< ಮತ್ತಾಯನು 6 >
1 ೧ “ಜನರು ನೋಡಲಿ ಎಂದು ನಿಮ್ಮ ‘ಧರ್ಮಕಾರ್ಯಗಳನ್ನು’ ಅವರ ಮುಂದೆ ಮಾಡಬಾರದು; ಹಾಗೆ ಮಾಡಿದರೆ ಪರಲೋಕದಲ್ಲಿರುವ ನಿಮ್ಮ ತಂದೆಯ ಹತ್ತಿರ ನಿಮಗೆಫಲದೊರೆಯುವುದಿಲ್ಲ.
Tula miho uleke kituma intendo niyatai kuntongeela aantu nukielya kitalao, nsoko shukupata ukembetwa kupuma kung'wa tata nukole kigulu.
2 ೨ “ಆದುದರಿಂದ ನೀನು ದಾನಕೊಡುವಾಗ ಅದನ್ನು ಪ್ರಚಾರಪಡಿಸಬೇಡ; ಜನರಿಂದ ಹೊಗಳಿಸಿಕೊಳ್ಳಬೇಕೆಂದು ಕಪಟಿಗಳು ಸಭಾಮಂದಿರಗಳಲ್ಲಿಯೂ ಬೀದಿಗಳಲ್ಲಿಯೂ ಹಾಗೆ ಮಾಡುತ್ತಾರೆ. ಅವರು ತಮಗೆ ಬರತಕ್ಕ ಫಲವನ್ನು ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
Kululo nukupumya leka kukua impembe nukikulya anga ao niielya niakoli mumatekeelo numuisali, nsoko iantu aakulye, tai numuie asingiilya uziza wao.
3 ೩ ಆದರೆ ನೀನು ದಾನ ಕೊಡುವಾಗ ನಿನ್ನ ಬಲಗೈ ದಾನಕೊಟ್ಟದ್ದು ಎಡಗೈಗೂ ತಿಳಿಯದಿರಲಿ.
Uwe nukupuma, umukono wako nuakikema uleke kulinga iko nikekitung'wa numukono nua kigoha.
4 ೪ ಅಂತರಂಗದಲ್ಲಿ ನಡೆಯುವುದನ್ನು ನೋಡುವ ನಿನ್ನ ತಂದೆಯು ನಿನಗೆ ಫಲಕೊಡುವನು.
Ingi gwa ikintu kako kipumigwe kwa kinkunku. Pang'wanso utata ako nuiona unkunku ako ukuupa imaintu ako.
5 ೫ “ನೀವು ಪ್ರಾರ್ಥನೆಮಾಡುವಾಗ ಕಪಟಿಗಳ ಹಾಗೆ ಮಾಡಬೇಡಿರಿ. ಜನರು ನೋಡಬೇಕೆಂದು ಅವರು ಸಭಾಮಂದಿರಗಳಲ್ಲಿಯೂ ಬೀದಿಚೌಕಗಳಲ್ಲಿಯೂ ನಿಂತುಕೊಂಡು ಪ್ರಾರ್ಥನೆಮಾಡುವುದಕ್ಕೆ ಇಷ್ಟಪಡುತ್ತಾರೆ. ಅವರು ತಮಗೆ ಬರತಕ್ಕ ಫಲವನ್ನು ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
Hangi nukulompa, uleke kutula anga ao niielya, kunsoko ilowa kimika nukulompa mumatekeelo numumpelo ya isali, nsoko agozwe niantu. Tai numuie akondilye kupegwa ipegwa yao.
6 ೬ ನೀನು ಪ್ರಾರ್ಥನೆಮಾಡುವಾಗನಿನ್ನ ಕೋಣೆಯೊಳಗೆ ಹೋಗಿ ಬಾಗಿಲನ್ನು ಮುಚ್ಚಿಕೊಂಡು ಅಂತರಂಗದಲ್ಲಿರುವ ನಿನ್ನ ತಂದೆಗೆ ಪ್ರಾರ್ಥನೆಮಾಡು. ಅಂತರಂಗದಲ್ಲಿ ನಡೆಯುವುದನ್ನು ನೋಡುವ ನಿನ್ನ ತಂದೆಯು ನಿನಗೆ ಫಲಕೊಡುವನು.
Kululo gwa, angawahia kulompa ingile munyumba lugaila umulango ulompe kung'wa Tata ako nukole kunkunku. Pang'wanso utata ako nuiona unkunku ukuupa ikipegwa kako.
