< ಮಾರ್ಕನು 4 >
1 ೧ ಯೇಸುವು ಪುನಃ ಸಮುದ್ರದ ದಡದಲ್ಲಿ ಉಪದೇಶ ಮಾಡತೊಡಗಿದ್ದನು. ಬಹುಜನರು ಆತನ ಬಳಿಗೆ ಸೇರಿಬಂದಿದ್ದರಿಂದ ಆತನು ಸಮುದ್ರದಲ್ಲಿದ್ದ ದೋಣಿಹತ್ತಿ ಕುಳಿತುಕೊಂಡನು; ಆ ಜನರೆಲ್ಲರು ಸಮುದ್ರದ ದಡದಲ್ಲಿ ಸುತ್ತಲೂ ನೆರೆದುಬಂದಿದ್ದರು.
[Ісус] знов почав навчати на березі моря. І зібрався біля Нього великий натовп, так що Він зайшов у човен та сів [у ньому] на морі, а всі люди були біля моря, на березі.
2 ೨ ಆಗ ಆತನು ಅವರಿಗೆ ಸಾಮ್ಯರೂಪವಾಗಿ ಅನೇಕ ಸಂಗತಿಗಳನ್ನು ಉಪದೇಶಮಾಡಿದನು. ಆ ಉಪದೇಶದಲ್ಲಿ ಅವರಿಗೆ ಹೇಳಿದ್ದೇನಂದರೆ:
Він багато навчав їх притчами й казав до них у Своєму навчанні:
3 ೩ “ಕೇಳಿರಿ! ಬಿತ್ತುವವನು ಬಿತ್ತುವುದಕ್ಕೆ ಹೊರಟನು.
«Слухайте! Ось сіяч вийшов сіяти.
4 ೪ ಬಿತ್ತುವಾಗ ಕೆಲವು ಬೀಜಗಳು ದಾರಿಯ ಮಗ್ಗುಲಲ್ಲಿ ಬಿದ್ದವು; ಪಕ್ಷಿಗಳು ಬಂದು ಅವುಗಳನ್ನು ತಿಂದುಬಿಟ್ಟವು.
Коли він сіяв, деякі [зерна] впали біля дороги; прилетіли птахи та повидзьобували їх.
5 ೫ ಬೇರೆ ಕೆಲವು ಬೀಜಗಳು ಹೆಚ್ಚು ಮಣ್ಣಿಲ್ಲದ ಬಂಡೆಯ ನೆಲದ ಮೇಲೆ ಬಿದ್ದವು; ಅಲ್ಲಿ ಮಣ್ಣು ಆಳವಾಗಿಲ್ಲದ್ದರಿಂದ ಅವು ಬೇಗ ಮೊಳೆತವು;
Інші впали на кам’янистий ґрунт, де не було багато землі, і відразу проросли, бо земля була неглибока.
6 ೬ ಆದರೆ ಬಿಸಿಲೇರಿದಾಗ ಬಾಡಿ, ಬೇರಿಲ್ಲದ ಕಾರಣ ಒಣಗಿ ಹೋದವು.
Коли зійшло сонце, то опалило паростки, вони зів’яли й, не маючи коріння, всохли.
7 ೭ ಮತ್ತೆ ಕೆಲವು ಬೀಜಗಳು ಮುಳ್ಳುಗಿಡಗಳಲ್ಲಿ ಬಿದ್ದವು; ಮುಳ್ಳುಗಿಡಗಳು ಬೆಳೆದು ಅವುಗಳನ್ನು ಅಡಗಿಸಿಬಿಟ್ಟದ್ದರಿಂದ ಅವು ಫಲಕೊಡಲಿಲ್ಲ.
Ще інші впали поміж терни. Терни виросли та задушили їх, і не дали врожаю.
