< ಮತ್ತಾಯನು 27 >
1 ೧ ಬೆಳಗಾಗಲು ಎಲ್ಲಾ ಮುಖ್ಯಯಾಜಕರೂ, ಜನರ ಹಿರಿಯರೂ ಯೇಸುವನ್ನು ಕೊಲ್ಲಿಸಬೇಕೆಂದು ಸಂಚುಮಾಡಿಕೊಂಡು,
Wa' ble ye kpan ba firist bi ninkon ba ni bi ninkon u ndi ba ba' ka suron mu tie nkon u wuu.
2 ೨ ಆತನನ್ನು ಕಟ್ಟಿಸಿ ಕರೆದುಕೊಂಡು ಹೋಗಿ ದೇಶಾಧಿಪತಿಯಾದ ಪಿಲಾತನಿಗೆ ಒಪ್ಪಿಸಿದರು.
Ba lowu, nda njiwu hi ka nno Bilatus gona.
3 ೩ ಆಗ ಆತನನ್ನು ದ್ರೋಹದಿಂದ ಹಿಡಿದುಕೊಟ್ಟಿದ್ದ ಯೂದನು ಯೇಸುವಿಗೆ ಮರಣದಂಡನೆಯ ತೀರ್ಪು ಆಗಿರುವುದನ್ನು ನೋಡಿ, ಪಶ್ಚಾತ್ತಾಪಪಟ್ಟು, ಆ ಮೂವತ್ತು ಬೆಳ್ಳಿ ನಾಣ್ಯಗಳನ್ನು ಮುಖ್ಯಯಾಜಕರಿಗೂ ಹಿರಿಯರಿಗೂ ಹಿಂದಿರುಗಿಸಿದನು.
U Yahuda wa a le ni wu'a toh ndi ba wuu Yesu, awa' (sran mre ma) nda nji idran shekel setra'a ye ni' bi ninkon firist ba ni bi ninkon ndji ba,
4 ೪ “ನಿರಪರಾಧಿಯನ್ನು ಮರಣಕ್ಕೆ ಒಪ್ಪಿಸಿಕೊಟ್ಟು ನಾನು ಪಾಪ ಮಾಡಿದ್ದೇನೆ” ಅಂದನು. ಅದಕ್ಕವರು, “ಅದು ನಮಗೇನು? ನೀನೇ ನೋಡಿಕೋ” ಅಂದರು.
nda tre, “mi latre wa mi myren ndi wa ana tie latre naa” U ba tre, “Kima hi ngyeri tawu? To kpye wa u tie kime”
5 ೫ ಆಗ ಅವನು ದೇವಾಲಯದಲ್ಲಿ ಆ ಹಣವನ್ನು ಎಸೆದು ಹೊರಟುಹೋಗಿ ನೇಣು ಹಾಕಿಕೊಂಡು ಸತ್ತನು.
A ka mrli dran ba ta hle ni mi hekali, nda rju hi ka ba don da ka klo kpame rjirji.
6 ೬ ಮುಖ್ಯಯಾಜಕರು ಆ ಹಣವನ್ನು ತೆಗೆದುಕೊಂಡು “ಇದು ಜೀವಹತ್ಯೆಗೆ ಕೊಟ್ಟ ಕ್ರಯವಾದುದರಿಂದ ಇದನ್ನು ಕಾಣಿಕೆ ಪೆಟ್ಟಿಗೆಯಲ್ಲಿ ಹಾಕಬಾರದು” ಎಂದರು.
Ninkon u firist ba vu mrli dran ba nda tre, “Ana he ni nkon u duu'a ndu wayi ri ni (wron) na niwa a hi nklen yi”
7 ೭ ಬಳಿಕ ಆಲೋಚನೆಮಾಡಿ ಪರದೇಶಿಗಳನ್ನು ಹೂಣಿಡುವುದಕ್ಕೋಸ್ಕರ ಅದರಿಂದ ಕುಂಬಾರನ ಹೊಲವೆಂಬ ಭೂಮಿಯನ್ನು ಕೊಂಡುಕೊಂಡರು.
Baka tre ni kpamba nda ban nklen le rju u ri' wa baka ta rjuu bi tsri.
8 ೮ ಈ ಕಾರಣದಿಂದ ಇಂದಿನವರೆಗೂ ಆ ಹೊಲಕ್ಕೆ “ಜೀವಹತ್ಯದ ಹೊಲವೆಂಬ” ಹೆಸರು ಇದೆ.
Nitu kimayi ba yo wrji kii ndi, “Bubu yi” ye' luwayi.
