< ಮತ್ತಾಯನು 11 >
1 ೧ ಯೇಸು ತನ್ನ ಹನ್ನೆರಡು ಮಂದಿ ಶಿಷ್ಯರಿಗೆ ಅಪ್ಪಣೆಕೊಡುವುದನ್ನು ಮುಗಿಸಿದ ಬಳಿಕ ಅವರ ಪಟ್ಟಣಗಳಲ್ಲಿ ಉಪದೇಶಮಾಡುವುದಕ್ಕೂ ಬೋಧಿಸುವುದಕ್ಕೂ ಅಲ್ಲಿಂದ ಹೊರಟು ಹೋದನು.
जब येशु अपने बारह शिष्यों को निर्देश दे चुके, वह शिक्षा देने और प्रचार के लिए वहां से उनके नगरों में चले गए.
2 ೨ ಕ್ರಿಸ್ತನ ಕಾರ್ಯಗಳ ಸುದ್ದಿಯನ್ನು ಸೆರೆಮನೆಯಲ್ಲಿದ್ದ ಯೋಹಾನನು ಕೇಳಿದಾಗ, ಆತನ ಬಳಿಗೆ ತನ್ನ ಶಿಷ್ಯರನ್ನು ಕಳುಹಿಸಿ,
बंदीगृह में जब योहन ने मसीह के कामों के विषय में सुना उन्होंने अपने शिष्यों को येशु से यह पूछने भेजा,
3 ೩ “ಬರಬೇಕಾದವನು ನೀನೋ ಇಲ್ಲವೇ ನಾವು ಬೇರೊಬ್ಬನಿಗಾಗಿ ಕಾದು ನೋಡಬೇಕೋ” ಎಂದು ಅವರ ಮೂಲಕ ಹೇಳಿ ಕೇಳಿಸಿದನು.
“क्या आप वही है, जिसकी प्रतिज्ञा तथा प्रतीक्षा की गई हैं, या हम किसी अन्य का इंतजार करें?”
4 ೪ ಯೇಸು ಅವರಿಗೆ ಪ್ರತ್ಯುತ್ತರವಾಗಿ, “ನೀವು ಹೋಗಿ ಕಾಣುವವುಗಳನ್ನು ಕೇಳುವವುಗಳನ್ನು ಯೋಹಾನನಿಗೆ ತಿಳಿಸಿರಿ;
येशु ने उन्हें उत्तर दिया, “जो कुछ तुम देख और सुन रहे हो उसकी सूचना योहन को दे दो:
5 ೫ ಕುರುಡರು ನೋಡುತ್ತಿದ್ದಾರೆ, ಕುಂಟರು ನಡೆಯುತ್ತಿದ್ದಾರೆ, ಕುಷ್ಠರೋಗಿಗಳು ಶುದ್ಧರಾಗುತ್ತಿದ್ದಾರೆ, ಕಿವುಡರು ಕೇಳುತ್ತಿದ್ದಾರೆ, ಸತ್ತವರು ಜೀವದಿಂದ ಎಬ್ಬಿಸಲ್ಪಡುತ್ತಿದ್ದಾರೆ, ಮತ್ತು ಬಡವರಿಗೆ ಸುವಾರ್ತೆಯು ಸಾರಲ್ಪಡುತ್ತಿದ್ದೆ.
अंधे देख पा रहे हैं, लंगड़े चल रहे हैं, कोढ़ के रोगियों को शुद्ध किया जा रहा है, बहिरे सुनने लगे हैं, मरे हुए दोबारा जीवित किए जा रहे हैं तथा कंगालों को सुसमाचार सुनाया जा रहा है.
6 ೬ ನನ್ನ ವಿಷಯದಲ್ಲಿ ಆಪಾದಿಸದವನೇ ಧನ್ಯನು” ಎಂದು ಹೇಳಿದನು.
धन्य है वह, जिसका विश्वास मुझ पर से नहीं उठता.”
7 ೭ ಅವರು ಹೊರಟು ಹೋಗುತ್ತಿರಲು ಯೇಸು ಯೋಹಾನನ ವಿಷಯವಾಗಿ ಆ ಜನರ ಗುಂಪುಗಳಿಗೆ ಹೇಳತೊಡಗಿದ್ದೇನಂದರೆ, “ನೀವು ಏನು ನೋಡಬೇಕೆಂದು ಅಡವಿಗೆ ಹೋಗಿದ್ದಿರಿ? ಗಾಳಿಯಿಂದ ಅಲ್ಲಾಡುವ ದಂಟನ್ನೋ?
