮಾತ್ರ.
Rahvas võitleb rahva vastu ja riik riigi vastu. Paljudes paikades on maavärinaid ja ka näljahädasid. Need on maailma sünnitusvalude algus.
9 ೯ “ಆದರೆ ನೀವು ನಿಮ್ಮ ವಿಷಯದಲ್ಲಿ ಎಚ್ಚರಿಕೆಯಾಗಿರಿ. ಜನರು ನಿಮ್ಮನ್ನು ನ್ಯಾಯವಿಚಾರಣೆಯ ಸಭೆಗಳಿಗೆ ಎಳೆದುಕೊಂಡು ಹೋಗುವರು. ಸಭಾಮಂದಿರಗಳಲ್ಲಿ ನಿಮ್ಮನ್ನು ಹೊಡೆಯುವರು, ನನ್ನ ನಿಮಿತ್ತವಾಗಿ ನಿಮ್ಮನ್ನು ಅಧಿಕಾರಿಗಳ ಮತ್ತು ಅರಸುಗಳ ಮುಂದೆ ಅವರಿಗೆ ಸಾಕ್ಷಿಗಳಾಗಿ ನಿಲ್ಲಿಸುವರು,
Olge valvel! Teid antakse kohtute kätte. Teid pekstakse sünagoogides. Minu pärast peate seisma valitsejate ja kuningate ees ning te olete neile tunnistajateks.
10 ೧೦ ಆದರೆ ಮೊದಲು ಎಲ್ಲಾ ಜನಾಂಗಗಳಿಗೆ ಸುವಾರ್ತೆಯು ಸಾರಲ್ಪಡಬೇಕು.
Head sõnumit peab kõigepealt kuulutatama kõigile rahvastele.
11 ೧೧ “ನಿಮ್ಮನ್ನು ಹಿಡಿದುಕೊಂಡು ಹೋಗಿ ಒಪ್ಪಿಸುವಾಗ ಏನು ಹೇಳಬೇಕು ಎಂದು ಮುಂಚಿತವಾಗಿಯೇ ಚಿಂತಿಸಬೇಡಿರಿ, ನೀವು ಏನು ಹೇಳಬೇಕೋ ಅದು ನಿಮಗೆ ಆ ಗಳಿಗೆಯಲ್ಲಿ ಕೊಡಲ್ಪಡುವುದು, ಏಕೆಂದರೆ ಮಾತನಾಡುವವರು ನೀವಲ್ಲ, ಆದರೆ ಪವಿತ್ರಾತ್ಮನೇ ನಿಮ್ಮ ಮೂಲಕವಾಗಿ ಮಾತನಾಡುವನು,
Kui teid võetakse kinni ja viiakse kohtusse, siis ärge muretsege sellepärast, mida öelda. Rääkige lihtsalt seda, mida teile siis öeldakse, sest kõnelejaks ei ole teie, vaid Püha Vaim.
12 ೧೨ ಇದಲ್ಲದೆ ಸಹೋದರನು ಸಹೋದರನನ್ನೂ, ತಂದೆಯು ಮಗನನ್ನೂ ಮರಣಕ್ಕೆ ಒಪ್ಪಿಸುವರು. ಮಕ್ಕಳು ಹೆತ್ತವರಿಗೆ ವಿರೋಧವಾಗಿ ಎದ್ದು ಅವರನ್ನು ಕೊಲ್ಲಿಸುವರು,
Vend annab venna surma ja isa reedab oma lapse. Lapsed pöörduvad oma vanemate vastu ja lasevad nad surma mõista.
13 ೧೩ ಮತ್ತು ನನ್ನ ಹೆಸರಿನ ನಿಮಿತ್ತವಾಗಿ ಎಲ್ಲರೂ ನಿಮ್ಮನ್ನು ದ್ವೇಷಿಸುವರು, ಆದರೆ ಕೊನೆಯವರೆಗೂ ತಾಳುವವನೇ ರಕ್ಷಣೆ ಹೊಂದುವನು.”
Kõik vihkavad teid minu pärast, aga kes lõpuni vastu peab, see päästetakse.
14 ೧೪ “ಇದಲ್ಲದೆವಿನಾಶಕಾರಕ ಅಸಹ್ಯ ಮೂರ್ತಿಯು ನಿಲ್ಲಬಾರದ ಸ್ಥಳದಲ್ಲಿ ನಿಂತಿರುವುದನ್ನು ನೀವು ನೋಡುವಾಗ (ಇದನ್ನು ಓದುವವನು ತಿಳಿದುಕೊಳ್ಳಲಿ). ಯೂದಾಯದಲ್ಲಿ ಇರುವವರು ಬೆಟ್ಟಗಳಿಗೆ ಓಡಿಹೋಗಲಿ.
