< ಮತ್ತಾಯನು 23 >

1 ತರುವಾಯ ಯೇಸು ಜನರ ಗುಂಪಿಗೂ ಹಾಗು ತನ್ನ ಶಿಷ್ಯರಿಗೂ ಹೇಳಿದ್ದೇನೆಂದರೆ,
Nin nani, Yesu su uliru ligozi, nin nono katwa mye.
2 “ಶಾಸ್ತ್ರಿಗಳೂ ಫರಿಸಾಯರೂ ಮೋಶೆಯ ಸ್ಥಾನದಲ್ಲಿಕುಳಿತುಕೊಂಡಿದ್ದಾರೆ;
A woro, “Anan ninyerte nin na Farisiyawa, asa iso kiti lisosin Musa.
3 ಆದುದರಿಂದ ಅವರು ನಿಮಗೆ ಏನೆಲ್ಲಾ ಆಜ್ಞಾಪಿಸುತ್ತಾರೋ ಅದನ್ನೆಲ್ಲಾ ಕೈಕೊಂಡು ನಡೆಯಿರಿ; ಆದರೆ ಅವರ ಕ್ರಿಯೆಗಳ ಪ್ರಕಾರ ನಡೆಯಬೇಡಿರಿ; ಅವರು ಹೇಳುತ್ತಾರೆಯೇ ಹೊರತು ಅದರಂತೆ ನಡೆಯುವುದಿಲ್ಲ.
Bara nani, vat nile imon na ibellin munu isu, suun inin kin yenje, na iwa su adu mine ba. Bara inung di nbellu, na idin su inin ba.
4 ಅವರು ಭಾರವಾದ ಹೊರೆಗಳನ್ನು ಕಟ್ಟಿ ಜನರ ಹೆಗಲಿನ ಮೇಲೆ ಹೊರಿಸುತ್ತಾರೆ; ಆದರೆ ತಾವಾದರೋ ಬೆರಳಿನಿಂದಲಾದರೂ ಅವುಗಳನ್ನುಮುಟ್ಟಲೊಲ್ಲರು.
Nanere, asa itere kutura ku getek, kun nijasin inyaunu, inin tarda anit nabandang, inung atimine na iba dudu nin ticin bara iyaun ba.
5 ಅವರು ತಮ್ಮ ಕೆಲಸಗಳನ್ನೆಲ್ಲಾ ಜನರು ನೋಡಬೇಕೆಂದು ಮಾಡುತ್ತಾರೆ. ತಾವು ಕಟ್ಟಿಕೊಳ್ಳುವಜ್ಞಾಪಕಪಟ್ಟಿಗಳನ್ನು ಅಗಲಮಾಡುತ್ತಾರೆ. ತಮ್ಮ ವಸ್ತ್ರಗಳ ಗೊಂಡೆಗಳನ್ನು ಉದ್ದಮಾಡಿಕೊಳ್ಳುತ್ತಾರೆ.
Vat nadu mine idin su, anit nan yenje nani, asa ikye ilaya gba gbardang, inin ta alutuk ajangaran.
6 ಇದಲ್ಲದೆ ಔತಣ ಉತ್ಸವಗಳಲ್ಲಿ ಪ್ರಥಮಸ್ಥಾನ, ಸಭಾಮಂದಿರಗಳಲ್ಲಿ ಮುಖ್ಯ ಪೀಠಗಳು;
Idinin su niti lisosin tigo kiti nbuki, nin kiti lisosin nago nanya kutyi nlirag,
7 ಅಂಗಡಿ ಬೀದಿಗಳಲ್ಲಿ ನಮಸ್ಕಾರಗಳು, ಜನರಿಂದ ‘ಗುರುಗಳೆನ್ನಿಸಿಕೊಳ್ಳುವುದು,’ ಇವುಗಳೇ ಅವರಿಗೆ ಇಷ್ಟ.
nin nilip tikune nanya nkasu, anit yicu nani 'Unan yiru'.
8 ಆದರೆ ನೀವು ‘ಬೋಧಕರೆನ್ನಿಸಿಕೊಳ್ಳಬೇಡಿರಿ;’ ಏಕೆಂದರೆ ಕ್ರಿಸ್ತನೊಬ್ಬನೇ ನಿಮಗಿರುವ ಬೋಧಕನು ಮತ್ತು ನೀವೆಲ್ಲರೂ ಸಹೋದರರು.
