< ಮಾರ್ಕನು 1 >

1 ದೇವಕುಮಾರನಾದ ಯೇಸು ಕ್ರಿಸ್ತನ ಕುರಿತಾದ ಸುವಾರ್ತೆಯ ಪ್ರಾರಂಭವು.
The first words of the good news of Jesus Christ, the Son of God.
2 ಪ್ರವಾದಿಯಾದ ಯೆಶಾಯನ ಗ್ರಂಥದಲ್ಲಿ ಬರೆದಿರುವ ಪ್ರಕಾರ, “ಇಗೋ, ನಾನು ನನ್ನ ದೂತನನ್ನು ನಿನ್ನ ಮುಂದೆ ಕಳುಹಿಸುತ್ತೇನೆ; ಅವನು ನಿನ್ನ ದಾರಿಯನ್ನು ಸಿದ್ಧಮಾಡುವನು.”
Even as it is said in the book of Isaiah the prophet, See, I send my servant before your face, who will make ready your way;
3 “‘ಕರ್ತನ ದಾರಿಯನ್ನು ಸಿದ್ಧಮಾಡಿರಿ; ಆತನ ಹಾದಿಗಳನ್ನು ನೆಟ್ಟಗೆ ಮಾಡಿರಿ’ ಎಂದು ಅಡವಿಯಲ್ಲಿ ಕೂಗುವವನ ಶಬ್ದವದೆ” ಎಂಬುದೇ.
The voice of one crying in the waste land, Make ready the way of the Lord, make his roads straight;
4 ಯೋಹಾನನು ಬಂದು ಜನರಿಗೆ, ನೀವು ಪಾಪಗಳ ಕ್ಷಮಾಪಣೆಗಾಗಿ ಪಶ್ಚಾತ್ತಾಪದ ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕೆಂದು ಉಪದೇಶಿಸುತ್ತಾ ಅಡವಿಯಲ್ಲಿ ದೀಕ್ಷಾಸ್ನಾನಮಾಡಿಸುತ್ತಾ ಇದ್ದನು.
John came, and gave baptism in the waste land, preaching baptism as a sign of forgiveness of sin for those whose hearts were changed.
5 ಆಗ ಯೂದಾಯ ಸೀಮೆಯೆಲ್ಲವೂ ಯೆರೂಸಲೇಮಿನವರೆಲ್ಲರೂ ಅವನ ಬಳಿಗೆ ಹೊರಟುಹೋಗಿ ತಮ್ಮ ತಮ್ಮ ಪಾಪಗಳನ್ನು ಒಪ್ಪಿಕೊಂಡು ಯೊರ್ದನ್ ಹೊಳೆಯಲ್ಲಿ ಅವನಿಂದ ದೀಕ್ಷಾಸ್ನಾನಮಾಡಿಸಿಕೊಳ್ಳುತ್ತಿದ್ದರು.
And there went out to him all the people of Judaea, and all those of Jerusalem, and they were given baptism by him in the river Jordan, saying that they were sinners.
6 ಈ ಯೋಹಾನನು ಒಂಟೆಯ ರೋಮದ ಹೊದಿಕೆಯನ್ನು ಧರಿಸಿಕೊಂಡು ಸೊಂಟಕ್ಕೆ ಚರ್ಮದ ನಡುಕಟ್ಟನ್ನು ಕಟ್ಟಿಕೊಂಡಿದ್ದನು; ಅವನು ಮಿಡತೆಯನ್ನೂ ಕಾಡುಜೇನನ್ನೂ ಆಹಾರವನ್ನಾಗಿ ಸೇವಿಸುತ್ತಿದ್ದನು.
And John was clothed in camel's hair, with a leather band about him; and his food was locusts and honey.
7 ಅವನು “ನನಗಿಂತ ಶಕ್ತನು ನನ್ನ ಹಿಂದೆ ಬರುತ್ತಾನೆ; ಆತನ ಕೆರಗಳ ಪಟ್ಟಿಗಳನ್ನು ಬಗ್ಗಿ ಬಿಚ್ಚುವುದಕ್ಕೂ ನಾನು ಯೋಗ್ಯನಲ್ಲ.