9 ೯ ಅದೇನೆಂದರೆ, “ಇಸ್ರಾಯೇಲ್ ಜನರಿಂದ ಅವನಿಗೆ ನಿರ್ಣಯಿಸಿದಂಥ ಕ್ರಯವಾದ ಆ ಮೂವತ್ತು ಬೆಳ್ಳಿ ನಾಣ್ಯಗಳನ್ನು ತೆಗೆದುಕೊಂಡು, ಕರ್ತನು ನನಗೆ ಅಪ್ಪಣೆಮಾಡಿದಂತೆ
A ye tsra ni kpye wa Rimiya u Totsu'a tre din, “Ba vu dran setra ba inklen wa imrli Israila bayo ni tuma,
10 ೧೦ ಅವರು ಅದನ್ನು ಕುಂಬಾರನ ಹೊಲಕ್ಕಾಗಿ ಕೊಟ್ಟರು.” ಹೀಗೆ ಪ್ರವಾದಿಯಾದ ಯೆರೆಮೀಯನು ಹೇಳಿದ ಮಾತು ನೆರವೇರಿತು.
nda nno ni tu bubu ri, nawa Baci a yo ba tie'a.
11 ೧೧ ಯೇಸು ದೇಶಾಧಿಪತಿಯ ಮುಂದೆ ನಿಂತಿರುವಾಗ ದೇಶಾಧಿಪತಿಯು ಆತನನ್ನು, “ನೀನು ಯೆಹೂದ್ಯರ ಅರಸನೋ?” ಎಂದು ಕೇಳಿದನು. ಯೇಸು, “ನೀನೇ ಹೇಳಿದ್ದೀ” ಅಂದನು.
Yesu a wlu ni shishi go naa, u gona kamye wu, “U chu Yahudawa?” Yesu a saa wu, “U hla me”
12 ೧೨ ಮತ್ತು ಮುಖ್ಯಯಾಜಕರೂ ಹಿರಿಯರೂ ಆತನ ಮೇಲೆ ದೂರುಹೇಳುತ್ತಿರುವಾಗ ಆತನು ಏನೂ ಉತ್ತರ ಕೊಡಲಿಲ್ಲ,
U wa bi ninkon u firist ba ni bi ninkon ndji ba ba' nhawu, ana tre kpye na.
13 ೧೩ ನಂತರ ಪಿಲಾತನು ಆತನನ್ನು, “ನಿನ್ನ ವಿರುದ್ಧ ಇಷ್ಟು ಸಾಕ್ಷಿ ಹೇಳುತ್ತಿದ್ದಾರೆ, ನಿನಗೆ ಕೇಳಿಸುತ್ತಿಲ್ಲವೋ?” ಎಂದು ಕೇಳಿದನು.
U Bilatus tre ni wu, “Una wo ikpyi ba wawu mbawu wa ba nhawu na?”
14 ೧೪ ಆತನು ಅವನ ಯಾವ ಮಾತುಗಳಿಗೂ ಉತ್ತರಕೊಡಲಿಲ್ಲ. ಅದನ್ನು ನೋಡಿ ದೇಶಾಧಿಪತಿಯು ತುಂಬಾ ಆಶ್ಚರ್ಯಪಟ್ಟನು.
U ana saa ikpye riri mena, waa a ndu gona (manji ma wakran).
15 ೧೫ ಆದರೆ ಆ ಹಬ್ಬದಲ್ಲಿ ಜನರು ಅಪೇಕ್ಷಿಸುವ ಸೆರೆಯವನನ್ನು ಅವರಿಗೆ ಬಿಟ್ಟುಕೊಡುವುದು ದೇಶಾಧಿಪತಿಯ ಪದ್ಧತಿಯಾಗಿತ್ತು.
Ninton u gan'u Rugran bata ndu gona cu ri nimi bi he tro'a wa ndji ba kpa y'me a cuwo.
16 ೧೬ ಆ ಕಾಲದಲ್ಲಿ ಬರಬ್ಬನೆಂಬ ಕುಖ್ಯಾತನಾದ ಒಬ್ಬ ಸೆರೆಯವನಿದ್ದನು.
Ninton kima, ba he ni indji ri ni tro wa a sentu'a u nde Barabas.
17 ೧೭ ಹೀಗಿರಲಾಗಿ ಅವರು ಸೇರಿಬಂದಿದ್ದ ಸಮಯದಲ್ಲಿ ಪಿಲಾತನು, “ನಿಮಗೆ ಯಾರನ್ನು ಬಿಟ್ಟುಕೊಡಬೇಕೆನ್ನುತ್ತೀರಿ? ಬರಬ್ಬನನ್ನೋ ಅಥವಾ ಕ್ರಿಸ್ತನೆನ್ನಿಸಿಕೊಳ್ಳುವ ಯೇಸುವನ್ನೋ?” ಎಂದು ಅವರನ್ನು ಕೇಳಿದನು.
Wa baye kpan shuki a, bilatus ka tre ni ba, “Ahi nha mba bi son ndu mi cu cuwo ni yiwu? Barabas, ka Yesu wa ba yo wu Kristi?
