< ಮಾರ್ಕನು 5 >

1 ಆ ಮೇಲೆ ಅವರು ಸಮುದ್ರದ ಆಚೇದಡದಲ್ಲಿದ್ದ ಗೆರಸೇನರ ಸೀಮೆಗೆ ತಲುಪಿದರು.
І перевезлись на той бік моря, у землю Гадаринську.
2 ಯೇಸು ದೋಣಿಯಿಂದ ಇಳಿದು ಬಂದ ಕೂಡಲೆ ದೆವ್ವ ಹಿಡಿದ ಒಬ್ಬ ಮನುಷ್ಯನು ಸಮಾಧಿಯ ಗವಿಗಳೊಳಗಿಂದ ಬಂದು ಆತನನ್ನು ಸಂಧಿಸಿದನು.
І скоро вийшов Він із човна, зараз зустрів Його чоловік із гробів у дусї нечистому,
3 ಅವನಿಗೆ ಸಮಾಧಿಯಲ್ಲಿನ ಗವಿಗಳೇ ವಾಸಸ್ಥಳವಾಗಿತ್ತು. ಅವನನ್ನು ಅನೇಕಸಾರಿ ಬೇಡಿಗಳಿಂದ ಮತ್ತು ಸರಪಣಿಗಳಿಂದ ಕಟ್ಟಿದ್ದರೂ ಅವನು ಸರಪಣಿಗಳನ್ನು ಕಿತ್ತು ಬೇಡಿಗಳನ್ನು ತುಂಡುತುಂಡು ಮಾಡುಬಿಡುತಿದ್ದನು; ಅವನನ್ನು ಯಾರೂ ಯಾವ ಸರಪಣಿಯಿಂದಲೂ ಕಟ್ಟಲಾರದೆ ಹೋದರು; ಅವನನ್ನು ಹತೋಟಿಗೆ ತರುವುದಕ್ಕೆ ಯಾರಿಂದಲೂ ಆಗಲಿಲ್ಲ.
що домував між гробами, і навіть залїзами ніхто не міг його звязяти:
4
часто бо заковувано його в кайдани й заліза, й розривав залїза на собі, й ламав кайдани, й ніхто його не здолїв угамувати.
5 ಅವನು ರಾತ್ರಿ ಮತ್ತು ಹಗಲು ಸಮಾಧಿಯ ಗವಿಗಳಲ್ಲಿ ಮತ್ತು ಗುಡ್ಡಗಳ ಮೇಲೆ ಆರ್ಭಟಿಸುತ್ತಾ ಚೂಪಾದ ಕಲ್ಲುಗಳಿಂದ ತನ್ನನ್ನು ಗಾಯಮಾಡಿಕೊಳ್ಳುತ್ತಾ ಇದ್ದನು.
І по всяк час у ночі і в день пробував він у горах та гробах, кричавши, та бивши себе каміннєм.
6 ಅವನು ಯೇಸುವನ್ನು ದೂರದಿಂದ ಕಂಡು ಓಡಿಬಂದು ಆತನಿಗೆ ಅಡ್ಡಬಿದ್ದು,
Побачивши ж Ісуса оддалеки, прибіг та й уклонив ся Йому,
7 ಮಹಾಶಬ್ದದಿಂದ ಆರ್ಭಟಿಸಿ, “ಯೇಸುವೇ, ಮಹೋನ್ನತನಾದ ದೇವರ ಮಗನೇ, ನನ್ನ ಗೊಡವೆ ನಿನಗೇಕೆ? ದೇವರಾಣೆ ನನ್ನನ್ನು ಹಿಂಸಿಸಬೇಡ ಎಂದು ನಿನ್ನನ್ನು ನಾನು ಬೇಡಿಕೊಳ್ಳುತ್ತೇನೆ” ಎಂದು ಹೇಳಿದನು.
і, закричавши голосом великим, каже: Що мені й Тобі, Ісусе, Сину Бога Вишнього? Заклинаю Тебе Богом, не муч мене.
8 ಏಕೆಂದರೆ ಯೇಸು, “ಅಶುದ್ಧಾತ್ಮವೇ ಇವನನ್ನು ಬಿಟ್ಟುಹೋಗು” ಎಂದು ಆಜ್ಞಾಪಿಸಿದ್ದನು.