And he said to them all, There is one coming after me who is greater than I, whose shoes I am not good enough to undo.
8 ನಾನು ನಿಮಗೆ ನೀರಿನಿಂದ ದೀಕ್ಷಾಸ್ನಾನ ಕೊಡುತ್ತಿದ್ದೇನೆ; ಆತನಾದರೋ ನಿಮಗೆ ಪವಿತ್ರಾತ್ಮನಿಂದ ದೀಕ್ಷಾಸ್ನಾನ ಕೊಡುತ್ತಾನೆ” ಎಂದು ಸಾರಿ ಹೇಳಿದನು.
I have given you baptism with water, but he will give you baptism with the Holy Spirit.
9 ಆ ದಿನಗಳಲ್ಲಿ ಯೇಸು ಗಲಿಲಾಯ ಸೀಮೆಗೆ ಸೇರಿದ ನಜರೇತೆಂಬ ಊರಿನಿಂದ ಬಂದು ಯೊರ್ದನ್ ಹೊಳೆಯಲ್ಲಿ ಯೋಹಾನನಿಂದ ದೀಕ್ಷಾಸ್ನಾನ ಮಾಡಿಸಿಕೊಂಡನು.
And it came about in those days, that Jesus came from Nazareth of Galilee, and was given baptism by John in the Jordan.
10 ೧೦ ಯೇಸುವು ನೀರಿನೊಳಗಿನಿಂದ ಮೇಲಕ್ಕೆ ಬಂದ ಕೂಡಲೇ ಪರಲೋಕವು ತೆರೆಯಲ್ಪಟ್ಟು ದೇವರಾತ್ಮನು ಪಾರಿವಾಳದ ಹಾಗೆ ಆತನ ಮೇಲೆ ಇಳಿಯುವುದನ್ನು ಕಂಡನು.
And straight away, coming up out of the water, he saw the heavens broken open and the Spirit coming down on him as a dove:
11 ೧೧ ಆಗ “ನೀನು ಪ್ರಿಯನಾಗಿರುವ ನನ್ನ ಮಗನು, ನಾನು ನಿನ್ನನ್ನು ಬಹಳವಾಗಿ ಮೆಚ್ಚಿದ್ದೇನೆ” ಎಂಬ ದೈವ ವಾಣಿ ಪರಲೋಕದಿಂದ ಕೇಳಿಸಿತು.
And a voice came out of heaven, You are my dearly loved Son, with whom I am well pleased.
12 ೧೨ ಕೂಡಲೇ ಪವಿತ್ರಾತ್ಮ ಪ್ರೇರಿತನಾಗಿ ಯೇಸು ಅಡವಿಗೆ ಹೋದನು.
And straight away the Spirit sent him out into the waste land.
13 ೧೩ ಆತನು ನಲವತ್ತು ದಿನ ಅಡವಿಯಲ್ಲಿ ಕಾಡುಮೃಗಗಳೊಂದಿಗೆ ಇದ್ದು ಸೈತಾನನಿಂದ ಶೋಧಿಸಲ್ಪಟ್ಟನು ಮತ್ತು ದೇವದೂತರು ಯೇಸುವಿಗೆ ಉಪಚಾರ ಮಾಡಿದರು.
And he was in the waste land for forty days, being tested by Satan; and he was with the beasts; and the angels took care of him.
14 ೧೪ ಯೋಹಾನನು ಬಂಧಿತನಾದ ತರುವಾಯ ಯೇಸು ಗಲಿಲಾಯಕ್ಕೆ ಬಂದು ದೇವರ ಸುವಾರ್ತೆಯನ್ನು ಹೀಗೆ ಸಾರಿ ಹೇಳಿದನು,
Now after John had been put in prison, Jesus came into Galilee, preaching the good news of God,
15 ೧೫ “ಕಾಲವು ಪರಿಪೂರ್ಣವಾಯಿತು, ದೇವರ ರಾಜ್ಯವು ಸಮೀಪಿಸಿತು; ಪಶ್ಚಾತ್ತಾಪಪಟ್ಟು ಸುವಾರ್ತೆಯನ್ನು ನಂಬಿರಿ.”
