< ಮಾರ್ಕನು 8 >
1 ೧ ಆ ದಿನಗಳಲ್ಲಿ ಜನರು ಪುನಃ ದೊಡ್ಡಗುಂಪಾಗಿ ಬಂದು ನೆರೆದಿದ್ದರು. ಊಟಮಾಡಲು ಅವರಲ್ಲಿ ಆಹಾರವಿರಲಿಲ್ಲ. ಆಗ ಯೇಸು ತನ್ನ ಶಿಷ್ಯರನ್ನು ಹತ್ತಿರಕ್ಕೆ ಕರೆದು,
Guutha wodeppe guye, daro asay Yesuusakko shiiqidosona. Asaas miyabay dhayin Yesuusi ba tamaareta baakko xeegidi,
2 ೨ “ಈ ಜನರನ್ನು ನೋಡಿ ಕನಿಕರಪಡುತ್ತೇನೆ, ಏಕೆಂದರೆ ಮೂರು ದಿನಗಳಿಂದ ಇವರು ನನ್ನ ಬಳಿಯಲ್ಲಿದ್ದಾರೆ; ಇವರಿಗೆ ಊಟಕ್ಕೆ ಏನೂ ಇಲ್ಲ.
“Ha asay taara heedzu gallas gakkanaw gam77idi, aykkoka miyabaa demmiboonna gisho, tana asay qadhethees.
3 ೩ ಇವರನ್ನು ಹಸಿವೆಯಿಂದ ಮನೆಗೆ ಕಳುಹಿಸಿದರೆ ದಾರಿಯಲ್ಲಿ ಬಳಲಿ ಬಿದ್ದಾರು. ಇವರಲ್ಲಿ ಕೆಲವರು ದೂರದಿಂದ ಬಂದಿದ್ದಾರಲ್ಲಾ” ಎಂದು ಅವರಿಗೆ ಹೇಳಿದನು.
Taani asaa koshara soo yeddiko asay bishe ogen daaburidi kunddana, bagga asay haahosoppe yidosona” yaagis.
4 ೪ ಅದಕ್ಕೆ ಶಿಷ್ಯರು, “ಈ ಅಡವಿಯಲ್ಲಿ ಸಾಕಷ್ಟು ರೊಟ್ಟಿಯನ್ನು ಎಲ್ಲಿಂದ ತಂದು ಈ ಜನರನ್ನು ತೃಪ್ತಿಪಡಿಸುವುದಕ್ಕಾದೀತು?” ಅಂದರು.
Yesuusa tamaareti zaaridi, “Ha bazzo biittan ha asa ubbaa muzanaw gidiya kathi demmanaw dandda7ey oonee?” yaagidosona.
5 ೫ ಆತನು, “ನಿಮ್ಮಲ್ಲಿ ಎಷ್ಟು ರೊಟ್ಟಿಗಳಿವೆ?” ಎಂದು ಅವರನ್ನು ಕೇಳಿದ್ದಕ್ಕೆ ಅವರು, “ಏಳು ರೊಟ್ಟಿಗಳು ಇವೆ” ಅಂದರು.
Yesuusi enttako, “Hinttew aappun uythi de7ii?” yaagidi oychchis. Entti zaaridi, “Laappun uythi de7ees” yaagidosona.
6 ೬ ಆಗ ಯೇಸು ಜನರ ಗುಂಪಿಗೆ, ನೆಲದ ಮೇಲೆ ಕುಳಿತುಕೊಳ್ಳುವಂತೆ ಅಪ್ಪಣೆಕೊಟ್ಟು, ಆ ಏಳು ರೊಟ್ಟಿಗಳನ್ನು ತೆಗೆದುಕೊಂಡು ದೇವರಿಗೆ ಸ್ತೋತ್ರಮಾಡಿ ಅವುಗಳನ್ನು ಮುರಿದು ಜನರಿಗೆ ಹಂಚಲು ತನ್ನ ಶಿಷ್ಯರ ಕೈಗೆ ಕೊಟ್ಟನು; ಅವರು ಗುಂಪಿನವರಿಗೆ ಹಂಚಿಕೊಟ್ಟರು.
Yesuusi asay sa7an uttana mela kiittis. Yaatidi, laappun uythaa ekkidi Xoossaa galati simmidi he uythaa menthidi, asaas gishana mela ba tamaaretas immis. Iya tamaareti asaas gishidosona.
