< ಮತ್ತಾಯನು 28 >
1 ೧ ಸಬ್ಬತ್ ದಿನ ಆದ ಮೇಲೆ ವಾರದ ಮೊದಲನೆಯ ದಿನ ಬೆಳಗಾಗುತ್ತಿರುವಾಗಲೇ ಮಗ್ದಲದ ಮರಿಯಳೂ ಮತ್ತು ಆ ಬೇರೆ ಮರಿಯಳೂ ಸಮಾಧಿಯನ್ನು ನೋಡಲು ಬಂದರು.
Now late on sabbath, as it was the dusk of the next day after sabbath, came Mary of Magdala and the other Mary to look at the sepulchre.
2 ೨ ಇಗೋ, ಮಹಾ ಭೂಕಂಪವುಂಟಾಯಿತು, ಕರ್ತನ ದೂತನು ಆಕಾಶದಿಂದ ಇಳಿದು ಬಂದು ಆ ಕಲ್ಲನ್ನು ಬಾಗಿಲಿನಿಂದ ಉರುಳಿಸಿ ಅದರ ಮೇಲೆ ಕುಳಿತುಕೊಂಡಿದ್ದನು.
And behold, there was a great earthquake; for an angel of [the] Lord, descending out of heaven, came and rolled away the stone and sat upon it.
3 ೩ ಅವನ ಮುಖಭಾವವು ಮಿಂಚಿನಂತೆ ಇತ್ತು. ಅವನ ಉಡುಪು ಹಿಮದಂತೆ ಬೆಳ್ಳಗಿತ್ತು;
And his look was as lightning, and his clothing white as snow.
4 ೪ ಕಾವಲುಗಾರರು ಹೆದರಿ ನಡುಗಿ ಸತ್ತವರ ಹಾಗಾದರು.
And for fear of him the guards trembled and became as dead men.
5 ೫ ಆಗ ದೂತನು ಆ ಹೆಂಗಸರಿಗೆ, “ನೀವು ಹೆದರಬೇಡಿರಿ; ಶಿಲುಬೆಗೆ ಹಾಕಲ್ಪಟ್ಟಿದ್ದ ಯೇಸುವನ್ನು ನೀವು ಹುಡುಕುತ್ತಿದ್ದೀರೆಂದು ನಾನು ಬಲ್ಲೆನು;
And the angel answering said to the women, Fear not ye, for I know that ye seek Jesus the crucified one.
6 ೬ ಆತನು ಇಲ್ಲಿ ಇಲ್ಲ, ತಾನು ಹೇಳಿದಂತೆಯೇ ಎದ್ದಿದ್ದಾನೆ. ಬನ್ನಿ, ಕರ್ತನು ಮಲಗಿದ್ದ ಸ್ಥಳವನ್ನು ನೋಡಿರಿ;
He is not here, for he is risen, as he said. Come, see the place where the Lord lay.
7 ೭ ಮತ್ತು ಬೇಗ ಹೋಗಿ ಆತನ ಶಿಷ್ಯರಿಗೆ, ‘ಆತನು ಸತ್ತವರೊಳಗಿಂದ ಎದ್ದಿದ್ದಾನೆಂದು, ಆತನು ನಿಮಗಿಂತಲೂ ಮೊದಲೇ ಗಲಿಲಾಯಕ್ಕೆ ಹೋಗುತ್ತಾನೆ, ಅಲ್ಲಿ ಆತನನ್ನು ಕಾಣುವಿರಿ’ ಎಂದು ತಿಳಿಸಿರಿ; ನೋಡಿರಿ, ನಾನು ನಿಮಗೆ ಹೇಳಿದ್ದೇನೆ,” ಎಂದು ಹೇಳಿದನು.
And go quickly and say to his disciples that he is risen from the dead; and behold, he goes before you into Galilee, there shall ye see him. Behold, I have told you.
8 ೮ ಅವರು ಭಯದಿಂದಲೂ, ಮಹಾ ಸಂತೋಷದಿಂದಲೂ ಬೇಗ ಸಮಾಧಿಯ ಬಳಿಯಿಂದ ಹೊರಟು ಆತನ ಶಿಷ್ಯರಿಗೆ ಅದನ್ನು ತಿಳಿಸುವುದಕ್ಕೆ ಓಡಿಹೋದರು.
And going out quickly from the tomb with fear and great joy, they ran to bring his disciples word.
9 ೯ ಆಗ ಯೇಸು ಅವರನ್ನು ಭೇಟಿಯಾಗಿ, “ನಿಮಗೆ ಶುಭವಾಗಲಿ” ಅಂದನು. ಅವರು ಹತ್ತಿರಕ್ಕೆ ಬಂದು ಆತನ ಪಾದಗಳಿಗೆ ಅಡ್ಡಬಿದ್ದು ಆತನನ್ನು ಆರಾಧಿಸಿದರು.
And as they went to bring his disciples word, behold also, Jesus met them, saying, Hail! And they coming up took him by the feet, and did him homage.
10 ೧೦ ಆಗ ಯೇಸು ಅವರಿಗೆ, “ಹೆದರಬೇಡಿರಿ; ನನ್ನ ಸಹೋದರರ ಬಳಿಗೆ ಹೋಗಿ ಅವರು ಗಲಿಲಾಯಕ್ಕೆ ಹೋಗಬೇಕೆಂದು ಹೇಳಿರಿ; ಅಲ್ಲಿ ಅವರು ನನ್ನನ್ನು ನೋಡುವರು” ಎಂದು ಹೇಳಿದನು.
