< ಮಾರ್ಕನು 2 >
1 ೧ ಕೆಲವು ದಿನಗಳಾದ ಮೇಲೆ ಯೇಸು ಕಪೆರ್ನೌಮಿಗೆ ಹಿಂತಿರುಗಿ ಬಂದನು. ಆತನು ಮನೆಯಲ್ಲಿದ್ದಾನೆಂಬ ವರ್ತಮಾನವು ಜನರಲ್ಲಿ ಹಬ್ಬಿತ್ತು.
कुछ दिनो बाद यीशु वापस कफरनहूम आयो, अऊर खबर फैल गयी की ऊ घर म हय।
2 ೨ ಆಗ ಬಹು ಜನರು ಅಲ್ಲಿ ಕೂಡಿಬಂದಿದ್ದರಿಂದ ಬಾಗಿಲಿನ ಬಳಿಯಲ್ಲಿಯೂ ಕೂಡ ಸ್ಥಳವಿರಲಿಲ್ಲ. ಯೇಸು ಅವರಿಗೆ ದೇವರ ವಾಕ್ಯವನ್ನು ಹೇಳುತ್ತಿದ್ದನು.
तब इतनो लोग जमा भयो कि द्वार को जवर भी जागा नहीं होती। अऊर यीशु उन्ख सन्देश सुनाय रह्यो होतो।
3 ೩ ಅಷ್ಟರಲ್ಲಿ ಕೆಲವರು ಒಬ್ಬ ಪಾರ್ಶ್ವವಾಯು ರೋಗಿಯನ್ನು ಆತನ ಬಳಿಗೆ ತಂದರು; ನಾಲ್ಕು ಮಂದಿಯು ಆತನನ್ನು ಹೊತ್ತುಕೊಂಡಿದರು.
अऊर लोग एक लकवा को रोगी ख चार आदमी सी उठाय क यीशु को जवर लायो।
4 ೪ ಜನರು ಗುಂಪಾಗಿದ್ದುದರಿಂದ ಅವರು ಆತನ ಹತ್ತಿರಕ್ಕೆ ಬರಲು ಸಾಧ್ಯವಾಗದೆ ಆತನು ನಿಂತ ಸ್ಥಳಕ್ಕೆ ಸರಿಯಾಗಿ ಮನೆಯ ಮೇಲ್ಛಾವಣಿಯನ್ನು ತೆರೆದು ಕಿಂಡಿಯೊಂದನ್ನು ಮಾಡಿ ಪಾರ್ಶ್ವವಾಯು ರೋಗಿಯನ್ನು ಮಲಗಿದ್ದ ಹಾಸಿಗೆಯ ಸಮೇತ ಕೆಳಗಿಳಿಸಿದರು.
पर जब हि भीड़ को वजह सी ओको जवर नहीं पहुंच सक्यो। त उन्न ऊ घर को ऊपर को छत ख जित यीशु होतो खोल दियो। अऊर जब हि छत ख उधड़ दियो, त वा खटिया ख जेको म लकवा को रोगी पड़यो होतो, ओख छत पर सी जमीन पर उतार दियो।
5 ೫ ಯೇಸು ಅವರ ನಂಬಿಕೆಯನ್ನು ನೋಡಿ ಆ ಪಾರ್ಶ್ವವಾಯು ರೋಗಿಗೆ, “ಮಗನೇ, ನಿನ್ನಪಾಪಗಳು ಕ್ಷಮಿಸಲ್ಪಟ್ಟಿವೆ” ಎಂದು ಹೇಳಿದನು.
यीशु न, उन्को विश्वास देख क ऊ लकवा को रोगी सी कह्यो, “हे बेटा, तोरो पाप माफ भयो।”
6 ೬ ಆದರೆ ಶಾಸ್ತ್ರಿಗಳಲ್ಲಿ ಕೆಲವರು ಅಲ್ಲಿ ಕುಳಿತುಕೊಂಡಿದ್ದು;
तब बहुत सो धर्मशास्त्री जो उत बैठ्यो होतो, अपनो-अपनो मन म बिचार करन लग्यो,
7 ೭ “ಈತನು ಯಾಕೆ ಹೀಗೆ ಮಾತನಾಡುತ್ತಾನೆ? ಇದು ದೇವದೂಷಣೆ. ದೇವರೊಬ್ಬನೇ ಹೊರತು ಮತ್ತಾರು ಪಾಪಗಳನ್ನು ಕ್ಷಮಿಸಬಲ್ಲರು?” ಎಂದು ತಮ್ಮ ಮನಸ್ಸಿನಲ್ಲಿ ಆಲೋಚಿಸಿಕೊಳ್ಳುತ್ತಿದ್ದರು.
