< ಮತ್ತಾಯನು 17 >

1 ಆರು ದಿನಗಳಾದ ಮೇಲೆ ಯೇಸು ಪೇತ್ರನನ್ನೂ ಯಾಕೋಬನನ್ನೂ ಅವನ ತಮ್ಮ ಯೋಹಾನನನ್ನೂ ಮಾತ್ರ ಏಕಾಂತವಾಗಿ ಕರೆದುಕೊಂಡು ಎತ್ತರವಾದ ಬೆಟ್ಟಕ್ಕೆ ಹೋದನು.
Sûnruk suole chu Jisua'n Peter le a lâibungngei Jacob le John a tuong ngeia, an theivaiin muol insângna a se pui ngeia.
2 ಅಲ್ಲಿ ಆತನು ಅವರ ಮುಂದೆ ರೂಪಾಂತರಗೊಂಡನು. ಆತನ ಮುಖವು ಸೂರ್ಯನ ಹಾಗೆ ಪ್ರಕಾಶಿಸಿತು. ಆತನ ವಸ್ತ್ರಗಳು ಬೆಳಕಿನಂತೆ ಬೆಳ್ಳಗಾದವು.
An mit muchungin Jisua mêl a hong inthûla: a mâi nisa angin a hong vâra, a puonsilngei khom ântêrrakin ahong cheka.
3 ಇಗೋ, ಮೋಶೆಯೂ ಎಲೀಯನೂ ಆತನ ಸಂಗಡ ಮಾತನಾಡುತ್ತಾ ಅವರಿಗೆ ಕಾಣಿಸಿಕೊಂಡರು.
Male ruoisingei inthum han Moses le Elijah ngeiin Jisua an chongpui an mua.
4 ಆಗ ಪೇತ್ರನು ಯೇಸುವಿಗೆ, “ಕರ್ತನೇ, ನಾವು ಇಲ್ಲೇ ಇರುವುದು ಒಳ್ಳೆಯದು. ನೀನು ಬಯಸುವುದಾದರೆ, ಇಲ್ಲಿ ಮೂರು ಗುಡಾರಗಳನ್ನು ಕಟ್ಟುವೆನು. ನಿನಗೊಂದು, ಮೋಶೆಗೊಂದು, ಎಲೀಯನಿಗೊಂದು” ಎಂದು ಹೇಳಿದನು.
Hanchu Peter'n Jisua kôm, “Pumapa, hitaka om hih ei ta rangin idôra asa mo ni zoi! Nu nuomin chu puon-in inthum sin ka ta, nangma rang inkhat, Moses rang inkhat male Elijah rang inkhat,” a tia.
5 ಆತನು ಇನ್ನೂ ಮಾತನಾಡುತ್ತಿರುವಾಗಲೇ ಪ್ರಕಾಶಮಾನವಾದ ಮೋಡವು ಬಂದು ಅವರ ಮೇಲೆ ಕವಿಯಿತು. ಇದಲ್ಲದೆ ಆ ಮೋಡದೊಳಗಿನಿಂದ “ಈತನು ಪ್ರಿಯನಾಗಿರುವ ನನ್ನ ಮಗನು ಈತನನ್ನು ನಾನು ಮೆಚ್ಚಿದ್ದೇನೆ ಈತನಿಗೆ ಕಿವಿಗೊಡಿರಿ” ಎಂದು ಹೇಳುವ ವಾಣಿವುಂಟಾಯಿತು.
Ala chonglâitakin, sûm vârin ajuong mukhu ngeia, sûmlâi renga rôl ajuon ringa, “Ama hih ka Nâipasal moroitak, a chunga ku mulungtâiriem ani, a he rangâi roi!” a tia.
6 ಶಿಷ್ಯರು ಇದನ್ನು ಕೇಳಿ ಬಹಳವಾಗಿ ಹೆದರಿ ಬೋರಲು ಬಿದ್ದರು.
