< ಮಾರ್ಕನು 3 >

1 ಇನ್ನೊಂದು ಸಾರಿ ಯೇಸು ಸಭಾಮಂದಿರಕ್ಕೆ ಹೋದಾಗ ಅಲ್ಲಿ ಕೈ ಬತ್ತಿಹೋದ ಮನುಷ್ಯನೊಬ್ಬನಿದ್ದನು.
וישב ויבאו אל בית הכנסת ושם איש אשר ידו יבשה׃
2 ಕೆಲವರು ಯೇಸುವಿನ ಮೇಲೆ ತಪ್ಪುಹೊರಿಸುವುದಕ್ಕೆ, ಸಬ್ಬತ್ ದಿನದಲ್ಲಿ ಅವನನ್ನು ಸ್ವಸ್ಥಮಾಡುವನೋ ಏನೋ ಎಂದು ಆತನನ್ನು ಹೊಂಚುಹಾಕಿ ನೋಡುತ್ತಾ ಇದ್ದರು.
ויתבוננו בו אם ירפאהו בשבת למען ימצאו עליו שטנה׃
3 ಆತನು ಕೈಬತ್ತಿದ್ದವನಿಗೆ, “ಎದ್ದು ನಡುವೆ ನಿಂತುಕೋ” ಎಂದು ಹೇಳಿದನು.
ויאמר אל האיש אשר יבשה ידו קום עמד בתוך׃
4 ಆಗ ಅವರಿಗೆ, “ಸಬ್ಬತ್ ದಿನದಲ್ಲಿ ಧರ್ಮಸಮ್ಮತವಾದದು ಯಾವುದು? ಮೇಲನ್ನು ಮಾಡುವುದೋ, ಕೇಡನ್ನು ಮಾಡುವುದೋ? ಪ್ರಾಣವನ್ನು ಉಳಿಸುವುದೋ, ತೆಗೆಯುವುದೋ?” ಎಂದು ಹೇಳಲು ಅವರು ಸುಮ್ಮನಿದ್ದರು.
ויאמר אליהם הנכון בשבת להיטיב או להרע להציל נפש או לאבדה ויחרישו׃
5 ಆಗ ಯೇಸು ಅವರ ಹೃದಯ ಕಾಠಿಣ್ಯಕ್ಕಾಗಿ ದುಃಖಪಟ್ಟು, ಕೋಪದಿಂದ ಸುತ್ತಲೂ ಅವರನ್ನು ದೃಷ್ಟಿಸಿ ನೋಡಿ ಆ ಮನುಷ್ಯನಿಗೆ, “ನಿನ್ನ ಕೈ ಚಾಚು” ಎಂದು ಹೇಳಲು ಅವನು ಕೈ ಚಾಚಿದನು; ಅವನ ಕೈ ವಾಸಿಯಾಯಿತು.
ויבט אליהם סביב בחמה ויתעצב על טמטום לבבם ויאמר אל האיש פשט את ידך ויפשט ידו ותרפא ותשב כאחרת׃
6 ತಕ್ಷಣ ಫರಿಸಾಯರು ಹೊರಕ್ಕೆ ಹೋಗಿ ಹೆರೋದ್ಯರನ್ನು ಕೂಡಿಕೊಂಡು ಯಾವ ಉಪಾಯದಿಂದ ಯೇಸುವನ್ನು ಕೊಲ್ಲಬಹುದು ಎಂದು ಆತನಿಗೆ ವಿರೋಧವಾಗಿ ಒಳಸಂಚುಮಾಡಿದರು.
והפרושים יצאו מהרה ויתיעצו עליו עם ההורדוסיים לאבדו׃
7 ಆ ಮೇಲೆ ಯೇಸುವು ತನ್ನ ಶಿಷ್ಯರೊಂದಿಗೆ ಆ ಸ್ಥಳವನ್ನು ಬಿಟ್ಟು ಸಮುದ್ರದ ಬಳಿಗೆ ಹೋದನು. ಗಲಿಲಾಯದಿಂದ ಬಹು ಜನರ ಗುಂಪು ಆತನನ್ನು ಹಿಂಬಾಲಿಸಿತು.
וישוע סר משם עם תלמידיו אל יד הים וילכו אחריו המון עם רב מן הגליל ומיהודה׃
8 ಇದಲ್ಲದೆ ಆತನು ಇಂಥಿಂಥ ಕೆಲಸಗಳನ್ನು ಮಾಡುತ್ತಾನೆಂದು ಕೇಳಿ ಬಹುಜನರು ಯೂದಾಯದಿಂದಲೂ, ಯೆರೂಸಲೇಮಿನಿಂದಲೂ, ಇದೂಮಾಯದಿಂದಲೂ, ಯೊರ್ದನ್ ಹೊಳೆಯ ಆಚೆಯಿಂದಲೂ, ತೂರ್, ಸೀದೋನ್ ಪಟ್ಟಣಗಳ ಸುತ್ತಲಿನಿಂದಲೂ ಆತನ ಬಳಿಗೆ ಬಂದರು.