Bara anung na iwa yicu munu 'Unan yiru', bara idinin nnan yiru warumari, vat mine linuanari.
9 ಇದಲ್ಲದೆ ಭೂಲೋಕದಲ್ಲಿ ಯಾರನ್ನೂ ನಿಮ್ಮ ತಂದೆ ಎಂದು ಕರೆಯಬೇಡಿರಿ; ಏಕೆಂದರೆ ಪರಲೋಕದಲ್ಲಿರುವಾತನೊಬ್ಬನೇ ನಿಮ್ಮ ತಂದೆ
Na iwa yicu unit nanya inyi Ucif mine ba, bara tidi nin Ncif warum, amere ule na adi nanya kitene kani.
10 ೧೦ ಮತ್ತು ‘ಗುರುವೆಂದು’ ಅನ್ನಿಸಿಕೊಳ್ಳಬೇಡಿರಿ; ಏಕೆಂದರೆ, ಕ್ರಿಸ್ತನೊಬ್ಬನೇ ನಿಮಗಿರುವ ಗುರುವು
Sa iyicu munu 'Unan dursuzu', bara idinin nnan dursuzu warum, ame Kristi.
11 ೧೧ ಆದರೆನಿಮ್ಮಲ್ಲಿ ಹೆಚ್ಚಿನವನು ನಿಮ್ಮ ಸೇವಕನಾಗಿರಬೇಕು.
Ame ulenge na adi udia nanya mine, na aso unan su munu katwa.
12 ೧೨ ತನ್ನನ್ನು ಹೆಚ್ಚಿಸಿಕೊಳ್ಳುವವನು ತಗ್ಗಿಸಲ್ಪಡುವನು, ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು.
Vat nlenge na aghantina liti mye, iba toltunghe, nin vat nlenge na a toltuno liti mye iba ghantinghe.
13 ೧೩ “ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ಪರಲೋಕ ರಾಜ್ಯದ ಬಾಗಿಲನ್ನು ಮನುಷ್ಯರ ಎದುರಿಗೆ ಮುಚ್ಚಿಬಿಡುತ್ತೀರಿ. ನೀವಂತೂ ಒಳಕ್ಕೆ ಪ್ರವೇಶಿಸುವುದಿಲ್ಲ, ಒಳಕ್ಕೆ ಪ್ರವೇಶಿಸಬೇಕೆಂದಿರುವವರನ್ನೂ ಪ್ರವೇಶಿಸಗೊಡಿಸುವುದೂ ಇಲ್ಲ.
Kash anughe, anan ninyerte nin na Farisiyawa, anan rusuzu nati, anung ntursu kipin tigo Kutelle kiti nanit, na anung ati mine npira ba, a na iyinna ale na idinin su pire, ipuru ba.
14 ೧೪ ಅಯ್ಯೋ, ಕಪಟಿಗಳಾದಶಾಸ್ತ್ರಿಗಳೇ, ಫರಿಸಾಯರೇ ಜನರು ನೋಡಬೇಕೆಂದು ಉದ್ದವಾದ ಪ್ರಾರ್ಥನೆಗಳನ್ನು ಮಾಡುತ್ತೀರೀ. ನೀವು ವಿಧವೆಯರ ಮನೆಗಳನ್ನು ನುಂಗಿ ನಟನೆಮಾಡುತ್ತೀರಿ. ಆದುದರಿಂದ ನೀವು ಹೆಚ್ಚಿನ ದಂಡನೆಯನ್ನು ಹೊಂದುವಿರಿ.
Kash anung, anan ninyerte nin na Farisiyawa, anan rusuzu nati, idin bolusu nalari nawani ale na ales mine na kuzu, inani din dursuzu ati mine kiti nlirag mijangarang bara nani iba seru uca nkul udia.
