< ಮತ್ತಾಯನು 17 >
1 ೧ ಆರು ದಿನಗಳಾದ ಮೇಲೆ ಯೇಸು ಪೇತ್ರನನ್ನೂ ಯಾಕೋಬನನ್ನೂ ಅವನ ತಮ್ಮ ಯೋಹಾನನನ್ನೂ ಮಾತ್ರ ಏಕಾಂತವಾಗಿ ಕರೆದುಕೊಂಡು ಎತ್ತರವಾದ ಬೆಟ್ಟಕ್ಕೆ ಹೋದನು.
Sex dögum síðar tók Jesús þá Pétur, Jakob og Jóhannes með sér upp á hátt fjall.
2 ೨ ಅಲ್ಲಿ ಆತನು ಅವರ ಮುಂದೆ ರೂಪಾಂತರಗೊಂಡನು. ಆತನ ಮುಖವು ಸೂರ್ಯನ ಹಾಗೆ ಪ್ರಕಾಶಿಸಿತು. ಆತನ ವಸ್ತ್ರಗಳು ಬೆಳಕಿನಂತೆ ಬೆಳ್ಳಗಾದವು.
Þegar þangað kom sáu þeir að útlit Jesú breyttist, andlit hans tók að ljóma sem sólin og klæðin urðu skínandi björt.
3 ೩ ಇಗೋ, ಮೋಶೆಯೂ ಎಲೀಯನೂ ಆತನ ಸಂಗಡ ಮಾತನಾಡುತ್ತಾ ಅವರಿಗೆ ಕಾಣಿಸಿಕೊಂಡರು.
Allt í einu birtust Móse og Elía og fóru að tala við hann.
4 ೪ ಆಗ ಪೇತ್ರನು ಯೇಸುವಿಗೆ, “ಕರ್ತನೇ, ನಾವು ಇಲ್ಲೇ ಇರುವುದು ಒಳ್ಳೆಯದು. ನೀನು ಬಯಸುವುದಾದರೆ, ಇಲ್ಲಿ ಮೂರು ಗುಡಾರಗಳನ್ನು ಕಟ್ಟುವೆನು. ನಿನಗೊಂದು, ಮೋಶೆಗೊಂದು, ಎಲೀಯನಿಗೊಂದು” ಎಂದು ಹೇಳಿದನು.
Þá sagði Pétur: „Drottinn, hér er gott að vera! Ef þú vilt, þá skal ég gera hér þrjú skýli, eitt handa þér, annað handa Móse og það þriðja handa Elía.“
5 ೫ ಆತನು ಇನ್ನೂ ಮಾತನಾಡುತ್ತಿರುವಾಗಲೇ ಪ್ರಕಾಶಮಾನವಾದ ಮೋಡವು ಬಂದು ಅವರ ಮೇಲೆ ಕವಿಯಿತು. ಇದಲ್ಲದೆ ಆ ಮೋಡದೊಳಗಿನಿಂದ “ಈತನು ಪ್ರಿಯನಾಗಿರುವ ನನ್ನ ಮಗನು ಈತನನ್ನು ನಾನು ಮೆಚ್ಚಿದ್ದೇನೆ ಈತನಿಗೆ ಕಿವಿಗೊಡಿರಿ” ಎಂದು ಹೇಳುವ ವಾಣಿವುಂಟಾಯಿತು.
En um leið og hann sagði þetta kom bjart ský yfir þá og úr því heyrðu þeir rödd sem sagði: „Þessi er minn elskaði sonur, sem ég hef velþóknun á. Hlustið á hann!“
6 ೬ ಶಿಷ್ಯರು ಇದನ್ನು ಕೇಳಿ ಬಹಳವಾಗಿ ಹೆದರಿ ಬೋರಲು ಬಿದ್ದರು.
Lærisveinarnir lutu til jarðar í óttablandinni lotningu.
7 ೭ ಆದರೆ ಯೇಸು ಹತ್ತಿರಕ್ಕೆ ಬಂದು ಅವರನ್ನು ಮುಟ್ಟಿ, “ಏಳಿರಿ ಹೆದರಬೇಡಿರಿ” ಅಂದನು.
Jesús kom til þeirra, snerti þá og sagði: „Rísið upp og verið óhræddir.“
8 ೮ ಅವರು ಕಣ್ಣೆತ್ತಿ ಮೇಲೆ ನೋಡಿದಾಗ ಯೇಸುವನ್ನೇ ಹೊರತು ಮತ್ತಾರನ್ನೂ ಕಾಣಲಿಲ್ಲ.
Þegar þeir litu upp sáu þér Jesú einan.
