< ಮತ್ತಾಯನು 13 >

1 ಆದೇ ದಿನದಲ್ಲಿ ಯೇಸು ಮನೆಯಿಂದ ಹೊರಟು ಸಮುದ್ರದ ದಡದಲ್ಲಿ ಕುಳಿತುಕೊಂಡನು.
В същия ден Исус излезе из къщи и седна край езерото.
2 ಬಹಳ ಜನರ ಗುಂಪು ಆತನ ಬಳಿಗೆ ಸೇರಿಬಂದುದರಿಂದ ಆತನು ದೋಣಿ ಹತ್ತಿ ಕುಳಿತುಕೊಂಡನು. ಆ ಜನರೆಲ್ಲರೂ ದಡದಲ್ಲಿ ನಿಂತಿದ್ದರು.
И събраха се до Него големи множества, така щото влезе и седна в една ладия; а целият народ стоеше на брега.
3 ಆಗ ಆತನು ಅವರಿಗೆ ಸಾಮ್ಯರೂಪವಾಗಿ ಅನೇಕ ಸಂಗತಿಗಳನ್ನು ಹೇಳಿದನು.
И говореше им много с притчи, казвайки: Ето, сеячът излезе да сее;
4 “ಕೇಳಿರಿ, ಬಿತ್ತುವವನು ಬಿತ್ತುವುದಕ್ಕೆ ಹೊರಟನು. ಅವನು ಬಿತ್ತುವಾಗ ಕೆಲವು ಬೀಜಗಳು ದಾರಿಯ ಮಗ್ಗುಲಲ್ಲಿ ಬಿದ್ದವು. ಹಕ್ಕಿಗಳು ಬಂದು ಅವುಗಳನ್ನು ತಿಂದು ಬಿಟ್ಟವು.
и като сееше някои зърна паднаха край пътя: птиците дойдоха и ги изкълваха.
5 ಕೆಲವು ಬೀಜಗಳು ಬಹಳ ಮಣ್ಣಿಲ್ಲದ ಬಂಡೆಯ ನೆಲದಲ್ಲಿ ಬಿದ್ದವು. ಮಣ್ಣು ತೆಳ್ಳಗಿದ್ದುದರಿಂದ ಅವು ಬೇಗ ಮೊಳೆತವು.
А други паднаха на канаристите места, гдето нямаше много пръст; и твърде скоро поникнаха, защото нямаше дълбока почва;
6 ಆದರೆ ಬಿಸಿಲೇರಿದಾಗ ಬೇರಿಲ್ಲದ ಕಾರಣ ಬಾಡಿ ಒಣಗಿಹೋದವು.
и като изгря слънцето, пригоряха, и понеже нямаха корен изсъхнаха.
7 ಮತ್ತೆ ಕೆಲವು ಬೀಜಗಳು ಮುಳ್ಳುಗಿಡಗಳಲ್ಲಿ ಬಿದ್ದವು, ಮುಳ್ಳುಗಿಡಗಳು ಬೆಳೆದು ಅವುಗಳನ್ನು ಅಡಗಿಸಿಬಿಟ್ಟವು.
Други пък паднаха между тръните; тръните пораснаха и ги заглушиха.
8 ಇನ್ನು ಕೆಲವು ಬೀಜಗಳು ಒಳ್ಳೆಯ ನೆಲದಲ್ಲಿ ಬಿದ್ದು ಕೆಲವು ನೂರರಷ್ಟು ಕೆಲವು ಅರವತ್ತರಷ್ಟು, ಕೆಲವು ಮೂವತ್ತರಷ್ಟು ಫಲವನ್ನು ಕೊಟ್ಟವು.
А други паднаха на добра земя, и дадоха плод, кое стократно, кое шестдесет, кое тридесет.
9 ಕೇಳುವುದಕ್ಕೆ ಕಿವಿಯುಳ್ಳವನು ಕೇಳಲಿ” ಅಂದನು.
Който има уши [да слуша], нека слуша.
10 ೧೦ ತರುವಾಯ ಆತನ ಶಿಷ್ಯರು ಬಂದು, “ಏಕೆ ಸಾಮ್ಯರೂಪವಾಗಿ ಜನರ ಗುಂಪಿನ ಸಂಗಡ ಮಾತನಾಡುತ್ತಿ?” ಎಂದು ಕೇಳಿದರು.