15 ೧೫ “ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನೀವು ಒಬ್ಬ ಮನುಷ್ಯನನ್ನು ಮತಾಂತರಗೊಳ್ಳಿಸುವುದಕ್ಕಾಗಿ ಭೂಮಿಯನ್ನೂ ಸಮುದ್ರವನ್ನೂ ಸುತ್ತಾಡಿಕೊಂಡು ಬರುತ್ತೀರಿ; ಅವನು ನಿಮ್ಮ ಮತಕ್ಕೆ ಸೇರಿದ ಮೇಲೆ ಅವನನ್ನು ನಿಮಗಿಂತ ಎರಡರಷ್ಟು ನರಕಕ್ಕೆ ಪಾತ್ರನಾಗಮಾಡುತ್ತೀರಿ. (Geenna g1067)
Kash anung, anan ninyerte nin nafarisiyawa, bara asa idoo kurawa nin kutyin, npiziru anan dortu Kutelle, iwa se, asa ukuru itaghe aso gono nlahira nafo na anung atimine di. (Geenna g1067)
16 ೧೬ “ಅಯ್ಯೋ, ಕುರುಡು ಮಾರ್ಗದರ್ಶಿಗಳೇ, ‘ಒಬ್ಬನು ದೇವಾಲಯದ ಮೇಲೆ ಆಣೆಯಿಟ್ಟುಕೊಂಡರೆ ಅದೇನು ಆಣೆಯಲ್ಲ ಅನ್ನುತ್ತೀರಿ. ಆದರೆ ಒಬ್ಬನು ದೇವಾಲಯದ ಚಿನ್ನದ ಮೇಲೆ ಆಣೆಯಿಟ್ಟುಕೊಂಡರೆ ಅದನ್ನು ನಡಿಸಲೇಬೇಕು’ ಎಂದು ಹೇಳುತ್ತೀರಿ.
Kash anung anan ninyerte nin na Farisiyawa, anung na ina woro, 'Vat nlenge na asillo nin kutyi nlirag, na imomo nari ba, vat nlenge na a sillo nin nazurfa kutyi nlirag, isillin ntere ghe.'
17 ೧೭ ಕುರುಡರೇ, ಮೂರ್ಖರೇ, ಯಾವುದು ಹೆಚ್ಚಿನದು? ಚಿನ್ನವೋ, ಚಿನ್ನವನ್ನು ಪ್ರತಿಷ್ಠೆ ಮಾಡುವ ದೇವಾಲಯವೋ?
Fe uduu ulalang, iyaghari katin, azurfe sa kutyi nlirag na kuna kussu fi azurfe?
18 ೧೮ ಮತ್ತು ‘ಒಬ್ಬನು ಯಜ್ಞವೇದಿಯ ಮೇಲೆ ಆಣೆಯಿಟ್ಟುಕೊಂಡರೆ ಅದೇನು ಆಣೆಯಲ್ಲ ಅನ್ನುತ್ತೀರಿ, ಆದರೆ ಅದರಲ್ಲಿರುವ ಕಾಣಿಕೆಯ ಮೇಲೆ ಆಣೆಯಿಟ್ಟುಕೊಂಡರೆ ಅದನ್ನು ನಡಿಸಲೇಬೇಕು’ ಎಂದು ಹೇಳುತ್ತೀರಿ.
Nin nworu, vat nlenge na asillo nin bagadi na imomonari ba, bara vat nlenge na asillo nin nfillu na udi kitene, isillin in tereghe.
19 ೧೯ ಕುರುಡರೇ, ಮೂರ್ಖರೇ, ಯಾವುದು ಹೆಚ್ಚಿನದು? ಕಾಣಿಕೆಯೋ, ಆ ಕಾಣಿಕೆಯನ್ನು ಪ್ರತಿಷ್ಠೆ ಮಾಡುವ ಯಜ್ಞವೇದಿಯೋ?
Anung anit aduu, Iyaghari katin, ufille sa ubagadi na nnere na kussu ufille?
20 ೨೦ ಹೀಗಿರುವುದರಿಂದ ಯಾವನಾದರೂ ಯಜ್ಞವೇದಿಯ ಮೇಲೆ ಆಣೆಯಿಟ್ಟುಕೊಂಡರೆ ಅದರ ಮೇಲೆಯೂ, ಅದರಲ್ಲಿರುವ ಎಲ್ಲದರ ಮೇಲೆಯೂ ಆಣೆಯಿಟ್ಟುಕೊಂಡ ಹಾಗಾಯಿತು.
Bara nani, vat nlenge na asillp nin nbagadi, asillo nin vat nimon ile na idi kitene nbagade.
