< ಮಾರ್ಕನು 6 >
1 ೧ ಯೇಸು ಅಲ್ಲಿಂದ ಹೊರಟು ತನ್ನ ಊರಿಗೆ ಬಂದನು; ಆತನ ಶಿಷ್ಯರು ಆತನನ್ನು ಹಿಂಬಾಲಿಸಿದರು.
イエズス、此處を去りて我故郷に至り給ひ、弟子等是に從ひいたりしが、
2 ೨ ಸಬ್ಬತ್ ದಿನ ಬಂದಾಗ ಆತನು ಅಲ್ಲಿಯ ಸಭಾಮಂದಿರದಲ್ಲಿ ಉಪದೇಶಮಾಡತೊಡಗಿದನು. ಅಲ್ಲಿ ನೆರದಿದ್ದ ಜನರು ಯೇಸುವಿನ ಬೋಧನೆಯನ್ನು ಕೇಳಿ ಬೆರಗಾದರು. “ಈತನಿಗೆ ಈ ಬೋಧನೆಯ ಮಾತುಗಳು ಎಲ್ಲಿಂದ ಬಂದಿತು? ಈತನು ಪಡೆದಿರುವ ಜ್ಞಾನವಾದರೂ ಎಂಥದ್ದು? ಈತನ ಕೈಯಿಂದ ಇಂತಹ ಅದ್ಭುತಕಾರ್ಯಗಳು ಆಗುವುದಾದರು ಹೇಗೆ?
安息日に當り會堂にて教を説始め給ひしかば、聞く人多く其教に驚きて云ひけるは、彼は是等の事を何處より得たるぞ、其授けられたる智恵と、其手に行はるる斯ばかりの奇蹟とは、如何なるものぞ。
3 ೩ ಈತನು ಆ ಬಡಗಿಯಲ್ಲವೇ? ಈತನು ಮರಿಯಳ ಮಗನಲ್ಲವೇ? ಈತನು ಯಾಕೋಬ, ಯೋಸೆ, ಯೂದ, ಸೀಮೋನ ಇವರ ಅಣ್ಣನಲ್ಲವೇ? ಈತನ ತಂಗಿಯರು ಇಲ್ಲಿ ನಮ್ಮಲ್ಲಿಯೇ ಇದ್ದಾರಲ್ಲವೇ?” ಎಂದು ಹೇಳುತ್ತಾ ಯೇಸುವನ್ನು ತಾತ್ಸಾರ ಮಾಡಿದರು.
彼はマリアの子にして、ヤコボ、ヨゼフ、ユダ及びシモンの兄弟たる職工にあらずや、其姉妹等も我等と共に此處に在るに非ずや、と。斯て遂に彼に躓き居たり。
4 ೪ ಯೇಸು ಅವರಿಗೆ, “ಪ್ರವಾದಿಯು ಬೇರೆ ಎಲ್ಲಿದ್ದರೂ ಅವನಿಗೆ ಗೌರವ ಉಂಟು; ಆದರೆ ಸ್ವಂತ ದೇಶದಲ್ಲಿಯೂ, ಸ್ವಂತ ಜನರಲ್ಲಿಯೂ, ಸ್ವಂತ ಮನೆಯಲ್ಲಿಯೂ ಗೌರವವಿಲ್ಲ” ಎಂದು ಹೇಳಿದನು.
イエズス彼等に曰ひけるは、預言者の敬はれざるは唯其故郷、其家、其親戚の中に於てのみ、と。
5 ೫ ಆತನು ಅಲ್ಲಿ ಕೆಲವು ರೋಗಿಗಳ ಮೇಲೆ ಕೈಯಿಟ್ಟು ಸ್ವಸ್ಥಮಾಡಿದನೇ ಹೊರತು ಬೇರೆ ಯಾವ ಮಹತ್ಕಾರ್ಯವನ್ನೂ ಮಾಡುವುದಕ್ಕಾಗಲಿಲ್ಲ.
然れば此處にては、少數の病者を按手して醫し給ひし外、何等の奇蹟をも為し得給はず、
6 ೬ ಅವರ ಅಪನಂಬಿಕೆಗೆ ಆತನು ಆಶ್ಚರ್ಯಪಟ್ಟನು. ಆ ನಂತರ ಯೇಸು ಸುತ್ತಮುತ್ತಲಿನ ಊರುಗಳಲ್ಲಿ ಬೋಧಿಸಿದನು.