9 ೯ ಅವರು ಆ ಬೆಟ್ಟದಿಂದ ಇಳಿದು ಬರುತ್ತಿರುವಾಗ ಯೇಸು ಅವರಿಗೆ, “ಈ ದರ್ಶನದ ಬಗ್ಗೆ ಮನುಷ್ಯಕುಮಾರನು ಸತ್ತು ಜೀವಿತನಾಗಿ ಎಬ್ಬಿಸಲ್ಪಡುವ ತನಕ ಯಾರಿಗೂ ಹೇಳಬಾರದು” ಎಂದು ಆಜ್ಞಾಪಿಸಿದನು.
Á leiðinni niður fjallið bað Jesús þá að segja engum frá því, sem þeir höfðu séð, fyrr en hann væri risinn upp frá dauðum.
10 ೧೦ ಆಗ ಆತನ ಶಿಷ್ಯರು, “ಎಲೀಯನು ಮೊದಲು ಬರುವುದು ಅವಶ್ಯವೆಂಬುದಾಗಿ ಶಾಸ್ತ್ರಿಗಳು ಹೇಳುತ್ತಾರಲ್ಲಾ ಏಕೆ?” ಎಂದು ಆತನನ್ನು ಕೇಳಿದರು.
Þá spurðu þeir hann: „Hvers vegna segja leiðtogar þjóðar okkar að Elía verði að koma á undan Kristi?“
11 ೧೧ ಯೇಸು ಅವರಿಗೆ, “ಎಲೀಯನು ಮೊದಲು ಬರುವುದು ನಿಜ. ಬಂದು ಎಲ್ಲವನ್ನು ಪುನಃ ಸ್ಥಾಪಿಸುವನು.
„Þetta er rétt hjá þeim, “svaraði Jesús. „Elía verður að koma og færa allt í lag.
12 ೧೨ ಆದರೆ ನಾನು ನಿಮಗೆ ಹೇಳುತ್ತೇನೆ, ಎಲೀಯನು ಬಂದಾಯಿತು, ಆದರೆ ಜನರು ಅವನನ್ನು ಗುರುತಿಸದೆ ತಮಗೆ ಇಷ್ಟಬಂದಂತೆ ಅವನಿಗೆ ಮಾಡಿದರು. ಅದರಂತೆಯೇ ಮನುಷ್ಯಕುಮಾರನು ಸಹ ಅವರಿಂದ ಹಿಂಸೆಗೊಳಗಾಗುವನು” ಎಂದು ಉತ್ತರ ಕೊಟ್ಟನು.
Hann er reyndar búinn að koma, en menn þekktu hann ekki og margir fóru illa með hann. Ég, Kristur, mun einnig verða að þjást af þeirra völdum.“
13 ೧೩ ಸ್ನಾನಿಕನಾದ ಯೋಹಾನನ ವಿಷಯವಾಗಿ ತಮ್ಮೊಂದಿಗೆ ಮಾತನಾಡಿದನೆಂದು ಆಗ ಶಿಷ್ಯರು ತಿಳಿದುಕೊಂಡರು.
Þá skildu lærisveinarnir að hann átti við Jóhannes skírara.
14 ೧೪ ಅವರು ಜನರ ಗುಂಪಿನ ಬಳಿಗೆ ಬಂದಾಗ ಒಬ್ಬನು ಆತನ ಹತ್ತಿರಕ್ಕೆ ಬಂದು ಆತನ ಮುಂದೆ ಮೊಣಕಾಲೂರಿ,
Þegar þeir komu niður af fjallinu beið þeirra mikill mannfjöldi. Maður nokkur kom þá hlaupandi, kraup að fótum Jesú og sagði:
15 ೧೫ “ಕರ್ತನೇ ನನ್ನ ಮಗನನ್ನು ಕರುಣಿಸು, ಅವನು ಮೂರ್ಛೆರೋಗದಿಂದ ಬಹಳ ಕಷ್ಟಪಡುತ್ತಿದ್ದಾನೆ. ಅನೇಕ ಬಾರಿ ಬೆಂಕಿಯಲ್ಲಿಯೂ, ನೀರಿನಲ್ಲಿಯೂ ಬೀಳುತ್ತಾನೆ.
„Herra miskunnaðu syni mínum. Hann er geðveikur og þungt haldinn. Hann dettur oft í eld og vatn.
16 ೧೬ ಅವನನ್ನು ನಿನ್ನ ಶಿಷ್ಯರ ಬಳಿಗೆ ಕರತಂದಿದ್ದೆನು. ಆದರೆ ಗುಣಪಡಿಸುವುದಕ್ಕೆ ಅವರಿಂದ ಆಗಲಿಲ್ಲ” ಅಂದನು.
