< ಮತ್ತಾಯನು 4 >

1 ಆಗ ಯೇಸು ಸೈತಾನನಿಂದ ಶೋಧಿಸಲ್ಪಡುವುದಕ್ಕಾಗಿ ದೇವರಾತ್ಮನು ಆತನನ್ನು ಅಡವಿಗೆ ನಡೆಸಿದನು.
Тогда Иисус возведен был Духом в пустыню, для искушения от диавола,
2 ಆತನು ನಲವತ್ತು ದಿನ ಹಗಲಿರುಳು ಉಪವಾಸವಿದ್ದ ತರುವಾಯ ಆತನಿಗೆ ಹಸಿವಾಯಿತು.
и, постившись сорок дней и сорок ночей, напоследок взалкал.
3 ಆಗ ಸೈತಾನನು ಆತನ ಬಳಿಗೆ ಬಂದು, “ನೀನು ದೇವರ ಮಗನಾಗಿದ್ದರೆ ಈ ಕಲ್ಲುಗಳಿಗೆ ರೊಟ್ಟಿಯಾಗುವಂತೆ ಅಪ್ಪಣೆಕೊಡು” ಎಂದು ಹೇಳಲು,
И приступил к Нему искуситель и сказал: если Ты Сын Божий, скажи, чтобы камни сии сделались хлебами.
4 ಯೇಸು, “‘ಮನುಷ್ಯನು ರೊಟ್ಟಿ ತಿಂದ ಮಾತ್ರದಿಂದ ಬದುಕುವುದಿಲ್ಲ, ಆದರೆ ದೇವರ ಬಾಯಿಂದ ಬರುವ ಪ್ರತಿಯೊಂದು ನುಡಿಯಿಂದಲೂ ಬದುಕುವನು’ ಎಂದು ಬರೆದಿದೆ” ಅಂದನು.
Он же сказал ему в ответ: написано: не хлебом одним будет жить человек, но всяким словом, исходящим из уст Божиих.
5 ಆಗ ಸೈತಾನನು ಯೇಸುವನ್ನು ಪರಿಶುದ್ಧ ಪಟ್ಟಣಕ್ಕೆ ಕರೆದುಕೊಂಡು ಹೋಗಿ ದೇವಾಲಯದ ಗೋಪುರದ ಮೇಲೆ ನಿಲ್ಲಿಸಿ
Потом берет Его диавол в святой город, и поставляет Его на крыле храма,
6 ಯೇಸುವಿಗೆ, “ನೀನು ದೇವರ ಮಗನೇ ಆಗಿದ್ದರೆ ಇಲ್ಲಿಂದ ಕೆಳಕ್ಕೆ ದುಮುಕು; ‘ದೇವರು ನಿನ್ನ ವಿಷಯವಾಗಿ ತನ್ನ ದೂತರಿಗೆ ಅಪ್ಪಣೆಕೊಡುವನು; ನಿನ್ನ ಕಾಲು ಕಲ್ಲಿಗೆ ತಗಲದಂತೆ ಅವರು ನಿನ್ನನ್ನು ಕೈಗಳಲ್ಲಿ ಎತ್ತಿಕೊಳ್ಳುವರು’ ಎಂಬುದಾಗಿ ಬರೆದಿದೆಯಲ್ಲಾ” ಎಂದು ಹೇಳಿದನು.
и говорит Ему: если Ты Сын Божий, бросься вниз, ибо написано: Ангелам Своим заповедает о Тебе, и на руках понесут Тебя, да не преткнешься о камень ногою Твоею.
7 ಅದಕ್ಕೆ ಯೇಸು, “ನಿನ್ನ ದೇವರಾಗಿರುವ ಕರ್ತನನ್ನು ಪರೀಕ್ಷಿಸಬಾರದು ಎಂಬುದಾಗಿಯೂ ಬರೆದಿದೆ” ಅಂದನು.