7 ೭ ಇದಲ್ಲದೆ ಅವರಲ್ಲಿ ಕೆಲವು ಸಣ್ಣ ಮೀನುಗಳಿದ್ದವು; ಆತನು ಅವುಗಳಿಗಾಗಿ ದೇವರಿಗೆ ಸ್ತೋತ್ರಮಾಡಿ, ಇವುಗಳನ್ನೂ ಹಂಚಿಕೊಡಿರಿ ಎಂದು ಶಿಷ್ಯರಿಗೆ ಅಪ್ಪಣೆ ಕೊಟ್ಟನು.
Enttaw qassi guutha laafa moloti de7oosona. Yesuusi he molota gisho Xoossaa galatidi, asaas gishana mela ba tamaareta kiittis.
8 ೮ ಜನರು ತಿಂದು ತೃಪ್ತರಾದರು. ಉಳಿದ ತುಂಡುಗಳನ್ನು ಒಟ್ಟುಗೂಡಿಸಲಾಗಿ ಏಳು ಬುಟ್ಟಿಗಳು ತುಂಬಿದವು.
Asay ubbay midi kallidosona. Iya tamaareti attida tiifiya laappun gayta kumethi denthidosona.
9 ೯ ಊಟಮಾಡಿದವರು ಹೆಚ್ಚುಕಡಿಮೆ ನಾಲ್ಕು ಸಾವಿರ ಗಂಡಸರಿದ್ದರು.
Kathaa mida asaa tayboy oyddu mukulu gidana. Hessafe guye, Yesuusi asa yeddis.
10 ೧೦ ಆತನು ಅವರನ್ನು ಕಳುಹಿಸಿದ ನಂತರ ಕೂಡಲೆ ತನ್ನ ಶಿಷ್ಯರೊಂದಿಗೆ ಒಂದು ದೋಣಿಯನ್ನು ಹತ್ತಿ ದಲ್ಮನೂಥ ಸೀಮೆಗೆ ಬಂದನು.
I qassi ba tamaaretara ellesi wogolon gelidi Dalmmanuta giya biittaa bis.
11 ೧೧ ತರುವಾಯ ಫರಿಸಾಯರು ಯೇಸುವಿನ ಬಳಿಗೆ ಬಂದು, ಆತನ ಕೂಡ ತರ್ಕಮಾಡಿ, ಆತನನ್ನು ಪರೀಕ್ಷಿಸುವ ಉದ್ದೇಶದಿಂದ, “ನೀನು ಪರಲೋಕದಿಂದ ಒಂದು ಸೂಚಕಕಾರ್ಯವನ್ನು ಮಾಡಿ ತೋರಿಸು” ಎಂದು ಕೇಳಿದರು.
Farisaaweti yidi Yesuusa paaccanaw koyidi, saloppe banttana malaata bessana mela Yesuusara palama oykkidosona.
12 ೧೨ ಯೇಸು ಅದನ್ನು ಕೇಳಿ ತನ್ನ ಆತ್ಮದಲ್ಲಿ ನಿಟ್ಟುಸಿರುಬಿಟ್ಟು, “ಈ ಸಂತತಿಯು ಸೂಚಕಕಾರ್ಯವನ್ನು ಅಪೇಕ್ಷಿಸುವುದು ಏಕೆ? ನಿಮಗೆ ನಾನು ಸತ್ಯವಾಗಿ ಹೇಳುತ್ತೇನೆ, ಈ ಸಂತತಿಗೆ ಯಾವ ಸೂಚಕಕಾರ್ಯವೂ ಕೊಡಲ್ಪಡುವುದಿಲ್ಲ, ಇದು ಖಂಡಿತ” ಎಂದು ಹೇಳಿದನು.
Yesuusi tookki shemppidi, “Ha wodiya asay ays malaata koyii? Taani hinttew tuma odays; ha wodiya asaas ay malaatikka imettenna” yaagis.
13 ೧೩ ಅವರನ್ನು ಬಿಟ್ಟು ತಿರುಗಿ ದೋಣಿಯನ್ನು ಹತ್ತಿ ಆಚೇದಡಕ್ಕೆ ಹೋದನು.
I entta yan yeggi aggidi zaari wogolon gelidi abbaafe hefinthi pinnis.