Тогава се приближиха учениците Му и Му казаха: Защо им говориш с притчи?
11 ೧೧ ಅದಕ್ಕಾತನು ಅವರಿಗೆ ಪ್ರತ್ಯುತ್ತರವಾಗಿ ಹೇಳಿದ್ದೇನೆಂದರೆ, “ಪರಲೋಕ ರಾಜ್ಯದ ಮರ್ಮಗಳನ್ನು ತಿಳಿಯುವ ಭಾಗ್ಯವು ನಿಮಗೆ ಕೊಟ್ಟಿದೆ ಅವರಿಗೆ ಕೊಟ್ಟಿಲ್ಲ.
А Той в отговор им каза: Защото на вас е дадено да знаете тайните на небесното царство, а на тях не е дадено.
12 ೧೨ ಏಕೆಂದರೆ ಇದ್ದವನಿಗೆ ಕೊಡಲ್ಪಡುವುದು ಅವನಿಗೆ ಇನ್ನೂ ಹೆಚ್ಚು ಸಮೃದ್ಧಿಯಾಗುವುದು ಇಲ್ಲದವನ ಕಡೆಯಿಂದ ಇದ್ದದ್ದೂ ತೆಗೆಯಲ್ಪಡುವುದು.
Защото който има, нему ще се даде, и ще има изобилие; а който няма, от него ще се отнеме и това, което има.
13 ೧೩ ನಾನು ಅವರ ಸಂಗಡ ಸಾಮ್ಯರೂಪವಾಗಿ ಮಾತನಾಡುವುದಕ್ಕೆ ಕಾರಣವೇನೆಂದರೆ, ಅವರು ಕಂಡರೂ ಕಾಣುವುದಿಲ್ಲ. ಅವರು ಕೇಳಿದರೂ ನಿಜವಾಗಿಯೂ ಆಲಿಸುವುದಿಲ್ಲ ಮತ್ತು ತಿಳಿದುಕೊಳ್ಳುವುದಿಲ್ಲ.
Затова им говоря с притчи, защото гледат, а не виждат; чуят а не слушат, нито разбират.
14 ೧೪ “ಯೆಶಾಯನು ಹೇಳಿದ ಪ್ರವಾದನೆಯು ಅವರಲ್ಲಿ ನೆರವೇರುತ್ತದೆ. ಅದೇನೆಂದರೆ, ‘ನೀವು ಕೇಳುತ್ತೀರಿ, ಕೇಳಿದರೂ ತಿಳಿದುಕೊಳ್ಳುವುದೇ ಇಲ್ಲ. ನೀವು ನೋಡುತ್ತೀರಿ, ನೋಡಿದರೂ ಗ್ರಹಿಸುವುದೇ ಇಲ್ಲ.
На тях се изпълнява Исаевото пророчество, което казва: “С уши ще чуете, а никак няма да разберете; И с очи ще гледате, а никак няма да видите.
15 ೧೫ ಈ ಜನರ ಹೃದಯವು ಮಂಕಾಯಿತು. ಇವರ ಕಿವಿಗಳು ಮಂದವಾದವು. ಇವರು ಕಣ್ಣು ಮುಚ್ಚಿಕೊಂಡಿದ್ದಾರೆ. ತಾವು ಕಣ್ಣಿನಿಂದ ಕಂಡು ಕಿವಿಯಿಂದ ಕೇಳಿ, ಹೃದಯದಿಂದ ತಿಳಿದು ನನ್ನ ಕಡೆಗೆ ತಿರುಗಿಕೊಂಡು ನನ್ನಿಂದ ಸ್ವಸ್ಥತೆ ಹೊಂದಬಾರದೆಂದು ನಿರ್ಧಾರ ಮಾಡಿಕೊಂಡಿದ್ದಾರೆ’” ಎಂಬುದೇ.
Защото сърцето на тия люде е задебеляло. И с ушите си тежко чуват, И очите си склопиха; Да не би да видят с очите си, И да чуят с ушите си, И да разберат със сърцето си, И да се обърнат, И Аз да ги изцеля”.
16 ೧೬ “ಆದರೆ ನೀವು ಧನ್ಯರು ಏಕೆಂದರೆನಿಮ್ಮ ಕಣ್ಣುಗಳು ಕಾಣುತ್ತವೆ, ನಿಮ್ಮ ಕಿವಿಗಳು ಕೇಳುತ್ತವೆ.