彼等の不信仰に驚き、其辺の邑々を巡りて教へ居給へり。
7 ೭ ತಾನು ಆಯ್ಕೆಮಾಡಿಕೊಂಡ ಹನ್ನೆರಡು ಮಂದಿ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರನ್ನು ಇಬ್ಬಿಬ್ಬರನ್ನಾಗಿ ಕಳುಹಿಸಿದನು. ಕಳುಹಿಸುವಾಗ ಆತನು ಅವರಿಗೆ ದೆವ್ವಗಳ ಮೇಲೆ ಅಧಿಕಾರ ಕೊಟ್ಟು,
イエズス十二人を呼びて、之を二人づつ遣はすに臨み、汚鬼等[に對する]の権能を授け、
8 ೮ “ಕೋಲು ಹೊರತು ಪ್ರಯಾಣಕ್ಕೆ ಏನೂ ತೆಗೆದುಕೊಂಡು ಹೋಗಬೇಡಿರಿ; ಬುತ್ತಿ, ಚೀಲ, ಸೊಂಟಪಟ್ಟಿಯಲ್ಲಿ ಹಣ ಬೇಡ.
且途中杖の外に何物をも携へざる事、旅嚢、麪又は帯に銭を持つまじき事、
9 ೯ ಚಪ್ಪಲಿಗಳನ್ನು ಹಾಕಿಕೊಳ್ಳಬಹುದು, ಆದರೆ ಎರಡು ಅಂಗಿಗಳನ್ನು ಧರಿಸಬೇಡಿರಿ” ಎಂದು ಅಪ್ಪಣೆಕೊಟ್ಟನು.
普通の履物を穿くも、二枚の下着を着まじき事を命じ、
10 ೧೦ ಇದಲ್ಲದೆ ಆತನು ಅವರಿಗೆ, “ನೀವು ಎಲ್ಲಿಯಾದರೂ ಒಂದು ಮನೆಗೆ ಹೋದಾಗ ಆ ಸ್ಥಳದಿಂದ ಹೊರಡುವವರೆಗೂ ಅಲ್ಲೇ ಉಳಿದುಕೊಳ್ಳಿರಿ.
然て彼等に曰ひけるは、何處にても、或家に入らば、其地を去るまで其處に留れ。
11 ೧೧ ಮತ್ತು ಯಾವ ಸ್ಥಳದವರಾದರೂ ನಿಮ್ಮನ್ನು ಸೇರಿಸಿಕೊಳ್ಳದೆಯೂ ನೀವು ಹೇಳುವುದನ್ನು ಕೇಳದೆಯೂ ಹೋದರೆ ಆ ಸ್ಥಳದಿಂದ ಹೊರಡುವಾಗ ನಿಮ್ಮ ಪಾದಕ್ಕೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ; ಅದು ಅವರ ವಿರುದ್ಧ ಸಾಕ್ಷಿಯಾಗಿರಲಿ” ಎಂದು ಹೇಳಿದನು.
又総て汝等を承けず、汝等に聴かざる者あらば、其處を立去りて、彼等への證據として足の塵を払え、と。
12 ೧೨ ಅವರು ಹೊರಟು ಹೋಗಿ ಜನರಿಗೆ, “ನೀವು ನಿಮ್ಮ ಪಾಪಗಳನ್ನು ಬಿಟ್ಟು ಮಾನಸಾಂತರ ಹೊಂದಬೇಕು” ಎಂದು ಸಾರಿ ಹೇಳಿದರು.
斯て弟子等出でて改心すべきことを人々に説教し、
13 ೧೩ ಅನೇಕ ದೆವ್ವಗಳನ್ನು ಬಿಡಿಸಿ ಅನೇಕ ರೋಗಿಗಳಿಗೆ ಎಣ್ಣೆ ಹಚ್ಚಿ ಗುಣಪಡಿಸಿದರು.
許多の惡魔を逐払ひ、注油して多くの病者を醫し居たり。
14 ೧೪ ಅಷ್ಟರಲ್ಲಿ ಅರಸನಾದ ಹೆರೋದನು ಯೇಸುವಿನ ಹೆಸರು ಪ್ರಸಿದ್ಧಿಗೆ ಬಂದಿರುವ ವಿಷಯ ಕೇಳಿದನು ಮತ್ತು ಜನರು ಆತನ ವಿಷಯದಲ್ಲಿ, “ಸ್ನಾನಿಕನಾದ ಯೋಹಾನನೇ ತಿರುಗಿ ಬದುಕಿ ಬಂದಿದ್ದಾನೆ; ಆದುದರಿಂದ ಮಹತ್ಕಾರ್ಯಗಳನ್ನು ನಡಿಸುವ ಶಕ್ತಿ ಈತನಲ್ಲಿ ಇದೆ” ಎಂದು ಹೇಳುತ್ತಿದ್ದರು.