Aga kui te näete „ebajumalaid, mis rüvetavad“, seismas seal, kus ei tohiks (saagu lugeja aru), siis peaksid need, kes on Juudamaal, põgenema mägedesse.
15 ೧೫ ಮಾಳಿಗೆಯ ಮೇಲಿದ್ದವನು ಕೆಳಗೆ ಇಳಿದು ಮನೆಯೊಳಕ್ಕೆ ಹೋಗದಿರಲಿ; ಮನೆಯೊಳಗಿಂದ ಏನನ್ನೂ ತೆಗೆದುಕೊಳ್ಳದಿರಲಿ.
Need, kes on katusel − ärge minge tagasi majja sisse midagi võtma.
16 ೧೬ ಹೊಲದಲ್ಲಿರುವವನು ತನ್ನ ಹೊದಿಕೆಯನ್ನು ತೆಗೆದುಕೊಳ್ಳುವುದಕ್ಕೆ ಹಿಂದಿರುಗಿ ಹೋಗದಿರಲಿ.
Need, kes on väljas põllul − ärge minge koju kuube võtma.
17 ೧೭ “ಆದರೆ ಆ ದಿನಗಳಲ್ಲಿ ಗರ್ಭಿಣಿಯರಿಗೂ, ಹಾಲು ಕುಡಿಸುವ ತಾಯಂದಿರಿಗೂ ಆಗುವ ಕಷ್ಟ ಎಷ್ಟೆಂದು ಹೇಳಲಿ!
Kui raske on see nende jaoks, kes tol ajal on lapseootel või last imetamas!
18 ೧೮ ಆ ದಿನಗಳುಸಂಕಟದ ದಿನಗಳಾಗಿರುವುದರಿಂದ ಇದೆಲ್ಲಾ ಚಳಿಗಾಲದಲ್ಲಿ ಆಗಬಾರದೆಂದು ಪ್ರಾರ್ಥನೆ ಮಾಡಿರಿ.
Palvetage, et see ei juhtuks talvisel ajal.
19 ೧೯ ಅಂಥ ಸಂಕಟವು ದೇವರು ಜಗತ್ತನ್ನು ಸೃಷ್ಟಿಸಿದ ದಿನದಿಂದ ಮೊದಲುಗೊಂಡು ಈ ದಿನದವರೆಗೂ ಆಗಲಿಲ್ಲ; ಇನ್ನು ಮುಂದೆ ಆಗುವುದೂ ಇಲ್ಲ.
Sest siis on selline hädaaeg, mida ei ole olnud Jumala loodu algusest kuni tänapäevani ja mida ei tule enam kunagi.
20 ೨೦ ಕರ್ತನು ಆ ದಿನಗಳನ್ನು ಕಡಿಮೆ ಮಾಡದಿದ್ದರೆ ಒಂದು ನರಪ್ರಾಣಿಯಾದರೂ ಉಳಿಯುವುದಿಲ್ಲ. ಆದರೆ ತಾನು ಆರಿಸಿಕೊಂಡವರಿಗಾಗಿ ಆ ದಿನಗಳನ್ನು ಕಡಿಮೆ ಮಾಡಿದ್ದಾನೆ.
Kui Jumal ei lühenda seda aega, ei jää keegi elama. Kuid nende pärast, kelle Jumal on valinud, lühendab ta seda aega.
21 ೨೧ “ಆಗ ಯಾರಾದರೂ ನಿಮಗೆ, ಇಗೋ, ಕ್ರಿಸ್ತನು ಇಲ್ಲಿದ್ದಾನೆ! ಅಗೋ, ಆತನು ಅಲ್ಲಿದ್ದಾನೆ! ಎಂದು ಹೇಳಿದರೆ ನಂಬಬೇಡಿರಿ.
Niisiis, kui keegi ütleb teile: „Vaata, siin on Messias!“või „Vaata, ta on seal!“, siis ärge seda uskuge.