Ruoisingei han rôl hah an rietin chu, an chi rai sikin pila an inbokraka.
7 ಆದರೆ ಯೇಸು ಹತ್ತಿರಕ್ಕೆ ಬಂದು ಅವರನ್ನು ಮುಟ್ಟಿ, “ಏಳಿರಿ ಹೆದರಬೇಡಿರಿ” ಅಂದನು.
Jisua an kôm a honga, a tôn ngeia, “Inthoi roi, chi no roi,” a tipe ngeia.
8 ಅವರು ಕಣ್ಣೆತ್ತಿ ಮೇಲೆ ನೋಡಿದಾಗ ಯೇಸುವನ್ನೇ ಹೊರತು ಮತ್ತಾರನ್ನೂ ಕಾಣಲಿಲ್ಲ.
Masikin an ena, Jisua telloiin chu tute adang mu mak ngei.
9 ಅವರು ಆ ಬೆಟ್ಟದಿಂದ ಇಳಿದು ಬರುತ್ತಿರುವಾಗ ಯೇಸು ಅವರಿಗೆ, “ಈ ದರ್ಶನದ ಬಗ್ಗೆ ಮನುಷ್ಯಕುಮಾರನು ಸತ್ತು ಜೀವಿತನಾಗಿ ಎಬ್ಬಿಸಲ್ಪಡುವ ತನಕ ಯಾರಿಗೂ ಹೇಳಬಾರದು” ಎಂದು ಆಜ್ಞಾಪಿಸಿದನು.
Muol chung renga an juong chumin chu, Jisua'n an kôm, “Miriem Nâipasal hih thina renga ânthoinôk mâka chu nin neinun mu hih tute ril no roi,” tiin chong a pêk ngei zoi.
10 ೧೦ ಆಗ ಆತನ ಶಿಷ್ಯರು, “ಎಲೀಯನು ಮೊದಲು ಬರುವುದು ಅವಶ್ಯವೆಂಬುದಾಗಿ ಶಾಸ್ತ್ರಿಗಳು ಹೇಳುತ್ತಾರಲ್ಲಾ ಏಕೆ?” ಎಂದು ಆತನನ್ನು ಕೇಳಿದರು.
Male ruoisingei han Jisua kôm, “Ithomo Balam minchupungeiin Elijah a juong bak rang ani, an ti?” tiin an rekela.
11 ೧೧ ಯೇಸು ಅವರಿಗೆ, “ಎಲೀಯನು ಮೊದಲು ಬರುವುದು ನಿಜ. ಬಂದು ಎಲ್ಲವನ್ನು ಪುನಃ ಸ್ಥಾಪಿಸುವನು.
Jisua'n, “Adiktakin Elijah a juong bak rang ani,” male “jâttin ama'n cherêl let a tih.
12 ೧೨ ಆದರೆ ನಾನು ನಿಮಗೆ ಹೇಳುತ್ತೇನೆ, ಎಲೀಯನು ಬಂದಾಯಿತು, ಆದರೆ ಜನರು ಅವನನ್ನು ಗುರುತಿಸದೆ ತಮಗೆ ಇಷ್ಟಬಂದಂತೆ ಅವನಿಗೆ ಮಾಡಿದರು. ಅದರಂತೆಯೇ ಮನುಷ್ಯಕುಮಾರನು ಸಹ ಅವರಿಂದ ಹಿಂಸೆಗೊಳಗಾಗುವನು” ಎಂದು ಉತ್ತರ ಕೊಟ್ಟನು.
Hannirese, nangni ki ril, Elijah chu a juongsai piel kêng ani zoi, mingeiin lei riet mak ngei, an nunuom an lei lo zoi. Ma angdênin Miriem Nâipasal khom an nunuom an lo rang ani,” tiin a thuona.
