< ಮತ್ತಾಯನು 16 >
1 ೧ ತರುವಾಯ ಫರಿಸಾಯರು ಸದ್ದುಕಾಯರು ಬಂದು ಯೇಸುವನ್ನು ಪರೀಕ್ಷಿಸುವುದಕ್ಕಾಗಿ, ನೀನು ಪರಲೋಕದಿಂದ ಒಂದು ಸೂಚಕಕಾರ್ಯವನ್ನು ನಮಗೆ ತೋರಿಸಿಕೊಡಬೇಕೆಂದು ಕೇಳಿದರು.
VaFarisi neVaSadhusi ndokuuya vachimuidza, vakamukumbira kuti avaratidze chiratidzo chinobva kudenga.
2 ೨ ಆತನು ಅವರಿಗೆ, “‘ನೀವು ಸಂಜೆಯಾದಾಗ ಆಕಾಶವು ಕೆಂಪಾಗಿದ್ದರೆ ಹಿತಕರವಾದ ವಾತಾವರಣವಿರುತ್ತದೆ’ ಅನ್ನುತ್ತೀರಿ.
Asi wakapindura akati kwavari: Kana ava madekwani munoti: Kunze kwakanaka; nokuti denga rakatsvuka.
3 ೩ ಬೆಳಗ್ಗೆ, ‘ಆಕಾಶವು ಮೋಡ ಕವಿದುಕೊಂಡು ಕೆಂಪಾಗಿದ್ದರೆ ಈಹೊತ್ತು ಗಾಳಿ ಮಳೆ ಬರುತ್ತದೆ’ ಅನ್ನುತ್ತೀರಿ. ಆಕಾಶದಲ್ಲಿ ಕಾಣುವ ಸೂಚನೆಗಳನ್ನು ತಿಳಿದುಕೊಳ್ಳಬಲ್ಲವರಾಗಿದ್ದೀರಿ, ಆದರೆ ಈ ಕಾಲದ ಸೂಚನೆಗಳನ್ನು ತಿಳಿದುಕೊಳ್ಳಲು ನಿಮಗೆ ಸಾಧ್ಯವಿಲ್ಲವೋ?
Uye mangwanani munoti: Nhasi kunze kwakaipa; nokuti denga rakatsvuka richikwidibira. Vanyepedzeri, munoziva kuparadzanisa mamiriro edenga, asi hamugoni kuparadzanisa zviratidzo zvenguva here?
4 ೪ ವ್ಯಭಿಚಾರಿಣಿಯಂತಿರುವ ಈ ದುಷ್ಟ ಸಂತತಿಯು ಸೂಚಕಕಾರ್ಯವನ್ನು ನೋಡಬೇಕೆಂದು ಹುಡುಕುತ್ತದೆ. ಆದರೆ ಯೋನನ ಸೂಚಕಕಾರ್ಯವೇ ಹೊರತು ಬೇರೆ ಯಾವುದೂ ಇದಕ್ಕೆ ಸಿಕ್ಕುವುದಿಲ್ಲ” ಎಂದು ಉತ್ತರ ಕೊಟ್ಟನು. ತರುವಾಯ ಆತನು ಅವರನ್ನು ಬಿಟ್ಟು ಹೊರಟು ಹೋದನು.
Zera rakaipa uye rinofeva richitsvaka chiratidzo; asi haripiwi chiratidzo, kunze kwechiratidzo chaJona muporofita. Ndokuvasiya, akaenda.
5 ೫ ಶಿಷ್ಯರು ರೊಟ್ಟಿ ಬುತ್ತಿ ತೆಗೆದುಕೊಳ್ಳುವುದನ್ನು ಮರೆತು ಆಚೇ ದಡಕ್ಕೆ ಬಂದಿದ್ದರು.
Zvino vadzidzi vakati vasvika mhiri, vakakanganwa kutora zvingwa.
6 ೬ ಯೇಸು ಅವರಿಗೆ “ಎಚ್ಚರಿಕೆ! ಫರಿಸಾಯರ ಮತ್ತು ಸದ್ದುಕಾಯರಹುಳಿಹಿಟ್ಟಿನ ವಿಷಯದಲ್ಲಿ ಜಾಗರೂಕರಾಗಿರಿ” ಎಂದು ಹೇಳಿದನು.
