< ಮಾರ್ಕನು 9 >
1 ೧ ಯೇಸು ಅವರಿಗೆ, “ನಿಮಗೆ ನಿಜ ನಿಜವಾಗಿ ಹೇಳುತ್ತೇನೆ, ಇಲ್ಲಿ ನಿಂತಿರುವವರೊಳಗೆ ಕೆಲವರು ದೇವರ ರಾಜ್ಯವು ಪ್ರಬಲವಾಗಿ ಬರುವುದನ್ನು ನೋಡುವ ತನಕ ಮರಣಹೊಂದುವುದಿಲ್ಲ” ಎಂದು ಹೇಳಿದನು.
І сказав: «Істинно кажу вам: деякі з присутніх тут не зазнають смерті, доки не побачать Царства Божого, що прийшло в силі».
2 ೨ ಆರು ದಿನಗಳಾದ ಮೇಲೆ ಯೇಸು ಪೇತ್ರ, ಯಾಕೋಬ, ಯೋಹಾನ ಇವರನ್ನು ಮಾತ್ರ ತನ್ನೊಡನೆ ಕರೆದುಕೊಂಡು ಎತ್ತರವಾದ ಬೆಟ್ಟಕ್ಕೆ ಹೋದನು. ಅಲ್ಲಿ ಅವರ ಕಣ್ಣೆದುರಿಗೇ ಯೇಸುವು ರೂಪಾಂತರಗೊಂಡನು.
Через шість днів Ісус узяв із Собою Петра, Якова та Івана й вивів тільки їх на високу гору. Там Він преобразився перед ними:
3 ೩ ಆತನ ವಸ್ತ್ರಗಳು ಅತ್ಯಂತ ಶುಭ್ರವಾಗಿ ಬೆಳ್ಳಗೆ ಹೊಳೆಯಿತು. ಭೂಲೋಕದಲ್ಲಿರುವ ಯಾವ ಅಗಸನಾದರೂ ಅಷ್ಟು ಬೆಳ್ಳಗೆ ಮಾಡಲಾಗದಷ್ಟು ಅದು ಬಿಳುಪಾಗಿತ್ತು.
Його одяг став блискучим і таким білим, що жоден відбілювач у світі не міг би так відбілити.
4 ೪ ಇದಲ್ಲದೆ ಎಲೀಯನೂ, ಮೋಶೆಯೂ ಅವರಿಗೆ ಕಾಣಿಸಿಕೊಂಡು ಅವರು ಯೇಸುವಿನ ಸಂಗಡ ಮಾತನಾಡುತ್ತಿದ್ದರು.
І з’явились їм Мойсей та Ілля, які розмовляли з Ісусом.
5 ೫ ಆಗ ಪೇತ್ರನು ಯೇಸುವಿಗೆ, “ಗುರುವೇ, ನಾವು ಇಲ್ಲೇ ಇರುವುದು ಒಳ್ಳೆಯದು; ಮೂರು ಗುಡಾರಗಳನ್ನು ಕಟ್ಟುವೆವು; ನಿನಗೊಂದು, ಮೋಶೆಗೊಂದು, ಎಲೀಯನಿಗೊಂದು” ಎಂದು ಹೇಳಿದನು.
Петро сказав Ісусові: «Равві, добре нам тут бути! Зробімо три намети: один для Тебе, один для Мойсея та один для Іллі».
6 ೬ ಪೇತ್ರನಿಗೆ ತಾನು ಏನು ಹೇಳುತ್ತಿದ್ದೇನೆಂಬುದೇ ತಿಳಿಯಲಿಲ್ಲ. ಅವರು ಬಹಳವಾಗಿ ಹೆದರಿಕೊಂಡಿದ್ದರು.
Бо не знав, що сказати, такі налякані були.
