< ಮತ್ತಾಯನು 20 >
1 ೧ “ಪರಲೋಕ ರಾಜ್ಯವು ತನ್ನ ದ್ರಾಕ್ಷಾತೋಟಕ್ಕೆ ಕೂಲಿಯಾಳುಗಳನ್ನು ಗೊತ್ತುಮಾಡಲು ಬೆಳಗ್ಗೆ ಹೊರಟ ಒಬ್ಬ ತೋಟದ ಯಜಮಾನನಿಗೆ ಹೋಲಿಕೆಯಾಗಿದೆ.
For himlenes rike er likt en husbond som gikk ut tidlig om morgenen for å leie arbeidere til sin vingård.
2 ೨ ಅವನು ದಿನಕ್ಕೆ ಒಂದು ಬೆಳ್ಳಿ ನಾಣ್ಯದಂತೆ ಕೂಲಿಯಾಳುಗಳೊಂದಿಗೆ ಒಪ್ಪಂದ ಮಾಡಿದ ನಂತರ ಅವರನ್ನು ದ್ರಾಕ್ಷಾತೋಟಕ್ಕೆ ಕಳುಹಿಸಿದನು.
Og da han var blitt enig med arbeiderne om en penning om dagen, sendte han dem bort til sin vingård.
3 ೩ ಅವನು ಪುನಃ ಸುಮಾರುಒಂಭತ್ತು ಗಂಟೆಗೆ ಸಂತೆಯ ಸ್ಥಳಕ್ಕೆ ಹೋಗಿ ಕೆಲಸವಿಲ್ಲದೆ ಸುಮ್ಮನೇ ನಿಂತಿದ್ದ ಬೇರೆ ಕೆಲವರು ಕೂಲಿಯಾಳುಗಳನ್ನು ಕಂಡು,
Og han gikk ut ved den tredje time og så andre stå ledige på torvet,
4 ೪ ಅವರಿಗೆ, ‘ನೀವು ಸಹ ನನ್ನ ದ್ರಾಕ್ಷಾತೋಟಕ್ಕೆ ಹೋಗಿರಿ; ನಿಮಗೆ ಸರಿಯಾದ ಕೂಲಿಯನ್ನು ಕೊಡುತ್ತೇನೆ’ ಅಂದನು. ಆಗ ಅವರು ಕೆಲಸಕ್ಕೆ ಹೋದರು.
og til dem sa han: Gå også I bort til vingården, og hvad rett er, vil jeg gi eder. Og de gikk avsted.
5 ೫ ಅವನು ಪುನಃ ಸುಮಾರು ಹನ್ನೆರಡು ಗಂಟೆಗೆ ಮತ್ತುಮೂರು ಗಂಟೆಗೆ ಹೋಗಿ ಅದೇ ಪ್ರಕಾರ ಮಾಡಿದನು.
Atter gikk han ut ved den sjette og den niende time og gjorde likeså.
6 ೬ ಮತ್ತೊಂದು ಸಾರಿಸಾಯಂಕಾಲ ಐದು ಗಂಟೆಗೆ ಅವನು ಹೋಗಿ ಬೇರೆ ಕೆಲವರು ಸುಮ್ಮನೇ ನಿಂತಿರುವುದನ್ನು ಕಂಡು ಅವರನ್ನು, ‘ದಿನವೆಲ್ಲಾ ಇಲ್ಲಿ ಸುಮ್ಮನೇ ನಿಂತಿರುವುದೇಕೆ?’ ಎಂದು ಕೇಳಿದನು.
Og han gikk ut ved den ellevte time og fant andre stående der, og han sa til dem: Hvorfor står I her ledige hele dagen?
7 ೭ ಅವರು ಅವನಿಗೆ, ‘ಯಾರೂ ನಮ್ಮನ್ನು ಕೂಲಿಗೆ ಕರೆಯಲಿಲ್ಲ’ ಎಂದರು, ಆಗ ಅವನು ಅವರಿಗೆ, ‘ನೀವು ಸಹ ನನ್ನ ದ್ರಾಕ್ಷಾತೋಟಕ್ಕೆ ಹೋಗಿರಿ’ ಅಂದನು.
De sa til ham: Fordi ingen har leid oss. Han sa til dem: Gå også I bort til vingården!