जब योहन के शिष्य वहां से जा ही रहे थे, प्रभु येशु ने भीड़ से योहन के विषय में कहना प्रारंभ किया, “तुम्हारी आशा बंजर भूमि में क्या देखने की थी? हवा में हिलते हुए सरकंडे को?
8 ೮ ಹಾಗಾದರೆ ಏನು ನೋಡಬೇಕೆಂದು ಹೋಗಿದ್ದಿರಿ? ನಯವಾದ ಉಡುಪನ್ನು ಧರಿಸಿಕೊಂಡ ಮನುಷ್ಯನನ್ನೋ? ನಯವಾದ ಉಡುಪನ್ನು ಧರಿಸಿಕೊಂಡವರು ರಾಜನ ಅರಮನೆಗಳಲ್ಲಿ ಇರುತ್ತಾರಷ್ಟೆ.
यदि यह नहीं तो फिर क्या देखने गए थे? कीमती वस्त्र धारण किए हुए किसी व्यक्ति को? जो ऐसे वस्त्र धारण करते हैं उनका निवास तो राजमहलों में होता है.
9 ೯ ಹಾಗಾದರೆ ಯಾತಕ್ಕೆ ಹೋಗಿದ್ದಿರಿ? ಪ್ರವಾದಿಯನ್ನು ನೋಡುವುದಕ್ಕೋ? ಹೌದು ಪ್ರವಾದಿಗಿಂತಲೂ ಹೆಚ್ಚಿನವನನ್ನು ನೋಡಿದ್ದೀರಿ ಎಂದು ನಿಮಗೆ ಹೇಳುತ್ತೇನೆ.
तुम क्यों गए थे? किसी भविष्यवक्ता से भेंट करने? हां! मैं तुम्हें बता रहा हूं कि यह वह हैं, जो भविष्यवक्ता से भी बढ़कर हैं
10 ೧೦ ‘ಇಗೋ ನನ್ನ ದೂತನನ್ನು ನಿನ್ನ ಮುಂದೆ ಕಳುಹಿಸುವೆನು. ನೀನು ಹೋಗುವ ದಾರಿಯನ್ನು ಅವನು ನಿನ್ನ ಮುಂದೆ ಸಿದ್ಧಪಡಿಸುವನು’ ಎಂದು ಯಾರ ವಿಷಯವಾಗಿ ಬರೆದದೆಯೋ ಆತನು ಇವನೇ.
यह वह हैं जिनके विषय में लिखा गया है: “‘मैं अपना दूत तुम्हारे आगे भेज रहा हूं, जो तुम्हारे आगे-आगे जाकर तुम्हारे लिए मार्ग तैयार करेगा.’
11 ೧೧ ಸ್ತ್ರೀಯರಲ್ಲಿ ಹುಟ್ಟಿದವರೊಳಗೆ ಸ್ನಾನಿಕ ಯೋಹಾನನಿಗಿಂತ ದೊಡ್ಡವನು ಯಾರೂ ಇಲ್ಲ ಆದರೂ ಪರಲೋಕ ರಾಜ್ಯದಲ್ಲಿರುವ ಚಿಕ್ಕವನು ಅವನಿಗಿಂತಲೂ ದೊಡ್ಡವನೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
सच तो यह है कि आज तक जितने भी मनुष्य हुए हैं उनमें से एक भी बपतिस्मा देनेवाले योहन से बढ़कर नहीं. फिर भी स्वर्ग-राज्य में छोटे से छोटा भी योहन से बढ़कर है.
12 ೧೨ ಸ್ನಾನಿಕ ಯೋಹಾನನ ಕಾಲದಿಂದ ಈ ವರೆಗೂ ಪರಲೋಕ ರಾಜ್ಯವು ಬಲವಂತಕ್ಕೆ ಗುರಿಯಾಗುತ್ತಿದೆ. ಬಲಾತ್ಕಾರಿಗಳು ಒತ್ತಾಯದಿಂದ ಅದನ್ನು ಸ್ವಾಧೀನಮಾಡಿಕೊಳ್ಳುತ್ತಿದ್ದಾರೆ.