8 ೮ ಇನ್ನು ಕೆಲವು ಬೀಜಗಳು ಒಳ್ಳೆಯ ನೆಲದಲ್ಲಿ ಬಿದ್ದು ಮೊಳೆತು ಬೆಳೆದು ಬಂದು ಫಲಕೊಟ್ಟವು; ಅವುಗಳಲ್ಲಿ ಕೆಲವು ಮೂವತ್ತರಷ್ಟು, ಕೆಲವು ಅರುವತ್ತರಷ್ಟು, ಕೆಲವು ನೂರರಷ್ಟು ಫಲವನ್ನು ಕೊಟ್ಟವು.”
А інші впали в добру землю та дали врожай, який зійшов, виріс та вродив у тридцять, у шістдесят та в сто разів [більше]».
9 ೯ ಮತ್ತು ಆತನು “ಕೇಳುವುದಕ್ಕೆ ಕಿವಿಯುಳ್ಳವನು ಕೇಳಲಿ” ಅಂದನು.
І сказав: «Хто має вуха, щоб слухати, слухайте!»
10 ೧೦ ಆತನು ಒಬ್ಬನೇ ಇದ್ದಾಗ, ಆತನಿಗೆ ಹತ್ತಿರವಾಗಿದ್ದವರು ಹನ್ನೆರಡು ಮಂದಿ ಶಿಷ್ಯರ ಸಂಗಡ ಆ ಸಾಮ್ಯಗಳ ವಿಷಯವಾಗಿ ಆತನನ್ನು ಕೇಳಿದರು.
Коли Ісус залишився на самоті, ті, що були разом із Ним та дванадцятьма, запитали Його про притчі.
11 ೧೧ ಆತನು ಅವರಿಗೆ, “ದೇವರ ರಾಜ್ಯದ ರಹಸ್ಯ ನಿಮಗೆ ದೊರೆತಿದೆ; ಆದರೆ ಹೊರಗಿನವರಿಗೆ ಎಲ್ಲವನ್ನು ಸಾಮ್ಯಗಳ ರೂಪದಲ್ಲಿ ಹೇಳಿದ್ದೇನೆ.”
Він відповів: «Вам дана таємниця Царства Божого, а для тих, хто ззовні, усе в притчах,
12 ೧೨ “ಅವರು ಕಣ್ಣಾರೆ ಕಂಡರೂ ಗ್ರಹಿಸಲಿಲ್ಲ, ಕಿವಿಯಾರೆ ಕೇಳಿದರೂ ತಿಳಿದುಕೊಳ್ಳಲಿಲ್ಲ, ಹಾಗೆ ಕಂಡು ತಿಳಿದುಕೊಂಡಿದ್ದರೆ ಅವರು ದೇವರ ಕಡೆಗೆ ತಿರುಗಿಕೊಂಡು ಪಾಪಕ್ಷಮೆಯನ್ನು ಹೊಂದುತ್ತಿದ್ದರು.”
щоб „дивлячись очима, не бачили і, слухаючи вухами, не розуміли, щоб не повернулися і щоб не були прощені!“»
13 ೧೩ ಅನಂತರ ಆತನು ಅವರಿಗೆ ಹೇಳಿದ್ದೇನಂದರೆ, “ಈ ಸಾಮ್ಯದ ಅರ್ಥ ನಿಮಗೆ ಗೊತ್ತಾಗಲಿಲ್ಲವೋ? ಹಾಗಾದರೆ ಎಲ್ಲಾ ಸಾಮ್ಯಗಳನ್ನು ಹೇಗೆ ತಿಳಿದುಕೊಳ್ಳುವಿರಿ?
Потім сказав: «Невже ви не зрозуміли цієї притчі? Як тоді ви зрозумієте всі притчі?
14 ೧೪ ಆ ಬಿತ್ತುವವನು ವಾಕ್ಯವೆಂಬ ಬೀಜವನ್ನು ಬಿತ್ತುತ್ತಾನೆ.
Сіяч сіє Слово.
