< ಮಾರ್ಕನು 7 >
1 ೧ ತರುವಾಯ ಯೆರೂಸಲೇಮಿನಿಂದ ಬಂದಿದ್ದ ಫರಿಸಾಯರೂ ಶಾಸ್ತ್ರಿಗಳಲ್ಲಿ ಕೆಲವರೂ ಯೇಸುವಿನ ಬಳಿಗೆ ಕೂಡಿ ಬಂದರು.
Một hôm, các thầy Pha-ri-si và thầy dạy luật từ Giê-ru-sa-lem đến gặp Chúa Giê-xu.
2 ೨ ಆಗ ಯೇಸುವಿನ ಶಿಷ್ಯರಲ್ಲಿ ಕೆಲವರು ಅಶುದ್ಧ ಕೈಗಳಿಂದ ಅಂದರೆ ಕೈತೊಳೆದುಕೊಳ್ಳದೆ ಊಟಮಾಡುವುದನ್ನು ಕಂಡರು.
Họ thấy các môn đệ của Chúa không rửa tay trước khi ăn.
3 ೩ ಫರಿಸಾಯರೂ ಯೆಹೂದ್ಯರೆಲ್ಲರೂ ಹಿರಿಯರಿಂದ ಬಂದ ಪದ್ಧತಿಯಂತೆ ತಮ್ಮ ಕೈಗಳನ್ನು ವಿಧಿಬದ್ಧವಾಗಿ ತೊಳೆಯದೆ ಆಹಾರ ತೆಗೆದುಕೊಳ್ಳುತ್ತಿರಲಿಲ್ಲ.
(Theo tục lệ cổ truyền, người Do Thái, đặc biệt là người Pha-ri-si, đều rảy nước trên cánh tay trước khi ăn.
4 ೪ ಮತ್ತು ಸಂತೆಗೆ ಹೋಗಿ ಬಂದರೆ ನೀರನ್ನು ಪ್ರೋಕ್ಷಿಸಿಕೊಳ್ಳದೆ ಇರುತ್ತಿರಲಿಲ್ಲ. ಬಹು ಸ್ವಚ್ಛವಾಗಿ ಸ್ನಾನಮಾಡಿಯೇ ಊಟಮಾಡುವುದು; ತಂಬಿಗೆ, ಚೆಂಬು, ತಪ್ಪಲೆಗಳನ್ನು ತೊಳೆಯುವುದು; ಇವೇ ಮೊದಲಾದ ಅನೇಕ ಆಚಾರಗಳು ಅವರಲ್ಲಿ ರೂಢಿಯಲ್ಲಿದ್ದುವು.
Mỗi khi đi phố về, họ đều tẩy uế như thế, rồi mới ngồi vào bàn ăn. Họ còn làm nhiều điều khác theo tục lệ, như làm phép tẩy uế nồi niêu, bát đĩa …)
5 ೫ ಆದುದರಿಂದ ಫರಿಸಾಯರೂ ಶಾಸ್ತ್ರಿಗಳೂ ಯೇಸುವನ್ನು, “ನಿನ್ನ ಶಿಷ್ಯರು ಹಿರಿಯರ ಆಚಾರಗಳನ್ನೇಕೆ ಅನುಸರಿಸುವುದಿಲ್ಲ? ಅಶುದ್ಧವಾದ ಕೈಗಳಿಂದಲೇ ಅವರು ಊಟಮಾಡುತ್ತಿದ್ದಾರಲ್ಲಾ?” ಎಂದು ಕೇಳಿದರು.
Các thầy Pha-ri-si và thầy dạy luật chất vấn Chúa: “Tại sao môn đệ Thầy không rửa tay trước khi ăn theo tục lệ cổ truyền?”
6 ೬ ಅದಕ್ಕೆ ಆತನು, “ಕಪಟಿಗಳಾದ ನಿಮ್ಮ ವಿಷಯದಲ್ಲಿ ಯೆಶಾಯನು ಸರಿಯಾಗಿ ಪ್ರವಾದಿಸಿದ್ದಾನೆ; ಅವನು ಬರೆದಿರುವಂತೆ: “‘ಈ ಜನರು ಮಾತಿನಿಂದ ನನ್ನನ್ನು ಗೌರವಿಸುತ್ತಾರೆ, ಆದರೆ ಅವರ ಹೃದಯ ನನ್ನಿಂದ ದೂರವಾಗಿದೆ.
