< ಮತ್ತಾಯನು 24 >
1 ೧ ತರುವಾಯ ಯೇಸು ದೇವಾಲಯದಿಂದ ಹೊರಟು ಹೋಗುತ್ತಿರಲು ಆತನ ಶಿಷ್ಯರು ದೇವಾಲಯದ ಕಟ್ಟಡಗಳನ್ನು ತೋರಿಸುವುದಕ್ಕೆ ಆತನ ಹತ್ತಿರಕ್ಕೆ ಬಂದರು.
जब यीशु मन्दिर सी निकल क जाय रह्यो होतो, त ओको चेला ओख मन्दिर को भवन दिखावन लायी ओको जवर आयो।
2 ೨ ಆದರೆ ಅದಕ್ಕೆ ಉತ್ತರವಾಗಿ ಆತನು ಅವರಿಗೆ, “ಇವುಗಳನ್ನೆಲ್ಲಾ ನೋಡುತ್ತೀರಲ್ಲವೇ? ಇಲ್ಲಿ ಕಲ್ಲಿನ ಮೇಲೆ ಕಲ್ಲು ಉಳಿಯುವುದಿಲ್ಲ, ಎಲ್ಲಾ ಕೆಡವಲ್ಪಡುವುದು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ” ಅಂದನು.
ओन उन्को सी कह्यो, “तुम यो सब देख रह्यो हय न! मय तुम सी सच कहू हय, इत गोटा पर गोटा भी न छूटेंन जो नाश नहीं जायेंन।”
3 ೩ ಬಳಿಕ ಆತನು ಎಣ್ಣೆಯ ಮರಗಳ ಗುಡ್ಡದ ಮೇಲೆ ಕುಳಿತಿದ್ದಾಗ ಶಿಷ್ಯರು ಆತನ ಬಳಿಗೆ ಪ್ರತ್ಯೇಕವಾಗಿ ಬಂದು, “ಇವೆಲ್ಲವೂ ಯಾವಾಗ ಸಂಭವಿಸುವುದು? ನಿನ್ನ ಬರೋಣಕ್ಕೂ ಲೋಕದ ಸಮಾಪ್ತಿಗೂ ಸೂಚನೆಯೇನು?” ನಮಗೆ ಹೇಳು ಅನ್ನಲು (aiōn )
जब ऊ जैतून पहाड़ी पर बैठ्यो होतो, त चेलावों न एकान्त म ओको जवर आय क कह्यो, “हम्ख बताव कि यो बाते कब होयेंन? तोरो आवन को अऊर जगत को अन्त को का चिन्ह होयेंन?” (aiōn )
4 ೪ ಯೇಸು ಅವರಿಗೆ ಉತ್ತರವಾಗಿ ಹೇಳಿದ್ದೇನೆಂದರೆ, “ಯಾರೊಬ್ಬರೂ ನಿಮ್ಮನ್ನು ಮೋಸಗೊಳಿಸದಂತೆ ಎಚ್ಚರಿಕೆಯಿಂದಿರಿ.
यीशु न उन्ख उत्तर दियो, “चौकस रहो!” कोयी तुम्ख धोका नहीं दे पाये,
5 ೫ ಏಕೆಂದರೆ, ನನ್ನ ಹೆಸರಿನಲ್ಲಿ ಅನೇಕರು ಬಂದು, ‘ನಾನು ಕ್ರಿಸ್ತನು’ ಎಂದು ಹೇಳಿ ಅನೇಕರನ್ನು ಮೋಸಗೊಳಿಸುವರು.