Иисус сказал ему: написано также: не искушай Господа Бога твоего.
8 ಬಳಿಕ ಸೈತಾನನು ಆತನನ್ನು ಬಹಳ ಎತ್ತರವಾದ ಬೆಟ್ಟಕ್ಕೆ ಕರೆದುಕೊಂಡು ಹೋಗಿ ಪ್ರಪಂಚದ ಎಲ್ಲಾ ರಾಜ್ಯಗಳನ್ನೂ ಅವುಗಳ ವೈಭವವನ್ನೂ ಆತನಿಗೆ ತೋರಿಸಿ,
Опять берет Его диавол на весьма высокую гору и показывает Ему все царства мира и славу их,
9 ಯೇಸುವಿಗೆ, “ನೀನು ನನಗೆ ಅಡ್ಡಬಿದ್ದು ನನ್ನನ್ನು ಆರಾಧಿಸಿದರೆ ಇವುಗಳನ್ನೆಲ್ಲಾ ನಿನಗೆ ಕೊಡುವೆನು” ಅಂದನು.
и говорит Ему: все это дам Тебе, если, пав, поклонишься мне.
10 ೧೦ ಯೇಸು ಅವನಿಗೆ, “ಸೈತಾನನೇ, ನೀನು ತೊಲಗಿ ಹೋಗು. ‘ನಿನ್ನ ದೇವರಾಗಿರುವ ಕರ್ತನನ್ನು ಮಾತ್ರ ಆರಾಧಿಸಬೇಕು ಆತನೊಬ್ಬನನ್ನೇ ಸೇವಿಸಬೇಕು’ಎಂಬುದಾಗಿ ಬರೆದಿದೆಯಲ್ಲಾ” ಎಂದು ಹೇಳಿದನು.
Тогда Иисус говорит ему: отойди от Меня, сатана, ибо написано: Господу Богу твоему поклоняйся и Ему одному служи.
11 ೧೧ ಆಗ ಸೈತಾನನು ಆತನನ್ನು ಬಿಟ್ಟು ಹೊರಟು ಹೋದನು, ಆಗ ದೇವದೂತರು ಬಂದು ಆತನಿಗೆ ಉಪಚಾರ ಮಾಡಿದರು.
Тогда оставляет Его диавол, и се, Ангелы приступили и служили Ему.
12 ೧೨ ಯೋಹಾನನು ಸೆರೆಯಾದನು ಎಂದು ಯೇಸು ಕೇಳಿ ಆ ಸ್ಥಳವನ್ನು ಬಿಟ್ಟು ಗಲಿಲಾಯ ಸೀಮೆಗೆ ಹೊರಟು ಹೋದನು.
Услышав же Иисус, что Иоанн отдан под стражу, удалился в Галилею
13 ೧೩ ಬಳಿಕ ನಜರೇತೆಂಬ ಊರನ್ನು ಬಿಟ್ಟು ಜೆಬುಲೋನ್‌ ಮತ್ತು ನಫ್ತಾಲಿಯರ ಗಡಿ ನಾಡುಗಳಿಗೆ ಬಂದು ಸಮುದ್ರದ ಹತ್ತಿರದಲ್ಲಿರುವ ಕಪೆರ್ನೌಮೆಂಬ ಊರಿನಲ್ಲಿ ವಾಸಿಸತೊಡಗಿದನು.