“यो आदमी कसो बात करन की हिम्मत करय हय? यो त परमेश्वर की निन्दा करय हय! परमेश्वर को अलावा अऊर कौन पाप माफ कर सकय हय?”
8 ೮ ಹೀಗೆ ಆಲೋಚಿಸಿಕೊಳ್ಳುತ್ತಿದ್ದುದನ್ನು ಕೂಡಲೆ ಯೇಸು ತನ್ನ ಆತ್ಮದಲ್ಲಿ ತಿಳಿದುಕೊಂಡು ಅವರಿಗೆ, “ನೀವು ನಿಮ್ಮ ಮನಸ್ಸಿನಲ್ಲಿ ಯಾಕೆ ಹೀಗೆ ಯೋಚಿಸುತ್ತೀರಿ?
यीशु न खुद अपनी आत्मा म जान लियो कि हि अपनो-अपनो मन सी असो बिचार कर रह्यो हय, अऊर उन्को सी कह्यो, “तुम अपनो-अपनो मन म यो बिचार कहाली कर रह्यो हय?
9 ೯ ಯಾವುದು ಸುಲಭ? ಪಾರ್ಶ್ವವಾಯು ರೋಗಿಗೆ ‘ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ ಅನ್ನುವುದೋ’ ಅಥವಾ ‘ಎದ್ದು ನಿನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆ’ ಅನ್ನುವುದೋ?
का यो कहनो सहज हय? लकवा को रोगी सी कि ‘तोरो पाप माफ भयो, यां यो कहनो कि उठ अपनी खटिया उठाय क चल फिर?’
10 ೧೦ ಆದರೆ ಪಾಪಗಳನ್ನು ಕ್ಷಮಿಸಿಬಿಡುವುದಕ್ಕೆ ಮನುಷ್ಯಕುಮಾರನಿಗೆ ಭೂಲೋಕದಲ್ಲಿ ಅಧಿಕಾರ ಉಂಟೆಂಬುದನ್ನು ನೀವು ತಿಳಿಯಬೇಕು” ಎಂದು ಹೇಳಿ ಪಾರ್ಶ್ವವಾಯು ರೋಗಿಯನ್ನು ನೋಡಿ
यीशु न लकवा को रोगी सी कह्यो, तुम जान लेवो कि आदमी को बेटा ख धरती पर पाप माफ करन को भी अधिकार हय।”
11 ೧೧ “ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ನಿನ್ನ ಮನೆಗೆ ಹೋಗೆಂದು ನಿನಗೆ ಹೇಳುತ್ತೇನೆ” ಅಂದನು.
“मय तोरो सी कहूं हय, उठ, अपनी खटिया उठाय क अपनो घर चली जा।”
12 ೧೨ ಅವನು ಕೂಡಲೆ ಎದ್ದು ತನ್ನ ಹಾಸಿಗೆಯನ್ನು ತೆಗೆದುಕೊಂಡು ಎಲ್ಲರ ಮುಂದೆ ಹೊರಟುಹೋದನು. ಅದನ್ನು ನೋಡಿದವರೆಲ್ಲರು ಆಶ್ಚರ್ಯಚಕಿತರಾದರು, “ಇದುವರೆಗೆ ನಾವು ಇಂಥದನ್ನು ಎಂದಿಗೂ ನೋಡಿದ್ದೇ” ಇಲ್ಲವೆಂದು ಹೇಳುತ್ತಾ ದೇವರಿಗೆ ಮಹಿಮೆ ಸಲ್ಲಿಸಿದರು.
ऊ उठ्यो अऊर तुरतच खटिया उठाय क सब को सामने सी निकल क चली गयो; येको पर सब अचम्भित भयो, अऊर परमेश्वर कि बड़ायी कर क् कहन लग्यो, “हम न असो कभी नहीं देख्यो!”
13 ೧೩ ಯೇಸು ಹೊರಟು ತಿರುಗಿ ಸಮುದ್ರದ ಬಳಿಗೆ ಹೋದನು. ಜನರು ಗುಂಪಾಗಿ ಆತನ ಬಳಿಗೆ ಬಂದಾಗ ಆತನು ಅವರಿಗೆ ಉಪದೇಶ ಮಾಡಿದನು.