Zvino Jesu akati kwavari: Onai mungwarire mbiriso yeVaFarisi neVaSadhusi.
7 ೭ ಅದಕ್ಕೆ ಅವರು, “ನಾವು ರೊಟ್ಟಿಯನ್ನು ತೆಗೆದುಕೊಳ್ಳದೆ ಬಂದಿದ್ದರಿಂದ” ಹೀಗೆ ಹೇಳಿರಬೇಕು ಎಂದು ತಮ್ಮತಮ್ಮೊಳಗೆ ಮಾತನಾಡಿಕೊಳ್ಳುತ್ತಿದ್ದರು.
Vakarangana pakati pavo vachiti: Unodaro nokuti hatina kutora zvingwa.
8 ೮ ಯೇಸು ಅದನ್ನು ತಿಳಿದು, “ಅಲ್ಪ ವಿಶ್ವಾಸಿಗಳೇ, ರೊಟ್ಟಿ ಬುತ್ತಿಯನ್ನು ತಂದಿಲ್ಲವೆಂದು ನಿಮ್ಮಲ್ಲೇ ಏಕೆ ಚರ್ಚೆಮಾಡುತ್ತಿದ್ದೀರಿ?
Zvino Jesu azviziva akati kwavari: Imwi verutendo rudiki, nemhaka yei muchirangana pakati penyu kuti hamuna kutora zvingwa?
9 ೯ ಆ ಐದು ರೊಟ್ಟಿಗಳನ್ನುಐದು ಸಾವಿರ ಜನರಿಗೆ ಹಂಚಿದ ನಂತರ ಎಷ್ಟು ಪುಟ್ಟಿ ಶೇಖರಿಸಿಕೊಂಡಿದ್ದಿರಿ?
Muchigere kunzwisisa here, kana kurangarira zvingwa zvishanu zvevanezvuru zvishanu, uye matengu mangani amakanonga?
10 ೧೦ ಇಲ್ಲವೆ ಆಏಳು ರೊಟ್ಟಿಗಳನ್ನು ನಾಲ್ಕು ಸಾವಿರ ಜನರಿಗೆ ಹಂಚಿದ ನಂತರ ಎಷ್ಟು ಪುಟ್ಟಿ ತುಂಬಿಟ್ಟಿರಿ? ನೀವು ಇನ್ನೂ ಗ್ರಹಿಸಲಿಲ್ಲವೇ? ನಿಮಗೆ ನೆನಪಿಲ್ಲವೇ?
Kana zvingwa zvinomwe zvevanezvuru zvina, uye matengu mangani amakanonga?
11 ೧೧ ನಾನು ರೊಟ್ಟಿಯನ್ನು ಕುರಿತು ಮಾತನಾಡಲಿಲ್ಲ, ಎಂಬುದು ನಿಮಗೆ ಹೇಗೆ ತಿಳಿಯದು? ಆದರೆ ನಾನು ನಿಮಗೆ ಹೇಳಿದು ಏನೆಂದರೆ, ಫರಿಸಾಯರ ಮತ್ತು ಸದ್ದುಕಾಯರ ಹುಳಿಹಿಟ್ಟಿನ ವಿಷಯದಲ್ಲಿ ಜಾಗರೂಕರಾಗಿರ ಬೇಕೆಂದೇ” ಅಂದನು.
Hamunzwisisi sei, kuti handina kutaura kwamuri pamusoro pezvingwa kuti mungwarire mbiriso yeVaFarisi neVaSadhusi?
12 ೧೨ ಆಗ ಅವರು ರೊಟ್ಟಿಯ ಹುಳಿಹಿಟ್ಟನ್ನು ಕುರಿತು ಎಚ್ಚರಿಕೆಯಾಗಿರಬೇಕೆಂದು ಆತನು ತಮಗೆ ಹೇಳಲಿಲ್ಲ; ಆದರೆ ಫರಿಸಾಯರ ಮತ್ತು ಸದ್ದುಕಾಯರ ಬೋಧನೆಯನ್ನು ಕುರಿತು ಎಚ್ಚರಿಕೆಯಾಗಿರಬೇಕೆಂದು ಹೇಳಿದನು ಎಂಬುದಾಗಿ ತಿಳಿದುಕೊಂಡರು.
