< ಮತ್ತಾಯನು 11 >

1 ಯೇಸು ತನ್ನ ಹನ್ನೆರಡು ಮಂದಿ ಶಿಷ್ಯರಿಗೆ ಅಪ್ಪಣೆಕೊಡುವುದನ್ನು ಮುಗಿಸಿದ ಬಳಿಕ ಅವರ ಪಟ್ಟಣಗಳಲ್ಲಿ ಉಪದೇಶಮಾಡುವುದಕ್ಕೂ ಬೋಧಿಸುವುದಕ್ಕೂ ಅಲ್ಲಿಂದ ಹೊರಟು ಹೋದನು.
I stalo se, když přestal Ježíš těch přikázaní dávati dvanácti učedlníkům svým, bral se odtud, aby učil a kázal v městech jejich.
2 ಕ್ರಿಸ್ತನ ಕಾರ್ಯಗಳ ಸುದ್ದಿಯನ್ನು ಸೆರೆಮನೆಯಲ್ಲಿದ್ದ ಯೋಹಾನನು ಕೇಳಿದಾಗ, ಆತನ ಬಳಿಗೆ ತನ್ನ ಶಿಷ್ಯರನ್ನು ಕಳುಹಿಸಿ,
Jan pak uslyšev v vězení o skutcích Kristových, poslav dva z učedlníků svých,
3 “ಬರಬೇಕಾದವನು ನೀನೋ ಇಲ್ಲವೇ ನಾವು ಬೇರೊಬ್ಬನಿಗಾಗಿ ಕಾದು ನೋಡಬೇಕೋ” ಎಂದು ಅವರ ಮೂಲಕ ಹೇಳಿ ಕೇಳಿಸಿದನು.
Řekl jemu: Ty-li jsi ten, kterýž přijíti má, čili jiného čekati máme?
4 ಯೇಸು ಅವರಿಗೆ ಪ್ರತ್ಯುತ್ತರವಾಗಿ, “ನೀವು ಹೋಗಿ ಕಾಣುವವುಗಳನ್ನು ಕೇಳುವವುಗಳನ್ನು ಯೋಹಾನನಿಗೆ ತಿಳಿಸಿರಿ;
I odpovídaje Ježíš, řekl jim: Jdouce, zvěstujtež Janovi, co slyšíte a vidíte.
5 ಕುರುಡರು ನೋಡುತ್ತಿದ್ದಾರೆ, ಕುಂಟರು ನಡೆಯುತ್ತಿದ್ದಾರೆ, ಕುಷ್ಠರೋಗಿಗಳು ಶುದ್ಧರಾಗುತ್ತಿದ್ದಾರೆ, ಕಿವುಡರು ಕೇಳುತ್ತಿದ್ದಾರೆ, ಸತ್ತವರು ಜೀವದಿಂದ ಎಬ್ಬಿಸಲ್ಪಡುತ್ತಿದ್ದಾರೆ, ಮತ್ತು ಬಡವರಿಗೆ ಸುವಾರ್ತೆಯು ಸಾರಲ್ಪಡುತ್ತಿದ್ದೆ.
Slepí vidí, a kulhaví chodí, malomocní se čistí, a hluší slyší, mrtví z mrtvých vstávají, a chudým evangelium se zvěstuje.
6 ನನ್ನ ವಿಷಯದಲ್ಲಿ ಆಪಾದಿಸದವನೇ ಧನ್ಯನು” ಎಂದು ಹೇಳಿದನು.
A blahoslavený jest, kdož se nehorší na mně.
7 ಅವರು ಹೊರಟು ಹೋಗುತ್ತಿರಲು ಯೇಸು ಯೋಹಾನನ ವಿಷಯವಾಗಿ ಆ ಜನರ ಗುಂಪುಗಳಿಗೆ ಹೇಳತೊಡಗಿದ್ದೇನಂದರೆ, “ನೀವು ಏನು ನೋಡಬೇಕೆಂದು ಅಡವಿಗೆ ಹೋಗಿದ್ದಿರಿ? ಗಾಳಿಯಿಂದ ಅಲ್ಲಾಡುವ ದಂಟನ್ನೋ?
A když oni odešli, počal Ježíš praviti zástupům o Janovi: Co jste vyšli na poušť viděti? Třtinu-li větrem se klátící?
8 ಹಾಗಾದರೆ ಏನು ನೋಡಬೇಕೆಂದು ಹೋಗಿದ್ದಿರಿ? ನಯವಾದ ಉಡುಪನ್ನು ಧರಿಸಿಕೊಂಡ ಮನುಷ್ಯನನ್ನೋ? ನಯವಾದ ಉಡುಪನ್ನು ಧರಿಸಿಕೊಂಡವರು ರಾಜನ ಅರಮನೆಗಳಲ್ಲಿ ಇರುತ್ತಾರಷ್ಟೆ.
