< ಮಾರ್ಕನು 14 >
1 ೧ ಪಸ್ಕಹಬ್ಬ ಎಂದರೆ ಹುಳಿಯಿಲ್ಲದ ರೊಟ್ಟಿಯ ಹಬ್ಬ ಬರುವುದಕ್ಕೆ ಇನ್ನೂ ಎರಡು ದಿನಗಳಿದ್ದಾಗ ಮುಖ್ಯಯಾಜಕರೂ ಶಾಸ್ತ್ರಿಗಳೂ ಯೇಸುವನ್ನು ಉಪಾಯದಿಂದ ಹಿಡಿದು ಕೊಲ್ಲುವುದಕ್ಕೆ ಮಾರ್ಗವನ್ನು ಹುಡುಕುತ್ತಿದ್ದರು.
A po dwóch dniach była wielkanoc, święto przaśników; i szukali przedniejsi kapłani i nauczeni w Piśmie, jakoby go zdradą pojmawszy, zabili.
2 ೨ “ಆದರೆ ಹಬ್ಬದ ಸಂದರ್ಭದಲ್ಲಿ ಈ ಕಾರ್ಯವನ್ನು ಮಾಡಬಾರದು. ಏಕೆಂದರೆ ನಮ್ಮ ಮೇಲೆ ಜನರು ದಂಗೆ ಎದ್ದಾರು” ಎಂದು ಮಾತನಾಡಿಕೊಂಡರು.
Lecz mówili: Nie w święto, aby snać nie był rozruch między ludem.
3 ೩ ಆತನು ಬೇಥಾನ್ಯದಲ್ಲಿದ್ದ ಕುಷ್ಠರೋಗಿಯಾದ ಸೀಮೋನನ ಮನೆಯಲ್ಲಿ ಊಟಕ್ಕೆ ಕುಳಿತಿದ್ದಾಗ ಒಬ್ಬ ಸ್ತ್ರೀಯು ಬಹು ಬೆಲೆಯುಳ್ಳ ಸ್ವಚ್ಛ ಜಟಮಾಂಸಿ ತೈಲದ ಭರಣಿಯನ್ನು ತೆಗೆದುಕೊಂಡು ಬಂದು ಅದನ್ನು ಒಡೆದು ತೈಲವನ್ನು ಯೇಸುವಿನ ತಲೆಯ ಮೇಲೆ ಸುರಿದಳು.
A gdy on był w Betanii, w domu Szymona trędowatego, gdy siedział u stołu, przyszła niewiasta, mając słoik alabastrowy maści szpikanardowej płynącej, bardzo kosztownej, a stłukłszy słoik alabastrowy, wylała ją na głowę jego.
4 ೪ ಆದರೆ ಕೆಲವರು ತಮ್ಮೊಳಗೆ ಕೋಪಗೊಂಡು, “ಈ ತೈಲವನ್ನು ಹೀಗೆ ವ್ಯರ್ಥಮಾಡಿದ್ದೇಕೆ?
I gniewali się niektórzy sami w sobie, a mówili: Na cóż się stała utrata tej maści?
5 ೫ ಇದನ್ನು ಮುನ್ನೂರು ಬೆಳ್ಳಿನಾಣ್ಯಗಳಿಗಿಂತ ಹೆಚ್ಚಿನ ಬೆಲೆಗೆ ಮಾರಿ ಬಡವರಿಗೆ ಕೊಡಬಹುದಾಗಿತ್ತಲ್ಲಾ?” ಎಂದು ಹೇಳಿ ಆಕೆಯನ್ನು ದೂಷಿಸಿದರು.
Albowiem się to mogło sprzedać drożej niż za trzysta groszy, i rozdać ubogim; i szemrali przeciwko niej.
6 ೬ ಆದರೆ ಯೇಸು, “ಆಕೆಯನ್ನು ಬಿಟ್ಟುಬಿಡಿರಿ, ಆಕೆಗೆ ಏಕೆ ತೊಂದರೆ ಕೊಡುತ್ತೀರಿ? ಈಕೆಯು ನನಗೆ ಒಳ್ಳೆಯ ಕಾರ್ಯವನ್ನೇ ಮಾಡಿದ್ದಾಳೆ.
Ale Jezus rzekł: Zaniechajcie jej, przeczże się jej przykrzycie? Dobryć uczynek uczyniła przeciwko mnie.
7 ೭ ಬಡವರು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುತ್ತಾರೆ. ನಿಮಗೆ ಮನಸ್ಸು ಬಂದಾಗ ನೀವು ಅವರಿಗೆ ಯಾವಾಗಲಾದರೂ ಉಪಕಾರ ಮಾಡಬಹುದು. ಆದರೆ ನಾನು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುವುದಿಲ್ಲ.
Zawsze bowiem ubogie macie z sobą, i kiedykolwiek chcecie, możecie im dobrze czynić; ale mnie nie zawsze mieć będziecie.
8 ೮ ಈಕೆಯು ತನ್ನಿಂದಾದಷ್ಟು ಮಾಡಿದ್ದಾಳೆ. ಈಕೆಯು ನನ್ನ ದೇಹವನ್ನು ಶವಸಂಸ್ಕಾರಕ್ಕೆ ಮುಂಚಿತವಾಗಿಯೇ ಈ ತೈಲದಿಂದ ಅಭಿಷೇಕಿಸಿ ಸಿದ್ಧಪಡಿಸಿದ್ದಾಳೆ.
Ona, co mogła, to uczyniła; poprzedziła, aby ciało moje pomazała ku pogrzebowi.