7 ೭ ಆದರೆ ಪ್ರಾರ್ಥನೆಮಾಡುವಾಗ ಅನ್ಯಜನಗಳ ಹಾಗೆ ಹೇಳಿದ್ದನ್ನೇ ಸುಮ್ಮನೆ ಮತ್ತೆ ಮತ್ತೆ ಹೇಳಬೇಡ; ಅವರು ಬಹಳ ಮಾತುಗಳನ್ನಾಡಿದರೆ ತಮ್ಮ ಪ್ರಾರ್ಥನೆಯನ್ನು ದೇವರು ಕೇಳುತ್ತಾನೆಂದು ಭಾವಿಸುತ್ತಾರೆ.
Nukulompa leka kusukila sukiila inkani ningila insoko anga anyakilungu niituma, isiga kina akigigwa kunsoko amakani du niakumaligitya.
8 ೮ ಆದುದರಿಂದ ನೀವು ಅವರ ಹಾಗೆ ಆಗಬೇಡಿರಿ. ನೀವು ನಿಮ್ಮ ತಂದೆಯನ್ನು ಬೇಡಿಕೊಳ್ಳುವುದಕ್ಕಿಂತ ಮೊದಲೇ ನಿಮಗೆ ಏನೇನು ಅಗತ್ಯವೆಂಬುದು ಆತನಿಗೆ ತಿಳಿದಿದೆ.
Kululo, uleke kutula anga nianso, kunsoko utata ao aiwalinga kina atakile ntuni nianso akazi akili kanu kulompa.
9 ೯ ಆದುದರಿಂದ ನೀವು ಹೀಗೆ ಪ್ರಾರ್ಥನೆಮಾಡಬೇಕು,
Ingi lompa iti: Tata witu nukoli kilunde lina lako likuligwe.
10 ೧೦ “ಪರಲೋಕದಲ್ಲಿರುವ ನಮ್ಮ ತಂದೆಯೇ, ನಿನ್ನ ನಾಮವು ಪರಿಶುದ್ಧವೆಂದು ಎಣಿಸಲ್ಪಡಲಿ. ನಿನ್ನ ರಾಜ್ಯವು ಬರಲಿ. ನಿನ್ನ ಚಿತ್ತವು ಪರಲೋಕದಲ್ಲಿ ನೆರವೇರುವ ಪ್ರಕಾರ ಭೂಲೋಕದಲ್ಲಿಯೂ ನೆರವೇರಲಿ.
Utemi wako uze, ulowa wako witume mihi anga nuituma kilunde.
11 ೧೧ ನಮ್ಮ ಅನುದಿನದ ಆಹಾರವನ್ನು ಈ ಹೊತ್ತು ನಮಗೆ ದಯಪಾಲಿಸು.
Ukupe indya yitu nia leliye.
12 ೧೨ ನಮಗೆ ತಪ್ಪು ಮಾಡಿದವರನ್ನು ನಾವು ಕ್ಷಮಿಸಿದಂತೆ ನಮ್ಮತಪ್ಪುಗಳನ್ನು ಕ್ಷಮಿಸು.
Ukulekele imilandu anga usese nikialekela awa naiakukosee.
13 ೧೩ ನಮ್ಮನ್ನು ಶೋಧನೆಯೊಳಗೆ ಸೇರಿಸದೆ ಕೆಡುಕನಿಂದ; ನಮ್ಮನ್ನು ತಪ್ಪಿಸು
Uleke kuutwala muma geng'wa, ukupugamule numulugu.
14 ೧೪ ನೀವು ಜನರ ತಪ್ಪುಗಳನ್ನು ಕ್ಷಮಿಸಿದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ನಿಮ್ಮ ತಪ್ಪುಗಳನ್ನೂ ಕ್ಷಮಿಸುವನು.
Anga itule mukualekela iantu imilandu ao, nunyenye utata anyu nuakigulu nung'wenso ukumulekela.
15 ೧೫ ಆದರೆ ನೀವು ಜನರ ತಪ್ಪುಗಳನ್ನು ಕ್ಷಮಿಸದೇ ಹೋದರೆ ನಿಮ್ಮ ತಂದೆ ಸಹ ನಿಮ್ಮ ತಪ್ಪುಗಳನ್ನು ಕ್ಷಮಿಸುವುದಿಲ್ಲ.
Ang'wi shamukualekela imilandu ao ka nu tata anyu shukumulekela imilandu anyu.
