< ಮತ್ತಾಯನು 19 >
1 ೧ ಹೀಗಿರುವಾಗ ಯೇಸು ಈ ಮಾತುಗಳನ್ನು ಮುಗಿಸಿದ ಮೇಲೆ ಗಲಿಲಾಯವನ್ನು ಬಿಟ್ಟು ಯೊರ್ದನ್ ಹೊಳೆಯ ಆಚೆಯಿರುವ ಯೂದಾಯ ಪ್ರಾಂತ್ಯಗಳಿಗೆ ಹೋದನು.
YA malofan anae si Jesus munjayan este sija na finanagüeña, jumanao guiya Galilea, ya mato gui oriyan Judea, gui otro bandan Jordan.
2 ೨ ಜನರ ದೊಡ್ಡ ಗುಂಪುಗಳು ಆತನನ್ನು ಹಿಂಬಾಲಿಸಿದವು, ಆತನು ಅವರನ್ನು ಅಲ್ಲಿಯೇ ಸ್ವಸ್ಥಮಾಡಿದನು.
Ya madalalag güe ni y dangculo na linajyan taotao, ya janafanjomlo güije.
3 ೩ ಫರಿಸಾಯರು ಯೇಸುವನ್ನು ಪರೀಕ್ಷಿಸಲು ಆತನ ಹತ್ತಿರಕ್ಕೆ ಬಂದು, “ಒಬ್ಬನು ಯಾವುದಾದರೂ ಒಂದು ಕಾರಣದಿಂದ ತನ್ನ ಹೆಂಡತಿಯನ್ನು ಬಿಟ್ಟುಬಿಡುವುದು ಶಾಸ್ತ್ರ ಸಮ್ಮತವೋ?” ಎಂದು ಕೇಳಲು,
Ayo nae manmato guiya güiya y Fariseo sija, ya matienta güe ya ilegñija nu güiya: Siña y laje jayute y asaguaña pot jafa na rason?
4 ೪ ಆತನು ಪ್ರತ್ಯುತ್ತರವಾಗಿ, “ಮನುಷ್ಯರನ್ನು ಉಂಟುಮಾಡಿದವನು ಆದಿಯಿಂದಲೇ ಅವರನ್ನು ಗಂಡು ಮತ್ತು ಹೆಣ್ಣಾಗಿ ಉಂಟುಮಾಡಿದನು,
Güiya jaope ya ilegña: Ada ti intaetae na y fumatinas desde y tutujon, laje yan palaoan jafatinas sija;
5 ೫ ‘ಈ ಕಾರಣದಿಂದಲೇ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು. ಅವರಿಬ್ಬರು ಒಂದೇ ಶರೀರವಾಗಿರುವರು ಎಂದು ನೀವು ಓದಲಿಲ್ಲವೋ?’
Ya ilegña: Pot este y laje upolo si tataña yan si nanaña, ya udaña yan y asaguaña, ya sija na dos unoja catneñija?
6 ೬ ಹೀಗಿರುವುದರಿಂದ ಅವರು ಇನ್ನು ಇಬ್ಬರಲ್ಲ ಒಂದೇ ಶರೀರವಾಗಿದ್ದಾರೆ. ಆದುದರಿಂದ ದೇವರು ಕೂಡಿಸಿದ್ದನ್ನು ಮನುಷ್ಯನು ಅಗಲಿಸಬಾರದು” ಅಂದನು.
Taegüenao sija ti udos, na unoja na catne. Pot enao mina y ninadaña Yuus, ti mauleg y taotao ujanaadesapatta.
7 ೭ ಅದಕ್ಕೆ ಅವರು ಆತನನ್ನು, “ಹಾಗಾದರೆ ವಿಚ್ಛೇದನ ಪತ್ರವನ್ನು ಕೊಟ್ಟು ಆಕೆಯನ್ನು ಬಿಟ್ಟುಬಿಡಬಹುದೆಂದು ಮೋಶೆಯು ಏಕೆ ಆಜ್ಞೆ ಕೊಟ್ಟನು?” ಎಂದು ಕೇಳಿದರು.