18 ೧೮ ಏಕೆಂದರೆ ಅವರು ಹೊಟ್ಟೆಕಿಚ್ಚಿನಿಂದಲೇ ಈ ರೀತಿಯಾಗಿ ಮಾಡಿದ್ದಾರೆಂದು ಅವನಿಗೆ ತಿಳಿದಿತ್ತು.
A toh ndi ba vu Yesu nno wawu nitu wa ba tie shishi ma.
19 ೧೯ ಇದಲ್ಲದೆ ಅವನು ನ್ಯಾಯಾಸನದಲ್ಲಿ ಕುಳಿತಿರುವಾಗ ಅವನ ಹೆಂಡತಿಯು, “ನೀನು ಆ ನೀತಿವಂತನ ಗೊಡವೆಗೆ ಹೋಗಬೇಡ; ಅವನ ದೆಸೆಯಿಂದ ಈ ಹೊತ್ತು ಕನಸಿನಲ್ಲಿ ಬಹಳ ತೊಂದರೆ ಪಟ್ಟೆನು” ಎಂದು ಅವನ ಬಳಿಗೆ ಸಂದೇಶ ಹೇಳಿಕಳುಹಿಸಿದಳು.
Wa arli son tu kwancima ucu'a iwa a tru (ton) yewu nda hla, “Rju ninkon ndji yi wa ana latre na. Mi tieya kpukpo me nicu luwa ni hra nituma”
20 ೨೦ ಆದರೆ ಮುಖ್ಯಯಾಜಕರೂ ಹಿರಿಯರೂ ಬರಬ್ಬನನ್ನು ಬಿಟ್ಟುಕೊಡಬೇಕೆಂದು ಬೇಡಿಕೊಳ್ಳುವಂತೆಯೂ ಯೇಸುವನ್ನು ಸಾಯಿಸಬೇಕೆಂದು ಕೇಳುವ ಹಾಗೆಯೂ ಜನರನ್ನು ಒಡಂಬಡಿಸಿದ್ದರು.
Ni ntonyi firist bi ninkon ba ni bi ninkon indji ba, baka con j'bu ndji ba ndu ba cu Barabas cuwo na wuu Yesu.
21 ೨೧ ಅದಕ್ಕೆ ದೇಶಾಧಿಪತಿಯು ಅವರನ್ನು, “ಈ ಇಬ್ಬರಲ್ಲಿ ಯಾರನ್ನು ನಿಮಗೆ ಬಿಟ್ಟುಕೊಡಬೇಕನ್ನುತ್ತೀರಿ?” ಎಂದು ಕೇಳಲು ಅವರು “ಬರಬ್ಬನನ್ನು” ಅಂದರು.
Gona a mye ba “Ahi nha bi son mi cucuwo yi wu ni mi ndji ha bayi? Ba tre “Barabas”
22 ೨೨ ಪಿಲಾತನು ಅವರನ್ನು, “ಹಾಗಾದರೆ ಕ್ರಿಸ್ತನೆನ್ನಿಸಿಕೊಳ್ಳುವ ಯೇಸುವನ್ನು ನಾನೇನು ಮಾಡಲಿ?” ಎಂದು ಕೇಳಲು ಎಲ್ಲರೂ, “ಅವನನ್ನು ಶಿಲುಬೆಗೆ ಹಾಕಿಸು” ಅಂದರು.
Bitalus a tre ni ba “Mi tie he ni Yesu waba yo wu Kristi'a?” U ba saa wawu mbawu “Kpanwu ni gran nhama krukron”
23 ೨೩ ಅದಕ್ಕವನು “ಏಕೆ? ಈತನು ಮಾಡಿದ ಅಪರಾಧವೇನು?” ಅಂದನು. ಆದರೆ ಅವರು, “ಅವನನ್ನು ಶಿಲುಬೆಗೆ ಹಾಕಿಸು” ಎಂದು ಬಹಳವಾಗಿ ಆರ್ಭಟಿಸಿದರು.
A tre “Nitu ngye, a tie nfye meme?” U ba saa wu wawumbawu ngbangbanme, kpanwu ni gran nh'ma kukron'a.