And saying, The time has come, and the kingdom of God is near: let your hearts be turned from sin and have faith in the good news.
16 ೧೬ ಯೇಸು ಗಲಿಲಾಯ ಸಮುದ್ರದ ಬಳಿಯಲ್ಲಿ ಹೋಗುತ್ತಿರುವಾಗ ಸೀಮೋನನು ಮತ್ತು ಅವನ ತಮ್ಮನಾದ ಅಂದ್ರೆಯನು ಸಮುದ್ರದಲ್ಲಿ ಬಲೆ ಬೀಸುವುದನ್ನು ಕಂಡನು. ಅವರು ಬೆಸ್ತರಾಗಿದ್ದರು.
And going by the sea of Galilee, he saw Simon, and Andrew, the brother of Simon, putting a net into the sea: for they were fishermen.
17 ೧೭ ಯೇಸು ಅವರಿಗೆ, “ನನ್ನನ್ನು ಹಿಂಬಾಲಿಸಿರಿ; ಮನುಷ್ಯರನ್ನು ಹಿಡಿಯುವ ಬೆಸ್ತರನ್ನಾಗಿ ನಿಮ್ಮನ್ನು ಮಾಡುವೆನು” ಎಂದು ಹೇಳಿದನು.
And Jesus said to them, Come after me, and I will make you fishers of men.
18 ೧೮ ಕೂಡಲೆ ಅವರು ತಮ್ಮ ಬಲೆಗಳನ್ನು ಬಿಟ್ಟು ಆತನನ್ನು ಹಿಂಬಾಲಿಸಿದರು.
And they went straight from their nets, and came after him.
19 ೧೯ ಯೇಸು ಇನ್ನು ಸ್ವಲ್ಪ ಮುಂದೆ ಹೋಗಿ ಜೆಬೆದಾಯನ ಮಗನಾದ ಯಾಕೋಬನನ್ನೂ ಅವನ ತಮ್ಮನಾದ ಯೋಹಾನನನ್ನೂ ಕಂಡನು; ಅವರು ದೋಣಿಯೊಳಗೆ ತಮ್ಮ ಬಲೆಗಳನ್ನು ಸರಿಮಾಡುತ್ತಿದ್ದರು.
And going on a little farther, he saw James, the son of Zebedee, and John his brother, who were in their boat stitching up their nets.
20 ೨೦ ಅವನು ಕೂಡಲೇ ಅವರನ್ನೂ ಕರೆದನು. ಅವರು ತಮ್ಮ ತಂದೆಯಾದ ಜೆಬೆದಾಯನನ್ನು ಕೂಲಿಯಾಳುಗಳ ಸಂಗಡ ದೋಣಿಯಲ್ಲಿ ಬಿಟ್ಟು ಆತನನ್ನು ಹಿಂಬಾಲಿಸಿದರು.
And he said, Come after me: and they went away from their father Zebedee, who was in the boat with the servants, and came after him.
21 ೨೧ ಬಳಿಕ ಅವರು ಕಪೆರ್ನೌಮೆಂಬ ಊರಿಗೆ ಹೋದರು. ಸಬ್ಬತ್ ದಿನವಾದಾಗ ಯೇಸು ಸಭಾಮಂದಿರಕ್ಕೆ ಹೋಗಿ ಉಪದೇಶ ಮಾಡತೊಡಗಿದನು.
And they came to Capernaum; and on the Sabbath he went into the Synagogue and gave teaching.
22 ೨೨ ಜನರು ಆತನ ಬೋಧನೆಯನ್ನು ಕೇಳಿ ಆತ್ಯಾಶ್ಚರ್ಯಪಟ್ಟರು; ಏಕೆಂದರೆ ಆತನು ಶಾಸ್ತ್ರಿಗಳಂತೆ ಬೋಧಿಸದೆ ಅಧಿಕಾರವಿದ್ದವನಂತೆ ಅವರಿಗೆ ಬೋಧಿಸುತ್ತಿದ್ದನು.