А вашите очи са блажени, защото виждат, и ушите ви, защото чуват.
17 ೧೭ ನಿಮಗೆ ಸತ್ಯವಾಗಿ ಹೇಳುತ್ತೇನೆ. ನೀವು ನೋಡುತ್ತಿರುವ ಕಾರ್ಯಗಳನ್ನು ಬಹು ಮಂದಿ ಪ್ರವಾದಿಗಳೂ, ನೀತಿವಂತರೂ ನೋಡಬೇಕೆಂದು ಅಪೇಕ್ಷಿಸಿದರೂ ನೋಡಲಾಗಲಿಲ್ಲ. ನೀವು ಕೇಳುತ್ತಿರುವ ಸಂಗತಿಗಳನ್ನು ಅವರು ಕೇಳಬೇಕೆಂದು ಅಪೇಕ್ಷಿಸಿದರೂ ಕೇಳಲಾಗಲಿಲ್ಲ.
Защото истина ви казвам, че мнозина пророци и праведници са желали да видят това, което вие виждате, но не видяха, и да чуят това, което вие чувате, но не чуха.
18 ೧೮ “ಬಿತ್ತುವವನ ವಿಷಯವಾದ ಸಾಮ್ಯದ ಅರ್ಥವನ್ನು ಕೇಳಿರಿ.
Вие, прочее, чуйте какво значи притчата за сеяча.
19 ೧೯ ಯಾವನಾದರೂ ಪರಲೋಕ ರಾಜ್ಯದ ವಾಕ್ಯವನ್ನು ಕೇಳಿ ತಿಳಿದುಕೊಳ್ಳದೆ ಇದ್ದರೆದುಷ್ಟನು ಬಂದು ಆತನ ಹೃದಯದಲ್ಲಿ ಬಿತ್ತಿದ್ದನ್ನು ತೆಗೆದು ಹಾಕುತ್ತಾನೆ. ಇವನೇ ಬೀಜ ಬಿದ್ದ ದಾರಿಯ ಮಗ್ಗುಲಾಗಿರುವನು.
При всекиго, който чуе словото на царството и не го разбира, дохожда лукавият и грабва посяното в сърцето му; той е посяното край пътя.
20 ೨೦ ಬಂಡೆಯ ನೆಲದಲ್ಲಿ ಬಿತ್ತಲ್ಪಟ್ಟವನು ಯಾರೆಂದರೆ, ವಾಕ್ಯವನ್ನು ಕೇಳಿದ ಕೂಡಲೆ ಸಂತೋಷದಿಂದ ಅದನ್ನು ಸ್ವೀಕರಿಸಿದರೂ,
А посяното на канаристите места е оня, който чуе словото и веднага с радост го приема;
21 ೨೧ ತನಗೆ ಬೇರಿಲ್ಲದ ಕಾರಣ ಇವನು ಸ್ವಲ್ಪ ಕಾಲ ಮಾತ್ರವೇ ಇದ್ದು ಆ ವಾಕ್ಯದ ನಿಮಿತ್ತವಾಗಿ ಸಂಕಟವಾಗಲಿ ಹಿಂಸೆಯಾಗಲಿ ಬಂದರೆ ಕೂಡಲೆ ಎಡವಿ ಬೀಳುತ್ತಾನೆ.
корен, обаче, няма в себе си, но е привременен; и когато настане напаст или гонение поради словото, на часа се съблазнява.
22 ೨೨ ಮುಳ್ಳುಗಿಡಗಳ ನೆಲದಲ್ಲಿ ಬಿತ್ತಲ್ಪಟ್ಟಂಥವನು ಯಾರೆಂದರೆ, ವಾಕ್ಯವನ್ನು ಕೇಳಿದಾಗ್ಯೂ ಪ್ರಪಂಚದ ಚಿಂತೆಯೂ, ಐಶ್ವರ್ಯದ ಮೋಸತನವೂ ಆ ವಾಕ್ಯವನ್ನು ಅಡಗಿಸಿಬಿಡುವುದರಿಂದ ಫಲವನ್ನು ಕೊಡದೇ ಇರುತ್ತಾನೆ. (aiōn g165)
А посяното между тръните е оня, който чува словото; но светските грижи и примамката на богатството заглушават словото, и той става безплоден. (aiōn g165)
23 ೨೩ ಒಳ್ಳೆಯ ಮಣ್ಣಿನಲ್ಲಿ ಬಿತ್ತಲ್ಪಟ್ಟಂಥವನು ಯಾರೆಂದರೆ, ವಾಕ್ಯವನ್ನು ಕೇಳಿ ತಿಳಿದುಕೊಂಡು ಫಲವಂತನಾಗಿ ನೂರರಷ್ಟಾಗಲಿ, ಅರವತ್ತರಷ್ಟಾಗಲಿ, ಮೂವತ್ತರಷ್ಟಾಗಲಿ ಫಲವನ್ನು ಕೊಡುವವನೇ” ಎಂದು ಹೇಳಿದನು.