第五項 イエズスガリレアを巡り給ふ 斯てイエズスの名顕れしかば、ヘロデ王聞きて、洗者ヨハネは死者の中より蘇りたり、故に奇蹟彼に行はるるなり、と云へるに、
15 ೧೫ ಕೆಲವರು, “ಇವನು ಎಲೀಯನೆಂತಲೂ” ಮತ್ತೆ ಕೆಲವರು, “ಇವನು ಪ್ರಾಚೀನ ಕಾಲದ ಪ್ರವಾದಿಗಳಂತಿರುವ ಒಬ್ಬ ಪ್ರವಾದಿಯೆಂತಲೂ” ಹೇಳಿದರು.
或人々は、是エリアなりと云ひ、又或人々は、預言者なり、預言者の一人の如し、と云へば、
16 ೧೬ ಆದರೆ ಹೆರೋದನು ಆತನ ಸುದ್ದಿಯನ್ನು ಕೇಳಿ, “ನಾನು ಶಿರಚ್ಛೇದನ ಮಾಡಿಸಿದ ಯೋಹಾನನೇ ತಿರುಗಿ ಬದುಕಿ ಬಂದಿದ್ದಾನೆ” ಎಂದು ಹೇಳಿದನು.
ヘロデ之を聞きて我が馘りし彼ヨハネは、死者の中より蘇りたり、と云へり。
17 ೧೭ ಹೆರೋದನು ತಾನೇ ಕಳುಹಿಸಿ ಯೋಹಾನನನ್ನು ಹಿಡಿದು ಬಂಧಿಸಿ ಸೆರೆಮನೆಯಲ್ಲಿ ಹಾಕಿಸಿದ್ದನು. ಹೆರೋದ್ಯಳ ನಿಮಿತ್ತ ಹಾಗೆ ಮಾಡಿದ್ದನು; ಏಕೆಂದರೆ ಅವನು ತನ್ನ ಅಣ್ಣನಾದ ಫಿಲಿಪ್ಪನ ಹೆಂಡತಿ ಹೆರೋದ್ಯಳನ್ನು ಮದುವೆಯಾಗಿದ್ದನು.
蓋ヘロデ曾て其兄弟フィリッポの妻ヘロヂアデを娶りたれば、彼が為に人を遣はしてヨハネを捕へ、監獄に繋ぎたりき。
18 ೧೮ ಇದರ ನಿಮಿತ್ತ ಯೋಹಾನನು ಹೆರೋದನಿಗೆ, “ನಿನ್ನ ಅಣ್ಣನ ಹೆಂಡತಿಯು ಆತನು ಬದುಕಿರುವಾಗಲೇ ನಿನ್ನವಳ್ಳಾಗಿರುವುದು ಅಧರ್ಮವಲ್ಲವೇ” ಎಂದು ಹೇಳುತ್ತಿದ್ದನು.
其はヨハネヘロデに向ひ、汝兄弟の妻を納るるは可からず、と云ひ居たればなり。
19 ೧೯ ಇದರಿಂದ ಹೆರೋದ್ಯಳು ಸಹ ಯೋಹಾನನ ಮೇಲೆ ದ್ವೇಷವಿಟ್ಟುಕೊಂಡು ಅವನನ್ನು ಕೊಲ್ಲಿಸಬೇಕೆಂದಿದ್ದರೂ ಸಾಧ್ಯವಾಗಲಿಲ್ಲ.
然ればヘロヂアデ彼を恨みて殺さんと欲すれども、能はざりき、
20 ೨೦ ಏಕೆಂದರೆ ಹೆರೋದನು ಯೋಹಾನನನ್ನು ನೀತಿವಂತನೆಂದೂ ಪರಿಶುದ್ಧನೆಂದೂ ತಿಳಿದು ಭಯಪಟ್ಟು ಅವನಿಗೆ ಯಾವ ಅಪಾಯವೂ ಬಾರದಂತೆ ಕಾಪಾಡಿದ್ದನು. ಇದಲ್ಲದೆ ಯೋಹಾನನು ಹೇಳುತ್ತಿದ್ದ ಸಂದೇಶವನ್ನು ಅವನು ಕೇಳಿದಾಗ ಮನಸ್ಸಿನಲ್ಲಿ ಅಸಮಾಧಾನ ಉಂಟಾದರೂ ಅವನ ಮಾತನ್ನು ಸಂತೋಷದಿಂದ ಕೇಳುತ್ತಿದ್ದನು.
