< ಮತ್ತಾಯನು 18 >

1 ಆದೇ ವೇಳೆಯಲ್ಲಿ ಶಿಷ್ಯರು ಯೇಸುವಿನ ಬಳಿ ಬಂದು, “ಪರಲೋಕ ರಾಜ್ಯದಲ್ಲಿ ಯಾವನು ದೊಡ್ಡವನು?” ಎಂದು ಕೇಳಿದರು.
Uganiya uguno me anu tasa umeme wa eh ahira a yeso wa ikki me wagu, “Aveni ma teki unu gbadang anyimo ati gomo ta seseri?”
2 ಆತನು ಚಿಕ್ಕ ಮಗುವನ್ನು ಹತ್ತಿರಕ್ಕೆ ಕರೆದು ಅವರ ನಡುವೆ ನಿಲ್ಲಿಸಿ,
Ma titi vana ucin anyumo awe.
3 ಅವರಿಗೆ, “ನಿಮ್ಮ ಮನಸ್ಸು ಪರಿವರ್ತನೆಕೊಂಡು ಚಿಕ್ಕ ಮಕ್ಕಳಂತೆ ಆಗದೇ ಹೋದರೆ ನೀವು ಪರಲೋಕ ರಾಜ್ಯದಲ್ಲಿ ಪ್ರವೇಶಿಸುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
Ma gu, kadundure inbo shi in daki ya kurzo ace ashi kasi ahana acicin ba ida ribe shi anyimo ati gomo ta seseri ba.
4 ಹೀಗಿರುವುದರಿಂದ ಯಾವನು ಈ ಚಿಕ್ಕ ಮಗುವಿನಂತೆ ತನ್ನನ್ನು ತಾನೇ ತಗ್ಗಿಸಿಕೊಳ್ಳುತ್ತಾನೋ ಅವನೇ ಪರಲೋಕ ರಾಜ್ಯದಲ್ಲಿ ದೊಡ್ಡವನು.
Vat de sa daki ma zika nice anyo ire imum kasi vana ucin ugeme ba, mada ribe me ati gomo ta seseri ba.
5 ಇದಲ್ಲದೆ ಯಾವನಾದರೂ ನನ್ನ ಹೆಸರಿನಲ್ಲಿ ಇಂಥ ಒಂದು ಚಿಕ್ಕ ಮಗುವನ್ನು ಸ್ವೀಕರಿಸುವನೋ ನನ್ನನ್ನೇ ಸ್ವೀಕರಿಸುವವನಾಗಿದ್ದಾನೆ.
Vat de sa makaba vana ucin kasi ugeme barki mi, i mani makaba.
6 ಆದರೆನನ್ನಲ್ಲಿ ನಂಬಿಕೆಯಿಡುವ ಈ ಚಿಕ್ಕವರಲ್ಲಿ ಒಬ್ಬನಿಗೆ ಯಾವನಾದರೂ ಅಡ್ಡಿಯನ್ನುಂಟುಮಾಡಿದರೆ ಅಂಥವನ ಕೊರಳಿಗೆ ದೊಡ್ಡ ಬೀಸುವ ಕಲ್ಲನ್ನು ಕಟ್ಟಿ ಅವನನ್ನು ಆಳವಾದ ಸಮುದ್ರದಲ್ಲಿ ಮುಳುಗಿಸಿಬಿಡುವುದು ಅವನಿಗೆ ಉತ್ತಮ.
Vat de sa ma wunā unu inde anyumo a hana ageme macara abangan sa wa hem in mi, idi teki a tirzi me unanzu udandang irir areki me anyumo uraba udandang uconcon.
7 “ತೊಡಕುಗಳ ನಿಮಿತ್ತ ಲೋಕಕ್ಕೆ ಅಯ್ಯೋ, ತೊಡಕುಗಳು ಬರುವುದು ಅನಿವಾರ್ಯ, ಆದಾಗ್ಯೂ ಯಾವ ಮನುಷ್ಯನಿಂದ ತೊಡಕು ಬರುತ್ತದೋ ಅವನಿಗೆ ಅಯ್ಯೋ.
