< ಮತ್ತಾಯನು 4 >
1 ೧ ಆಗ ಯೇಸು ಸೈತಾನನಿಂದ ಶೋಧಿಸಲ್ಪಡುವುದಕ್ಕಾಗಿ ದೇವರಾತ್ಮನು ಆತನನ್ನು ಅಡವಿಗೆ ನಡೆಸಿದನು.
Então Jesus foi levado pelo Espírito ao deserto para ser tentado pelo diabo.
2 ೨ ಆತನು ನಲವತ್ತು ದಿನ ಹಗಲಿರುಳು ಉಪವಾಸವಿದ್ದ ತರುವಾಯ ಆತನಿಗೆ ಹಸಿವಾಯಿತು.
E depois de jejuar quarenta dias e quarenta noites, teve fome.
3 ೩ ಆಗ ಸೈತಾನನು ಆತನ ಬಳಿಗೆ ಬಂದು, “ನೀನು ದೇವರ ಮಗನಾಗಿದ್ದರೆ ಈ ಕಲ್ಲುಗಳಿಗೆ ರೊಟ್ಟಿಯಾಗುವಂತೆ ಅಪ್ಪಣೆಕೊಡು” ಎಂದು ಹೇಳಲು,
E o tentador se aproximou, e disse-lhe: Se tu és o Filho de Deus, dize que estas pedras se tornem pães.
4 ೪ ಯೇಸು, “‘ಮನುಷ್ಯನು ರೊಟ್ಟಿ ತಿಂದ ಮಾತ್ರದಿಂದ ಬದುಕುವುದಿಲ್ಲ, ಆದರೆ ದೇವರ ಬಾಯಿಂದ ಬರುವ ಪ್ರತಿಯೊಂದು ನುಡಿಯಿಂದಲೂ ಬದುಕುವನು’ ಎಂದು ಬರೆದಿದೆ” ಅಂದನು.
Mas [Jesus] respondeu: Está escrito: Não só de pão viverá o ser humano, mas de toda palavra que sai da boca de Deus.
5 ೫ ಆಗ ಸೈತಾನನು ಯೇಸುವನ್ನು ಪರಿಶುದ್ಧ ಪಟ್ಟಣಕ್ಕೆ ಕರೆದುಕೊಂಡು ಹೋಗಿ ದೇವಾಲಯದ ಗೋಪುರದ ಮೇಲೆ ನಿಲ್ಲಿಸಿ
Então o diabo o levou consigo à santa cidade, e o pôs sobre o ponto mais alto do Templo,
6 ೬ ಯೇಸುವಿಗೆ, “ನೀನು ದೇವರ ಮಗನೇ ಆಗಿದ್ದರೆ ಇಲ್ಲಿಂದ ಕೆಳಕ್ಕೆ ದುಮುಕು; ‘ದೇವರು ನಿನ್ನ ವಿಷಯವಾಗಿ ತನ್ನ ದೂತರಿಗೆ ಅಪ್ಪಣೆಕೊಡುವನು; ನಿನ್ನ ಕಾಲು ಕಲ್ಲಿಗೆ ತಗಲದಂತೆ ಅವರು ನಿನ್ನನ್ನು ಕೈಗಳಲ್ಲಿ ಎತ್ತಿಕೊಳ್ಳುವರು’ ಎಂಬುದಾಗಿ ಬರೆದಿದೆಯಲ್ಲಾ” ಎಂದು ಹೇಳಿದನು.
E disse-lhe: Se tu és o Filho de Deus, lança-te abaixo, porque está escrito que: Mandará a seus anjos acerca de ti, e te tomarão pelas mãos, para que nunca com teu pé tropeces em pedra alguma.
7 ೭ ಅದಕ್ಕೆ ಯೇಸು, “ನಿನ್ನ ದೇವರಾಗಿರುವ ಕರ್ತನನ್ನು ಪರೀಕ್ಷಿಸಬಾರದು ಎಂಬುದಾಗಿಯೂ ಬರೆದಿದೆ” ಅಂದನು.