(Рече бо йому: Вийди, душе нечистий, з чоловіка. )
9 ಯೇಸು, “ನಿನ್ನ ಹೆಸರು ಏನೆಂದು” ಅವನನ್ನು ಕೇಳಿದ್ದಕ್ಕೆ ಅವನು, “ನನ್ನ ಹೆಸರು ದಂಡು; ಯಾಕೆಂದರೆ ನಾವು ಬಹು ಮಂದಿ ಇದ್ದೇವೆ” ಎಂದು ಹೇಳಿ,
І спитав його: Яке імя твоє? І відповів, кажучи: Імя моє Легион, бо нас багато.
10 ೧೦ ನಮ್ಮನ್ನು ಈ ಪ್ರಾಂತ್ಯದಿಂದ ಹೊರಡಿಸಬೇಡ ಎಂದು ಆತನನ್ನು ಬಹಳವಾಗಿ ಬೇಡಿಕೊಂಡವು.
І благав Його вельми, щоб не висилав їх геть із тієї сторони.
11 ೧೧ ಅಲ್ಲಿಯ ಗುಡ್ಡದಲ್ಲಿ ಹಂದಿಗಳ ದೊಡ್ಡ ಹಿಂಡು ಮೇಯುತ್ತಿತ್ತು.
Пас ся ж там поблизу гір великий гурт свиней.
12 ೧೨ ಆ ಅಶುದ್ಧಾತ್ಮಗಳು, “ಆ ಹಂದಿಗಳೊಳಗೆ ಸೇರಿಕೊಳ್ಳುವುದಕ್ಕೆ ನಮ್ಮನ್ನು ಕಳುಹಿಸಿಕೊಡು” ಎಂದು ಆತನನ್ನು ಬೇಡಿಕೊಂಡವು.
І благали Його всї біси, кажучи: Пішли нас у свинї, щоб ми ввійшли в них.
13 ೧೩ ಆತನು ಅವುಗಳಿಗೆ ಅನುಮತಿಸಲು ಆ ದೆವ್ವಗಳು ಆ ಮನುಷ್ಯನಿಂದ ಹೊರಗೆ ಬಂದು ಹಂದಿಗಳೊಳಗೆ ಪ್ರವೇಶಿಸಿದವು; ಅಲ್ಲಿ ಹೆಚ್ಚುಕಡಿಮೆ ಎರಡು ಸಾವಿರ ಹಂದಿಗಳಿದ್ದವು. ಆ ಹಂದಿಗಳು ಓಡಿ ಹೋಗಿ ಇಳಿಜಾರು ಸ್ಥಳದಿಂದ ಸಮುದ್ರದೊಳಗೆ ಬಿದ್ದು ನೀರಿನಲ್ಲಿ ಮುಳುಗಿ ಉಸಿರು ಕಟ್ಟಿ ಸತ್ತುಹೋದವು.
І зараз дозволив їм Ісус. І вийшовши нечисті духи, увійшли в свині; і кинув ся гурт із кручі в море, (було ж їх тисяч зо дві, ) та й потонули в морі.
14 ೧೪ ಅವುಗಳನ್ನು ಮೇಯಿಸುವವರು ಓಡಿಹೋಗಿ ನಡೆದಿರುವ ಸಂಗತಿಯನ್ನು ಆ ಊರಲ್ಲಿಯೂ ಪಕ್ಕದ ಹಳ್ಳಿಗಳಲ್ಲಿಯೂ ತಿಳಿಸಲು ಜನರು ನಡೆದ ಸಂಗತಿ ಏನೆಂದು ನೋಡುವುದಕ್ಕೆ ಹೊರಟು ಯೇಸು ಇದ್ದಲ್ಲಿಗೆ ಬಂದರು.
А ті, що пасли свинї, побігли, та й розказали в городі і в селах. І повиходили дивитись, що се сталось.
15 ೧೫ ಆ ದೆವ್ವಹಿಡಿದಿದ್ದವನು ಅಂದರೆ ದೆವ್ವಗಳ ದಂಡಿನಿಂದ ಬಂಧಿಸಲ್ಪಟ್ಟವನು, ಬಟ್ಟೆಗಳನ್ನು ಹಾಕಿಕೊಂಡು ಸುಬುದ್ಧಿಯಿಂದ ಕುಳಿತಿರುವುದನ್ನು ನೋಡಿ ಹೆದರಿದರು.