कहालीकि बहुत सो असो होयेंन जो मोरो नाम सी आय क कहेंन, “मय मसीह आय,” अऊर बहुत सो ख भटकायेंन।
6 ೬ ಇದಲ್ಲದೆ ಯುದ್ಧಗಳಾಗುವುದನ್ನೂ ಯುದ್ಧಗಳಾಗುವ ಸೂಚನೆಯ ಸುದ್ದಿಗಳನ್ನೂ ನೀವು ಕೇಳಬಹುದು. ಕಳವಳಪಡದಂತೆ ನೋಡಿಕೊಳ್ಳಿರಿ; ಏಕೆಂದರೆ ಹೀಗಾಗುವುದು ಅಗತ್ಯ. ಆದರೂ ಇದು ಇನ್ನೂ ಅಂತ್ಯಕಾಲವಲ್ಲ.
तुम लड़ाईयों अऊर लड़ाईयों की चर्चा सुनो, त घबराय नहीं जावो कहालीकि इन को होनो जरूरी हय, पर ऊ समय अन्त नहीं होयेंन।
7 ೭ ಹೀಗಿರಲಾಗಿ ಜನರಿಗೆ ವಿರುದ್ಧವಾಗಿ ಜನರು, ರಾಜ್ಯಕ್ಕೆ ವಿರುದ್ಧವಾಗಿ ರಾಜ್ಯವೂ ಏಳುವವು; ಮತ್ತು ಅಲ್ಲಲ್ಲಿ ಬರಗಳು ಬರುವವು, ಅಲ್ಲಲ್ಲಿ ಭೂಕಂಪಗಳು ಆಗುವವು;
कहालीकि राष्ट्र पर राष्ट्र अऊर राज्य पर राज्य चढ़ायी करेंन, अऊर जागा जागा म अकाल पड़ेंन, अऊर भूईडोल होयेंन।
8 ೮ ಇವೆಲ್ಲಾ (ನೂತನ ಕಾಲವು ಹುಟ್ಟುವ) ಪ್ರಸವವೇದನೆಯ ಪ್ರಾರಂಭ.
यो सब बाते दु: ख की सुरूवात होयेंन।
9 ೯ “ಆಗ ನಿಮ್ಮನ್ನು ಕಷ್ಟಸಂಕಟಗಳಿಗೆ ಗುರಿಮಾಡಿ ಕೊಲ್ಲುವರು; ನನ್ನ ಹೆಸರಿನ ನಿಮಿತ್ತ ನಿಮ್ಮನ್ನು ಎಲ್ಲಾ ಜನಾಂಗಗಳವರು ದ್ವೇಷಿಸುವರು.
“तब हि दु: ख देन लायी तुम्ख पकड़वायेंन, अऊर तुम्ख मार डालेंन, अऊर मोरो नाम को वजह सब गैरयहूदियों को लोग तुम सी दुश्मनी रखेंन।
10 ೧೦ ಆಗ ಅನೇಕರು ಎಡವಿ ಹಿಂಜರಿದು ಒಬ್ಬರನ್ನೊಬ್ಬರು ಹಿಡಿದುಕೊಡುವರು; ಒಬ್ಬರ ಮೇಲೊಬ್ಬರು ದ್ವೇಷ ಮಾಡುವರು.
तब बहुत सो ठोकर खायेंन, अऊर एक दूसरों ख पकड़वायेंन, अऊर एक दूसरों सी दुश्मनी रखेंन।
11 ೧೧ ಬಹು ಮಂದಿ ಸುಳ್ಳುಪ್ರವಾದಿಗಳು ಸಹ ಎದ್ದು ಅನೇಕರನ್ನು ಮೋಸಗೊಳಿಸುವರು.
बहुत सो झूठो भविष्यवक्ता उठेंन, अऊर बहुत सो ख बहकायेंन।
12 ೧೨ ಇದಲ್ಲದೆ ಅಧರ್ಮವು ಹೆಚ್ಚಾಗುವುದರಿಂದ ಬಹು ಜನರ ಪ್ರೀತಿಯು ತಣ್ಣಗಾಗಿ ಹೋಗುವುದು.
अधर्म को बढ़नो सी बहुत सो को प्रेम कम होय जायेंन,
13 ೧೩ ಆದರೆ ಕಡೆಯವರೆಗೂ ತಾಳುವವನು ರಕ್ಷಣೆ ಹೊಂದುವನು.