बपतिस्मा देनेवाले योहन के समय से लेकर अब तक स्वर्ग-राज्य प्रबलतापूर्वक फैल रहा है और आकांक्षी-उत्साही व्यक्ति इस पर अधिकार कर रहे हैं.
13 ೧೩ ಎಲ್ಲಾ ಪ್ರವಾದಿಗಳೂ, ಧರ್ಮಶಾಸ್ತ್ರವು ಯೋಹಾನನ ತನಕ ಪ್ರವಾದಿಸಿದರು.
भविष्यद्वक्ताओं तथा व्यवस्था की भविष्यवाणी योहन तक ही थी.
14 ೧೪ ನಿಮಗೆ ತಿಳಿದುಕೊಳ್ಳುವುದಕ್ಕೆ ಮನಸ್ಸಿದ್ದರೆ ಗಮನಿಸಿ ಬರತಕ್ಕ ಎಲೀಯನು ಇವನೇ.
यदि तुम इस सच में विश्वास कर सको तो सुनो: योहन ही वह एलियाह हैं जिनका दोबारा आगमन होना था.
15 ೧೫ ಕೇಳುವುದ್ದಕ್ಕೆ ಕಿವಿಯುಳ್ಳವನು ಕೇಳಲಿ.
जिसके सुनने के कान हों, वह सुन ले.
16 ೧೬ ಆದರೆ ಈ ಸಂತತಿಯನ್ನು ಯಾರಿಗೆ ಹೋಲಿಸಲಿ? ಪೇಟೆಗಳಲ್ಲಿ ಕುಳಿತುಕೊಂಡು ತಮ್ಮ ಗೆಳೆಯರಿಗೆ,
“इस पीढ़ी की तुलना मैं किससे करूं? यह बाजारों में बैठे हुए उन बालकों के समान है, जो पुकारते हुए अन्यों से कह रहे हैं:
17 ೧೭ ‘ನಿಮಗೋಸ್ಕರ ಕೊಳಲೂದಿದೆವು ನೀವು ಕುಣಿಯಲಿಲ್ಲ. ಶೋಕಿಸಿದೆವು ನೀವು ಗೋಳಾಡಲಿಲ್ಲ’ ಎಂದು ಕೂಗಿ ಹೇಳುವಂಥ ಮಕ್ಕಳಿಗೆ ಸಮಾನವಾಗಿದೆ.
“‘जब हमने तुम्हारे लिए बांसुरी बजाई, तुम न नाचे; हमने शोक गीत भी गाए, फिर भी तुम न रोए.’
18 ೧೮ ಯೋಹಾನನು ಬಂದನು, ಅವನು ಅನ್ನ ಪಾನಗಳನ್ನು ತೆಗೆದುಕೊಳ್ಳದವನಾಗಿದುದರಿಂದ, ಅವರು ಅವನಿಗೆ, ‘ದೆವ್ವ ಹಿಡಿದಿದೆ’ ಅನ್ನುತ್ತಾರೆ.
योहन रोटी नहीं खाते, और दाखरस नहीं पीते थे. इसलिये लोगों ने घोषणा की, ‘उसमें दुष्टात्मा है.’
19 ೧೯ ಮನುಷ್ಯಕುಮಾರನು ಬಂದನು, ಅವನು ಅನ್ನ ಪಾನಗಳನ್ನು ಸೇವಿಸುವವನಾಗಿದ್ದನು. ಅವರು ‘ಇಗೋ ಇವನು ಹೊಟ್ಟೆಬಾಕನು ಕುಡುಕನುತೆರಿಗೆಯವರ ಮತ್ತು ಪಾಪಿಗಳ ಗೆಳೆಯನು’ ಅನ್ನುತ್ತಾರೆ. ಆದರೆ ಜ್ಞಾನವು ಅದರಕಾರ್ಯಗಳಿಂದಲೇ ಜ್ಞಾನವೆಂದು ಸಮರ್ಥಿಸಲ್ಪಡುತ್ತದೆ” ಅಂದನು.
मनुष्य का पुत्र खाते-पीते आया, और उन्होंने घोषित कर दिया, ‘अरे, वह तो पेटू और पियक्कड़ है; वह तो चुंगी लेनेवालों और अपराधी व्यक्तियों का मित्र है!’ बुद्धि अपने कामों से सही साबित होती है.”