16 ೧೬ “ಇದಲ್ಲದೆನೀವು ಉಪವಾಸಮಾಡುವಾಗ ಕಪಟಿಗಳಂತೆ ಮುಖವನ್ನು ಸಪ್ಪಗೆ ಮಾಡಿಕೊಳ್ಳಬೇಡಿರಿ. ಅವರು ತಾವು ಉಪವಾಸಿಗಳೆಂದು ಜನರಿಗೆ ತೋರಿಬರುವಂತೆ ತಮ್ಮ ಮುಖವನ್ನು ವಿಕಾರಮಾಡಿಕೊಳ್ಳುತ್ತಾರೆ. ಅವರು ತಮಗೆ ಬರತಕ್ಕ ಫಲವನ್ನು ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
Matungo ihi nakiima leka kigeeleke anga ao niilya, akunye imakelu ao anwe kina iimile kuntongeela aantu. Tai kuila asingiilya ipegwa yao.
17 ೧೭ ಆದರೆ ನೀನು ಉಪವಾಸಮಾಡುವಾಗ ತಲೆಗೆ ಎಣ್ಣೆ ಹಚ್ಚಿಕೊಂಡು ಮುಖವನ್ನು ತೊಳೆದುಕೋ.
Kululo uewe niwiimile, paka imakuta itwe lako, hangi woje usu ako.
18 ೧೮ ಹೀಗೆ ಮಾಡಿದರೆ ನೀನು ಉಪವಾಸಿಯೆಂದು ಜನರಿಗೆ ಕಾಣದೆ ಹೋದಾಗ್ಯೂ ಅಂತರಂಗದಲ್ಲಿರುವ ನಿನ್ನ ತಂದೆಗೆ ಉಪವಾಸಿಯೆಂದು ಕಾಣಿಸಿಕೊಳ್ಳುವಿ. ಅಂತರಂಗದಲ್ಲಿ ನಡೆಯುವುದನ್ನು ನೋಡುವ ನಿನ್ನ ತಂದೆಯು ನಿನಗೆ ಪ್ರತಿಫಲಕೊಡುವನು.
Ingi shaikigeeleka kuntongeela aantu kina wiimile, ikutula kung'wa Tata ako nuakinkunku. Nu tata ako nuiona unkunku ukuupa ikipegwa kako.
19 ೧೯ “ಭೂಲೋಕದಲ್ಲಿ ಸಂಪತ್ತು ಮಾಡಿ ಇಟ್ಟುಕೊಳ್ಳಬೇಡಿರಿ; ಇಲ್ಲಿ ಅದು ನುಸಿ ಹಿಡಿದು, ಕಿಲುಬು ಹತ್ತಿ ಕೆಟ್ಟುಹೋಗುವುದು; ಇಲ್ಲಿ ಕಳ್ಳರು ಕನ್ನಾಕೊರೆದು ಕದಿಯುವರು.
Leka kiekilya ikiuto kako munu mihi akoli agazanji, nii ii niibunanga nukia.
20 ೨೦ ಆದರೆ ಪರಲೋಕದಲ್ಲಿ ಸಂಪತ್ತು ಮಾಡಿ ಇಟ್ಟುಕೊಳ್ಳಿರಿ; ಅಲ್ಲಿ ಅದು ನುಸಿ ಹಿಡಿದು, ಕಿಲುಬು ಹತ್ತಿ ಕೆಟ್ಟುಹೋಗುವುದಿಲ್ಲ; ಅಲ್ಲಿ ಕಳ್ಳರು ಕನ್ನಾಕೊರೆಯುವುದೂ ಇಲ್ಲ. ಕದಿಯುವುದೂ ಇಲ್ಲ,
Iekelya ikiuto kako kigulu, kung'wanso kulile anga agazanji, hangi tile anga ii niakubunanga nukia.
21 ೨೧ ನಿನ್ನ ಸಂಪತ್ತು ಇದ್ದಲ್ಲಿಯೇ ನಿನ್ನ ಮನಸ್ಸು ಇರುತ್ತದಷ್ಟೆ.
Kunsoko kuna kiuto kako kikoli, kuko ni nkolo ako izize ikoli.
22 ೨೨ “ಕಣ್ಣು ದೇಹಕ್ಕೆ ದೀಪವಾಗಿದೆ; ಹೀಗಿರುವುದರಿಂದ ನಿನ್ನ ಕಣ್ಣು ಚೆನ್ನಾಗಿದ್ದರೆ ನಿನ್ನ ದೇಹವೆಲ್ಲಾ ಬೆಳಕಾಗಿರುವುದು.
I liho lumuli la muili. Kululo ang'wi iliho lako ipanga, muili wihi ukizuligwa welu.