24 ೨೪ ಆಗ ಪಿಲಾತನು ತನ್ನ ಯತ್ನ ನಡೆಯುವುದಿಲ್ಲ ಗದ್ದಲ ಮಾತ್ರ ಹೆಚ್ಚಾಗುತ್ತದೆ ಎಂದು ತಿಳಿದು ನೀರನ್ನು ತೆಗೆದುಕೊಂಡು ಜನರ ಮುಂದೆ ಕೈ ತೊಳೆದುಕೊಂಡು, “ಈ ನೀತಿವಂತನನ್ನು ಕೊಲ್ಲಿಸುವುದರಲ್ಲಿ ನಾನು ನಿರಪರಾಧಿ, ನೀವೇ ನೋಡಿಕೊಳ್ಳಿರಿ” ಎನ್ನಲು
Niwa Bilatus toh ndi wawu na toh tie kpyeri na u ndu tsi kana ye wluna a ban ma nglawoma ni shishi ndji ba ndatre, “Mi na he latre ni yi indji yi wa ana latre na” Tie kpye wa bi son”
25 ೨೫ ಜನರೆಲ್ಲಾ, “ಆತನ ರಕ್ತವು ನಮ್ಮ ಮತ್ತು ನಮ್ಮ ಮಕ್ಕಳ ಮೇಲೆ ಬರಲಿ” ಅಂದರು.
U ndji ba wawuu baka tre “Ndu yima he ni tumbu ni mrli mbu”.
26 ೨೬ ಆಗ ಬರಬ್ಬನನ್ನು ಅವರಿಗೆ ಬಿಟ್ಟುಕೊಟ್ಟು ಯೇಸುವನ್ನು ಕೊರಡೆಗಳಿಂದ ಹೊಡಿಸಿ ಶಿಲುಬೆಗೆ ಹಾಕುವುದಕ್ಕೆ ಒಪ್ಪಿಸಿದನು.
Wa a cu Barabas cuwo bawu nda tsi Yesu ni gbungban nda kau nno mba kpahi kpan.
27 ೨೭ ಆ ಮೇಲೆ ದೇಶಾಧಿಪತಿಯ ಸಿಪಾಯಿಗಳು ಯೇಸುವನ್ನು ಅರಮನೆಯೊಳಗೆ ಕರೆದುಕೊಂಡು ಹೋಗಿ ಪಟಾಲವನ್ನೆಲ್ಲಾ ಆತನ ಸುತ್ತಲೂ ಸೇರಿಸಿಕೊಂಡು,
U ba soja u gona baka ban Yesu hi ni hra u bubu bla trea nda nji jbu soja ye kima.
28 ೨೮ ಆತನ ಬಟ್ಟೆಗಳನ್ನು ತೆಗೆದುಹಾಕಿ ಕೆಂಪು ನಿಲುವಂಗಿಯನ್ನು ಹೊದಿಸಿ,
Ba siwu nda lo pli samba niwu.
29 ೨೯ ಮುಳ್ಳುಬಳ್ಳಿಯಿಂದ ಕಿರೀಟವನ್ನು ಹೆಣೆದು ಆತನ ತಲೆಯ ಮೇಲೆ ಇಟ್ಟು ಬಲಗೈಯಲ್ಲಿ ಬೆತ್ತವನ್ನು ಕೊಟ್ಟು, ಆತನ ಮುಂದೆ ಮೊಣಕಾಲೂರಿ, “ಯೆಹೂದ್ಯರ ಅರಸನೇ, ನಿನಗೆ ನಮಸ್ಕಾರ” ಎಂದು ಆತನನ್ನು ಪರಿಹಾಸ್ಯಮಾಡಿ
Ba tie roni ncon nda kason wu ni tu nda nno kpala ni worli ma. Ba kukhwu ngbarju nda cawu yaya nda tre “Ndu Rji ziwu ichu Yahudawa!”
30 ೩೦ ಮತ್ತು ಆತನ ಮೇಲೆ ಉಗುಳಿ ಆ ಬೆತ್ತವನ್ನು ತೆಗೆದುಕೊಂಡು ಆತನ ತಲೆಯ ಮೇಲೆ ಹೊಡೆದರು.
Ba sru nten sruu nda ban kpalaa kpan wu mituma bru-bru.
31 ೩೧ ಹೀಗೆ ಆತನನ್ನು ಪರಿಹಾಸ್ಯಮಾಡಿದ ಮೇಲೆ ಆ ನಿಲುವಂಗಿಯನ್ನು ತೆಗೆದು ಆತನ ಬಟ್ಟೆಗಳನ್ನು ಹೊದಿಸಿ ಆತನನ್ನು ಶಿಲುಬೆಗೆ ಹಾಕುವುದಕ್ಕೆ ತೆಗೆದುಕೊಂಡು ಹೋದರು.
Wa ba cawu yayaa bacu plima rju nda sru kpyi ma niwu, nda nji wu hi kpan.
32 ೩೨ ಅವರು ಹೊರಕ್ಕೆ ಹೋಗುತ್ತಿರುವಾಗ ಕುರೇನೆ ಪಟ್ಟಣದ ಸೀಮೋನನೆಂಬುವನನ್ನು ಕಂಡು ಅವನನ್ನು ಬಲವಂತವಾಗಿ ಆತನ ಶಿಲುಬೆಯನ್ನು ಹೊರುವುದಕ್ಕೆ ಕರೆದುಕೊಂಡರು.