8 ೮ ಸಂಜೆಯಾದಾಗ ದ್ರಾಕ್ಷಾತೋಟದ ಯಜಮಾನನು ತನ್ನ ಮೇಲ್ವಿಚಾರಕನಿಗೆ, ‘ಆ ಕೂಲಿಯಾಳುಗಳನ್ನು ಕರೆದು ಕಡೆಗೆ ಬಂದವರಿಂದ ಪ್ರಾರಂಭಿಸಿ ಮೊದಲು ಬಂದವರ ತನಕ ಕೂಲಿ ಕೊಡು’ ಎಂದು ಹೇಳಿದನು.
Men da det var blitt aften, sa vingårdens herre til sin forvalter: Kall arbeiderne frem og gi dem deres lønn; begynn med de siste og end med de første!
9 ೯ ಆಗ ಸಾಯಂಕಾಲ ಐದು ಗಂಟೆಗೆ ಬಂದು ಕೆಲಸ ಮಾಡಿದವರು ಬಂದಾಗ, ಪ್ರತಿಯೊಬ್ಬನಿಗೂ ಒಂದೊಂದು ಬೆಳ್ಳಿ ನಾಣ್ಯ ಸಿಕ್ಕಿತು.
Så kom de som var leid ved den ellevte time, og de fikk hver sin penning.
10 ೧೦ ಮೊದಲು ಬಂದವರು ಬಂದಾಗ ತಮಗೆ, ಹೆಚ್ಚು ದೊರೆಯುವುದೆಂದು ನೆನಸಿದರು. ಆದರೆ ಅವರಿಗೂ ಒಂದೊಂದು ಬೆಳ್ಳಿ ನಾಣ್ಯ ಸಿಕ್ಕಿತು.
Men da de første kom, tenkte de at de skulde få mere; men de fikk hver sin penning de også.
11 ೧೧ ಅವರು ಅದನ್ನು ತೆಗೆದುಕೊಂಡು ತೋಟದ ಯಜಮಾನನಿಗೆ ವಿರುದ್ಧವಾಗಿ ಗುಣಗುಟ್ಟಿ,
Men da de fikk den, knurret de mot husbonden og sa:
12 ೧೨ ‘ಕಡೆಗೆ ಬಂದ ಇವರು ಒಂದು ಗಂಟೆ ಮಾತ್ರ ಕೆಲಸ ಮಾಡಿದ್ದಾರೆ. ನಾವು ದಿನವೆಲ್ಲಾ ಬಿಸಲಿನಲ್ಲಿ ಕಷ್ಟಪಟ್ಟು ಕೆಲಸ ಮಾಡಿದ್ದೇವೆ. ಆದರೆ ನೀನು ಅವರನ್ನು ನಮಗೆ ಸಮನಾಗಿ ಮಾಡಿದ್ದೀಯೆ’ ಅಂದರು.
Disse siste har bare vært her en time, og du har gjort dem like med oss som har båret dagens byrde og hete.
13 ೧೩ ಅದಕ್ಕೆ ಯಜಮಾನನು ಅವರಲ್ಲಿ ಒಬ್ಬನಿಗೆ, ‘ಸ್ನೇಹಿತನೇ ನಾನು ನಿನಗೆ ಅನ್ಯಾಯ ಮಾಡಲಿಲ್ಲ. ನೀನು ನನ್ನ ಸಂಗಡ ಒಂದು ಬೆಳ್ಳಿಯ ನಾಣ್ಯಕ್ಕೆ ಒಪ್ಪಂದ ಮಾಡಿಕೊಳ್ಳಲಿಲ್ಲವೆ?
Men han svarte en av dem og sa: Min venn! jeg gjør dig ikke urett, blev du ikke enig med mig om en penning?
14 ೧೪ ನಿನ್ನ ಕೂಲಿಯನ್ನು ತೆಗೆದುಕೊಂಡು ಹೋಗು ನಿನಗೆ ಕೊಟ್ಟಂತೆ ಕಡೆಗೆ ಬಂದವರಿಗೂ ಕೊಡುವುದು ನನ್ನ ಇಷ್ಟ.
Ta ditt og gå! Men jeg vil gi denne siste like så meget som dig.