9 ೯ ಸುವಾರ್ತೆಯು ಲೋಕದಲ್ಲಿ ಎಲ್ಲೆಲ್ಲಿ ಸಾರಲ್ಪಡುವುದೋ ಅಲ್ಲೆಲ್ಲಾ ಈಕೆಯು ಮಾಡಿದ್ದನ್ನು ಸಹ ಈಕೆಯ ಜ್ಞಾಪಕಾರ್ಥವಾಗಿ ಹೇಳಲಾಗುವುದು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ” ಎಂದನು.
Zaprawdę powiadam wam: Gdziekolwiek kazana będzie ta Ewangielija po wszystkim świecie, i to co ona uczyniła, powiadano będzie na pamiątkę jej.
10 ೧೦ ಆಗ ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಇಸ್ಕರಿಯೋತ ಯೂದನು ಯೇಸುವನ್ನು ಮುಖ್ಯಯಾಜಕರಿಗೆ ಹಿಡಿದುಕೊಡಲು ಅವರ ಬಳಿಗೆ ಹೋದನು.
Tedy Judasz Iszkaryjot, jeden ze dwunastu, odszedł do przedniejszych kapłanów, aby im go wydał.
11 ೧೧ ಅವರು ಅದನ್ನು ಕೇಳಿ ಸಂತೋಷಪಟ್ಟು, ನಿನಗೆ ಹಣಕೊಡುತ್ತೇವೆ ಎಂದು ಮಾತುಕೊಟ್ಟರು. ಅಂದಿನಿಂದ ಯೂದನು ಯೇಸುವನ್ನು ಹಿಡಿದುಕೊಡುವುದಕ್ಕೆ ಅನುಕೂಲವಾದ ಸಂದರ್ಭವನ್ನು ಹುಡುಕುತ್ತಿದ್ದನು.
Co oni usłyszawszy, uradowali się, i obiecali mu dać pieniądze. I szukał sposobnego czasu, jakoby go wydał.
12 ೧೨ ಹುಳಿಯಿಲ್ಲದ ರೊಟ್ಟಿಯ ಹಬ್ಬದ ಮೊದಲನೆಯ ದಿನ ಅಂದರೆ ಪಸ್ಕದ ಕುರಿಮರಿಯನ್ನು ಕೊಯ್ಯುವ ದಿನವಾಗಿತ್ತು. ಶಿಷ್ಯರು ಯೇಸುವಿಗೆ, “ನೀನು ಪಸ್ಕದ ಭೋಜನ ಮಾಡಲು ನಾವು ಎಲ್ಲಿ ಸಿದ್ಧಮಾಡಬೇಕೆಂದು ಹೇಳು” ಎಂದು ಕೇಳಿದರು.
Pierwszego tedy dnia przaśników, gdy baranka wielkanocnego zabijano, rzekli mu uczniowie jego: Gdzie chcesz, abyśmy szedłszy nagotowali, żebyś jadł baranka?
13 ೧೩ ಆತನು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕರೆದು ಅವರಿಗೆ, “ನೀವು ಪಟ್ಟಣದೊಳಗೆ ಹೋಗಿರಿ. ಅಲ್ಲಿ ತುಂಬಿದ ನೀರಿನ ಕೊಡವನ್ನು ಹೊತ್ತುಕೊಂಡು ಹೋಗುವ ಒಬ್ಬ ಮನುಷ್ಯನು ನಿಮ್ಮನ್ನು ಸಂಧಿಸುವನು. ಅವನನ್ನು ಹಿಂಬಾಲಿಸಿರಿ.
I posłał dwóch z uczniów swych, i rzekł im: Idźcie do miasta, a spotka się z wami człowiek, dzban wody niosący; idźcież za nim.
14 ೧೪ ಅವನು ಯಾವ ಮನೆಯೊಳಗೆ ಹೋಗುವನೋ ಆ ಮನೆಯ ಯಜಮಾನನಿಗೆ, ‘ನಮ್ಮ ಗುರು, ತನ್ನ ಶಿಷ್ಯರ ಸಂಗಡ ಪಸ್ಕದ ಭೋಜನ ಮಾಡಲು ಕೊಠಡಿ ಎಲ್ಲಿದೆ?’ ಎಂಬುದಾಗಿ ಕೇಳುತ್ತಿದ್ದಾನೆ ಎಂದು ಹೇಳಿರಿ.
A dokądkolwiek wnijdzie, rzeczcie gospodarzowi: Nauczyciel mówi: Gdzież jest gospoda, kędy bym jadł baranka z uczniami moimi?
15 ೧೫ “ಅವನು ಸಜ್ಜುಗೊಳಿಸಿ ಸಿದ್ಧಮಾಡಿರುವ ಮೇಲಂತಸ್ತಿನ ವಿಶಾಲವಾದ ಕೊಠಡಿಯನ್ನು ನಿಮಗೆ ತೋರಿಸುವನು. ಅಲ್ಲಿ ನಮಗೆ ಭೋಜನಕ್ಕೆ ಸಿದ್ಧಮಾಡಿರಿ” ಎಂದು ಹೇಳಿ ಅವರನ್ನು ಕಳುಹಿಸಿ ಕೊಟ್ಟನು.
A on wam ukaże salę wielką usłaną i gotową, tamże nam nagotujecie.
16 ೧೬ ಶಿಷ್ಯರು ಹೊರಟು ಪಟ್ಟಣದೊಳಗೆ ಹೋಗಿ ಯೇಸು ತಮಗೆ ಹೇಳಿದಂತೆ ಎಲ್ಲವನ್ನು ಕಂಡು ಪಸ್ಕವನ್ನು ಸಿದ್ಧಮಾಡಿದರು.
I odeszli uczniowie jego, i przyszli do miasta, i znaleźli tak, jako im był powiedział, i nagotowali baranka.
17 ೧೭ ಸಂಜೆಯಾದಾಗ ಆತನು ಹನ್ನೆರಡು ಮಂದಿ ಶಿಷ್ಯರ ಸಂಗಡ ಬಂದನು.