Aneb co jste vyšli viděti? Člověka-li měkkým rouchem oděného? Aj, kteříž se měkkým rouchem odívají, v domích královských jsou.
9 ಹಾಗಾದರೆ ಯಾತಕ್ಕೆ ಹೋಗಿದ್ದಿರಿ? ಪ್ರವಾದಿಯನ್ನು ನೋಡುವುದಕ್ಕೋ? ಹೌದು ಪ್ರವಾದಿಗಿಂತಲೂ ಹೆಚ್ಚಿನವನನ್ನು ನೋಡಿದ್ದೀರಿ ಎಂದು ನಿಮಗೆ ಹೇಳುತ್ತೇನೆ.
Aneb co jste vyšli viděti? Proroka-li? Jistě pravím vám, i více nežli proroka.
10 ೧೦ ‘ಇಗೋ ನನ್ನ ದೂತನನ್ನು ನಿನ್ನ ಮುಂದೆ ಕಳುಹಿಸುವೆನು. ನೀನು ಹೋಗುವ ದಾರಿಯನ್ನು ಅವನು ನಿನ್ನ ಮುಂದೆ ಸಿದ್ಧಪಡಿಸುವನು’ ಎಂದು ಯಾರ ವಿಷಯವಾಗಿ ಬರೆದದೆಯೋ ಆತನು ಇವನೇ.
Tento jest zajisté, o němž psáno: Aj, já posílám anděla svého před tváří tvou, kterýž připraví cestu tvou před tebou.
11 ೧೧ ಸ್ತ್ರೀಯರಲ್ಲಿ ಹುಟ್ಟಿದವರೊಳಗೆ ಸ್ನಾನಿಕ ಯೋಹಾನನಿಗಿಂತ ದೊಡ್ಡವನು ಯಾರೂ ಇಲ್ಲ ಆದರೂ ಪರಲೋಕ ರಾಜ್ಯದಲ್ಲಿರುವ ಚಿಕ್ಕವನು ಅವನಿಗಿಂತಲೂ ದೊಡ್ಡವನೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
Amen pravím vám, mezi syny ženskými nepovstal větší nad Jana Křtitele; ale kdo jest nejmenší v království nebeském, jestiť větší nežli on.
12 ೧೨ ಸ್ನಾನಿಕ ಯೋಹಾನನ ಕಾಲದಿಂದ ಈ ವರೆಗೂ ಪರಲೋಕ ರಾಜ್ಯವು ಬಲವಂತಕ್ಕೆ ಗುರಿಯಾಗುತ್ತಿದೆ. ಬಲಾತ್ಕಾರಿಗಳು ಒತ್ತಾಯದಿಂದ ಅದನ್ನು ಸ್ವಾಧೀನಮಾಡಿಕೊಳ್ಳುತ್ತಿದ್ದಾರೆ.
Ode dnů pak Jana Křtitele až dosavad království nebeské násilí trpí, a ti, kteříž násilí činí, uchvacujíť je.
13 ೧೩ ಎಲ್ಲಾ ಪ್ರವಾದಿಗಳೂ, ಧರ್ಮಶಾಸ್ತ್ರವು ಯೋಹಾನನ ತನಕ ಪ್ರವಾದಿಸಿದರು.
Nebo všickni proroci i ten zákon až do Jana prorokovali.
14 ೧೪ ನಿಮಗೆ ತಿಳಿದುಕೊಳ್ಳುವುದಕ್ಕೆ ಮನಸ್ಸಿದ್ದರೆ ಗಮನಿಸಿ ಬರತಕ್ಕ ಎಲೀಯನು ಇವನೇ.
A chcete-li přijíti, onť jest Eliáš, kterýž přijíti měl.
15 ೧೫ ಕೇಳುವುದ್ದಕ್ಕೆ ಕಿವಿಯುಳ್ಳವನು ಕೇಳಲಿ.
Kdo má uši k slyšení, slyš.
16 ೧೬ ಆದರೆ ಈ ಸಂತತಿಯನ್ನು ಯಾರಿಗೆ ಹೋಲಿಸಲಿ? ಪೇಟೆಗಳಲ್ಲಿ ಕುಳಿತುಕೊಂಡು ತಮ್ಮ ಗೆಳೆಯರಿಗೆ,
Ale k komu připodobním pokolení toto? Podobné jest dětem, sedícím na ryncích a na tovaryše své volajícím,
17 ೧೭ ‘ನಿಮಗೋಸ್ಕರ ಕೊಳಲೂದಿದೆವು ನೀವು ಕುಣಿಯಲಿಲ್ಲ. ಶೋಕಿಸಿದೆವು ನೀವು ಗೋಳಾಡಲಿಲ್ಲ’ ಎಂದು ಕೂಗಿ ಹೇಳುವಂಥ ಮಕ್ಕಳಿಗೆ ಸಮಾನವಾಗಿದೆ.
