< ಮತ್ತಾಯನು 10 >

1 ಯೇಸು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಿಗೆ ದೆವ್ವಗಳನ್ನು ಬಿಡಿಸುವುದಕ್ಕೂ ಎಲ್ಲಾ ಬಗೆಯ ರೋಗಗಳನ್ನೂ ಎಲ್ಲಾ ರೀತಿಯ ಬೇನೆಗಳನ್ನೂ ವಾಸಿಮಾಡುವುದಕ್ಕೂ ಅಧಿಕಾರ ಕೊಟ್ಟನು.
Покликавши дванадцятьох Своїх учнів, [Ісус] дав їм владу виганяти нечистих духів та зцілювати всі хвороби й усі недуги.
2 ಈ ಹನ್ನೆರಡು ಮಂದಿ ಅಪೊಸ್ತಲರ ಹೆಸರುಗಳು ಯಾವುವೆಂದರೆ, ಮೊದಲನೆಯವನು ಪೇತ್ರನೆನಿಸಿಕೊಳ್ಳುವ ಸೀಮೋನನು, ಅವನ ತಮ್ಮ ಅಂದ್ರೆಯ, ಜೆಬೆದಾಯನ ಮಗ ಯಾಕೋಬ, ಅವನ ತಮ್ಮನಾದ ಯೋಹಾನ,
Ось імена дванадцятьох апостолів: перший – Симон, якого назвав Петром, та Андрій, його брат, Яків, син Зеведеїв, і Іван, його брат,
3 ಫಿಲಿಪ್ಪ, ಬಾರ್ತೊಲೊಮಾಯ, ತೋಮ, ಸುಂಕ ವಸೂಲಿಗಾರನಾದ ಮತ್ತಾಯ, ಅಲ್ಫಾಯನ ಮಗ ಯಾಕೋಬ, ತದ್ದಾಯ,
Филип і Варфоломій, Фома і митник Матвій, Яків, син Алфеїв, і Тадей,
4 ಮತಾಭಿಮಾನಿ ಎಂದು ಹೆಸರುಗೊಂಡ ಸೀಮೋನ ಹಾಗೂ ಯೇಸುವನ್ನು ಹಿಡಿದುಕೊಟ್ಟ ಇಸ್ಕರಿಯೋತ ಯೂದ, ಎಂಬಿವರುಗಳೇ.
Симон Кананит і Юда Іскаріот, який зрадив Ісуса.
5 ಈ ಹನ್ನೆರಡು ಮಂದಿಯನ್ನು ಯೇಸು ಕಳುಹಿಸಿದನು; ಕಳುಹಿಸುವಾಗ ಅವರಿಗೆ ಅಪ್ಪಣೆ ಕೊಟ್ಟದ್ದೇನಂದರೆ, “ಅನ್ಯಜನಗಳಿರುವಲ್ಲಿಗೆ ಹೋಗಬೇಡಿರಿ, ಸಮಾರ್ಯದವರ ಊರೊಳಗೆ ಕಾಲಿಡಬೇಡಿರಿ;
Цих дванадцятьох Ісус надіслав та наказав їм: «На дорогу язичників не йдіть і в міста самарянські не входіть.
6 ಇವರನ್ನು ಬಿಟ್ಟು ತಪ್ಪಿಸಿಕೊಂಡ ಕುರಿಗಳಂತಿರುವ ಇಸ್ರಾಯೇಲಿನ ಮನೆತನದವರ ಬಳಿಗೆ ಹೋಗಿರಿ.
А йдіть краще до загублених овець дому Ізраїля.
7 ‘ಪರಲೋಕ ರಾಜ್ಯವು ಸಮೀಪವಾಯಿತೆಂದು’ ಸಾರಿಹೇಳುತ್ತಾ ಹೋಗಿರಿ.
Ідіть та проповідуйте кажучи: „Наблизилось Царство Небесне“.
8 ರೋಗಿಗಳನ್ನು ಸ್ವಸ್ಥಮಾಡಿರಿ, ಸತ್ತವರನ್ನು ಬದುಕಿಸಿರಿ, ಕುಷ್ಠರೋಗಿಗಳನ್ನು ಶುದ್ಧಮಾಡಿರಿ, ದೆವ್ವಗಳನ್ನು ಬಿಡಿಸಿರಿ; ಉಚಿತವಾಗಿ ಹೊಂದಿದ್ದೀರಿ, ಉಚಿತವಾಗಿ ಕೊಡಿರಿ.
