< ಮತ್ತಾಯನು 14 >
1 ೧ ಆ ಕಾಲದಲ್ಲಿ ಉಪರಾಜನಾದ ಹೆರೋದನು ಯೇಸುವಿನ ಸುದ್ದಿಯನ್ನು ಕೇಳಿ,
He wode Galiila aysiya Heroodisi Yesuusabaa si7is.
2 ೨ ತನ್ನ ಸೇವಕರಿಗೆ, “ಇವನು ಸ್ನಾನಿಕ ಯೋಹಾನನೇ; ಸತ್ತವರೊಳಗಿಂದ ಎದ್ದು ಬಂದಿದ್ದಾನೆ. ಆದಕಾರಣ ಮಹತ್ಕಾರ್ಯಗಳನ್ನು ನಡಿಸುವ ಶಕ್ತಿಗಳು ಅವನಲ್ಲಿ ಇದೆ” ಎಂದು ಹೇಳಿದನು.
Ba aylletakko, “Hayssi Xammaqiya Yohaannisa; I hayqoppe denddis. Yaanida gisho ha ubbaa malaatata I oothees” yaagis.
3 ೩ ಹೆರೋದನು ತನ್ನ ಅಣ್ಣನಾದ ಫಿಲಿಪ್ಪನ ಹೆಂಡತಿಯಾದ ಹೆರೋದ್ಯಳ ನಿಮಿತ್ತ ಯೋಹಾನನನ್ನು ಹಿಡಿದು ಕಟ್ಟಿಸಿ ಸೆರೆಮನೆಯಲ್ಲಿ ಹಾಕಿಸಿದ್ದನು.
I hessa giday Heroodisi ba ishaa Filiphphoosa machche Heerodiyadi gaason Yohaannisa qasho keethi gelssida gishossa.
4 ೪ ಯೋಹಾನನು ಹೆರೋದನಿಗೆ “ನೀನು ಇವಳನ್ನು ಹೆಂಡತಿಯಾಗಿ ಇಟ್ಟುಕೊಂಡಿರುವುದು ನ್ಯಾಯವಲ್ಲವೆಂದು” ಹೇಳುತ್ತಿದ್ದನು.
Yohaannisi Heroodisa, “Ne iyo ekkanaw woga gidenna” yaagis.
5 ೫ ಹೆರೋದನು ಅವನನ್ನು ಕೊಲ್ಲಿಸಬೇಕೆಂದಿದ್ದರೂ ಜನರಿಗೆ ಭಯಪಟ್ಟನು, ಏಕೆಂದರೆ ಅವರು ಅವನನ್ನು ಪ್ರವಾದಿಯೆಂದು ಎಣಿಸಿದ್ದರು.
Heroodisi Yohaannisa wodhanaw koyis, shin derey Yohaannisa nabe oothidi be7iya gisho yashettis.
6 ೬ ಆದರೆ ಹೆರೋದನ ಹುಟ್ಟಿದ ದಿನದ ಹಬ್ಬವು ನಡೆಯುವಾಗ ಹೆರೋದ್ಯಳ ಮಗಳು ಬಂದಿದ್ದ ಅತಿಥಿಗಳ ಮುಂದೆ ನೃತ್ಯಮಾಡಿ ಹೆರೋದನನ್ನು ಮೆಚ್ಚಿಸಿದಳು.
Heroodisi ba yelettida gallasa bonchchiya wode, Herodiyadi na7iya asaa sinthan yethan durada iya ufayssasu.
7 ೭ ಅವನು ಅವಳಿಗೆ, ನೀನು ಏನು ಕೇಳಿಕೊಂಡರೂ ಕೊಡುತ್ತೇನೆಂದು ಆಣೆಯಿಟ್ಟು ವಾಗ್ದಾನ ಮಾಡಿದನು.
Yaatin, I, “Iya koyaba ubbaa immana gidi” caaqqis.
8 ೮ ಅವಳು ತನ್ನ ತಾಯಿಯ ಪ್ರೇರೇಪಣೆಗೆ ಒಳಗಾಗಿ, “ಸ್ನಾನಿಕ ಯೋಹಾನನ ತಲೆಯನ್ನು ಹರಿವಾಣದಲ್ಲಿ ನನಗೆ ತರಿಸಿಕೊಡು” ಅಂದಳು.