15 ೧೫ ಕೆಲವರು ವಾಕ್ಯವನ್ನು ಕೇಳಿದ ಕೂಡಲೇ ಸೈತಾನನು ಬಂದು ಅವರಲ್ಲಿ ಬಿತ್ತಿದ್ದ ವಾಕ್ಯವನ್ನು ತೆಗೆದುಬಿಡುತ್ತಾನೆ. ಇವರೇ ದಾರಿಯ ಮಗ್ಗುಲಲ್ಲಿ ಬಿತ್ತಲ್ಪಟ್ಟ ಬೀಜವಾಗಿರುವರು.
Те, що посіяне біля дороги, – це ті, що чують Слово; але коли чують, відразу приходить сатана й забирає Слово, посіяне в них.
16 ೧೬ “ಅದೇ ಪ್ರಕಾರ ಬೇರೆ ಕೆಲವರು ವಾಕ್ಯವನ್ನು ಕೇಳಿದ ಕೂಡಲೆ ಸಂತೋಷದಿಂದ ಅದನ್ನು ಸ್ವೀಕರಿಸುತ್ತಾರೆ;
Посіяне на кам’янисту землю означає тих, що, почувши Слово, відразу з радістю приймають його.
17 ೧೭ ಆದರೆ ಅವರಿಗೆ ಬೇರಿಲ್ಲದ ಕಾರಣ ಇವರು ಸ್ವಲ್ಪ ಕಾಲ ಮಾತ್ರವೇ ಇದ್ದು, ಬಳಿಕ ಆ ವಾಕ್ಯದ ನಿಮಿತ್ತವಾಗಿ ಸಂಕಟವಾಗಲಿ ಹಿಂಸೆಯಾಗಲಿ ಬಂದರೆ ಬೇಗ ಎಡವಿಬೀಳುತ್ತಾರೆ; ಇವರೇ ಬಂಡೆಯ ನೆಲದಲ್ಲಿ ಬಿತ್ತಲ್ಪಟ್ಟ ಬೀಜವಾಗಿರುವರು.
Але не мають коріння в собі, є тимчасовими. Коли настають труднощі або гоніння за Слово, вони відразу відпадають.
18 ೧೮ “ಇನ್ನು ಕೆಲವರು ಮುಳ್ಳುಗಿಡಗಳಲ್ಲಿ ಬಿದ್ದ ಬೀಜವಾಗಿರುವವರು;
Посіяне серед тернів означає тих, що чують Слово,
19 ೧೯ ಇವರು ವಾಕ್ಯವನ್ನು ಕೇಳಿದಾಗ್ಯೂ ಪ್ರಪಂಚದ ಚಿಂತೆಗಳೂ, ಐಶ್ವರ್ಯದಿಂದುಂಟಾಗುವ ವ್ಯಾಮೋಹವೂ, ಇತರ ವಿಷಯಗಳ ಮೇಲಣ ಆಸೆಗಳೂ ಸೇರಿ ಆ ವಾಕ್ಯವನ್ನು ಅಡಗಿಸಿಬಿಡುವುದರಿಂದ ನಿಷ್ಫಲರಾಗಿರುತ್ತಾರೆ. (aiōn )
але турботи цього віку, омана багатства та інших бажань придушують Слово, і воно залишається безплідним. (aiōn )
20 ೨೦ ಮತ್ತೆ ಕೆಲವರು ವಾಕ್ಯವನ್ನು ಕೇಳಿ ಕೈಕೊಂಡು ಮೂವತ್ತರಷ್ಟಾಗಲಿ ಅರವತ್ತರಷ್ಟಾಗಲಿ ನೂರರಷ್ಟಾಗಲಿ ಫಲವನ್ನು ಕೊಡುತ್ತಾರೆ; ಇವರೇ ಒಳ್ಳೆಯ ನೆಲದಲ್ಲಿ ಬಿದ್ದ ಬೀಜವಾಗಿರುವವರು” ಅಂದನು.
А посіяне в добру землю означає тих, що чують Слово, приймають його та приносять врожай: один у тридцять, інший у шістдесят, інший у сто разів більший».