Хворих зцілюйте, мертвих воскрешайте, прокажених очищайте, демонів виганяйте. Даром отримали – даром давайте.
9 ನಿಮ್ಮ ಕೈ ಚೀಲಗಳಲ್ಲಿ ಚಿನ್ನ, ಹಣ ದುಡ್ಡುಗಳನ್ನೂ, ದಾರಿಗೆ ಪ್ರಯಾಣದ ಚೀಲಗಳನ್ನೂ,
Не беріть ні золота, ні срібла, ні грошей до поясів своїх,
10 ೧೦ ಎರಡು ಅಂಗಿ, ಚಪ್ಪಲಿ, ಕೋಲು ಮೊದಲಾದವುಗಳನ್ನೂ ತೆಗೆದುಕೊಳ್ಳಬೇಡಿರಿ. ಆಳು ತನ್ನ ಆಹಾರಕ್ಕೆ ಯೋಗ್ಯನಾಗಿದ್ದಾನೆ.
ні торбини в дорогу, ні двох сорочок, ні взуття, ні палиці, бо робітник достойний своєї їжі.
11 ೧೧ ನೀವು ಯಾವುದೇ ಊರಿಗೆ ಅಥವಾ ಹಳ್ಳಿಗೆ ಪ್ರವೇಶಿಸಿದಾಗ ಅಲ್ಲಿ ಯೋಗ್ಯರು ಯಾರೆಂದು ವಿಚಾರಣೆ ಮಾಡಿ ಮುಂದಕ್ಕೆ ಹೊರಡುವ ತನಕ ಅ ಊರಲ್ಲೇ ಇರಿ.
А коли увійдете в якесь місто чи село, дізнайтеся, хто в ньому достойний, і залишайтеся в нього, поки не вийдете.
12 ೧೨ ಆ ಮನೆಯೊಳಗೆ ಹೋಗುವಾಗ ಶುಭವಾಗಲಿ ಅನ್ನಿರಿ.
Зайшовши в дім, привітайте його, кажучи: „Мир цьому дому!“
13 ೧೩ ಆ ಮನೆಯವರು ಯೋಗ್ಯರಾಗಿದ್ದರೆ ನಿಮ್ಮ ಸಮಾಧಾನವು ಅವರಿಗೆ ಬರಲಿ; ಅಯೋಗ್ಯರಾಗಿದ್ದರೆ ನಿಮ್ಮ ಸಮಾಧಾನವು ನಿಮಗೆ ಹಿಂದಿರುಗಿ ಬರಲಿ.
І якщо той дім дійсно достойний, мир ваш зійде на нього. Якщо ж недостойний, ваш мир повернеться до вас.
14 ೧೪ ಯಾರಾದರೂ ನಿಮ್ಮನ್ನು ಸೇರಿಸಿಕೊಳ್ಳದೆಯೂ ನಿಮ್ಮ ವಾಕ್ಯಗಳನ್ನೂ ಕೇಳದೆಯೂ ಹೋದರೆ ನೀವು ಆ ಮನೆಯನ್ನಾಗಲಿ ಆ ಊರನ್ನಾಗಲಿ ಬಿಟ್ಟು ಹೊರಡುವಾಗ ನಿಮ್ಮ ಪಾದಕ್ಕೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ.
А якщо хтось не прийме вас і не послухає ваших слів, то, виходячи з того дому або з того міста, обтрусіть пил зі своїх ніг.
15 ೧೫ ನ್ಯಾಯವಿಚಾರಣೆಯ ದಿನದಲ್ಲಿ ಅಂಥ ಊರಿನ ಗತಿಯು ಸೊದೋಮ್ ಗೊಮೋರಗಳ ಸೀಮೆಯ ಗತಿಗಿಂತಲೂ ಕಠಿಣವಾಗಿರುವುದು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
Істинно кажу вам: легше буде землі Содомській і Гоморрській у день суду, ніж тому місту.