Na7iya ba aaye zoriya si7ada Heerodisakko, “Xammaqiya Yohaannisa huu7iya keren wothada taw imma” yaagasu.
9 ೯ ಆಕೆಯ ಕೋರಿಕೆಯಿಂದ ಅರಸನು ದುಃಖಪಟ್ಟರೂ ತಾನು ಮಾಡಿದ ಆಣೆಯ ನಿಮಿತ್ತವಾಗಿಯೂ, ತನ್ನ ಸಂಗಡ ಊಟಕ್ಕೆ ಕುಳಿತಿದ್ದವರ ನಿಮಿತ್ತವಾಗಿಯೂ ಅದನ್ನು ತಂದುಕೊಡುವುದಕ್ಕೆ ಅಪ್ಪಣೆ ಕೊಟ್ಟನು.
Iya yaagin kawoy qiirottis, shin ba caaquwa gishonne baara de7iya imathata gisho gidi I oyshay polettana mela kiittis.
10 ೧೦ ಅವನು ಆಳುಗಳನ್ನು ಕಳುಹಿಸಿ ಸೆರೆಮನೆಯಲ್ಲಿ ಯೋಹಾನನ ಶಿರಚ್ಛೇದನಮಾಡಿ,
Kawoy ase kiittidi Yohaannisi qasho keethan de7ishin iya qoodhiya goyrisis.
11 ೧೧ ಅವರು ಅವನ ತಲೆಯನ್ನು ಹರಿವಾಣದಲ್ಲಿ ತಂದು ಆ ಹುಡುಗಿಗೆ ಕೊಟ್ಟರು. ಅವಳು ಅದನ್ನು ತನ್ನ ತಾಯಿಯ ಬಳಿಗೆ ತೆಗೆದುಕೊಂಡು ಹೋದಳು.
Huu7iya keren wothi ehidi na7ees immidosona; na7iyakka ekkada ba aayes efasu.
12 ೧೨ ಯೋಹಾನನ ಶಿಷ್ಯರು ಬಂದು ಅವನ ದೇಹವನ್ನು ಹೊತ್ತುಕೊಂಡು ಹೋಗಿ ಹೂಣಿಟ್ಟರು. ಅನಂತರ ಯೇಸುವಿನ ಬಳಿಗೆ ಬಂದು ತಿಳಿಸಿದರು.
Yohaannisa tamaareti yidi iya ahaa efidi moogidosona. Iyappe guye hanidabaa ubbaa bidi Yesuusas odidosona.
13 ೧೩ ಯೇಸು ಅದನ್ನು ಕೇಳಿ ದೋಣಿಯನ್ನು ಹತ್ತಿ ಆ ಸ್ಥಳವನ್ನು ಬಿಟ್ಟು ಅಡವಿಯ ಸ್ಥಳಕ್ಕೆ ಹೋದನು. ಇದನ್ನು ಕೇಳಿದ ಜನರು ಗುಂಪು ಗುಂಪಾಗಿ ತಮ್ಮ ತಮ್ಮ ಪಟ್ಟಣಗಳಿಂದ ಕಾಲುನಡಿಗೆಯಿಂದ ಆತನನ್ನು ಹಿಂಬಾಲಿಸಿದರು.
Yesuusi hanidabaa si7ida wode wogoluwan gelidi he bessaafe issi geemmiya soo barkka bis. Asay hessa si7idi katamatappe denddidi tohon iya kaallidosona.
14 ೧೪ ಆತನು ಅವರಿಗಿಂತ ಮುಂದಾಗಿ ಬಂದು ಬಹು ಜನರ ಗುಂಪನ್ನು ಕಂಡು ಅವರ ಮೇಲೆ ಕನಿಕರಪಟ್ಟು ಅವರಲ್ಲಿದ್ದ ರೋಗಿಗಳನ್ನು ಸ್ವಸ್ಥಮಾಡಿದನು.
Yesuusi wogoluwappe wodhdhidi daro asaa be7idi enttaw qadhettis. Entta giddon de7iya hargganchchota pathis.