22 ೨೨ ಏಕೆಂದರೆ ಸುಳ್ಳು ಕ್ರಿಸ್ತರೂ, ಸುಳ್ಳುಪ್ರವಾದಿಗಳೂ ಎದ್ದು ಸಾಧ್ಯವಾದರೆ ದೇವರು ಆರಿಸಿಕೊಂಡವರನ್ನು ಮೋಸಗೊಳಿಸುವುದಕ್ಕೋಸ್ಕರ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸುವರು.
Sest valemessiaid ja valeprohveteid ilmub välja ning nad teevad imelisi tunnustähti ja imetegusid, et petta ka Jumala valituid, kui see oleks võimalik.
23 ೨೩ ನೀವಂತೂ ಜಾಗರೂಕರಾಗಿರಿ. ನಾನು ನಿಮಗೆ ಎಲ್ಲವುಗಳನ್ನು ಮುಂದಾಗಿಯೇ” ಹೇಳಿದ್ದೇನೆ.
Olge valvel! Ma olen teile rääkinud kõigest, enne kui see toimub.
24 ೨೪ ಇದಲ್ಲದೆ ಆ ದಿನಗಳ ಸಂಕಟವು ತೀರಿದ ನಂತರ; “‘ಸೂರ್ಯನು ಕತ್ತಲಾಗಿ ಹೋಗುವನು.
Pärast neid hädasid toimub järgnev: „Päike läheb pimedaks, kuu ei sära enam,
25 ೨೫ ಚಂದ್ರನು ತನ್ನ ಬೆಳಕು ಕೊಡದೆ ಇರುವನು. ನಕ್ಷತ್ರಗಳು ಆಕಾಶದಿಂದ ಬೀಳುವವು. ಮತ್ತು ಪರಲೋಕದಲ್ಲಿ ಶಕ್ತಿಗಳು ಕದಲುವವು.’
tähed langevad taevast alla ja taeva vägesid kõigutatakse.“
26 ೨೬ ಆಗಮನುಷ್ಯಕುಮಾರನು ಮಹಾಬಲದಿಂದಲೂ ಮಹಿಮೆಯಿಂದಲೂ ಮೇಘಗಳಲ್ಲಿ ಬರುವುದನ್ನು ಅವರು ನೋಡುವರು.
Siis nähakse inimese Poega, kui ta tuleb pilvedes suure väe ja hiilgusega.
27 ೨೭ ಮತ್ತು ಆತನು ತನ್ನ ದೂತರನ್ನು ಕಳುಹಿಸಿ ಭೂಮಿಯ ಕಟ್ಟಕಡೆಯಿಂದ ಆಕಾಶದ ಕಟ್ಟಕಡೆಯವರೆಗೆ ತಾನು ಆರಿಸಿಕೊಂಡವರನ್ನು ನಾಲ್ಕುದಿಕ್ಕುಗಳಿಂದ ಒಟ್ಟುಗೂಡಿಸುವನು.”
Ta saadab välja inglid ja kogub kokku kõik oma valitud sealt, kus iganes nad on, maailma kõige kaugemast osast kuni taeva kaugeima punktini.
28 ೨೮ “ಅಂಜೂರ ಮರವನ್ನು ನೋಡಿ ಒಂದು ಪಾಠವನ್ನು ಕಲಿತುಕೊಳ್ಳಿ. ಅದರ ಕೊಂಬೆಗಳಲ್ಲಿ ಇನ್ನೂ ಎಳೆದಾಗಿ ಎಲೆಗಳು ಚಿಗುರುವಾಗ ಬೇಸಿಗೆಯು ಸಮೀಪಿಸಿತು ಎಂದು ಅರಿತುಕೊಳ್ಳುತ್ತಿರಲ್ಲಾ.
Õppige õppetundi viigipuust. Kui selle okstele tulevad kasvud ja võrsuvad lehed, siis teate, et suvi on lähedal.
29 ೨೯ ಹಾಗೆಯೇ ಇವೆಲ್ಲವೂ ಆಗುವುದನ್ನು ನೀವು ನೋಡುವಾಗ ಬಾಗಿಲ ಹತ್ತಿರದಲ್ಲಿಯೇ ಇದ್ದೆ ಎಂದು ತಿಳಿದುಕೊಳ್ಳಿರಿ.
Samamoodi on ka siis, kui näete neid asju toimuvat − teadke, et see lähedal, juba ukse ees!
30 ೩೦ ಇದೆಲ್ಲವೂ ನೆರವೇರುವವರೆಗೂ ಈ ಸಂತತಿಯು ಅಳಿದು ಹೋಗುವುದೇ ಇಲ್ಲವೆಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ.