Wa dee une barki ucara abangan ya cukuno gbass ucara ucara abanga u eh, de sa ma wuna una me ma dee.
8 ನಿನ್ನ ಕೈಯಾಗಲಿ, ನಿನ್ನ ಕಾಲಾಗಲಿ ನಿನ್ನನ್ನು ಪಾಪದಲ್ಲಿ ಸಿಕ್ಕಿಸುವುದಾದರೆ ಅದನ್ನು ಕಡಿದು ಬಿಸಾಡಿಬಿಡು, ಎರಡು ಕೈ, ಎರಡು ಕಾಲು ಉಳ್ಳವನಾಗಿ ನಿತ್ಯ ಬೆಂಕಿಯಲ್ಲಿ ಹಾಕಲ್ಪಡುವುದಕ್ಕಿಂತ ಅಂಗಹೀನನಾಗಿ ಅಥವಾ ಕುಂಟನಾಗಿ ಜೀವದಲ್ಲಿ ಸೇರುವುದು ನಿನಗೆ ಉತ್ತಮ. (aiōnios g166)
Nyoro ubuna nan tari tuwe me u vetten ingi ti wuza we ucara abangan iteki uriba ati gomo ta seseri inu buna u inde nan tari ti inde wanu guna areki we anyumo ura uzatu umara inti buna tuwe tire nan tari tire. (aiōnios g166)
9 ನಿನ್ನ ಕಣ್ಣು ನಿನ್ನನ್ನು ಪಾಪದಲ್ಲಿ ಸಿಕ್ಕಿಸುವುದಾದರೆ ಅದನ್ನು ಕಿತ್ತು ಬಿಸಾಡಿಬಿಡು, ಎರಡು ಕಣ್ಣುಳ್ಳವನಾಗಿ ಅಗ್ನಿನರಕದಲ್ಲಿ ಹಾಕಿಸಿಕೊಳ್ಳುವುದಕ್ಕಿಂತ ಒಂದೇ ಕಣ್ಣುಳ್ಳವನಾಗಿ ಜೀವದಲ್ಲಿ ಸೇರುವುದು ನಿನಗೆ ಉತ್ತಮ. (Geenna g1067)
Ingi nije wuwe upilko kara nini uveten, iteki uribe ati gomo ta seseri in nije ni inde innu areki we anyumo ura in naje arere. (Geenna g1067)
10 ೧೦ ಈ ಚಿಕ್ಕವರಲ್ಲಿ ಒಬ್ಬನನ್ನಾದರೂ ತಾತ್ಸಾರಮಾಡದಂತೆ ನೋಡಿಕೊಳ್ಳಿರಿ. ಏಕೆಂದರೆಪರಲೋಕದಲ್ಲಿ ಇವರ ದೂತರು ನನ್ನ ಸ್ವರ್ಗೀಯ ತಂದೆಯ ಮುಖವನ್ನು ಯಾವಾಗಲೂ ನೋಡುತ್ತಿರುತ್ತಾರೆ ಎಂದು ನಿಮಗೆ ಹೇಳುತ್ತೇನೆ.
Hirani kati i izi unu inde anyumo ahana acicin wa geme ba, in bo shi ibe ikadura ka Asere aweme aseseri wa hira muhenu maco um de sa mara anyumo aseseri.
11 ೧೧ ಮನುಷ್ಯಕುಮಾರನು ಕೆಟ್ಟು ಹೋಗಿರುವುದನ್ನು ಹುಡುಕಿ ರಕ್ಷಿಸುವುದಕ್ಕೆ ಬಂದನು.
I rusa vana unu ma aye barki ma buri an de sa wa hunne we.