15 ೧೫ ಸಂಜೆಯಾದಾಗ ಶಿಷ್ಯರು ಆತನ ಬಳಿಗೆ ಬಂದು, “ಇದು ಅಡವಿಯ ಸ್ಥಳ ಈಗ ಹೊತ್ತು ಮುಳುಗಿಹೋಯಿತು. ಅವರು ಹಳ್ಳಿಗಳಿಗೆ ಹೋಗಿ ತಮಗಾಗಿ ಆಹಾರ ಪದಾರ್ಥಗಳನ್ನು ಕೊಂಡುಕೊಳ್ಳುವಂತೆ ಕಳುಹಿಸಿಕೊಡು” ಎಂದು ಹೇಳಿದರು.
Sa7ay omarssishe biya wode Yesuusa tamaareti iyaakko shiiqidi, “Ha bessay asi baynna bessi, sa7aykka qammis. Yaaniya gisho, heeran de7iya gutata bidi banttaw shammidi maana mela deriya yedda” yaagidosona.
16 ೧೬ ಆದರೆ ಯೇಸು, “ಅವರು ಹೋಗುವ ಅಗತ್ಯವಿಲ್ಲ. ನೀವೇ ಅವರಿಗೆ ಊಟಕ್ಕೆ ಏನಾದರೂ ಕೊಡಿರಿ” ಅಂದನು.
Shin Yesuusi enttako, “Derey moonna baanaw koshshenna; entti maanabaa hintte immite” yaagis.
17 ೧೭ ಅದಕ್ಕವರು, “ಇಲ್ಲಿ ಐದು ರೊಟ್ಟಿ ಎರಡು ಮೀನು ಮಾತ್ರ ಇವೆ” ಅನ್ನಲಾಗಿ,
Entti zaaridi, “Nuus hayssan ichchashu uythaafenne nam77u moloppe hari baawa” yaagidosona.
18 ೧೮ ಆತನು, “ಅವುಗಳನ್ನು ನನಗೆ ತಂದು ಕೊಡಿರಿ” ಅಂದನು.
Ikka, “Ane entta haa ehite” yaagis.
19 ೧೯ ತರುವಾಯ ಜನರ ಗುಂಪಿಗೆ ಹುಲ್ಲಿನ ಮೇಲೆ ಕುಳಿತುಕೊಳ್ಳುವುದಕ್ಕೆ ಹೇಳಿ ಆ ಐದು ರೊಟ್ಟಿ ಎರಡು ಮೀನುಗಳನ್ನು ತೆಗೆದುಕೊಂಡು ಆಕಾಶದ ಕಡೆಗೆ ನೋಡಿ ದೇವರಿಗೆ ಸ್ತೋತ್ರ ಮಾಡಿ ರೊಟ್ಟಿಗಳನ್ನು ಮುರಿದು ಶಿಷ್ಯರಿಗೆ ಕೊಟ್ಟನು. ಶಿಷ್ಯರು ಜನರಿಗೆ ಕೊಟ್ಟರು.
Kaallidikka, derey maatan uttana mela odis. Ichchashu uythaanne nam77u molota ekkidi, salo xeellidi galati simmidi, uythaa menthidi ba tamaaretas immis; entti qassi deriyas immidosona.
20 ೨೦ ಅವರೆಲ್ಲರೂ ಊಟಮಾಡಿ ತೃಪ್ತರಾದರು. ಉಳಿದ ತುಂಡುಗಳನ್ನು ಕೂಡಿಸಲಾಗಿ ಹನ್ನೆರಡು ಪುಟ್ಟಿ ತುಂಬಿತು.
Ubbay midi kallidosona. Yesuusa tamaareti mishin attidayssa tammanne nam77u gayta denthidosona.
21 ೨೧ ಊಟಮಾಡಿದವರು ಹೆಂಗಸರೂ ಮಕ್ಕಳನ್ನು ಬಿಟ್ಟು ಗಂಡಸರೇ ಸುಮಾರು ಐದು ಸಾವಿರವಿದ್ದರು.
Kathaa mida asay maccasaynne nayti attin ichchashu mukulu gidees.