Wa ba rju'a ba toh Bakurame u nde Sima nda vu ni ngbengblen nda ndu ban gran nhma kukron'a.
33 ೩೩ ಅವರೆಲ್ಲರೂ ಗೊಲ್ಗೊಥಾ ಅಂದರೆ “ಕಪಾಲಸ್ಥಳ” ಎಂಬ ಸ್ಥಾನಕ್ಕೆ ಬಂದಾಗ
Ba ka ri ni bubu wa ba yo ndi Golgotta wa ahi “Bubu khwukhwu tu”.
34 ೩೪ ಆತನಿಗೆ ಕಹಿ ಬೆರಸಿದ ದ್ರಾಕ್ಷಾರಸವನ್ನು ಕುಡಿಯುವುದಕ್ಕೆ ಕೊಟ್ಟರು; ಆತನು ಅದನ್ನು ರುಚಿ ನೋಡಿ ಕುಡಿಯಲಾರದೆ ಇದ್ದನು.
Banno ima enabi wa basru nha ni kpyeri wa a rii'. A la'toh nda kama ni so.
35 ೩೫ ಬಳಿಕ ಅವರು ಆತನನ್ನು ಶಿಲುಬೆಗೆ ಹಾಕಿ ಆತನ ಬಟ್ಟೆಗಳಿಗಾಗಿ ಚೀಟು ಹಾಕಿ ಪಾಲುಮಾಡಿಕೊಂಡರು;
Wa ba kpan wu a ba vu nklonma ni nra nda ga kpamba,
36 ೩೬ ಮತ್ತು ಅಲ್ಲಿ ಕುಳಿತುಕೊಂಡು ಆತನನ್ನು ಕಾಯುತ್ತಾ ಇದ್ದರು.
nda ki si gbyen wu.
37 ೩೭ ಇದಲ್ಲದೆ ಆತನ ಮೇಲೆ ಹೊರಿಸಿದ ಅಪರಾಧವನ್ನು ಬರೆದು ಆತನ ತಲೆಯ ಮೇಲ್ಗಡೆ ಹಚ್ಚಿದರು; ಅದೇನೆಂದರೆ, “ಈತನು ಯೇಸು, ಯೆಹೂದ್ಯರ ಅರಸನು” ಎಂಬುದೇ.
Ni ko tuh ma ba yo kpye wa ba nhawu'a wa a, “Iwayi a Yesu, ichu Yahudawa”.
38 ೩೮ ಆಗ ಇಬ್ಬರು ಕಳ್ಳರನ್ನು ತಂದು ಒಬ್ಬನನ್ನು ಬಲಗಡೆಯಲ್ಲಿ ಮತ್ತೊಬ್ಬನನ್ನು ಎಡಗಡೆಯಲ್ಲಿ ಆತನ ಸಂಗಡ ಶಿಲುಬೆಗೆ ಹಾಕಿದರು.
Ba kpan bi yi harli nha bi ni wu, iri ni korli ma, u rima ni wo ko ta ma.
39 ೩೯ ಅಲ್ಲಿ ಹಾದುಹೋಗುತ್ತಿರುವವರು ತಲೆ ಅಲ್ಲಾಡಿಸಿ,
Bi zren zu ni ko kima ba hlo tre ni wu nda ta whu tu mba,
40 ೪೦ “ದೇವಾಲಯವನ್ನು ಕೆಡವಿ ಮೂರು ದಿನದಲ್ಲಿ ಕಟ್ಟುವವನೇ, ನಿನ್ನನ್ನು ರಕ್ಷಿಸಿಕೊ; ನೀನು ದೇವರ ಮಗನೇ ಆಗಿದ್ದರೆ ಶಿಲುಬೆಯಿಂದ ಇಳಿದು ಬಾ” ಎಂದು ಆತನನ್ನು ಹಂಗಿಸುತ್ತಿದ್ದರು.
nda tre, “Iwu wa u na zi hekali ndi mewu ni vi tra, j'bu kpame! U'ta Vren Rji uka grji ni gran kukron ye meme”.
41 ೪೧ ಅದೇ ರೀತಿ ಮುಖ್ಯಯಾಜಕರೂ, ಶಾಸ್ತ್ರಿಗಳೂ, ಹಿರಿಯರೂ, “ಅವನು ಮತ್ತೊಬ್ಬರನ್ನು ರಕ್ಷಿಸಿದನು, ತನ್ನನ್ನು ತಾನೇ ರಕ್ಷಿಸಿಕೊಳ್ಳಲಾರನು.