13 ೧೩ ಸ್ನಾನಿಕನಾದ ಯೋಹಾನನ ವಿಷಯವಾಗಿ ತಮ್ಮೊಂದಿಗೆ ಮಾತನಾಡಿದನೆಂದು ಆಗ ಶಿಷ್ಯರು ತಿಳಿದುಕೊಂಡರು.
Male ruoisingeiin Baptispu John chungroi an kôm a misîr ani, ti an hong riet zoi.
14 ೧೪ ಅವರು ಜನರ ಗುಂಪಿನ ಬಳಿಗೆ ಬಂದಾಗ ಒಬ್ಬನು ಆತನ ಹತ್ತಿರಕ್ಕೆ ಬಂದು ಆತನ ಮುಂದೆ ಮೊಣಕಾಲೂರಿ,
Mipui ngei kôm an kîr nôkin chu mi inkhat Jisua kôm a honga, a makunga khûkinbilin,
15 ೧೫ “ಕರ್ತನೇ ನನ್ನ ಮಗನನ್ನು ಕರುಣಿಸು, ಅವನು ಮೂರ್ಛೆರೋಗದಿಂದ ಬಹಳ ಕಷ್ಟಪಡುತ್ತಿದ್ದಾನೆ. ಅನೇಕ ಬಾರಿ ಬೆಂಕಿಯಲ್ಲಿಯೂ, ನೀರಿನಲ್ಲಿಯೂ ಬೀಳುತ್ತಾನೆ.
male “Pu, ka nâipasal chunga inriengmu roh! Ama chu risangol invei ania, a tuong ok zoia, voizet mo meia le tuia ânlet zoia.
16 ೧೬ ಅವನನ್ನು ನಿನ್ನ ಶಿಷ್ಯರ ಬಳಿಗೆ ಕರತಂದಿದ್ದೆನು. ಆದರೆ ಗುಣಪಡಿಸುವುದಕ್ಕೆ ಅವರಿಂದ ಆಗಲಿಲ್ಲ” ಅಂದನು.
Nu ruoisingei kôm ko hong tuonga, aniatachu mindam thei mak ngei,” a tia.
17 ೧೭ ಅದಕ್ಕೆ ಯೇಸು, “ಎಲಾ ಅಪನಂಬಿಕೆಯುಳ್ಳ ವಕ್ರಬುದ್ಧಿಯುಳ್ಳ ಸಂತಾನವೇ, ನಾನು ಇನ್ನೆಷ್ಟು ಕಾಲ ನಿಮ್ಮ ಸಂಗಡ ಇರಲಿ? ಇನ್ನೆಷ್ಟು ಕಾಲ ನಿಮ್ಮನ್ನು ಸಹಿಸಿಕೊಳ್ಳಲಿ? ಅವನನ್ನು ಇಲ್ಲಿ ನನ್ನ ಬಳಿಗೆ ಕರತನ್ನಿರಿ” ಅಂದನು.
Jisua'n, “Kho anga iemnaboi rai le mi dikloi mo nin ni zoi! Idôr sôt mo nin kôm ko om rang? Idôr sôt mo nangni ko donsui thei ranga? Pasalte hah ko kôm hong tuong roi!” a tia.
18 ೧೮ ಯೇಸು ಅವನ ಮೇಲಿದ್ದ ದೆವ್ವವನ್ನು ಗದರಿಸಲು ಆ ದೆವ್ವವು ಅವನನ್ನು ಬಿಟ್ಟುಹೋಯಿತು. ಆ ಕ್ಷಣವೇ ಆ ಹುಡುಗನಿಗೆ ಸ್ವಸ್ಥವಾಯಿತು.
Jisua'n ramkhori hah chong a pêka, male pasalte sûng renga hah a hong jôkpaia, ma zoratak han a dam kelen zoi.