यीशु निकल क गलील की झील को किनारा पर गयो, अऊर बहुत भीड़ ओको जवर आयी, अऊर ऊ उन्ख शिक्षा देन लग्यो।
14 ೧೪ ಆತನು ಅಲ್ಲಿಂದ ಹೋಗುತ್ತಿರುವಾಗ ಸುಂಕ ವಸೂಲಿಮಾಡುವ ಸ್ಥಳದಲ್ಲಿ ಕುಳಿತಿದ್ದ ಅಲ್ಫಾಯನ ಮಗನಾದ ಲೇವಿಯನ್ನು ನೋಡಿ, “ನನ್ನನ್ನು ಹಿಂಬಾಲಿಸು” ಎಂದು ಅವನನ್ನು ಕರೆಯಲು, ಅವನು ಎದ್ದು ಯೇಸುವನ್ನು ಹಿಂಬಾಲಿಸಿದನು.
जातो हुयो ओन हलफई को टुरा लेवी ख कर वसुली की चौकी पर बैठ्यो देख्यो, यीशु न ओको सी कह्यो, “मोरो पीछू चली आव।” अऊर ऊ उठ क ओको पीछू चली गयो।
15 ೧೫ ಅನಂತರ ಯೇಸುವು ಆ ಲೇವಿಯನ ಮನೆಯೊಳಗೆ ಊಟಮಾಡುತ್ತಿರುವಾಗ, ಬಹು ಮಂದಿ ಸುಂಕದವರೂ, ಪಾಪಿಗಳೂ ಯೇಸುವಿನ ಮತ್ತು ಆತನ ಶಿಷ್ಯರ ಸಂಗಡ ಊಟಕ್ಕೆ ಕುಳಿತುಕೊಂಡರು. ಇಂಥವರಲ್ಲಿ ಬಹು ಮಂದಿ ಯೇಸುವನ್ನು ಹಿಂಬಾಲಿಸಿದವರಾಗಿದ್ದರು.
जब यीशु लेवी को घर म जेवन करन गयो, तब बहुत सो कर लेनवालो अऊर दूसरों लोग भी, यीशु अऊर ओको चेलावों को संग जेवन करन बैठ्यो; कहालीकि हि बहुत सो होतो, अऊर ओको पीछू चल रह्यो होतो।
16 ೧೬ ಫರಿಸಾಯರಾದ ಶಾಸ್ತ್ರಿಗಳು ಆತನು ಪಾಪಿಗಳ ಮತ್ತು ಸುಂಕದವರ ಸಂಗಡ ಊಟ ಮಾಡುವುದನ್ನು ಕಂಡು ಆತನ ಶಿಷ್ಯರಿಗೆ, “ಈತನು ಸುಂಕದವರ ಮತ್ತು ಪಾಪಿಗಳ ಸಂಗಡ ಏಕೆ ಊಟಮಾಡುತ್ತಾನೆ?” ಎಂದು ಕೇಳಿದರು.
धर्मशास्त्रियों अऊर फरीसियों न यो देख क कि ऊ त पापियों अऊर कर लेनवालो को संग जेवन कर रह्यो हय, उन्न अपनो चेलावों सी कह्यो, “ऊ त कर लेनवालो अऊर पापियों को संग कहाली खावय पीवय हय?”
17 ೧೭ ಯೇಸು ಅದನ್ನು ಕೇಳಿ ಅವರಿಗೆ, “ಕ್ಷೇಮದಿಂದಿರುವವರಿಗೆ ವೈದ್ಯನು ಬೇಕಾಗಿಲ್ಲ; ಕ್ಷೇಮವಿಲ್ಲದವರಿಗೆ ಬೇಕು. ನಾನು ನೀತಿವಂತರನ್ನು ಕರೆಯುವುದಕ್ಕೆ ಬಂದಾತನಲ್ಲ, ಪಾಪಿಗಳನ್ನು ಕರೆಯುವುದಕ್ಕೆ ಬಂದವನು” ಅಂದನು.
