< ಮತ್ತಾಯನು 15 >

1 ತರುವಾಯ ಯೆರೂಸಲೇಮಿನಿಂದ ಫರಿಸಾಯರೂ, ಶಾಸ್ತ್ರಿಗಳೂ ಯೇಸುವಿನ ಬಳಿಗೆ ಬಂದು,
Siis tulid mõned variserid ja vaimulikud õpetajad Jeruusalemmast Jeesuse juurde ja küsisid temalt:
2 “ನಿನ್ನ ಶಿಷ್ಯರು ಹಿರಿಯರ ಸಂಪ್ರದಾಯವನ್ನು ಏಕೆ ಉಲ್ಲಂಘಿಸುತ್ತಾರೆ? ಅವರು ತಿನ್ನುವಾಗ ತಮ್ಮ ಕೈ ತೊಳೆದುಕೊಳ್ಳುವುದಿಲ್ಲ” ಎಂದು ಕೇಳಿದರು.
„Miks rikuvad sinu jüngrid meie esiisade traditsiooni ega pese enne söömist käsi?“
3 ಅದಕ್ಕೆ ಆತನು ಅವರಿಗೆ ಪ್ರತ್ಯುತ್ತರವಾಗಿ ಹೇಳಿದ್ದೇನೆಂದರೆ, “ನೀವು ಸಹ ನಿಮ್ಮ ಸಂಪ್ರದಾಯದ ನಿಮಿತ್ತವಾಗಿ ದೇವರ ಆಜ್ಞೆಯನ್ನು ಏಕೆ ಉಲ್ಲಂಘಿಸುತ್ತೀರಿ?
„Miks rikute teie oma traditsiooni pärast Jumala käsku?“vastas Jeesus.
4 ಹೇಗೆಂದರೆ‘ತಂದೆತಾಯಿಗಳನ್ನು ಸನ್ಮಾನಿಸಬೇಕೆಂತಲೂತಂದೆಯನ್ನಾಗಲಿ ತಾಯಿಯನ್ನಾಗಲಿ ದೂಷಿಸುವವನು ಸಾಯಲೇಬೇಕೆಂತಲೂ’ ದೇವರು ಹೇಳಿದ್ದಾನೆ.
„Sest Jumal ütles: „Austa oma isa ja ema“ja „Kes oma isa või ema neab, tuleb surma mõista“.
5 ನೀವೋ, ‘ಯಾವನಾದರೂ ತನ್ನ ತಂದೆಯನಾಗಲಿ, ತಾಯಿಯನ್ನಾಗಲಿ, ನೋಡಿ ನಾನು ನಿಮ್ಮ ಸಂರಕ್ಷಣೆಗಾಗಿ ಕೊಡತಕ್ಕದ್ದನ್ನು ದೇವರಿಗೆ ಮುಡಿಪುಮಾಡಿದ್ದೇನೆ’ ಎಂದು ಹೇಳಿದರೆ,
Aga teie ütlete, et kui keegi ütleb oma isale või emale: „Mida iganes sa lootsid minult saada, on nüüd and Jumalale“, siis
6 ಅವನು ‘ತನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕಾಗಿಲ್ಲ’ ಅನ್ನುತ್ತೀರಿ. ಹೀಗೆ ನಿಮ್ಮ ಸಂಪ್ರದಾಯದ ಸಲುವಾಗಿ ದೇವರ ವಾಕ್ಯವನ್ನು ನಿರರ್ಥಕ ಮಾಡಿದ್ದೀರಿ.
ei pea nad oma isa austama. Nii olete tühistanud Jumala sõna oma traditsiooni tõttu.