19 ೧೯ ತರುವಾಯ ಶಿಷ್ಯರು ಏಕಾಂತವಾಗಿ ಯೇಸುವಿನ ಬಳಿಗೆ ಬಂದು, “ಅದನ್ನು ಬಿಡಿಸಲಿಕ್ಕೆ ನಮ್ಮಿಂದ ಏಕೆ ಆಗಲಿಲ್ಲವೆಂದು ಕೇಳಿದರು?”
Male ruoisingei hah Jisua kôm an honga, “Ithomo keinin te ramkhori hah kin rujûlpai theiloi?” tiin mi riet loiin an rekel chiena.
20 ೨೦ ಆತನು ಅವರಿಗೆ, “ನಿಮ್ಮ ಅಪನಂಬಿಕೆಯಿಂದಲೇ ಆಗಲಿಲ್ಲ. ಸಾಸಿವೇ ಕಾಳಿನಷ್ಟು ನಂಬಿಕೆ ನಿಮಗೆ ಇರುವುದಾದರೆ,
Jisua'n an kôm, “Taksônna ahundôr nin dônloi sika ani.” “Adiktakin nangni ki ti, taksônna ancham ru te dôr nin dônin chu hi muol kôm hin, ‘Hi renga hih soson vânthon roh!’ tîng nin ta, inthon atih. Neinun nâm nin thothei let rang ani!
21 ೨೧ ನೀವು ಈ ಬೆಟ್ಟಕ್ಕೆ, ‘ಇಲ್ಲಿಂದ ಅಲ್ಲಿಗೆ ಸರಿದು ಹೋಗು’ ಎಂದು ಹೇಳಿದರೂ ಅದು ಹೋಗುವುದು ಮತ್ತು ನಿಮಗೆ ಅಸಾಧ್ಯವಾದುದು ಒಂದೂ ಇರುವುದಿಲ್ಲ” ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ. ಆತನು, ಈ ರೀತಿಯ ದೆವ್ವಗಳು ಪ್ರಾರ್ಥನೆಯಿಂದಲೇ ಹೊರತು ಬೇರೆ ಯಾವರೀತಿಯಿಂದಲೂ ಇವುಗಳು ಬಿಟ್ಟು ಹೋಗುವುದಿಲ್ಲವೆಂದು ಅವರಿಗೆ ಹೇಳಿದನು.
Aniatachu, hi anga hih chu chubaithona le bungêi tinôn chu itên rujûlpai thei nimak,” tiin a thuona.
22 ೨೨ ಅವರು ಗಲಿಲಾಯದಲ್ಲಿ ವಾಸಿಸುತ್ತಿರುವಾಗಲೇ ಯೇಸು ಶಿಷ್ಯರಿಗೆ, “ಮನುಷ್ಯಕುಮಾರನು ಮನುಷ್ಯರ ಕೈಗೆ ಒಪ್ಪಿಸಲ್ಪಡುವನು.
Ruoisingei hah an rêngin Galilee rama munkhatin an hong suokin chu, Jisua'n an kôm, “Miriem Nâipasal hih mingei kuta min sûrin om a ta,
23 ೨೩ ಅವರು ಆತನನ್ನು ಕೊಲ್ಲುವರು, ಆದರೆ ಸತ್ತು ಮೂರನೆಯ ದಿನದಲ್ಲಿ ಆತನು ಜೀವಿತನಾಗಿ ಎಬ್ಬಿಸಲ್ಪಡುವನು” ಎಂದು ಹೇಳಿದನು. ಅದನ್ನು ಕೇಳಿ ಅವರು ಬಹಳ ದುಃಖಪಟ್ಟರು.
anni han ama that an tih; aniatachu sûnthum suole chu aringin kaithoiin om a tih,” a tia. Ruoisingei chu beidong takin an om zoi ani.