А посяното на добра земя е оня, който чуе словото и го разбира, който и дава плод, и принася кой стократно, кой шестдесет, кой тридесет.
24 ೨೪ ಯೇಸು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದನು. ಅದೇನೆಂದರೆ, “ಪರಲೋಕ ರಾಜ್ಯವು ಒಳ್ಳೆಯ ಬೀಜವನ್ನು ತನ್ನ ಹೊಲದಲ್ಲಿ ಬಿತ್ತಿದ ಒಬ್ಬ ಮನುಷ್ಯನಿಗೆ ಹೋಲಿಕೆಯಾಗಿದೆ.
Друга притча им предложи, като каза: Небесното царство се уприличава на човек, който е посял добро семе на нивата си;
25 ೨೫ ಆದರೆ ಜನರು ನಿದ್ರೆ ಮಾಡುವ ಸಮಯದಲ್ಲಿ ಅವನ ವೈರಿಯು ಬಂದು ಗೋದಿಯ ನಡುವೆ ಕಳೆಯನ್ನು ಬಿತ್ತಿ ಹೋದನು.
но, когато спяха човеците, неприятелят му дойде и пося плевели между житото, и си отиде.
26 ೨೬ ಗೋದಿಯು ಬೆಳೆದು ಫಲ ಬಿಟ್ಟಾಗ ಕಳೆಯು ಸಹ ಕಾಣ ಬಂದಿತು.
А когато поникна стволът и завърза плод, тогава се появиха и плевелите.
27 ೨೭ ಆಗ ಯಜಮಾನನ ಆಳುಗಳು ಅವನ ಬಳಿಗೆ ಬಂದು, ‘ಅಯ್ಯಾ ನೀನು ನಿನ್ನ ಹೊಲದಲ್ಲಿ ಒಳ್ಳೆಯ ಬೀಜವನ್ನು ಬಿತ್ತಿದ್ದಿಯಲ್ಲಾ ಕಳೆ ಎಲ್ಲಿಂದ ಬಂದಿತು?’ ಎಂದು ಕೇಳಿದರು.
А слугите на домакина дойдоха и му казаха: Господине, не пося ли добро семе на нивата си? Тогава откъде са плевелите?
28 ೨೮ ಅದಕ್ಕೆ ಅವನು, ‘ಇದು ವೈರಿ ಮಾಡಿದ ಕೆಲಸ’ ಎಂದು ಹೇಳಿದನು, ಅದಕ್ಕೆ ಆಳುಗಳು ಅವನಿಗೆ, ‘ಹಾಗಾದರೆ ನಾವು ಹೋಗಿ ಅದನ್ನು ಕಿತ್ತುಹಾಕುವುದು ನಿಮಗೆ ಇಷ್ಟವಿದೆಯೋ?’ ಎಂದು ಕೇಳಿದರು.
Той им каза: Някой неприятел е сторил това. А слугите му казаха: Като е тъй искаш ли да идем да го оплевим?
29 ೨೯ ಅವರಿಗೆ ಅವನು, ‘ಬೇಡ, ಕಳೆಯನ್ನು ಕೀಳುವಾಗ ಅದರ ಸಂಗಡ ಗೋದಿಯನ್ನೆಲ್ಲಾದರೂ ಕಿತ್ತೀರಿ.
А той каза: Не искам; да не би, като плевите плевелите, да изскубете заедно с тях и житото.
