< ಮತ್ತಾಯನು 22 >
1 ೧ ಯೇಸು ಪುನಃ ಅವರ ಸಂಗಡ ಮಾತನಾಡುತ್ತಾ ಸಾಮ್ಯರೂಪವಾಗಿ ಅವರಿಗೆ ಹೇಳಿದ್ದೇನೆಂದರೆ,
SI Jesus manope ya jacuentuse sija talo y acomparasion sija ilegña,
2 ೨ “ಪರಲೋಕ ರಾಜ್ಯವು ತನ್ನ ಮಗನ ಮದುವೆಯ ಔತಣವನ್ನು ಏರ್ಪಡಿಸಿದ ಒಬ್ಬ ಅರಸನಿಗೆ ಹೋಲಿಕೆಯಾಗಿದೆ.
Y raenon langet, parejo yan un ray, na jafatinas gupot umasagua para y lajiña.
3 ೩ ಅವನು ಮದುವೆಗೆ ಆಹ್ವಾನಿತರಾಗಿದ್ದವರನ್ನು ಕರೆಯುವುದಕ್ಕೆ ತನ್ನ ಆಳುಗಳನ್ನು ಕಳುಹಿಸಿದನು, ಆದರೆ ಬರುವುದಕ್ಕೆ ಅವರಿಗೆ ಮನಸ್ಸಿರಲಿಲ್ಲ.
Ya jatago y tentagoña sija, na ujaagange y manmaconbida gui guipot; lao ti manmalago manmato.
4 ೪ ಅರಸನು ತಿರುಗಿ ಬೇರೆ ಆಳುಗಳನ್ನು ಕರೆದು, ‘ನೀವು ಊಟಕ್ಕೆ ಆಹ್ವಾನಿತರ ಬಳಿಗೆ ಹೋಗಿ ಇಗೋ, ಔತಣ ಸಿದ್ಧವಾಗಿದೆ; ನನ್ನ ಎತ್ತುಗಳನ್ನೂ, ಕೊಬ್ಬಿದ ಹೋರಿಗಳನ್ನೂ ವಧಿಸಿದ್ದೇನೆ; ಎಲ್ಲಾ ಸಿದ್ಧವಾಗಿದೆ; ಮದುವೆಯ ಔತಣಕ್ಕೆ ಬನ್ನಿರಿ’ ಎಂಬುದಾಗಿ ಅವರಿಗೆ ಹೇಳಿರೆಂದು ಅಪ್ಪಣೆ ಕೊಟ್ಟು ಕಳುಹಿಸಿದನು.
Jatago talo palo tentagoña, ilegña: Sangane y manmaconbida: Esta jufamauleg y na taloane, y gajo toro yan y manyomog na gajo, esta manmapuno, ya todo esta listo: fanmamaela gui guipot umasagua.
5 ೫ ಆದರೆ ಅವರು ಆಹ್ವಾನವನ್ನು ಅಲಕ್ಷ್ಯಮಾಡಿ, ಒಬ್ಬನು ತನ್ನ ಹೊಲಕ್ಕೆ ಒಬ್ಬನು ತನ್ನ ವ್ಯಾಪಾರಕ್ಕೆ ಹೋಗಿಬಿಟ್ಟರು;
Lao sija ti jaatituye, ya manmapos, y uno para y fangualuaña, y otro para y cometsioña.
6 ೬ ಉಳಿದವರು ಅವನ ಆಳುಗಳನ್ನು ಹಿಡಿದು ಅವಮಾನಮಾಡಿ ಕೊಂದು ಹಾಕಿದರು.
Y palo macone y tentagoña ya manamamajlao, ya manmapuno.
7 ೭ ಅರಸನು ಅದನ್ನು ಕೇಳಿ, ಸಿಟ್ಟುಗೊಂಡು, ತನ್ನ ಸೈನ್ಯಗಳನ್ನು ಕಳುಹಿಸಿ ಆ ಕೊಲೆಗಾರರನ್ನು ಸಂಹರಿಸಿ ಅವರ ಪಟ್ಟಣವನ್ನು ಸುಟ್ಟುಬಿಟ್ಟನು.