І приходять до Ісуса, й бачять біснуватого; сидить одягнений і при розумі, того, що мав Легиона, та й полякались.
16 ೧೬ ನಡೆದ ಸಂಗತಿಯನ್ನು ನೋಡಿದ್ದವರು ಆ ದೆವ್ವಹಿಡಿದವನಿಗೆ ಸಂಭವಿಸಿದೆಲ್ಲವನ್ನು ಮತ್ತು ಹಂದಿಗಳ ವಿಷಯವನ್ನೂ ಅವರಿಗೆ ವಿವರಿಸಿದರು.
І розказували їм ті, що бачили, що сталось біснуватому, й про свині.
17 ೧೭ ಆಗ ಅವರು ಯೇಸುವಿಗೆ ತಮ್ಮ ಸೀಮೆಯನ್ನು ಬಿಟ್ಟು ಹೋಗಬೇಕೆಂದು ಬೇಡಿಕೊಂಡರು.
І почали вони просити Його вийти з їх гряниць.
18 ೧೮ ಆತನು ದೋಣಿಯನ್ನು ಹತ್ತುವಾಗ ಆ ದೆವ್ವಗಳ ಬಂಧನದಿಂದ ಬಿಡುಗಡೆ ಹೊಂದಿದವನು, ನಾನು ನಿನ್ನ ಬಳಿಯಲ್ಲಿಯೇ ಇರುತ್ತೇನೆಂದು ಆತನನ್ನು ಬೇಡಿದನು.
І як увійшов Він у човен, просив Його той, що був біснуватий, щоб бути з Ним.
19 ೧೯ ಆದರೆ ಯೇಸು ಅವನ ಬೇಡಿಕೆಯನ್ನು ಒಪ್ಪದೆ ಅವನಿಗೆ, “ನೀನು ನಿನ್ನ ಮನೆಗೂ ನಿನ್ನ ಜನರ ಬಳಿಗೂ ಹೋಗಿ ಕರ್ತನು ನಿನ್ನಲ್ಲಿ ಕರುಣೆಯಿಟ್ಟು ನಿನಗೆ ಏನೇನು ಉಪಕಾರಗಳನ್ನು ಮಾಡಿದ್ದಾನೋ ಅದನ್ನು ಹೇಳು” ಅಂದನು.
Ісус же не дозволив йому, а рече до него: Йди до дому твого до твоїх, і розкажи їм, що тобі Господь зробив, і як помилував тебе.
20 ೨೦ ಅವನು ಹೊರಟುಹೋಗಿ ಯೇಸು ತನಗೆ ಮಾಡಿದ ಉಪಕಾರಗಳನ್ನು ದೆಕಪೊಲಿ ಎಂಬ ಸೀಮೆಯಲ್ಲಿ ಸಾರುವುದಕ್ಕೆ ಪ್ರಾರಂಭಿಸಿದನು; ಎಲ್ಲರೂ ಆಶ್ಚರ್ಯಪಟ್ಟರು.
І пійшов і почав проповідувати в Десятиградї, що зробив йому Ісус; і всі дивувались.
21 ೨೧ ಯೇಸು ತಿರುಗಿ ದೋಣಿಯಲ್ಲಿ ಈಚೇದಡಕ್ಕೆ ಬಂದಾಗ ಜನರು ಬಹು ದೊಡ್ಡ ಗುಂಪಾಗಿ ಆತನ ಬಳಿಗೆ ಬಂದರು; ಆತನು ಸಮುದ್ರದ ದಡದಲ್ಲಿದ್ದನು.
А як переплив Ісус човном ізнов на той бік, зібралось багато народу до Него; а був Він над морем.