30 ೩೦ ಸುಗ್ಗಿ ಕಾಲದ ತನಕ ಎರಡೂ ಒಟ್ಟಿಗೆ ಬೆಳೆಯಲಿ. ಸುಗ್ಗಿ ಕಾಲದಲ್ಲಿ ನಾನು ಕೊಯ್ಯುವವರಿಗೆ, ಮೊದಲು ಕಳೆಯನ್ನು ಕಿತ್ತು ತೆಗೆದು ಹೊರೆಕಟ್ಟಿ ಅದನ್ನು ಸುಡುವುದಕ್ಕೆ ಹಾಕಿ, ಗೋದಿಯನ್ನು ಕೂಡಿಸಿ ನನ್ನ ಕಣಜಕ್ಕೆ ತುಂಬಿರಿ ಎಂದು ಹೇಳುವೆನು’” ಅಂದನು.
Оставете да растат и двете заедно до жетва; а във време на жетва ще река на жетварите: Съберете първо плевелите, и вържете ги на снопове за изгаряне, а житото приберете в житницата ми.
31 ೩೧ ಯೇಸು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದನು. ಅದೇನೆಂದರೆ, “ಪರಲೋಕರಾಜ್ಯವು ಸಾಸಿವೆ ಕಾಳಿಗೆ ಹೋಲಿಕೆಯಾಗಿದೆ. ಒಬ್ಬ ಮನುಷ್ಯನು ಅದನ್ನು ತೆಗೆದುಕೊಂಡು ಹೋಗಿ ತನ್ನ ಹೊಲದಲ್ಲಿ ಬಿತ್ತಿದನು.
Друга притча им предложи, казвайки: Небесното царство прилича на синапово зърно, което човек взе и го пося на нивата си;
32 ೩೨ ಅದು ಎಲ್ಲಾ ಬೀಜಗಳಿಗಿಂತಲೂ ಸಣ್ಣದಾಗಿದೆ. ಆದರೂ ಬೆಳೆದ ಮೇಲೆ ಎಲ್ಲಾ ಸಸ್ಯಗಳಿಗಿಂತ ದೊಡ್ಡದಾಗಿ ಮರವಾಗುತ್ತದೆ. ಆಕಾಶದಲ್ಲಿ ಹಾರಾಡುವ ಪಕ್ಷಿಗಳು ಬಂದು ಅದರ ಕೊಂಬೆಗಳಲ್ಲಿ ಗೂಡು ಕಟ್ಟಿ ವಾಸ ಮಾಡುತ್ತವೆ” ಎಂದು ಹೇಳಿದನು.
което наистина е по-малко от всичките семена, но, когато порасте, е по-голямо от злаковете, и става дърво, така щото небесните птици дохождат и се подслоняват по клончетата му.
33 ೩೩ ಆತನು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದನು. ಅದೇನೆಂದರೆ, “ಪರಲೋಕ ರಾಜ್ಯವು ಹುಳಿಹಿಟ್ಟಿಗೆ ಹೋಲಿಕೆಯಾಗಿದೆ. ಅದನ್ನು ಒಬ್ಬ ಸ್ತ್ರೀ ತೆಗೆದುಕೊಂಡು ಮೂರು ಸೇರು ಹಿಟ್ಟಿನಲ್ಲಿ ಕಲಸಿಡಲು ಆ ಹಿಟ್ಟೆಲ್ಲಾ ಹುಳಿಯಾಯಿತು.”
Друга притча им каза: Небесното царство прилича на квас, който една жена взе и замеси в три мери брашно, докле вкисна всичкото.
34 ೩೪ ಯೇಸು ಈ ಸಂಗತಿಗಳನ್ನೆಲ್ಲಾ ಜನರ ಗುಂಪುಗಳಿಗೆ ಸಾಮ್ಯರೂಪವಾಗಿ ಹೇಳಿದನು. ಸಾಮ್ಯವಿಲ್ಲದೆ ಏನನ್ನೂ ಹೇಳಲಿಲ್ಲ.
Всичко това Исус изказа на народа с притчи, и без притчи не им говореше;
35 ೩೫ ಹೀಗೆ, “ನಾನು ಬಾಯಿದೆರೆದು ಸಾಮ್ಯರೂಪವಾಗಿ ಉಪದೇಶಿಸುವೆನು; ಲೋಕದ ಆರಂಭದಿಂದ ಮರೆಯಾಗಿದ್ದವುಗಳನ್ನು ಗೋಚರಪಡಿಸುವೆನು” ಎಂದು ಪ್ರವಾದಿಯ ಮುಖಾಂತರ ನುಡಿದ ಮಾತು ನೆರವೇರಿತು.
за да се изпълни реченото чрез пророка, който казва: “Ще отворя устата Си в притчи; Ще изкажа скритото още от създанието на света”.