Firist bi ninkon ba ngame ba' caa yaya ni bi nha u ni bi ninkon ndji ba ndo tre,
42 ೪೨ ಅವನು ಇಸ್ರಾಯೇಲಿನ ಅರಸನಲ್ಲವೇ. ಈಗ ಶಿಲುಬೆಯಿಂದ ಇಳಿದು ಬರಲಿ, ಇಳಿದು ಬಂದರೆ ಅವನಲ್ಲಿ ನಂಬಿಕೆಯಿಡುತ್ತೇವೆ ಅಂದರು.
A kpa bari gbujbu wa ana gbujbu ni tu ma na. Ahi chu Israila. Ndu rji ni gran kukrona, u nikiyi kie kpaymeni wu.
43 ೪೩ ಅವನು ದೇವರಲ್ಲಿ ಭರವಸವಿಟ್ಟಿದ್ದಾನೆ, ದೇವರಿಗೆ ಇಷ್ಟವಿದ್ದರೆ ಈಗ ಅವನನ್ನು ಬಿಡಿಸಲಿ; ‘ತಾನು ದೇವರ ಮಗನಾಗಿದ್ದೇನೆಂದು ಹೇಳಿದನಲ್ಲಾ’” ಎಂದು ಅಣಕಿಸಿ ಮಾತನಾಡುತ್ತಿದ್ದರು.
A' yo sron ni Rji Ndu Rji kpa juwo zizanyi Nda hi wawu yi tre “Mi VrenRji”
44 ೪೪ ಆತನ ಸಂಗಡ ಶಿಲುಬೆಗೆ ಹಾಕಲ್ಪಟ್ಟ ಕಳ್ಳರು ಸಹ ಆತನನ್ನು ಅದೇ ಪ್ರಕಾರ ನಿಂದಿಸುತ್ತಿದ್ದರು.
Bi ybi wa ba kpan ba ni wu ba tre to kima ngame. Ba mrewu.
45 ೪೫ ಮಧ್ಯಾಹ್ನ ಹನ್ನೆರಡು ಘಂಟೆಯಿಂದ ಮೂರು ಘಂಟೆಯ ವರೆಗೆ ಆ ದೇಶದ ಮೇಲೆಲ್ಲಾ ಕತ್ತಲೆ ಕವಿಯಿತು.
Rji ni wru nton u tanne ibwu kaye kasu meme a wawuu hi ni wru nton u tra u yalu.
46 ೪೬ ಸುಮಾರು ಮೂರು ಘಂಟೆಗೆ ಯೇಸು, “ಏಲೀ, ಏಲೀ, ಲಮಾ ಸಬಕ್ತಾನೀ” ಅಂದರೆ, “ನನ್ನ ದೇವರೇ, ನನ್ನ ದೇವರೇ, ಏಕೆ ನನ್ನನ್ನು ಕೈಬಿಟ್ಟಿದ್ದೀ” ಎಂದು ಮಹಾ ಧ್ವನಿಯಿಂದ ಕೂಗಿದನು.
Whiewhiere ni wru nton u tia, Yesu ka yra gro ngbangbani me nda tra, “Eli, Eli, lama sabaktani?” waa ahi, “Irji mu, Irji mu, u kame don ni ngye?”
47 ೪೭ ಅಲ್ಲಿ ನಿಂತಿದ್ದವರಲ್ಲಿ ಕೆಲವರು ಅದನ್ನು ಕೇಳಿ, “ಇವನು ಎಲೀಯನನ್ನು ಕರೆಯುತ್ತಿದ್ದಾನೆ” ಅಂದನು.
Wa bi k'rli ni kima ba wotoyi, baka tre “A si yo Iliya”
48 ೪೮ ಕೂಡಲೆ ಅವರಲ್ಲಿ ಒಬ್ಬನು ಓಡಿಹೋಗಿ ಸ್ಪಂಜನ್ನು ತಂದು ಹುಳಿರಸದಿಂದ ತುಂಬಿಸಿ ಕೋಲಿಗೆ ಸಿಕ್ಕಿಸಿ ಆತನಿಗೆ ಕುಡಿಯುವುದಕ್ಕೆ ಕೊಟ್ಟನು.
Iri mba ka gbla tsutsu hi ka ban rlikpanma son ni ma enabi u tsi nton nda kason ni kpala nda nzu hi niwu ndu so.
49 ೪೯ ಮಿಕ್ಕಾದವರು, “ಬಿಡು, ಎಲೀಯನು ಬಂದು ಅವನನ್ನು ರಕ್ಷಿಸುವನೇನೋ ನೋಡೋಣ” ಅಂದರು.
U mbru mba bakatre, “Donwume kie'toh ka Iliya niye kpau cuwo”
50 ೫೦ ಅನಂತರ ಯೇಸು ತಿರುಗಿ ಮಹಾ ಧ್ವನಿಯಿಂದ ಕೂಗಿ ಪ್ರಾಣಬಿಟ್ಟನು.