7 ೭ ಅಷ್ಟರಲ್ಲಿ ಒಂದು ಮೋಡವು ಬಂದು ಅವರ ಮೇಲೆ ಕವಿಯಿತು. ಆ ಮೋಡದೊಳಗಿನಿಂದ, “ಈತನು ನನ್ನ ಪ್ರಿಯ ಕುಮಾರನು; ಈತನ ಮಾತನ್ನು ಕೇಳಿರಿ” ಎಂದು ಧ್ವನಿ ಉಂಟಾಯಿತು.
Тоді з’явилася хмара, яка накрила їх, і з хмари промовив голос: «Це Син Мій улюблений, Його слухайте!»
8 ೮ ಕೂಡಲೇ ಅವರು ಸುತ್ತಲೂ ನೋಡಿದಾಗ ತಮ್ಮ ಸಂಗಡ ಯೇಸುವನ್ನೇ ಹೊರತು ಬೇರೆ ಯಾರನ್ನೂ ಕಾಣಲಿಲ್ಲ.
І раптом, подивившись навкруги, вони нікого не побачили, окрім Ісуса.
9 ೯ ಅವರು ಆ ಬೆಟ್ಟದಿಂದ ಇಳಿದು ಬರುತ್ತಿರುವಾಗ ಆತನು ಅವರಿಗೆ, “ಮನುಷ್ಯಕುಮಾರನು ಸತ್ತು ಪುನರುತ್ಥಾನಹೊಂದುವ ತನಕ ನೀವು ಕಂಡದ್ದನ್ನು ಯಾರಿಗೂ ಹೇಳಬೇಡಿರಿ” ಎಂದು ಆಜ್ಞಾಪಿಸಿದನು.
Коли вони сходили з гори, [Ісус] наказав їм, щоб не казали нікому про те, що бачили, доки Син Людський не воскресне з мертвих.
10 ೧೦ ಅವರು ಆ ಮಾತನ್ನು ಮನಸ್ಸಿನಲ್ಲಿಟ್ಟುಕೊಂಡರು “ಸತ್ತು ಜೀವಿತನಾಗಿ ಏಳುವುದೆಂದರೇನು” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.
Вони зберегли це Слово для себе, тільки міркували між собою, що означає воскресіння з мертвих.
11 ೧೧ ಇದಲ್ಲದೆ ಅವರು, “ಎಲೀಯನು ಮೊದಲು ಬರುವುದು ಅಗತ್ಯವೆಂಬುದಾಗಿ ಶಾಸ್ತ್ರಿಗಳು ಯಾಕೆ ಹೇಳುತ್ತಾರೆ?” ಎಂದು ಆತನನ್ನು ಕೇಳಿದರು.
Потім вони запитали Його: ―Чому книжники кажуть, що Ілля має прийти першим?
12 ೧೨ ಅದಕ್ಕೆ ಯೇಸು ಅವರಿಗೆ, “ಎಲೀಯನು ಮೊದಲು ಬಂದು ಎಲ್ಲವನ್ನು ಪುನರ್ಸ್ಥಾಪಿಸುವುದು ನಿಜ. ಮತ್ತು ಮನುಷ್ಯಕುಮಾರನ ವಿಷಯವಾಗಿ; ಅವನು ಬಹು ಕಷ್ಟಗಳನ್ನನುಭವಿಸಿ ತಿರಸ್ಕರಿಸಲ್ಪಡಬೇಕೆಂಬುದಾಗಿ ಬರೆದಿದೆ, ಇದು ಹೇಗೆ?
[Ісус] відповів: ―Ілля дійсно має прийти першим, щоб відновити все. І, як написано про Сина Людського, Він має багато постраждати та бути приниженим.
13 ೧೩ ಆದರೆ ನಾನು ನಿಮಗೆ ಹೇಳುವುದೇನಂದರೆ; ಎಲೀಯನು ಬಂದನು ಮತ್ತು ಆತನ ವಿಷಯವಾಗಿ ಬರೆದಿರುವ ಪ್ರಕಾರ ಜನರು ತಮ್ಮ ಮನಸ್ಸಿಗೆ ಬಂದಂತೆ ಅವನಿಗೆ ಮಾಡಿದರು” ಅಂದನು.