16 ೧೬ “ನೋಡಿರಿ, ತೋಳಗಳ ನಡುವೆ ಕುರಿಗಳನ್ನು ಕಳುಹಿಸುವಂತೆ ನಾನು ನಿಮ್ಮನ್ನು ಕಳುಹಿಸಿಕೊಡುತ್ತಿದ್ದೇನೆ. ಆದುದರಿಂದ ಸರ್ಪಗಳಂತೆ ಜಾಣರೂ ಪಾರಿವಾಳಗಳಂತೆ ನಿಷ್ಕಪಟಿಗಳೂ ಆಗಿರಿ.
Ось Я посилаю вас, як овець поміж вовків. Тому будьте мудрі, як змії, та невинні, як голуби.
17 ೧೭ ಇದಲ್ಲದೆ ಜನರ ವಿಷಯದಲ್ಲಿ ಎಚ್ಚರವಾಗಿರಿ; ಅವರು ನಿಮ್ಮನ್ನು ನ್ಯಾಯವಿಚಾರಣೆಯ ಸಭೆಗಳಿಗೆ ಎಳೆದುಕೊಂಡು ಹೋಗುವರು; ತಮ್ಮ ಸಭಾಮಂದಿರಗಳಲ್ಲಿ ನಿಮ್ಮನ್ನು ಚಾವಟಿಗಳಿಂದ ಹೊಡೆಯುವರು.
Стережіться людей, бо вони віддаватимуть вас до судів і у своїх синагогах битимуть вас.
18 ೧೮ ನನ್ನ ನಿಮಿತ್ತವಾಗಿ ನಿಮ್ಮನ್ನು ಅಧಿಪತಿಗಳ ಮುಂದೆಯೂ ಅರಸುಗಳ ಮುಂದೆಯೂ ಕರೆದುಕೊಂಡು ಹೋಗುವರು. ಹೀಗೆ ಅವರಿಗೂ ಅನ್ಯಜನಗಳಿಗೂ ಸಾಕ್ಷಿಯಾಗುವಿರಿ.
Поведуть вас до правителів та царів заради Мене, на свідчення їм та язичникам.
19 ೧೯ ಆದರೆ ಅವರು ನಿಮ್ಮನ್ನು ಒಪ್ಪಿಸಿಕೊಡುವಾಗ ಏನು ಮಾತನಾಡಬೇಕು ಎಂದು ಚಿಂತೆಮಾಡಬೇಡಿರಿ; ಆಡತಕ್ಕ ಮಾತು ಆ ಸಮಯದಲ್ಲಿ ನಿಮಗೆ ಗೋಚರವಾಗುವುದು.
Коли видаватимуть вас, не турбуйтеся, як і що казати, бо дано буде вам у той час, що казати:
20 ೨೦ ಮಾತನಾಡುವವರು ನೀವಲ್ಲ, ನಿಮ್ಮ ತಂದೆಯ ಆತ್ಮನೇ ನಿಮ್ಮ ಮುಖಾಂತರವಾಗಿ ಮಾತನಾಡುವನು.
не ви будете говорити, а Дух Отця вашого промовлятиме через вас.
21 ೨೧ ಇದಲ್ಲದೆ ಸಹೋದರನು ಸಹೋದರನನ್ನು, ತಂದೆಯು ಮಗನನ್ನು, ಮರಣಕ್ಕೆ ಒಪ್ಪಿಸುವರು; ಮಕ್ಕಳು ತಂದೆತಾಯಿಗಳ ಮೇಲೆ ತಿರುಗಿಬಿದ್ದು ಅವರನ್ನು ಕೊಲ್ಲಿಸುವರು.
Брат видасть на смерть брата, а батько – дитину. Повстануть діти проти батьків та вбиватимуть їх.
22 ೨೨ ಮತ್ತು ನನ್ನ ಹೆಸರಿನ ನಿಮಿತ್ತ ನಿಮ್ಮನ್ನು ಎಲ್ಲರೂ ದ್ವೇಷಿಸುವರು. ಆದರೆ ಕಡೆಯವರೆಗೂ ತಾಳಿಕೊಳ್ಳುವವನು ರಕ್ಷಣೆಹೊಂದುವನು.