22 ೨೨ ಆಗ ಸಭಾಮಂದಿರದ ಅಧಿಕಾರಿಗಳಲ್ಲಿ ಒಬ್ಬನಾದ ಯಾಯೀರನೆಂಬವನು ಬಂದು ಯೇಸುವನ್ನು ಕಂಡು ಆತನ ಪಾದಗಳಿಗೆ ಬಿದ್ದು,
І ось приходить один із школьних старшин, на ймя Яір, і, побачивши Його, упав у ноги Йому,
23 ೨೩ “ನನ್ನ ಚಿಕ್ಕ ಮಗಳು ಈಗ ಸಾವಿನ ಅಂಚಿನಲ್ಲಿದ್ದಾಳೆ; ಆಕೆಯು ಗುಣಹೊಂದಿ ಬದುಕುವಂತೆ ದಯಮಾಡಿ ನೀನು ಬಂದು ಆಕೆಯ ಮೇಲೆ ನಿನ್ನ ಕೈಯಿಡಬೇಕು” ಎಂದು ಆತನನ್ನು ಬಹಳವಾಗಿ ಬೇಡಿಕೊಂಡನು.
і вельми благав Його, говорячи: Дочка моя кінчить ся, прийди й положи на неї руки, нехай одужає і буде жива.
24 ೨೪ ಯೇಸುವು ಅವನ ಸಂಗಡ ಹೋದನು; ಮತ್ತು ಬಹು ಜನರು ಆತನನ್ನು ನೂಕುತ್ತಾ ಹಿಂಬಾಲಿಸಿದರು.
І пійшов із ним, і слїдом за Ним пійшло багато народу, й тиснулись до Него.
25 ೨೫ ಆಗ ಅಲ್ಲಿ ಹನ್ನೆರಡು ವರ್ಷದಿಂದ ರಕ್ತಕುಸುಮ ರೋಗವಿದ್ದ ಒಬ್ಬ ಹೆಂಗಸು ಇದ್ದಳು.
Жінка ж одна, що була в кровотічі років дванайцять,
26 ೨೬ ಅನೇಕ ವೈದ್ಯರ ಚಿಕಿತ್ಸೆಯಿಂದ ಆಕೆಯು ಬಹು ಕಷ್ಟವನ್ನು ಅನುಭವಿಸಿ, ಕೈಯಲ್ಲಿದ್ದ ಹಣವನ್ನೆಲ್ಲಾ ವ್ಯಯಮಾಡಿದ್ದರೂ ಅವಳ ರೋಗ ಮಾತ್ರ ಹೆಚ್ಚುತ್ತಾ ಬಂದಿತ್ತೇ ಹೊರತು ಸ್ವಲ್ಪವೂ ಗುಣಮುಖ ಆಗುತ್ತಿರಲಿಲ್ಲ.
і багато витерпіла від многих лїкарів, і витратила все, що мала, й нїякої пільги не дїзнала, а ще більш їй погіршало,
27 ೨೭ ಆ ಹೆಂಗಸು ಯೇಸುವಿನ ಸಮಾಚಾರವನ್ನು ಕೇಳಿದ್ದರಿಂದ, “ನಾನು ಆತನ ಉಡುಪನ್ನು ಮುಟ್ಟಿದರೆ ಸಾಕು, ಸ್ವಸ್ಥಳಾಗುವೆನು” ಎಂದು ಆಲೋಚಿಸಿ ಗುಂಪಿನಲ್ಲಿ ಹಿಂದಿನಿಂದ ಬಂದು ಆತನ ಉಡುಪನ್ನು ಮುಟ್ಟಿದಳು.
почувши про Ісуса, приступила між народом іззаду, та й приторкнулась до одежі Його.
28 ೨೮
Казала бо: Що, коли до одежі Його приторкнусь, спасу ся.
29 ೨೯ ಮುಟ್ಟಿದ ಕೂಡಲೆ ಆಕೆಯ ರಕ್ತಸ್ರಾವವು ನಿಂತುಹೋದುದರಿಂದ ಆಕೆಯು, ನನ್ನನ್ನು ಕಾಡಿದ ರೋಗವು ಹೋಗಿ ನನಗೆ ಗುಣವಾಯಿತು ಎಂದು ತನ್ನ ಮನಸ್ಸಿನಲ್ಲಿ ತಿಳಿದುಕೊಂಡಳು.
І зараз висохло жерело крові її і почула вона в тїлї, що спїлилась од недуги.