21 ೨೧ ಇದಲ್ಲದೆ ಯೇಸು ಅವರಿಗೆ, “ದೀಪವನ್ನು ತಂದು ಕೊಳಗದೊಳಗಾಗಲಿ, ಮಂಚದ ಕೆಳಗಾಗಲಿ ಇಡುವುದುಂಟೇ? ಅದನ್ನು ದೀಪಸ್ತಂಭದ ಮೇಲೆ ಇಡುತ್ತಾರಲ್ಲವೇ?
[Ісус] сказав їм: «Хіба хтось приносить світильник, щоб поставити його під посудину або під ліжко? Ні, його приносять, щоб поставити на поставець.
22 ೨೨ ಮರೆಯಾಗಿರುವಂಥ ಎಲ್ಲವೂ ಬೆಳಕಿಗೆ ಬಾರದೇ ಇರುವುದಿಲ್ಲ; ಬಹಿರಂಗವಾಗದಿರುವ ಯಾವ ರಹಸ್ಯಗಳು ಇರುವುದಿಲ್ಲ.
Бо немає нічого прихованого, що не було б відкритим, і нічого таємного, що не виявилося б.
23 ೨೩ ಕೇಳುವುದಕ್ಕೆ ಕಿವಿಯುಳ್ಳವನು ಕೇಳಲಿ” ಎಂದು ಹೇಳಿದನು.
Якщо хтось має вуха, нехай слухає!»
24 ೨೪ ಮತ್ತು ಆತನು ಅವರಿಗೆ; “ನೀವು ಕಿವಿಗೊಡುವ ವಿಷಯದಲ್ಲಿ ಎಚ್ಚರಿಕೆಯಾಗಿರಿ. ನೀವು ಅಳೆಯುವ ಅಳತೆಯಿಂದಲೇ ನಿಮ್ಮನ್ನೂ ಅಳೆಯುವರು; ನಿಮಗೆ ಇನ್ನೂ ಅಧಿಕವಾಗಿ ಸೇರಿಸಿಕೊಡುವರು.
І сказав їм: «Будьте уважні, що ви чуєте. Адже якою мірою міряєте ви, такою і вам виміряють і додадуть вам.
25 ೨೫ ಇದ್ದವನಿಗೆ ಕೊಡಲ್ಪಡುವುದು; ಇಲ್ಲದವನ ಕಡೆಯಿಂದ ಇದ್ದುದನ್ನೂ ತೆಗೆಯಲ್ಪಡುವುದು” ಎಂದು ಹೇಳಿದನು.
Бо тому, хто має, додасться, і матиме надмірно, а від того, хто не має, і те, що має, забереться».
26 ೨೬ ಇದಲ್ಲದೆ ಆತನು ಅವರಿಗೆ ಮತ್ತೆ ಹೇಳಿದೇನಂದರೆ; “ಒಬ್ಬನು ಭೂಮಿಯಲ್ಲಿ ಬೀಜವನ್ನು ಬಿತ್ತಿದ ನಂತರ ಅವನು ರಾತ್ರಿಯಲ್ಲಿ ಮಲಗಿದ್ದಾಗಲೂ, ಹಗಲು ಎಚ್ಚರವಿರುವಾಗಲೂ
Він сказав: «Царство Боже схоже на чоловіка, який засіяв поле.
27 ೨೭ ಅವನಿಗೆ ತಿಳಿಯದ ರೀತಿಯಲ್ಲಿ ಆ ಬೀಜದ ಸಸಿ ಮೊಳೆತು ಬೆಳೆಯುವುದು. ಇದರಂತೆ ದೇವರ ರಾಜ್ಯವೂ ಕೂಡ.
І чи спить чоловік, чи прокидається, вночі чи вдень, насіння сходить та росте, а як це – він сам не знає.