20 ೨೦ ಅನಂತರ ಆತನು ತನ್ನ ಮಹತ್ಕಾರ್ಯಗಳು ಬಹಳವಾಗಿ ನಡೆದ ಊರುಗಳವರು ಮಾನಸಾಂತರಪಡಲಿಲ್ಲವೆಂದು ಅವುಗಳನ್ನು ಗದರಿಸತೊಡಗಿದನು.
येशु ने अधिकांश अद्भुत काम इन्हीं नगरों में किए थे; फिर भी इन नगरों ने पश्चाताप नहीं किया था, इसलिये येशु इन नगरों को धिक्कारने लगे.
21 ೨೧ ಹೇಗೆಂದರೆ, “ಅಯ್ಯೋ ಖೊರಾಜಿನೇ, ಅಯ್ಯೋ ಬೇತ್ಸಾಯಿದವೇ, ನಿಮ್ಮಲ್ಲಿ ನಡೆದ ಮಹತ್ಕಾರ್ಯಗಳು ತೂರ್ ಮತ್ತು ಸೀದೋನ್ ಪಟ್ಟಣಗಳಲ್ಲಿ ನಡೆದಿದ್ದರೆ ಅಲ್ಲಿನವರು ಎಂದೋ ಗೋಣಿತಟ್ಟು ಸುತ್ತಿಕೊಂಡು ಬೂದಿಯಲ್ಲಿ ಕುಳಿತುಕೊಂಡು ಮಾನಸಾಂತರಪಡುತ್ತಿದ್ದರು.
“धिक्कार है तुझ पर कोराज़ीन! धिक्कार है तुझ पर बैथसैदा! ये ही अद्भुत काम, जो तुझमें किए गए हैं यदि सोर और सीदोन नगरों में किए जाते तो वे विलाप-वस्त्र पहन, सिर पर राख डाल कब के पश्चाताप कर चुके होते!
22 ೨೨ ಆದರೆ ನ್ಯಾಯವಿಚಾರಣೆಯ ದಿನದಲ್ಲಿ ನಿಮ್ಮ ಗತಿಗಿಂತಲೂ ತೂರ್ ಸೀದೋನ್ ಪಟ್ಟಣಗಳ ಗತಿಯು ಹೆಚ್ಚು ಸಹನೀಯವಾಗಿರುವುದು.
फिर भी मैं कहता हूं, सुनो: न्याय-दिवस पर सोर और सीदोन नगरों का दंड तेरे दंड से अधिक सहने योग्य होगा.
23 ೨೩ ಎಲೈ ಕಪೆರ್ನೌಮೇನೀನು ಪರಲೋಕಕ್ಕೇರುವೇ ಎಂದು ನೆನಸುತ್ತೀಯೋ? ಇಲ್ಲ, ಪಾತಾಳಕ್ಕೆ ಇಳಿಯುವೆ. ನಿನ್ನಲ್ಲಿ ನಡೆದ ಮಹತ್ಕಾರ್ಯಗಳು ಸೊದೋಮಿನಲ್ಲಿ ನಡೆದಿದ್ದರೆ ಅದು ಇಂದಿನ ವರೆಗೆ ಉಳಿದಿರುತ್ತಿತ್ತು. (Hadēs )
और कफ़रनहूम, तू! क्या तू स्वर्ग तक ऊंचा किए जाने की आशा कर रहा है? अरे! तुझे तो पाताल में उतार दिया जाएगा क्योंकि जो अद्भुत काम तुझमें किए गए, यदि वे ही सोदोम नगर में किए गए होते तो वह आज भी बना होता. (Hadēs )
24 ೨೪ ಆದರೆ ನ್ಯಾಯವಿಚಾರಣೆಯ ದಿನದಲ್ಲಿ ನಿಮ್ಮ ಗತಿಗಿಂತಲೂ ಸೊದೋಮ್ ಸೀಮೆಯ ಗತಿಯು ಸಹನೀಯವಾಗಿರುವುದು” ಎಂದು ನಿಮಗೆ ಹೇಳುತ್ತೇನೆ ಅಂದನು.
फिर भी आज जो मैं कह रहा हूं उसे याद रख: न्याय-दिवस पर सोदोम नगर का दंड तेरे दंड से अधिक सहने योग्य होगा.”