ומירושלים ומאדום ומעבר הירדן ומסביבות צור וצידון המון רב אשר שמעו את כל אשר עשה ויבאו אליו׃
9 ಜನರ ಗುಂಪು ಅಧಿಕವಾಗಿದ್ದುದರಿಂದ ಅವರು ತನ್ನ ಮೈಮೇಲೆ ಬಿದ್ದು ನೂಕದಂತೆ ಯೇಸು ತನಗೆ ಒಂದು ದೋಣಿಯನ್ನು ಸಿದ್ಧಮಾಡಲು ಶಿಷ್ಯರಿಗೆ ಹೇಳಿದನು.
ויאמר אל תלמידיו כי יכינו לו אניה קטנה מפני העם למען לא ילחצוהו׃
10 ೧೦ ಏಕೆಂದರೆ ಆತನು ಅನೇಕರನ್ನು ಸ್ವಸ್ಥಮಾಡಿದ್ದರಿಂದ ರೋಗಪೀಡಿತರಾಗಿದ್ದವರೆಲ್ಲರೂ ಯೇಸುವನ್ನು ಮುಟ್ಟಬೇಕೆಂದು ಮೇಲೆ ಬೀಳುತ್ತಿದ್ದರು.
כי רפא לרבים עד כי התנפלו עליו כל המנגעים לנגע בו׃
11 ೧೧ ಮತ್ತು ದೆವ್ವಗಳು ಆತನನ್ನು ಕಂಡಾಗಲ್ಲೆಲ್ಲಾ ಆತನ ಪಾದಕ್ಕೆ ಬಿದ್ದು “ನೀನು ದೇವಕುಮಾರನು” ಎಂದು ಕೂಗುತ್ತಿದ್ದವು.
והרוחות הטמאות כראותן אתו נפלו לפניו ותצעקנה לאמר אתה הוא בן אלהים׃
12 ೧೨ ಆದರೆ ಆತನು ತಾನು ಇಂಥವನೆಂಬುದಾಗಿ ಯಾರಿಗೂ ಪ್ರಕಟಿಸಬಾರದೆಂದು ಅವರಿಗೆ ಬಹು ಖಂಡಿತವಾಗಿ ಆಜ್ಞಾಪಿಸಿದನು.
ויגער בהן מאד אשר לא תגלינה אותו׃
13 ೧೩ ಆ ಮೇಲೆ ಯೇಸು ಬೆಟ್ಟವನ್ನು ಹತ್ತಿ ತನಗೆ ಬೇಕಾದವರನ್ನು ಹತ್ತಿರಕ್ಕೆ ಕರೆಯಲು ಅವರು ಆತನ ಬಳಿಗೆ ಬಂದರು.
ויעל אל ההר ויקרא אל אשר הוא חפץ בם ויבאו אליו׃
14 ೧೪ ಆತನು ಅಪೊಸ್ತಲರೆಂದು ಹೆಸರಿಟ್ಟಂಥ ಹನ್ನೆರಡು ಮಂದಿಯನ್ನು ತನ್ನ ಸಂಗಡ ಇರಬೇಕೆಂತಲೂ, ಸುವಾರ್ತೆಯನ್ನು ಸಾರುವುದಕ್ಕೆ ಅವರನ್ನು ಕಳುಹಿಸಬೇಕೆಂತಲೂ,
וישם שנים עשר איש למען יהיו אתו ולמען ישלחם לקרא׃
15 ೧೫ ದೆವ್ವಗಳನ್ನು ಬಿಡಿಸುವ ಅಧಿಕಾರ ಉಳ್ಳವರಾಗಿರಬೇಕೆಂತಲೂ ನೇಮಿಸಿದನು.
והיה להם השלטן לרפא את התחלאים ולגרש את השדים׃
16 ೧೬ ಯೇಸುವಿನಿಂದ ನೇಮಿಸಲ್ಪಟ್ಟ ಹನ್ನೆರಡು ಮಂದಿ ಇವರೇ: ಸೀಮೋನನೆಂಬವನಿಗೆ ಪೇತ್ರನೆಂದು ಹೆಸರಿಟ್ಟನು.
ויכנה את שמעון בשם פטרוס׃
17 ೧೭ ಜೆಬೆದಾಯನ ಮಗನಾದ ಯಾಕೋಬನಿಗೂ ಯಾಕೋಬನ ತಮ್ಮನಾದ ಯೋಹಾನನಿಗೂ ಬೊವನೆರ್ಗೆಸ್ ಅಂದರೆ ಸಿಡಿಲ ಮರಿಗಳು ಎಂದು ಹೆಸರಿಟ್ಟನು.