यीशु न यो सुन क उन्को सी कह्यो, “भलो चंगो ख डाक्टर की जरूरत नहाय, पर बीमारों ख हय: मय धर्मियों ख नहीं, पर पापियों को बहिष्कार करन आयो हय।”
18 ೧೮ ಯೋಹಾನನ ಶಿಷ್ಯರೂ ಫರಿಸಾಯರೂ ಉಪವಾಸ ಮಾಡುತ್ತಿದ್ದರು. ಅವರು ಆತನ ಬಳಿಗೆ ಬಂದು ಯೋಹಾನನ ಶಿಷ್ಯರೂ ಫರಿಸಾಯರೂ ಉಪವಾಸಮಾಡುತ್ತಾರಲ್ಲಾ? “ನಿನ್ನ ಶಿಷ್ಯರು ಏಕೆ ಉಪವಾಸಮಾಡುವುದಿಲ್ಲ?” ಎಂದು ಕೇಳಿದರು.
बपतिस्मा देन वालो यूहन्ना को चेला, अऊर फरीसियों को चेला उपवास करत होतो। कुछ लोग आय क यीशु सी पुच्छ्यो, “यूहन्ना अऊर फरीसियों को चेला कहालीकि उपवास रखय हंय, पर तोरो चेला उपवास नहीं रखय?”
19 ೧೯ ಅದಕ್ಕೆ ಯೇಸು ಅವರಿಗೆ, “ಮದುವೆಯ ಜನರು ತಮ್ಮ ಸಂಗಡ ಮದಲಿಂಗನು ಇರುವಲ್ಲಿ ಉಪವಾಸಮಾಡುವುದುಂಟೇ? ಮದಲಿಂಗನು ತಮ್ಮ ಸಂಗಡ ಇರುವ ತನಕ ಅವರು ಉಪವಾಸ ಮಾಡಲಾರರು.
यीशु न उन्को सी कह्यो, “जब तक दूल्हा बरातियों को संग रह्य हय, का हि बिना खायो जाय सकय हंय? बिल्कुल नहीं! जब तक दूल्हा उन्को संग हय, तब तक हि नहीं खाय सकय।
20 ೨೦ ಆದರೆ ಮದಲಿಂಗನನ್ನು ಅವರ ಬಳಿಯಿಂದ ತೆಗೆದುಕೊಂಡು ಹೋಗುವ ಕಾಲ ಬರುತ್ತದೆ. ಆ ಕಾಲದಲ್ಲಿ ಅವರು ಉಪವಾಸ ಮಾಡುವರು.
पर ऊ दिन आयेंन, जब दूल्हा उन्को सी अलग कर दियो जायेंन; ऊ समय हि उपवास करेंन।
21 ೨೧ “ಯಾರೂ ಹೊಸ ಬಟ್ಟೆಯ ತುಂಡನ್ನು ಹಳೆಯ ವಸ್ತ್ರಕ್ಕೆ ತ್ಯಾಪೆ ಹಚ್ಚುವುದಿಲ್ಲ. ಹಚ್ಚಿದರೆ ಆ ಹೊಸ ತ್ಯಾಪೆಯು ಹಳೆಯ ವಸ್ತ್ರವನ್ನು ಹಿಂಜುವುದರಿಂದ ಹರಕು ಹೆಚ್ಚಾಗುತ್ತದೆ.
“नयो कपड़ा को थेगड़ पुरानो कपड़ा पर कोयी नहीं लगावय; नहीं त धोवन को बाद ऊ थेगड़ ओको म सी कुछ सुकड़ जायेंन, यानेकि नयो, पुरानो सी, अऊर ऊ पहिलो सी जादा फट जायेंन।
22 ೨೨ ಮತ್ತು ಹಳೆಯಬುದ್ದಲಿಗಳಲ್ಲಿ ಹೊಸ ದ್ರಾಕ್ಷಾರಸವನ್ನು ಯಾರೂ ಹಾಕಿಡುವುದಿಲ್ಲ, ಹಾಕಿದರೆ ಆ ದ್ರಾಕ್ಷಾರಸವು ಬುದ್ದಲಿಗಳನ್ನು ಒಡೆದು ದ್ರಾಕ್ಷಾರಸವು ಮತ್ತು ಬುದ್ದಲಿಗಳು ಎರಡೂ ನಾಶವಾಗುವವು. ಆದುದರಿಂದ ಹೊಸ ದ್ರಾಕ್ಷಾರಸವನ್ನು ಹೊಸ ಬುದ್ದಲಿಗಳಲ್ಲಿ ಹಾಕಿಡತಕ್ಕದ್ದು” ಎಂದು ಹೇಳಿದನು.