Chúa Giê-xu đáp: “Các ông đạo đức giả! Tiên tri Y-sai đã miêu tả các ông thật đúng: ‘Miệng dân này nói lời tôn kính Ta, nhưng lòng họ cách xa Ta.
7 ೭ ಮನುಷ್ಯರು ಕಲ್ಪಿಸಿದ ಕಟ್ಟಳೆಗಳನ್ನೇ ಉಪದೇಶವನ್ನಾಗಿ ಅವರು ಬೋಧಿಸುವುದರಿಂದ ನನಗೆ ಆರಾಧನೆ ಮಾಡುವುದು ವ್ಯರ್ಥ’ ಎಂಬುದೇ.
Việc họ thờ phượng Ta thật vô ích, thay vì vâng giữ mệnh lệnh Ta, họ đem dạy luật lệ do họ đặt ra!’
8 ೮ ನೀವು ದೇವರ ಆಜ್ಞೆಯನ್ನು ಬಿಟ್ಟು ಮನುಷ್ಯರು ನೇಮಿಸಿದ ಸಂಪ್ರದಾಯಗಳನ್ನು ಬಿಡದೆ ಹಿಡಿದುಕೊಂಡಿದ್ದೀರಿ” ಎಂದು ಹೇಳಿದನು.
Các ông vâng giữ tục lệ của loài người, mà bỏ qua mệnh lệnh của Đức Chúa Trời.”
9 ೯ ಆತನು ಇನ್ನೂ ಅವರಿಗೆ, “ನೀವು ನಿಮ್ಮ ಸಂಪ್ರದಾಯಗಳನ್ನು ಪಾಲಿಸುವುದಕ್ಕಾಗಿ ಬಹು ಜಾಣತನದಿಂದದೇವರ ಆಜ್ಞೆಯನ್ನು ನಿರ್ಲಕ್ಷಿಸುತ್ತೀರಿ;
Chúa tiếp: “Các ông khéo léo chối bỏ luật Đức Chúa Trời để giữ tục lệ của các ông.
10 ೧೦ ‘ನಿನ್ನತಂದೆತಾಯಿಗಳನ್ನು ಗೌರವಿಸಬೇಕು’ ಮತ್ತು‘ತಂದೆಯನ್ನಾಗಲಿ ತಾಯಿಯನ್ನಾಗಲಿ ದೂಷಿಸುವವನಿಗೆ ಮರಣದಂಡನೆ ಆಗಬೇಕೆಂತಲೂ’ ಮೋಶೆಯು ಹೇಳಿದ್ದಾನೆ.
Chẳng hạn khi Môi-se dạy: ‘Phải hiếu kính cha mẹ,’ và ‘Ai nguyền rủa cha mẹ phải bị xử tử.’
11 ೧೧ ನೀವಾದರೋ ‘ಒಬ್ಬನು ತನ್ನ ತಂದೆಯನ್ನಾಗಲಿ, ತಾಯಿಯನ್ನಾಗಲಿ ನೋಡಿ, ನಾನು ನಿನ್ನ ಸಂರಕ್ಷಣೆಗಾಗಿ ಕೊಡತಕ್ಕದ್ದನ್ನು ಕೊರ್ಬಾನ್ (ಅಂದರೆ ದೇವರಿಗೆ ಮುಡಿಪು) ಮಾಡಿದ್ದೇನೆ’ ಎಂದು ಹೇಳುವುದಾದರೆ
Nhưng các ông cho là đúng khi con cái nói với cha mẹ rằng những gì con có thể giúp cha mẹ là Co-ban (nghĩa là lễ vật đã dâng lên Đức Chúa Trời),
12 ೧೨ ಅವನು ತನ್ನ ತಂದೆಗಾಗಲಿ, ತಾಯಿಗಾಗಲಿ ಇನ್ನೇನೂ ಸಹಾಯ ಮಾಡಬೇಕಾಗಿಲ್ಲ ಎಂದು ಹೇಳುತ್ತೀರಿ.
rồi các ngươi không cho phép người ấy làm gì cho cha mẹ mình nữa.