28 ೨೮ ಭೂಮಿಯು ಮೊದಲು ಮೊಳಕೆಯನ್ನೂ, ಆ ಮೇಲೆ ತೆನೆಯನ್ನೂ, ತರುವಾಯ ತೆನೆಯಲ್ಲಿ ತುಂಬಾ ಕಾಳನ್ನೂ ತನ್ನಷ್ಟಕ್ಕೆ ತಾನೇ ಹುಟ್ಟಿಸುತ್ತದೆ.
Земля сама приносить плід: спочатку стебло, потім колос, а потім повний колос зерна.
29 ೨೯ ಆದರೆ ಫಲಮಾಗಿದಾಗ ಸುಗ್ಗಿಕಾಲ ಬಂದಿತೆಂದು ವ್ಯವಸಾಯಗಾರನು ಅದನ್ನು ಕೊಯ್ಯಲು ಕುಡುಗೋಲನ್ನು ಬಳಸುತ್ತಾನೆ” ಅಂದನು.
Коли ж врожай дозріває, він одразу надсилає [женців] із серпами, бо настали жнива».
30 ೩೦ ಇನ್ನೂ ಆತನು ಹೇಳಿದ್ದು; “ದೇವರ ರಾಜ್ಯವನ್ನು ಯಾವುದಕ್ಕೆ ಹೋಲಿಸೋಣ? ಯಾವ ಸಾಮ್ಯದಿಂದ ಅದನ್ನು ತೋರಿಸಿಕೊಡೋಣ?
І сказав Він: «До чого подібне Царство Боже? Якою притчею його пояснити?
31 ೩೧ ಅದು ಸಾಸಿವೆ ಕಾಳಿನಂತಿರುತ್ತದೆ. ನೆಲದಲ್ಲಿ ಬಿತ್ತುವಾಗ ಅದು ಭೂಮಿಯಲ್ಲಿರುವ ಎಲ್ಲಾ ಬೀಜಗಳಿಗಿಂತಲೂ ಸಣ್ಣದಾಗಿದೆ.
Воно подібне до гірчичного зерна. Коли його сіють у землю, воно є найменшим серед усього насіння на землі,
32 ೩೨ ಬಿತ್ತಿದ ಮೇಲೆ ಅದು ಬೆಳೆದು ಎಲ್ಲಾ ಗಿಡಗಳಿಗಿಂತ ದೊಡ್ಡದಾಗಿ ದೊಡ್ಡದೊಡ್ಡ ಕೊಂಬೆಗಳನ್ನು ಬಿಡುವುದರಿಂದ ಆಕಾಶದಲ್ಲಿ ಹಾರಾಡುವ ಪಕ್ಷಿಗಳು ಅದರ ನೆರಳಿನಲ್ಲಿ ವಾಸಮಾಡುವುದಕ್ಕಾಗುತ್ತದೆ” ಅಂದನು.
але коли виростає, стає більшим за всі рослини й пускає великі гілки, так що птахи небесні можуть гніздитися в його тіні».
33 ೩೩ ಆತನು ಈ ರೀತಿಯ ಅನೇಕ ಸಾಮ್ಯಗಳಿಂದ ಜನರಿಗೆ ಅರ್ಥವಾಗುವ ಹಾಗೆ ದೇವರ ವಾಕ್ಯವನ್ನು ಹೇಳುತ್ತಿದ್ದನು.
Багатьма такими притчами Він говорив їм Слово, стільки, скільки вони могли зрозуміти.
34 ೩೪ ಸಾಮ್ಯಗಳಿಲ್ಲದೆ ಆತನು ಒಂದನ್ನೂ ಹೇಳಲಿಲ್ಲಾ. ಆದರೆ ಏಕಾಂತವಾಗಿರುವಾಗ ಆತನು ತನ್ನ ಆಪ್ತ ಶಿಷ್ಯರಿಗೆ ಎಲ್ಲವನ್ನು ವಿವರಿಸಿ ಹೇಳುತ್ತಿದ್ದನು.
Не говорив їм без притчі, але коли був наодинці зі Своїми учнями, пояснював їм усе.