Zvino vakanzwisisa kuti haana kutaura kuti vachenjere mbiriso yechingwa, asi dzidziso yeVaFarisi neVaSadhusi.
13 ೧೩ ಯೇಸು ಫಿಲಿಪ್ಪನ ಕೈಸರೈಯ ಎಂಬ ಪಟ್ಟಣದ ಪ್ರಾಂತ್ಯಕ್ಕೆ ಬಂದಾಗ, “ಜನರು ಮನುಷ್ಯಕುಮಾರನಾದ ನನ್ನನ್ನು ಯಾರೆಂದು ಹೇಳುತ್ತಾರೆ” ಎಂದು ತನ್ನ ಶಿಷ್ಯರನ್ನು ಕೇಳಿದನು.
Jesu wakati asvika kumativi eKesariya yeFiripi, akabvunza vadzidzi vake, achiti: Vanhu vanoti ini Mwanakomana wemunhu ndini ani?
14 ೧೪ ಅವರು, “ನಿನ್ನನ್ನು ಕೆಲವರು ಸ್ನಾನಿಕನಾದ ಯೋಹಾನನು ಅನ್ನುತ್ತಾರೆ, ಕೆಲವರು ಎಲೀಯನು ಅನ್ನುತ್ತಾರೆ ಮತ್ತು ಬೇರೆಯವರು ಯೆರಮೀಯನು, ಇಲ್ಲವೆ ಪ್ರವಾದಿಗಳಲ್ಲಿ ಒಬ್ಬನು” ಅನ್ನುತ್ತಾರೆ ಎಂದು ಹೇಳಿದರು.
Ndokubva vati: Vamwe vanoti Johwani Mubhabhatidzi, uye vamwe Eria, vamwewo Jeremiya, kana umwe wevaporofita.
15 ೧೫ ಆತನು ಅವರನ್ನು, “ಆದರೆ ನೀವು ನನ್ನನ್ನು ಯಾರೆನ್ನುತ್ತೀರಿ ಎಂದು ಕೇಳಿದನು?”
Akati kwavari: Ko imwi munoti ndini ani?
16 ೧೬ ಆಗ ಸೀಮೋನ ಪೇತ್ರನು, “ನೀನು ಜೀವವುಳ್ಳ ದೇವರ ಕುಮಾರನಾದ ಕ್ರಿಸ್ತನು” ಎಂದು ಉತ್ತರ ಕೊಟ್ಟನು.
Zvino Simoni Petro akapindura akati: Ndimwi Kristu, Mwanakomana waMwari mupenyu.
17 ೧೭ ಅದಕ್ಕೆ ಯೇಸು, “ಯೋನನ ಮಗನಾದ ಸೀಮೋನನೇ, ನೀನು ಧನ್ಯನು. ಏಕೆಂದರೆ ಇದು ಮನುಷ್ಯನಿಂದ ನಿನಗೆ ಪ್ರಕಟವಾಗಿಲ್ಲ, ಪರಲೋಕದಲ್ಲಿರುವ ನನ್ನ ತಂದೆಯೇ ಇದನ್ನೂ ನಿನಗೆ ಪ್ರಕಟಪಡಿಸಿರುವನು” ಎಂದು ಹೇಳಿದನು.
Jesu akapindura akati kwaari: Wakaropafadzwa, Simoni mwanakomana waJona, nokuti nyama neropa hazvina kukuzarurira izvozvo, asi Baba vangu vari kumatenga.