І всі будуть ненавидіти вас через ім’я Моє. Але хто витримає до кінця, той буде спасенний.
23 ೨೩ ಒಂದು ಊರಲ್ಲಿ ನಿಮ್ಮನ್ನು ಹಿಂಸೆಪಡಿಸಿದರೆ ಮತ್ತೊಂದು ಊರಿಗೆ ಓಡಿಹೋಗಿರಿ; ಮನುಷ್ಯಕುಮಾರನು ಬರುವಷ್ಟರಲ್ಲಿ ನೀವು ಇಸ್ರಾಯೇಲ್ ಜನರ ಊರುಗಳನ್ನು ಸಂಚರಿಸಿ ಮುಗಿಸಿರುವುದಿಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
Коли ж будуть вас переслідувати у цьому місті, тікайте до іншого. Істинно кажу вам: ви не закінчите [обходити] всі міста Ізраїлю, як прийде Син Людський.
24 ೨೪ “ಗುರುವಿಗಿಂತ ಶಿಷ್ಯನು ದೊಡ್ಡವನಲ್ಲ, ಒಡೆಯನಿಗಿಂತ ಆಳು ದೊಡ್ಡವನಲ್ಲ.
Учень не вищий за [свого] вчителя, а раб не вищий за свого господаря.
25 ೨೫ ಗುರುವಿನಂತೆ ಆಗುವುದು ಶಿಷ್ಯನಿಗೆ ಸಾಕು, ಒಡೆಯನಂತೆ ಆಗುವುದು ಆಳಿಗೆ ಸಾಕು. ಅವರು ಮನೆಯ ಯಜಮಾನನಿಗೆಬೆಲ್ಜೆಬೂಲನೆಂದು ಹೆಸರಿಟ್ಟು ಕರೆದ ಮೇಲೆ ಆತನ ಮನೆಯವರನ್ನು ಇನ್ನೆಷ್ಟು ಅವಹೇಳನವಾಗಿ ಕರೆದಾರು?
Достатньо учневі стати, як його вчитель, і рабу стати, як його господар. Якщо господаря дому назвали Вельзевулом, то наскільки більше [називатимуть так] Його домашніх.
26 ೨೬ ಆದರೂ ಅವರಿಗೆ ಹೆದರಬೇಡಿರಿ. ಮರೆಯಾಗಿರುವ ಯಾವುದೂ ವ್ಯಕ್ತವಾಗದೆ ಇರುವುದಿಲ್ಲ; ಬೆಳಕಿಗೆ ಬಾರದ ರಹಸ್ಯವು ಇಲ್ಲ.
Не бійтеся їх, бо немає нічого захованого, що не відкрилося б, і нічого таємного, що не стало б відомим.
27 ೨೭ ನಾನು ಕತ್ತಲಲ್ಲಿ ನಿಮಗೆ ಹೇಳುವುದನ್ನು ನೀವು ಬೆಳಕಿನಲ್ಲಿ ಹೇಳಿರಿ, ಮತ್ತು ಕಿವಿಯಲ್ಲಿ ಕೇಳಿದ್ದನ್ನು ಮಾಳಿಗೆಗಳ ಮೇಲೆ ನಿಂತು ಸಾರಿರಿ.
Те, що Я кажу вам у темряві, говоріть при світлі, і те, що чуєте на вухо, проповідуйте з дахів.
28 ೨೮ ಇದಲ್ಲದೆ ದೇಹವನ್ನು ಕೊಂದು ಆತ್ಮವನ್ನು ಕೊಲ್ಲಲಾರದವರಿಗೆ ಹೆದರಬೇಡಿರಿ, ಆತ್ಮ ಮತ್ತು ದೇಹ ಎರಡನ್ನೂ ನರಕದಲ್ಲಿ ಹಾಕಿ ನಾಶಮಾಡಬಲ್ಲಾತನಿಗೇ ಹೆದರಿರಿ. (Geenna g1067)
Не бійтеся тих, хто, вбиваючи тіло, не може вбити душі. Бійтеся більше Того, Хто може і душу, і тіло знищити в Геєні. (Geenna g1067)
29 ೨೯ ಕಾಸಿಗೆ ಎರಡು ಗುಬ್ಬಿಗಳನ್ನು ಮಾರುವುದುಂಟಲ್ಲಾ; ಆದರೂ ನಿಮ್ಮ ತಂದೆಯ ಚಿತ್ತವಿಲ್ಲದೆ ಅವುಗಳಲ್ಲಿ ಒಂದಾದರೂ ನೆಲಕ್ಕೆ ಬೀಳದು.