是ヘロデはヨハネの義人たり聖人たるを知りて、之を畏れ且護り、是に聴きて多くの事を行ひ、好みて彼に聴き居たるを以てなり。
21 ೨೧ ಆದರೆ ಹೆರೋದ್ಯಳಿಗೆ ಅನುಕೂಲವಾದ ದಿನ ಬಂದಿತು; ಹೇಗೆಂದರೆ ಹೆರೋದನು ತನ್ನ ಜನ್ಮದಿನದಂದು ಪ್ರಭುಗಳಿಗೂ, ಸಹಸ್ರಾಧಿಪತಿಗಳಿಗೂ, ಗಲಿಲಾಯ ಸೀಮೆಯ ಮುಖ್ಯಸ್ಥರಿಗೂ ಔತಣವನ್ನು ಏರ್ಪಡಿಸಿದಾಗ,
斯て便宜好き日來り、ヘロデ、大官、千夫長及ガリレアの貴族等を招待して誕生日の饗宴を開きしが、
22 ೨೨ ಹೆರೋದ್ಯಳ ಮಗಳು ಒಳಕ್ಕೆ ಬಂದು ನಾಟ್ಯವಾಡಿ ಹೆರೋದನನ್ನೂ ಅವನ ಸಂಗಡ ಪಂಕ್ತಿಯಲ್ಲಿ ಊಟಕ್ಕೆ ಕುಳಿತಿದ್ದ ಅತಿಥಿಗಳನ್ನೂ ಮೆಚ್ಚಿಸಿದಳು. ಅರಸನು ಆ ಹುಡುಗಿಗೆ, “ನಿನಗೆ ಬೇಕಾದದ್ದನ್ನು ಕೇಳಿಕೋ, ಕೊಡುತ್ತೇನೆ.
彼ヘロヂアデの女入來りて踊を為し、ヘロデ及列席の人々の意に適ひしかば、王女に云ひけるは、欲しきものを我に求めよ、我必之を與へん、と。
23 ೨೩ ನೀನು ಏನು ಕೇಳಿಕೊಂಡರೂ ಸರಿ, ನನ್ನ ರಾಜ್ಯದಲ್ಲಿ ಅರ್ಧವನ್ನು ಕೇಳಿದರೂ, ನಿನಗೆ ಕೊಡುತ್ತೇನೆ” ಎಂದು ಪ್ರಮಾಣಮಾಡಿದನು.
又誓ひて曰く、何事を求むるも、例へば我國の半にても、我之を汝に與へん、と。
24 ೨೪ ಆಗ ಅವಳು ಹೊರಕ್ಕೆ ಹೋಗಿ, “ನಾನು ಏನು ಕೇಳಿಕೊಳ್ಳಲಿ?” ಎಂದು ತನ್ನ ತಾಯಿಯನ್ನು ಕೇಳಲಾಗಿ ಅವಳು, “ಸ್ನಾನಿಕನಾದ ಯೋಹಾನನ ತಲೆಯನ್ನು ಕೇಳಿಕೋ” ಅಂದಳು.
其時女出でて、我何を求むべきか、と母に云ひしに、彼、洗者ヨハネの頭を、と云ひければ、
25 ೨೫ ಕೂಡಲೆ ಅವಳು ಅರಸನ ಬಳಿಗೆ ಅವಸರದಿಂದ ಬಂದು, “ಈ ಕ್ಷಣದಲ್ಲೇ ಸ್ನಾನಿಕನಾದ ಯೋಹಾನನ ತಲೆಯನ್ನು ಪರಾತಿನಲ್ಲಿ ನನಗೆ ತರಿಸಿಕೊಡಬೇಕು, ಇದೇ ನನ್ನ ಬೇಡಿಕೆ” ಎಂದು ಕೇಳಿಕೊಂಡಳು.
女直に王の許に急ぎ行き、洗者ヨハネの頭を盆に載せて、速に我に賜はん事を欲す、と云へり。
26 ೨೬ ಅದಕ್ಕೆ ಅರಸನಿಗೆ ಬಹು ದುಃಖವಾಯಿತು. ಅದರೂ ಅತಿಥಿಗಳೆಲ್ಲರ ಮುಂದೆ ತಾನು ಮಾಡಿದ ಪ್ರಮಾಣದ ನಿಮಿತ್ತ ಅವಳ ಕೋರಿಕೆಯನ್ನು ನಿರಾಕರಿಸಲಾಗಲಿಲ್ಲ.