22 ೨೨ ಇದಾದ ಕೂಡಲೆ ಆತನು ತನ್ನ ಶಿಷ್ಯರಿಗೆ ನಾನು ಈ ಜನರ ಗುಂಪುಗಳನ್ನು ಕಳುಹಿಸಿಬಿಡುವಷ್ಟರೊಳಗೆ ನೀವು ದೋಣಿಯನ್ನು ಹತ್ತಿ ನನಗೆ ಮುಂದಾಗಿ ಆಚೇದಡಕ್ಕೆ ಹೋಗಿರಿ ಎಂದು ಒತ್ತಾಯ ಮಾಡಿದನು.
Yesuusi ba tamaareti wogoluwan gelidi baappe sinthattidi abbaafe he finthi pinnana mela kiittidi baw deriya moyzanaw guye attis.
23 ೨೩ ಆತನು ಜನರ ಗುಂಪುಗಳನ್ನು ಕಳುಹಿಸಿಬಿಟ್ಟ ಮೇಲೆ ಪ್ರಾರ್ಥನೆ ಮಾಡುವುದಕ್ಕಾಗಿ ಏಕಾಂಗಿಯಾಗಿ ಬೆಟ್ಟವನ್ನು ಹತ್ತಿದನು. ಮತ್ತು ಸಂಜೆಯಾದಾಗ ಆತನೊಬ್ಬನೇ ಅಲ್ಲಿ ಇದ್ದನು.
Deriya moyzi simmidi barkka woossanaw issi deriya bolla keyis. Sa7ay qamminkka I barkka yan gam77is.
24 ೨೪ ಆದರೆ ದೋಣಿಯು ಸಮುದ್ರದ ನಡುವೆಯಿತ್ತು, ಎದುರು ಗಾಳಿ ಬೀಸುತ್ತಿದ್ದುದರಿಂದ ಅಲೆಗಳ ಬಡಿತಕ್ಕೆ ಸಿಕ್ಕಿ ಹೊಯ್ದಾಡುತ್ತಿತ್ತು.
He wode wogoloy abbaa bolla bishin sintha baggara carkkoy denddin hobbey wogoluwa un77ethis.
25 ೨೫ ರಾತ್ರಿಯ ನಾಲ್ಕನೆಯ ಜಾವದಲ್ಲಿ ಯೇಸು ಸಮುದ್ರದ ಮೇಲೆ ನಡೆಯುತ್ತಾ ಅವರ ಕಡೆಗೆ ಬಂದನು.
Wonttimaatha bolla Yesuusi abbaa bolla hamuttishe ba tamaaretakko yis.
26 ೨೬ ಸಮುದ್ರದ ಮೇಲೆ ನಡೆಯುವ ಆತನನ್ನು ನೋಡಿದ ಶಿಷ್ಯರು “ಭೂತವೆಂದು” ದಿಗಿಲುಬಿದ್ದು ಭಯದಿಂದ ಕೂಗಿದರು.
Iya tamaareti, I abbaa bolla hamuttishe banttako yeyssa be7idi yayyidosona. Enttika, “Hayssi moytille” gidi yayyidi waassidosona.
27 ೨೭ ಕೂಡಲೆ ಯೇಸು ಮಾತನಾಡಿ ಅವರಿಗೆ, “ಧೈರ್ಯವಾಗಿರಿ ನಾನೇ ಭಯಪಡಬೇಡಿರಿ” ಎಂದು ಹೇಳಿದನು.
Shin Yesuusi ellessidi, “Aykkoy baawa! Yayyofite! Tanabay” yaagis.
28 ೨೮ ಅದಕ್ಕೆ ಪೇತ್ರನು, “ಕರ್ತನೇ ನೀನೇ ಆದರೆ ನಾನು ನೀರಿನ ಮೇಲೆ ನಡೆದು ನಿನ್ನ ಬಳಿಗೆ ಬರುವುದಕ್ಕೆ ಅಪ್ಪಣೆ ಕೊಡು” ಅನ್ನಲು,
Phexiroosi iyaakko, “Godaw, nena gidikko, taani haatha bollara hamuttada neekko baana mela tana kiitta” yaagis.