Jesus lhe disse: Também está escrito: Não tentarás o Senhor teu Deus.
8 ೮ ಬಳಿಕ ಸೈತಾನನು ಆತನನ್ನು ಬಹಳ ಎತ್ತರವಾದ ಬೆಟ್ಟಕ್ಕೆ ಕರೆದುಕೊಂಡು ಹೋಗಿ ಪ್ರಪಂಚದ ಎಲ್ಲಾ ರಾಜ್ಯಗಳನ್ನೂ ಅವುಗಳ ವೈಭವವನ್ನೂ ಆತನಿಗೆ ತೋರಿಸಿ,
Outra vez o diabo o levou consigo a um monte muito alto, e lhe mostrou todos os reinos do mundo, e a glória deles,
9 ೯ ಯೇಸುವಿಗೆ, “ನೀನು ನನಗೆ ಅಡ್ಡಬಿದ್ದು ನನ್ನನ್ನು ಆರಾಧಿಸಿದರೆ ಇವುಗಳನ್ನೆಲ್ಲಾ ನಿನಗೆ ಕೊಡುವೆನು” ಅಂದನು.
E disse-lhe: Tudo isto te darei se, prostrado, me adorares.
10 ೧೦ ಯೇಸು ಅವನಿಗೆ, “ಸೈತಾನನೇ, ನೀನು ತೊಲಗಿ ಹೋಗು. ‘ನಿನ್ನ ದೇವರಾಗಿರುವ ಕರ್ತನನ್ನು ಮಾತ್ರ ಆರಾಧಿಸಬೇಕು ಆತನೊಬ್ಬನನ್ನೇ ಸೇವಿಸಬೇಕು’ಎಂಬುದಾಗಿ ಬರೆದಿದೆಯಲ್ಲಾ” ಎಂದು ಹೇಳಿದನು.
Então Jesus disse: Vai embora, Satanás! Porque está escrito: Ao Senhor teu Deus adorarás, e só a ele cultuarás.
11 ೧೧ ಆಗ ಸೈತಾನನು ಆತನನ್ನು ಬಿಟ್ಟು ಹೊರಟು ಹೋದನು, ಆಗ ದೇವದೂತರು ಬಂದು ಆತನಿಗೆ ಉಪಚಾರ ಮಾಡಿದರು.
Então o diabo o deixou; e eis que chegaram anjos, e o serviram.
12 ೧೨ ಯೋಹಾನನು ಸೆರೆಯಾದನು ಎಂದು ಯೇಸು ಕೇಳಿ ಆ ಸ್ಥಳವನ್ನು ಬಿಟ್ಟು ಗಲಿಲಾಯ ಸೀಮೆಗೆ ಹೊರಟು ಹೋದನು.
Mas quando [Jesus] ouviu que João estava preso, voltou para a Galileia.
13 ೧೩ ಬಳಿಕ ನಜರೇತೆಂಬ ಊರನ್ನು ಬಿಟ್ಟು ಜೆಬುಲೋನ್ ಮತ್ತು ನಫ್ತಾಲಿಯರ ಗಡಿ ನಾಡುಗಳಿಗೆ ಬಂದು ಸಮುದ್ರದ ಹತ್ತಿರದಲ್ಲಿರುವ ಕಪೆರ್ನೌಮೆಂಬ ಊರಿನಲ್ಲಿ ವಾಸಿಸತೊಡಗಿದನು.