12 ೧೨ “ನಿಮ್ಮಲ್ಲಿಒಬ್ಬ ಮನುಷ್ಯನಿಗೆ ನೂರು ಕುರಿಗಳು ಇರಲಾಗಿ ಅವುಗಳಲ್ಲಿ ಒಂದು ಕುರಿಯು ತಪ್ಪಿಸಿಕೊಂಡು ಹೋಯಿತೆಂದು ಇಟ್ಟುಕೊಳ್ಳಿ. ಆಗ ನಿಮಗೇನು ಅನ್ನಿಸುತ್ತದೆ? ಅವನು ಉಳಿದ ತೊಂಬತ್ತೊಂಬತ್ತು ಕುರಿಗಳನ್ನು ಬೆಟ್ಟದಲ್ಲಿ ಬಿಟ್ಟು ತಪ್ಪಿಸಿಕೊಂಡು ಹೋದ ಆ ಒಂದು ಕುರಿಯನ್ನು ಹುಡುಕಿಕೊಂಡು ಹೋಗುವುದಿಲ್ಲವೇ?
I bassa ingi urunu mazin ini tam ini ni ino bi inde ba hunne me i hira mada ceki me ukasu me ma dusa unyara ubi inde me ba?
13 ೧೩ ಅದು ಅವನಿಗೆ ಸಿಕ್ಕಿದರೆ, ತಪ್ಪಿಸಿಕೊಳ್ಳದೆ ಇರುವ ತೊಂಬತ್ತೊಂಬತ್ತು ಕುರಿಗಳಿಗಿಂತ ಆ ಒಂದು ಕುರಿಗೋಸ್ಕರ ತುಂಬಾ ಸಂತೋಷಪಡುವನೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
Ingi ma tinka bini, iruba ime me idi rume i teki unu ni, ino uzati ubi inde me.
14 ೧೪ ಹಾಗೆಯೇ ಈ ಚಿಕ್ಕವರಲ್ಲಿ ಒಬ್ಬನಾದರೂ ನಾಶವಾಗಿಹೋಗುವುದು ಪರಲೋಕದಲ್ಲಿರುವ ನಿಮ್ಮ ತಂದೆಯ ಚಿತ್ತವಲ್ಲ.
Ani me ani aco ushi me sa ma rani anyumo aseseri mada nyarā me unu inde anyumo a hana acincin wa geme mahunne ba.
15 ೧೫ “ನಿನ್ನ ಸಹೋದರನು ನಿನ್ನ ವಿರುದ್ಧತಪ್ಪು ಮಾಡಿದರೆ, ನೀನು ಹೋಗಿ ಅವನು ಒಬ್ಬನೇ ಇರುವಾಗ ಅವನ ತಪ್ಪನ್ನು ಅವನಿಗೆ ಅರಿವಾಗುವಂತೆ ತಿಳಿಸು. ಅವನು ನಿನ್ನ ಮಾತನ್ನು ಕೇಳಿದರೆ ನಿನ್ನ ಸಹೋದರನನ್ನು ನೀನು ಸಂಪಾದಿಸಿಕೊಂಡಿರುವಿ.
Ingi u hennu uwe me macara we abanga, hana uka buka me hu nan me, ingi makunna we wa bura me.
16 ೧೬ ಆದರೆ ಅವನು ನಿನ್ನ ಮಾತು ಕೇಳದೇ ಹೋದರೆಎರಡು ಮೂರು ಸಾಕ್ಷಿಗಳ ಬಾಯಿಂದ ಪ್ರತಿಯೊಂದು ಮಾತು ಸ್ಥಿರಪಡುವ ಹಾಗೆ ಒಬ್ಬನನ್ನು ಅಥವಾ ಇಬ್ಬರನ್ನು ನಿನ್ನ ಸಂಗಡ ಕರೆದುಕೊಂಡು ಹೋಗು.
Ingi daki makunna we ba nyara unu inde utizi anyo ana ware nan watara ikeki.