21 ೨೧ ಮತ್ತು ಯಾವನಾದರೂ ದೇವಾಲಯದ ಮೇಲೆ ಆಣೆಯಿಟ್ಟುಕೊಂಡರೆ ಅದರ ಮೇಲೆಯೂ, ಅದರಲ್ಲಿ ವಾಸಮಾಡುವಾತನ ಮೇಲೆಯೂ ಆಣೆಯಿಟ್ಟುಕೊಂಡ ಹಾಗಾಯಿತು.
Ame ule na asillo nin kutyi nlirag, asillo nin kunin nin nlenge na asosin nanya kunin.
22 ೨೨ ಮತ್ತು ಪರಲೋಕದ ಮೇಲೆ ಆಣೆಯಿಟ್ಟುಕೊಂಡರೆ ದೇವರ ಸಿಂಹಾಸನದ ಮೇಲೆಯೂ ಅದರಲ್ಲಿ ಕುಳಿತಿರುವಾತನ ಮೇಲೆಯೂ ಆಣೆಯಿಟ್ಟುಕೊಂಡ ಹಾಗಾಯಿತು.
Ame ulle na asillo nin kitene kani, asillo nin kutet tigo Kutelle ninghe ule na asoson kitene.
23 ೨೩ ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನೀವು ಪುದೀನ, ಮರುಗಪತ್ರೆ, ಸಬಸಿಗೆಸೊಪ್ಪು, ಜೀರಿಗೆಗಳಲ್ಲಿ ದಶಮ ಭಾಗವನ್ನು ಕೊಡುತ್ತೀರಿ ಸರಿ, ಆದರೆ ಧರ್ಮಶಾಸ್ತ್ರದಲ್ಲಿ ಮುಖ್ಯವಾದುದನ್ನು ಅಂದರೆ ನ್ಯಾಯವನ್ನೂ, ಕರುಣೆಯನ್ನೂ ನಂಬಿಕೆಯನ್ನೂ ಬಿಟ್ಟುಬಿಟ್ಟಿದ್ದೀರಿ. ಇವುಗಳನ್ನು ಮಾಡಬೇಕು; ಅವುಗಳನ್ನೂ ಬಿಡಬಾರದು.
Kash anung anan ninyerte nin na Farisiyawa, anan rusuzu nati, idin nizu uzakka vat nimon kunen, ina suna litino nimone, kidegen usu gegeme, uyitu dert, ile imonere caun isu, na iwa fillin inin ba.
24 ೨೪ ಕುರುಡ ಮಾರ್ಗದರ್ಶಿಗಳೇ, ನೀವುಸೊಳ್ಳೇ ಸೋಸುವವರು, ಆದರೆ ಒಂಟೆ ನುಂಗುವವರು.
Anung aduu, fe ulenge na asa ifillo kajiji kacing, ina milla kulonkomi.
25 ೨೫ “ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನೀವು ಪಾತ್ರೆ, ಬಟ್ಟಲು ಇವುಗಳ ಹೊರಭಾಗವನ್ನು ಶುಚಿಮಾಡುತ್ತೀರಿ ಆದರೆ ಅವುಗಳ ಒಳಗೆ ಸುಲಿಗೆಯಿಂದಲೂ, ದುರಾಶೆಯಿಂದಲೂ ತುಂಬಿರುತ್ತವೆ.
Kash anung anan ninyerte nin na Farisiyawa, a sa ukusu mamal kakuk nin kishik, ina suuna nanye nin ndinon.
26 ೨೬ ಕುರುಡನಾದ ಫರಿಸಾಯನೇ, ಮೊದಲು ಪಾತ್ರೆ ಬಟ್ಟಲುಗಳ ಒಳಭಾಗವನ್ನು ಶುಚಿಮಾಡು, ಆಗ ಅವುಗಳ ಹೊರಭಾಗವೂ ಶುಚಿಯಾಗುವುದು.
Anung Afarisiyawa aduu, burno ukussu nanya kakupe nin kishik, bara uddase nan da yita lau tutun.
27 ೨೭ “ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ ನೀವು ಸುಣ್ಣಾ ಹಚ್ಚಿದ ಸಮಾಧಿಗಳಿಗೆ ಹೋಲಿಕೆಯಾಗಿದ್ದೀರಿ; ಇವು ಹೊರಗೆ ಸುಂದರವಾಗಿ ಕಾಣುತ್ತವೆ. ಒಳಗೆ ನೋಡಿದರೆ ಸತ್ತವರ ಎಲುಬುಗಳಿಂದಲೂ ಎಲ್ಲಾ ಹೊಲಸಿನಿಂದಲೂ ತುಂಬಿರುತ್ತವೆ.