Але кажу вам: Ілля прийшов, і вони вчинили з ним усе, що схотіли, як написано про нього.
14 ೧೪ ತರುವಾಯ ಅವರು ಉಳಿದ ಶಿಷ್ಯರ ಬಳಿಗೆ ಬಂದು ಅವರ ಸುತ್ತಲು ಜನರ ದೊಡ್ಡ ಗುಂಪು ಇರುವುದನ್ನೂ ಅವರ ಸಂಗಡ ಶಾಸ್ತ್ರಿಗಳು ತರ್ಕಮಾಡುವುದನ್ನೂ ಕಂಡರು.
Повернувшись до [інших] учнів, вони побачили навколо них великий натовп і книжників, які сперечалися з ними.
15 ೧೫ ಕೂಡಲೆ ಆ ಗುಂಪಿನವರೆಲ್ಲರು ಯೇಸುವನ್ನು ಕಂಡು ಬಹು ಆಶ್ಚರ್ಯಪಟ್ಟು ಆತನ ಬಳಿಗೆ ಓಡಿ ಬಂದು ಆತನನ್ನು ವಂದಿಸಿದರು.
Як тільки ці люди побачили Ісуса, здивувалися й побігли привітати Його.
16 ೧೬ ಆತನು ಅವರಿಗೆ, “ಇವರ ಸಂಗಡ ಏನು ವಾದಮಾಡುತ್ತೀರಿ?” ಎಂದು ಕೇಳಿದನು.
Він запитав їх: ―Чому ви сперечалися з ними?
17 ೧೭ ಅದಕ್ಕೆ ಆ ಗುಂಪಿನಲ್ಲಿ ಒಬ್ಬನು, “ಬೋಧಕನೇ, ನನ್ನ ಮಗನನ್ನು ನಿನ್ನ ಬಳಿಗೆ ಕರೆದುಕೊಂಡು ಬಂದೆನು; ಅವನಿಗೊಂದು ದೆವ್ವ ಹಿಡಿದದೆ ಅದು ಅವನನ್ನು ಮೂಗನನ್ನಾಗಿಸಿದೆ.
Один чоловік із натовпу відповів: ―Учителю, я привів до Тебе мого сина, бо він одержимий духом німоти.
18 ೧೮ ಅದು ಎಲ್ಲಿ ಅವನ ಮೇಲೆ ಬಂದರೂ ಅವನನ್ನು ನೆಲಕ್ಕೆ ಕೆಡವುತ್ತದೆ; ಆಗ ಅವನು ನೊರೆಸುರಿಸುತ್ತಾನೆ, ಕರಕರನೆ ಹಲ್ಲು ಕಡಿಯುತ್ತಾನೆ ಮತ್ತು ಮರಗಟ್ಟಿದವನಂತೆ ಆಗುತ್ತಾನೆ. ಅದನ್ನು ಬಿಡಿಸಬೇಕೆಂದು ನಿನ್ನ ಶಿಷ್ಯರಿಗೆ ಕೇಳಿಕೊಂಡೆನು, ಆದರೆ ಅವರ ಕೈಯಿಂದ ಆಗದೆಹೋಯಿತು” ಎಂದು ಉತ್ತರ ಕೊಟ್ಟನು.
Коли дух його хапає, то кидає на землю, з рота йде піна, хлопчик скрегоче зубами й ціпеніє. Я просив Твоїх учнів вигнати духа, але вони не змогли.
19 ೧೯ ಅದಕ್ಕಾತನು, “ಎಲಾ, ಅಪನಂಬಿಕೆಯುಳ್ಳಂಥ ಸಂತಾನವೇ, ನಾನು ಇನ್ನೆಷ್ಟು ದಿನ ನಿಮ್ಮ ಸಂಗಡ ಇರಲಿ! ಇನ್ನೆಷ್ಟು ದಿನ ನಿಮ್ಮನ್ನು ಸಹಿಸಿಕೊಳ್ಳಲಿ? ಅವನನ್ನು ನನ್ನ ಬಳಿಗೆ ತೆಗೆದುಕೊಂಡು ಬನ್ನಿರಿ” ಅಂದನು.