Ylegñija nu güiya: Pot jaf mina si Moises jatago na umatugue y papet umadesapatta, ya umayute?
8 ೮ ಅದಕ್ಕೆ ಯೇಸು ಅವರಿಗೆ, “ಮೋಶೆಯು ನಿಮ್ಮ ಮೊಂಡತನದ ದೆಸೆಯಿಂದ ನಿಮ್ಮ ಹೆಂಡತಿಯರನ್ನು ಬಿಟ್ಟುಬಿಡುವುದಕ್ಕೆ ಅಪ್ಪಣೆ ಕೊಟ್ಟನು. ಆದರೆ ಆದಿಯಿಂದ ಹೀಗೆ ಇರಲಿಲ್ಲ ಅಂದನು.
Güiya ilegña: Pot y manmajetog corasonmiyo, si Moises na japetmite na inyite y asaguanmiyo, lao y tutujonña ti taegüenao.
9 ೯ ಮತ್ತು ವ್ಯಭಿಚಾರದ ಕಾರಣದಿಂದಲ್ಲದೆ ತನ್ನ ಹೆಂಡತಿಯನ್ನು ಬಿಟ್ಟು ಮತ್ತೊಬ್ಬಳನ್ನು ಮದುವೆ ಮಾಡಿಕೊಳ್ಳುವವನು ವ್ಯಭಿಚಾರ ಮಾಡಿದಂತೆ; ಮತ್ತು ಗಂಡ ಬಿಟ್ಟವಳನ್ನು ಮದುವೆಯಾಗುವವನು ವ್ಯಭಿಚಾರ ಮಾಡಿದಂತೆ” ಎಂದು ನಿಮಗೆ ಹೇಳುತ್ತೇನೆ ಅಂದನು.
Guajo jamyo sumangane, na jayeja y yumute y asaguaña ya ti pot y inabale, ya umasagua yan otro, umabale; ya y umasagua yan y umayute, umabaleja.
10 ೧೦ ಅದಕ್ಕೆ ಶಿಷ್ಯರು ಯೇಸುವಿಗೆ, “ಹೆಂಡತಿಯೊಂದಿಗೆ ಗಂಡನ ಸಂಬಂಧ ಹೀಗಿದ್ದರೆ ಮದುವೆಯಾಗುವುದು ಒಳ್ಳೆಯದಲ್ಲ” ಅಂದರು.
Ylegñija y disipuluña sija nu güiya: Yaguin taegüenao nu y laje yan y asaguana, ti mauleg na umasagua.
11 ೧೧ ಆದರೆ ಯೇಸು ಅವರಿಗೆ, “ಈ ಮಾತನ್ನು ಎಲ್ಲರೂ ಅಂಗೀಕರಿಸಲಾರರು ಆದರೆ ಯಾರಿಗೆ ಆ ವರವು ಕೊಡಲ್ಪಟ್ಟಿದೆಯೋ ಅವರು ಮಾತ್ರ ಅದನ್ನು ಅಂಗೀಕರಿಸುವರು.
Ayo nae ilegña: Ti todo siña rumesibe este na sinangan: na ayoja sija y manmanae.
12 ೧೨ ತಾಯಿಯ ಗರ್ಭದಿಂದ ನಪುಂಸಕರಾಗಿ ಹುಟ್ಟಿದವರು ಕೆಲವರು ಇದ್ದಾರೆ ಮತ್ತು ಮನುಷ್ಯರಿಂದ ನಪುಂಸಕರಾಗಿ ಮಾಡಲ್ಪಟ್ಟವರು ಕೆಲವರು ಇದ್ದಾರೆ ಮತ್ತುಪರಲೋಕ ರಾಜ್ಯದ ನಿಮಿತ್ತವಾಗಿ ತಮ್ಮನ್ನು ತಾವೇ ನಪುಂಸಕರಾಗಿ ಮಾಡಿಕೊಂಡವರು ಕೆಲವರು ಇದ್ದಾರೆ. ಈ ಬೋಧನೆಯನ್ನು ಅಂಗೀಕರಿಸಬಲ್ಲವರು ಅಂಗೀಕರಿಸಲಿ” ಎಂದು ಹೇಳಿದನು.