36 ೩೬ ಅನಂತರ ಯೇಸು ಜನರ ಗುಂಪನ್ನು ಬಿಟ್ಟು ಮನೆಯೊಳಗೆ ಹೋದನು. ಆಗ ಆತನ ಶಿಷ್ಯರು ಆತನ ಬಳಿಗೆ ಬಂದು, ಹೊಲದ ಕಳೆಯ ಸಾಮ್ಯದ ಅರ್ಥವನ್ನು ನಮಗೆ ವಿವರಿಸು ಅಂದರು.
Тогава Той остави народа и дойде вкъщи. И учениците Му се приближиха при Него и казаха: Обясни ни притчата за плевелите на нивата.
37 ೩೭ ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಹೇಳಿದ್ದೇನೆಂದರೆ, “ಒಳ್ಳೆಯ ಬೀಜವನ್ನು ಬಿತ್ತುವವನು ಮನುಷ್ಯಕುಮಾರನು.
А в отговор Той каза: Сеячът на доброто семе е Човешкият Син;
38 ೩೮ ಹೊಲವೆಂದರೆ ಈ ಲೋಕ. ಒಳ್ಳೆಯ ಬೀಜವೆಂದರೆರಾಜ್ಯದ ಮಕ್ಕಳು.
нивата е светът; доброто семе, това са чадата на царството; а плевелите са чадата на лукавия;
39 ೩೯ ಕಳೆಯೆಂದರೆ ದುಷ್ಟನ ಮಕ್ಕಳು. ಅದನ್ನು ಬಿತ್ತುವ ವೈರಿ ಎಂದರೆ ಸೈತಾನನು. ಸುಗ್ಗಿಯ ಕಾಲವೆಂದರೆ ಯುಗದ ಸಮಾಪ್ತಿ. ಕೊಯ್ಯುವವರು ಅಂದರೆ ದೇವದೂತರು. (aiōn g165)
неприятелят, който ги пося, е дяволът; жетвата е свършекът на века; а жетварите са ангели. (aiōn g165)
40 ೪೦ ಹೀಗಿರಲಾಗಿ ಹೇಗೆ ಕಳೆಯನ್ನು ಆರಿಸಿ ತೆಗೆದು ಸುಟ್ಟುಬಿಡುತ್ತಾರೋ ಹಾಗೆಯೇ ಯುಗದ ಸಮಾಪ್ತಿಯಲ್ಲಿ ಸಂಭವಿಸುವುದು. (aiōn g165)
И тъй, както събират плевелите и ги изгарят в огън, така ще бъде и при свършека на века. (aiōn g165)
41 ೪೧ ಮನುಷ್ಯಕುಮಾರನು ತನ್ನ ದೂತರನ್ನು ಕಳುಹಿಸುವನು. ಅವರು ಆತನ ರಾಜ್ಯದೊಳಗಿಂದ ಪಾಪಕ್ಕೆ ಕಾರಣವಾದವರೆಲ್ಲರನ್ನೂ ಅಧರ್ಮಿಗಳನ್ನೂ ಕೂಡಿಸಿ ಬೆಂಕಿ ಕೊಂಡದಲ್ಲಿ ಹಾಕುವರು.
Човешкият Син ще изпрати ангелите Си, които ще съберат от царството Му всичко що съблазнява, и ония, които вършат беззаконие,
42 ೪೨ ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು
и ще ги хвърлят в огнената пещ; там ще бъде плач и скърцане със зъби.
43 ೪೩ ಆಗ ನೀತಿವಂತರು ತಮ್ಮ ತಂದೆಯ ರಾಜ್ಯದಲ್ಲಿ ಸೂರ್ಯನಂತೆ ಪ್ರಕಾಶಿಸುವರು. ಕೇಳುವುದ್ದಕ್ಕೆ ಕಿವಿಗಳುಳ್ಳವನು ಕೇಳಿಸಿಕೊಳ್ಳಲಿ ಅಂದನು.
Тогава праведните ще блеснат като слънцето в царството на Отца Си. Който има уши [да слуша], нека слуша.