15 ೧೫ ನನ್ನ ಸ್ವಂತ ಸೊತ್ತನ್ನು ನನ್ನ ಇಷ್ಟದಂತೆ ಮಾಡಲು ನನಗೆ ಅಧಿಕಾರವಿಲ್ಲವೋ? ನಾನು ಉದಾರಿಯಾಗಿರುವುದಕ್ಕೆ ನೀನೇಕೆ ಹೊಟ್ಟೆಕಿಚ್ಚುಪಟ್ಟುಕೊಳ್ಳುವಿ?’ ಎಂದು ಹೇಳಿದನು.
Eller har jeg ikke lov til å gjøre med mitt hvad jeg vil? eller er ditt øie ondt fordi jeg er god?
16 ೧೬ ಹೀಗೆಕಡೆಯವರು ಮೊದಲಿನವರಾಗುವರು ಮೊದಲಿನವರು ಕಡೆಯವರಾಗುವರು” ಎಂದು ಹೇಳಿದನು.
Således skal de siste bli de første, og de første de siste; for mange er kalt, men få utvalgt.
17 ೧೭ ಯೇಸು ಯೆರೂಸಲೇಮಿಗೆ ಹೋಗುತ್ತಿರುವಾಗ ದಾರಿಯಲ್ಲಿ ಹನ್ನೆರಡು ಮಂದಿ ಶಿಷ್ಯರನ್ನು ಏಕಾಂತವಾಗಿ ಪಕ್ಕಕ್ಕೆ ಕರೆದುಕೊಂಡು ಅವರಿಗೆ,
Og da Jesus drog op til Jerusalem, tok han de tolv disipler til side og sa til dem på veien:
18 ೧೮ “ನೋಡಿರಿನಾವು ಯೆರೂಸಲೇಮಿಗೆ ಹೋಗುತ್ತಿದ್ದೇವೆ ಮತ್ತು ಮನುಷ್ಯಕುಮಾರನನ್ನು ಮುಖ್ಯಯಾಜಕರ ಮತ್ತು ಶಾಸ್ತ್ರಿಗಳ ಕೈಗೊಪ್ಪಿಸಿಕೊಡುವರು. ಅವರು ಆತನಿಗೆ ಮರಣದಂಡನೆಯನ್ನು ವಿಧಿಸುವರು.
Se, vi går op til Jerusalem, og Menneskesønnen skal overgis til yppersteprestene og de skriftlærde, og de skal dømme ham til døden
19 ೧೯ ಆತನನ್ನು ಅಪಹಾಸ್ಯ ಮಾಡುವುದಕ್ಕಾಗಿಯೂ ಚಾಟಿಗಳಿಂದ ಹೊಡೆಯುವುದಕ್ಕಾಗಿಯೂ ಶಿಲುಬೆಗೆ ಹಾಕುವುದಕ್ಕಾಗಿಯೂ ಅನ್ಯಜನರ ಕೈಗೆ ಒಪ್ಪಿಸುವರು. ಆದರೆ ಆತನುಮೂರನೆಯ ದಿನದಲ್ಲಿ ಜೀವಿತನಾಗಿ ಎಬ್ಬಿಸಲ್ಪಡುವನು” ಎಂದು ಹೇಳಿದನು.
og overgi ham til hedningene til å spottes og hudstrykes og korsfestes; og på den tredje dag skal han opstå.
20 ೨೦ ಆಗ ಜೆಬೆದಾಯನ ಮಕ್ಕಳ ತಾಯಿ ತನ್ನ ಮಕ್ಕಳೊಂದಿಗೆ ಯೇಸುವಿನ ಬಳಿಗೆ ಬಂದು; ಆತನಿಗೆ ಅಡ್ಡಬಿದ್ದು ಒಂದು ಉಪಕಾರ ಮಾಡಬೇಕೆಂದು ಬೇಡಿಕೊಂಡಳು.
Da gikk Sebedeus-sønnenes mor til ham med sine sønner, falt ned for ham og bad ham om noget.
21 ೨೧ ಆತನು ಆಕೆಯನ್ನು, “ನಿನ್ನ ಅಪೇಕ್ಷೆ ಏನು?” ಎಂದು ಕೇಳಲು ಆಕೆ ಆತನಿಗೆ, “ನಿನ್ನ ರಾಜ್ಯದಲ್ಲಿ ನನ್ನ ಈ ಇಬ್ಬರು ಮಕ್ಕಳಲ್ಲಿ ಒಬ್ಬನು ನಿನ್ನ ಬಲಗಡೆಯಲ್ಲೂ ಮತ್ತೊಬ್ಬನು ಎಡಗಡೆಯಲ್ಲೂ ಕುಳಿತುಕೊಳ್ಳುವಂತೆ ಅನುಗ್ರಹ ಮಾಡಬೇಕು” ಅಂದಳು.