13 ೧೩ ಹೀಗೆ ನೀವು ಕಲಿಸುತ್ತಾ ಬಂದಿರುವ ಸಂಪ್ರದಾಯದಿಂದ ದೇವರ ವಾಕ್ಯವನ್ನು ನಿರರ್ಥಕಮಾಡುತ್ತಿದ್ದೀರಿ, ಮತ್ತು ಇಂಥ ಕಾರ್ಯಗಳನ್ನು ಇನ್ನೂ ಎಷ್ಟೋ ಮಾಡುತ್ತೀರಿ” ಎಂದು ಹೇಳಿದನು.
Như vậy, vì truyền thống của mình mà các ông đã hủy bỏ lời của Đức Chúa Trời. Các ông còn làm nhiều điều khác cũng sai quấy như thế!”
14 ೧೪ ಆ ಮೇಲೆ ಯೇಸು ಜನರ ಗುಂಪನ್ನು ಪುನಃ ಹತ್ತಿರಕ್ಕೆ ಕರೆದು, “ಎಲ್ಲರೂ ಕಿವಿಗೊಟ್ಟು ನನ್ನ ಮಾತನ್ನು ಕೇಳಿರಿ ಮತ್ತು ಅರ್ಥ ಮಾಡಿಕೊಳ್ಳಿರಿ.
Sau đó Chúa Giê-xu gọi đoàn dân đến, Ngài phán: “Anh chị em lắng nghe và cố hiểu lời này:
15 ೧೫ ಹೊರಗಿನಿಂದ ಮನುಷ್ಯನ ಒಳಗೆ ಹೋಗುವ ಯಾವುದು ಅವನನ್ನು ಮೈಲಿಗೆ ಮಾಡುವುದಿಲ್ಲ; ಆದರೆ ಮನುಷ್ಯನೊಳಗಿನಿಂದ ಹೊರಗೆ ಬರುವಂಥದು ಮನುಷ್ಯನನ್ನು ಮೈಲಿಗೆ ಮಾಡುವಂಥವುಗಳಾಗಿವೆ” ಎಂದು ಹೇಳಿದನು.
Người ta bị dơ bẩn không phải vì những vật từ bên ngoài vào, nhưng vì những điều ra từ trong lòng.”
16 ೧೬ “ಯಾರಿಗಾದರೂ ಕೇಳುವುದಕ್ಕೆ ಕಿವಿಯಿದ್ದರೆ ಕೇಳಲಿ” ಅಂದನು.
17 ೧೭ ತರುವಾಯ ಆತನು ಜನರನ್ನು ಬಿಟ್ಟು ಮನೆಯೊಳಗೆ ಹೋದಾಗ ಆತನ ಶಿಷ್ಯರು ಆ ಸಾಮ್ಯದ ಅರ್ಥವೇನೆಂದು ಆತನನ್ನು ಕೇಳಲು
Khi Chúa Giê-xu rời đám đông vào nhà, các môn đệ thắc mắc, hỏi Ngài về câu ẩn dụ ấy.
18 ೧೮ ಆತನು ಅವರಿಗೆ, “ನಿಮಗೆ ಇನ್ನೂ ತಿಳಿವಳಿಕೆಯಿಲ್ಲವೇ? ಹೊರಗಿನಿಂದ ಮನುಷ್ಯನೊಳಗೆ ಹೋಗುವಂಥದು,
Chúa đáp: “Các con cũng không hiểu nữa sao? Các con không biết thức ăn không làm cho con người ô uế sao?