24 ೨೪ ಅವರು ಕಪೆರ್ನೌಮಿಗೆ ಬಂದಾಗ ದೇವಾಲಯಕ್ಕಾಗಿ ತೆರಿಗೆಯನ್ನು ಸಂಗ್ರಹಿಸುವವರು ಪೇತ್ರನ ಬಳಿಗೆ ಬಂದು, “ನಿಮ್ಮ ಗುರುವು ದೇವಾಲಯದ ತೆರಿಗೆಯನ್ನು ಕಟ್ಟುವುದಿಲ್ಲವೇ” ಎಂದು ಕೇಳಲು, “ಹೌದು ಕಟ್ಟುವನು” ಅಂದನು.
Jisua le a ruoisingei Capernaum an hong tungin chu biekin chôiruol rusuongpu ngeiin Peter kôm an honga, “Nangni Minchupu hin biekin chôiruol a chôi ngâi mo?” tiin an rekela.
25 ೨೫ ಪೇತ್ರನು ಮನೆಯೊಳಗೆ ಬಂದಾಗ, ಅವನು ಬಾಯಿ ತೆರೆದು ಮಾತನಾಡುವ ಮೊದಲೇ, ಯೇಸು ಅವನಿಗೆ, “ಸೀಮೋನನೇ, ನಿನಗೆ ಹೇಗೆ ತೋರುತ್ತದೆ? ಭೂಲೋಕದ ಅರಸರು ಕಂದಾಯವನ್ನಾಗಲಿ ತೆರಿಗೆಯನ್ನಾಗಲಿ ಯಾರಿಂದ ತೆಗೆದುಕೊಳ್ಳುತ್ತಾರೆ? ತಮ್ಮ ಪ್ರಜೆಗಳಿಂದಲೋ ಅಥವಾ ಪರರಿಂದಲೋ?” ಎಂದು ಕೇಳಿದನು.
Peter'n “A chôi ngâi,” tiin a thuona. Peter hah insûnga a lûtin chu, Jisua'n a lei rokôk masa, “Simon kho angin mo ni mindonlam? Hi rammuola rêngngei kôm hin tumo choîtumngei aninônchu chôiruolngei a chôi ngâi? A ramsûngmingei mo, ramdangmingei mo?”
26 ೨೬ ಅವನು, “ಪರರಿಂದ” ಎಂದು ಉತ್ತರ ಕೊಡಲು, ಯೇಸು ಅವನಿಗೆ, “ಹಾಗಾದರೆ ಪ್ರಜೆಗಳು ಅದನ್ನು ಕೊಡಬೇಕಾಗಿಲ್ಲವೇ.
Peter'n, “Ramdangmingei,” tiin a thuona. Jisua'n, “Asa, mahah aomtie chu a ramsûngmingei chu an chôi nâng mak, tiin chong a mele ani.
27 ೨೭ ಆದರೂ ನಾವು ಅವರಿಗೆ ಅಡ್ಡಿಯಾಗದಂತೆ, ನೀನು ಸಮುದ್ರಕ್ಕೆ ಹೋಗಿ ಗಾಳವನ್ನು ಹಾಕಿ ಮೊದಲು ಸಿಕ್ಕುವ ಮೀನನ್ನು ಹಿಡಿದು, ಅದರ ಬಾಯಿ ತೆರೆದು ನೋಡು ಅದರಲ್ಲಿ ಒಂದುಬೆಳ್ಳಿ ನಾಣ್ಯ ಸಿಕ್ಕುವುದು. ಅದನ್ನು ತೆಗೆದುಕೊಂಡು ನನಗೋಸ್ಕರ ಮತ್ತು ನಿನಗೋಸ್ಕರ ತೆರಿಗೆ ಹಣ ಕೊಡು” ಎಂದು ಹೇಳಿದನು.
Aniatachu hi mingei mulunghoiloi rang hi nuom mak me. Masikin dîla senla rukuoi vavôr roh. Nga no thok masatak bâia han nangma le keima rang biekin chôiruol rukbak rang sumthîr man ni tih. Mahah hong chôi inla, ei chôitum hah an kôm pêk ngei roh,” a tia.

< ಮತ್ತಾಯನು 17 >