Han sa til henne: Hvad vil du? Hun sa til ham: Si at disse mine to sønner skal sitte, den ene ved din høire og den andre ved din venstre side i ditt rike!
22 ೨೨ ಅದಕ್ಕೆ ಯೇಸು ಪ್ರತ್ಯುತ್ತರವಾಗಿ, “ನೀವು ಬೇಡಿಕೊಳ್ಳುತ್ತಿರುವುದು ಏನೆಂದು ನಿಮಗೆ ತಿಳಿಯದು. ನಾನು ಕುಡಿಯಬೇಕಾಗಿರುವ ಪಾನಪಾತ್ರೆಯಲ್ಲಿ ಕುಡಿಯುವುದಕ್ಕೆ ನಿಮ್ಮಿಂದ ಆಗುವುದೋ?” ಎಂದು ಕೇಳಿದನು. ಅವರು ಆತನಿಗೆ, “ನಮ್ಮಿಂದ ಆಗುವುದು” ಅಂದರು.
Men Jesus svarte og sa: I vet ikke hvad det er I ber om. Kan I drikke den kalk jeg skal drikke? De sa til ham: Det kan vi.
23 ೨೩ ಆಗ ಆತನು ಅವರಿಗೆ, “ನನ್ನ ಪಾನಪಾತ್ರೆಯಲ್ಲಿ ನಿಶ್ಚಯವಾಗಿ ನೀವು ಕುಡಿಯುವಿರಿ. ಆದರೆ ನನ್ನ ಎಡಬಲಗಡೆಗಳಲ್ಲಿ ಕುಳಿತುಕೊಳ್ಳುವಂತೆ ಅನುಗ್ರಹ ಮಾಡುವುದು ನನ್ನದಲ್ಲ, ಆದರೆ ನನ್ನ ತಂದೆಯಿಂದ ಅದು ಯಾರಿಗೆಂದು ಸಿದ್ಧಪಡಿಸಲಾಗಿದೆಯೋ ಅವರಿಗೇ ಸಿಕ್ಕುವುದು” ಎಂದು ಹೇಳಿದನು.
Han sa til dem: Min kalk skal I nok drikke; men å sitte ved min høire og ved min venstre side, det tilkommer det ikke mig å gi nogen, men det gis dem som det er beredt av min Fader.
24 ೨೪ ಉಳಿದ ಹತ್ತು ಮಂದಿ ಶಿಷ್ಯರು ಇದನ್ನು ಕೇಳಿ ಆ ಇಬ್ಬರು ಸಹೋದರರ ಮೇಲೆ ಸಿಟ್ಟುಗೊಂಡರು.
Da de ti hørte dette, blev de harme på de to brødre.
25 ೨೫ ಆದರೆ ಯೇಸು ಅವರನ್ನು ತನ್ನ ಹತ್ತಿರಕ್ಕೆ ಕರೆದು ಅವರಿಗೆ, “ಅನ್ಯಜನರಅಧಿಪತಿಗಳು ಅವರ ಮೇಲೆ ದೊರೆತನ ಮಾಡುತ್ತಾರೆ ಮತ್ತು ಅವರ ಮುಖ್ಯಾಧಿಕಾರಿಗಳು ಅವರ ಮೇಲೆ ಬಲಾತ್ಕಾರದಿಂದ ಅಧಿಕಾರ ನಡೆಸುತ್ತಾರೆ ಎಂದು ನಿಮಗೆ ಗೊತ್ತು.
Men Jesus kalte dem til sig og sa: I vet at fyrstene hersker over sine folk, og deres stormenn bruker makt over dem.
26 ೨೬ ಆದರೆ ನಿಮ್ಮಲ್ಲಿ ಹಾಗಿರಬಾರದು. ನಿಮ್ಮಲ್ಲಿ ದೊಡ್ಡವನಾಗಿರಲು ಬಯಸುವವನು ನಿಮ್ಮ ಸೇವಕನಾಗಿರಲಿ.