19 ೧೯ ಅವನ ಹೃದಯದೊಳಕ್ಕೆ ಸೇರದೆ ಹೊಟ್ಟೆಯಲ್ಲಿ ಸೇರಿ, ಬಳಿಕ ಹೊರಗೆ ವಿಸರ್ಜಿಸಲ್ಪಡುತ್ತದೆ. ಅವು ಅವನನ್ನು ಅಶುದ್ಧ ಮಾಡಲಾರದೆಂದು ನಿಮಗೆ ಅರ್ಥವಾಗುವುದಿಲ್ಲವೋ?” ಎಂದು ಹೇಳಿದನು. ಹೀಗೆ ಹೇಳಿದ್ದರಿಂದ ಆಹಾರ ಪದಾರ್ಥಗಳೆಲ್ಲಾ ಶುದ್ಧವೆಂದು ಯೇಸು ಸೂಚಿಸಿದನು.
Vì nó không vào trong lòng, chỉ đi qua cơ quan tiêu hóa rồi ra khỏi thân thể.” (Lời Chúa dạy cho thấy các thực phẩm đều không ô uế).
20 ೨೦ ಆತನು ಮತ್ತೆ ಹೇಳಿದ್ದೇನೆಂದರೆ, “ಆದರೆ ಮನುಷ್ಯನ ಅಂತರಂಗದಿಂದ ಹೊರಹೊಮ್ಮುವಂಥವುಗಳೇ ಅವನನ್ನು ಅಶುದ್ಧಗೊಳಿಸುತ್ತವೆ;
Chúa dạy tiếp: “Những điều ra từ trong lòng mới làm cho con người dơ bẩn.
21 ೨೧ ಒಳಗಿನಿಂದ ಅಂದರೆ ಮನುಷ್ಯರ ಹೃದಯದೊಳಗಿನಿಂದ ಬರುವ ದುರಾಲೋಚನೆಗಳು, ಹಾದರ, ಕಳ್ಳತನ, ಕೊಲೆ,
Vì từ bên trong, từ tâm hồn con người, sinh ra những tư tưởng ác, như gian dâm, trộm cắp, giết người, ngoại tình,
22 ೨೨ ವ್ಯಭಿಚಾರ, ದುರಾಶೆ, ಕೆಡುಕುತನ, ಮೋಸ, ಕಾಮಾಭಿಲಾಷೆ, ಹೊಟ್ಟೆಕಿಚ್ಚು, ಅಪನಿಂದೆ, ಗರ್ವ, ಬುದ್ಧಿಗೇಡಿತನ ಇವೇ ಮೊದಲಾದವುಗಳು ಹೊರಡುತ್ತವೆ.
tham lam, độc ác, lừa dối, phóng đãng, ganh ghét, phỉ báng, kiêu căng, và dại dột.
23 ೨೩ ಈ ಎಲ್ಲಾ ಕೆಡುಕುಗಳು ಮಾನವನ ಅಂತರಂಗದಿಂದಲೇ ಉದ್ಭವಿಸಿ ಅವನನ್ನು ಅಶುದ್ಧ ಮಾಡುತ್ತವೆ.”
Chính những thứ xấu xa từ bên trong mới làm con người dơ bẩn.”
24 ೨೪ ಯೇಸು ಅಲ್ಲಿಂದ ಹೊರಟು ತೂರ್ ಪಟ್ಟಣದ ಪ್ರಾಂತ್ಯಗಳಿಗೆ ಹೋಗಿ ಒಂದು ಮನೆಯೊಳಗೆ ಇಳಿದುಕೊಂಡು ಅದು ಯಾರಿಗೂ ತಿಳಿಯಬಾರದೆಂದು ಬಯಸಿದನು; ಆದರೆ ಆತನು ಗುಪ್ತವಾಗಿರುವುದಕ್ಕೆ ಸಾಧ್ಯವಾಗದೆ ಹೋಯಿತು.
Sau đó, Chúa Giê-xu rời xứ Ga-li-lê, đến miền Ty-rơ và Si-đôn. Khi vào nhà, Ngài không muốn cho ai biết, nhưng không sao giấu được.
25 ೨೫ ಕೂಡಲೆ ಒಬ್ಬ ಹೆಂಗಸು ಆತನ ಸುದ್ದಿಯನ್ನು ಕೇಳಿ ಬಂದು ಆತನ ಪಾದಕ್ಕೆ ಬಿದ್ದಳು. ಆಕೆಯ ಮಗಳಿಗೆ ದೆವ್ವ ಹಿಡಿದಿತ್ತು.