и, оставив Назарет, пришел и поселился в Капернауме приморском, в пределах Завулоновых и Неффалимовых,
14 ೧೪ ಇದರಿಂದ ಯೆಶಾಯನೆಂಬ ಪ್ರವಾದಿಯ ಮುಖಾಂತರ ಹೇಳಿರುವ ಮಾತು ನೆರವೇರಿತು; ಆ ಮಾತು ಏನೆಂದರೆ,
да сбудется реченное через пророка Исаию, который говорит:
15 ೧೫ “ಜೆಬುಲೋನ್ ಸೀಮೆ ಮತ್ತು ನಫ್ತಾಲಿ ಸೀಮೆ, ಯೊರ್ದನಿನ ಆಚೆ, ಸಮುದ್ರದ ಕಡೆಗಿರುವ ಸೀಮೆ, ಅನ್ಯಜನಗಳಿರುವ ಗಲಿಲಾಯ ಸೀಮೆ,
земля Завулонова и земля Неффалимова, на пути приморском, за Иорданом, Галилея языческая,
16 ೧೬ ಹೀಗೆ ಕತ್ತಲಲ್ಲಿ ವಾಸಿಸಿದ ಈ ಸೀಮೆಯ ಜನರಿಗೆ ಮಹಾ ಬೆಳಕು ಕಾಣಿಸಿತು; ಮರಣದ ಛಾಯೆ ನೆರೆದ ಪ್ರದೇಶಗಳಲ್ಲಿ ವಾಸಿಸುವವರಿಗೆ ಬೆಳಕು ಉದಯವಾಯಿತು” ಎಂಬುದು.
народ, сидящий во тьме, увидел свет великий, и сидящим в стране и тени смертной воссиял свет.
17 ೧೭ ಅಂದಿನಿಂದ ಯೇಸು, “ಪಶ್ಚಾತ್ತಾಪಪಡಿರಿ ಪರಲೋಕ ರಾಜ್ಯವು ಸಮೀಪಿಸಿತು” ಎಂದು ಸಾರುವುದಕ್ಕೆ ಪ್ರಾರಂಭಿಸಿದನು.
С того времени Иисус начал проповедывать и говорить: покайтесь, ибо приблизилось Царство Небесное.
18 ೧೮ ಯೇಸು ಗಲಿಲಾಯ ಸಮುದ್ರದ ತೀರದಲ್ಲಿ ನಡೆದು ಹೋಗುವಾಗ ಪೇತ್ರನೆನಿಸಿಕೊಳ್ಳುವ ಸೀಮೋನ ಮತ್ತು ಅವನ ಸಹೋದರನಾದ ಅಂದ್ರೆಯನು ಸಮುದ್ರದಲ್ಲಿ ಬಲೆಬೀಸುವುದನ್ನು ಕಂಡನು; ಅವರು ಬೆಸ್ತರಾಗಿದ್ದರು.
Проходя же близ моря Галилейского, Он увидел двух братьев: Симона, называемого Петром, и Андрея, брата его, закидывающих сети в море, ибо они были рыболовы,
19 ೧೯ ಅವರಿಗೆ ಆತನು, “ನನ್ನನ್ನು ಹಿಂಬಾಲಿಸಿರಿ, ಮನುಷ್ಯರನ್ನು ಹಿಡಿಯುವ ಬೆಸ್ತರನ್ನಾಗಿ ನಿಮ್ಮನ್ನು ಮಾಡುವೆನು” ಎಂದು ಹೇಳುತ್ತಲೇ,
и говорит им: идите за Мною, и Я сделаю вас ловцами человеков.
20 ೨೦ ತಕ್ಷಣ ಅವರು ತಮ್ಮ ಬಲೆಗಳನ್ನು ಬಿಟ್ಟು ಆತನನ್ನು ಹಿಂಬಾಲಿಸಿದರು.
И они тотчас, оставив сети, последовали за Ним.
21 ೨೧ ಯೇಸು ಅಲ್ಲಿಂದ ಮುಂದೆ ಹೋಗುತ್ತಿರುವಾಗ ಇನ್ನಿಬ್ಬರು ಅಣ್ಣ ತಮ್ಮಂದಿರನ್ನು ಅಂದರೆ ಜೆಬೆದಾಯನ ಮಗನಾದ ಯಾಕೋಬನನ್ನೂ ಅವನ ತಮ್ಮನಾದ ಯೋಹಾನನ್ನೂ ಕಂಡನು; ಇವರು ತಮ್ಮ ತಂದೆಯಾದ ಜೆಬೆದಾಯನ ಸಂಗಡ ದೋಣಿಯಲ್ಲಿ ತಮ್ಮ ಬಲೆಗಳನ್ನು ಸರಿಮಾಡುತ್ತಿದ್ದರು. ಆತನು ಅವರನ್ನು ಕರೆದನು.