पर जो आखरी तक धीरज रखेंन, ओकोच उद्धार होयेंन।
14 ೧೪ ಇದಲ್ಲದೆರಾಜ್ಯದ ಈ ಸುವಾರ್ತೆಯು ಸರ್ವಲೋಕದಲ್ಲಿ ಎಲ್ಲಾ ಜನಾಂಗಗಳಿಗೆ ಸಾಕ್ಷಿಗಾಗಿ ಸಾರಲ್ಪಡುವುದು; ಆಗ ಅಂತ್ಯವು ಬರುವುದು.
अऊर परमेश्वर को राज्य को यो सुसमाचार पूरो जगत म प्रचार करयो जायेंन, कि सब लोगों पर गवाही होय, तब अन्त आय जायेंन।”
15 ೧೫ “ಪ್ರವಾದಿಯಾದ ದಾನಿಯೇಲನು ಹೇಳಿದ ಹಾಗೆವಿನಾಶಕಾರಕ, ವಿಕಾರ ವಸ್ತು ಪವಿತ್ರ ಸ್ಥಾನದಲ್ಲಿ ನಿಂತಿರುವುದನ್ನು ನೀವು ನೋಡುವಾಗ (ಇದನ್ನು ಓದುವವನು ತಿಳಿದುಕೊಳ್ಳಲಿ)
“येकोलायी जब तुम लोग ‘भयानक विनाशकारी घृणित चिज ख,’ जेको उल्लेख दानिय्येल भविष्यवक्ता को द्वारा करयो गयो होतो, मन्दिर को पवित्र जागा पर खड़ो देखो।” पढ़ेंन वालो खुद समझ ले कि येको अर्थ का हय
16 ೧೬ ಯೂದಾಯದಲ್ಲಿರುವವರು ಬೆಟ್ಟಗಳಿಗೆ ಓಡಿಹೋಗಲಿ;
तब ऊ समय जो यहूदिया म होना हि पहाड़ी पर भग जाये।
17 ೧೭ ಮಾಳಿಗೆಯ ಮೇಲೆ ಇರುವವನು ತನ್ನ ಮನೆಯೊಳಗಿರುವುದನ್ನು ತೆಗೆದುಕೊಳ್ಳುವುದಕ್ಕೆ ಹೋಗದಿರಲಿ,
जो छत पर हय, ऊ अपनो घर म सी सामान लेन लायी मत उतरो;
18 ೧೮ ಹೊಲದಲ್ಲಿರುವವನು ತನ್ನ ಹೊದಿಕೆಯನ್ನು ತೆಗೆದುಕೊಳ್ಳುವುದಕ್ಕೆ ಹಿಂತಿರುಗಿ ಹೋಗದಿರಲಿ.
अऊर जो खेत म हय, ऊ अपनो कपड़ा लेन लायी पीछू नहीं लौटे।
19 ೧೯ ಆದರೆ ಆ ದಿನದಲ್ಲಿ ಬಸುರಿಯರಿಗೂ, ಬಾಣಂತಿಯರಾಗಿರುವ ಹೆಂಗಸರಿಗೂ ಅಯ್ಯೋ ಕಷ್ಟ.
उन दिनो म जो गर्भवती अऊर दूध पिलावन वाली होना उन्को लायी प्रकोप को दिन कहलायो जायेंन उन्को लायी हाय, होयेंन।
20 ೨೦ ನಿಮ್ಮ ಪಲಾಯನವು ಚಳಿಗಾಲದಲ್ಲಾಗಲಿ ಸಬ್ಬತ್ ದಿನದಲ್ಲಿಯಾಗಲಿ ಆಗಬಾರದೆಂದು ಪ್ರಾರ್ಥಿಸಿರಿ.