ואת יעקב בן זבדי ואת יוחנן אחי יעקב ויכנה אתם בשם בני רגוש הוא בני רעם׃
18 ೧೮ ಅಂದ್ರೆಯ, ಫಿಲಿಪ್ಪ, ಬಾರ್ತೊಲೊಮಾಯ, ಮತ್ತಾಯ, ತೋಮ, ಅಲ್ಫಾಯನ ಮಗನಾದ ಯಾಕೋಬ, ತದ್ದಾಯ, ಮತಾಭಿಮಾನಿ ಎಂದು ಹೆಸರುಗೊಂಡ ಸೀಮೋನ,
ואת אנדרי ואת פילפוס ואת בר תלמי ואת מתי ואת תומא ואת יעקב בן חלפי ואת תדי ואת שמעון הקני׃
19 ೧೯ ಯೇಸುವನ್ನು ಹಿಡಿದುಕೊಟ್ಟ ಇಸ್ಕರಿಯೋತ ಯೂದ.
ואת יהודה איש קריות אשר גם מסרו׃
20 ೨೦ ಆತನು ಮನೆಯೊಳಗೆ ಬಂದಾಗ ಅಲ್ಲಿ ಬಹಳ ಜನರು ಸೇರಿಬಂದದ್ದರಿಂದ ಊಟ ಮಾಡಲು ಕೂಡ ಆಗಲಿಲ್ಲ.
ויבאו הביתה וישב המון העם להתאסף עד כי לא יכלו אף לאכל לחם׃
21 ೨೧ ಇದನ್ನು ಕೇಳಿ ಆತನ ಬಂಧುಗಳು “ಅವನಿಗೆ ಹುಚ್ಚುಹಿಡಿದಿದೆ” ಎಂದು ಹೇಳಿ ಆತನನ್ನು ಹಿಡಿಯುವುದಕ್ಕೆ ಹೊರಟರು.
וישמעו קרוביו ויצאו להחזיק בו כי אמרו יצא מדעתו׃
22 ೨೨ ಇದಲ್ಲದೆ ಯೆರೂಸಲೇಮಿನಿಂದ ಬಂದಿದ್ದ ಶಾಸ್ತ್ರಿಗಳು, “ಇವನನ್ನು ಬೆಲ್ಜೆಬೂಲನು ಹಿಡಿದಿದ್ದಾನೆಂತಲೂ ಇವನು ದೆವ್ವಗಳ ಒಡೆಯನ ಸಹಾಯದಿಂದ ದೆವ್ವಗಳನ್ನು ಬಿಡಿಸುತ್ತಾನೆಂತಲೂ” ಹೇಳುತ್ತಿದ್ದರು.
והסופרים אשר ירדו מירושלים אמרו כי בעל זבוב נכנס בו ועל ידי שר השדים הוא מגרש את השדים׃
23 ೨೩ ಆತನು ಅವರನ್ನು ಹತ್ತಿರಕ್ಕೆ ಕರೆದು ಅವರಿಗೆ ಸಾಮ್ಯರೂಪವಾಗಿ ಹೇಳಿದ್ದೇನಂದರೆ, “ಸೈತಾನನು ಸೈತಾನನನ್ನು ಬಿಡಿಸುವುದುಂಟೇ?
ויקרא אותם אליו וידבר להם במשלים לאמר איך יוכל השטן לגרש השטן׃
24 ೨೪ ಯಾವುದೇ ಒಂದು ರಾಜ್ಯವು ತನ್ನಲ್ಲಿಯೇ ವಿಭಾಗಿಸಲ್ಪಟ್ಟರೆ ಆ ರಾಜ್ಯವು ಉಳಿಯದು;
ואם נחלקה ממלכה על עצמה לא תוכל לעמד הממלכה ההיא׃
25 ೨೫ ಹಾಗೆಯೇ ಒಂದು ಮನೆಯು ತನ್ನಲ್ಲಿಯೇ ವಿಭಾಗಿಸಲ್ಪಟ್ಟರೆ ಆ ಮನೆಯು ಉಳಿಯದು.
ובית אם נחלק על עצמו לא יוכל לעמד הבית ההוא׃
26 ೨೬ ಅದರಂತೆ ಸೈತಾನನು ತನಗೆ ವಿರೋಧವಾಗಿ ಎದ್ದು ತನ್ನಲ್ಲಿ ವಿಭಾಗಿಸಲ್ಪಟ್ಟರೆ ಅವನು ಉಳಿಯದೆ ನಾಶವಾಗಿ ಹೋಗುವನು.