王憂ひしかど、誓に對し且は列席の人々に對して女に否む事を欲せず、
27 ೨೭ ಕೂಡಲೆ ತನ್ನ ಮೈಗಾವಲಿನ ಸಿಪಾಯಿಗಳಲ್ಲಿ ಒಬ್ಬನಿಗೆ, ನೀನು ಹೋಗಿ ಯೋಹಾನನ ತಲೆಯನ್ನು ತಂದುಕೊಡು ಎಂದು ಅಪ್ಪಣೆಕೊಟ್ಟು ಕಳುಹಿಸಿದನು;
刑吏を遣はし、ヨハネの頭を盆に載せて持來る事を命ぜり。刑吏監獄にヨハネを馘り、
28 ೨೮ ಅವನು ಹೋಗಿ ಸೆರೆಮನೆಯಲ್ಲಿ ಅವನ ತಲೆಯನ್ನು ಕಡಿದು ಒಂದು ಪರಾತಿನಲ್ಲಿ ತಂದು ಆ ಹುಡುಗಿಗೆ ಕೊಟ್ಟನು. ಆ ಹುಡುಗಿ ಅದನ್ನು ತನ್ನ ತಾಯಿಗೆ ಕೊಟ್ಟಳು.
其頭を盆に載せ齎して、女に與へしかば、女は之を母に與へたり。
29 ೨೯ ಯೋಹಾನನ ಶಿಷ್ಯರು ಈ ಸಂಗತಿಗಳನ್ನು ಕೇಳಿ ಅವರು ಬಂದು ಅವನ ಶವವನ್ನು ತೆಗೆದುಕೊಂಡು ಹೋಗಿ ಸಮಾಧಿಯಲ್ಲಿ ಇಟ್ಟರು.
ヨハネの弟子等聞きて來り、其屍を取りて墓に葬れり。
30 ೩೦ ಅಪೊಸ್ತಲರು ಯೇಸುವಿನ ಬಳಿಗೆ ಕೂಡಿ ಬಂದು ತಾವು ಮಾಡಿದ್ದನ್ನೂ ಉಪದೇಶಿಸಿದ್ದನ್ನೂ ಆತನಿಗೆ ತಿಳಿಸಿದರು.
然て使徒等イエズスの許に集り、総ての為しし事、教へし事を告げしかば、
31 ೩೧ ಆತನು ಅವರಿಗೆ, “ನೀವು ಮಾತ್ರ ಏಕಾಂತ ಸ್ಥಳಕ್ಕೆ ಬಂದು ಸ್ವಲ್ಪ ವಿಶ್ರಮಿಸಿಕೊಳ್ಳಿರಿ” ಎಂದು ಹೇಳಿದನು. ಏಕೆಂದರೆ ಬಹಳ ಮಂದಿ ಬರುತ್ತಾ ಹೋಗುತ್ತಾ ಇದ್ದುದರಿಂದ ಅವರಿಗೆ ಊಟಮಾಡುವುದಕ್ಕೂ ಸಮಯವಿರಲಿಲ್ಲ.
イエズス彼等に向ひ、別に寂しき處に來りて暫し休め、と曰へり。其は往來する人多くして、食する暇だにあらざればなり。
32 ೩೨ ಆಗ ಅವರು ತಾವಾಗಿಯೇ ದೋಣಿಯಲ್ಲಿ ಹೊರಟು ಏಕಾಂತ ಸ್ಥಳಕ್ಕೆ ಹೋದರು.
斯て船に乗りて、別に寂しき處に往けり。
33 ೩೩ ಆದರೆ ಅವರು ಹೋಗುವುದನ್ನು ಬಹು ಜನರು ನೋಡಿ ಅವರನ್ನು ಗುರುತಿಸಿ ಎಲ್ಲಾ ಊರುಗಳಿಂದ ಕಾಲುನಡಿಗೆಯಾಗಿ ಓಡಿ ಅವರಿಗಿಂತ ಮೊದಲೇ ಅಲ್ಲಿ ಸೇರಿದರು.