7 ಕಪಟಿಗಳೇ, ನಿಮ್ಮ ಕುರಿತು ಯೆಶಾಯನು ಸರಿಯಾಗಿ ಪ್ರವಾದಿಸಿ, ಅವನು ಹೇಳಿರುವುದೇನೆಂದರೆ,
Te silmakirjatsejad! Kui hästi kirjeldas teid Jesaja, kui ta prohvetlikult kuulutas:
8 “ಈ ಜನರು ತಮ್ಮ ತುಟಿಗಳಿಂದ ನನ್ನನ್ನು ಸನ್ಮಾನಿಸುತ್ತಾರೆ ಆದರೆ ಅವರ ಹೃದಯವು ನನ್ನಿಂದ ದೂರವಾಗಿದೆ.
„Need inimesed ütlevad, et nad austavad mind, kuid oma mõistuses nad ei hooli minust.
9 ಮನುಷ್ಯರು ಕಲ್ಪಿಸಿದ ಕಟ್ಟಳೆಗಳನ್ನೇ ಅವರು ಉಪದೇಶವಾಗಿ ಬೋಧಿಸುತ್ತಿರುವುದರಿಂದ ನನ್ನನ್ನು ವ್ಯರ್ಥವಾಗಿ ಆರಾಧಿಸುವರು” ಎಂಬುದೇ.
Nende jumalateenistus on mõttetu. See, mida nad õpetavad, on lihtsalt inimeste väljamõeldud nõudmised.““
10 ೧೦ ಆ ಮೇಲೆ ಯೇಸು ಜನರ ಗುಂಪನ್ನು ಹತ್ತಿರಕ್ಕೆ ಕರೆದು ಅವರಿಗೆ, “ಕೇಳಿ ತಿಳಿದುಕೊಳ್ಳಿರಿ,
Ta kutsus rahva enda juurde ja rääkis neile: „Kuulake ja mõistke seda:
11 ೧೧ ಬಾಯೊಳಕ್ಕೆ ಹೋಗುವಂಥದ್ದು ಮನುಷ್ಯನನ್ನು ಅಶುದ್ಧಿಗೊಳಿಸುವುದಿಲ್ಲ. ಬಾಯೊಳಗಿಂದ ಹೊರಗೆ ಬರುವಂಥ ಮಾತು ಮನುಷ್ಯನನ್ನು ಅಶುದ್ಧಗೊಳಿಸುವುದು” ಎಂದು ಹೇಳಿದನು.
see, mis läheb suust sisse, ei rüveta teid. See, mis tuleb suust välja, rüvetab teid.“
12 ೧೨ ಆಗ ಶಿಷ್ಯರು ಬಂದು ಆತನನ್ನು, “ಫರಿಸಾಯರು ಈ ಮಾತನ್ನು ಕೇಳಿ ಬೇಸರಗೊಂಡರೆಂದು ನಿನಗೆ ಗೊತ್ತಾಯಿತೋ” ಎಂದು ಕೇಳಿದರು.
Siis tulid Jeesuse jüngrid tema juurde ja ütlesid: „Sa ikka mõistad ju, et sinu sõnad solvasid varisere.“
13 ೧೩ ಅದಕ್ಕೆ ಆತನು “ಪರಲೋಕದ ನನ್ನ ತಂದೆಯು ನೆಡದೆ ಇರುವ ಗಿಡಗಳನ್ನೆಲ್ಲಾ ಬೇರುಸಹಿತ ಕಿತ್ತುಹಾಕಲಾಗುವುದು.
„Iga taim, mida minu taevane Isa ei ole istutanud, juuritakse välja, “vastas Jeesus.
14 ೧೪ ಅವರನ್ನು ಬಿಡಿರಿ, ಅವರುಕುರುಡರಿಗೆ ದಾರಿ ತೋರಿಸುವವರು ಕುರುಡರ ಹಾಗಿದ್ದಾರೆ. ಕುರುಡನು ಕುರುಡನಿಗೆ ದಾರಿ ತೋರಿಸಿದರೆ ಅವರಿಬ್ಬರೂ ಕುಣಿಯೊಳಗೆ ಬೀಳುವರು” ಅಂದನು.