14 ೧೪ ಆದರೆ ಶಿಷ್ಯರು ರೊಟ್ಟಿಯನ್ನು ತೆಗೆದುಕೊಳ್ಳಲು ಮರೆತಿದ್ದರು. ದೋಣಿಯಲ್ಲಿ ಅವರ ಹತ್ತಿರ ಒಂದು ರೊಟ್ಟಿ ಮಾತ್ರ ಇತ್ತು; ಬೇರೆ ಏನೂ ಇರಲಿಲ್ಲ.
Iya tamaareti kathi efanayssa dogidosona; enttaw wogoluwa giddon issi uythaafe hari baawa.
15 ೧೫ ಯೇಸು ಅವರಿಗೆ, “ಫರಿಸಾಯರ ಮತ್ತು ಹೆರೋದನ ಹುಳಿಹಿಟ್ಟಿನ ವಿಷಯದಲ್ಲಿ ನೀವು ಜಾಗರೂಕತೆಯಿಂದಿರಿ” ಎಂದು ಎಚ್ಚರಿಸಿದನು.
Yesuusi enttako, “Hinttena erite. Farisaaweta irshshuwaafenne Heroodisa irshshuwaafe naagettite” yaagidi kiittis.
16 ೧೬ ಅವರು, “ನಮ್ಮಲ್ಲಿ ರೊಟ್ಟಿ ಇಲ್ಲದಿರುವುದರಿಂದಲೇ ಹೀಗೆ ಹೇಳುತ್ತಿರಬೇಕು” ಎಂದು ತಮ್ಮೊಳಗೆ ಚರ್ಚಿಸಿಕೊಂಡರು.
Entti bantta giddon, “I hayssa gey nuus uythi baynna gishossa” yaagidosona.
17 ೧೭ ಆತನು ಅದನ್ನು ತಿಳಿದು, “ರೊಟ್ಟಿಯಿಲ್ಲವಲ್ಲಾ ಎಂದು ನಿಮ್ಮೊಳಗೆ ಚರ್ಚಿಸಿಕೊಳ್ಳುವುದೇಕೆ? ನೀವು ಇನ್ನೂ ಗ್ರಹಿಸಲಿಲ್ಲವೋ? ನಿಮಗೆ ತಿಳಿವಳಿಕೆ ಬರಲಿಲ್ಲವೋ? ನಿಮ್ಮ ಮನಸ್ಸು ಅಷ್ಟು ಕಠಿಣವಾಗಿದೆಯೋ?
Yesuusi entti geyssa eridi enttako, “Hinttew uythi baynna gisho ays odetteetii? Ha77ika erekketii? Woykko akeekekketii? Hintte wozanay doccidee?
18 ೧೮ ಕಣ್ಣಿದ್ದು ಕಾಣುವುದಿಲ್ಲವೋ? ಕಿವಿಯಿದ್ದು ಕೇಳುವುದಿಲ್ಲವೋ? ನಿಮಗೆ ನೆನಪಿಲ್ಲವೋ?
Hinttew ayfey de7ishin be7ekketi? Haythi de7ishin si7ekketii? Hintte akeeketii?
19 ೧೯ ನಾನುಆ ಐದು ರೊಟ್ಟಿಗಳನ್ನು ಮುರಿದು ಐದು ಸಾವಿರ ಜನರಿಗೆ ಹಂಚಿಸಿದಾಗ ಉಳಿದ ರೊಟ್ಟಿಯ ತುಂಡುಗಳನ್ನು ಎಷ್ಟು ಬುಟ್ಟಿ ತುಂಬಾ ತೆಗೆದುಕೊಂಡು ಹೋದಿರಿ?” ಎಂದು ಕೇಳಿದನು. ಅವರು, “ಹನ್ನೆರಡು ಬುಟ್ಟಿಗಳು” ಅಂದರು.
Taani ichchashu uythaa ichchashu mukulu asaas bathida wode aappun gayta kumethi tiife denthidetii?” yaagis. Enttika, “Tammanne nam77u gayta kumethi” yaagidosona.
20 ೨೦ “ಮತ್ತುಆ ಏಳು ರೊಟ್ಟಿಗಳನ್ನು ನಾಲ್ಕು ಸಾವಿರ ಜನರ ಮಧ್ಯದಲ್ಲಿ ಮುರಿದು ಹಂಚಿಸಿದ ನಂತರ ಎಷ್ಟು ಪುಟ್ಟಿಗಳನ್ನು ತೆಗೆದುಕೊಂಡು ಹೋದಿರಿ” ಎಂದು ಕೇಳಿದನು. ಅವರು, “ಏಳು ಪುಟ್ಟಿಗಳು” ಅಂದರು.