प्रार्थना करतो रहो कि तुम्ख ठन्डी म यां आराम को दिन म भगनो नहीं पड़े।
21 ೨೧ ಏಕೆಂದರೆ ಲೋಕದ ಅರಂಭದಿಂದ ಇಂದಿನವರೆಗೂ ಆಗದಿರುವಂಥದ್ದು, ಇನ್ನು ಮೇಲೆಯೂ ಆಗದಿರುವಂತಹ ಮಹಾ ಸಂಕಟವು ಅಂದು ಉಂಟಾಗುವುದು.
कहालीकि ऊ समय असो भारी संकट होयेंन, जसो जगत की सुरूवात सी न अब तक भयो अऊर न कभी होयेंन।
22 ೨೨ ಕರ್ತನು ಆ ದಿನಗಳನ್ನು ಕಡಿಮೆ ಮಾಡದಿದ್ದರೆ ಒಬ್ಬ ನರಪ್ರಾಣಿಯಾದರೂ ಉಳಿಯನು; ಆದರೆ ತಾನು ಆರಿಸಿಕೊಂಡವರಿಗೋಸ್ಕರ ಆ ದಿನಗಳನ್ನು ಕಡಿಮೆಮಾಡುವನು.
यदि परमेश्वर ऊ दिन ख घटायो नहीं जातो त कोयी प्रानी नहीं बचतो, पर चुन्यो हुयो को वजह ऊ दिन घटायो जायेंन।
23 ೨೩ ಆಗ ಯಾರಾದರು ನಿಮಗೆ, ‘ಇಗೋ ಕ್ರಿಸ್ತನು ಇಲ್ಲಿದ್ದಾನೆ, ಅಗೋ ಅಲ್ಲಿದ್ದಾನೆ’ ಎಂದು ಹೇಳಿದರೆ ನಂಬಬೇಡಿರಿ.
“ऊ समय यदि कोयी तुम सी कहे, ‘देखो, मसीह इत हय!’ यां ‘उत हय!’ त विश्वास मत करजो।
24 ೨೪ ಸುಳ್ಳು ಕ್ರಿಸ್ತರೂ, ಸುಳ್ಳುಪ್ರವಾದಿಗಳೂ ಎದ್ದು ಸಾಧ್ಯವಾದರೆ ದೇವರು ಆರಿಸಿಕೊಂಡವರನ್ನು ಸಹ ಮೋಸಗೊಳಿಸುವುದಕ್ಕೋಸ್ಕರ ಮಹಾ ಸೂಚಕ ಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸುವರು.
कहालीकि झूठो मसीह अऊर झूठो भविष्यवक्ता उठ खड़ो होयेंन, अऊर बड़ो चिन्ह चमत्कार, अऊर लोगों ख धोका देन लायी अद्भुत काम दिखायेंन कि यदि होय सकय त चुन्यो हुयो ख भी धोका देयेंन।
25 ೨೫ ನೋಡಿರಿ, ನಾನು ಮುಂಚಿತವಾಗಿಯೇ ನಿಮಗೆ ಇದನ್ನು ಹೇಳುತ್ತಿದ್ದೇನೆ.
देखो, मय न पहिले सी तुम सी यो सब कुछ कह्य दियो हय।”
26 ೨೬ ಆದಕಾರಣ ಯಾರಾದರು ನಿಮಗೆ, ‘ಅಗೋ ಕ್ರಿಸ್ತನು ಅಡವಿಯಲ್ಲಿ ಇದ್ದಾನೆಂದು’ ಹೇಳಿದರೆ ಅಡವಿಗೆ ಹೊರಟುಹೋಗಬೇಡಿರಿ; ‘ಇಗೋ ಒಳಕೋಣೆಗಳಲ್ಲಿದ್ದಾನೆಂದು’ ಹೇಳಿದರೆ ನಂಬಬೇಡಿರಿ.