30 ೩೦ ಆ ಕ್ಷಣವೇ ಯೇಸು ತನ್ನಿಂದ ಶಕ್ತಿಯು ಹೊರಟಿತೆಂದು ತನ್ನಲ್ಲಿ ತಿಳಿದುಕೊಂಡು ಗುಂಪಿನಲ್ಲಿ ಹಿಂತಿರುಗಿ, “ನನ್ನ ಉಡುಪನ್ನು ಮುಟ್ಟಿದವರು ಯಾರು?” ಎಂದು ಕೇಳಲು
І зараз Ісус, почувши в собі, що сила вийшла з Него, обернувшись між народом, рече: Хто приторкнувсь до одежі моєї?
31 ೩೧ ಆತನ ಶಿಷ್ಯರು ಆತನಿಗೆ, “ನಿನ್ನ ಸುತ್ತಲೂ ಜನರು ಮುತ್ತಿಕೊಂಡು ನೂಕುವುದು ನಿನಗೆ ತಿಳಿದೇ ಇದೆ. ಆದರೂ ‘ನನ್ನನ್ನು ಮುಟ್ಟಿದವರು ಯಾರು’ ಎಂದು ಕೇಳುತ್ತೀಯಲ್ಲಾ?” ಎಂದರು.
І казали Йому ученики Його: Ти бачиш, як народ товпить ся до Тебе, та й питаєш: Хто приторкнув ся до мене?
32 ೩೨ ಆದರೆ ಯೇಸು ಈ ಕೆಲಸ ಮಾಡಿದವರನ್ನು ನೋಡಬೇಕೆಂದು ಸುತ್ತಲು ನೋಡುತ್ತಾ ಇರಲಾಗಿ,
І позирнув Він кругом, щоб побачити ту, що се зробила.
33 ೩೩ ಆ ಮಹಿಳೆ ತನಗೆ ಸಂಭವಿಸಿದ್ದನ್ನು ಗ್ರಹಿಸಿ, ಭಯದಿಂದ ನಡುಗುತ್ತಾ ಬಂದು ಆತನಿಗೆ ಅಡ್ಡಬಿದ್ದು ನಡೆದ ಸಂಗತಿಯನ್ನೆಲ್ಲಾ ತಿಳಿಸಿದಳು.
Жінка ж, злякавшись і затрусившись, знаючи, що сталось із нею, приступила, та й упала перед Ним, та й сказала Йому всю правду.
34 ೩೪ ಆತನು ಆಕೆಗೆ, “ಮಗಳೇ, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಮಾಡಿತು; ಸಮಾಧಾನದಿಂದ ಹೋಗು; ನಿನ್ನ ರೋಗದಿಂದ ನೀನು ಸ್ವಸ್ಥಳಾಗಿರುವೆ” ಎಂದು ಹೇಳಿದನು.
Він же рече їй: Дочко, віра твоя спасла тебе. Йди з упокоєм, і будь здорова від недуги твоєї.
35 ೩೫ ಆತನು ಇನ್ನೂ ಮಾತನಾಡುತ್ತಿರುವಾಗಲೇ ಸಭಾಮಂದಿರದ ಅಧಿಕಾರಿಯ ಕಡೆಯವರು ಬಂದು, “ನಿನ್ನ ಮಗಳು ತೀರಿಹೋದಳು; ಇನ್ನೇಕೆ ಗುರುವಿಗೆ ತೊಂದರೆ ಕೊಡುವಿ?” ಅಂದರು.
Ще говорив Він, приходять від школьного старшини, кажучи: Що дочка твоя вмерла; на що ще трудиш учителя?
36 ೩೬ ಅವರು ಆಡಿದ ಮಾತನ್ನು ಯೇಸು ಗಣನೆಗೆ ತಂದುಕೊಳ್ಳದೆ ಸಭಾಮಂದಿರದ ಅಧಿಕಾರಿಗೆ, “ಅಂಜಬೇಡ, ನಂಬಿಕೆ ಮಾತ್ರ ಇರಲಿ” ಎಂದು ಹೇಳಿದನು.
Ісус же, почувши сказане слово, рече зараз школьному старшинї: Не лякайсь, тільки віруй.