A gdy był wieczór, przyszedł ze dwunastoma.
18 ೧೮ ಅವರು ಕುಳಿತುಕೊಂಡು ಊಟಮಾಡುತ್ತಿದ್ದಾಗ ಯೇಸು, “ನನ್ನೊಂದಿಗೆ ಊಟಮಾಡುತ್ತಿರುವ ನಿಮ್ಮಲ್ಲಿ ಒಬ್ಬನು ನನ್ನನ್ನು ಹಿಡಿದುಕೊಡುವನು ಎಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ” ಎಂದನು.
A gdy za stołem siedzieli i jedli, rzekł Jezus: Zaprawdę wam powiadam, iż jeden z was wyda mię, który je ze mną.
19 ೧೯ ಆಗ ಅವರು ಬಹು ದುಃಖದಿಂದ ಒಬ್ಬೊಬ್ಬರಾಗಿ ಆತನಿಗೆ “ನಾನಲ್ಲವಲ್ಲಾ?” ಎಂದು ಕೇಳತೊಡಗಿದರು.
Tedy oni poczęli się smucić, i do niego mówić, każdy z osobna: Azażem ja jest? A drugi: Azaż ja?
20 ೨೦ ಆತನು ಉತ್ತರವಾಗಿ ಅವರಿಗೆ “ಅವನು ಹನ್ನೆರಡು ಮಂದಿಯಲ್ಲಿ ಒಬ್ಬನು. ನನ್ನ ಸಂಗಡ ಬಟ್ಟಲಲ್ಲಿ ರೊಟ್ಟಿಯನ್ನು ಅದ್ದುವವನೇ.
Lecz on odpowiadając rzekł im: Jeden ze dwunastu, który ze mną macza w misie.
21 ೨೧ ಶಾಸ್ತ್ರದಲ್ಲಿ ಬರೆದಿರುವ ಪ್ರಕಾರ ಮನುಷ್ಯಕುಮಾರನು ಹೊರಟುಹೋಗುತ್ತಾನೆ ಸರಿ, ಆದರೆ ಯಾರು ಮನುಷ್ಯಕುಮಾರನನ್ನು ಹಿಡಿದುಕೊಡುವನೋ ಅವನ ದುರ್ಗತಿಯನ್ನು ಏನೆಂದು ಹೇಳಲಿ? ಅವನು ಹುಟ್ಟದಿದ್ದರೆ ಅವನಿಗೆ ಎಷ್ಟೋ ಒಳ್ಳೆಯದಾಗಿತ್ತು” ಅಂದನು.
Synci człowieczy idzie, jako o nim napisano: ale biada człowiekowi temu, przez którego Syn człowieczy będzie wydany! dobrze by mu było, by się był ten człowiek nie narodził.
22 ೨೨ ಅವರು ಊಟಮಾಡುತ್ತಿರುವಾಗ ಯೇಸು ರೊಟ್ಟಿಯನ್ನು ತೆಗೆದುಕೊಂಡು ದೇವರ ಸ್ತೋತ್ರ ಮಾಡಿ ಮುರಿದು ಶಿಷ್ಯರಿಗೆ ಕೊಡುತ್ತಾ “ಇದನ್ನು ತೆಗೆದುಕೊಳ್ಳಿರಿ, ಇದು ನನ್ನ ದೇಹ” ಎಂದನು.
A gdy oni jedli, wziął Jezus chleb, a pobłogosławiwszy, łamał i dał im, mówiąc: Bierzcie, jedzcie, to jest ciało moje.
23 ೨೩ ತರುವಾಯ ಪಾನಪಾತ್ರೆಯನ್ನು ತೆಗೆದುಕೊಂಡು ದೇವರಿಗೆ ಕೃತಜ್ಞತಾಸುತ್ತಿ ಸಲ್ಲಿಸಿ, ಅದನ್ನು ಅವರಿಗೆ ಕೊಟ್ಟನು. ಅವರೆಲ್ಲರೂ ಅದರಿಂದ ಕುಡಿದರು.
A wziąwszy kielich, i podziękowawszy, dał im; i pili z niego wszyscy.
24 ೨೪ ಯೇಸು ಅವರಿಗೆ, “ಇದು ನನ್ನ ರಕ್ತ, ಬಹು ಜನರಿಗಾಗಿ ಸುರಿಸಲ್ಪಡುವಒಡಂಬಡಿಕೆಯ ರಕ್ತ.
I rzekł im: To jest krew moja nowego testamentu, która się za wielu wylewa.
25 ೨೫ ನಿಮಗೆ ಸತ್ಯವಾಗಿ ಹೇಳುತ್ತೇನೆ; ನಾನು ದೇವರ ರಾಜ್ಯದಲ್ಲಿ ದ್ರಾಕ್ಷಾರಸವನ್ನು ಹೊಸದಾಗಿ ಕುಡಿಯುವ ದಿನದವರೆಗೂ ಅದನ್ನು ಇನ್ನು ಕುಡಿಯುವುದೇ ಇಲ್ಲ” ಎಂದನು.
Zaprawdę powiadam wam: Iż nie będę więcej pił z rodzaju winnej macicy, aż do dnia onego, gdy go pić będę nowy w królestwie Bożem.
26 ೨೬ ಬಳಿಕ ಅವರು ಒಂದು ಕೀರ್ತನೆ ಹಾಡಿ ಎಣ್ಣೆಮರಗಳ ಗುಡ್ಡಕ್ಕೆ ಹೊರಟು ಹೋದರು.
A zaśpiewawszy pieśń, wyszli na górę oliwną.