“येकोलायी यदि हि तुम सी कहे, ‘देखो, ऊ जंगल म हय,’ त बाहेर नहीं निकल जाजो; यो ‘देखो, ऊ कोठरियों म हय,’ त विश्वास मत करजो।
27 ೨೭ ಹೇಗೆ ಮಿಂಚು ಪೂರ್ವದಲ್ಲಿ ಹುಟ್ಟಿ ಪಶ್ಚಿಮದ ವರೆಗೂ ಹೊಳೆಯುತ್ತದೋ ಹಾಗೆಯೇ ಮನುಷ್ಯಕುಮಾರನ ಬರುವಿಕೆಯೂ ಆಗುವುದು.
कहालीकि जसो बिजली पूर्व सी निकल क पश्चिम तक चमकय हय, वसोच आदमी को बेटा को भी आनो होयेंन।”
28 ೨೮ ಹೆಣ ಬಿದ್ದಲ್ಲಿ ಹದ್ದುಗಳು ಬಂದು ಸೇರಿಕೊಳ್ಳುವವು.
“जित लाश हय, उत गिधाड़ जमा होयेंन।”
29 ೨೯ “ಆ ದಿನಗಳ ಸಂಕಟವು ಮುಗಿದಕೂಡಲೆ ಸೂರ್ಯನು ಕತ್ತಲಾಗಿ ಹೋಗುವನು, ಚಂದ್ರನು ಬೆಳಕು ಕೊಡದೆ ಇರುವನು, ನಕ್ಷತ್ರಗಳು ಆಕಾಶದಿಂದ ಉದುರುವವು, ಆಕಾಶದ ಶಕ್ತಿಗಳು ಕದಲುವವು.
“उन दिनो अचानक संकट को तुरतच सूरज कारो होय जायेंन, अऊर चन्दा को उजाड़ो कम होतो रहेंन, अऊर चांदनी आसमान सी गिर पड़ेंन अऊर आसमान की शक्तियां हिलायी जायेंन।
30 ೩೦ ಆಗಮನುಷ್ಯಕುಮಾರನನ್ನು ಸೂಚಿಸುವ ಗುರುತು ಆಕಾಶದಲ್ಲಿ ಕಾಣಬರುವವು. ಆಗ ಭೂಲೋಕದಲ್ಲಿರುವ ಎಲ್ಲಾ ಕುಲದವರು ಎದೆಬಡಕೊಳ್ಳುವರು, ಮತ್ತು ಮನುಷ್ಯಕುಮಾರನು ಬಲದಿಂದಲೂ, ಬಹು ಮಹಿಮೆಯಿಂದಲೂ ಆಕಾಶದ ಮೇಘಗಳ ಮೇಲೆ ಬರುವುದನ್ನು ಕಾಣುವರು.
तब आदमी को बेटा को चिन्ह आसमान म दिखायी देयेंन, अऊर तब धरती को सब गोत्र को लोग छाती पीटेंन; अऊर आदमी को बेटा ख बड़ी सामर्थ अऊर महिमा को संग आसमान को बादलो पर आवतो देखेंन।
31 ೩೧ ಆತನು ತನ್ನ ದೂತರನ್ನು ತುತ್ತೂರಿಯ ಮಹಾ ಶಬ್ದದೊಂದಿಗೆ ಕಳುಹಿಸುವನು. ಅವರು ಆತನು ಆರಿಸಿಕೊಂಡವರನ್ನು ಆಕಾಶದ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೆ ನಾಲ್ಕು ದಿಕ್ಕುಗಳಿಂದ ಒಟ್ಟುಗೂಡಿಸುವರು.