37 ೩೭ ಮತ್ತು ಆತನು ಪೇತ್ರ, ಯಾಕೋಬ, ಮತ್ತು ಯಾಕೋಬನ ತಮ್ಮನಾದ ಯೋಹಾನ ಇವರನ್ನೇ ಹೊರತು ಬೇರೆ ಯಾರನ್ನೂ ತನ್ನೊಂದಿಗೆ ಬರುವುದಕ್ಕೆ ಅನುಮತಿಸಲಿಲ್ಲ.
І не дозволив нікому йти з собою, тільки Петрові, та Якову, та Йоанові, брату Якова.
38 ೩೮ ಅವರು ಆ ಸಭಾಮಂದಿರದ ಅಧಿಕಾರಿಯ ಮನೆಗೆ ಬಂದಾಗ ಅಲ್ಲಿ ಜನರ ಗದ್ದಲವನ್ನೂ ಕೆಲವರು ಅಳುವುದನ್ನೂ ಗೋಳಾಡುವುದನ್ನೂ ಆತನು ಕಂಡನು.
І приходить у господу до школьного старшини, й бачить трівогу, й плачущих, і голосячих вельми.
39 ೩೯ ಆತನು ಒಳಕ್ಕೆ ಹೋಗಿ, “ನೀವು ಗದ್ದಲ ಮಾಡುವುದೂ ಅಳುವುದೂ ಯಾಕೆ? ಹುಡುಗಿ ಸತ್ತಿಲ್ಲ; ಅವಳು ನಿದ್ದೆಮಾಡುತ್ತಿದ್ದಾಳೆ” ಅನ್ನಲು,
І, ввійшовши, рече їм: Чого трівожетесь та голосите? Дївча не вмерло, а спить.
40 ೪೦ ಅವರು ಆತನನ್ನು ಪರಿಹಾಸ್ಯಮಾಡಿದರು. ಆದರೆ ಆತನು ಎಲ್ಲರನ್ನು ಹೊರಕ್ಕೆ ಕಳುಹಿಸಿ ಆ ಹುಡುಗಿಯ ತಂದೆತಾಯಿಗಳನ್ನೂ ತನ್ನೊಂದಿಗಿದ್ದವರನ್ನೂ ಹುಡುಗಿಯಿದ್ದಲ್ಲಿಗೆ ಕರೆದುಕೊಂಡು ಹೋಗಿ,
І насьміхали ся з Него. Він же, виславши всїх, бере батька та матір дівчинки, й тих, що з Ним, і ввіходить, де дівча лежало.
41 ೪೧ ಅವಳ ಕೈಹಿಡಿದು, “ತಲಿಥಾಕೂಮ್” ಅಂದನು. ಈ ಮಾತಿಗೆ “ಅಮ್ಮಣ್ಣೀ, ಎದ್ದೇಳು ಎಂದು ನಾನು ಹೇಳುತ್ತೇನೆ” ಎಂದರ್ಥ.
Ї, взявши дівча за руку, рече їй: Талита куми, що єсть перекладом: Дівчинко, тобі глаголю: встань.
42 ೪೨ ಕೂಡಲೆ ಆ ಹುಡುಗಿ ಎದ್ದು ನಡೆದಾಡಿದಳು; ಆಕೆಯು ಹನ್ನೆರಡು ವರ್ಷ ವಯಸ್ಸಿನವಳು.
І зараз устало дівча, й ходило, бо було дванайцяти років. І дивувались дивом великим.
43 ೪೩ ಅವರೆಲ್ಲರೂ ಬಹಳ ಆಶ್ಚರ್ಯದಿಂದ ಬೆರಗಾದರು. ಆ ಮೇಲೆ ಆತನು ಅವರಿಗೆ, ಇದು ಯಾರಿಗೂ ತಿಳಿಯಬಾರದೆಂದು ಕಟ್ಟಪ್ಪಣೆ ಮಾಡಿದನು. ಆ ಹುಡುಗಿಗೆ ಊಟ ಮಾಡಲು ಏನಾದರೂ ಕೊಡಿರಿ ಎಂದು ಹೇಳಿದನು.
І пильно наказав їм, щоб ніхто не довідав ся про се; й казав дати їй їсти.

< ಮಾರ್ಕನು 5 >