27 ೨೭ ಆಗ ಯೇಸು ಅವರಿಗೆ, “ನೀವೆಲ್ಲರೂ ನನ್ನನ್ನು ಬಿಟ್ಟು ಓಡಿಹೋಗುವಿರಿ. ಏಕೆಂದರೆ; “‘ನಾನುಕುರುಬನನ್ನು ಹೊಡೆಯುವೆನು; ಕುರಿಗಳು ಚದರಿ ಹೋಗುವವು’ ಎಂದು ಬರೆದಿದೆಯಲ್ಲಾ ಅಂದನು.
Potem im rzekł Jezus: Wszyscy wy zgorszycie się ze mnie tej nocy; bo napisano: Uderzę pasterza, i będą rozproszone owce.
28 ೨೮ ಆದರೂ ನಾನು ಸತ್ತು ಜೀವಿತನಾಗಿ ಎದ್ದಮೇಲೆ ನಿಮಗಿಂತ ಮುಂಚಿತವಾಗಿ ಗಲಿಲಾಯಕ್ಕೆ ಹೋಗುವೆನು” ಎಂದು ಹೇಳಿದನು.
Lecz gdy zmartwychwstanę, poprzedzę was do Galileii.
29 ೨೯ ಪೇತ್ರನು ಯೇಸುವಿಗೆ, “ಎಲ್ಲರೂ ಬಿಟ್ಟುಹೋದರೂ ನಾನು ನಿನ್ನನ್ನು ಬಿಟ್ಟುಹೋಗುವುದಿಲ್ಲ” ಎಂದು ಹೇಳಿದನು.
Ale mu Piotr powiedział: Choćby się wszyscy zgorszyli, ale ja nie.
30 ೩೦ ಯೇಸುವು ಆತನಿಗೆ, “ಸತ್ಯವಾಗಿ ಹೇಳುತ್ತೇನೆ ಇಂದು ಈ ರಾತ್ರಿಯಲ್ಲಿಯೇಕೋಳಿ ಎರಡು ಸಾರಿ ಕೂಗುವುದಕ್ಕಿಂತ ಮೊದಲು ಮೂರು ಸಾರಿ ನೀನು ನನ್ನನ್ನು ನಿರಾಕರಿಸುವೆ” ಎಂದನು.
I rzekł mu Jezus: Zaprawdę powiadam tobie, iż dziś tej nocy, pierwej niż dwakroć kur zapieje, trzykroć się mnie zaprzesz.
31 ೩೧ ಆದರೆ ಅವನು, “ನಾನು ನಿನ್ನ ಸಂಗಡ ಸಾಯಬೇಕಾಗಿ ಬಂದರೂ ನಿನ್ನನ್ನು ನಿರಾಕರಿಸುವುದೇ ಇಲ್ಲವೆಂದು” ಬಹು ಖಂಡಿತವಾಗಿ ಹೇಳಿದನು. ಅದರಂತೆಯೇ ಶಿಷ್ಯರೆಲ್ಲರೂ ಹೇಳಿದರು.
Ale on tem więcej mówił: Bym z tobą miał i umrzeć, nie zaprę się ciebie. Toć też i wszyscy mówili:
32 ೩೨ ಅವರು ಗೆತ್ಸೇಮನೆ ಎಂಬ ಸ್ಥಳಕ್ಕೆ ಬಂದರು. ಆತನು ತನ್ನ ಶಿಷ್ಯರಿಗೆ, “ನಾನು ಪ್ರಾರ್ಥನೆ ಮಾಡುವ ತನಕ, ನೀವು ಇಲ್ಲೇ ಕುಳಿತುಕೊಂಡಿರಿ” ಎಂದು ಹೇಳಿದನು.
I przyszli na miejsce, które zwano Gietsemane; tedy rzekł do uczniów swoich: Siedźcie tu, aż się pomodlę.
33 ೩೩ ಪೇತ್ರ, ಯಾಕೋಬ, ಯೋಹಾನರನ್ನು ತನ್ನ ಜೊತೆಯಲ್ಲಿ ಕರೆದುಕೊಂಡು ಹೋಗಿ ಬಹು ಬೆಚ್ಚಿಬೆರಗಾಗಿ ಮನಗುಂದಿದವನಾದನು.
I wziąwszy z sobą Piotra, i Jakóba, i Jana, począł się lękać, i bardzo tęsknić;
34 ೩೪ ಮತ್ತು ಆತನು ಅವರಿಗೆ “ನನ್ನ ಪ್ರಾಣವು ಸಾಯುವಷ್ಟು ದುಃಖಕ್ಕೆ ಒಳಗಾಗಿದೆ ನೀವು ಇಲ್ಲೇ ಕಾದುಕೊಂಡಿದ್ದು ಎಚ್ಚರವಾಗಿರಿ” ಎಂದು ಹೇಳಿದನು.
I rzekł im: Bardzo jest smutna dusza moja aż do śmierci; zostańcie tu, a czujcie.
35 ೩೫ ಆತನು ಸ್ವಲ್ಪ ಮುಂದೆ ಹೋಗಿ ನೆಲದ ಮೇಲೆ ಬಿದ್ದು ಸಾಧ್ಯವಾದರೆ ಆ ಗಳಿಗೆಯು ತನ್ನಿಂದ ದಾಟಿಹೋಗುವಂತೆ ಪ್ರಾರ್ಥಿಸಿದನು.
A postąpiwszy trochę, padł na ziemię i modlił się, aby, jeźli można, odeszła od niego ta godzina;
36 ೩೬ “ಅಪ್ಪಾ, ತಂದೆಯೇ, ನಿನಗೆ ಎಲ್ಲವೂ ಸಾಧ್ಯ. ಈ ಪಾನಪಾತ್ರೆಯನ್ನು ನನ್ನಿಂದ ತೆಗೆದುಬಿಡು ಆದರೂ ಇದು ನನ್ನ ಚಿತ್ತದಂತಲ್ಲ ನಿನ್ನ ಚಿತ್ತದಂತೆಯೇ ಆಗಲಿ” ಎಂದನು.