[Ісус] у відповідь сказав: ―О роде невірний, доки буду з вами? Доки терпітиму вас? Приведіть хлопчика до Мене!
20 ೨೦ ಆಗ ಅವರು ಆ ಹುಡುಗನನ್ನು ಯೇಸುವಿನ ಬಳಿಗೆ ತೆಗೆದುಕೊಂಡು ಬಂದರು. ಆತನನ್ನು ಕಂಡಕೂಡಲೆ ಆ ದೆವ್ವವು ಹುಡುಗನನ್ನು ಬಹಳವಾಗಿ ಒದ್ದಾಡಿಸಲು ಅವನು ನೆಲಕ್ಕೆ ಬಿದ್ದು ನೊರೆಸುರಿಸುತ್ತಾ ಹೊರಳಾಡಿದನು.
І привели хлопчика до Ісуса. Коли дух побачив Ісуса, відразу кинув хлопчика в судоми. Той, упавши на землю, покотився й пустив піну з рота.
21 ೨೧ ಯೇಸು ಅವನ ತಂದೆಯನ್ನು, “ಇವನಿಗೆ ಹೀಗಾಗಿ ಎಷ್ಟು ಕಾಲವಾಯಿತು?” ಎಂದು ಕೇಳಿದಾಗ ಅವನು, “ಚಿಕ್ಕಂದಿನಲ್ಲಿಯೇ ಬಂದಿದೆ;
Ісус запитав його батька: ―Скільки часу з ним таке? Він відповів: ―З дитинства.
22 ೨೨ ಮತ್ತು ಇವನನ್ನು ಕೊಲ್ಲಬೇಕೆಂದು ಪದೇಪದೇ ಬೆಂಕಿಯಲ್ಲಿಯೂ ನೀರಿನಲ್ಲಿಯೂ ಕೆಡವಿತು; ನಿನ್ನ ಕೈಯಲ್ಲಿ ಏನಾದರೂ ಆಗುವ ಹಾಗಿದ್ದರೆ ನಮ್ಮ ಮೇಲೆ ಕನಿಕರವಿಟ್ಟು ನಮಗೆ ಸಹಾಯಮಾಡು” ಅಂದನು.
Часто [дух] кидає його у вогонь або у воду, щоб вбити його. Якщо можеш щось зробити, допоможи нам. Змилуйся над нами.
23 ೨೩ ಯೇಸು ಅವನಿಗೆ, “‘ನಿನ್ನ ಕೈಯಲ್ಲಿ ಆಗುವ ಹಾಗಿದ್ದರೆ ಅನ್ನುತ್ತೀಯೋ’? ನಂಬುವವನಿಗೆ ಎಲ್ಲವೂ ಸಾಧ್ಯ!” ಎಂದು ಹೇಳಿದನು.
Ісус же сказав йому: ―Якщо можеш?! Усе можливе для того, хто вірує!
24 ೨೪ ಕೂಡಲೆ ಆ ಹುಡುಗನ ತಂದೆಯು, “ನಂಬುತ್ತೇನೆ, ನನಗೆ ಅಪನಂಬಿಕೆ ಇಲ್ಲದಂತೆ ಸಹಾಯಮಾಡು” ಎಂದು ಕೂಗಿ ಹೇಳಿದನು.
Тоді батько хлопчика скрикнув: ― Вірую! Допоможи моєму невірству.