Then Jesus says to them, Fear not; go, bring word to my brethren that they go into Galilee, and there they shall see me.
11 ೧೧ ಆಗ ಹೆಂಗಸರು ಹೋಗುತ್ತಿರುವಾಗ, ಇಗೋ, ಕಾವಲುಗಾರರಲ್ಲಿ ಕೆಲವರು ಪಟ್ಟಣದೊಳಕ್ಕೆ ಬಂದು ನಡೆದ ಸಂಗತಿಗಳನ್ನೆಲ್ಲಾ ಮುಖ್ಯಯಾಜಕರಿಗೆ ತಿಳಿಸಿದರು.
And as they went, behold, some of the watch went into the city, and brought word to the chief priests of all that had taken place.
12 ೧೨ ಯಾಜಕರು ಹಿರಿಯರ ಸಂಗಡ ಕೂಡಿಕೊಂಡು ಆಲೋಚನೆ ಮಾಡಿ ಆ ಸಿಪಾಯಿಗಳಿಗೆ ಬಹಳ ಹಣಕೊಟ್ಟು,
And having assembled with the elders, and having taken counsel, they gave a large sum of money to the soldiers,
13 ೧೩ “‘ಯೇಸುವಿನ ಶಿಷ್ಯರು ರಾತ್ರಿಯಲ್ಲಿ ಬಂದು ನಾವು ನಿದ್ದೆಮಾಡುತ್ತಿದ್ದಾಗ ಅವನ ಮೃತದೇಹವನ್ನು ಕದ್ದುಕೊಂಡು ಹೋದರು’ ಎಂದು ಹೇಳಿರಿ;
saying, Say that his disciples coming by night stole him [while] we [were] sleeping.
14 ೧೪ ಈ ಸುದ್ದಿಯು ದೇಶಾಧಿಪತಿಯ ಕಿವಿಗೆ ಬಿದ್ದರೆ ನಾವು ಅವನನ್ನು ಸಮಾಧಾನಪಡಿಸಿ ನಿಮಗೆ ತೊಂದರೆ ಆಗದಂತೆ ನೋಡಿಕೊಳ್ಳುತ್ತೇವೆ” ಎಂದರು.
And if this should come to the hearing of the governor, we will persuade him, and save you from all anxiety.
15 ೧೫ ಅದರಂತೆ ಕಾವಲುಗಾರರು ಆ ಹಣವನ್ನು ತೆಗೆದುಕೊಂಡು ತಮಗೆ ಹೇಳಿಕೊಟ್ಟ ಹಾಗೆಯೇ ಮಾಡಿದರು. ಈ ಮಾತು ಇಂದಿನವರೆಗೂ ಯೆಹೂದ್ಯರಲ್ಲಿ ಹರಡಿಕೊಂಡಿದೆ.
And they took the money and did as they had been taught. And this report is current among the Jews until this day.
16 ೧೬ ಆದರೆ ಹನ್ನೊಂದು ಮಂದಿ ಶಿಷ್ಯರು ಗಲಿಲಾಯಕ್ಕೆ ಹೋಗಿ, ಯೇಸು ತಮಗೆ ಗೊತ್ತುಮಾಡಿದ್ದ ಬೆಟ್ಟಕ್ಕೆ ಹೋಗಿ ಸೇರಿದರು.
But the eleven disciples went into Galilee to the mountain which Jesus had appointed them.
17 ೧೭ ಅವರು ಅಲ್ಲಿ ಯೇಸುವನ್ನು ಕಂಡು ಆತನನ್ನು ಆರಾಧಿಸಿದರು; ಆದರೆ ಕೆಲವರು ಸಂದೇಹಪಟ್ಟರು.
And when they saw him, they did homage to him: but some doubted.
18 ೧೮ ಯೇಸು ಅವರ ಹತ್ತಿರಕ್ಕೆ ಬಂದು, “ಪರಲೋಕದಲ್ಲಿಯೂ, ಭೂಲೋಕದಲ್ಲಿಯೂ ಇರುವ ಎಲ್ಲಾ ಅಧಿಕಾರವು ನನಗೆ ಕೊಡಲ್ಪಟ್ಟಿದೆ.
And Jesus coming up spoke to them, saying, All power has been given me in heaven and upon earth.
19 ೧೯ ಆದುದರಿಂದ ನೀವು ಹೊರಟುಹೋಗಿ ಎಲ್ಲಾ ಜನಾಂಗಗಳನ್ನು ಶಿಷ್ಯರನ್ನಾಗಿ ಮಾಡಿ; ಅವರಿಗೆ ತಂದೆ, ಮಗ, ಪವಿತ್ರಾತ್ಮನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿರಿ.
Go [therefore] and make disciples of all the nations, baptising them to the name of the Father, and of the Son, and of the Holy Spirit;
20 ೨೦ ನಾನು ನಿಮಗೆ ಆಜ್ಞಾಪಿಸಿದ ಎಲ್ಲವನ್ನು ಅನುಸರಿಸುವುದಕ್ಕೆ ಅವರಿಗೆ ಉಪದೇಶ ಮಾಡಿರಿ. ಹಾಗುಇಗೋ, ನಾನು ಯುಗದ ಸಮಾಪ್ತಿಯವರೆಗೂ ಎಲ್ಲಾ ದಿನವೂ ನಿಮ್ಮ ಸಂಗಡ ಇರುತ್ತೇನೆ” ಎಂದು ಹೇಳಿದನು. (aiōn )
teaching them to observe all things whatsoever I have enjoined you. And behold, I am with you all the days, until the completion of the age. (aiōn )