A říkajícím: Pískali jsme vám, a neskákali jste; žalostně jsme naříkali, a neplakali jste.
18 ೧೮ ಯೋಹಾನನು ಬಂದನು, ಅವನು ಅನ್ನ ಪಾನಗಳನ್ನು ತೆಗೆದುಕೊಳ್ಳದವನಾಗಿದುದರಿಂದ, ಅವರು ಅವನಿಗೆ, ‘ದೆವ್ವ ಹಿಡಿದಿದೆ’ ಅನ್ನುತ್ತಾರೆ.
Přišel zajisté Jan, nejeda ani nepije, a řkou: Ďábelství má.
19 ೧೯ ಮನುಷ್ಯಕುಮಾರನು ಬಂದನು, ಅವನು ಅನ್ನ ಪಾನಗಳನ್ನು ಸೇವಿಸುವವನಾಗಿದ್ದನು. ಅವರು ‘ಇಗೋ ಇವನು ಹೊಟ್ಟೆಬಾಕನು ಕುಡುಕನುತೆರಿಗೆಯವರ ಮತ್ತು ಪಾಪಿಗಳ ಗೆಳೆಯನು’ ಅನ್ನುತ್ತಾರೆ. ಆದರೆ ಜ್ಞಾನವು ಅದರಕಾರ್ಯಗಳಿಂದಲೇ ಜ್ಞಾನವೆಂದು ಸಮರ್ಥಿಸಲ್ಪಡುತ್ತದೆ” ಅಂದನು.
Přišel Syn člověka, jeda a pije, a řkou: Aj, člověk žráč a piján vína, přítel publikánů a hříšníků. Ale ospravedlněna jest moudrost od synů svých.
20 ೨೦ ಅನಂತರ ಆತನು ತನ್ನ ಮಹತ್ಕಾರ್ಯಗಳು ಬಹಳವಾಗಿ ನಡೆದ ಊರುಗಳವರು ಮಾನಸಾಂತರಪಡಲಿಲ್ಲವೆಂದು ಅವುಗಳನ್ನು ಗದರಿಸತೊಡಗಿದನು.
Tehdy počal přimlouvati městům, v nichž bylo činěno nejvíce divů jeho, že pokání nečinili:
21 ೨೧ ಹೇಗೆಂದರೆ, “ಅಯ್ಯೋ ಖೊರಾಜಿನೇ, ಅಯ್ಯೋ ಬೇತ್ಸಾಯಿದವೇ, ನಿಮ್ಮಲ್ಲಿ ನಡೆದ ಮಹತ್ಕಾರ್ಯಗಳು ತೂರ್ ಮತ್ತು ಸೀದೋನ್ ಪಟ್ಟಣಗಳಲ್ಲಿ ನಡೆದಿದ್ದರೆ ಅಲ್ಲಿನವರು ಎಂದೋ ಗೋಣಿತಟ್ಟು ಸುತ್ತಿಕೊಂಡು ಬೂದಿಯಲ್ಲಿ ಕುಳಿತುಕೊಂಡು ಮಾನಸಾಂತರಪಡುತ್ತಿದ್ದರು.
Běda tobě Korozaim, běda tobě Betsaido. Nebo kdyby v Týru a Sidonu byli činěni divové ti, kteříž jsou činěni v vás, dávno by byli v žíni a v popele pokání činili.
22 ೨೨ ಆದರೆ ನ್ಯಾಯವಿಚಾರಣೆಯ ದಿನದಲ್ಲಿ ನಿಮ್ಮ ಗತಿಗಿಂತಲೂ ತೂರ್ ಸೀದೋನ್ ಪಟ್ಟಣಗಳ ಗತಿಯು ಹೆಚ್ಚು ಸಹನೀಯವಾಗಿರುವುದು.
Nýbrž pravím vám: Týru a Sidonu lehčeji bude v den soudný nežli vám.
