< ಮಾರ್ಕನು 16 >

1 ಸಬ್ಬತ್ ದಿನ ಕಳೆದ ಮೇಲೆ ಮಗ್ದಲದ ಮರಿಯಳೂ ಯಾಕೋಬನ ತಾಯಿ ಮರಿಯಳೂ ಮತ್ತು ಸಲೋಮಿಯೂ ಯೇಸುವಿನ ದೇಹಕ್ಕೆ ಹಚ್ಚುವುದಕ್ಕಾಗಿ ಸುಗಂಧ ದ್ರವ್ಯಗಳನ್ನು ಕೊಂಡರು.
息日一過,瑪利亞瑪達肋納、雅各伯的母親瑪利亞和撒羅默買了香料,要去傅抹耶穌。
2 ಮತ್ತು ವಾರದ ಮೊದಲನೆಯ ದಿನದ ಬೆಳಿಗ್ಗೆ ಹೊತ್ತು ಮೂಡುವಾಗ ಅವರು ಸಮಾಧಿಯ ಬಳಿಗೆ ಬಂದರು.
一週的第一天,大清早,她們來到墳墓那裏;那時, 太陽剛升起,
3 “ಸಮಾಧಿಯ ಬಾಗಿಲಿನಿಂದ ಕಲ್ಲನ್ನು ನಮಗೋಸ್ಕರ ಉರುಳಿಸುವವರು ಯಾರು?” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಳ್ಳುತ್ತಿದ್ದರು.
她們彼此說:「誰給我們從墳墓門口滾開那塊石頭呢﹖」
4 ಸಮಾಧಿಯ ಕಡೆಗೆ ನೋಡಿದಾಗ ಆ ದೊಡ್ಡ ಕಲ್ಲು ಉರುಳಿಸಲ್ಪಟ್ಟಿರುವುದನ್ನು ಕಂಡರು.
但舉目一望,看見那塊很大的石頭已經滾開了。
5 ಅವರು ಸಮಾಧಿಯೊಳಗೆ ಹೋಗಿ, ಒಬ್ಬ ಯೌವನಸ್ಥನು ಬಿಳಿ ನಿಲುವಂಗಿಯನ್ನು ಧರಿಸಿಕೊಂಡು ಬಲ ಭಾಗದಲ್ಲಿ ಕುಳಿತಿರುವುದನ್ನು ಕಂಡು ಬೆಚ್ಚಿಬೆರಗಾದರು.
她們進了墳墓,看見一個少年人,坐在右邊,穿著白衣,就非常驚恐。
6 ಅವನು ಅವರಿಗೆ, “ಭಯಪಡಬೇಡಿರಿ, ಶಿಲುಬೆಗೆ ಹಾಕಲ್ಪಟ್ಟಿದ್ದ ನಜರೇತಿನ ಯೇಸುವನ್ನು ಹುಡುಕುತ್ತಿರಲ್ಲವೇ. ಆತನು ಇಲ್ಲಿ ಇಲ್ಲ, ಜೀವಿತನಾಗಿ ಎದ್ದಿದ್ದಾನೆ; ಆತನನ್ನು ಇಟ್ಟಿದ್ದ ಸ್ಥಳ ಇದೇ ನೋಡಿರಿ,
那少年人向她們說:「不要驚惶! 你們尋找那被釘在十字架上的納匝肋人耶穌,他已經復活了, 不在這裏了;請看安放過他的地方!
7 ಆದರೆ ನೀವು ಹೋಗಿ ಆತನ ಶಿಷ್ಯರಿಗೂ ಪೇತ್ರನಿಗೂ ಆತನು ನಿಮಗೆ ಹೇಳಿದಂತೆ ನಿಮಗಿಂತ ಮೊದಲು ಗಲಿಲಾಯಕ್ಕೆ ಹೋಗುತ್ತಾನೆ, ಅಲ್ಲಿ ಆತನನ್ನು ಕಾಣುವಿರಿ ಎಂದು ತಿಳಿಸಿರಿ” ಎಂದು ಹೇಳಿದನು.