17 ೧೭ ಅವನು ಅವರ ಮಾತನ್ನು ಕೇಳದೆ ಹೋದರೆ ಅದನ್ನು ಸಭೆಗೆ ಹೇಳು. ಅವನು ಸಭೆಯ ಮಾತನ್ನು ಕೇಳದೆ ಹೋದರೆ ಅವನು ನಿನಗೆ ಅನ್ಯನಂತೆಯೂಸುಂಕದವನಂತೆಯೂ ಇರಲಿ.
Ingi daki makunna we ba, ubuki anu tarsa Asere ingi magame ukunna anu tarsa Asere uziki me de sa ma tame Asere nan unu cara abangan sa magame ubarka.
18 ೧೮ “ಭೂಲೋಕದಲ್ಲಿ ನೀವು ಏನೇನು ಕಟ್ಟುತ್ತೀರೋ ಅದು ಪರಲೋಕದಲ್ಲಿಯೂ ಕಟ್ಟಲ್ಪಡುವುದು. ಮತ್ತು ಭೂಲೋಕದಲ್ಲಿ ಏನೇನು ಬಿಚ್ಚುತ್ತೀರೋ ಅದು ಪರಲೋಕದಲ್ಲಿಯೂ ಬಿಚ್ಚಲ್ಪಡುವುದು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
Kadundura inbo shivatti imum me sa ya tira une izin nutira aseseri imum be sa ya sopo aseseri.
19 ೧೯ ಇದಲ್ಲದೆ ನಿಮ್ಮಲ್ಲಿ ಇಬ್ಬರು ಬೇಡಿಕೊಳ್ಳತಕ್ಕ ಯಾವುದಾದರು ಒಂದು ವಿಷಯವಾಗಿ ಭೂಲೋಕದಲ್ಲಿ ಒಂದೇ ಮನಸ್ಸುಳ್ಳವರಾಗಿದ್ದರೆ ಅದು ಪರಲೋಕದಲ್ಲಿರುವ ನನ್ನ ತಂದೆಯಿಂದ ಅವರಿಗೆ ಆಗುವುದೆಂದು ನಿಮಗೆ ಹೇಳುತ್ತೇನೆ.
In kuri inbu shi, ingi anu ware anyumo ashi me une wa hem wa iko ire imum, aco um sa marani anyumo aseseri madi nya we.
20 ೨೦ ಏಕೆಂದರೆ ಇಬ್ಬರಾಗಲೀ ಮೂವರಾಗಲೀ ನನ್ನ ಹೆಸರಿನಲ್ಲಿ ಎಲ್ಲಿ ಕೂಡಿ ಬರುತ್ತಾರೋ ಅಲ್ಲಿ ಅವರ ಮಧ್ಯದಲ್ಲಿ ನಾನು ಇದ್ದೇನೆ” ಅಂದನು.
Barki vat ahira me sa ana ware nani wataru gurnan izi na we.
21 ೨೧ ಆಗ ಪೇತ್ರನು ಆತನ ಬಳಿಗೆ ಬಂದು, “ಕರ್ತನೇ ನನ್ನ ಸಹೋದರನು ನನ್ನ ವಿರುದ್ಧ ಪಾಪ ಮಾಡಿದರೆ ನಾನು ಎಷ್ಟು ಸಾರಿ ಅವನನ್ನು ಕ್ಷಮಿಸಬೇಕು? ಏಳು ಸಾರಿಯೋ?” ಎಂದು ಕೇಳಿದನು.
Ara anyumo anime Bitrus ma eh ma gun yeso, ugomo Asere kani ka hono kani uhenu um madi carrum iruban in vette? kanu sunare?
22 ೨೨ ಯೇಸು ಅವನಿಗೆ, “ಏಳು ಸಾರಿ ಎಂದಲ್ಲ ಏಳೆಪ್ಪತ್ತು ಸಾರಿ ಎಂದು ನಿನಗೆ ಹೇಳುತ್ತೇನೆ.