E deixando Nazaré, veio a morar em Cafarnaum, [cidade] marítima, nos limites de Zebulom e Naftali,
14 ೧೪ ಇದರಿಂದ ಯೆಶಾಯನೆಂಬ ಪ್ರವಾದಿಯ ಮುಖಾಂತರ ಹೇಳಿರುವ ಮಾತು ನೆರವೇರಿತು; ಆ ಮಾತು ಏನೆಂದರೆ,
para que se cumprisse o que foi anunciado pelo profeta Isaías, que disse:
15 ೧೫ “ಜೆಬುಲೋನ್ ಸೀಮೆ ಮತ್ತು ನಫ್ತಾಲಿ ಸೀಮೆ, ಯೊರ್ದನಿನ ಆಚೆ, ಸಮುದ್ರದ ಕಡೆಗಿರುವ ಸೀಮೆ, ಅನ್ಯಜನಗಳಿರುವ ಗಲಿಲಾಯ ಸೀಮೆ,
A terra de Zebulom e a terra de Naftali, caminho do mar, além do Jordão, a Galileia dos gentios;
16 ೧೬ ಹೀಗೆ ಕತ್ತಲಲ್ಲಿ ವಾಸಿಸಿದ ಈ ಸೀಮೆಯ ಜನರಿಗೆ ಮಹಾ ಬೆಳಕು ಕಾಣಿಸಿತು; ಮರಣದ ಛಾಯೆ ನೆರೆದ ಪ್ರದೇಶಗಳಲ್ಲಿ ವಾಸಿಸುವವರಿಗೆ ಬೆಳಕು ಉದಯವಾಯಿತು” ಎಂಬುದು.
O povo sentado em trevas viu uma grande luz; aos sentados em região e sombra da morte, a luz lhes apareceu.
17 ೧೭ ಅಂದಿನಿಂದ ಯೇಸು, “ಪಶ್ಚಾತ್ತಾಪಪಡಿರಿ ಪರಲೋಕ ರಾಜ್ಯವು ಸಮೀಪಿಸಿತು” ಎಂದು ಸಾರುವುದಕ್ಕೆ ಪ್ರಾರಂಭಿಸಿದನು.
Desde então Jesus começou a pregar e a dizer: Arrependei-vos, porque perto está o Reino dos céus.
18 ೧೮ ಯೇಸು ಗಲಿಲಾಯ ಸಮುದ್ರದ ತೀರದಲ್ಲಿ ನಡೆದು ಹೋಗುವಾಗ ಪೇತ್ರನೆನಿಸಿಕೊಳ್ಳುವ ಸೀಮೋನ ಮತ್ತು ಅವನ ಸಹೋದರನಾದ ಅಂದ್ರೆಯನು ಸಮುದ್ರದಲ್ಲಿ ಬಲೆಬೀಸುವುದನ್ನು ಕಂಡನು; ಅವರು ಬೆಸ್ತರಾಗಿದ್ದರು.
Enquanto [Jesus] andava junto ao mar da Galileia, viu dois irmãos: Simão, chamado Pedro, e seu irmão André, lançarem a rede ao mar, porque eram pescadores.
19 ೧೯ ಅವರಿಗೆ ಆತನು, “ನನ್ನನ್ನು ಹಿಂಬಾಲಿಸಿರಿ, ಮನುಷ್ಯರನ್ನು ಹಿಡಿಯುವ ಬೆಸ್ತರನ್ನಾಗಿ ನಿಮ್ಮನ್ನು ಮಾಡುವೆನು” ಎಂದು ಹೇಳುತ್ತಲೇ,
E disse-lhes: Vinde após mim, e eu vos farei pescadores de gente.
20 ೨೦ ತಕ್ಷಣ ಅವರು ತಮ್ಮ ಬಲೆಗಳನ್ನು ಬಿಟ್ಟು ಆತನನ್ನು ಹಿಂಬಾಲಿಸಿದರು.
Então eles logo deixaram as redes e o seguiram.