U Yesu ala' yra gro ngbangban me ngarli nda ka vrli (brji) ma cuwo.
51 ೫೧ ಆಗ ಇಗೋ, ದೇವಾಲಯದ ಪರದೆಯು ಮೇಲಿಂದ ಕೆಳಗಿನವರೆಗೂ ಹರಿದು ಎರಡು ಭಾಗವಾಯಿತು; ಭೂಮಿಯು ನಡುಗಿತು;
U pli wa ba yo hra kotu hekali'a ka y'ba yra ti ha rji tu'mu' grji ye ncima, u meme ka grju u tita ba ka yra tie nkan.
52 ೫೨ ಬಂಡೆಗಳು ಸೀಳಿಹೋದವು; ಸಮಾಧಿಗಳು ತೆರೆದವು; ನಿದ್ರೆಹೋಗಿದ್ದ ಅನೇಕ ಭಕ್ತರ ದೇಹಗಳು ಜೀವದಿಂದ ಎದ್ದವು;
Ba' be' baka bwu' bi tsratsra wa bana khwu'a ba' tash'me.
53 ೫೩ ಮತ್ತು ಆತನ ಪುನರುತ್ಥಾನವಾದ ಮೇಲೆ ಸಮಾಧಿಗಳೊಳಗಿಂದ ಹೊರಗೆ ಬಂದು ಪರಿಶುದ್ಧ ಪಟ್ಟಣದೊಳಗೆ ಹೋಗಿ ಅನೇಕರಿಗೆ ಕಾಣಿಸಿಕೊಂಡರು.
Ba rju ni mi ba' be' mba wa ba ni wa atashme, nda ri ni mi gbu u tsratsra nda tsro tumba ni ndji gbugbuwu.
54 ೫೪ ಶತಾಧಿಪತಿಯು ಮತ್ತು ಅವನ ಸಂಗಡ ಯೇಸುವನ್ನು ಕಾಯುತ್ತಿದ್ದವರು ಭೂಕಂಪವನ್ನೂ, ನಡೆದ ಸಂಗತಿಗಳನ್ನೂ ನೋಡಿ ಬಹಳ ಹೆದರಿಕೊಂಡು, “ನಿಜವಾಗಿ ಈತನು ದೇವಕುಮಾರನಾಗಿದ್ದನು” ಅಂದರು.
Wa hafsan soja ni indji wa basi Yesu'a ba toh grju meme ni ba kpyi wa ba tie'a ba' ka tie sisri nda tre, “Njanjimu ana hi Vren Rji”
55 ೫೫ ಇದಲ್ಲದೆ ಅನೇಕ ಸ್ತ್ರೀಯರು ಅಲ್ಲಿ ಇದ್ದು ದೂರದಿಂದ ಇದನ್ನು ನೋಡುತ್ತಿದ್ದರು. ಇವರು ಯೇಸುವಿನ ಸೇವೆಮಾಡುತ್ತಾ ಗಲಿಲಾಯದಿಂದ ಆತನ ಹಿಂದೆ ಬಂದವರಾಗಿದ್ದರು.
Gbugbu mba wa bazihu Yesu rji ni Galili nda zowuu bana he ni kima nda si ya ni gbugban mu.
56 ೫೬ ಇವರಲ್ಲಿ ಮಗ್ದಲದ ಮರಿಯಳೂ ಯಾಕೋಬ ಯೋಸೆಯರ ತಾಯಿಯಾದ ಮರಿಯಳೂ ಜೆಬೆದಾಯನ ಮಕ್ಕಳ ತಾಯಿಯೂ ಇದ್ದರು.
Ni mi mba ba'na Maryamu Magadaliya, Maryamu iyi Yesu mba Isuwu ni yi mrli Zabadi.
57 ೫೭ ಸಂಜೆಯಾದಾಗ ಅರಿಮಥಾಯ ಊರಿನ ಯೋಸೇಫನೆಂಬ ಒಬ್ಬ ಧನವಂತನು ಅಲ್ಲಿಗೆ ಬಂದನು. ಇವನು ಸಹ ಯೇಸುವಿನ ಶಿಷ್ಯನಾಗಿದ್ದನು.
Wa yalu tie'a indji ri u wo' wa a rji ni Armatiya, unde Isuwu, nda na Vren Koh Yesu.
58 ೫೮ ಇವನು ಪಿಲಾತನ ಬಳಿಗೆ ಹೋಗಿ ಯೇಸುವಿನ ದೇಹವನ್ನು ತನಗೆ ಕೊಡಿಸಬೇಕೆಂದು ಬೇಡಿಕೊಳ್ಳಲು ಪಿಲಾತನು ಅದನ್ನು ಆತನಿಗೆ ಕೊಡಬೇಕೆಂದು ಅಪ್ಪಣೆಮಾಡಿದನು.