25 ೨೫ ಆಗ ಯೇಸು ಜನರ ಗುಂಪು ಓಡಿಬರುವುದನ್ನು ಕಂಡು ಆ ದೆವ್ವವನ್ನು ಗದರಿಸಿ, “ಎಲೈ, ಕಿವುಡಾದ ಮೂಗದೆವ್ವವೇ, ಇವನನ್ನು ಬಿಟ್ಟು ಹೋಗು; ಇನ್ನೆಂದಿಗೂ ಇವನೊಳಗೆ ಪ್ರವೇಶಿಸಕೂಡದೆಂದು ನಾನು ನಿನಗೆ ಅಪ್ಪಣೆಕೊಡುತ್ತೇನೆ” ಅಂದನು.
Коли Ісус побачив, що люди збігаються, то наказав нечистому духові, кажучи: «Духу німий та глухий, наказую тобі: вийди з нього й більше не заходь у нього!»
26 ೨೬ ಆಗ ಅದು ಅಬ್ಬರಿಸಿ ಹುಡುಗನನ್ನು ಒದ್ದಾಡಿಸಿ ಬಿಟ್ಟುಹೋಯಿತು. ಆ ಹುಡುಗನು ಸತ್ತಹಾಗೆ ಬಿದ್ದಿದ್ದರಿಂದ ಬಹುಜನರು, “ಸತ್ತುಹೋದನು” ಎಂದು ಅಂದುಕೊಂಡರು.
Скрикнувши, [дух] сильно потряс хлопця в конвульсіях і вийшов із нього. Хлопець став як мертвий, так що багато хто говорив, що він помер.
27 ೨೭ ಆದರೆ ಯೇಸು ಅವನನ್ನು ಕೈಹಿಡಿದು ಎಬ್ಬಿಸಲು ಹುಡುಗನು ಎದ್ದು ನಿಂತನು.
Але Ісус узяв його за руку, підняв його, і він устав.
28 ೨೮ ಯೇಸು ಮನೆಗೆ ಬಂದಾಗ ಆತನ ಶಿಷ್ಯರು, “ಅದನ್ನು ಬಿಡಿಸಲಿಕ್ಕೆ ನಮ್ಮಿಂದ ಏಕೆ ಆಗಲಿಲ್ಲವೆಂದು” ಆತನನ್ನು ಏಕಾಂತದಲ್ಲಿ ಕೇಳಿದರು.
Пізніше, коли Ісус увійшов у дім, учні наодинці запитали Його: ―Чому ми не змогли вигнати демона?
29 ೨೯ ಅದಕ್ಕೆ ಆತನು, “ಈ ಬಗೆಯ ದೆವ್ವಗಳು ದೇವರಪ್ರಾರ್ಥನೆಯಿಂದಲೇ ಹೊರತು ಬೇರೆ ಯಾವ ರೀತಿಯಿಂದಲೂ ಬಿಟ್ಟು ಹೋಗುವುದಿಲ್ಲವೆಂದು” ಅವರಿಗೆ ಹೇಳಿದನು.
Ісус відповів: ―Цей рід можна вигнати лише молитвою та постом.
30 ೩೦ ಅಲ್ಲಿಂದ ಅವರು ಹೊರಟು ಗಲಿಲಾಯವನ್ನು ಹಾದು ಹೋಗುತ್ತಿದ್ದರು. ಆದರೆ ತಾವು ಎಲ್ಲಿಗೆ ಹೋಗುತ್ತಿರುವುದೆಂದು ಯಾರಿಗೂ ಗೊತ್ತಾಗಬಾರದೆಂದು ಆತನು ಬಯಸಿದನು.
Вийшовши звідти, вони пройшли через Галілею. [Ісус] не хотів, щоб хтось дізнався про це,
31 ೩೧ ಏಕೆಂದರೆ ಆತನು ತನ್ನ ಶಿಷ್ಯರಿಗೆ ಉಪದೇಶಮಾಡುತ್ತಾ, “ಮನುಷ್ಯಕುಮಾರನು ಜನರ ಕೈಗಳಿಗೆ ಒಪ್ಪಿಸಲ್ಪಡುತ್ತಾನೆ; ಅವರು ಆತನನ್ನು ಕೊಲ್ಲುವರು; ಕೊಲ್ಲಲ್ಪಟ್ಟ ತರುವಾಯ ಮೂರು ದಿನದ ಮೇಲೆ ಆತನು ಜೀವಿತನಾಗಿ ಎದ್ದು ಬರುವನೆಂದು” ಹೇಳಿದನು.