I rzekł: Abba Ojcze! wszystko tobie jest możno, przenieś ode mnie ten kielich; wszakże nie co ja chcę, ale co Ty.
37 ೩೭ ಆ ಮೇಲೆ ಆತನು ಬಂದು ಶಿಷ್ಯರು ನಿದ್ರೆ ಮಾಡುವುದನ್ನು ಕಂಡು ಪೇತ್ರನಿಗೆ, “ಸೀಮೋನನೇ, ನೀನು ನಿದ್ರೆಮಾಡುತ್ತಿರುವೆಯಾ? ಒಂದು ಗಳಿಗೆಯಾದರೂ ಎಚ್ಚರವಾಗಿರಲಾರೆಯಾ?
Tedy przyszedł, i znalazł je śpiące, i rzekł Piotrowi: Szymonie, śpisz? nie mogłeś czuć jednej godziny?
38 ೩೮ ಶೋಧನೆಗೆ ಒಳಗಾಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ. ಆತ್ಮವು ಸಿದ್ಧವಾಗಿದೆ; ಆದರೆ ದೇಹಕ್ಕೆ ಬಲ ಸಾಲದು” ಎಂದು ಹೇಳಿದನು.
Czujcie, a módlcie się, abyście nie weszli w pokuszenie; duchci jest ochotny, ale ciało mdłe.
39 ೩೯ ಆ ಮೇಲೆ ಪುನಃ ಹೋಗಿ ಅದೇ ಮಾತುಗಳನ್ನು ಹೇಳಿ ಪ್ರಾರ್ಥಿಸಿದನು.
I odszedłszy znowu, modlił się, też słowa mówiąc.
40 ೪೦ ಯೇಸು ಹಿಂತಿರುಗಿ ಬಂದಾಗ ಅವರು ಪುನಃ ನಿದ್ರೆ ಮಾಡುವುದನ್ನು ಕಂಡನು ಯಾಕೆಂದರೆ ಅವರ ಕಣ್ಣುಗಳು ಭಾರವಾಗಿದ್ದವು. ಮತ್ತು ಆತನಿಗೆ ಏನು ಉತ್ತರ ಕೊಡಬೇಕೆಂದು ಅವರಿಗೆ ತಿಳಿಯಲಿಲ್ಲ.
A wróciwszy się znalazł je zasię śpiące, (bo oczy ich były obciążone, ) a nie wiedzieli, co mu odpowiedzieć mieli.
41 ೪೧ ಆತನು ಮೂರನೆಯ ಸಾರಿ ಅವರ ಬಳಿಗೆ ಬಂದು, “ನೀವು ಇನ್ನು ನಿದ್ರಿಸಿ ವಿಶ್ರಾಂತಿ ತೆಗೆದುಕೊಳ್ಳುತ್ತಿರುವಿರಾ? ಸಾಕು, ಆ ಗಳಿಗೆ ಸಮೀಪಿಸಿದೆ; ಮನುಷ್ಯಕುಮಾರನು ಪಾಪಿಗಳ ಕೈಗೆ ಒಪ್ಪಿಸಲ್ಪಡುತ್ತಾನೆ.
I przyszedł po trzecie, a rzekł im: Śpijcież już i odpoczywajcie! Dosyćci! przyszłać ta godzina, oto wydany bywa Syn człowieczy w ręce grzeszników.
42 ೪೨ ಏಳಿರಿ, ಹೋಗೋಣ. ಇಗೋ, ನನ್ನನ್ನು ಪಾಪಿಗಳ ಕೈಗೆ ಹಿಡಿದುಕೊಡುವವನು ಸಮೀಪಕ್ಕೆ ಬಂದಿದ್ದಾನೆ ನೋಡಿರಿ” ಎಂದು ಹೇಳಿದನು.
Wstańcie, pójdźmy! oto który mię wydawa, blisko jest.
43 ೪೩ ಯೇಸು ಇನ್ನೂ ಮಾತನಾಡುತ್ತಾ ಇರುವಾಗಲೇ, ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಯೂದನು ಅಲ್ಲಿಗೆ ಬಂದನು. ಮುಖ್ಯಯಾಜಕರೂ, ಶಾಸ್ತ್ರಿಗಳೂ ಮತ್ತು ಹಿರಿಯರ ಕಡೆಯಿಂದ ಒಂದು ಗುಂಪು ಖಡ್ಗ, ದೊಣ್ಣೆಗಳನ್ನು ಹಿಡಿದುಕೊಂಡು ಅವನೊಂದಿಗೆ ಬಂದರು.
A wnetże, gdy on jeszcze mówił, przyszedł Judasz, który był jeden ze dwunastu, a z nim wielka zgraja z mieczami i z kijami od przedniejszych kapłanów, i od nauczonych w Piśmie i od starszych.
44 ೪೪ ಇದಲ್ಲದೆ ಆತನನ್ನು ಹಿಡಿದುಕೊಡುವವನು ಅವರಿಗೆ, “ನಾನು ಯಾರಿಗೆ ಮುದ್ದಿಡುವೆನೊ ಅವನೇ ಆತನು! ಅವನನ್ನು ಹಿಡಿದು ಭದ್ರವಾಗಿ ಕರೆದೊಯ್ಯಿರಿ” ಎಂದು ಮೊದಲೇ ಸೂಚನೆಕೊಟ್ಟಿದ್ದನು.
A ten, który go wydawał, dał im był znak, mówiąc: Któregokolwiek pocałuję, tenci jest, imajcież go, a wiedźcie ostrożnie.