And they were full of wonder at his teaching, because he gave it as one having authority, and not like the scribes.
23 ೨೩ ಆಗ ಅವರ ಸಭಾಮಂದಿರದಲ್ಲಿ ದೆವ್ವಹಿಡಿದ ಒಬ್ಬ ಮನುಷ್ಯನಿದ್ದನು.
And there was in their Synagogue a man with an unclean spirit; and he gave a cry,
24 ೨೪ ಆ ದೆವ್ವವು, “ನಜರೇತಿನ ಯೇಸುವೇ, ನಮ್ಮ ಗೊಡವೆ ನಿನಗೇಕೆ? ನೀನು ನಮ್ಮನ್ನು ನಾಶಮಾಡುವುದಕ್ಕೆ ಬಂದೆಯಾ? ನೀನು ಯಾರೆಂದು ನಾನು ಬಲ್ಲೆನು. ನೀನು ದೇವರಿಂದ ಬಂದ ಪರಿಶುದ್ಧನು” ಎಂದು ಕೂಗಿ ಹೇಳಿತು.
Saying, What have we to do with you, Jesus of Nazareth? have you come to put an end to us? I see well who you are, the Holy One of God.
25 ೨೫ ಯೇಸು ಅದನ್ನು ಗದರಿಸಿ, “ಸುಮ್ಮನಿರು, ಅವನನ್ನು ಬಿಟ್ಟು ಹೊರಗೆ ಬಾ” ಎಂದನು.
And Jesus said to him sharply, Be quiet, and come out of him.
26 ೨೬ ಆ ದೆವ್ವವು ಅವನನ್ನು ಒದ್ದಾಡಿಸಿ ಗಟ್ಟಿಯಾಗಿ ಕೂಗುತ್ತಾ, ಅವನೊಳಗಿಂದ ಹೊರಗೆ ಬಂದಿತು.
And the unclean spirit, shaking him violently, and crying with a loud voice, came out of him.
27 ೨೭ ಜನರೆಲ್ಲರೂ ಬೆರಗಾಗಿ, “ಇದೇನು? ಅಧಿಕಾರಸಹಿತವಾದ ಹೊಸ ಬೋಧನೆ! ಈತನು ದೆವ್ವಗಳಿಗೂ ಸಹ ಆಜ್ಞಾಪಿಸುತ್ತಾನೆ, ಅವು ಈತನಿಗೆ ವಿಧೇಯವಾಗುತ್ತವೆ!” ಎಂದು ತಮ್ಮತಮ್ಮೊಳಗೆ ವಿಚಾರಮಾಡಿಕೊಂಡರು.
And they were all greatly surprised, so that they put questions to one another, saying, What is this? a new teaching! with authority he gives orders even to the unclean spirits, and they do what he says.
28 ೨೮ ಕೂಡಲೆ ಆತನ ಸುದ್ದಿಯು ಗಲಿಲಾಯ ಸೀಮೆಯಲ್ಲೆಲ್ಲಾ ಹಬ್ಬಿತು.
And news of him went out quickly everywhere into all parts of Galilee round about.
29 ೨೯ ಆ ಮೇಲೆ ಅವರು ಸಭಾಮಂದಿರದಿಂದ ಹೊರಟು ಯಾಕೋಬ ಯೋಹಾನರ ಸಂಗಡ ಸೀಮೋನ ಅಂದ್ರೆಯರ ಮನೆಗೆ ಹೋದರು.
And when they came out of the Synagogue, they went into the house of Simon and Andrew, with James and John.
30 ೩೦ ಅಲ್ಲಿ ಸೀಮೋನನ ಅತ್ತೆ ಜ್ವರದಿಂದ ಮಲಗಿರಲಾಗಿ ಅವರು ಆಕೆಯ ಸಂಗತಿಯನ್ನು ಆತನಿಗೆ ತಿಳಿಸಿದರು.