18 ೧೮ ನಾನು ಇದನ್ನು ಸಹ ನಿನಗೆ ಹೇಳುತ್ತೇನೆ, “ನೀನುಪೇತ್ರನು, ಈಬಂಡೆಯ ಮೇಲೆ ನಾನು ನನ್ನ ಸಭೆಯನ್ನು ಕಟ್ಟುವೆನು. ಪಾತಾಳದ ಶಕ್ತಿಗಳು ಅದನ್ನು ಸೋಲಿಸಲಾರವು. (Hadēs )
Neni ndinoti kwauri: Ndiwe Petro, uye pamusoro peruware urwu ndichavaka kereke yangu, nemasuwo egehena haangaikundi. (Hadēs )
19 ೧೯ ಪರಲೋಕ ರಾಜ್ಯದ ಬೀಗದ ಕೈಗಳನ್ನು ನಿನಗೆ ಕೊಡುವೆನು. ಭೂಲೋಕದಲ್ಲಿ ನೀನು ಯಾವುದನ್ನು ಕಟ್ಟುತ್ತೀಯೋ ಅದು ಪರಲೋಕದಲ್ಲಿಯೂ ಕಟ್ಟಲ್ಪಟ್ಟಿರುವುದು. ಮತ್ತು ಭೂಲೋಕದಲ್ಲಿ ನೀನು ಯಾವುದನ್ನು ಬಿಚ್ಚುತ್ತೀಯೋ ಅದು ಪರಲೋಕದಲ್ಲಿಯೂ ಬಿಚ್ಚಲ್ಪಟ್ಟಿರುವುದು” ಅಂದನು.
Uye ndichapa kwauri kiyi dzeushe hwekumatenga; uye chipi nechipi chauchasunga panyika, chichasungwa kumatenga; nechipi nechipi chauchasunungura panyika, chichasunungurwa kumatenga.
20 ೨೦ ಆಗ ಆತನು, ನಾನು ಕ್ರಿಸ್ತನಾಗಿದ್ದೆನೆಂಬುದನ್ನು ಯಾರಿಗೂ ಖಂಡಿತವಾಗಿ ಹೇಳಬೇಡಿರಿ ಎಂದು ತನ್ನ ಶಿಷ್ಯರಿಗೆ ಆಜ್ಞಾಪಿಸಿದನು.
Ipapo akarairisa vadzidzi vake kuti varege kuudza munhu kuti ndiye Jesu iye Kristu.
21 ೨೧ ಅಂದಿನಿಂದ ಯೇಸು ಕ್ರಿಸ್ತನು ತಾನು ಯೆರೂಸಲೇಮಿಗೆ ಹೋಗಿ ಹಿರಿಯರಿಂದಲೂ ಮುಖ್ಯಯಾಜಕರಿಂದಲೂ ಶಾಸ್ತ್ರಿಗಳಿಂದಲೂ ಬಹು ಕಷ್ಟಗಳನ್ನನುಭವಿಸಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಎಬ್ಬಿಸಲ್ಪಡುವುದು ಅಗತ್ಯವೆಂದು ತನ್ನ ಶಿಷ್ಯರಿಗೆ ಹೇಳುವುದಕ್ಕೆ ಪ್ರಾರಂಭಿಸಿದನು.
Kubva panguva iyo Jesu wakatanga kuratidza kuvadzidzi vake kuti anofanira kuenda kuJerusarema, uye kutambudzika zvizhinji zvichibva kuvakuru nevapristi vakuru nevanyori, nekuurawa, nekumutswa nezuva retatu.
22 ೨೨ ಆಗ ಪೇತ್ರನು ಆತನನ್ನು ಪಕ್ಕಕ್ಕೆ ಕರೆದುಕೊಂಡು ಹೋಗಿ, “ಕರ್ತನೇ, ದೇವರು ಅದನ್ನು ನಿನಗೆ ಬರಗೊಡಿಸದಿರಲಿ; ನಿನಗೆ ಹೀಗೆ ಎಂದಿಗೂ ಆಗಬಾರದು” ಎಂದು ಆತನನ್ನು ಗದರಿಸುವುದಕ್ಕೆ ಪ್ರಾರಂಭಿಸಿದನು.
Petro akamutora parutivi, akatanga kumutsiura akati: Ngazvirege kutongoitika kwamuri, Ishe; izvi hazvingatongoitiki kwamuri.