45 ೪೫ ಅದರಂತೆಯೇ ಯೂದನು ಅಲ್ಲಿಗೆ ಬಂದಕೂಡಲೇ ಅವನು ಯೇಸುವಿನ ಬಳಿಗೆ ಹೋಗಿ, “ಗುರುವೇ” ಎಂದು ಹೇಳಿ ಆತನಿಗೆ ಮುದ್ದಿಟ್ಟನು.
A przyszedłszy, zarazem przystąpił do niego, i rzekł: Mistrzu, Mistrzu! i pocałował go.
46 ೪೬ ಅವರು ಯೇಸುವಿನ ಮೇಲೆ ಕೈಹಾಕಿ ಆತನನ್ನು ಹಿಡಿದರು.
Tedy się oni na niego rękoma rzucili, i pojmali go.
47 ೪೭ ಆದರೆ ಹತ್ತಿರ ನಿಂತಿದ್ದವರಲ್ಲಿ ಒಬ್ಬನು ತನ್ನ ಖಡ್ಗವನ್ನು ಹಿರಿದು ಮಹಾಯಾಜಕನ ಆಳನ್ನು ಹೊಡೆದು ಅವನ ಕಿವಿಯನ್ನು ಕತ್ತರಿಸಿ ಹಾಕಿದನು.
A jeden z tych, co tam stali, dobywszy miecza, uderzył sługę najwyższego kapłana, i uciął mu ucho.
48 ೪೮ ಅವರು ಯೇಸುವನ್ನು ಹಿಡಿದಾಗ ಆತನು ಅವರಿಗೆ, “ದರೋಡೆಗಾರನನ್ನು ಹಿಡಿಯುವುದಕ್ಕೆ ಬಂದಂತೆ ಖಡ್ಗಗಳನ್ನೂ ದೊಣ್ಣೆಗಳನ್ನೂ ತೆಗೆದುಕೊಂಡು ನನ್ನನ್ನು ಹಿಡಿಯುವುದಕ್ಕೆ ಬಂದಿರಾ?
A Jezus odpowiadając rzekł im: Jako na zbójcę wyszliście z mieczami i z kijami, abyście mię pojmali.
49 ೪೯ ನಾನು ಪ್ರತಿದಿನವು ನಿಮ್ಮ ಸಂಗಡ ಇದ್ದು ದೇವಾಲಯದಲ್ಲಿ ಬೋಧಿಸುತ್ತಿದ್ದಾಗ ನೀವು ನನ್ನನ್ನು ಬಂಧಿಸಲಿಲ್ಲ. ಆದರೆ ಶಾಸ್ತ್ರದಲ್ಲಿ ಬರೆದದ್ದು ನೆರವೇರುವಂತೆ ಹೀಗೆಲ್ಲಾ ಆಯಿತು” ಎಂದು ಉತ್ತರ ಕೊಟ್ಟನು.
Na każdy dzień bywałem u was w kościele, ucząc, a nie pojmaliście mię: ale trzeba, aby się wypełniły Pisma.
50 ೫೦ ಆಗ ಆತನ ಸಂಗಡವಿದ್ದವರೆಲ್ಲರು ಆತನನ್ನು ಬಿಟ್ಟು ಓಡಿಹೋದರು.
A tak opuściwszy go, wszyscy uciekli.
51 ೫೧ ಆಗ ಯುವಕನೊಬ್ಬನು ಮೈಮೇಲೆ ನಾರುಮಡಿಯನ್ನು ಮಾತ್ರ ಸುತ್ತಿಕೊಂಡವನಾಗಿ ಯೇಸುವಿನ ಹಿಂದೆ ಬರುತ್ತಿದ್ದನು;
A jeden jakiś młodzieniec szedł za nim, przyodziany prześcieradłem na nagie ciało; i uchwycili go młodzieńcy.
52 ೫೨ ಅವರು ಅವನನ್ನು ಹಿಡಿಯಲೂ ಅವನು ಆ ನಾರುಮಡಿಯನ್ನು ಬಿಟ್ಟು ಬರೀ ಮೈಯಲ್ಲಿ ಓಡಿಹೋದನು.
Ale on opuściwszy prześcieradło, nago uciekł od nich.
53 ೫೩ ಅವರು ಯೇಸುವನ್ನು ಮಹಾಯಾಜಕನ ಬಳಿಗೆ ಕರೆದುಕೊಂಡು ಹೋದರು. ಆತನ ಸಂಗಡ ಮುಖ್ಯಯಾಜಕರೆಲ್ಲರೂ, ಹಿರಿಯರು, ಶಾಸ್ತ್ರಿಗಳು ಕೂಡಿಬಂದರು.
Tedy przywiedli Jezusa do najwyższego kapłana: a zeszli się do niego wszyscy przedniejsi kapłani, i starsi, i nauczeni w Piśmie.
54 ೫೪ ಮತ್ತು ಪೇತ್ರನು ದೂರದಿಂದ ಆತನನ್ನು ಹಿಂಬಾಲಿಸುತ್ತಾ ಮಹಾಯಾಜಕನ ಅಂಗಳದೊಳಗೆ ಬಂದು ಕಾವಲುಗಾರರ ಸಂಗಡ ಸೇರಿ ಬೆಂಕಿಯ ಮುಂದೆ ಕುಳಿತು ಚಳಿ ಕಾಯಿಸಿಕೊಳ್ಳುತ್ತಿದ್ದನು.
A Piotr szedł z nim z daleka aż do dworu najwyższego kapłana, i siedział z sługami, grzejąc się u ognia.
55 ೫೫ ಆಗ ಮುಖ್ಯಯಾಜಕರು ಮತ್ತು ಹಿರೀಸಭೆಯ ಸದಸ್ಯರೆಲ್ಲರೂ ಯೇಸುವನ್ನು ಮರಣದಂಡನೆಗೆ ಗುರಿಪಡಿಸುವ ಸಲುವಾಗಿ ಆತನ ವಿರುದ್ಧವಾಗಿ ಸಾಕ್ಷಿ ಹುಡುಕುತ್ತಾ ಇದ್ದರು. ಆದರೆ ಅವರಿಗೆ ಸರಿಯಾದ ಒಂದು ಸಾಕ್ಷ್ಯವೂ ದೊರಕಲಿಲ್ಲ.