Lao y ray ninalalalo; ya jatago y sendaluña sija na ujapuno todo ayo y mamuno sija, ya ujasonggue y siudaña.
8 ೮ ಆಗ ತನ್ನ ಆಳುಗಳಿಗೆ, ‘ಮದುವೆಯ ಔತಣವು ಸಿದ್ಧವಾಗಿದೆ ಸರಿ, ಆದರೆ ಆಹ್ವಾನಿತರು ಯೋಗ್ಯರಾಗಿರಲಿಲ್ಲ.
Ayo nae ilegña ni y tentagoña sija: Y guipot umasagua esta listo; lao ayo sija y manmaconbida ti mandigno.
9 ೯ ಆದುದರಿಂದ ನೀವು ಈಗ ಮುಖ್ಯರಸ್ತೆಗೆ ಹೋಗಿ ಕಂಡ ಕಂಡವರನ್ನೆಲ್ಲಾ ಮದುವೆಯ ಔತಣಕ್ಕೆ ಕರೆಯಿರಿ’ ಎಂದು ಹೇಳಿದನು.
Janao fanmalag y mafapoposgüe na chalan, ya inagange para y guipot umasagua todo y inseda.
10 ೧೦ ಆ ಆಳುಗಳು ಮುಖ್ಯರಸ್ತೆಗಳಿಗೆ ಹೋಗಿ ಕೆಟ್ಟವರು ಒಳ್ಳೆಯವರೆನ್ನದೇ ಕಂಡವರನ್ನೆಲ್ಲಾ ಒಟ್ಟುಗೂಡಿಸಿ ಕರೆದುಕೊಂಡು ಬಂದರು. ಹೀಗೆ ಮದುವೆಯ ಮಂಟಪವು ಅತಿಥಿಗಳಿಂದ ತುಂಬಿಹೋಯಿತು.
Ya manmapos y tentago sija para y chalan, ya janafandaña todo y jasoda, parejo y taelaye yan y mauleg; ya y guipot umasagua bula ni manmaconbida.
11 ೧೧ ಆಮೇಲೆ ಅರಸನು ಅತಿಥಿಗಳನ್ನು ನೋಡುವುದಕ್ಕಾಗಿ ಒಳಗೆ ಬಂದನು, ಮದುವೆಯ ಔತಣಕ್ಕೆ ತಕ್ಕ ವಸ್ತ್ರವನ್ನು ಹಾಕಿಕೊಳ್ಳದ ಒಬ್ಬನನ್ನು ಕಂಡು ಅರಸನು,
Ya anae jumalom y ray para ulie y manmaconbida, jalie güije un taotao na ti minagago ni y magagon gupot.
12 ೧೨ ಅವನಿಗೆ ‘ಸ್ನೇಹಿತನೇ, ಮದುವೆಯ ಬಟ್ಟೆ ಇಲ್ಲದೆ ನೀನಿಲ್ಲಿ ಹೇಗೆ ಒಳಕ್ಕೆ ಬಂದೆ?’ ಎಂದು ಕೇಳಲು ಅವನು ಮೌನವಾಗಿದ್ದನು.
Ya ilelegña nu guiya: Amigo, jafa na jumalomjao güine ya taya magagumo magagon gupot? Lao güiya ti cumuentos.
13 ೧೩ ಆಗ ಅರಸನು ಸೇವಕರಿಗೆ, ‘ಅವನ ಕೈಕಾಲು ಕಟ್ಟಿ ಅವನನ್ನು ಹೊರಗೆ ಕತ್ತಲೆಗೆ ನೂಕಿರಿ ಎಂದು ಹೇಳಿದನು. ಅಲ್ಲಿ ಗೋಳಾಟವೂ ಕಟಕಟನೆ ಹಲ್ಲು ಕಡಿಯೋಣವೂ ಇರುವವು.’
Ayo nae y ray ilegña ni y manmañeñetbe: Gode y adengña, yan y canaeña, ya inchile, ya inyite juyong gui jalom jomjom: ayo nae uguaja tumanges, yan chegcheg nifen.