23 ೨೩ ಆತನು ತಿರುಗಿಕೊಂಡು ಪೇತ್ರನಿಗೆ, “ಸೈತಾನನೇ, ನನ್ನನ್ನು ಬಿಟ್ಟು ತೊಲಗಿ ಹೋಗು. ನನಗೆ ನೀನು ಅಡ್ಡಿಯಾಗಿದ್ದಿ, ಏಕೆಂದರೆ ನೀನು ದೇವರ ವಿಷಯಗಳ ಬಗ್ಗೆ ಯೋಚಿಸದೇ ಮನುಷ್ಯರ ವಿಷಯಗಳ ಬಗ್ಗೆ ಯೋಚಿಸುತ್ತೀ” ಎಂದು ಹೇಳಿದನು.
Asi iye wakatendeuka akati kuna Petro: Ibva shure kwangu, Satani! Uri chigumbuso kwandiri; nokuti haurangariri zvinhu zvaMwari, asi zvinhu zvevanhu.
24 ೨೪ ಅನಂತರ ಯೇಸು ತನ್ನ ಶಿಷ್ಯರಿಗೆ ಹೇಳಿದ್ದೇನೆಂದರೆ “ಯಾವನಾದರೂ ನನ್ನನ್ನು ಹಿಂಬಾಲಿಸುವುದಕ್ಕೆ ಬಯಸಿದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.
Zvino Jesu akati kuvadzidzi vake: Kana ani nani achida kuuya shure kwangu, ngaazvirambe, atakure muchinjikwa wake, anditevere.
25 ೨೫ ತನ್ನ ಪ್ರಾಣವನ್ನು ಉಳಿಸಿಕೊಳ್ಳಬೇಕೆಂದಿರುವವನು ಅದನ್ನು ಕಳೆದುಕೊಳ್ಳುವನು. ಆದರೆ ನನ್ನ ನಿಮಿತ್ತವಾಗಿ ತನ್ನ ಪ್ರಾಣವನ್ನು ಕಳೆದುಕೊಂಡವನು ಅದನ್ನು ಕಂಡುಕೊಳ್ಳುವನು.
Nokuti ani nani anoda kuponesa upenyu hwake acharasikirwa nahwo; asi ani nani anorasikirwa neupenyu hwake nekuda kwangu achahuwana.
26 ೨೬ ಒಬ್ಬ ಮನುಷ್ಯನು ಭೂಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ಅವನ ಪ್ರಾಣವನ್ನು ಕಳೆದುಕೊಂಡರೆ ಅವನಿಗೆ ಪ್ರಯೋಜನವೇನು? ಅಥವಾ ಒಬ್ಬನು ತನ್ನ ಪ್ರಾಣಕ್ಕೆ ಬದಲಿಗೆ ಏನು ಕೊಟ್ಟಾನು?
Nokuti munhu anobatsirwei kana akawana nyika yese, akarasikirwa nemweya wake? Kana munhu achapei chive muripo wemweya wake?
27 ೨೭ ಮನುಷ್ಯಕುಮಾರನು ತನ್ನ ತಂದೆಯ ಮಹಿಮೆಯೊಡನೆ ತನ್ನ ದೂತರ ಸಮೇತವಾಗಿ ಬರುವನು. ಆಗ ಆತನು ಒಬ್ಬೊಬ್ಬನಿಗೆ ಅವನು ಮಾಡಿದ ಕೆಲಸಕ್ಕೆ ತಕ್ಕಂತೆ ಪ್ರತಿಫಲವನ್ನು ಕೊಡುವನು.
Nokuti Mwanakomana wemunhu achauya mukubwinya kwaBaba vake nevatumwa vake, ipapo achapa mubairo umwe neumwe zvichienderana nebasa rake.
28 ೨೮ “ನಿಮಗೆ ನಿಜವಾಗಿ ಹೇಳುತ್ತೇನೆ ಇಲ್ಲಿ ನಿಂತವರಲ್ಲಿ ಕೆಲವರು ಮನುಷ್ಯಕುಮಾರನು ತನ್ನ ರಾಜ್ಯದಲ್ಲಿ ಬರುವುದನ್ನು ನೋಡುವ ತನಕ ಮರಣಹೊಂದುವುದಿಲ್ಲ” ಅಂದನು.
Zvirokwazvo ndinoti kwamuri: Vamwe varipo kune vamire pano, vasingatongoraviri rufu kusvikira vaona Mwanakomana wemunhu achiuya muushe hwake.