44 ೪೪ “ಪರಲೋಕ ರಾಜ್ಯವು ಹೊಲದಲ್ಲಿ ಮುಚ್ಚಿಟ್ಟ ನಿಧಿಗೆ ಹೋಲಿಕೆಯಾಗಿದೆ. ಒಬ್ಬನು ಅದನ್ನು ಕಂಡುಕೊಂಡು ಮುಚ್ಚಿಟ್ಟು. ತನಗಾದ ಸಂತೋಷದಿಂದ ಹೊರಟುಹೋಗಿ ತನಗಿದ್ದದ್ದನ್ನೆಲ್ಲಾ ಮಾರಿ ಆ ಹೊಲವನ್ನು ಕೊಂಡುಕೊಂಡನು.
Небесното царство прилича на имане скрито в нива, което, като го намери човек, скрива го, и в радостта си отива, продава всичко що има, и купува оная нива.
45 ೪೫ ಮತ್ತು ಪರಲೋಕ ರಾಜ್ಯವು ಉತ್ತಮವಾದ ಮುತ್ತುಗಳನ್ನು ಹುಡುಕುವ ವ್ಯಾಪಾರಸ್ಥನಿಗೆ ಹೋಲಿಕೆಯಾಗಿದೆ.
Небесното царство прилича още на търговец, който търсеше хубави бисери,
46 ೪೬ ಅವನು ಬಹು ಬೆಲೆಯುಳ್ಳ ಒಂದು ಮುತ್ತನ್ನು ಕಂಡುಕೊಂಡು ಹೊರಟುಹೋಗಿ ತನಗಿದ್ದದ್ದನ್ನೆಲ್ಲಾ ಮಾರಿ ಬಂದು ಅದನ್ನು ಕೊಂಡುಕೊಂಡನು.
и, като намери един скъпоценен бисер, отиде, продаде всичко що имаше и го купи.
47 ೪೭ “ಪರಲೋಕ ರಾಜ್ಯವು ಸಮುದ್ರದಲ್ಲಿ ಎಲ್ಲಾ ತರವಾದ ಮೀನುಗಳನ್ನು ಹಿಡಿಯುವ ಒಂದು ಬಲೆಗೆ ಹೋಲಿಕೆಯಾಗಿದೆ.
Небесното царство прилича още на мрежа, хвърлена в езерото, която събира риби от всякакъв вид,
48 ೪೮ ಅದು ತುಂಬಿದ ಮೇಲೆ ಬೆಸ್ತರು ಅದನ್ನು ದಡಕ್ಕೆ ಎಳೆದುತಂದು ಕುಳಿತುಕೊಂಡು ಒಳ್ಳೆಯ ಮೀನುಗಳನ್ನು ಪುಟ್ಟಿಗಳಲ್ಲಿ ತುಂಬಿಕೊಂಡು ಕೆಟ್ಟ ಮೀನುಗಳನ್ನು ಬಿಸಾಡಿಬಿಡುವರು.
и, като се напълни изтеглиха я на брега, седнаха и прибраха добрите в съдове, а лошите изхвърлиха.
49 ೪೯ ಹಾಗೆಯೇ ಯುಗದ ಸಮಾಪ್ತಿಯಲ್ಲಿ ಆಗುವುದು. ದೇವದೂತರು ಹೊರಟು ಬಂದು ನೀತಿವಂತರೊಳಗಿಂದ ಕೆಟ್ಟವರನ್ನು ಬೇರೆ ಮಾಡಿ ಅವರನ್ನು ಬೆಂಕಿಯ ಕೊಂಡದಲ್ಲಿ ಹಾಕುವರು. (aiōn g165)
Така ще бъде и при свършека на века; ангелите ще излязат и ща отлъчат нечестивите измежду праведните, (aiōn g165)
50 ೫೦ ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು.
и ще ги хвърлят в огнената пещ; там ще бъде плач и скърцане със зъби,
51 ೫೧ “ಈ ಎಲ್ಲಾ ಸಂಗತಿಗಳು ನಿಮಗೆ ಅರ್ಥವಾಯಿತೋ” ಎಂದು ಕೇಳಲು, ಶಿಷ್ಯರು, “ಅರ್ಥವಾಯಿತು” ಅಂದರು.
[Исус им казва]: Разбрахте ли всичко това? Те Му казват: Разбрахме.