14 ೧೪ ಹೀಗೆ ಕರೆಯಲ್ಪಟ್ಟವರು ಬಹು ಜನ, ಆರಿಸಲ್ಪಟ್ಟವರು ಸ್ವಲ್ಪ ಜನ” ಅಂದನು.
Sa megae manmaagang; lao didide manmaayig.
15 ೧೫ ಅನಂತರ ಫರಿಸಾಯರು ಹೊರಟು ಯೇಸುವನ್ನು ಮಾತಿನಲ್ಲಿ ಹೇಗೆ ಸಿಕ್ಕಿಸೋಣ ಎಂದು ಕೂಡಿ ಆಲೋಚಿಸಿಕೊಂಡು
Ayo nae manmapos y Fariseo sija, ya manacuentuse jafa taemano ninagadon güe ni y cuentosña.
16 ೧೬ ಆತನ ಬಳಿಗೆ ತಮ್ಮ ಶಿಷ್ಯರನ್ನು ಹೆರೋದ್ಯರ ಜೊತೆಮಾಡಿ ಕಳುಹಿಸಿದರು. ಇವರು ಯೇಸುವಿಗೆ, “ಗುರುವೇ, ನೀನು ಸತ್ಯವಂತನು, ದೇವರ ಮಾರ್ಗವನ್ನು ಸತ್ಯವಾಗಿ ಬೋಧಿಸುವವನು, ಯಾರಿಗೂ ಹೆದರದವನು; ನೀನು ಜನರ ದಾಕ್ಷಿಣ್ಯಕ್ಕೆ ತಕ್ಕಂತೆ ಮಾತನಾಡುವವನಲ್ಲ ಎಂದು ಬಲ್ಲೆವು.
Ya jatago guato guiya güiya y disipuloñija yan iyon Herodes, ilegñija: Maestro, intingo na jago magajetjao, ya mamananagüejao na magajet y chalan Yuus; ya taya unadadaje ni jaye; sa ti uno na guaelaye guiya jago y finaboresen taotao.
17 ೧೭ ಹೀಗಿರಲಾಗಿ ಕೈಸರನಿಗೆ ಸುಂಕ ಕೊಡುವುದು ನಿಯಮ ಬದ್ಧವೋ? ನಿನಗೆ ಹೇಗೆ ತೋರುತ್ತದೆ? ನಮಗೆ ಹೇಳು” ಅಂದರು.
Sangane jam nae, jafa jinasosomo? Tunas na infanmanaejam tributo as Sesat, pat aje?
18 ೧೮ ಯೇಸು ಅವರ ಕೆಡುಕನ್ನು ಅರಿತುಕೊಂಡವನಾಗಿ, “ಕಪಟಿಗಳೇ, ನನ್ನನ್ನು ಏಕೆ ಪರೀಕ್ಷೆಮಾಡುತ್ತೀರಿ?
Lao si Jesus jatungo y tinaelayeñija, ya ilegña: Jafa muna intientayo, hipocritas?
19 ೧೯ ಸುಂಕಕ್ಕೆ ಕೊಡುವ ನಾಣ್ಯವನ್ನು ನನಗೆ ತೋರಿಸಿರಿ” ಅನ್ನಲು ಅವರು ಆತನಿಗೆ ಒಂದು ನಾಣ್ಯವನ್ನು ತಂದು ಕೊಟ್ಟರು.
Fanueyofan ni y salape y tributo. Ya sija machuliegüe un dinario.
20 ೨೦ ಆತನು, “ಈ ಸ್ವರೂಪವು ಈ ಮುದ್ರೆಯೂ ಯಾರದು?” ಎಂದು ಕೇಳಿದ್ದಕ್ಕೆ
Ayo nae ilegña nu sija: Jaye iyo este na imagen yan y tinigue ni y gaigue gui jiloña?
21 ೨೧ ಅವರು, “ಕೈಸರನದು” ಅಂದರು. ಆಗ ಆತನು ಅವರಿಗೆ, “ಹಾಗಾದರೆ ಕೈಸರನದನ್ನು ಕೈಸರನಿಗೆ ಕೊಡಿರಿ; ದೇವರದನ್ನು ದೇವರಿಗೆ ಕೊಡಿರಿ” ಎಂದು ಹೇಳಿದನು.