„Unustage nad ära, nad on pimedad teejuhid. Kui pime juhib teist pimedat, siis kukuvad nad mõlemad auku.“
15 ೧೫ ಆಗ ಪೇತ್ರನು, “ಈ ಸಾಮ್ಯವನ್ನು ನಮಗೆ ವಿವರಿಸಿ ಹೇಳು” ಅಂದನು,
Siis küsis Peetrus: „Räägi meile palun, mida sa selle illustratsiooniga mõtled.“
16 ೧೬ ಅದಕ್ಕೆ ಯೇಸು, “ನೀವೂ ಕೂಡಾ ಇನ್ನೂ ತಿಳಿವಳಿಕೆ ಇಲ್ಲದವರಾಗಿದ್ದೀರಾ?
„Kas te ei ole veel sellest aru saanud?“vastas Jeesus.
17 ೧೭ ಬಾಯೊಳಕ್ಕೆ ಹೋಗುವಂಥದ್ದು ಹೊಟ್ಟೆಯಲ್ಲಿ ಸೇರಿ ವಿಸರ್ಜಿತವಾಗುತ್ತದೆಂದು ನಿಮಗೆ ತಿಳಿಯಲಿಲ್ಲವೋ?
„Kas te ei mõista, et see, mis läheb suu kaudu sisse, läheb seejärel läbi kõhu ja lahkub ihust jäätmetena?
18 ೧೮ ಆದರೆ ಬಾಯೊಳಗಿಂದ ಹೊರ ಬರುವಂಥವುಗಳು ಹೃದಯದಿಂದ ಬರುತ್ತವೆ. ಇವೇ ಮನುಷ್ಯನನ್ನು ಅಶುದ್ಧಿಮಾಡುವವು.
Aga mis tuleb suu kaudu välja, tuleb mõistusest ja see on, mis teid rüvetab.
19 ೧೯ ಏಕೆಂದರೆ ಹೃದಯದಿಂದ ಕೆಟ್ಟ ಆಲೋಚನೆಗಳು, ಕೊಲೆ, ವ್ಯಭಿಚಾರ, ಜಾರತ್ವ, ಕಳ್ಳತನ, ಸುಳ್ಳುಸಾಕ್ಷಿ ಮತ್ತು ದೂಷಣೆಗಳು ಹೊರಟು ಬರುತ್ತವೆ.
Sest mõistusest tuleb kurje mõtteid, mõrva, abielurikkumist, seksuaalset ebamoraalsust, vargust, valetunnistust ja jumalateotust
20 ೨೦ ಇಂಥವುಗಳೇ ಮನುಷ್ಯನನ್ನು ಅಶುದ್ಧಿಗೊಳಿಸುತ್ತವೆ. ಆದರೆ ಕೈ ತೊಳೆದುಕೊಳ್ಳದೆ ಊಟಮಾಡುವುದು ಮನುಷ್ಯನನ್ನು ಅಶುದ್ಧಿಗೊಳಿಸುವುದಿಲ್ಲ” ಅಂದನು.
ning need on, mis teid rüvetavad. Pesemata kätega söömine ei rüveta teid.“
21 ೨೧ ಅನಂತರ ಯೇಸು ಅಲ್ಲಿಂದ ಹೊರಟು ತೂರ್ ಸೀದೋನ್ ಪಟ್ಟಣಗಳ ಪ್ರಾಂತ್ಯಗಳಿಗೆ ಹೋದನು.
Jeesus lahkus ja läks Tüürose ja Siidoni aladele.
22 ೨೨ ಆ ಸೀಮೆಯಿಂದ ಕಾನಾನ್ಯಳಾದ ಸ್ತ್ರೀಯೊಬ್ಬಳು ಹೊರಟು ಬಂದು, “ಕರ್ತನೇ, ದಾವೀದನ ಕುಮಾರನೇ, ನನ್ನ ಮೇಲೆ ಕರುಣೆಯಿಡು, ನನ್ನ ಮಗಳಿಗೆ ದೆವ್ವಹಿಡಿದು ಬಹಳ ಯಾತನೆಪಡುತ್ತಿದ್ದಾಳೆ” ಎಂದು ಕೂಗಿಕೊಂಡಳು.