“Hessadakka, taani laappun uythaa oyddu mukulu asaas bathida wode aappun gayta kumetha tiife denthidetii?” yaagis. Entti, “Laappun gayta kumethi denthida” yaagidosona.
21 ೨೧ ಆಗ ಆತನು ಅವರಿಗೆ, “ನೀವು ಇನ್ನೂ ಗ್ರಹಿಸಲಿಲ್ಲವೋ?” ಎಂದು ಕೇಳಿದನು.
Yaatin, “Ha77ika akeekibeekketii?” yaagis.
22 ೨೨ ಮತ್ತು ಅವರು ಬೇತ್ಸಾಯಿದ ಊರಿಗೆ ಬಂದರು. ಅಲ್ಲಿ ಜನರು ಒಬ್ಬ ಕುರುಡನನ್ನು ಯೇಸುವಿನ ಬಳಿಗೆ ಕರೆದುಕೊಂಡು ಬಂದು, ಇವನನ್ನು ಮುಟ್ಟಬೇಕು ಎಂದು ಆತನನ್ನು ಬೇಡಿಕೊಂಡರು.
Entti Beetesayda giya katama bidosona. Guutha asati qooqe uraa Yesuusakko ehidi he uraa bochchana mela iya woossidosona.
23 ೨೩ ಆತನು ಕುರುಡನ ಕೈ ಹಿಡಿದು ಊರ ಹೊರಗೆ ಕರೆದುಕೊಂಡು ಹೋಗಿ ಅವನ ಕಣ್ಣುಗಳ ಮೇಲೆ ಉಗುಳು ಹಚ್ಚಿ, ಅವನ ಮೇಲೆ ತನ್ನ ಕೈಗಳನ್ನಿಟ್ಟು, “ನಿನಗೆ ಏನಾದರೂ ಕಾಣುತ್ತದೆಯೋ?” ಎಂದು ಅವನನ್ನು ಕೇಳಿದನು.
Yesuusi qooqe uraa kushiya oykkidi katamaappe gaxa kessis. Iya ayfiyaan cuttidi ba kushiya iya bolla wothidi, “New aykkoy bentii?” yaagidi oychchis.
24 ೨೪ ಅವನು ತಲೆಯೆತ್ತಿ ನೋಡಿ, “ನನಗೆ ಜನರು ಕಾಣುತ್ತಾರೆ; ಆದರೆ ಅವರು ನಡೆದಾಡುವ ಮರಗಳಂತೆ ಕಾಣಿಸುತ್ತಿದ್ದಾರೆ” ಎಂದನು.
Uray dhoqqu gidi xeellidi, “Taw asay benttees, shin asay hamuttishe mithi daanees” yaagis.
25 ೨೫ ತನ್ನ ಕೈಗಳನ್ನು ಪುನಃ ಅವನ ಕಣ್ಣುಗಳ ಮೇಲಿಟ್ಟನು; ಆಗ ಅವನು ಕಣ್ಣರಳಿಸಿ ನೋಡಿ ಪೂರ್ಣ ದೃಷ್ಟಿಯನ್ನು ಹೊಂದಿದನು. ಅವನು ನೋಡಲು ಎಲ್ಲವೂ ಸ್ಪಷ್ಟವಾಗಿ ಕಾಣಿಸಿತು.
Hessafe guye, Yesuusi zaaridi, uraa ayfiyaan ba kushiya wothis. Uray loythi xeellis, iya ayfey paxis, ubbabaa geeshshidi be7is.
26 ೨೬ ತರುವಾಯ ಆತನು, “ನೀನು ಊರೊಳಗೆ ಹೋಗಬೇಡ” ಎಂದು ಹೇಳಿ ಅವನನ್ನು ಅವನ ಮನೆಗೆ ಕಳುಹಿಸಿಬಿಟ್ಟನು.
Yesuusi addiyako, “Ne soo ba, shin gutaa geloppa” yaagidi kiittis.
27 ೨೭ ಯೇಸುವೂ ಆತನ ಶಿಷ್ಯರೂ ಫಿಲಿಪ್ಪನ ಕೈಸರೈಯ ಎಂಬ ಪಟ್ಟಣಕ್ಕೆ ಸೇರಿದ ಗ್ರಾಮಗಳಿಗೆ ಹೊರಟರು. ದಾರಿಯಲ್ಲಿ ಆತನು, “ಜನರು ನನ್ನನ್ನು ಯಾರೆಂದು ಹೇಳುತ್ತಾರೆ?” ಎಂದು ತನ್ನ ಶಿಷ್ಯರನ್ನು ಕೇಳಿದನು.