Sa guaja capon sija na y mafañago capon guine y jalom tuyan nanañija; ya guaja capon na ninafancapon ni y taotao sija; ya guaja capon na jacapon maesaja sija pot rason di y raenon langet. Y siña rumesibe este, güiya uresibe.
13 ೧೩ ಕೆಲವರು ತಮ್ಮ ಚಿಕ್ಕ ಮಕ್ಕಳನ್ನು ಯೇಸುವಿನ ಬಳಿಗೆ ಕರೆತಂದು, ಅವರ ಮೇಲೆ ಆತನು ಕೈಗಳನ್ನಿಟ್ಟು ಪ್ರಾರ್ಥಿಸುವಂತೆ ಕೇಳಿದರು. ಆದರೆ ಶಿಷ್ಯರು ಅವರನ್ನು ಗದರಿಸಿದರು.
Ayo nae machule guato guiya güiya famaguon sija, para upolo y canaeña gui jiloñija, ya ufanaetae; lao y disipulo sija manlinalatde y manmangongone guato.
14 ೧೪ ಆದರೆ ಯೇಸು, “ಮಕ್ಕಳನ್ನು ಬಿಡಿರಿ. ನನ್ನ ಹತ್ತಿರ ಬರುವುದಕ್ಕೆ ಅವರಿಗೆ ಅಡ್ಡಿಮಾಡಬೇಡಿರಿ. ಏಕೆಂದರೆ ಪರಲೋಕ ರಾಜ್ಯವು ಇಂಥವರದೇ” ಎಂದು ಹೇಳಿದನು.
Lao si Jesus ilegña: Polo y famaguon, ya chamiyo chumochoma, na ufanmamaela guiya guajo; sa iyon este sija y raenon langet.
15 ೧೫ ಮತ್ತು ಅವರ ಮೇಲೆ ಕೈಯಿಟ್ಟು ಅನಂತರ ಅಲ್ಲಿಂದ ಹೊರಟು ಹೋದನು.
Ya anea munjayan japolo y canaeña gui jiloñija, mapos güije.
16 ೧೬ ಇಗೋ ಒಬ್ಬನು ಯೇಸುವಿನ ಬಳಿಗೆ ಬಂದು, “ಬೋಧಕನೇ ನಾನು ನಿತ್ಯಜೀವವನ್ನು ಹೊಂದುವುದಕ್ಕೆ ಯಾವ ಒಳ್ಳೆ ಕಾರ್ಯವನ್ನು ಮಾಡಬೇಕು?” ಎಂದು ಕೇಳಿದನು. (aiōnios )
Ya estagüe uno na mato, ya ilegña: Maestro, jafa mauleg jufatinas, para juguaja taejinecog na linala? (aiōnios )
17 ೧೭ ಆತನು ಅವನಿಗೆ, “ಒಳ್ಳೆಯದನ್ನು ಕುರಿತು ನನ್ನನ್ನು ಏಕೆ ಕೇಳುತ್ತೀಯಾ? ಒಳ್ಳೆಯವನು ಒಬ್ಬನೇ. ಆ ಜೀವಕ್ಕೆ ಸೇರಬೇಕೆಂದಿದ್ದರೆ ದೇವರಾಜ್ಞೆಗಳಿಗೆ ವಿಧೇಯನಾಗಿ ನಡೆದುಕೊ” ಎಂದು ಹೇಳಿದನು.
Güiya ilegña: Jafa na funaesenyo nu y minauleg? Guaja unoja mauleg: lao yaguin malagojao jumalom gui linâlâ, adaje y tinago sija.
18 ೧೮ ಅದಕ್ಕೆ ಅವನು, “ಅವು ಯಾವುವು?” ಎಂದು ಕೇಳಲು ಯೇಸು, “ನರಹತ್ಯ ಮಾಡಬಾರದು, ವ್ಯಭಿಚಾರ ಮಾಡಬಾರದು, ಕದಿಯಬಾರದು, ಸುಳ್ಳು ಸಾಕ್ಷಿ ಹೇಳಬಾರದು.