Üks selle piirkonna kaananlanna tuli karjudes: „Issand, Taaveti poeg! Halasta minu peale, sest mu tütar kannatab hirmsasti, sest teda vaevab kuri vaim!“
23 ೨೩ ಆದರೆ ಆತನು ಆಕೆಗೆ ಏನೂ ಉತ್ತರ ಕೊಡಲಿಲ್ಲ. ಆಗ ಆತನ ಶಿಷ್ಯರು ಬಂದು, “ಅವಳು ನಮ್ಮ ಹಿಂದೆ ಕೂಗಿಕೊಂಡು ಬರುತ್ತಿದ್ದಾಳೆ. ಆಕೆಯನ್ನು ಕಳುಹಿಸಿಬಿಡು” ಎಂದು ಆತನನ್ನು ಬೇಡಿಕೊಂಡರು.
Aga Jeesus ei vastanud üldse. Tema jüngrid tulid ta juurde ja ütlesid: „Käsi tal lõpetada meie järel käimine. Tema karjumine on tõesti häiriv!“
24 ೨೪ ಆದರೆ ಯೇಸು ಹೇಳಿದ್ದೇನೆಂದರೆ “ಕಳೆದುಹೋದ ಕುರಿಗಳಂತಿರುವ ಇಸ್ರಾಯೇಲ್ ಮನೆತನದವರ ಬಳಿಗೇ ಹೊರತು ಮತ್ತಾರ ಬಳಿಗೂ ನಾನು ಕಳುಹಿಸಲ್ಪಟ್ಟವನಲ್ಲ” ಅಂದನು.
„Mind saadeti üksnes Iisraeli soo kadunud lammaste juurde, “ütles Jeesus naisele.
25 ೨೫ ಆಗ ಆಕೆ ಬಂದು ಆತನ ಮುಂದೆ ಅಡ್ಡ ಬಿದ್ದು, “ಕರ್ತನೇ ನನಗೆ ಸಹಾಯಮಾಡು” ಅಂದಳು.
Kuid naine tuli ja põlvitas tema ette ning ütles: „Issand, palun aita mind!“
26 ೨೬ ಅದಕ್ಕಾತನು, “ಮಕ್ಕಳ ರೊಟ್ಟಿಯನ್ನು ತೆಗೆದುಕೊಂಡು ನಾಯಿಮರಿಗಳಿಗೆ ಹಾಕುವುದು ಸರಿಯಲ್ಲ” ಎಂದು ಉತ್ತರಕೊಟ್ಟನು.
„Ei ole õige võtta laste toit ja visata see koertele, “lausus Jeesus talle.
27 ೨೭ ಆಕೆಯು, “ಹೌದು, ಕರ್ತನೇ, ಆದರೆ ನಾಯಿಮರಿಗಳಂತೂ ತಮ್ಮ ಯಜಮಾನನ ಮೇಜಿನಿಂದ ಬೀಳುವ ರೊಟ್ಟಿಯ ತುಂಡುಗಳನ್ನು ತಿನ್ನುತ್ತವಲ್ಲಾ” ಅಂದಳು.
„Jah, Issand, aga isegi koertel lubatakse süüa purukesi, mis nende isanda laualt pudenevad, “vastas naine.
28 ೨೮ ಆಗ ಯೇಸು ಆಕೆಗೆ, “ಸ್ತ್ರೀಯೇ ನಿನ್ನ ನಂಬಿಕೆ ದೊಡ್ಡದು. ನಿನ್ನ ಇಷ್ಟದಂತೆಯೇ ನಿನಗಾಗಲಿ” ಎಂದು ಉತ್ತರಕೊಟ್ಟನು. ಅದೇ ಗಳಿಗೆಯಲ್ಲಿ ಆಕೆಯ ಮಗಳು ಸ್ವಸ್ಥವಾದಳು.