A hi ni Bilatus nda ka mye wu ikpa Yesu. U Bilatus ka ndu ba nno wuu.
59 ೫೯ ಯೋಸೇಫನು ದೇಹವನ್ನು ತೆಗೆದುಕೊಂಡು ಅದನ್ನು ಶುದ್ಧವಾದ ನಾರುಮಡಿಯಲ್ಲಿ ಸುತ್ತಿ
Isuwu a ban k'mo nyi ni pli wa arju'a,
60 ೬೦ ಬಂಡೆಯಲ್ಲಿ ತೋಡಿದ್ದ ಹೊಸ ಸಮಾಧಿಯಲ್ಲಿ ಇಟ್ಟು ಸಮಾಧಿಯ ಬಾಗಿಲಿಗೆ ದೊಡ್ಡ ಕಲ್ಲನ್ನು ಉರುಳಿಸಿ ಹೊರಟುಹೋದನು.
nda kau yo ni mi be' ma sisa wa ana tsen han mla tie a. A nyi kiekle tita hi nyu b e'a nda hi.
61 ೬೧ ಮಗ್ದಲದ ಮರಿಯಳೂ ಮತ್ತು ಆ ಇನ್ನೊಬ್ಬ ಮರಿಯಳೂ ಅಲ್ಲಿ ಸಮಾಧಿಗೆ ಎದುರಾಗಿ ಕುಳಿತಿದ್ದರು.
Maryamu Madagaliya mba Maryamu rima bana hi ki ma nda son ni shishi b e'a.
62 ೬೨ ಮರುದಿನ ಅಂದರೆ ಸಿದ್ಧತೆಯ ದಿನ ಕಳೆದ ಮೇಲೆ ಮುಖ್ಯಯಾಜಕರೂ ಫರಿಸಾಯರೂ ಪಿಲಾತನ ಬಳಿಗೆ ಸೇರಿಬಂದು,
Ni vi u haa ivi u kogon vi u mla tie, bininkon ba firist ba ni ba Farisawa baka shubi ni Bilatus.
63 ೬೩ “ಯಜಮಾನನೇ, ಆ ಮೋಸಗಾರನು ಬದುಕಿದ್ದಾಗ ‘ತಾನು ಮೂರು ದಿನದ ಮೇಲೆ ಜೀವದಿಂದ ಏಳುತ್ತೇನೆ’ ಎಂದು ಹೇಳಿದ್ದು ನಮ್ಮ ನೆನಪಿಗೆ ಬಂದಿತು;
Batre, “Tiekoh, kie taka ni nton wa u gyrundji mu a he ni sisren'a tre, “Vitra niti y'ba mi tashme”.
64 ೬೪ ಆದಕಾರಣ ಮೂರನೆಯ ದಿನದ ತನಕ ಸಮಾಧಿಯನ್ನು ಭದ್ರಮಾಡಿ ಕಾಯುವುದಕ್ಕೆ ಅಪ್ಪಣೆಕೊಡಬೇಕು; ಇಲ್ಲದಿದ್ದರೆ ಅವನ ಶಿಷ್ಯರು ಬಂದು ಅವನನ್ನು ಕದ್ದುಕೊಂಡು ಹೋಗಿ ಸತ್ತವನು ಬದುಕಿ ಬಂದಿದ್ದಾನೆ” ಎಂದು ಹೇಳಾರು; ಆಗ ಮೊದಲನೆಯ ವಂಚನೆಗಿಂತ ಕಡೆಯ ವಂಚನೆಯು ಕೆಡುಕಾದೀತು ಅಂದರು.
Nitu kima (nno oda) yo ba ndu ba gben be'a tie vitra kieta na tie tokima na bi huwa (mrlikohma) ba ble ye y'bi-wu nda hlani ndji “A tashme” U gyru u klekle ani zan u mumla ni meme.
65 ೬೫ ಪಿಲಾತನು ಅವರಿಗೆ, “ಕಾವಲುಗಾರರನ್ನು ಕರೆದುಕೊಂಡು ಹೋಗಿ ನಿಮಗೆ ತಿಳಿದ ಹಾಗೆ ಭದ್ರಮಾಡಿ ಕಾಯಿರಿ” ಎಂದು ಹೇಳಲು
Bilatus a hla bawu, “vu bi gben. Gben ni ngbengblen mbi wa bi he wu'a”
66 ೬೬ ಅವರು ಹೊರಟು ಕಾವಲುಗಾರರನ್ನು ಇರಿಸಿ ಆ ಕಲ್ಲಿಗೆ ಮುದ್ರೆಹಾಕಿ ಸಮಾಧಿಯನ್ನು ಸುಭದ್ರಮಾಡಿದರು.
U baka hi nda kagben hra b e'a nda hrawu ni tita nda sru bi gben.