ऊ तुरही की बड़ी आवाज को संग अपनो दूतों ख भेजेंन, अऊर हि आसमान को यो छोर सी ऊ छोर तक, चारयी दिशावों सी ओको चुन्यो हुयो ख जमा करेंन।”
32 ೩೨ “ಅಂಜೂರ ಮರದ ದೃಷ್ಟಾಂತದಿಂದ ಬುದ್ಧಿಕಲಿಯಿರಿ. ಅದರ ಕೊಂಬೆ ಇನ್ನು ಎಳೆಯದಾಗಿದ್ದು ಎಲೆ ಬಿಡುವಾಗ ಬೇಸಿಗೆಯು ಹತ್ತಿರವಾಯಿತೆಂದು ತಿಳಿದುಕೊಳ್ಳುತ್ತೀರಲ್ಲಾ.
“अंजीर को झाड़ सी यो दृष्टान्त सीखो: जब ओकी डगाली कवली होय जावय अऊर पाना निकलन लगय हंय, त तुम जान लेवय हय कि गरमी को मौसम जवर हय।
33 ೩೩ ಹಾಗೆಯೇ ನೀವು ಸಹ ಇದನ್ನೆಲ್ಲಾ ನೋಡುವಾಗಆ ದಿನವು ಹತ್ತಿರವಿದೆ, ಹೊಸ್ತಿಲಲ್ಲೇ ಇದೆ ಎಂದು ತಿಳಿದುಕೊಳ್ಳಿರಿ.
योच तरह सी जब तुम यो सब बातों ख देखो, त जान लेवो कि ऊ जवर हय, बल्की दरवाजाच पर हय।
34 ೩೪ ಇದೆಲ್ಲಾ ಆಗುವ ತನಕ ಈ ಸಂತತಿಯು ಅಳಿದುಹೋಗುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
मय तुम सी सच कहू हय कि जब तक यो सब बाते पूरी नहीं होयेंन, तब तक यो पीढ़ी को अन्त नहीं होयेंन।
35 ೩೫ ಭೂಮ್ಯಾಕಾಶಗಳು ಅಳಿದುಹೋಗುವವು, ಆದರೆ ನನ್ನ ವಾಕ್ಯಗಳೋ ಅಳಿದುಹೋಗುವುದೇ ಇಲ್ಲ.
आसमान अऊर धरती टल जायेंन, पर मोरी बाते कभी नहीं टलेंन।”
36 ೩೬ “ಇದಲ್ಲದೆ ಆ ದಿನವನ್ನು ಕುರಿತು ಆ ಗಳಿಗೆಯನ್ನು ಕುರಿತು, ನನ್ನ ತಂದೆಗೆ ಮಾತ್ರ ತಿಳಿದಿದೆಯೇ ಹೊರತು ಮತ್ತಾರಿಗೂ ತಿಳಿಯದು; ಪರಲೋಕದಲ್ಲಿರುವ ದೂತರಿಗೂ ಕೂಡ ತಿಳಿಯದು, ಮಗನಿಗೂ ತಿಳಿಯದು,
“पर ऊ दिन अऊर ऊ समय को बारे म कोयी नहीं जानय, नहीं स्वर्गदूत अऊर नहीं बेटा, पर केवल बाप पर।”
37 ೩೭ ನೋಹನ ದಿನಗಳು ಹೇಗಿದ್ದವೋ ಹಾಗೆಯೇ ಮನುಷ್ಯಕುಮಾರನ ಬರೋಣವು ಇರುವುದು.
“जसो नूह को दिन म भयो होतो, वसोच आदमी को बेटा को आनो भी होयेंन।”
38 ೩೮ ಹೇಗೆಂದರೆ ಜಲಪ್ರಳಯಕ್ಕೆ ಮುಂಚಿನ ದಿನಗಳಲ್ಲಿ ನೋಹನು ನಾವೆಯಲ್ಲಿ ಸೇರಿದ ದಿನದ ತನಕ ಜನರು ತಿನ್ನುತ್ತಾ, ಕುಡಿಯುತ್ತಾ, ಮದುವೆಮಾಡಿಕೊಳ್ಳುತ್ತಾ, ಮದುವೆಮಾಡಿಕೊಡುತ್ತಾ ಇದ್ದರು.