29 ೨೯ ಆತನು, “ಬಾ” ಅಂದನು. ಆಗ ಪೇತ್ರನು ಯೇಸುವಿನ ಬಳಿಗೆ ಹೋಗುವುದಕ್ಕೆ ದೋಣಿಯಿಂದ ಇಳಿದು ನೀರಿನ ಮೇಲೆ ನಡೆದನು.
Yesuusi Phexiroosakko, “Haaya” yaagis. Phexiroosi wogoluwappe wodhdhidi haatha bollara hamuttishe Yesuusakko buussu oykkis.
30 ೩೦ ಆದರೆ ಅವನು ಗಾಳಿಯನ್ನು ನೋಡಿದಾಗ ಭಯಪಟ್ಟು ಮುಳುಗಲಾರಂಭಿಸಿದಾಗ, “ಕರ್ತನೇ, ನನ್ನನ್ನು ಕಾಪಾಡು” ಎಂದು ಕೂಗಿಕೊಂಡನು.
Shin wolqqaama carkkuwa be7idi yayyis. Haathan mitetethi oykkida wode, “Godaw, tana ashsharkkii” yaagidi waassis.
31 ೩೧ ತಕ್ಷಣವೇ ಯೇಸು ಕೈಚಾಚಿ ಅವನನ್ನು ಹಿಡಿದು, “ಅಲ್ಪ ವಿಶ್ವಾಸಿಯೇ ಏಕೆ ಸಂದೇಹ ಪಟ್ಟೆ” ಎಂದು ಹೇಳಿದನು.
Yesuusi ellesidi ba kushiya yeddi iya oykkidi, “Neno, ammanoy paccidaysso ays sidhay” yaagis.
32 ೩೨ ತರುವಾಯ ಅವರು ದೋಣಿಯನ್ನು ಹತ್ತಿದ ಮೇಲೆ ಗಾಳಿ ನಿಂತು ಹೋಯಿತು.
Yesuusaranne Phexiroosara wogoluwan gelida wode carkkoy si7i gis.
33 ೩೩ ಆಗ ದೋಣಿಯಲ್ಲಿದ್ದ ಶಿಷ್ಯರು “ನಿಜವಾಗಿ ನೀನು ದೇವಕುಮಾರನು” ಎಂದು ಹೇಳಿ ಆತನನ್ನು ಆರಾಧಿಸಿದರು.
Wogoluwa giddon de7iya iya tamaareti, “Neeni tumakka Xoossaa Na7a” gidi goynnidosona.
34 ೩೪ ಅವರು ಸಮುದ್ರವನ್ನು ದಾಟಿ ಗೆನೆಜರೇತ್ ಪಟ್ಟಣದ ದಡಕ್ಕೆ ಬಂದರು.
Entti abbaa pinnidi Gensareexe giya biittaa gakkidosona.
35 ೩೫ ಆ ಸ್ಥಳದ ಜನರು ಆತನ ಗುರುತನ್ನು ಹಿಡಿದು ಆ ಸುತ್ತಲಿನ ಸೀಮೆಗೆಲ್ಲಾ ಹೇಳಿ ಕಳುಹಿಸಿದರು ಮತ್ತು ಅವರು ಅಸ್ವಸ್ಥರಾದವರೆಲ್ಲರನ್ನು ಆತನ ಬಳಿಗೆ ಕರೆತಂದರು.
He biittan de7iya asay Yesuusa erida wode bantta heeran de7iya guta ubbaa kiita yedidosona. Asay hargganchchota ubbaa iyaakko ehidosona.
36 ೩೬ ಅವರು ಆತನನ್ನು ನಿನ್ನ ಉಡುಪಿನ ಅಂಚನ್ನಾದರೂ ಮುಟ್ಟಗೊಡಿಸಬೇಕೆಂದು ಬೇಡಿಕೊಂಡರು, ಮತ್ತು ಮುಟ್ಟಿದವರೆಲ್ಲರು ಸ್ವಸ್ಥರಾದರು.
Hargganchchoti iya afila macaraa xalaala bochchana mela woossidosona. Bochchida ubbayka paxidosona.