Хіба два горобці не продаються за асарій? Однак жоден із них не впаде на землю без відома Отця вашого.
30 ೩೦ ನಿಮ್ಮ ತಲೆಕೂದಲುಗಳು ಸಹ ಎಲ್ಲವೂ ಎಣಿಕೆಯಾಗಿವೆ.
У вас же на голові навіть волосся пораховане.
31 ೩೧ ಆದುದರಿಂದ ಹೆದರಬೇಡಿರಿ; ಬಹಳ ಗುಬ್ಬಿಗಳಿಗಿಂತ ನೀವು ಹೆಚ್ಚು ಬೆಲೆಬಾಳುವವರಾಗಿದ್ದೀರಿ.
Отже, не бійтеся: ви набагато цінніші за горобців.
32 ೩೨ “ಹಾಗಾದರೆ ಯಾವನು ಮನುಷ್ಯರ ಮುಂದೆ ತಾನು ನನ್ನವನೆಂದು ಒಪ್ಪಿಕೊಳ್ಳುವನೋ, ನಾನು ಸಹ ಅವನನ್ನು ನನ್ನವನೆಂದು ಪರಲೋಕದಲ್ಲಿರುವ ನನ್ನ ತಂದೆಯ ಮುಂದೆ ಒಪ್ಪಿಕೊಳ್ಳುವೆನು.
Кожного, хто визнає Мене перед людьми, і Я визнаю перед Моїм Небесним Отцем.
33 ೩೩ ಆದರೆ ಯಾವನು ಮನುಷ್ಯರ ಮುಂದೆ ತಾನು ನನ್ನವನಲ್ಲವೆಂದು ಹೇಳುವನೋ ಅವನನ್ನು ನಾನು ಸಹ ಪರಲೋಕದಲ್ಲಿರುವ ನನ್ನ ತಂದೆಯ ಮುಂದೆ ನನ್ನವನಲ್ಲವೆಂದು ಹೇಳುವೆನು.
Але кожного, хто зречеться Мене перед людьми, зрікусь і Я перед Моїм Небесним Отцем.
34 ೩೪ “ಭೂಲೋಕದ ಮೇಲೆ ಸಮಾಧಾನ ತರುವುದಕ್ಕೆ ಬಂದೆನೆಂದು ನೆನಸಬೇಡಿರಿ; ಸಮಾಧಾನವನ್ನು ಹುಟ್ಟಿಸುವುದಕ್ಕೆ ನಾನು ಬಂದಿಲ್ಲ, ಖಡ್ಗವನ್ನು ಹಾಕುವುದಕ್ಕೆ ಬಂದೆನು.
Не думайте, що Я прийшов принести мир на землю. Я прийшов принести не мир, а меч.
35 ೩೫ ಹೇಗೆಂದರೆ ಮಗನಿಗೂ ತಂದೆಗೂ, ಮಗಳಿಗೂ ತಾಯಿಗೂ, ಸೊಸೆಗೂ ಅತ್ತೆಗೂ ಭೇದಹುಟ್ಟಿಸುವುದಕ್ಕೆ ಬಂದೆನು.
Адже Я прийшов, аби підняти „сина проти його батька, доньку проти її матері, невістку проти її свекрухи,
36 ೩೬ ಹೀಗೆ ಒಬ್ಬ ಮನುಷ್ಯನಿಗೆ ಅವನ ಮನೆಯವರೇ ಶತ್ರುಗಳಾಗಿರುವರು.
і ворогами людини будуть її домашні“.