Yeso ma gun inzo kanu sunare ba akuru sunare kanu sunare.
23 ೨೩ ಆದುದರಿಂದ ಪರಲೋಕ ರಾಜ್ಯವು ತನ್ನ ಸೇವಕರಿಂದ ಲೆಕ್ಕವನ್ನು ತೆಗೆದುಕೊಳ್ಳಬೇಕೆಂದಿದ್ದ ಒಬ್ಬ ಅರಸನಿಗೆ ಹೋಲಿಕೆಯಾಗಿದೆ.
Barki ani me adi bati tigomo ta seseri nan urugomo sa ma nyara ma bassa ucira ume me atari tarere ame me.
24 ೨೪ ಅವನು ಲೆಕ್ಕ ತೆಗೆದುಕೊಳ್ಳುವುದಕ್ಕೆ ಪ್ರಾರಂಭಮಾಡಿದಾಗಹತ್ತು ಸಾವಿರ ಬಂಗಾರದ ನಾಣ್ಯ ನೀಡಬೇಕಿದ್ದ ಸೇವಕನನ್ನು ಅವನ ಬಳಿಗೆ ಕರತಂದರು.
Sa ugomo me mara anyumo ubassa me a eh mu reme wazurta sa matarsa me uge sa mada ke makurzo ba vat uciki ume une.
25 ೨೫ ಆ ಸಾಲ ತೀರಿಸುವುದಕ್ಕೆ ಅವನಲ್ಲಿ ಏನೂ ಇಲ್ಲದುದರಿಂದ ಅವನ ಒಡೆಯನು ಅವನನ್ನೂ, ಅವನ ಹೆಂಡತಿ, ಮಕ್ಕಳನ್ನೂ ಅವನಿಗಿದ್ದದ್ದೆಲ್ಲವನ್ನೂ ಮಾರಿ ಅದನ್ನು ತೀರಿಸಬೇಕೆಂದು ಅಪ್ಪಣೆ ಮಾಡಿದನು.
Sa madira ukurzo men, ugono magu azizi me nan une me wanna hana me vat nan imum me sa mazin akurzo ikirfi men.
26 ೨೬ ಆ ಸೇವಕನು ಮೊಣಕಾಲೂರಿ ತನ್ನ ತಲೆಯನ್ನು ಬಾಗಿ ಅವನಿಗೆ, ‘ಒಡೆಯನೇ, ನನ್ನ ಮೇಲೆ ತಾಳ್ಮೆಯಿರಲಿ, ನಿನ್ನದೆಲ್ಲವನ್ನೂ ನಾನು ಕೊಟ್ಟು ತೀರಿಸುತ್ತೇನೆಂದು’ ಹೇಳಿದನು.
Urere matunguno ma gun me nata iruba indi kurzo we kondi nyanin.
27 ೨೭ ಆ ಸೇವಕನ ಒಡೆಯನು ಕನಿಕರಪಟ್ಟು ಅವನನ್ನು ಬಿಡಿಸಿ ಆ ಸಾಲವನ್ನೆಲ್ಲಾ ಮನ್ನಿಸಿಬಿಟ್ಟನು.
Ugomo me makunna ugogoni urere me maceki me ma ceki ureme me.
28 ೨೮ ತರುವಾಯ ಆ ಸೇವಕನು ಹೊರಕ್ಕೆ ಬಂದು ತನಗೆ ನೂರು ಬೆಳ್ಳಿ ನಾಣ್ಯ ಕೊಡಬೇಕಾಗಿದ್ದ ಒಬ್ಬ ಜೊತೆ ಸೇವಕನನ್ನು ಕಂಡು ಅವನನ್ನು ಹಿಡಿದು ಕುತ್ತಿಗೆ ಹಿಸುಕಿ, ‘ನನ್ನ ಸಾಲ ತೀರಿಸು’ ಎಂದು ಹೇಳಿದನು.