Kash anung anan ninyerte nin na Farisiyawa, anan rusuzu nati, anung di nafo nisek nibo pert, alenge ndase idin yenju gegeme, nanye kullun nin nakuu na nan kuzu, nan nimon nsalin nlau.
28 ೨೮ ಹಾಗೆಯೇ ನೀವು ಸಹ ಹೊರಗೆ ಜನರಿಗೆ ನೀತಿವಂತರಂತೆ ಕಾಣಿಸಿಕೊಳ್ಳುತ್ತೀರಿ. ಆದರೆ ಒಳಗೆ ಕಪಟ ಮತ್ತು ಅಕ್ರಮದಿಂದ ತುಂಬಿದವರಾಗಿದ್ದೀರಿ.
Nin nanere, asa anung ndase inuzu anit alau, udu nanye ikullun nin rusuzu nati nin kulapi.
29 ೨೯ ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನೀವು ಪ್ರವಾದಿಗಳ ಸಮಾಧಿಗಳನ್ನು ಕಟ್ಟಿ, ನೀತಿವಂತರ ಗೋರಿಗಳನ್ನು ಅಲಂಕರಿಸಿ,
Kash anung anan ninyerte nin nafarisiyawa, bara din nkye nissek na nan nliru nin nnu Kutelle, nin su nissek na nan fiu Kutelle kuyok.
30 ೩೦ ‘ನಾವು ನಮ್ಮ ಹಿರಿಯರ ಕಾಲದಲ್ಲಿ ಇದ್ದಿದ್ದರೆ ಪ್ರವಾದಿಗಳನ್ನು ಕೊಂದ ಪಾಪದಲ್ಲಿ ಪಾಲುಗಾರರಾಗುತ್ತಿರಲಿಲ್ಲ’ ಅನ್ನುತ್ತೀರಿ.
Anung sa iworo, 'Nda tiwa duku nayiri nacif bite, na tiwa munnu nanghinu nanya ngutunu nmyi, na nan nliru nin nnu Kutelle ba.'
31 ೩೧ ಹಾಗಾದರೆ ನೀವು ಪ್ರವಾದಿಗಳನ್ನು ಕೊಂದವರ ಮಕ್ಕಳೇ ಹೌದು ಎಂಬುದಕ್ಕೆ ನಿಮಗೆ ನೀವೇ ಸಾಕ್ಷಿಗಳಾಗಿದ್ದೀರಿ.
Bara nani, anung nsheida atimine, nworu anughere nono nalenge na iwa mollu anan nliru nin nnu Kutelle.
32 ೩೨ ಒಳ್ಳೆಯದು, ನೀವು ನಿಮ್ಮ ಹಿರಿಯರ ಪಾಪದ ಅಳತೆಯನ್ನು ಪೂರ್ತಿಮಾಡುತ್ತೀರಿ.
Anung tutun ba kullunu kagisin kulapi nacif mine.
33 ೩೩ ಹಾವುಗಳೇ, ಸರ್ಪಜಾತಿಯವರೇ, ನರಕದಂಡನೆಯಿಂದ ಹೇಗೆ ನೀವು ತಪ್ಪಿಸಿಕೊಳ್ಳುವಿರಿ? (Geenna g1067)
Anung iyii abuni, inung isudun niyii, iba ti iyiziyari isortu kiti nwucu kidegen nin kilari nlah? (Geenna g1067)
34 ೩೪ ಆದುದರಿಂದ ನೋಡಿರಿ, ನಾನು ನಿಮ್ಮ ಬಳಿಗೆ ಪ್ರವಾದಿಗಳನ್ನೂ ಜ್ಞಾನಿಗಳನ್ನೂ ಶಾಸ್ತ್ರಿಗಳನ್ನೂ ಕಳುಹಿಸುತ್ತೇನೆ; ಅವರಲ್ಲಿ ಕೆಲವರನ್ನು ನೀವು ಕೊಲ್ಲುವಿರಿ, ಶಿಲುಬೆಗೆ ಹಾಕುವಿರಿ; ಕೆಲವರನ್ನು ನಿಮ್ಮ ಸಭಾಮಂದಿರಗಳಲ್ಲಿ ಚಾಟಿಗಳಿಂದ ಹೊಡೆದು ಊರಿಂದ ಊರಿಗೆ ಅಟ್ಟಿಕೊಂಡು ಹೋಗುವಿರಿ.