Sija ilegñija nu güiya: Iyon Sesat. Ayo nae ilegña nu sija: Nae si Sesat ni iyon Sesat, ya si Yuus ni iyon Yuus.
22 ೨೨ ಅವರು ಈ ಮಾತನ್ನು ಕೇಳಿ ಆಶ್ಚರ್ಯಪಟ್ಟು ಆತನನ್ನು ಬಿಟ್ಟು ಹೋದರು.
Ya anae sija jajungog este na sinangan, ninafanmanman, ya madingo güe ya manmapos.
23 ೨೩ ಅದೇ ದಿನದಲ್ಲಿ ಪುನರುತ್ಥಾನವಿಲ್ಲ ಎಂದು ವಾದಿಸುವ ಕೆಲವು ಸದ್ದುಕಾಯರು ಆತನ ಬಳಿಗೆ ಬಂದರು.
Ayo na jaane, manmato guiya güiya y Saduseo sija, ni y ilegñija na taya quinajulo y manmatae, ya mafaesen güe,
24 ೨೪ ಇವರು ಆತನಿಗೆ, “ಬೋಧಕನೇ, ‘ಒಬ್ಬನು ಮಕ್ಕಳಿಲ್ಲದೆ ಸತ್ತರೆ ಅವನ ಹೆಂಡತಿಯನ್ನು ಅವನ ತಮ್ಮನು ಮದುವೆಮಾಡಿಕೊಂಡು ತನ್ನ ಅಣ್ಣನಿಗೆ ಮಕ್ಕಳನ್ನು ಪಡೆಯಬೇಕೆಂದು ಮೋಶೆಯು ಹೇಳಿದ್ದಾನೆ.’
Ylegñija: Maestro, si Moises ilegña, Yaguin jaye na taotao matae ya taya patgonña, y cheluña uasagua yan y asaguaña, ya unacajulo semiya gui cheluña.
25 ೨೫ ಆದರೆ ನಮ್ಮಲ್ಲಿ ಏಳು ಮಂದಿ ಸಹೋದರರಿದ್ದರು. ಮೊದಲನೆಯವನು ಮದುವೆ ಆಗಿ ತೀರಿಹೋದನು. ಅವನಿಗೆ ಮಕ್ಕಳಿಲ್ಲದ ಕಾರಣ ಹೆಂಡತಿಯನ್ನು ತನ್ನ ತಮ್ಮನಿಗೆ ಬಿಟ್ಟನು;
Guaja guiya jame siete na lalaje mañelo; ya y finena umasagua ya matae, ya taya patgonña, japolo y asaguaña gui cheluña.
26 ೨೬ ಅದರಂತೆ ಎರಡನೆಯವನೂ ಮೂರನೆಯವನೂ ಹಾಗೆಯೇ ಏಳನೆಯವನ ವರೆಗೂ ಮಾಡಿದರು.
Parejoja talo y mina dos, yan y mina tres, asta y mina siete.
27 ೨೭ ಅವರೆಲ್ಲರು ಸತ್ತ ಮೇಲೆ ಆ ಹೆಂಗಸೂ ಸತ್ತಳು.
Anae munjayan manmatae todosija, matae y palaoan locue.
28 ೨೮ ಹಾಗಾದರೆ ಪುನರುತ್ಥಾನದಲ್ಲಿ ಆಕೆ ಆ ಏಳು ಮಂದಿಯಲ್ಲಿ ಯಾರಿಗೆ ಹೆಂಡತಿಯಾಗಿರುವಳು? ಆಕೆಯನ್ನು ಅವರೆಲ್ಲರೂ ಮದುವೆಮಾಡಿಕೊಂಡಿದ್ದರಲ್ಲಾ” ಎಂದು ಪ್ರಶ್ನಿಸಿದರು.
Y quinajulo y manmatae, jaye gui siete ugaeasagua y palaoan? sa todosija maninasagua.