21 ೨೧ ಯೇಸು ಅಲ್ಲಿಂದ ಮುಂದೆ ಹೋಗುತ್ತಿರುವಾಗ ಇನ್ನಿಬ್ಬರು ಅಣ್ಣ ತಮ್ಮಂದಿರನ್ನು ಅಂದರೆ ಜೆಬೆದಾಯನ ಮಗನಾದ ಯಾಕೋಬನನ್ನೂ ಅವನ ತಮ್ಮನಾದ ಯೋಹಾನನ್ನೂ ಕಂಡನು; ಇವರು ತಮ್ಮ ತಂದೆಯಾದ ಜೆಬೆದಾಯನ ಸಂಗಡ ದೋಣಿಯಲ್ಲಿ ತಮ್ಮ ಬಲೆಗಳನ್ನು ಸರಿಮಾಡುತ್ತಿದ್ದರು. ಆತನು ಅವರನ್ನು ಕರೆದನು.
E passando dali, viu outros dois irmãos: Tiago, [filho] de Zebedeu, e seu irmão João, em um barco, com seu pai Zebedeu, que estavam consertando suas redes; e ele os chamou.
22 ೨೨ ಕೂಡಲೆ ಅವರು ದೋಣಿಯನ್ನು ಮತ್ತು ತಮ್ಮ ತಂದೆಯನ್ನು ಬಿಟ್ಟು ಆತನನ್ನು ಹಿಂಬಾಲಿಸಿದರು.
E eles logo deixaram o barco e seu pai, e o seguiram.
23 ೨೩ ಬಳಿಕ ಯೇಸು ಗಲಿಲಾಯದಲ್ಲೆಲ್ಲಾ ಸಂಚರಿಸಿ ಅಲ್ಲಿಯವರ ಸಭಾಮಂದಿರಗಳಲ್ಲಿ ಉಪದೇಶ ಮಾಡುತ್ತಾ, ದೇವರ ರಾಜ್ಯದ ಸುವಾರ್ತೆಯನ್ನು ಸಾರಿ ಹೇಳುತ್ತಾ ಜನರ ಎಲ್ಲಾ ತರದ ರೋಗಗಳನ್ನೂ ಎಲ್ಲಾ ತರದ ಬೇನೆಗಳನ್ನೂ ವಾಸಿಮಾಡುತ್ತಾ ಬಂದನು.
E [Jesus] rodeava toda a Galileia, ensinando em suas sinagogas, pregando o Evangelho do Reino, e curando toda enfermidade e toda doença no povo.
24 ೨೪ ಆತನ ಸುದ್ದಿಯು ಸಿರಿಯಾದಲ್ಲೆಲ್ಲಾ ಹಬ್ಬಿದ್ದರಿಂದ ಅಸ್ವಸ್ಥರಾದವರನ್ನು, ಅಂದರೆ ನಾನಾ ರೀತಿಯ ರೋಗಗಳಿಂದ ಮತ್ತು ವೇದನೆಗಳಿಂದ ಕಷ್ಟಪಡುವವರನ್ನೂ, ದೆವ್ವಹಿಡಿದವರನ್ನೂ ಮೂರ್ಛಾರೋಗಿಗಳನ್ನೂ ಪಾರ್ಶ್ವವಾಯುವಿನವರನ್ನೂ ಆತನ ಬಳಿಗೆ ಕರತಂದರು; ಆತನು ಅವರನ್ನು ಸ್ವಸ್ಥಮಾಡಿದನು.
Sua fama corria por toda a Síria, e traziam-lhe todos que sofriam de algum mal, tendo diversas enfermidades e tormentos, e os endemoninhados, epiléticos, e paralíticos; e ele os curava.
25 ೨೫ ಗಲಿಲಾಯ, ದೆಕಪೊಲಿ, ಯೆರೂಸಲೇಮ್, ಯೂದಾಯ ಎಂಬೀ ಸ್ಥಳಗಳಿಂದಲೂ ಯೊರ್ದನ್ ಹೊಳೆಯ ಆಚೇ ಕಡೆಯಿಂದಲೂ ಜನರು ಗುಂಪುಗುಂಪಾಗಿ ಆತನನ್ನು ಹಿಂಬಾಲಿಸಿದರು.
E muitas multidões da Galileia, de Decápolis, de Jerusalém, da Judeia, e dalém do Jordão o seguiam.