Sa ma suro magurna nan ure uroni me sa matarsa me ureme ikiirfi cin ma tappi me iriri ma gu nyam imumme sa in tarsa we.
29 ೨೯ ಆದರೆ ಅವನ ಜೊತೆ ಸೇವಕನು ಮೊಣಕಾಲೂರಿ, ‘ನನ್ನ ಮೇಲೆ ತಾಳ್ಮೆಯಿರಲಿ ನಾನು ತೀರಿಸುತ್ತೇನೆ’ ಎಂದು ಬೇಡಿಕೊಂಡನು.
Uroni me matunguno ma gun me nata iruba indi kurzo wen.
30 ೩೦ ಆದರೆ ಅವನು ಒಪ್ಪದೆ ಹೊರಟುಹೋಗಿ ಆ ಸಾಲ ತೀರಿಸುವ ತನಕ ಅವನನ್ನು ಸೆರೆಮನೆಯಲ್ಲಿ ಹಾಕಿಸಿದನು.
Urere me ma ga me mahan unu rani me akura ani rere, agi makurzo men.
31 ೩೧ ಅವನ ಜೊತೆ ಸೇವಕರು ನಡೆದ ಸಂಗತಿಯನ್ನು ನೋಡಿ ಬಹಳವಾಗಿ ದುಃಖಪಟ್ಟು ತಮ್ಮ ಒಡೆಯನ ಬಳಿಗೆ ಬಂದು ನಡೆದದ್ದನ್ನೆಲ್ಲಾ ಆತನಿಗೆ ತಿಳಿಸಿದರು.
Sa aroni akatuma wakunna imum me icari we muruban wa kurzo ugomo imum nan.
32 ೩೨ ಆಗ ಅವನ ಒಡೆಯನು ಅವನನ್ನು ಕರಸಿ, ‘ಓ, ದುಷ್ಟ ಸೇವಕನೇ, ನೀನು ನನ್ನನ್ನು ಬೇಡಿಕೊಂಡದ್ದರಿಂದ ನಿನ್ನ ಸಾಲವನ್ನೆಲ್ಲಾ ನಾನು ಮನ್ನಿಸಿಬಿಟ್ಟೆನಲ್ಲವೇ?
Ugomo matiti me ma gun me gu unu ubur mani, ma ceki vat imum me sa imtarsa sa wa tizom.
33 ೩೩ ನಾನು ನಿನ್ನನ್ನು ಕರುಣಿಸಿದ ಹಾಗೆ ನೀನು ಸಹ ನಿನ್ನ ಜೊತೆ ಸೇವಕನನ್ನು ಕರುಣಿಸಬಾರದಾಗಿತ್ತೇ?’ ಎಂದು ಹೇಳಿ,
Daki ya wuna inu ukunna ugogoni uroni akatuma kawe ba?
34 ೩೪ ಒಡೆಯನು ಸಿಟ್ಟುಗೊಂಡು ತನಗೆ ಕೊಡಬೇಕಾದ ಸಾಲವನ್ನು ತೀರಿಸುವ ತನಕ ಅವನನ್ನು ಪೀಡಿಸುವವರ ಕೈಗೆ ಒಪ್ಪಿಸಿದನು.
Ugomo makunna iruba kang ma gu anyame titere makurzo vat ureme sa matarsa me.
35 ೩೫ ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ಸಹೋದರನಿಗೆ ಹೃದಯಪೂರ್ವಕವಾಗಿ ಕ್ಷಮಿಸದೇ ಹೋದರೆ ಪರಲೋಕದಲ್ಲಿರುವ ನನ್ನ ತಂದೆಯು ನಿಮಗೂ ಹಾಗೆಯೇ ಮಾಡುವನು” ಅಂದನು.
Ani me ani aco um sa marani anyuno aseseri madi wuzi vat de sa ma nyari me uceki uhenu umeme ini ruba ka inde.

< ಮತ್ತಾಯನು 18 >