29 ೨೯ ಅದಕ್ಕೆ ಯೇಸು ಉತ್ತರವಾಗಿ ಅವರಿಗೆ, “ನೀವು ದೇವರ ವಾಕ್ಯವನ್ನಾದರೂ ದೇವರ ಶಕ್ತಿಯನ್ನಾದರೂ ಸರಿಯಾಗಿ ತಿಳಿದುಕೊಳ್ಳದೆ ತಪ್ಪು ಅಭಿಪ್ರಾಯದಲ್ಲಿದ್ದೀರಿ;
Ayo nae maninepe as Jesus, ilegña: Manabag jamyo sa ti intingo y Tinigue sija, ni y ninasiñan Yuus.
30 ೩೦ ಪುನರುತ್ಥಾನವಾದ ಮೇಲೆ ಮದುವೆಮಾಡಿಕೊಳ್ಳುವುದೂ ಇಲ್ಲ, ಮದುವೆ ಮಾಡಿಕೊಡುವುದೂ ಇಲ್ಲ; ಪರಲೋಕದಲ್ಲಿರುವ ದೇವದೂತರಂತೆ ಅವರು ಇರುತ್ತಾರೆ.
Sa y quinajulo y manmatae, ni manasagua ni umanafanasagua, sa manparejoja yan y angjet sija gui langet.
31 ೩೧ ಸತ್ತವರ ಪುನರುತ್ಥಾನದ ವಿಷಯವಾಗಿ ಹೇಳಬೇಕಾದರೆ,
Ya y quinajulo y manmatae, ada ti intaetae y esta masangan pot si Yuus nu jamyo na ilegña:
32 ೩೨ ‘ನಾನು ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರು’ ಎಂದು ದೇವರು ನಿಮಗೆ ನುಡಿದಿದ್ದನ್ನು ನೀವು ಓದಲಿಲ್ಲವೇ. ಆತನು ಸತ್ತವರಿಗೆ ದೇವರಲ್ಲ, ಆದರೆ ಜೀವಿಸುವವರಿಗೆ ದೇವರಾಗಿದ್ದಾನೆ” ಎಂದು ಹೇಳಿದನು.
Guajo si Yuus Abraham, yan si Yuus Ysaac, yan si Yuus Jacob? Ti güiya si Yuus y manmatae, na Yuus y manlâlâlâ.
33 ೩೩ ಜನರ ಗುಂಪು ಅದನ್ನು ಕೇಳಿ ಆತನ ಬೋಧನೆಗೆ ಆಶ್ಚರ್ಯಪಟ್ಟರು.
Anae majungog este nu y linajyan taotao, ninafanmanman ni y finanagüeña.
34 ೩೪ ಯೇಸು ಸದ್ದುಕಾಯರನ್ನು ಸದ್ದಿಲ್ಲದವರನ್ನಾಗಿ ಮಾಡಿದ್ದಾನೆಂದು ಫರಿಸಾಯರು ಕೇಳಿ ಅಲ್ಲಿಗೆ ಸೇರಿ ಬಂದರು.
Lao anae y Fariseo sija majungog na janafanmamatquilo y Saduseo sija, mandaña gui un lugat.
35 ೩೫ ಅವರಲ್ಲಿದ್ದ ಒಬ್ಬ ಧರ್ಮೋಪದೇಶಕನು ಆತನನ್ನು ಪರೀಕ್ಷೆ ಮಾಡಬೇಕೆಂದು,
Ya mafaesen güe, uno guiya sija, ni y magas y lay, tinienta güe, ilegña:
36 ೩೬ “ಗುರುವೇ, ಧರ್ಮಶಾಸ್ತ್ರದಲ್ಲಿ ಯಾವ ಆಜ್ಞೆ ಮುಖ್ಯವಾದದ್ದು” ಎಂದು ಆತನನ್ನು ಕೇಳಿದ್ದಕ್ಕೆ
Maestro, jafa y mas dangculo na tinago gui lay?
37 ೩೭ ಯೇಸು ಅವನಿಗೆ, “‘ನಿನ್ನ ದೇವರಾಗಿರುವ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ನಿನ್ನ ಪೂರ್ಣಮನಸ್ಸಿನಿಂದಲೂ ಪ್ರೀತಿಸಬೇಕು’
Si Jesus ilegña nu güiya: Guaeya y Señot Yuusmo con todo y corasonmo, yan todo y antimo, yan todo y jinasomo.