Оттуда, идя далее, увидел Он других двух братьев, Иакова Зеведеева и Иоанна, брата его, в лодке с Зеведеем, отцом их, починивающих сети свои, и призвал их.
22 ೨೨ ಕೂಡಲೆ ಅವರು ದೋಣಿಯನ್ನು ಮತ್ತು ತಮ್ಮ ತಂದೆಯನ್ನು ಬಿಟ್ಟು ಆತನನ್ನು ಹಿಂಬಾಲಿಸಿದರು.
И они тотчас, оставив лодку и отца своего, последовали за Ним.
23 ೨೩ ಬಳಿಕ ಯೇಸು ಗಲಿಲಾಯದಲ್ಲೆಲ್ಲಾ ಸಂಚರಿಸಿ ಅಲ್ಲಿಯವರ ಸಭಾಮಂದಿರಗಳಲ್ಲಿ ಉಪದೇಶ ಮಾಡುತ್ತಾ, ದೇವರ ರಾಜ್ಯದ ಸುವಾರ್ತೆಯನ್ನು ಸಾರಿ ಹೇಳುತ್ತಾ ಜನರ ಎಲ್ಲಾ ತರದ ರೋಗಗಳನ್ನೂ ಎಲ್ಲಾ ತರದ ಬೇನೆಗಳನ್ನೂ ವಾಸಿಮಾಡುತ್ತಾ ಬಂದನು.
И ходил Иисус по всей Галилее, уча в синагогах их, и проповедуя Евангелие Царствия, и исцеляя всякую болезнь и всякую немощь в людях.
24 ೨೪ ಆತನ ಸುದ್ದಿಯು ಸಿರಿಯಾದಲ್ಲೆಲ್ಲಾ ಹಬ್ಬಿದ್ದರಿಂದ ಅಸ್ವಸ್ಥರಾದವರನ್ನು, ಅಂದರೆ ನಾನಾ ರೀತಿಯ ರೋಗಗಳಿಂದ ಮತ್ತು ವೇದನೆಗಳಿಂದ ಕಷ್ಟಪಡುವವರನ್ನೂ, ದೆವ್ವಹಿಡಿದವರನ್ನೂ ಮೂರ್ಛಾರೋಗಿಗಳನ್ನೂ ಪಾರ್ಶ್ವವಾಯುವಿನವರನ್ನೂ ಆತನ ಬಳಿಗೆ ಕರತಂದರು; ಆತನು ಅವರನ್ನು ಸ್ವಸ್ಥಮಾಡಿದನು.
И прошел о Нем слух по всей Сирии; и приводили к Нему всех немощных, одержимых различными болезнями и припадками, и бесноватых, и лунатиков, и расслабленных, и Он исцелял их.
25 ೨೫ ಗಲಿಲಾಯ, ದೆಕಪೊಲಿ, ಯೆರೂಸಲೇಮ್, ಯೂದಾಯ ಎಂಬೀ ಸ್ಥಳಗಳಿಂದಲೂ ಯೊರ್ದನ್ ಹೊಳೆಯ ಆಚೇ ಕಡೆಯಿಂದಲೂ ಜನರು ಗುಂಪುಗುಂಪಾಗಿ ಆತನನ್ನು ಹಿಂಬಾಲಿಸಿದರು.
И следовало за Ним множество народа из Галилеи и Десятиградия, и Иерусалима, и Иудеи, и из-за Иордана.

< ಮತ್ತಾಯನು 4 >