कहालीकि जसो जल-प्रलय सी पहिले को दिनो म, जो दिन तक कि नूह जहाज पर नहीं चढ़्यो, ऊ दिन तक लोग खातो-पीतो होतो, अऊर उन म बिहाव होत होतो।
39 ೩೯ ಪ್ರಳಯದ ನೀರು ಬಂದು ಎಲ್ಲರನ್ನು ಕೊಚ್ಚಿಕೊಂಡು ಹೋಗುವ ತನಕ ಅವರು ಏನೂ ತಿಳಿಯದೆ ಇದ್ದರಲ್ಲಾ. ಅದರಂತೆಯೇ ಮನುಷ್ಯಕುಮಾರನು ಬರುವ ಕಾಲದಲ್ಲಿಯೂ ಇರುವುದು.
अऊर जब तक जल-प्रलय आय क उन सब ख बहाय नहीं ले गयो, तब तक उन्ख कुछ भी मालूम नहीं पड़्यो; वसोच आदमी को बेटा को आवनो भी होयेंन।
40 ೪೦ ಆಗ ಇಬ್ಬರು ಹೊಲದಲ್ಲಿರುವರು; ಒಬ್ಬನು ತೆಗೆದುಕೊಳ್ಳಲ್ಪಡುವನು, ಒಬ್ಬನು ಕೈ ಬಿಡಲ್ಪಡುವನು.
ऊ समय दोय लोग खेत म होयेंन, एक उठाय लियो जायेंन अऊर दूसरों छोड़ दियो जायेंन।
41 ೪೧ ಇಬ್ಬರು ಹೆಂಗಸರು ಬೀಸುವ ಕಲ್ಲಿನ ಮುಂದೆ ಕುಳಿತು ಬೀಸುತ್ತಿರುವರು; ಒಬ್ಬಳು ತೆಗೆದುಕೊಳ್ಳಲ್ಪಡುವಳು, ಇನ್ನೊಬ್ಬಳು ಕೈ ಬಿಡಲ್ಪಡುವಳು.
दोय बाई गरहट पीसती रहेंन, एक उठाय ली जायेंन अऊर दूसरी छोड़ दी जायेंन।
42 ೪೨ “ಹೀಗಿರಲಾಗಿ ನಿಮ್ಮ ಕರ್ತನು ಬರುವ ದಿನವು ನಿಮಗೆ ಗೊತ್ತಿಲ್ಲದಿರುವುದರಿಂದ ಎಚ್ಚರವಾಗಿರಿ.
“येकोलायी जागतो रहो, कहालीकि तुम नहीं जानय कि तुम्हरो प्रभु कौन्सो दिन आयेंन।
43 ೪೩ ಕಳ್ಳನು ಬರುವ ಗಳಿಗೆ ಮನೆಯ ಯಜಮಾನನಿಗೆ ತಿಳಿದಿದ್ದರೆ ಅವನು ತನ್ನ ಮನೆಗೆ ಕನ್ನಾ ಹಾಕಗೊಡಿಸದೇ ಕಾಯುತ್ತಿದ್ದನೆಂದು ತಿಳಿದುಕೊಳ್ಳಿರಿ.
पर यो जान लेवो कि यदि घर को मालिक जानतो कि चोर कौन्सो समय आयेंन त जागतो रहतो, अऊर अपनो घर म चोरी होन नहीं देतो।
44 ೪೪ ಆದಕಾರಣ ನೀವು ಸಹ ಸಿದ್ಧವಾಗಿರಿ; ನೀವು ನೆನಸದ ಗಳಿಗೆಯಲ್ಲಿ ಮನುಷ್ಯಕುಮಾರನು ಬರುತ್ತಾನೆ.