52 ೫೨ ಆಗ ಆತನು ಅವರಿಗೆ, “ಹೀಗಿರಲಾಗಿ ಪರಲೋಕ ರಾಜ್ಯದ ವಿಷಯವಾಗಿ ಉಪದೇಶಹೊಂದಿ ಶಿಕ್ಷಿತನಾದ ಪ್ರತಿಯೊಬ್ಬ ಶಾಸ್ತ್ರೋಪದೇಶಕನು, ತನ್ನ ಬೊಕ್ಕಸದೊಳಗಿನಿಂದ ಹೊಸ ವಸ್ತುಗಳನ್ನೂ, ಹಳೆಯ ವಸ್ತುಗಳನ್ನೂ ಹೊರಗೆ ತೆಗೆಯುವಂಥ ಮನೆ ಯಜಮಾನನಿಗೆ ಹೋಲಿಕೆಯಾಗಿದ್ದಾನೆ” ಎಂದು ಹೇಳಿದನು.
А Той им рече: Затова, всеки книжник, който е учил за небесното царство, прилича на домакин, който изважда от съкровището си ново и старо.
53 ೫೩ ಯೇಸು ಈ ಸಾಮ್ಯಗಳನ್ನು ಹೇಳಿ ಮುಗಿಸಿದ ಮೇಲೆ ಅಲ್ಲಿಂದ ಹೊರಟು ಹೋದನು.
Тогава Исус, когато свърши тия притчи замина си оттам.
54 ೫೪ ತರುವಾಯ ಆತನು ತನ್ನ ಸ್ವಂತ ಊರಿಗೆ ಬಂದು ಅವರ ಸಭಾಮಂದಿರದಲ್ಲಿ ಜನರಿಗೆ ಉಪದೇಶಮಾಡುತ್ತಿದ್ದನು. ಅವರು ಅದನ್ನು ಕೇಳಿ ಆಶ್ಚರ್ಯ ಪಟ್ಟು, “ಇವನಿಗೆ ಈ ಜ್ಞಾನವೂ ಈ ಮಹತ್ಕಾರ್ಯಗಳೂ ಎಲ್ಲಿಂದ ಬಂದಿದ್ದಾವು?
И като дойде в родината Си, поучаваше ги в синагогите им, така щото те се чудеха и думаха: От къде са на Тогова тая мъдрост и и тия велики дела?
55 ೫೫ ಇವನು ಆ ಬಡಗಿಯ ಮಗನಲ್ಲವೇ? ಇವನ ತಾಯಿ ಮರಿಯಳೆಂಬುವವಳಲ್ಲವೇ? ಯಾಕೋಬ, ಯೋಸೇಫ, ಸೀಮೋನ, ಯೂದ ಇವರು ಇವನ ತಮ್ಮಂದಿರಲ್ಲವೇ?
Не е ли Тоя син на дърводелеца? Майка Му не казва ли се Мария, и братята Му Яков и Йосиф, Симон и Юда?
56 ೫೬ ಇವನ ತಂಗಿಯರೆಲ್ಲರೂ ನಮ್ಮಲ್ಲಿ ಇದ್ದಾರಲ್ಲವೇ? ಹಾಗಾದರೆ ಇವೆಲ್ಲವೂ ಇವನಿಗೆ ಎಲ್ಲಿಂದ ಬಂದಿದ್ದಾವು?” ಎಂದು ಅಂದುಕೊಂಡು ಆತನ ವಿಷಯದಲ್ಲಿ ತಿರಸ್ಕಾರವುಳ್ಳವರಾದರು.
И сестрите Му не са ли всички при нас? От къде е, прочее, на този всичко това?
57 ೫೭ ಆದರೆ ಯೇಸುವು ಅವರಿಗೆ “ಪ್ರವಾದಿಯು ಬೇರೆ ಎಲ್ಲಿದ್ದರೂ ಅವನಿಗೆ ಗೌರವ ಉಂಟು. ಆದರೆ ಸ್ವದೇಶದಲ್ಲಿಯೂ ಸ್ವಂತ ಮನೆಯಲ್ಲಿಯೂ ಗೌರವ ಇರುವುದಿಲ್ಲ” ಅಂದನು.
И съблазняваха се в Него. А Исус им рече: Никой пророк не е без почит, освен в своята родина и в своя дом.
58 ೫೮ ಅವರ ಅಪನಂಬಿಕೆಯ ನಿಮಿತ್ತ ಆತನು ಅಲ್ಲಿ ಹೆಚ್ಚು ಮಹತ್ಕಾರ್ಯಗಳನ್ನು ಮಾಡಲಿಲ್ಲ.
И не извърши там много велики дела, поради неверието им.

< ಮತ್ತಾಯನು 13 >