Yesuusi ba tamaaretara Qisaariya Filphoosa matan de7iya gutaa bis. Entti bishin oge bolla Yesuusi, “Tana asay oona goonaa?” yaagidi ba tamaareta oychchis.
28 ೨೮ ಅದಕ್ಕೆ ಅವರು, “ನಿನ್ನನ್ನು ಕೆಲವರು ಸ್ನಾನಿಕನಾದ ಯೋಹಾನನು ಅನ್ನುತ್ತಾರೆ; ಕೆಲವರು ಎಲೀಯನು ಅನ್ನುತ್ತಾರೆ; ಇನ್ನು ಕೆಲವರು ಪ್ರವಾದಿಗಳಲ್ಲಿ ಒಬ್ಬನು ಅನ್ನುತ್ತಾರೆ” ಎಂದು ಹೇಳಿದರು.
Iya tamaareti, “Issi issi asay nena, ‘Xammaqiya Yohaannisa’ goosona; harati, ‘Eliyaasa goosona’ qassi harati, ‘Nabetappe issuwa’ goosona” yaagidosona.
29 ೨೯ ಆತನು ಅವರನ್ನು, ಕುರಿತು “ನೀವು ನನ್ನನ್ನು ಯಾರನ್ನುತ್ತೀರಿ?” ಎಂದು ಕೇಳಲಾಗಿ ಪೇತ್ರನು, “ನೀನು ಕ್ರಿಸ್ತನು” ಎಂದು ಉತ್ತರಕೊಟ್ಟನು.
Yesuusi enttako, “Yaatin hintte tana oona geeti?” yaagidi oychchis. Phexiroosi, “Neeni Kiristtoosa” yaagidi zaaris.
30 ೩೦ ಅದಕ್ಕೆ ಆತನು, “ನನ್ನ ವಿಷಯವಾಗಿ ಯಾರಿಗೂ ಹೇಳಬೇಡಿರಿ” ಎಂದು ಅವರಿಗೆ ಖಂಡಿತವಾಗಿ ಎಚ್ಚರಿಸಿದನು.
Yesuusi, “Tabaa oodeskka odoppite” yaagidi entta kiittis.
31 ೩೧ ಇದಲ್ಲದೆ ಆತನು, ಮನುಷ್ಯಕುಮಾರನು ಬಹು ಕಷ್ಟಗಳನ್ನು ಅನುಭವಿಸಿ ಹಿರಿಯರಿಂದಲೂ, ಮುಖ್ಯಯಾಜಕರಿಂದಲೂ, ಶಾಸ್ತ್ರಿಗಳಿಂದಲೂ ತಿರಸ್ಕರಿಸಲ್ಪಟ್ಟವನಾಗಿ ಕೊಲ್ಲಲ್ಪಟ್ಟು ಮೂರು ದಿನಗಳ ನಂತರ ಜೀವಿತನಾಗಿ ಎದ್ದು ಬರಬೇಕಾಗಿದೆ ಎಂದು ಉಪದೇಶಮಾಡುವುದಕ್ಕೆ ಪ್ರಾರಂಭಿಸಿದನು.
Yesuusi ba tamaaretakko, “Asa Na7ay, daro meto ekkanaw bessees; cimati, kahine halaqatinne higge asttamaareti iya ixxanaw bessees. Entti iya wodhanawunne I, heedzu gallasappe guye, hayqoppe denddanaw bessees” yaagidi entta tamaarssis.
32 ೩೨ ಆತನು ಈ ಮಾತನ್ನು ಸ್ಪಷ್ಟವಾಗಿ ಹೇಳಿದನು. ಆಗ ಪೇತ್ರನು ಆತನನ್ನು ಪ್ರತ್ಯೇಕವಾಗಿ ಕರೆದುಕೊಂಡು ಹೋಗಿ “ನೀನು ಹೀಗೆ ಹೇಳುವುದು ಸರಿಯಲ್ಲ” ಎಂದು ಗದರಿಸಿದನು.
I hessa enttaw geeshshidi odis. Phexiroosi iya issi bagga zaaridi hanqettis.