23 ೨೩ ಎಲೈ ಕಪೆರ್ನೌಮೇನೀನು ಪರಲೋಕಕ್ಕೇರುವೇ ಎಂದು ನೆನಸುತ್ತೀಯೋ? ಇಲ್ಲ, ಪಾತಾಳಕ್ಕೆ ಇಳಿಯುವೆ. ನಿನ್ನಲ್ಲಿ ನಡೆದ ಮಹತ್ಕಾರ್ಯಗಳು ಸೊದೋಮಿನಲ್ಲಿ ನಡೆದಿದ್ದರೆ ಅದು ಇಂದಿನ ವರೆಗೆ ಉಳಿದಿರುತ್ತಿತ್ತು. (Hadēs g86)
A ty Kafarnaum, kteréž jsi až k nebi vyvýšeno, až do pekla sstrčeno budeš. Nebo kdyby v Sodomě činěni byli divové ti, kteříž jsou činěni v tobě, byliť by zůstali až do dnes. (Hadēs g86)
24 ೨೪ ಆದರೆ ನ್ಯಾಯವಿಚಾರಣೆಯ ದಿನದಲ್ಲಿ ನಿಮ್ಮ ಗತಿಗಿಂತಲೂ ಸೊದೋಮ್ ಸೀಮೆಯ ಗತಿಯು ಸಹನೀಯವಾಗಿರುವುದು” ಎಂದು ನಿಮಗೆ ಹೇಳುತ್ತೇನೆ ಅಂದನು.
Ano více pravím vám, že zemi Sodomských lehčeji bude v den soudný nežli tobě.
25 ೨೫ ಅದೇ ಸಮಯದಲ್ಲಿ ಯೇಸು ಹೇಳಿದ್ದೇನೆಂದರೆ, “ತಂದೆಯೇ! ಪರಲೋಕದ ಭೂಲೋಕದ ಒಡೆಯನೇ, ನೀನು ಜ್ಞಾನಿಗಳಿಗೂ ಬುದ್ಧಿವಂತರಿಗೂ ಈ ವಿಷಯಗಳನ್ನು ಮರೆಮಾಡಿ ಚಿಕ್ಕ ಮಕ್ಕಳಿಗೆ ಅದನ್ನು ಪ್ರಕಟಪಡಿಸಿರುವಿ ಎಂದು ನಿನ್ನನ್ನು ಕೊಂಡಾಡುತ್ತೇನೆ.
V ten čas odpověděv Ježíš, řekl: Chválím tě, Otče, Pane nebe i země, že jsi skryl tyto věci před moudrými a opatrnými, a zjevil jsi je nemluvňátkům.
26 ೨೬ ಹೌದು ತಂದೆಯೇ, ಹೀಗೆ ಮಾಡುವುದೇ ಒಳ್ಳೆಯದೆಂದು ನಿನ್ನ ದೃಷ್ಟಿಗೆ ತೋಚಿತು.
Jistě, Otče, žeť se tak líbilo před tebou.
27 ೨೭ ನನ್ನ ತಂದೆಯು ಎಲ್ಲವನ್ನು ನನಗೆ ಒಪ್ಪಿಸಿದ್ದಾನೆ. ತಂದೆಯ ಹೊರತು ಇನ್ನಾವನೂ ಮಗನನ್ನು ತಿಳಿದವನಲ್ಲ. ಮಗನ ಹೊರತು ಇನ್ನಾವನೂ ತಂದೆಯನ್ನು ತಿಳಿದವನಲ್ಲ. ಮತ್ತು ಮಗನು ತಂದೆಯನ್ನು ಯಾರಿಗೆ ಪ್ರಕಟಪಡಿಸುವುದಕ್ಕೆ ಇಚ್ಛಿಸುತ್ತಾನೋ ಅವನು ಆತನನ್ನು ತಿಳಿದವನಾಗಿದ್ದಾನೆ.
Všecky věci dány jsou mi od Otce mého, a žádnýť nezná Syna, jediné Otec, aniž Otce kdo zná, jediné Syn, a komuž by chtěl Syn zjeviti.
28 ೨೮ “ಎಲೈ ಕಷ್ಟಪಡುವವರೇ, ಹೊರೆಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ ನಾನು ನಿಮಗೆ ವಿಶ್ರಾಂತಿ ಕೊಡುವೆನು.
Poďtež ke mně všickni, kteříž pracujete a obtíženi jste, a já vám odpočinutí dám.
29 ೨೯ ನಾನು ಸಾತ್ವಿಕನೂ ದೀನಹೃದಯನೂ ಆಗಿರುವುದರಿಂದ ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಿಂದ ಕಲಿತುಕೊಳ್ಳಿರಿ, ಆಗ ನಿಮ್ಮ ಆತ್ಮಗಳಿಗೆ ವಿಶ್ರಾಂತಿ ಸಿಕ್ಕುವುದು.
Vezměte jho mé na se, a učte se ode mne, neboť jsem tichý a pokorný srdcem, a naleznete odpočinutí dušem svým.
30 ೩೦ ಏಕೆಂದರೆ ನನ್ನ ನೊಗವು ಮೃದುವಾದದ್ದು, ನನ್ನ ಹೊರೆಯು ಹಗುರವಾದದ್ದು ಆಗಿದೆ” ಅಂದನು.
Jho mé zajisté jestiť rozkošné, a břímě mé lehké.

< ಮತ್ತಾಯನು 11 >