Ma räägin teile tõtt: see põlvkond ei lõpe enne, kuni kõik need asjad on toimunud.
31 ೩೧ ಆಕಾಶವೂ, ಭೂಮಿಯೂ ಅಳಿದು ಹೋಗುವವು; ಆದರೆ ನನ್ನ ವಾಕ್ಯವು ಅಳಿದು ಹೋಗುವುದೇ ಇಲ್ಲ.”
Taevas ja maa saavad otsa, kuid minu õpetused mitte.
32 ೩೨ “ಇದಲ್ಲದೆ ಆ ದಿನದ ಮತ್ತು ಆ ಗಳಿಗೆಯ ವಿಷಯವಾಗಿ ನನ್ನ ತಂದೆಗೆ ಹೊರತು ಮತ್ತಾರಿಗೂ ತಿಳಿಯದು, ಪರಲೋಕದಲ್ಲಿರುವ ದೂತರಿಗಾಗಲಿ, ಮಗನಿಗಾಗಲಿ ತಿಳಿಯದು.
Mitte keegi ei tea päeva ega tundi, mil see toimub − isegi mitte inglid taevas, isegi mitte Poeg, vaid ainult Isa teab.
33 ೩೩ ಆ ಕಾಲವು ಯಾವಾಗ ಬರುವುದು ಎಂದು ನಿಮಗೆ ತಿಳಿಯದೆ ಇರುವುದರಿಂದ ನೀವುಎಚ್ಚರವಾಗಿರಿ, ಜಾಗರೂಕರಾಗಿರಿ.
Olge valvel! Püsige ärkvel! Sest te ei tea, millal see toimub.
34 ೩೪ ಅದುಒಬ್ಬ ಮನುಷ್ಯನು ತನ್ನ ಮನೆಯನ್ನು ಬಿಟ್ಟು ದೂರಪ್ರಯಾಣಕ್ಕೆ ಹೋಗುವಾಗ ತನ್ನ ಸೇವಕರಿಗೆ ಮನೇ ಅಧಿಕಾರವನ್ನು ಒಪ್ಪಿಸಿಕೊಟ್ಟು ಪ್ರತಿಯೊಬ್ಬನಿಗೆ ಅವನವನ ಕೆಲಸಗಳನ್ನು ಕೊಟ್ಟು ಬಾಗಿಲು ಕಾಯುವವನಿಗೆ, ನೀನು ಜಾಗರೂಕನಾಗಿರಬೇಕೆಂದು ಆಜ್ಞಾಪಿಸಿದವನ ಹಾಗೆ ಇರುತ್ತದೆ” ಎಂದು ನಾನು ನಿಮಗೆ ಹೇಳುತ್ತಿದ್ದೇನೆ.
Nagu üks mees läks ära reisile. Ta läks oma kodust ära ja andis igale sulasele volitused teha seda, mida ta käskis neil teha. Ta käskis uksehoidjal valvel olla.
35 ೩೫ “ಮನೆ ಯಜಮಾನನು ಸಂಜೆಯಲ್ಲಿಯೋ, ಮಧ್ಯರಾತ್ರಿಯಲ್ಲಿಯೋ, ಕೋಳಿ ಕೂಗುವಾಗಲೋ ಬೆಳಕಾಗುವಾಗಲೋ ಯಾವಾಗ ಬರುತ್ತಾನೋ ನಿಮಗೆ ಗೊತ್ತಿಲ್ಲದ ಕಾರಣ ಎಚ್ಚರವಾಗಿರಿ!
Seega olge valvel, sest te ei tea, millal majaomanik tagasi tuleb. See võib olla õhtul, keset ööd, enne koitu või hommikul.
36 ೩೬ ಆತನು ಫಕ್ಕನೆ ಬಂದು ನೀವು ನಿದ್ರೆ ಮಾಡುತ್ತಿರುವುದನ್ನು ಕಂಡಾನು.
Te ei taha, et teid tabataks magamast, kui ta ootamatult tagasi tuleb.
37 ೩೭ ನಾನು ನಿಮಗೆ ಹೇಳುತ್ತಿರುವುದನ್ನು ಎಲ್ಲರಿಗೂ ಹೇಳುತ್ತಿದ್ದೇನೆ; ಎಚ್ಚರವಾಗಿರಿ!” ಎಂದನು.
Seda, mida ma ütlen teile, ütlen ma kõigile: valvake!“