Ylegña nu güiya: Jafa? Si Jesus ilegña: Munga mamuno; munga umabale; munga mañaque; munga masangan y ti magajet na testimonio;
19 ೧೯ ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು ಮತ್ತು ನಿನ್ನಂತೆಯೇ ನಿನ್ನ ನೆರೆಯವನನ್ನು ಪ್ರೀತಿಸಬೇಕು” ಇವುಗಳೇ ಅಂದನು.
Onra si tatamo, yan si nanamo; Ya güaeya y tiguangmo calang jago maesaja.
20 ೨೦ ಆ ಯೌವನಸ್ಥನು ಆತನಿಗೆ, “ಇವೆಲ್ಲಕ್ಕೂ ವಿಧೇಯನಾಗಿ ನಾನು ನಡೆದುಕೊಂಡಿದ್ದೇನೆ; ಇನ್ನೂ ನನಗೇನು ಕೊರತೆಯಾಗಿರಬಹುದು?” ಎಂದು ಕೇಳಿದನು.
Y patgon na taotao ilegña nu güiya: Todo este sija juadaje: Jafa trabia fattaco?
21 ೨೧ ಯೇಸು ಅವನಿಗೆ, “ನೀನು ಪೂರ್ಣನಾಗುವುದಕ್ಕೆ ಬಯಸುವುದಾದರೆ, ಹೋಗಿ ನಿನಗಿರುವುದನ್ನೆಲ್ಲಾ ಮಾರಿ, ಬಡವರಿಗೆ ಕೊಡು, ಆಗ ನಿನಗೆ ಪರಲೋಕದಲ್ಲಿ ಸಂಪತ್ತಿರುವುದು. ಅನಂತರ ನೀನು ಬಂದು ನನ್ನನ್ನು ಹಿಂಬಾಲಿಸು” ಎಂದು ಹೇಳಿದನು.
Ylegña si Jesus nu güiya: Yaguin malagojao na uncabales, janao, ya unbende todo y güinajamo, ya unnae y mamobble, ya uguaja güinajamo gui langet; ya maela dalalagyo.
22 ೨೨ ಆದರೆ ಆ ಯೌವನಸ್ಥನು ಬಹಳ ಆಸ್ತಿಯುಳ್ಳವನಾಗಿದ್ದುದರಿಂದ ಈ ಮಾತನ್ನು ಕೇಳಿ ದುಃಖದಿಂದ ಹೊರಟುಹೋದನು.
Lao anae jajungog y patgon na taotao, este na sinangan, ninatriste ya mapos; sa guaja megae iyoña na güinaja.
23 ೨೩ ಆಗ ಯೇಸು ತನ್ನ ಶಿಷ್ಯರಿಗೆ, “ಐಶ್ವರ್ಯವಂತನು ಪರಲೋಕ ರಾಜ್ಯದಲ್ಲಿ ಸೇರುವುದು ಕಷ್ಟ” ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
Ayo nae si Jesus ilegña ni disipuluña: Magajet jusangane jamyo, na y manrico mapot jumalom gui raenon langet.
24 ೨೪ “ಐಶ್ವರ್ಯವಂತನು ದೇವರ ರಾಜ್ಯದಲ್ಲಿ ಸೇರುವುದಕ್ಕಿಂತ ಒಂಟೆಯು ಸೂಜಿಯ ಕಣ್ಣಿನಲ್ಲಿ ನುಗ್ಗುವುದು ಸುಲಭ ಎಂದು ನಿಮಗೆ ತಿರುಗಿ ಹೇಳುತ್ತೇನೆ” ಅಂದನು.
Ya jusangane jamyo talo, na mas guse un cameyo malofan gui matan jaguja, qui un rico ujalom gui raenon Yuus.
25 ೨೫ ಶಿಷ್ಯರು ಇದನ್ನು ಕೇಳಿ ಅತ್ಯಾಶ್ಚರ್ಯಪಟ್ಟು, “ಹೀಗಿದ್ದರೆ ರಕ್ಷಣೆ ಹೊಂದಲು ಯಾರಿಂದಾದೀತು?” ಎಂದು ಕೇಳಿದರು.