38 ೩೮ ಎಂಬ ಆಜ್ಞೆಯೇ ಮುಖ್ಯವಾದದ್ದು ಮತ್ತು ಮೊದಲನೆಯದು.
Este y finenana yan y dangculo na tinago.
39 ೩೯ ಇದಕ್ಕೆ ಸಮಾನವಾದ ಎರಡನೆಯ ಆಜ್ಞೆ ಯಾವುದೆಂದರೆ, ‘ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು’ ಎಂಬುದೇ.
Ya y mina dos parejoja yan este: Guaeya y tiguangmo parejo yan jago.
40 ೪೦ ಈ ಎರಡು ಆಜ್ಞೆಗಳಲ್ಲಿ ಎಲ್ಲಾ ಧರ್ಮನಿಯಮವೂ ಪ್ರವಾದನಾಗ್ರಂಥಗಳೂ ಆಧಾರವಾಗಿವೆ” ಎಂದು ಹೇಳಿದನು.
Este y dos na tinago chinileja todo y lay yan y profeta.
41 ೪೧ ಫರಿಸಾಯರು ಕೂಡಿಬಂದಿರಲಾಗಿ ಯೇಸು ಅವರಿಗೆ,
Ya enae estaba y Fariseo sija mandadaña, si Jesus manfinaesen sija;
42 ೪೨ “ಬರಬೇಕಾದ ಕ್ರಿಸ್ತನ ವಿಷಯವಾಗಿ ನಿಮಗೆ ಹೇಗೆ ತೋರುತ್ತದೆ? ಆತನು ಯಾರ ಮಗನು?” ಎಂದು ಕೇಳಿದ್ದಕ್ಕೆ
Ylegña: Jafa jinasonmiyo as Cristo? jaye gaelaje güe? Sija ilegñija: Lajin David.
43 ೪೩ ಅವರು ಆತನಿಗೆ, “ದಾವೀದನ ಮಗನು” ಎಂದು ಹೇಳಿದರು. ಅದಕ್ಕೆ ಆತನು, “ಹಾಗಾದರೆ, ದಾವೀದನೇ ಪವಿತ್ರಾತ್ಮನ ಪ್ರೇರಣೆಯಿಂದ ಆತನನ್ನು ಕರ್ತನು ಎಂದು ಕರೆದಿದ್ದಾನಲ್ಲಾ, ಅದು ಹೇಗೆ?
Güiya ilegña nu sija: Jafa na si David gui Espiritu finanaan güe Señot, ilegña:
44 ೪೪ “‘ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದಗಳ ಕೆಳಗೆ ಹಾಕುವ ತನಕ ನೀನು ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು’ ಎಂದು ಕರ್ತನು ನನ್ನ ಒಡೆಯನಿಗೆ ನುಡಿದನು.
Y Señot jasangane y Señotjo, fatachong gui agapa na canaejo, asta qui jupolo y enemigumo gui papâ adengmo.
45 ೪೫ ಈ ಮಾತಿನಲ್ಲಿ ದಾವೀದನೇ ಆತನನ್ನು ‘ಕರ್ತನೆಂದು’ ಕರೆದ ಮೇಲೆ ಆತನು ಅವನಿಗೆ ಮಗನಾಗುವುದು ಹೇಗೆ?” ಅಂದನು.
Yaguin si David finanaan güe Señot, jafa taemano lajiña?
46 ೪೬ ಅದಕ್ಕೆ ಉತ್ತರವಾಗಿ ಯಾರೂ ಒಂದು ಮಾತನ್ನಾದರೂ ಆತನಿಗೆ ಹೇಳಲಾರದೆ ಹೋದರು. ಇದಲ್ಲದೆ ಅಂದಿನಿಂದ ಆತನನ್ನು ಪ್ರಶ್ನಿಸಲು ಯಾರೂ ಧೈರ್ಯಪಡಲಿಲ್ಲ.
Ya taya siña ni uno umope güe. Ya desde ayo na jaane taya umatrebe güe para umafaesesen güe ni jafa.