但是你們去,告訴他的門徒和伯多祿說:他在你們以先往加里肋亞去,在那裏你們要看見他,就如他所告訴你們的。」
8 ಅವರು ವಿಸ್ಮಯಗೊಂಡು ನಡುಗುತ್ತಾ ಹೊರಕ್ಕೆ ಬಂದು ಸಮಾಧಿಯ ಬಳಿಯಿಂದ ಓಡಿಹೋದರು; ಅವರು ಹೆದರಿಕೊಂಡಿದ್ದರಿಂದ ಯಾರಿಗೂ ಏನೂ ಹೇಳಲಿಲ್ಲ.
們一出來,就從墳墓那裏逃跑了,因為戰慄和恐懼攫住了她們,她們什麼也沒有給人說,因為她們害怕。
9 (note: The most reliable and earliest manuscripts do not include Mark 16:9-20.) ವಾರದ ಮೊದಲನೆಯ ದಿನ ಬೆಳಿಗ್ಗೆ ಯೇಸು ಜೀವಿತನಾಗಿ ಎದ್ದ ಮೇಲೆ ಮಗ್ದಲದ ಮರಿಯಳಿಗೆ ಮೊದಲು ಕಾಣಿಸಿಕೊಂಡನು. ಆತನು ಆಕೆಯನ್ನು ಏಳು ದೆವ್ವಗಳಿಂದ ಬಿಡಿಸಿದ್ದನು.
(note: The most reliable and earliest manuscripts do not include Mark 16:9-20.) 一週的第一天,清早,耶穌復活後,首先顯現給瑪利亞瑪達肋納:耶穌曾從她身上逐出過七個魔鬼。
10 ೧೦ ಆಕೆ ಹೋಗಿ ಆತನು ಕಾಣಿಸಿಕೊಂಡದ್ದನ್ನು ಆತನ ಜೊತೆಯಲ್ಲಿದ್ದವರಿಗೆ ತಿಳಿಸಿದಳು; ಅವರು ಶೋಕಿಸುತ್ತಾ ಅಳುತ್ತಿದ್ದರು.
她去報告那些一向同耶穌在一起的人,那時,他們正在哀號哭泣。
11 ೧೧ “ಆತನು ಬದುಕಿದ್ದಾನೆ ನನಗೆ ಕಾಣಿಸಿಕೊಂಡನು” ಎಂದು ಅವಳು ಹೇಳಿದ ಮಾತನ್ನು ಅವರು ನಂಬಲಿಲ್ಲ.
他們聽說耶穌活,並顯現於她,他們卻不相信。
12 ೧೨ ಇದಾದ ಮೇಲೆ ಶಿಷ್ಯರಲ್ಲಿ ಇಬ್ಬರು ಊರಿಗೆ ಪ್ರಯಾಣ ಮಾಡುತ್ತಿರುವಾಗ ಆತನು ಅವರಿಗೆ ಬೇರೆ ರೂಪದಲ್ಲಿ ಕಾಣಿಸಿಕೊಂಡನು.
此後,他們中有兩個人往鄉下去;走路的時候,耶穌藉了另一個形狀顯現給他,
13 ೧೩ ಅವರು ಹೋಗಿ ಉಳಿದ ಶಿಷ್ಯರಿಗೆ ತಿಳಿಸಿದರು. ಆದರೆ ಶಿಷ್ಯರು ಅವರನ್ನೂ ನಂಬಲಿಲ್ಲ.
他們就去報告其餘的人,但那些人對他們也不相信。
14 ೧೪ ಅನಂತರ ಹನ್ನೊಂದು ಮಂದಿ ಶಿಷ್ಯರು ಊಟಕ್ಕೆ ಕುಳಿತಿದ್ದಾಗ ಆತನು ಅವರಿಗೂ ಕಾಣಿಸಿಕೊಂಡನು. ತಾನು ಜೀವಿತನಾಗಿ ಎದ್ದು ಬಂದ ಮೇಲೆ ತನ್ನನ್ನು ನೋಡಿದವರ ಮಾತನ್ನು ಅವರು ನಂಬಲಿಲ್ಲವಾದ ಕಾರಣ ಆತನು ಅವರ ಅಪನಂಬಿಕೆಗೂ ಅವರ ಮನಸ್ಸಿನ ಕಾಠಿಣ್ಯಕ್ಕೂ ಅವರನ್ನು ಗದರಿಸಿದನು.