Anae jajungog este sija y disipuluña, ninafangosmanman, ya ilegñija: Jaye nae siña satbo?
26 ೨೬ ಯೇಸು ಅವರನ್ನು ದೃಷ್ಟಿಸಿ ನೋಡಿ “ಇದು ಮನುಷ್ಯರಿಂದ ಅಸಾಧ್ಯ. ಆದರೆ ದೇವರಿಗೆ ಎಲ್ಲವು ಸಾಧ್ಯವೇ” ಅಂದನು.
Maninatan as Jesus, ya ilegña nu sija: Yan y taotao sija, ti siña este; lao yan si Yuus, todo siña.
27 ೨೭ ಆಗ ಪೇತ್ರನು ಆತನನ್ನು, ಇಗೋ, ನಾವು ಎಲ್ಲವನ್ನೂ ಬಿಟ್ಟು ನಿನ್ನನ್ನು ಹಿಂಬಾಲಿಸಿದೆವು; ಇದರಿಂದ ನಮಗೆ ಏನು ದೊರಕುವುದು? ಎಂದು ಕೇಳಿದನು.
Ayo nae manope si Pedro, ilegña nu güiya: Estagüejamja, na inpelo todo, ya indadalalagjao; jafa nae uguajanmame?
28 ೨೮ ಯೇಸು ಅವರಿಗೆ, “ನಿಮಗೆ ಸತ್ಯವಾಗಿ ಹೇಳುತ್ತೇನೆ, ಹೊಸ ಸೃಷ್ಟಿಯಲ್ಲಿ ಮನುಷ್ಯಕುಮಾರನು ತನ್ನ ಮಹಿಮೆಯ ಸಿಂಹಾಸನದ ಮೇಲೆ ಕುಳಿತುಕೊಳ್ಳುವಾಗ, ನನ್ನನ್ನು ಹಿಂಬಾಲಿಸಿದವರಾದನೀವು ಸಹ ಹನ್ನೆರಡು ಸಿಂಹಾಸನಗಳ ಮೇಲೆ ಕುಳಿತುಕೊಂಡು, ಇಸ್ರಾಯೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರಿಸುವಿರಿ.
Si Jesus ilegña nu sija: Magajet jusangane jamyo, na jamyo ni dumadalalagyo, y tiempon finamauleg, anae matachong y Lajin taotao gui tronon y langetña, jamyo locue infanmatachong gui jilo y dose na trono para injisga y dose na tribu guiya Israel.
29 ೨೯ ಮತ್ತು ನನ್ನ ಹೆಸರಿನ ನಿಮಿತ್ತ ಮನೆಗಳನ್ನಾಗಲಿ, ಸಹೋದರರನ್ನಾಗಲಿ, ಸಹೋದರಿಯರನ್ನಾಗಲಿ, ತಂದೆಯನ್ನಾಗಲಿ, ತಾಯಿಯನ್ನಾಗಲಿ, ಮಕ್ಕಳನ್ನಾಗಲಿ, ಭೂಮಿಯನ್ನಾಗಲಿ, ತೊರೆದುಬಿಟ್ಟಿರುವ ಪ್ರತಿಯೊಬ್ಬನೂ ಎಲ್ಲವನ್ನೂ ನೂರರಷ್ಟು ಹೊಂದುವನು. ಅಲ್ಲದೆ ನಿತ್ಯಜೀವಕ್ಕೆ ಬಾಧ್ಯನಾಗುವನು. (aiōnios )
Ya jayeja y yumute gumaña, pat cheluña laje, pat cheluña palaoan, pat tataña, pat nanaña, pat lajiña, pat tanoña pot y naanjo, ufanresibe cien biaje, ya umaereda ni y taejinecog na linâlâ. (aiōnios )
30 ೩೦ ಆದರೆ ಈಗ ಮೊದಲಿನವರಾದ ಬಹು ಮಂದಿ ಕಡೆಯವರಾಗುವರು ಮತ್ತು ಕಡೆಯವರಾದ ಬಹು ಮಂದಿ ಮೊದಲಿನವರಾಗುವರು.
Lao megae na manfinenana ufanuttimo; ya y manuttimo ufanfinenana.