नयो अंगूररस ख पुरानो चमड़ा को मशकों म कोयी नहीं रखय, नहीं त अंगूररस ऊ मशकों ख फाड़ देयेंन, अऊर अंगूररस अऊर मशकों दोयी नाश होय जायेंन; पर नयो अंगूररस नयो झोली म भरयो जावय हय।”
23 ೨೩ ಯೇಸು ಸಬ್ಬತ್ ದಿನದಲ್ಲಿ ಪೈರಿನ ಹೊಲಗಳನ್ನು ಹಾದುಹೋಗುತ್ತಿರುವಾಗ, ಆತನ ಶಿಷ್ಯರು ತೆನೆಗಳನ್ನು ಮುರಿದು ತಿಂದರು.
असो भयो कि यीशु आराम दिन ख गहूं को खेतो म सी होय क जाय रह्यो होतो, अऊर ओको चेला चलतो हुयो गहूं को लोम्बा तोड़न लग्यो।
24 ೨೪ ಫರಿಸಾಯರು ಆತನನ್ನು, “ನೋಡು, ಇವರು ಸಬ್ಬತ್ ದಿನದಲ್ಲಿ ಧರ್ಮಸಮ್ಮತವಲ್ಲದ್ದನ್ನು ಏಕೆ ಮಾಡುತ್ತಾರೆ?” ಎಂದು ಕೇಳಿದರು.
तब फरीसियों न यीशु सी कह्यो, “देखो; यो आराम को दिन ऊ काम कहाली करय हय जो उचित नहाय?”
25 ೨೫ ಆಗ ಯೇಸು ಅವರಿಗೆ, “ದಾವೀದನು ತಾನೂ ತನ್ನ ಸಂಗಡ ಇದ್ದವರೂ ಆಹಾರವಿಲ್ಲದೆ ಹಸಿದಾಗ ಏನು ಮಾಡಿದನೆಂಬುದನ್ನು ನೀವು ಎಂದಾದರೂ ಓದಲಿಲ್ಲವೋ?
यीशु न उन्को सी कह्यो, “का तुम न यो कभी नहीं पढ़्यो कि जब दाऊद ख जरूरत पड़ी, अऊर जब ऊ अऊर ओको संगी ख भूख लगी, तब ओन का करयो होतो?
26 ೨೬ ಅವನು ಮಹಾಯಾಜಕನಾದ ಅಬಿಯಾತರನ ಕಾಲದಲ್ಲಿ ದೇವಮಂದಿರದೊಳಕ್ಕೆ ಹೋಗಿ ಯಾಜಕರು ಹೊರತು ಮತ್ತಾರೂ ತಿನ್ನಬಾರದ ನೈವೇದ್ಯದ ರೊಟ್ಟಿಗಳನ್ನು ತಾನು ತಿಂದು ತನ್ನ ಸಂಗಡ ಇದ್ದವರಿಗೂ ಕೊಟ್ಟನಲ್ಲಾ?” ಎಂದು ನುಡಿಯುತ್ತಾ,
ओन कसो अबियातार महायाजक को समय म, परमेश्वर को मन्दिर म जाय क अर्पन करी हुयी रोटी खायी, पर नियम को अनुसार याजक लोगों ख छोड़ कोयी भी नहीं खाय सकय होतो, पर दाऊद न खायी अऊर अपनो संगियों ख भी दियो?”
27 ೨೭ “ಸಬ್ಬತ್ ದಿನವು ಮನುಷ್ಯರಿಗೋಸ್ಕರ ಮಾಡಲಾಯಿತೇ ಹೊರತು ಮನುಷ್ಯರನ್ನು ಸಬ್ಬತ್ ದಿನಕ್ಕಾಗಿ ಮಾಡಲಿಲ್ಲ.
अऊर यीशु न उन्को सी कह्यो, “आराम दिन आदमी लायी बनायो गयो हय, नहीं कि आदमी आराम दिन को लायी।
28 ೨೮ ಹೀಗಿರಲಾಗಿ ಮನುಷ್ಯಕುಮಾರನು ಸಬ್ಬತ್ ದಿನಕ್ಕೂ ಒಡೆಯನಾಗಿದ್ದಾನೆ” ಎಂದು ಯೇಸು ಹೇಳಿದನು.
येकोलायी आदमी को बेटा आराम दिन को भी प्रभु आय।”