35 ೩೫ ಆ ದಿನ ಸಾಯಂಕಾಲವಾದಾಗ ಆತನು ಅವರಿಗೆ, “ಆಚೇದಡಕ್ಕೆ ಹೋಗೋಣ” ಎಂದು ಹೇಳಿದನು.
Коли настав вечір, Ісус сказав їм: «Переплиньмо на другий бік».
36 ೩೬ ಅವರು ಆ ಜನರ ಗುಂಪನ್ನು ಬಿಟ್ಟು ಆತನನ್ನು ಅದೇ ದೋಣಿಯಲ್ಲಿ ಹಾಗೆಯೇ ಕರೆದುಕೊಂಡು ಹೋದರು. ಬೇರೆ ದೋಣಿಗಳೂ ಸಹ ಆತನ ಸಂಗಡ ಇದ್ದವು.
Відпустивши людей, вони сіли в човен, де вже був [Ісус]. Інші човни попливли за ними.
37 ೩೭ ತರುವಾಯ ದೊಡ್ಡ ಬಿರುಗಾಳಿ ಎದ್ದು ಅಲೆಗಳು ಆ ದೋಣಿಗೆ ಬಡಿದು ನೀರು ಒಳಗೆ ನುಗ್ಗಿದ್ದರಿಂದ ಆ ದೋಣಿ ಆಗಲೇ ತುಂಬುವುದಕ್ಕೆ ಬಂದಿತ್ತು.
І здійнялася велика буря, і хвилі почали заливати човен, так що він вже наповнювався водою.
38 ೩೮ ಆದರೆ ಆತನು ದೋಣಿಯ ಹಿಂಭಾಗದಲ್ಲಿ ತಲೆದಿಂಬನ್ನು ಒರಗಿ ನಿದ್ದೆಮಾಡುತ್ತಿದ್ದನು. ಅವರು ಆತನನ್ನು ಎಬ್ಬಿಸಿ, “ಗುರುವೇ, ನಾವು ಮುಳುಗಿಹೋಗುವುದರಲ್ಲಿ ನಿನಗೆ ಚಿಂತೆಯಿಲ್ಲವೇ” ಎಂದು ಕೇಳಿದರು.
Ісус був на кормі та спав на подушці. Учні розбудили Його, кажучи: ―Учителю, невже Тобі байдуже, що ми гинемо?
39 ೩೯ ಆತನು ಎದ್ದು ಗಾಳಿಯನ್ನು ಗದರಿಸಿ, ಸಮುದ್ರಕ್ಕೆ “ಶಾಂತವಾಗಿರು, ಮೊರೆಯಬೇಡ” ಎಂದು ಅಪ್ಪಣೆಕೊಡುತ್ತಲೇ ಗಾಳಿ ನಿಂತುಹೋಗಿ ಸಮುದ್ರವು ಶಾಂತವಾಯಿತು.
Уставши, Він наказав вітрові та сказав морю: ―Тихо! Заспокойся! Вітер стих, і настала велика тиша.
40 ೪೦ ತರುವಾಯ ಆತನು ಅವರನ್ನು, “ಯಾಕೆ ಭಯಪಡುತ್ತೀರಿ? ಇನ್ನೂ ನಿಮಗೆ ನಂಬಿಕೆಯಿಲ್ಲವೇ?” ಎಂದು ಕೇಳಲು
Він сказав їм: ―Чому ви злякалися? Чому ви все ще не маєте віри?
41 ೪೧ ಅವರು ಬಹು ಭಯಪಟ್ಟು, “ಈತನು ಯಾರಿರಬಹುದು? ಗಾಳಿಯೂ, ಸಮುದ್ರವೂ ಸಹ ಈತನು ಹೇಳಿದ ಹಾಗೆ ಕೇಳುತ್ತವಲ್ಲಾ” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.
Перелякані, вони казали один одному: ―Хто ж Він такий, що навіть вітер та море підкоряються Йому?