ואם השטן יתקומם אל עצמו ונחלק לא יוכל לעמד כי בא קצו׃
27 ೨೭ ಅದಲ್ಲದೆ ಒಬ್ಬನು ಮೊದಲು ಬಲಿಷ್ಠನನ್ನು ಕಟ್ಟಿಹಾಕದೆ ಆ ಬಲಿಷ್ಠನ ಮನೆಯನ್ನು ನುಗ್ಗಿ ಅವನ ಆಸ್ತಿಯನ್ನು ಕದಿಯಲು ಸಾಧ್ಯವಿಲ್ಲ; ಕಟ್ಟಿಹಾಕಿದ ಮೇಲೆ ಅವನ ಮನೆಯನ್ನು ಕೊಳ್ಳೆಹೊಡೆಯಬಹುದು.
אין איש אשר יכל לבוא לבית הגבור ולגזל את כליו אם לא יאסר בראשונה את הגבור ואחר ישסה את ביתו׃
28 ೨೮ ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ, ಮನುಷ್ಯರು ಮಾಡುವ ಎಲ್ಲಾ ಪಾಪಗಳಿಗೂ ದೂಷಣೆಗಳಿಗೂ ಕ್ಷಮಾಪಣೆ ಸಿಕ್ಕುವುದು.
אמן אמר אני לכם כי כל החטאים יסלחו לבני אדם וכל הגדופים אשר יגדפו׃
29 ೨೯ ಆದರೆ ಪವಿತ್ರಾತ್ಮನನ್ನು ದೂಷಿಸಿದವನು ಎಂದಿಗೂ ಕ್ಷಮಾಪಣೆ ಹೊಂದಲಾರನು; ಅವನು ಶಾಶ್ವತವಾದ ಪಾಪದೊಳಗೆ ಸೇರಿದವನಾದನು” ಎಂದು ಹೇಳಿದನು. (aiōn g165, aiōnios g166)
אך המגדף את רוח הקדש אין לו סליחה לעולם כי יאשם בעונו לנצח׃ (aiōn g165, aiōnios g166)
30 ೩೦ ಅವರು “ಈತನಲ್ಲಿ ಅಶುದ್ಧಾತ್ಮವಿದೆ” ಎಂದು ಹೇಳುತ್ತಿದ್ದರಿಂದ ಯೇಸು ಇದನ್ನು ಹೇಳಿದನು.
כי המה אמרו רוח טמאה בו׃
31 ೩೧ ಜನರು ಯೇಸುವಿನ ಸುತ್ತಲು ಕುಳಿತುಕೊಂಡಿದ್ದಾಗ ಆತನ ತಾಯಿಯೂ, ತಮ್ಮಂದಿರೂ ಬಂದು ಹೊರಗೆ ನಿಂತುಕೊಂಡು ಆತನನ್ನು ಕರೆಕಳುಹಿಸಿದರು.
ויבאו אמו ואחיו ויעמדו מחוץ לבית וישלחו אליו לקרא לו׃
32 ೩೨ ಆ ಜನರು ಆತನಿಗೆ, “ನಿನ್ನ ತಾಯಿಯೂ, ನಿನ್ನ ತಮ್ಮಂದಿರೂ ನಿನ್ನನ್ನು ಹುಡುಕಿಕೊಂಡು ಬಂದು ಹೊರಗೆ ನಿಂತಿದ್ದಾರೆ ನೋಡು” ಎಂದು ಹೇಳಿದರು.
והמון העם ישבו סביביו ויאמרו אליו הנה אמך ואחיך בחוץ מבקשים אותך׃
33 ೩೩ ಅದಕ್ಕೆ ಆತನು ಅವರಿಗೆ, “ನನಗೆ ತಾಯಿಯೂ, ತಮ್ಮಂದಿರೂ ಯಾರು?” ಎಂದು ಹೇಳಿ ತನ್ನ ಸುತ್ತಲು ಕುಳಿತಿದ್ದವರನ್ನು ನೋಡಿ,
ויען ויאמר אליהם מי הם אמי ואחי׃
34 ೩೪ “ಇಗೋ, ನನ್ನ ತಾಯಿ, ನನ್ನ ತಮ್ಮಂದಿರು.
ויבט סביב אל הישבים סביביו ויאמר הנה אמי ואחי׃
35 ೩೫ ದೇವರ ಚಿತ್ತದಂತೆ ನಡೆಯುವವನೇ ನನಗೆ ತಮ್ಮನೂ, ತಂಗಿಯೂ, ತಾಯಿಯೂ ಆಗಿದ್ದಾರೆ” ಅಂದನು.
כי כל אשר יעשה רצון האלהים הוא אחי ואחותי ואמי׃

< ಮಾರ್ಕನು 3 >