Một người phụ nữ có con gái bị quỷ ám, nghe Chúa đến, lập tức ra quỳ trước mặt Ngài,
26 ೨೬ ಆ ಹೆಂಗಸು ಸುರೋಪೊಯಿನಿಕ್ಯದಲ್ಲಿ ಹುಟ್ಟಿದ ಗ್ರೀಕಳಾಗಿದ್ದಳು. ಆಕೆಯು ತನ್ನ ಮಗಳಿಗೆ ಹಿಡಿದಿದ್ದ ದೆವ್ವವನ್ನು ಬಿಡಿಸಬೇಕೆಂದು ಆತನನ್ನು ಬೇಡಿಕೊಂಡಾಗ,
van xin Ngài đuổi quỷ cho con gái mình. Bà là người Hy Lạp gốc Sy-rô Phê-ni-xi,
27 ೨೭ ಆತನು ಆಕೆಗೆ, “ಮೊದಲು ಮಕ್ಕಳು ತಿಂದು ತೃಪ್ತಿಯಾಗಲಿ; ಮಕ್ಕಳು ತಿನ್ನುವ ರೊಟ್ಟಿಯನ್ನು ತೆಗೆದು ನಾಯಿಮರಿಗಳಿಗೆ ಹಾಕುವುದು ಸರಿಯಲ್ಲ” ಎಂದು ಹೇಳಿದನು.
Chúa Giê-xu phán với bà: “Ta phải cứu giúp người Ít-ra-ên trước! Đâu có thể lấy bánh của con đem ném cho chó!”
28 ೨೮ ಆದರೆ ಅದಕ್ಕೆ ಆಕೆಯು, “ಹೌದು ಕರ್ತನೇ, ಮೇಜಿನ ಕೆಳಗಿರುವ ನಾಯಿಮರಿಗಳಂತೂ ಮಕ್ಕಳ ಕೈಯಿಂದ ಬೀಳುವ ರೊಟ್ಟೀತುಂಡುಗಳನ್ನು ತಿನ್ನುತ್ತವಲ್ಲಾ” ಎಂದು ಉತ್ತರಕೊಡಲು
Bà thưa: “Vâng, đúng thế thưa Chúa! Nhưng chó chỉ ăn bánh vụn của con cái từ trên bàn rơi xuống!”
29 ೨೯ ಆತನು, “ಆಕೆಗೆ ನೀನು ಕೊಟ್ಟಿರುವ ಈ ಉತ್ತರದ ನಿಮಿತ್ತ ದೆವ್ವವು ನಿನ್ನ ಮಗಳನ್ನು ಬಿಟ್ಟು ಹೋಗಿದೆ, ನೀನು ಹೋಗು” ಅಂದನು.
Chúa đáp: “Bà đã nói thế, cứ về nhà đi! Quỷ đã ra khỏi con gái bà rồi!”
30 ೩೦ ಆಕೆಯು ತನ್ನ ಮನೆಗೆ ಹೋಗಿ ನೋಡಲಾಗಿ ಆ ಹುಡುಗಿಯು ಹಾಸಿಗೆಯ ಮೇಲೆ ಮಲಗಿದ್ದಳು; ದೆವ್ವ ಅವಳನ್ನು ಬಿಟ್ಟು ಹೋಗಿತ್ತು.
Về đến nhà, bà thấy con gái mình nằm trên giường tỉnh táo, không bị quỷ ám nữa.
31 ೩೧ ಅನಂತರ ಆತನು ತೂರ್ ಪಟ್ಟಣದ ಪ್ರಾಂತ್ಯಗಳನ್ನು ಬಿಟ್ಟು ಸೀದೋನ್ ಪಟ್ಟಣದ ಮಾರ್ಗವಾಗಿ ದೆಕಪೊಲಿಯ ಪ್ರಾಂತ್ಯಗಳನ್ನು ಹಾದು ಗಲಿಲಾಯ ಸಮುದ್ರದ ದಡಕ್ಕೆ ಬಂದನು.