Ale przedniejsi kapłani, i wszystka rada szukali przeciwko Jezusowi świadectwa, aby go na śmierć wydali; wszakże nie znaleźli.
56 ೫೬ ಅನೇಕರು ಬಂದು ಆತನ ಮೇಲೆ ಸುಳ್ಳುಸಾಕ್ಷಿ ಹೇಳಿದರೂ ಅವರ ಸಾಕ್ಷಿ ಒಂದಕ್ಕೊಂದು ಸರಿಹೊಂದಲಿಲ್ಲ.
Albowiem ich wiele fałszywie świadczyli przeciwko niemu; ale świadectwa ich nie były zgodne.
57 ೫೭ ತರುವಾಯ ಕೆಲವರು ಎದ್ದು ನಿಂತು, “‘ಇವನು ಕೈಯಿಂದ ಕಟ್ಟಿರುವ ಈ ದೇವಾಲಯವನ್ನು ನಾನು ಕೆಡವಿಬಿಟ್ಟು ಕೈಯಿಂದ ಕಟ್ಟದಿರುವ ಮತ್ತೊಂದು ಆಲಯವನ್ನು ಮೂರು ದಿನಗಳಲ್ಲಿ ಕಟ್ಟುವೆನು’ ಎಂದು ಈತನು ಹೇಳಿದ್ದನ್ನು ನಾವು ಕೇಳಿಸಿಕೊಂಡಿದ್ದೇವೆ” ಎಂಬುದಾಗಿ ಆತನ ಮೇಲೆ ಸುಳ್ಳುಸಾಕ್ಷಿ ಹೇಳಿದರು.
Tedy niektórzy powstawszy, fałszywie świadczyli przeciwko niemu, mówiąc:
Myśmy to słyszeli, że mówił: Ja rozwalę ten kościół ręką uczyniony, a we trzech dniach inny nie ręką uczyniony zbuduję.
59 ೫೯ ಹೀಗೆ ಹೇಳಿದರೂ ಅವರ ಸಾಕ್ಷಿ ಒಂದಕ್ಕೊಂದು ಸರಿಹೊಂದಲಿಲ್ಲ.
Lecz i tak nie było zgodne świadectwo ich.
60 ೬೦ ಆಗ ಮಹಾಯಾಜಕನು ಅವರ ಮಧ್ಯದಲ್ಲಿ ಎದ್ದು ನಿಂತು, “ನೀನೇನೂ ಉತ್ತರ ಹೇಳುವುದಿಲ್ಲವೋ? ಇವರು ನಿನ್ನ ಮೇಲೆ ಹೇಳುವ ಈ ಸಾಕ್ಷಿ ಏನು?” ಎಂದು ಯೇಸುವನ್ನು ಕೇಳಿದನು.
Tedy stanąwszy w pośrodku najwyższy kapłan, pytał Jezusa, mówiąc: Nie odpowiadasz nic? Cóż to jest, co ci przeciwko tobie świadczą?
61 ೬೧ ಆದರೆ ಯೇಸು ಏನೂ ಉತ್ತರ ಕೊಡದೆ ಮೌನವಾಗಿದ್ದನು. ಪುನಃ ಮಹಾಯಾಜಕನು, “ನೀನು ಕ್ರಿಸ್ತನೋ, ಸ್ತುತಿಗೆ ಪಾತ್ರನಾದ ದೇವರ ಕುಮಾರನೋ?” ಎಂದು ಆತನನ್ನು ಕೇಳಿದನು.
Ale on milczał, a nic nie odpowiedział. Znowu go pytał najwyższy kapłan, i rzekł mu: Tyżeś jest on Chrystus, Syn onego Błogosławionego?
62 ೬೨ ಯೇಸುವು “ಹೌದು ನಾನೇ! “ಇದಲ್ಲದೆಮನುಷ್ಯಕುಮಾರನು ಸರ್ವಶಕ್ತನ ಬಲಗಡೆಯಲ್ಲಿ ಆಸೀನನಾಗಿರುವುದನ್ನೂ, ಆಕಾಶದ ಮೇಘಗಳಲ್ಲಿ ಬರುವುದನ್ನೂ ನೀವು ನೋಡುವಿರಿ” ಎಂದನು.
A Jezus rzekł: Jam jest; i ujrzycie Syna człowieczego, siedzącego na prawicy mocy Bożej, i przychodzącego z obłokami niebieskiemi.
63 ೬೩ ಇದನ್ನು ಕೇಳಿ ಮಹಾಯಾಜಕನು ತನ್ನ ಬಟ್ಟೆಗಳನ್ನು ಹರಿದುಕೊಂಡು, “ಇನ್ನೂ ನಮಗೆ ಸಾಕ್ಷಿಗಳ ಅಗತ್ಯವೇನಿದೆ?
Tedy najwyższy kapłan rozdarłszy szaty swoje, rzekł: Cóż jeszcze potrzebujemy świadków?
64 ೬೪ ಇವನು ಮಾಡಿದ ದೇವದೂಷಣೆಯನ್ನು ನೀವು ಕೇಳಿದಿರಲ್ಲಾ, ನಿಮಗೆ ಹೇಗೆ ತೋರುತ್ತದೆ?” ಎಂದು ಕೇಳಲು ಅವರೆಲ್ಲರೂ, ಇವನಿಗೆ ಮರಣದಂಡನೆ ಆಗಬೇಕು ಎಂದು ತೀರ್ಪು ಮಾಡಿದರು.