бо Він навчав Своїх учнів та казав їм: «Син Людський буде виданий у руки людські. Його вб’ють, але через три дні Він воскресне».
32 ೩೨ ಆದರೆ ಅವರು ಆ ಮಾತನ್ನು ಗ್ರಹಿಸಲಿಲ್ಲ ಮತ್ತು ಆತನನ್ನು ಕೇಳುವುದಕ್ಕೆ ಭಯಪಟ್ಟರು.
Однак [учні] не зрозуміли цих слів, а спитати Його боялися.
33 ೩೩ ಅವರು ಕಪೆರ್ನೌಮಿಗೆ ಬಂದರು. ಅಲ್ಲಿ ಆತನು ಮನೆಯಲ್ಲಿದ್ದಾಗ, “ನೀವು ದಾರಿಯಲ್ಲಿ ಏನು ಚರ್ಚೆಮಾಡಿಕೊಳ್ಳುತ್ತಿದ್ದಿರಿ?” ಎಂದು ಶಿಷ್ಯರನ್ನು ಕೇಳಿದನು.
Коли вони прийшли в Капернаум і були в домі, [Ісус] запитав їх: ―Про що ви говорили в дорозі?
34 ೩೪ ಆದರೆ ಅವರು ಸುಮ್ಮನಿದ್ದರು; ಏಕೆಂದರೆ ಅವರು ದಾರಿಯಲ್ಲಿ ಒಬ್ಬರನ್ನೊಬ್ಬರು, ತಮ್ಮಲ್ಲಿ ಯಾರು ಹೆಚ್ಚಿನವನೆಂದು ವಾಗ್ವಾದಮಾಡಿಕೊಂಡಿದ್ದರು.
Але вони мовчали, тому що в дорозі сперечалися між собою, хто з них найбільший.
35 ೩೫ ಆಗ ಯೇಸು ಕುಳಿತುಕೊಂಡು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಕರೆದು ಅವರಿಗೆ, “ಯಾರಾದರೂ ಮೊದಲಿನವನಾಗಬೇಕೆಂದಿದ್ದರೆ ಅವನು ಎಲ್ಲರಲ್ಲಿ ಕಡೆಯವನೂ ಎಲ್ಲರ ಸೇವಕನೂ ಆಗಿರಬೇಕು” ಎಂದು ಹೇಳಿ,
Тоді [Ісус] присів, покликав до Себе дванадцятьох і сказав їм: ―Якщо хтось хоче бути першим, той хай буде останнім серед усіх та слугою для всіх.
36 ೩೬ ಒಂದು ಚಿಕ್ಕ ಮಗುವನ್ನು ತೆಗೆದುಕೊಂಡು ಅವರ ಮಧ್ಯದಲ್ಲಿ ನಿಲ್ಲಿಸಿ, ಅದನ್ನು ಅಪ್ಪಿಕೊಂಡು ಅವರಿಗೆ,
[Ісус] узяв дитину, поставив посеред них і, обійнявши її, сказав їм:
37 ೩೭ “ಯಾರಾದರೂ ನನ್ನ ಹೆಸರಿನಲ್ಲಿ ಇಂಥ ಚಿಕ್ಕ ಮಕ್ಕಳಲ್ಲಿ ಒಂದನ್ನು ಸೇರಿಸಿಕೊಂಡರೆ ನನ್ನನ್ನು ಸೇರಿಸಿಕೊಂಡ ಹಾಗಾಯಿತು; ಮತ್ತು ಯಾರಾದರೂ ನನ್ನನ್ನು ಸೇರಿಸಿಕೊಂಡರೆ ನನ್ನನ್ನು ಮಾತ್ರವಲ್ಲ, ನನ್ನನ್ನು ಕಳುಹಿಸಿಕೊಟ್ಟಾತನನ್ನೇ ಸೇರಿಸಿಕೊಂಡ ಹಾಗಾಯಿತು” ಎಂದು ಹೇಳಿದನು.