彼等の往くを見て、多くの人之を知り、凡ての町より徒歩にて彼等に先ちて、彼處に馳集りしが、
34 ೩೪ ಯೇಸು ದೋಣಿಯಿಂದ ಇಳಿದಾಗ ದೊಡ್ಡ ಜನಸಮೂಹವನ್ನು ನೋಡಿ ಇವರು ಕುರುಬನಿಲ್ಲದ ಕುರಿಗಳ ಹಾಗಿದ್ದಾರಲ್ಲಾ ಎಂದು ಕನಿಕರಪಟ್ಟು ಅವರಿಗೆ ಅನೇಕ ವಿಷಯಗಳನ್ನು ಕುರಿತು ಬೋಧಿಸಲಾರಂಭಿಸಿದನು.
イエズス出でて群衆の夥しきを見給ひ、其牧者なき羊の如くなるを憫み、多くの事を教へ始め給へり。
35 ೩೫ ಅಷ್ಟರಲ್ಲಿ ಸಂಜೆ ಆಗಿದ್ದರಿಂದ ಆತನ ಶಿಷ್ಯರು ಆತನ ಬಳಿಗೆ ಬಂದು, “ಇದು ನಿರ್ಜನ ಸ್ಥಳ, ಈಗ ಹೊತ್ತು ಬಹಳವಾಯಿತು;
日既に暮れかかりしかば、弟子等近づきて云ひけるは、處は寂しく時は既に遅し。
36 ೩೬ ಈ ಜನರಿಗೆ ಅಪ್ಪಣೆಕೊಡು; ಇವರು ಸುತ್ತಲಿರುವ ಸೀಮೆಗೂ ಹಳ್ಳಿಗಳಿಗೂ ಹೋಗಿ ತಮ್ಮ ಊಟಕ್ಕೆ ಏನಾದರೂ ಕೊಂಡುಕೊಳ್ಳಲಿ” ಎಂದು ಹೇಳಿದರು.
人々を還し、四辺の田家及邑に往きて面々に食物を買ふことを得しめ給へ、と。
37 ೩೭ ಅದಕ್ಕೆ ಯೇಸು, “ನೀವೇ ಅವರಿಗೆ ಊಟಕ್ಕೇನಾದರೂ ಕೊಡಿರಿ” ಎಂದು ಉತ್ತರಕೊಟ್ಟನು. ಅದಕ್ಕವರು, “ನಾವು ಹೋಗಿ ಇನ್ನೂರು ದಿನಾರಿ ನಾಣ್ಯಗಳ ಬೆಲೆಯಷ್ಟು ರೊಟ್ಟಿಯನ್ನು ಕೊಂಡುಕೊಂಡು ಅವರಿಗೆ ಊಟ ಕೊಡಬೇಕೋ?” ಎಂದು ಹೇಳಲು
イエズス答へて、汝等是に食物を與へよ、と曰ひしかば、彼等云ひけるは、我等往きて二百デナリオにて麪を沽ひ、彼等に食せしめんか、と。
38 ೩೮ ಆತನು, “ನಿಮ್ಮಲ್ಲಿ ಎಷ್ಟು ರೊಟ್ಟಿಗಳಿವೆ? ಹೋಗಿ ನೋಡಿ” ಅಂದನು. ಅವರು ವಿಚಾರಿಸಿಕೊಂಡು ಬಂದು, “ನಮ್ಮಲ್ಲಿ ಐದು ರೊಟ್ಟಿ ಮತ್ತು ಎರಡು ಮೀನುಗಳಿವೆ” ಅಂದರು.
イエズス、汝等幾個の麪をか有てる、往きて見よ、と曰ひしに、彼等尋ね知りて、五個と二尾の魚とあり、と云へり。
39 ೩೯ ಆಗ ಆತನು ಅವರಿಗೆ, ಎಲ್ಲರೂ ಹಸಿರುಹುಲ್ಲಿನ ಮೇಲೆ ಪಂಕ್ತಿಪಂಕ್ತಿಯಾಗಿ ಕುಳಿತುಕೊಳ್ಳಲಿ ಎಂದು ಅಪ್ಪಣೆಕೊಟ್ಟಾಗ,
斯て命じて、人々を皆青草の上に組々に坐せしめ給ひ、
40 ೪೦ ಜನರು ಪಂಕ್ತಿಗೆ ನೂರರಂತೆ ಐವತ್ತರಂತೆ ಸಾಲುಸಾಲಾಗಿ ಕುಳಿತುಕೊಂಡರು.