37 ೩೭ ತಂದೆಯ ಮೇಲಾಗಲಿ ತಾಯಿಯ ಮೇಲಾಗಲಿ ನನ್ನ ಮೇಲೆ ಇಡುವುದಕ್ಕಿಂತ ಹೆಚ್ಚಾದ ಮಮತೆಯನ್ನಿಡುವವನು ನನಗೆ ಯೋಗ್ಯನಲ್ಲ; ಮಗನ ಮೇಲಾಗಲಿ ಮಗಳ ಮೇಲಾಗಲಿ ನನ್ನ ಮೇಲೆ ಇಡುವುದಕ್ಕಿಂತ ಹೆಚ್ಚಾದ ಮಮತೆಯನ್ನಿಡುವವನು ನನಗೆ ಯೋಗ್ಯನಲ್ಲ.
Хто любитиме свого батька та матір більше, ніж Мене, той не достойний Мене, і хто любитиме сина або доньку більше, ніж Мене, той не достойний Мене.
38 ೩೮ ಮತ್ತು ಯಾವನಾದರೂ ತನ್ನ ಶಿಲುಬೆಯನ್ನು ತೆಗೆದುಕೊಂಡು ನನ್ನನ್ನು ಹಿಂಬಾಲಿಸದಿದ್ದರೆ ನನ್ನ ಶಿಷ್ಯನಾಗಲು ಯೋಗ್ಯನಲ್ಲ.
І хто не бере хреста свого й не йде за Мною, той не достойний Мене.
39 ೩೯ ತನ್ನ ಪ್ರಾಣವನ್ನು ಕಂಡುಕೊಂಡವನು ಅದನ್ನು ಕಳೆದುಕೊಳ್ಳುವನು; ನನ್ನ ನಿಮಿತ್ತವಾಗಿ ತನ್ನ ಪ್ರಾಣವನ್ನು ಕಳೆದುಕೊಂಡವನು ಅದನ್ನು ಕಂಡುಕೊಳ್ಳುವನು.
Хто зберігає життя своє, той втратить його, а хто втратить його заради Мене, знайде його.
40 ೪೦ “ನಿಮ್ಮನ್ನು ಸ್ವೀಕರಿಸುವವನು ನನ್ನನ್ನು ಸ್ವೀಕರಿಸುವವನಾಗಿದ್ದಾನೆ; ನನ್ನನ್ನು ಸ್ವೀಕರಿಸುವವನು ನನ್ನನ್ನು ಕಳುಹಿಸಿಕೊಟ್ಟಾತನನ್ನೇ ಸ್ವೀಕರಿಸುವವನಾಗಿದ್ದಾನೆ.
Хто приймає вас, Мене приймає, а хто приймає Мене, приймає Того, Хто надіслав Мене.
41 ೪೧ ಪ್ರವಾದಿಯನ್ನು ಪ್ರವಾದಿಯೆಂದು ಸ್ವೀಕರಿಸಿಕೊಳ್ಳುವವನು ಪ್ರವಾದಿಗೆ ಬರತಕ್ಕ ಪ್ರತಿಫಲವನ್ನು ಹೊಂದುವನು; ನೀತಿವಂತನನ್ನು ನೀತಿವಂತನೆಂದು ಸ್ವೀಕರಿಸಿಕೊಳ್ಳುವವನು ನೀತಿವಂತನಿಗೆ ಬರತಕ್ಕ ಪ್ರತಿಫಲವನ್ನು ಹೊಂದುವನು.
Хто приймає пророка в ім’я пророка, отримає винагороду пророка, і хто приймає праведника в ім’я праведника, отримає винагороду праведника.
42 ೪೨ ಮತ್ತುಈ ಕನಿಷ್ಠರಾದವರಲ್ಲಿ ಒಬ್ಬನಿಗೆ ನನ್ನ ಶಿಷ್ಯನೆಂದು ಯಾರಾದರೂ ಒಂದು ತಂಬಿಗೆ ತಣ್ಣೀರನ್ನು ಕುಡಿಯುವುದಕ್ಕೆ ಕೊಟ್ಟರೆ ತಕ್ಕ ಪ್ರತಿಫಲವು ಅವನಿಗೆ ಬರುವುದು ತಪ್ಪುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ” ಅಂದನು.
І хто дасть тільки чашу холодної води одному з цих малих в ім’я учня, – істинно кажу вам, – не втратить своєї винагороди».

< ಮತ್ತಾಯನು 10 >