―Хто приймає таку дитину в ім’я Моє, той не Мене приймає, а Того, Хто надіслав Мене.
38 ೩೮ ಯೋಹಾನನು ಆತನಿಗೆ, “ಬೋಧಕನೇ, ಯಾರೋ ಒಬ್ಬನು ನಿನ್ನ ಹೆಸರನ್ನು ಹೇಳಿ ದೆವ್ವ ಬಿಡಿಸುವುದನ್ನು ನಾವು ಕಂಡು ಅವನು ನಮ್ಮೊಂದಿಗೆ ಸೇರಿದವನಲ್ಲವಾದ್ದರಿಂದ ಅವನಿಗೆ ಅಡ್ಡಿಮಾಡಿದೆವು” ಎಂದು ಹೇಳಿದನು.
Іван сказав Йому: ―Учителю, ми бачили когось, хто Твоїм ім’ям виганяв демонів, та ми заборонили йому, бо він не ходить із нами.
39 ೩೯ ಅದಕ್ಕೆ ಯೇಸು, “ಅವನಿಗೆ ಅಡ್ಡಿಮಾಡಬೇಡಿರಿ; ನನ್ನ ಹೆಸರಿನಲ್ಲಿ ಮಹತ್ಕಾರ್ಯವನ್ನು ಮಾಡಿ ಏಕಾಏಕಿ ನನ್ನನ್ನು ದೂಷಿಸುವವನು ಒಬ್ಬನೂ ಇಲ್ಲ.
Але Ісус сказав: ―Не зупиняйте його, бо немає такого, хто б робив чудо в ім’я Моє й відразу злословив би Мене.
40 ೪೦ ನಮಗೆವಿರುದ್ಧವಾಗಿಲ್ಲದವನು ನಮ್ಮ ಪಕ್ಷದವನೇ.
Той, хто не проти нас, той за нас.
41 ೪೧ ನೀವು ಕ್ರಿಸ್ತನವರೆಂದು ನಿಮಗೆ ಯಾರಾದರೂಒಂದು ತಂಬಿಗೆ ನೀರನ್ನು ಕುಡಿಯುವುದಕ್ಕೆ ಕೊಟ್ಟರೆ ಬರತಕ್ಕ ಪ್ರತಿಫಲವು ಅವನಿಗೆ ತಪ್ಪುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ” ಹೇಳುತ್ತೇನೆ.
Адже хто подасть вам чашу води в ім’я [Моє], бо ви Христові, – істинно кажу вам, – не втратить своєї винагороди.
42 ೪೨ ನನ್ನಲ್ಲಿ ನಂಬಿಕೆ ಇಟ್ಟಿರುವ ಈ ಚಿಕ್ಕವರಲ್ಲಿ ಒಬ್ಬನಿಗೆ ಯಾರಾದರೂ ಪಾಪ ಮಾಡುವುದಕ್ಕೆ ಕಾರಣನಾದರೆ, ಅಂಥವನ ಕೊರಳಿಗೆ ಬೀಸುವ ಕಲ್ಲನ್ನು ಕಟ್ಟಿ ಅವನನ್ನು ಸಮುದ್ರದಲ್ಲಿ ಬಿಸಾಡಿಬಿಡುವುದು ಅವನಿಗೆ ಉತ್ತಮ.
Якщо хтось спокусить одного з цих малих, що вірують у Мене, то було б краще, якби йому повісили млинове жорно на шию й кинули в море.