人々百人五十人づつ坐したるに、
41 ೪೧ ಆ ಮೇಲೆ ಆತನು ಆ ಐದು ರೊಟ್ಟಿ ಎರಡು ಮೀನುಗಳನ್ನು ತೆಗೆದುಕೊಂಡು ಪರಲೋಕದ ಕಡೆಗೆ ನೋಡಿ ದೇವರಿಗೆ ಸ್ತೋತ್ರಮಾಡಿ ಆ ರೊಟ್ಟಿಗಳನ್ನು ಮುರಿದು ಇದನ್ನು ನೀವು ಜನರಿಗೆ ಹಂಚಿರಿ ಎಂದು ಶಿಷ್ಯರ ಕೈಗೆ ಕೊಟ್ಟನು, ಅದೇ ರೀತಿಯಲ್ಲಿ ಆ ಎರಡು ಮೀನುಗಳನ್ನೂ ಆತನು ಎಲ್ಲರಿಗೂ ಹಂಚಿಸಿದನು.
イエズス五個の麪と二尾の魚とを取り、天を仰ぎて祝し、麪を擘きて弟子等に與へ、之を人々の前に置かしめ、又二尾の魚を一同に分ち給ひしかば、
42 ೪೨ ಅವರೆಲ್ಲರೂ ತೃಪ್ತರಾಗುವವರೆಗೂ ಊಟಮಾಡಿದರು.
皆食して飽足れり。
43 ೪೩ ರೊಟ್ಟಿಯ ತುಂಡುಗಳನ್ನೂ ಮೀನಿನ ತುಂಡುಗಳನ್ನೂ ಕೂಡಿಸಲಾಗಿ ಹನ್ನೆರಡು ಪುಟ್ಟಿಗಳು ತುಂಬಿದವು.
殘れる屑を拾ひしに、魚を併せて十二の筐に満ちしが、
44 ೪೪ ಊಟಮಾಡಿದವರು ಐದು ಸಾವಿರ ಮಂದಿ ಗಂಡಸರು.
食せし男子は五千人なりき。
45 ೪೫ ಇದಾದ ಕೂಡಲೆ ಯೇಸು ತನ್ನ ಶಿಷ್ಯರಿಗೆ, ನಾನು ಈ ಜನರ ಗುಂಪನ್ನು ಕಳುಹಿಸಿ ಬಿಡುವಷ್ಟರೊಳಗೆ ನೀವು ದೋಣಿಯನ್ನ ಹತ್ತಿ ಮುಂದಾಗಿ ಆಚೇದಡಕ್ಕೆ ಬೇತ್ಸಾಯಿದಕ್ಕೆ ಹೋಗಿರಿ ಎಂದು ಬಲವಂತಮಾಡಿದನು.
イエズス直に弟子等を強て船に乗らしめ、己が人民を去らしむる間に湖を渡り、先ちてベッサイダへ赴かしめ給ひ、
46 ೪೬ ಆತನು ಜನರನ್ನು ಕಳುಹಿಸಿಕೊಟ್ಟ ನಂತರ ಪ್ರಾರ್ಥನೆ ಮಾಡುವುದಕ್ಕಾಗಿ ಬೆಟ್ಟಕ್ಕೆ ಹೋದನು.
人を去らしめて後、祈らんとて山に往き給へり。
47 ೪೭ ಸಂಜೆಯಾದಾಗ ದೋಣಿಯು ಸಮುದ್ರದ ನಡುವೆ ಇತ್ತು; ಯೇಸು ಒಬ್ಬನೇ ದಡದಲ್ಲಿದ್ದನು.
夜更けて船は湖の中央に在り、イエズスは獨陸に居給ひしが、
48 ೪೮ ಎದುರು ಗಾಳಿ ಬೀಸುತ್ತಿದ್ದುದರಿಂದ ಶಿಷ್ಯರು ಹುಟ್ಟುಗೋಲು ಹಾಕಿ ದಣಿದು ಹೋದದ್ದನ್ನು ಯೇಸು ಕಂಡು ಹೆಚ್ಚುಕಡಿಮೆ ರಾತ್ರಿಯ ನಾಲ್ಕನೆಯ ಜಾವದಲ್ಲಿ ಸಮುದ್ರದ ಮೇಲೆ ನಡೆದು ಅವರ ಕಡೆಗೆ ಬಂದು ಅವರನ್ನು ದಾಟಿ ಮುಂದಕ್ಕೆ ಹೋಗಬೇಕೆಂದಿದ್ದನು.