Słyszeliście bluźnierstwo. Cóż się wam zda? A oni wszyscy osądzili go winnym być śmierci.
65 ೬೫ ಅನಂತರ ಕೆಲವರು ಆತನ ಮೇಲೆ ಉಗುಳಿ, ಆತನ ಮುಖಕ್ಕೆ ಮುಸುಕನ್ನು ಹಾಕಿ, ಗುದ್ದಿ, ಈಗ “ಪ್ರವಾದಿಸು” ಎಂದರು. ಕಾವಲುಗಾರರು ಆತನನ್ನು ತಮ್ಮ ವಶಕ್ಕೆ ತೆಗೆದುಕೊಂಡು ಆತನಿಗೆ ಹೊಡೆದರು.
I poczęli niektórzy nań plwać, i zakrywać oblicze jego, i bić weń pięściami i mówić mu: Prorokuj! A słudzy policzkowali go.
66 ೬೬ ಇತ್ತಲಾಗಿ ಪೇತ್ರನು ಕೆಳಗೆ ಅಂಗಳದಲ್ಲಿ ಇದ್ದಾಗ ಮಹಾಯಾಜಕನ ದಾಸಿಯರಲ್ಲಿ ಒಬ್ಬಳು ಬಂದು ಅವನು ಚಳಿ ಕಾಯಿಸಿಕೊಳ್ಳುತ್ತಿರುವುದನ್ನು ಕಂಡು,
A gdy Piotr był we dworze na dole, przyszła jedna z dziewek najwyższego kapłana;
67 ೬೭ ಅವನನ್ನು ದೃಷ್ಟಿಸಿ ನೋಡಿ, “ನೀನು ಸಹ ಆ ನಜರೇತಿನ ಯೇಸುವಿನೊಂದಿಗೆ ಇದ್ದವನು” ಎಂದಳು.
A ujrzawszy Piotra grzejącego się, wejrzała nań, i rzekła: I tyś był z Jezusem Nazareńskim.
68 ೬೮ ಆದರೆ ಅವನು ನಿರಾಕರಿಸಿ, “ನೀನು ಏನು ಹೇಳುತ್ತೀಯೋ ಅದು ನನಗೆ ಗೊತ್ತಿಲ್ಲ, ಅರ್ಥವಾಗುತ್ತಲೂ ಇಲ್ಲ!” ಎಂದು ಹೇಳಿ ಮುಖ್ಯದ್ವಾರದೊಳಗಿಂದ ಹೊರಾಂಗಣಕ್ಕೆ ಹೋದನು.
Ale on się zaprzał, mówiąc: Nie znam go, a nie wiem, co ty mówisz. I wyszedł na dwór do przysionka, a kur zapiał.
69 ೬೯ ಆ ದಾಸಿಯು ಅವನನ್ನು ಪುನಃ ನೋಡಿ ಪಕ್ಕದಲ್ಲಿ ನಿಂತಿದ್ದವರಿಗೆ, “ಇವನು ಅವರಲ್ಲಿ ಒಬ್ಬನು” ಎಂದು ಹೇಳಲಾರಂಭಿಸಿದಳು.
Tedy dziewka ujrzawszy go zasię, poczęła mówić tym, którzy tam stali: Ten jest jeden z nich.
70 ೭೦ ಆಗ ಅವನು ಮತ್ತೆ ನಿರಾಕರಿಸಿದನು. ಸ್ವಲ್ಪ ಹೊತ್ತಿನ ಮೇಲೆ ಪಕ್ಕದಲ್ಲಿ ನಿಂತವರು ಪೇತ್ರನಿಗೆ, “ನಿಶ್ಚಯವಾಗಿಯೂ ನೀನು ಅವರಲ್ಲಿ ಒಬ್ಬನು, ಯಾಕೆಂದರೆ ನೀನು ಗಲಿಲಾಯದವನೇ” ಎಂದರು.
A on zasię zaprzał się. A znowu po małej chwilce ci, co tam stali, rzekli Piotrowi: Prawdziwie z nich jesteś; bo jesteś i Galilejczyk, i mowa twoja podobna jest.
71 ೭೧ ಆದರೆ ಅವನು, “ನೀವು ಮಾತನಾಡುತ್ತಿರುವ ಈ ಮನುಷ್ಯನನ್ನು ನಾನರಿಯೆ” ಎಂದು ಹೇಳಿ ತನ್ನನ್ನು ಶಪಿಸಿಕೊಳ್ಳುವುದಕ್ಕೂ ಆಣೆಯಿಟ್ಟುಕೊಳ್ಳುವುದಕ್ಕೂ ಆರಂಭಿಸಿದಾಗ, ಕೋಳಿ ಎರಡನೆಯ ಸಾರಿ ಕೂಗಿತು.
A on się począł przeklinać i przysięgać, mówiąc: Nie znam człowieka tego, o którym mówicie.
72 ೭೨ ಆಗ ಪೇತ್ರನು, “ಕೋಳಿ ಎರಡು ಸಾರಿ ಕೂಗುವುದಕ್ಕಿಂತ ಮುಂಚಿತವಾಗಿ ನೀನು ನನ್ನನ್ನು ಮೂರು ಬಾರಿ ನಿರಾಕರಿಸುವೆ” ಎಂದು ಯೇಸು ತನಗೆ ಹೇಳಿದ ಮಾತನ್ನು ನೆನಪಿಗೆ ಬಂದ ಕಾರಣ, ವ್ಯಥೆಪಟ್ಟು ದುಃಖಭರಿತನಾಗಿ ಅತ್ತನು.
Tedy po wtóre kur zapiał. I wspomniał Piotr na słowa, które mu był powiedział Jezus: że pierwej niż kur dwakroć zapieje, trzykroć się mnie zaprzesz. A wyszedłszy, płakał.