Now Simon's wife's mother was ill, with a burning heat; and they gave him word of her:
31 ೩೧ ಆತನು ಹತ್ತಿರಕ್ಕೆ ಬಂದು ಆಕೆಯ ಕೈಯನ್ನು ಹಿಡಿದು ಎಬ್ಬಿಸಲು ಜ್ವರವು ಆಕೆಯನ್ನು ಬಿಟ್ಟುಹೋಯಿತು; ಆಕೆಯು ಅವರಿಗೆ ಉಪಚಾರಮಾಡಿದಳು.
And he came and took her by the hand, lifting her up; and she became well, and took care of their needs.
32 ೩೨ ಸಂಜೆಯಾಗಿ ಹೊತ್ತು ಮುಳುಗಿದ ಮೇಲೆ ಜನರು ಅಸ್ವಸ್ಥರಾದವರನ್ನೂ, ದೆವ್ವಹಿಡಿದವರನ್ನೂ ಆತನ ಬಳಿಗೆ ಕರತಂದರು.
And in the evening, at sundown, they took to him all who were diseased, and those who had evil spirits.
33 ೩೩ ಊರಿನವರೆಲ್ಲಾ ಬಾಗಿಲಿನ ಮುಂದೆ ಒಟ್ಟುಗೂಡಿದ್ದರು.
And all the town had come together at the door.
34 ೩೪ ಆಗ ಆತನು ನಾನಾ ರೀತಿಯ ರೋಗಗಳಿಂದ ಅಸ್ವಸ್ಥರಾಗಿದ್ದ ಬಹು ಜನರನ್ನು ಸ್ವಸ್ಥಮಾಡಿ ಅನೇಕ ದೆವ್ವಗಳನ್ನು ಬಿಡಿಸಿದನು. ಆದರೆ ಅವುಗಳಿಗೆ ತಾನು ಇಂಥವನೆಂದು ತಿಳಿದಿದ್ದರಿಂದ ಆತನು ಅವುಗಳನ್ನು ಮಾತನಾಡಗೊಡಿಸಲಿಲ್ಲ.
And a number, who were ill with different diseases, he made well, and sent out evil spirits; but he did not let the evil spirits say anything, because they had knowledge of him.
35 ೩೫ ಮುಂಜಾನೆ ಇನ್ನೂ ಮೊಬ್ಬಿರುವಾಗ ಆತನು ಎದ್ದು ನಿರ್ಜನ ಸ್ಥಳಕ್ಕೆ ಹೋಗಿ ಪ್ರಾರ್ಥನೆಮಾಡುತ್ತಿದ್ದನು.
And in the morning, a long time before daylight, he got up and went out to a quiet place, and there he gave himself up to prayer.
36 ೩೬ ಸೀಮೋನನೂ ಅವನ ಸಂಗಡ ಇದ್ದವರೂ ಆತನನ್ನು ಹುಡುಕಿಕೊಂಡು ಆತನಿದ್ದಲ್ಲಿಗೆ ಬಂದು,
And Simon and those who were with him came after him.
37 ೩೭ ಆತನನ್ನು ಕಂಡಾಗ “ಎಲ್ಲರೂ ನಿನ್ನನ್ನು ಎದುರುನೋಡುತ್ತಿದ್ದಾರೆ” ಎಂದರು.
And when they came up with him, they said to him, Everyone is looking for you.
38 ೩೮ ಆತನು ಅವರಿಗೆ, “ನಾವು ಸಮೀಪದಲ್ಲಿರುವ ಬೇರೆ ಊರುಗಳಿಗೆ ಹೋಗೋಣ; ಅಲ್ಲಿಯೂ ನಾನು ಸುವಾರ್ತೆಯನ್ನು ಸಾರಬೇಕು; ಇದಕ್ಕಾಗಿಯೇ ನಾನು ಇಲ್ಲಿಗೆ ಹೊರಟು ಬಂದಿದ್ದೇನೆ” ಎಂದು ಹೇಳಿದನು.
And he said to them, Let us go to other parts into the nearest towns, so that I may give teaching there, because for this purpose I came.