最後,當他們十一人坐席的時候,耶穌顯現給他們,責斥他們的無信和心硬,因為他們不信那些在他由死者中復活後,見了他的人。
15 ೧೫ ಆ ಮೇಲೆ ಅವರಿಗೆ, “ನೀವು ಲೋಕದ ಎಲ್ಲಾ ಕಡೆಗಳಿಗೂ ಹೋಗಿ ಸೃಷ್ಟಿಗಳಿಗೆಲ್ಲಾ ಸುವಾರ್ತೆಯನ್ನು ಸಾರಿರಿ.
然後耶穌對他們說:「你們往普天下去,向一切受造物宣傳福音,
16 ೧೬ ನಂಬಿ ದೀಕ್ಷಾಸ್ನಾನ ಮಾಡಿಸಿಕೊಳ್ಳುವವನು ರಕ್ಷಣೆ ಹೊಂದುವನು; ನಂಬದೇ ಹೋಗುವವನು ದಂಡನೆಗೆ ಗುರಿಯಾಗುವನು.
信而受洗的必要得救;但不信的必被判罪。
17 ೧೭ “ಇದಲ್ಲದೆ ನಂಬುವವರಿಂದ ಈ ಸೂಚಕಕಾರ್ಯಗಳು ಉಂಟಾಗುವವು; ಅವರು ನನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸುವರು, ಹೊಸ ಭಾಷೆಗಳಲ್ಲಿ ಮಾತನಾಡುವರು;
信的人必有這些奇蹟隨著他們:因我的名驅逐魔鬼說新語言,
18 ೧೮ ಹಾವುಗಳನ್ನು ಕೈಗಳಿಂದ ಎತ್ತಿಕೊಳ್ಳುವರು; ವಿಷಪದಾರ್ಥಗಳನ್ನೇನಾದರು ಕುಡಿದರೂ ಅವರಿಗೆ ಯಾವ ಹಾನಿಯೂ ಆಗುವುದಿಲ್ಲ. ಅವರು ರೋಗಿಗಳ ಮೇಲೆ ಕೈಯಿಟ್ಟರೆ ಅವರಿಗೆ ಸ್ವಸ್ಥವಾಗುವುದು” ಎಂದು ಹೇಳಿದನು.
手拿毒蛇,甚或喝了什麼致死的毒物,也決不受害;按手在病人身上,可使人痊癒。」
19 ೧೯ ಕರ್ತನಾದ ಯೇಸು ಅವರೊಂದಿಗೆ ಮಾತನಾಡಿದ ಮೇಲೆ ಪರಲೋಕಕ್ಕೆ ಒಯ್ಯಲ್ಪಟ್ಟು ದೇವರ ಬಲಗಡೆಯಲ್ಲಿ ಆಸನಾರೂಢನಾದನು.
主耶穌給他們說了這些話以後,就被接升天,坐在天主的右邊。
20 ೨೦ ಅನಂತರ ಅವರು ಹೊರಟುಹೋಗಿ ಎಲ್ಲಾ ಕಡೆಗಳಲ್ಲಿಯೂ ಸುವಾರ್ತೆಯನ್ನು ಸಾರಿದರು; ಮತ್ತು ಕರ್ತನು ಅವರ ಸಂಗಡ ಕೆಲಸ ಮಾಡುತ್ತಾ ಸೂಚಕಕಾರ್ಯಗಳಿಂದ ಸುವಾರ್ತೆಯ ವಾಕ್ಯವನ್ನು ದೃಢಪಡಿಸುತ್ತಾ ಇದ್ದನು.
他們出去,到處宣講,主與他們合作,並以奇跡相隨,證實所傳的道理。

< ಮಾರ್ಕನು 16 >