イエズス弟子等の逆風の為に漕ぎ悩めるを見給ひ、朝の三時頃湖の上を歩みて彼等に至り、行過ぎんとし給ひしに、
49 ೪೯ ಆದರೆ ಸಮುದ್ರದ ಮೇಲೆ ನಡೆಯುವ ಆತನನ್ನು ಅವರು ಕಂಡು ಭೂತವೆಂದು ಭಾವಿಸಿ ಅಬ್ಬರಿಸಿ ಕೂಗಿದರು; ಏಕೆಂದರೆ ಅವರೆಲ್ಲರೂ ಆತನನ್ನು ನೋಡಿ ಭಯಭೀತರಾಗಿದ್ದರು.
弟子等其湖の上を歩み給ふを見るや、怪物ならんと思ひて叫出せり。
50 ೫೦ ಕೂಡಲೆ ಆತನು ಅವರನ್ನು ಮಾತನಾಡಿಸಿ ಅವರಿಗೆ, “ಧೈರ್ಯವಾಗಿರಿ, ನಾನೇ, ಹೆದರಬೇಡಿರಿ” ಎಂದು ಹೇಳಿದನು.
其は皆彼を見て心擾ぎたればなり。イエズス直に言を出して、頼もしかれ、我なるぞ、懼るること勿れ、と曰ひ、
51 ೫೧ ತರುವಾಯ ಆತನು ದೋಣಿಯನ್ನು ಹತ್ತಿ ಅವರ ಬಳಿಗೆ ಬರಲು ಆ ಬಿರುಗಾಳಿಯು ನಿಂತುಹೋಯಿತು. ಆಗ ಅವರು ತಮ್ಮೊಳಗೆ ಬಹು ಆಶ್ಚರ್ಯಪಟ್ಟರು.
船に乗りて彼等に至り給ひしに、風止みたれば、彼等愈益心の中に驚きたり。
52 ೫೨ ಏಕೆಂದರೆ ಅವರು ರೊಟ್ಟಿಯ ವಿಷಯವಾದ ಮಹತ್ಕಾರ್ಯವನ್ನು ಗ್ರಹಿಸಿರಲಿಲ್ಲ; ಅವರ ಹೃದಯವು ಕಠಿಣವಾಗಿತ್ತು.
其は彼等の心頑固にして、彼の麪の事を暁らざりければなり。
53 ೫೩ ಅವರು ಸಮುದ್ರವನ್ನು ದಾಟಿ ಗೆನೆಜರೇತ್ ಪ್ರದೇಶದ ದಡಕ್ಕೆ ಮುಟ್ಟಿ ದೋಣಿಯನ್ನು ಕಟ್ಟಿದರು.
航りて、ゲネザレトの地に至り、岸に船を着けしが、
54 ೫೪ ಅವರು ದೋಣಿಯಿಂದ ಇಳಿದ ಕೂಡಲೇ ಅಲ್ಲಿಯ ಜನರು ಯೇಸುವಿನ ಗುರುತು ಹಿಡಿದು,
船より出づるや、人々忽イエズスを認めて、
55 ೫೫ ಆ ಸೀಮೆಯಲ್ಲೆಲ್ಲಾ ಓಡಾಡಿ ರೋಗಿಯಾಗಿದ್ದವರನ್ನು ದೋಲಿಯ ಮೇಲೆ ಹಾಕಿಕೊಂಡು ಆತನು ಎಲ್ಲಿದ್ದಾನೆಂದು ಕೇಳಿದರೋ ಅಲ್ಲಿಗೆ ತೆಗೆದುಕೊಂಡು ಹೋದರು.
其全地方を馳廻り、イエズスの居給ふと聞く處に、病る者を床の儘に舁きて、何處までも廻り始めたり。
56 ೫೬ ಆತನು ಯಾವ ಗ್ರಾಮಗಳಿಗೆ, ಯಾವ ಊರು ಹಳ್ಳಿಗಳಿಗೆ ಹೋದರೂ ಅಲ್ಲಿಯವರು ರೋಗಿಗಳನ್ನು ತಂದು ಸಂತೆಬೀದಿಗಳಲ್ಲಿ ಇಟ್ಟು, ಆತನ ಉಡುಪಿನ ಅಂಚನ್ನಾದರೂ ಮುಟ್ಟಗೊಡಿಸಬೇಕೆಂದು ಆತನನ್ನು ಬೇಡಿಕೊಂಡರು; ಆತನನ್ನು ಮುಟ್ಟಿದವರೆಲ್ಲರೂ ಗುಣಹೊಂದಿದರು.
斯て至る處、或は邑、或は街、或は田家に、人々病者を衢に置き、彼の衣服の総にだも触れん事を願ひ居りしが、触るる人は悉く醫されつつありき。