Så skal det ikke være blandt eder; men den som vil bli stor iblandt eder, han skal være eders tjener,
27 ೨೭ ನಿಮ್ಮಲ್ಲಿ ಪ್ರಮುಖನಾಗಿರಲು ಬಯಸುವವನು ನಿಮ್ಮ ದಾಸನಾಗಿರಲಿ.
og den som vil være den første blandt eder, han skal være eders træl,
28 ೨೮ ಹಾಗೆಯೇ ಮನುಷ್ಯಕುಮಾರನು ಸೇವೆಮಾಡಿಸಿಕೊಳ್ಳುವುದಕ್ಕಾಗಿ ಬರಲಿಲ್ಲ, ಸೇವೆ ಮಾಡುವುದಕ್ಕೂ, ಅನೇಕರ ವಿಮೋಚನೆಗಾಗಿ ತನ್ನ ಪ್ರಾಣವನ್ನು ಈಡಾಗಿ ಕೊಡುವುದಕ್ಕೂ ಬಂದನು” ಎಂದು ಹೇಳಿದನು.
likesom Menneskesønnen ikke er kommet for å la sig tjene, men for selv å tjene og gi sitt liv til en løsepenge for mange.
29 ೨೯ ಅವರು ಯೆರಿಕೋವಿನಿಂದ, ಹೊರಟುಹೋಗುತ್ತಿರುವಾಗ ಜನರ ದೊಡ್ಡ ಗುಂಪು ಆತನನ್ನು ಹಿಂಬಾಲಿಸಿತು.
Og da de gikk ut fra Jeriko, fulgte meget folk ham.
30 ೩೦ ಆಗ ದಾರಿಯ ಮಗ್ಗುಲಲ್ಲಿ ಕುಳಿತಿದ್ದ ಕುರುಡರಿಬ್ಬರು ಯೇಸು ಈ ಮಾರ್ಗವಾಗಿ ಹೋಗುತ್ತಿದ್ದಾನೆಂದು ಕೇಳಿ, “ಕರ್ತನೇ, ದಾವೀದ ಕುಮಾರನೇ ನಮ್ಮನ್ನು ಕರುಣಿಸು” ಎಂದು ಕೂಗಿಕೊಂಡರು.
Og se, to blinde satt ved veien, og da de hørte at det var Jesus som gikk forbi, ropte de: Miskunn dig over oss, Herre, du Davids sønn!
31 ೩೧ ಆದರೆ ಆ ಗುಂಪಿನವರು, ಸುಮ್ಮನಿರಿ ಎಂದು ಅವರನ್ನು ಗದರಿಸಿದರು. ಅವರಾದರೋ, “ಕರ್ತನೇ, ದಾವೀದ ಕುಮಾರನೇ, ನಮ್ಮನ್ನು ಕರುಣಿಸು” ಎಂದು ಗಟ್ಟಿಯಾಗಿ ಕೂಗಿಕೊಂಡರು.
Folket truet dem at de skulde tie; men de ropte enda mere og sa: Herre, miskunn dig over oss, du Davids sønn!
32 ೩೨ ಆಗ ಯೇಸು ನಿಂತು ಅವರನ್ನು ಕರೆದು, “ನಾನು ನಿಮಗೆ ಏನು ಮಾಡಬೇಕೆಂದು ಕೋರುತ್ತೀರಿ?” ಎಂದು ಕೇಳಿದನು.
Og Jesus stod stille og kalte på dem og sa: Hvad vil I jeg skal gjøre for eder?
33 ೩೩ ಅವರು, “ಕರ್ತನೇ, ನಮ್ಮ ಕಣ್ಣುಗಳು ಕಾಣುವಂತೆ ಮಾಡು” ಅಂದರು.
De sa: Herre! at våre øine må bli oplatt!
34 ೩೪ ಆಗ ಯೇಸು ಕನಿಕರಪಟ್ಟು, ಅವರ ಕಣ್ಣುಗಳನ್ನು ಮುಟ್ಟಿದನು. ಕೂಡಲೇ ಅವರು ದೃಷ್ಟಿಯನ್ನು ಹೊಂದಿಕೊಂಡು ಆತನನ್ನು ಹಿಂಬಾಲಿಸಿದರು.
Da ynkedes Jesus inderlig og rørte ved deres øine; og straks fikk de sitt syn igjen, og de fulgte ham.