येकोलायी तुम भी तैयार रहो, कहालीकि ओको आवन को बारे म तुम सोचय भी नहीं हय, उच समय आदमी को बेटा आय जायेंन।”
45 ೪೫ ಹಾಗಾದರೆ ಯಜಮಾನನು ತನ್ನ ಮನೆಯವರಿಗೆ ಹೊತ್ತು ಹೊತ್ತಿಗೆ ಆಹಾರ ಕೊಡುವುದಕ್ಕಾಗಿ ಅವರ ಮೇಲಿರಿಸಿದ ನಂಬಿಗಸ್ತನೂ, ವಿವೇಕಿಯೂ ಆದಂಥ ಆಳು ಯಾರು?
“येकोलायी ऊ विश्वास लायक अऊर बुद्धिमान सेवक कौन हय, जेक मालिक न अपनो नौकर-चाकर पर मुखिया ठहरायो कि समय पर उन्ख भोजन दे?
46 ೪೬ ಯಜಮಾನನು ಬರುವಾಗ ಯಾವ ಆಳು ಹೀಗೆ ಮಾಡುತ್ತಿರುವುದನ್ನು ಕಾಣುವನೋ ಆ ಆಳು ಧನ್ಯನು.
धन्य हय ऊ सेवक, जेक ओको मालिक आय क असोच करतो देखे।
47 ೪೭ ಅಂಥವನನ್ನು ಅವನು ತನ್ನ ಎಲ್ಲಾ ಆಸ್ತಿಯ ಮೇಲ್ವಿಚಾರಕನನ್ನಾಗಿ ನೇಮಿಸುವನು ಎಂದು ನಿಮಗೆ ನಿಜವಾಗಿ ಹೇಳುತ್ತೇನೆ.
मय तुम सी सच कहू हय, ऊ ओख अपनी सब जायजाद पर अधिकारी ठहरायेंन।”
48 ೪೮ ಆದರೆ ಆ ದುಷ್ಟ ಆಳು, ‘ನನ್ನ ಯಜಮಾನನು ಬರುವುದಕ್ಕೆ ತಡ ಮಾಡುತ್ತಾನೆ’ ಎಂದು ತನ್ನ ಮನಸ್ಸಿನಲ್ಲಿ ಅಂದುಕೊಂಡು
पर यदि ऊ दुष्ट सेवक अपनो मन म सोचन लग्यो कि मोरो मालिक को आवनो म समय हय,
49 ೪೯ ತನ್ನ ಜೊತೆ ಆಳುಗಳನ್ನು ಹೊಡೆಯುವುದಕ್ಕೂ, ಕುಡುಕರ ಸಂಗಡ ತಿನ್ನುವುದಕ್ಕೂ, ಕುಡಿಯುವುದಕ್ಕೂ ಪ್ರಾರಂಭಿಸಿದಾದರೆ,
अऊर अपनो संगी सेवकों ख पीटन लग्यो, अऊर पीवन वालो को संग खान-पीवन लग्यो।
50 ೫೦ ಅವನು ನೆನಸದ ದಿನದಲ್ಲಿಯೂ, ತಿಳಿಯದ ಗಳಿಗೆಯಲ್ಲಿಯೂ ಆ ಆಳಿನ ಯಜಮಾನನು ಬಂದು ಅವನನ್ನು ಕಠಿಣವಾಗಿ ದಂಡಿಸಿ
त ऊ सेवक को मालिक असो दिन आयेंन, जब ऊ ओकी रस्ता नहीं देखेंन, अऊर असो समय ख जेक ऊ नहीं जानय हय,
51 ೫೧ ಕಪಟಿಗಳಿಗೆ ಆಗತಕ್ಕ ಗತಿಯನ್ನು ಅವನಿಗೂ ಮಾಡುವನು. ಅಲ್ಲಿ ಗೋಳಾಟವೂ ಕಟಕಟನೆ ಹಲ್ಲು ಕಡಿಯೋಣವೂ ಇರುವವು.
तब ऊ ओख भारी ताड़ना देयेंन अऊर ओको हिस्सा कपटियों को संग ठहरायेंन: उत रोवनो अऊर दात कटरनो होयेंन।