43 ೪೩ ಇದಲ್ಲದೆ ನಿನ್ನ ಕೈ ಪಾಪ ಮಾಡಲು ನಿನಗೆ ಕಾರಣವಾದರೆ, ಅದನ್ನು ಕತ್ತರಿಸಿಬಿಡು; ಎರಡು ಕೈಯುಳ್ಳವನಾಗಿಆರದ ಬೆಂಕಿಯಾಗಿರುವ ನರಕದಲ್ಲಿ ಬೀಳುವುದಕ್ಕಿಂತ ಕೈಕಳೆದುಕೊಂಡವನಾಗಿ ನಿತ್ಯಜೀವದಲ್ಲಿ ಸೇರುವುದು ನಿನಗೆ ಉತ್ತಮ. (Geenna )
Якщо твоя рука спокушає тебе, відрубай її. Краще тобі увійти в життя покаліченим, ніж, маючи дві руки, іти до Геєни, у вогонь незгасимий, (Geenna )
де черв’як їхній не вмирає і вогонь не гасне.
45 ೪೫ ನಿನ್ನ ಕಾಲು ಪಾಪ ಮಾಡಲು ನಿನಗೆ ಕಾರಣವಾದರೆ, ಅದನ್ನು ಕಡಿದುಬಿಡು; ಎರಡು ಕಾಲುಳ್ಳವನಾಗಿ ನರಕದಲ್ಲಿ ಬೀಳುವುದಕ್ಕಿಂತ ಕಾಲಿಲ್ಲದವನಾಗಿ ನಿತ್ಯಜೀವದಲ್ಲಿ ಸೇರುವುದು ನಿನಗೆ ಉತ್ತಮ. (Geenna )
Якщо твоя нога спокушає тебе, відрубай її. Краще тобі увійти в життя покаліченим чи кульгавим, ніж, маючи дві ноги, бути вкинутим до Геєни, (Geenna )
де черв’як їхній не вмирає і вогонь не гасне.
47 ೪೭ ನಿನ್ನ ಕಣ್ಣು ಪಾಪ ಮಾಡಲು ನಿನಗೆ ಕಾರಣವಾದರೆ, ಅದನ್ನು ಕಿತ್ತುಬಿಸಾಡು; ಎರಡು ಕಣ್ಣುಳ್ಳವನಾಗಿ ನರಕಕ್ಕೆ ಬೀಳುವುದಕ್ಕಿಂತ ಒಂದು ಕಣ್ಣುಳ್ಳವನಾಗಿ ದೇವರ ರಾಜ್ಯದಲ್ಲಿ ಸೇರುವುದು ನಿನಗೆ ಉತ್ತಮ. (Geenna )
Якщо твоє око спокушає тебе, вирви його. Краще тобі увійти до Царства Божого однооким, ніж, маючи два ока, бути вкинутим у Геєну, (Geenna )
48 ೪೮ ನರಕದಲ್ಲಿರುವ ಹುಳ ಸಾಯುವುದಿಲ್ಲ, ಬೆಂಕಿ ಆರುವುದಿಲ್ಲ.
«де черв’як їхній не вмирає і вогонь не гасне».
49 ೪೯ “ಉಪ್ಪು ಯಜ್ಞವನ್ನು ಶುದ್ಧೀಕರಿಸುವಂತೆ ಬೆಂಕಿಯು ಪ್ರತಿಯೊಬ್ಬನನ್ನು ಶುದ್ಧೀಕರಿಸುವುದು.
Бо кожен буде вогнем посолений і кожна жертва буде посолена сіллю.
50 ೫೦ ಉಪ್ಪು ಒಳ್ಳೆಯ ಪದಾರ್ಥವೇ; ಉಪ್ಪು ಸಪ್ಪಗಾದರೆ ಅದನ್ನು ಇನ್ಯಾತರಿಂದ ರುಚಿಗೊಳಿಸಲು ಸಾಧ್ಯ? ನಿಮ್ಮೊಳಗೆಉಪ್ಪು ಇರಲಿ, ಒಬ್ಬರಿಗೊಬ್ಬರು ಸಮಾಧಾನದಿಂದಿರಿ.”
Сіль – добра річ, але якщо сіль втратить солоність, як її знов зробити солоною? Майте сіль самі в собі та зберігайте мир між собою.