„Sul on suur usk minusse, “kostis Jeesus. „Sinu soov on täidetud!“Ja naise tütar sai jalamaid terveks.
29 ೨೯ ಯೇಸು ಅಲ್ಲಿಂದ ಹೊರಟು ಗಲಿಲಾಯ ಸಮುದ್ರದ ಬಳಿಗೆ ಬಂದನು. ಆಗ ಆತನು ಒಂದು ಬೆಟ್ಟವನ್ನು ಹತ್ತಿ ಕುಳಿತುಕೊಂಡನು.
Jeesus läks tagasi, Galilea merest mööda. Ta suundus lähedal asuvatesse mägedesse, kus istus maha.
30 ೩೦ ಆಗ ಜನರು ದೊಡ್ಡ ಗುಂಪುಗಳಾಗಿ ಆತನ ಬಳಿಗೆ ಬಂದುದಲ್ಲದೆ ಕುಂಟರು, ಕುರುಡರು, ಮೂಕರು, ಕೈಕಾಲಿಲ್ಲದವರು ಈ ಮುಂತಾದ ಅನೇಕರನ್ನು ತಮ್ಮೊಂದಿಗೆ ಕರೆತಂದು ಅವರನ್ನು ಆತನ ಪಾದಗಳ ಬಳಿಯಲ್ಲಿ ಬಿಟ್ಟರು. ಆತನು ಅವರನ್ನು ಸ್ವಸ್ಥಮಾಡಿದನು.
Tohutu rahvamass tuli tema juurde; nad tõid kaasa neid, kes olid lombakad, pimedad, vigased, tummad ja palju neid, kes olid haiged. Rahvas pani nad tema jalge ette maha ja ta tegi nad terveks.
31 ೩೧ ಮೂಕರಾಗಿದ್ದವರು ಮಾತನಾಡುವುದನ್ನೂ ಕೈಕಾಲಿಲ್ಲದವರು ಸ್ವಸ್ಥವಾದದ್ದನ್ನೂ, ಕುಂಟರು ನಡೆದಾಡುವುದನ್ನೂ, ಕುರುಡರು ನೋಡುವುದನ್ನೂ ಜನರು ಕಂಡು ಆಶ್ಚರ್ಯಪಟ್ಟು ಇಸ್ರಾಯೇಲ್ಯರ ದೇವರನ್ನು ಕೊಂಡಾಡಿದರು.
Kõik olid hämmastunud, kui nägid, mis juhtus: kurdid suutsid rääkida, vigased said terveks, jalutud suutsid kõndida ja pimedad näha. Nad ülistasid Iisraeli Jumalat.
32 ೩೨ ಆಗ ಯೇಸು ತನ್ನ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಿಗೆ, “ನಾನು ಈ ಜನರನ್ನು ನೋಡಿ ಕನಿಕರಪಡುತ್ತೇನೆ. ಏಕೆಂದರೆ ಅವರು ಮೂರು ದಿನಗಳಿಂದಲೂ ನನ್ನ ಜೊತೆಯಲ್ಲಿದ್ದಾರೆ. ಅವರಿಗೆ ತಿನ್ನುವುದಕ್ಕೆ ಏನೂ ಇಲ್ಲ. ಅವರನ್ನು ಹಸಿವಿನಿಂದ ಕಳುಹಿಸಿಬಿಡುವುದಕ್ಕೆ ನನಗೆ ಇಷ್ಟವಿಲ್ಲ. ಅವರು ದಾರಿಯಲ್ಲಿ ಬಳಲಿ ಹೋದಾರು” ಎಂದು ಹೇಳಿದನು.