33 ೩೩ ಆದರೆ ಯೇಸು ಹಿಂತಿರುಗಿ ತನ್ನ ಶಿಷ್ಯರನ್ನು ನೋಡಿ ಪೇತ್ರನನ್ನು ಗದರಿಸಿ, “ಸೈತಾನನೇ, ನನ್ನನ್ನು ಬಿಟ್ಟು ತೊಲಗಿ ಹೋಗು! ನಿನ್ನ ಯೋಚನೆ ಮನುಷ್ಯರದಾಗಿದೆಯೇ ಹೊರತು ದೇವರದಲ್ಲ” ಎಂದು ಹೇಳಿದನು.
Shin Yesuusi guye simmidi, ba tamaareta xeellidi, Phexiroosa hanqettidi, “Ha Xalahiyaw ta matappe haakka. Neeni asi dosiyabaa qoppasappe attin Xoossay dosiyabaa qoppaka” yaagis.
34 ೩೪ ಆ ಮೇಲೆ ಆತನು ತನ್ನ ಶಿಷ್ಯರ ಜೊತೆಗೆ ಜನರ ಗುಂಪನ್ನೂ ಹತ್ತಿರ ಕರೆದು ಅವರಿಗೆ ಹೇಳಿದ್ದೇನಂದರೆ, “ಯಾರಿಗಾದರೂ ನನ್ನನ್ನು ಹಿಂಬಾಲಿಸಲು ಮನಸ್ಸಿದ್ದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.
Qassika Yesuusi daro asaanne ba tamaareta baakko xeegidi, “Tana kaallanaw koyaa oonikka bana kaddo; ba masqaliya tookkidi tana kaalo.
35 ೩೫ ತನ್ನ ಪ್ರಾಣವನ್ನು ಉಳಿಸಿಕೊಳ್ಳಬೇಕೆಂದಿರುವವನು ಅದನ್ನು ಕಳೆದುಕೊಳ್ಳುವನು; ಆದರೆ ನನ್ನ ನಿಮಿತ್ತವಾಗಿಯೂ, ಸುವಾರ್ತೆಯ ನಿಮಿತ್ತವಾಗಿಯೂ ತನ್ನ ಪ್ರಾಣವನ್ನು ಕಳೆದುಕೊಳ್ಳುವವನು ಅದನ್ನು ಉಳಿಸಿಕೊಳ್ಳುವನು.
Ba shemppuwa ashshanaw koyaa uray dhayssana. Shin ta gishonne Wonggelaa gisho ba shemppuwa dhayssiya uray ashshana.
36 ೩೬ ಒಬ್ಬ ಮನುಷ್ಯನು ಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ತನ್ನ ಸ್ವಂತ ಪ್ರಾಣವನ್ನೇ ನಷ್ಟಪಡಿಸಿಕೊಂಡರೆ ಅವನಿಗೆ ಲಾಭವೇನು?
Issi asi sa7an de7iya ubbabaa baw shiishidi, ba shemppuwa dhayssikko iya ay maaddanee?
37 ೩೭ ಒಬ್ಬನು ತನ್ನ ಪ್ರಾಣಕ್ಕೆ ಬದಲಾಗಿ ಏನು ಈಡು ಕೊಡಲಾದೀತು?
Issi asi ba shemppuwa wozanaw ay immanaw dandda7ii?
38 ೩೮ ವ್ಯಭಿಚಾರಿಣಿಯಂತಿರುವ ಈ ಪಾಪಿಷ್ಠ ಪೀಳಿಗೆಯವರಲ್ಲಿ ಯಾರು ನನ್ನನ್ನೂ, ನನ್ನ ಮಾತುಗಳನ್ನೂ ಕುರಿತು ನಾಚಿಕೆಪಡುವರೋ, ಅಂಥವರನ್ನು ಕುರಿತು ಮನುಷ್ಯಕುಮಾರನು, ತಾನು ತನ್ನ ತಂದೆಯ ಪ್ರಭಾವದೊಡನೆ ಪರಿಶುದ್ಧ ದೇವದೂತರ ಸಮೇತವಾಗಿ ಬರುವಾಗ, ನಾಚಿಕೆಪಡುವನು” ಎಂದನು.
Xoossaa ammanonna ha iita yeletethan, issi asi tananinne ta qaalan yeellatikko, Asa Na7ay, qassi ba Aawa bonchchon geeshsha kiitanchchotara yaa wode iyan yeellatana” yaagis.