Bara nani, yenen ntoo munu anan nliru nin nnu kutelle, anit ajinjin, nin na nan ninyerte, among nanya mine iba mollu nani, ibana nani kutca, amon nanya mine iba kpizu nani nanya kutyi nlirag, ukoo nani kagbir udu kagbir.
35 ೩೫ ಹೀಗೆ ನೀತಿವಂತನಾದ ಹೇಬೆಲನ ರಕ್ತವು ಮೊದಲುಗೊಂಡು ನೀವು ದೇವಾಲಯಕ್ಕೂ ಯಜ್ಞವೇದಿಗೂ ನಡುವೆ ಕೊಂದು ಹಾಕಿದ ಬರಕೀಯನ ಮಗನಾದ ಜಕರೀಯನ ರಕ್ತದವರೆಗೂ ಭೂಮಿಯ ಮೇಲೆ ಸುರಿಸಲ್ಪಟ್ಟ ಎಲ್ಲಾ ನೀತಿವಂತರ ರಕ್ತಸುರಿಸಿದ ಅಪರಾಧವು ನಿಮ್ಮ ತಲೆಯ ಮೇಲೆ ಬರುವುದು.
Kiti minere alakin nmyi nanan fiu kutelle, mongo na iwa gutun inye, uyiru nmyi Habila unan fiu Kutelle, udu nmyi zakariya usaun Barikiya ulenge na iwa mollughe, kiyitik, kiti nlirag nin nbagadi.
36 ೩೬ ಇದೆಲ್ಲಾ ಈ ಸಂತತಿಯವರ ಮೇಲೆ ಬರುವುದೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
Kidegen Meng nbellin munu, vat nile imone base kuji kone.
37 ೩೭ “ಯೆರೂಸಲೇಮೇ, ಯೆರೂಸಲೇಮೇ, ಪ್ರವಾದಿಗಳ ಪ್ರಾಣತೆಗೆಯುವವಳೇ, ದೇವರು ನಿನ್ನ ಬಳಿಗೆ ಕಳುಹಿಸಿಕೊಟ್ಟವರನ್ನು ಕಲ್ಲೆಸೆದು ಕೊಲ್ಲುವವಳೇ! ಕೋಳಿ ತನ್ನ ಮರಿಗಳನ್ನು ರೆಕ್ಕೆಗಳ ಕೆಳಗೆ ಹುದುಗಿಸಿಕೊಳ್ಳುವಂತೆ ನಿನ್ನ ಮಕ್ಕಳನ್ನು ಸೇರಿಸಿಕೊಳ್ಳಲು ನನಗೆ ಎಷ್ಟೋ ಸಾರಿ ಮನಸ್ಸಿತ್ತು; ಆದರೆ ನಿನಗೆ ಮನಸ್ಸಿಲ್ಲದೆ ಹೋಯಿತು.
Urushelima, Urushelima, fe ulenge na udin mollusu anan nliru nin nnu Kutelle, idin filisu na ina tuu nani kiti mine, iyanghari uworsu ndinin su npitirin nono fe, kiti kirum, nafo kukuru na asa pitirino nono mye, nagilit mye, bara nani, inani nari!
38 ೩೮ ನೋಡಿರಿ, ನಿಮ್ಮ ಮನೆಯು ನಿಮಗೆ ಬರಿದಾಗಿ ಬಿಡುತ್ತದೆ.
Yenen nilari mine ba lawu ni lem sa anit.
39 ೩೯ ಈಗಿಂದ, ‘ಕರ್ತನ ಹೆಸರಿನಲ್ಲಿ ಬರುವವನು ಧನ್ಯನು ಎಂದು ನೀವಾಗಿ ನೀವು ಹೇಳುವ ತನಕ ನೀವು ನನ್ನನ್ನು ನೋಡುವುದೇ ಇಲ್ಲವೆಂದು ನಿಮಗೆ ಹೇಳುತ್ತೇನೆ’” ಅಂದನು.
Bara Meng nbellin munu, na iba kuru iyenei ba nene udu ubun, se iworo, 'Unan nmariari ule na aba dak nanya lisa Ncikilarie.'”

< ಮತ್ತಾಯನು 23 >