Jeesus kutsus oma jüngrid enda juurde ja ütles neile: „Mul on neist kõigist väga kahju, sest nad on olnud nüüd minu juures kolm päeva ja neil ei ole midagi süüa. Ma ei taha neid näljasena minema saata, et nad koduteel ära ei nõrkeks.“
33 ೩೩ ಶಿಷ್ಯರು ಆತನಿಗೆ, “ಇಷ್ಟು ದೊಡ್ಡ ಜನರ ಗುಂಪನ್ನು ತೃಪ್ತಿಪಡಿಸಲಾಗುವಷ್ಟು ರೊಟ್ಟಿಯು ಈ ಅಡವಿಯಲ್ಲಿ ನಮಗೆ ಎಲ್ಲಿಂದ ಸಿಕ್ಕೀತು?” ಎಂದು ಹೇಳಿದರು.
„Kust me leiaks siin tühermaal piisavalt leiba, et nii suurt rahvahulka ära toita?“pärisid jüngrid.
34 ೩೪ ಅದಕ್ಕೆ ಯೇಸು, “ನಿಮ್ಮಲ್ಲಿ ಎಷ್ಟು ರೊಟ್ಟಿಗಳಿವೆ?” ಎಂದು ಕೇಳಿದ್ದಕ್ಕೆ ಅವರು, “ಏಳು ರೊಟ್ಟಿಗಳಿವೆ ಮತ್ತು ಕೆಲವು ಸಣ್ಣ ಮೀನುಗಳು ಅವೆ” ಅಂದರು.
„Kui palju leibu teil on?“küsis Jeesus. „Seitse, ja mõned väiksed kalad, “vastasid nad.
35 ೩೫ ಆಗ ಆತನು ಜನರ ಗುಂಪಿಗೆ, ನೆಲದ ಮೇಲೆ ಕುಳಿತುಕೊಳ್ಳಿರಿ ಎಂದು ಅಪ್ಪಣೆ ಕೊಟ್ಟನು.
Jeesus käskis rahval maha istuda.
36 ೩೬ ಆತನು ಆ ಏಳು ರೊಟ್ಟಿಗಳನ್ನೂ ಆ ಮೀನುಗಳನ್ನೂ ತೆಗೆದುಕೊಂಡು ದೇವರಿಗೆ ಸ್ತೋತ್ರ ಮಾಡಿ ಅವುಗಳನ್ನು ಮುರಿದು ಶಿಷ್ಯರಿಗೆ ಕೊಟ್ಟನು. ಶಿಷ್ಯರು ಜನರಿಗೆ ಹಂಚಿಕೊಟ್ಟರು.
Ta võttis seitse leiba ja kalad ning pärast toidu õnnistamist tegi selle tükkideks ja andis jüngritele ja jüngrid andsid selle rahvale.
37 ೩೭ ಆ ಜನರೆಲ್ಲರೂ ಊಟಮಾಡಿ ತೃಪ್ತರಾದರು. ಉಳಿದ ತುಂಡುಗಳನ್ನು ಕೂಡಿಸಲಾಗಿ ಏಳು ಪುಟ್ಟಿಗಳು ತುಂಬಿದವು.
Kõik sõid, kuni kõht sai täis, ja nad kogusid jäägid kokku, neid sai seitse korvitäit.
38 ೩೮ ಊಟಮಾಡಿದವರು ಹೆಂಗಸರು ಮಕ್ಕಳು ಅಲ್ಲದೆ ಗಂಡಸರೇ ನಾಲ್ಕು ಸಾವಿರವಿದ್ದರು.
Neli tuhat meest sõi toitu, peale selle naised ja lapsed.
39 ೩೯ ತರುವಾಯ ಆತನು ಆ ಜನರ ಗುಂಪುಗಳನ್ನು ಕಳುಹಿಸಿ ಬಿಟ್ಟು ದೋಣಿಯನ್ನು ಹತ್ತಿ ಮಗದಾನ್ ಸೀಮೆಗೆ ಹೋದನು.
Seejärel saatis ta rahva minema, astus paati ja läks Magadani piirkonda.

< ಮತ್ತಾಯನು 15 >