39 ೩೯ ಬಳಿಕ ಆತನು ಗಲಿಲಾಯದಲ್ಲೆಲ್ಲಾ ಹೋಗಿ ಅವರ ಸಭಾಮಂದಿರಗಳಲ್ಲಿ ಸುವಾರ್ತೆಯನ್ನು ಸಾರುತ್ತಾ ದೆವ್ವಗಳನ್ನು ಬಿಡಿಸುತ್ತಾ ಇದ್ದನು.
And he went into their Synagogues in every part of Galilee, preaching and driving out evil spirits.
40 ೪೦ ಒಬ್ಬ ಕುಷ್ಠರೋಗಿಯು ಯೇಸುವಿನ ಬಳಿಗೆ ಬಂದು ಆತನ ಮುಂದೆ ಮೊಣಕಾಲೂರಿಕೊಂಡು, “ನಿನಗೆ ಮನಸ್ಸಿದ್ದರೆ ನನ್ನನ್ನು ಶುದ್ಧಮಾಡಬಲ್ಲೆ” ಎಂದು ಬೇಡಿಕೊಂಡನು.
And a leper came to him and, going down on his knees before him, made a request, saying, If it is your pleasure, you have the power to make me clean.
41 ೪೧ ಯೇಸು ಕನಿಕರಪಟ್ಟು ತನ್ನ ಕೈ ಚಾಚಿ ಅವನನ್ನು ಮುಟ್ಟಿ, “ನನಗೆ ಮನಸ್ಸುಂಟು; ಶುದ್ಧನಾಗು” ಅಂದನು.
And being moved with pity, he put out his hand, and touching him said to him, It is my pleasure; be made clean.
42 ೪೨ ಕೂಡಲೆ ಅವನ ಕುಷ್ಠವು ಹೋಗಿ, ಅವನು ಶುದ್ಧನಾದನು.
And straight away the disease went from him, and he was made clean.
43 ೪೩ ಆಗ ಯೇಸು ಅವನಿಗೆ, “ಯಾರಿಗೂ ಏನೂ ಹೇಳಬೇಡ ನೋಡು;
And he sent him away, saying to him very sharply,
44 ೪೪ ಹೋಗಿ ಯಾಜಕನಿಗೆ ನಿನ್ನ ಮೈ ತೋರಿಸಿ ನಿನ್ನ ಶುದ್ಧಿಗಾಗಿಮೋಶೆಯು ಆಜ್ಞಾಪಿಸಿರುವಂಥವುಗಳನ್ನು ಅರ್ಪಿಸು. ಅದು ಜನರಿಗೆ ಸಾಕ್ಷಿಯಾಗಿರಲಿ ಎಂದು ಖಂಡಿತವಾಗಿ” ಹೇಳಿ ಅವನನ್ನು ಕೂಡಲೆ ಕಳುಹಿಸಿ ಬಿಟ್ಟನು.
See that you say nothing to any man: but go and let the priest see you, and make yourself clean by an offering of the things ordered by Moses, for a witness to them.
45 ೪೫ ಆದರೆ ಅವನು ಹೊರಟುಹೋಗಿ ಎಲ್ಲಾ ಕಡೆಗೂ ಈ ಸಂಗತಿಯನ್ನು ಬಹಳವಾಗಿ ಸಾರಿ ಹಬ್ಬಿಸುವುದಕ್ಕೆ ಪ್ರಾರಂಭಿಸಿದ್ದರಿಂದ ಯೇಸು ಬಹಿರಂಗವಾಗಿ ಬೇರೆ ಊರುಗಳಿಗೆ ಹೋಗಲಾರದೆ ನಿರ್ಜನ ಸ್ಥಳಗಳಲ್ಲಿ ಇದ್ದನು. ಆದರೂ ಜನರು ಎಲ್ಲಾ ಕಡೆಯಿಂದಲೂ ಆತನ ಬಳಿಗೆ ಬರುತ್ತಿದ್ದರು.
But he went out, and made it public, giving an account of it everywhere, so that Jesus was no longer able to go openly into a town, but was outside in the waste land; and they came to him from every part.

< ಮಾರ್ಕನು 1 >