Ég fór með hann til lærisveina þinna, en þeir gátu ekki læknað hann.“
17 ೧೭ ಅದಕ್ಕೆ ಯೇಸು, “ಎಲಾ ಅಪನಂಬಿಕೆಯುಳ್ಳ ವಕ್ರಬುದ್ಧಿಯುಳ್ಳ ಸಂತಾನವೇ, ನಾನು ಇನ್ನೆಷ್ಟು ಕಾಲ ನಿಮ್ಮ ಸಂಗಡ ಇರಲಿ? ಇನ್ನೆಷ್ಟು ಕಾಲ ನಿಮ್ಮನ್ನು ಸಹಿಸಿಕೊಳ್ಳಲಿ? ಅವನನ್ನು ಇಲ್ಲಿ ನನ್ನ ಬಳಿಗೆ ಕರತನ್ನಿರಿ” ಅಂದನು.
„Æ, þið efagjörnu og rangsnúnu menn!“sagði Jesús. „Hversu lengi á ég að umbera ykkur? Komið með drenginn til mín.“
18 ೧೮ ಯೇಸು ಅವನ ಮೇಲಿದ್ದ ದೆವ್ವವನ್ನು ಗದರಿಸಲು ಆ ದೆವ್ವವು ಅವನನ್ನು ಬಿಟ್ಟುಹೋಯಿತು. ಆ ಕ್ಷಣವೇ ಆ ಹುಡುಗನಿಗೆ ಸ್ವಸ್ಥವಾಯಿತು.
Jesús ávítaði illa andann, sem var í drengnum, svo að hann fór úr honum og drengurinn varð heilbrigður á samri stundu.
19 ೧೯ ತರುವಾಯ ಶಿಷ್ಯರು ಏಕಾಂತವಾಗಿ ಯೇಸುವಿನ ಬಳಿಗೆ ಬಂದು, “ಅದನ್ನು ಬಿಡಿಸಲಿಕ್ಕೆ ನಮ್ಮಿಂದ ಏಕೆ ಆಗಲಿಲ್ಲವೆಂದು ಕೇಳಿದರು?”
Eftir á spurðu lærisveinarnir Jesú hvers vegna þeir hefðu ekki getað rekið illa andann út.
20 ೨೦ ಆತನು ಅವರಿಗೆ, “ನಿಮ್ಮ ಅಪನಂಬಿಕೆಯಿಂದಲೇ ಆಗಲಿಲ್ಲ. ಸಾಸಿವೇ ಕಾಳಿನಷ್ಟು ನಂಬಿಕೆ ನಿಮಗೆ ಇರುವುದಾದರೆ,
„Þið hafið svo litla trú, “svaraði Jesús. „Ef þið ættuð trú, þó að ekki væri hún stærri en agnarlítið sinnepsfræ, þá gætuð þið sagt við þetta fjall: „Færðu þig!“og það mundi hlýða ykkur. Ykkur yrði enginn hlutur um megn.
21 ೨೧ ನೀವು ಈ ಬೆಟ್ಟಕ್ಕೆ, ‘ಇಲ್ಲಿಂದ ಅಲ್ಲಿಗೆ ಸರಿದು ಹೋಗು’ ಎಂದು ಹೇಳಿದರೂ ಅದು ಹೋಗುವುದು ಮತ್ತು ನಿಮಗೆ ಅಸಾಧ್ಯವಾದುದು ಒಂದೂ ಇರುವುದಿಲ್ಲ” ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. ಆತನು, ಈ ರೀತಿಯ ದೆವ್ವಗಳು ಪ್ರಾರ್ಥನೆಯಿಂದಲೇ ಹೊರತು ಬೇರೆ ಯಾವರೀತಿಯಿಂದಲೂ ಇವುಗಳು ಬಿಟ್ಟು ಹೋಗುವುದಿಲ್ಲವೆಂದು ಅವರಿಗೆ ಹೇಳಿದನು.
En illur andi eins og þessi fer ekki út fyrr en þið hafið beðið og fastað.“
22 ೨೨ ಅವರು ಗಲಿಲಾಯದಲ್ಲಿ ವಾಸಿಸುತ್ತಿರುವಾಗಲೇ ಯೇಸು ಶಿಷ್ಯರಿಗೆ, “ಮನುಷ್ಯಕುಮಾರನು ಮನುಷ್ಯರ ಕೈಗೆ ಒಪ್ಪಿಸಲ್ಪಡುವನು.