25 ೨೫ ಅದೇ ಸಮಯದಲ್ಲಿ ಯೇಸು ಹೇಳಿದ್ದೇನೆಂದರೆ, “ತಂದೆಯೇ! ಪರಲೋಕದ ಭೂಲೋಕದ ಒಡೆಯನೇ, ನೀನು ಜ್ಞಾನಿಗಳಿಗೂ ಬುದ್ಧಿವಂತರಿಗೂ ಈ ವಿಷಯಗಳನ್ನು ಮರೆಮಾಡಿ ಚಿಕ್ಕ ಮಕ್ಕಳಿಗೆ ಅದನ್ನು ಪ್ರಕಟಪಡಿಸಿರುವಿ ಎಂದು ನಿನ್ನನ್ನು ಕೊಂಡಾಡುತ್ತೇನೆ.
यह वह अवसर था जब येशु ने इस प्रकार कहा: “पिता! स्वर्ग और पृथ्वी के स्वामी, मैं आपकी स्तुति करता हूं कि आपने ये सभी सच बुद्धिमानों और ज्ञानियों से छुपा रखे और नन्हे बालकों पर प्रकट कर दिए क्योंकि पिता, आपकी दृष्टि में यही अच्छा था.
26 ೨೬ ಹೌದು ತಂದೆಯೇ, ಹೀಗೆ ಮಾಡುವುದೇ ಒಳ್ಳೆಯದೆಂದು ನಿನ್ನ ದೃಷ್ಟಿಗೆ ತೋಚಿತು.
सच है, पिता, क्योंकि इसी में आपको परम संतोष था.
27 ೨೭ ನನ್ನ ತಂದೆಯು ಎಲ್ಲವನ್ನು ನನಗೆ ಒಪ್ಪಿಸಿದ್ದಾನೆ. ತಂದೆಯ ಹೊರತು ಇನ್ನಾವನೂ ಮಗನನ್ನು ತಿಳಿದವನಲ್ಲ. ಮಗನ ಹೊರತು ಇನ್ನಾವನೂ ತಂದೆಯನ್ನು ತಿಳಿದವನಲ್ಲ. ಮತ್ತು ಮಗನು ತಂದೆಯನ್ನು ಯಾರಿಗೆ ಪ್ರಕಟಪಡಿಸುವುದಕ್ಕೆ ಇಚ್ಛಿಸುತ್ತಾನೋ ಅವನು ಆತನನ್ನು ತಿಳಿದವನಾಗಿದ್ದಾನೆ.
“मेरे पिता द्वारा सब कुछ मुझे सौंप दिया गया है. पिता के अलावा कोई पुत्र को नहीं जानता और न ही कोई पिता को जानता है, सिवाय पुत्र के तथा वे, जिन पर वह प्रकट करना चाहें.
28 ೨೮ “ಎಲೈ ಕಷ್ಟಪಡುವವರೇ, ಹೊರೆಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ ನಾನು ನಿಮಗೆ ವಿಶ್ರಾಂತಿ ಕೊಡುವೆನು.
“तुम सभी, जो थके हुए तथा भारी बोझ से दबे हो, मेरे पास आओ, तुम्हें विश्राम मैं दूंगा.
29 ೨೯ ನಾನು ಸಾತ್ವಿಕನೂ ದೀನಹೃದಯನೂ ಆಗಿರುವುದರಿಂದ ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಿಂದ ಕಲಿತುಕೊಳ್ಳಿರಿ, ಆಗ ನಿಮ್ಮ ಆತ್ಮಗಳಿಗೆ ವಿಶ್ರಾಂತಿ ಸಿಕ್ಕುವುದು.
मेरा जूआ अपने ऊपर ले लो और मुझसे सीखो क्योंकि मैं दीन और हृदय से नम्र हूं और तुम्हें मन में विश्राम प्राप्त होगा
30 ೩೦ ಏಕೆಂದರೆ ನನ್ನ ನೊಗವು ಮೃದುವಾದದ್ದು, ನನ್ನ ಹೊರೆಯು ಹಗುರವಾದದ್ದು ಆಗಿದೆ” ಅಂದನು.
क्योंकि सहज है मेरा जूआ और हल्का है मेरा बोझ.”