Từ Ty-rơ, Chúa Giê-xu qua Si-đôn, xuống vùng Mười Thành và đến biển Ga-li-lê.
32 ೩೨ ಆಗ ಕೆಲವರು ತೊದಲು ಮಾತನಾಡುವ ಒಬ್ಬ ಕಿವುಡನನ್ನು ಆತನ ಬಳಿಗೆ ಕರೆದುಕೊಂಡು ಬಂದು, ಇವನ ಮೇಲೆ ನಿನ್ನ ಕೈಯಿಡಬೇಕು ಎಂದು ಆತನನ್ನು ಬೇಡಿಕೊಂಡರು.
Người ta đem đến một người điếc và ngọng, nài xin Chúa Giê-xu đặt tay chữa lành.
33 ೩೩ ಆತನು ಅವನನ್ನು ಜನರ ಗುಂಪಿನಿಂದ ಪ್ರತ್ಯೇಕವಾಗಿ ಕರೆದುಕೊಂಡು ಹೋಗಿ, ತನ್ನ ಬೆರಳುಗಳನ್ನು ಅವನ ಕಿವಿಗಳಲ್ಲಿ ಇಟ್ಟನು ಮತ್ತು ಉಗುಳಿ ನಂತರ ಅವನ ನಾಲಿಗೆಯನ್ನು ಮುಟ್ಟಿ,
Chúa Giê-xu dắt anh ra khỏi đám đông, đặt ngón tay vào lỗ tai và lấy nước bọt thấm vào lưỡi anh,
34 ೩೪ ಆಕಾಶದ ಕಡೆಗೆ ನೋಡಿ ದೀರ್ಘವಾಗಿ ನಿಟ್ಟುಸಿರುಬಿಟ್ಟು ಅವನಿಗೆ, “ಎಪ್ಫಥಾ” ಎಂದು ಹೇಳಿದನು. ಆ ಶಬ್ದಕ್ಕೆ “ತೆರೆಯಲಿ” ಎಂದರ್ಥ.
rồi ngước mắt lên trời, thở mạnh và bảo: “Mở ra!”
35 ೩೫ ಹೇಳುತ್ತಲೇ ಅವನ ಕಿವಿಗಳು ತೆರೆದವು; ಅವನ ನಾಲಿಗೆಯು ಸಡಿಲವಾಯಿತು; ಅವನು ಸ್ಪಷ್ಟವಾಗಿ ಮಾತನಾಡಿದನು.
Lập tức, anh ấy nghe hoàn hảo, lưỡi anh được thong thả nên anh nói năng rõ ràng.
36 ೩೬ ಆಗ ಆತನು, ಇದನ್ನು ಯಾರಿಗೂ ತಿಳಿಸಬಾರದೆಂದು ಅವರಿಗೆ ಕಟ್ಟಪ್ಪಣೆ ಮಾಡಿದನು. ಆದರೆ ಎಷ್ಟು ಹೇಳಿದರೂ ಕೇಳದೆ ಅವರು ಮತ್ತಷ್ಟು ಹೆಚ್ಚಾಗಿ ಅದನ್ನು ಪ್ರಚಾರ ಮಾಡಿದರು.
Chúa Giê-xu bảo mọi người đừng thuật chuyện đó với ai, nhưng càng ngăn cấm, người ta càng phổ biến rộng hơn.
37 ೩೭ ಅವರು ಅತ್ಯಂತ ಆಶ್ಚರ್ಯಪಟ್ಟು, “ಆತನು ಎಲ್ಲವನ್ನು ಚೆನ್ನಾಗಿ ಮಾಡಿದ್ದಾನೆ; ಕಿವುಡರು ಕೇಳುವಂತೆಯೂ ಮೂಕರು ಮಾತನಾಡುವಂತೆಯೂ ಮಾಡುತ್ತಾನೆ” ಎಂದು ಅಂದುಕೊಂಡರು.
Ai nấy đều ngạc nhiên vô cùng, bảo nhau: “Ngài làm gì cũng tuyệt diệu! Đến cả người điếc nghe được, người câm nói được.”