Dag einn meðan þeir voru enn í Galíleu sagði Jesús við lærisveinana: „Ég mun verða svikinn í hendur þeirra sem vald hafa til að lífláta mig, en að þrem dögum liðnum mun ég rísa upp.“Þegar lærisveinarnir heyrðu þetta urðu þeir hryggir og skelfdir.
23 ೨೩ ಅವರು ಆತನನ್ನು ಕೊಲ್ಲುವರು, ಆದರೆ ಸತ್ತು ಮೂರನೆಯ ದಿನದಲ್ಲಿ ಆತನು ಜೀವಿತನಾಗಿ ಎಬ್ಬಿಸಲ್ಪಡುವನು” ಎಂದು ಹೇಳಿದನು. ಅದನ್ನು ಕೇಳಿ ಅವರು ಬಹಳ ದುಃಖಪಟ್ಟರು.
24 ೨೪ ಅವರು ಕಪೆರ್ನೌಮಿಗೆ ಬಂದಾಗ ದೇವಾಲಯಕ್ಕಾಗಿ ತೆರಿಗೆಯನ್ನು ಸಂಗ್ರಹಿಸುವವರು ಪೇತ್ರನ ಬಳಿಗೆ ಬಂದು, “ನಿಮ್ಮ ಗುರುವು ದೇವಾಲಯದ ತೆರಿಗೆಯನ್ನು ಕಟ್ಟುವುದಿಲ್ಲವೇ” ಎಂದು ಕೇಳಲು, “ಹೌದು ಕಟ್ಟುವನು” ಅಂದನು.
Þegar þeir komu til Kapernaum komu menn, sem innheimtu musterisskattinn, til Péturs og spurðu: „Greiðir meistari þinn ekki skatta?“
25 ೨೫ ಪೇತ್ರನು ಮನೆಯೊಳಗೆ ಬಂದಾಗ, ಅವನು ಬಾಯಿ ತೆರೆದು ಮಾತನಾಡುವ ಮೊದಲೇ, ಯೇಸು ಅವನಿಗೆ, “ಸೀಮೋನನೇ, ನಿನಗೆ ಹೇಗೆ ತೋರುತ್ತದೆ? ಭೂಲೋಕದ ಅರಸರು ಕಂದಾಯವನ್ನಾಗಲಿ ತೆರಿಗೆಯನ್ನಾಗಲಿ ಯಾರಿಂದ ತೆಗೆದುಕೊಳ್ಳುತ್ತಾರೆ? ತಮ್ಮ ಪ್ರಜೆಗಳಿಂದಲೋ ಅಥವಾ ಪರರಿಂದಲೋ?” ಎಂದು ಕೇಳಿದನು.
„Auðvitað gerir hann það, “svaraði Pétur. Síðan fór hann inn í húsið til að ræða málið við Jesú, en Jesús varð fyrri til og spurði: „Pétur, hvort heldur þú að konungar skattleggi syni sína eða útlendingana, sem þeir undiroka?“
26 ೨೬ ಅವನು, “ಪರರಿಂದ” ಎಂದು ಉತ್ತರ ಕೊಡಲು, ಯೇಸು ಅವನಿಗೆ, “ಹಾಗಾದರೆ ಪ್ರಜೆಗಳು ಅದನ್ನು ಕೊಡಬೇಕಾಗಿಲ್ಲವೇ.
„Útlendingana, “svaraði Pétur. „Fyrst svo er, “sagði Jesús, „þá eru synirnir skattlausir! En við skulum ekki hneyksla þá. Farðu niður að vatninu og kastaðu út færi. Opnaðu síðan munninn á fyrsta fiskinum sem þú færð og þar muntu finna pening. Taktu hann og greiddu fyrir okkur báða.“
27 ೨೭ ಆದರೂ ನಾವು ಅವರಿಗೆ ಅಡ್ಡಿಯಾಗದಂತೆ, ನೀನು ಸಮುದ್ರಕ್ಕೆ ಹೋಗಿ ಗಾಳವನ್ನು ಹಾಕಿ ಮೊದಲು ಸಿಕ್ಕುವ ಮೀನನ್ನು ಹಿಡಿದು, ಅದರ ಬಾಯಿ ತೆರೆದು ನೋಡು ಅದರಲ್ಲಿ ಒಂದುಬೆಳ್ಳಿ ನಾಣ್ಯ ಸಿಕ್ಕುವುದು. ಅದನ್ನು ತೆಗೆದುಕೊಂಡು ನನಗೋಸ್ಕರ ಮತ್ತು ನಿನಗೋಸ್ಕರ ತೆರಿಗೆ ಹಣ ಕೊಡು” ಎಂದು ಹೇಳಿದನು.