23 ೨೩ ನಿನ್ನ ಕಣ್ಣು ಕೆಟ್ಟದ್ದಾಗಿದ್ದರೆ ನಿನ್ನ ದೇಹವೆಲ್ಲಾ ಕತ್ತಲಾಗಿರುವುದು. ನಿನ್ನೊಳಗಿರುವ ಬೆಳಕೇ ಕತ್ತಲಾದರೆ ಆ ಕತ್ತಲು ಎಷ್ಟು ಮಹತ್ತರವಾಗಿರಬೇಕು!
Anga itule iliho lako ibe, umuili wako wihi ukizula kiti nikibe. Anga itule uwelu nuukole mitalako wa ki ti nangulu, ikiti kikutula kikulu nangulu.
24 ೨೪ “ಯಾರೊಬ್ಬನೂ ಇಬ್ಬರು ಯಜಮಾನರಿಗೆ ಸೇವೆಮಾಡಲಾರನು. ಅವನು ಒಬ್ಬನನ್ನುದ್ವೇಷಿಸಿ ಮತ್ತೊಬ್ಬನನ್ನು ಪ್ರೀತಿಸುವನು; ಇಲ್ಲವೆ ಒಬ್ಬನಿಗೆ ಶ್ರದ್ಧೆಯಿಂದ ಸೇವೆಮಾಡಿ ಮತ್ತೊಬ್ಬನನ್ನು ತಾತ್ಸಾರ ಮಾಡಬಹುದು. ನೀವು ದೇವರನ್ನೂ ಐಶ್ವರ್ಯವನ್ನೂ ಒಟ್ಟಾಗಿ ಸೇವಿಸಲಾರಿರಿ.
Kutile ata nung'wi nuhumila kuitumila akulu abili, kunsoko ukumuhukilwa ung'wi nukumlowa numungiza, hangi ukipumya kumukulya ung'wi, nukuhita kumukulya umuya. Sha mukumtumi kila Itunda ni nsao.
25 ೨೫ “ಈ ಕಾರಣದಿಂದ, ನಮ್ಮ ಜೀವನಕ್ಕೆ ಏನು ಊಟಮಾಡಬೇಕು, ಏನು ಕುಡಿಯಬೇಕು, ನಮ್ಮ ದೇಹರಕ್ಷಣೆಗಾಗಿ ಏನು ಧರಿಸಿಕೊಳ್ಳಬೇಕು ಎಂದು ಚಿಂತೆಮಾಡಬೇಡಿರಿ ಎಂದು ನಿಮಗೆ ಹೇಳುತ್ತೇನೆ. ಊಟಕ್ಕಿಂತ ಪ್ರಾಣವು ಉಡುಪಿಗಿಂತ ದೇಹವು ಮೇಲಾದುದಲ್ಲವೇ.
Kululo kuila, heja uoa wako, kina ukulya ntuni, ang'wi ukung'wa ntuni, ang'wi umuili ako, ukutugala ntuni. Aya hii singa akilingie indya, nu muili ukilinkie utugali?
26 ೨೬ ಆಕಾಶದಲ್ಲಿ ಹಾರಾಡುವ ಹಕ್ಕಿಗಳನ್ನು ನೋಡಿರಿ; ಅವು ಬಿತ್ತುವುದಿಲ್ಲ, ಕೊಯ್ಯುವುದಿಲ್ಲ, ಕಣಜಗಳಲ್ಲಿ ತುಂಬಿಟ್ಟುಕೊಳ್ಳುವುದಿಲ್ಲ; ಆದಾಗ್ಯೂ ಪರಲೋಕದಲ್ಲಿರುವ ನಿಮ್ಮ ತಂದೆಯು ಅವುಗಳನ್ನು ಸಾಕಿ ಸಲಹುತ್ತಾನೆ; ಅವುಗಳಿಗಿಂತ ನೀವು ಹೆಚ್ಚಿನವರಲ್ಲವೋ?
Goza inyunyi nikoli migulya. Shaitemela, shaikungula hangi shayilingila nukuika misalanga, utata anyu nua kigulu wilesa, unye sha miazane kukila nianso?
27 ೨೭ ಚಿಂತೆಮಾಡಿ ನಿಮ್ಮ ಜೀವಿತಾವಧಿಯನ್ನು ಒಂದು ಮೊಳಉದ್ದ ಬೆಳೆಸಲು ನಿಮ್ಮಲ್ಲಿ ಯಾರಿಂದಾದೀತು?
Nyenyu nuhumile kiongeela ala uluhiku nulung'wi munu mihi upanga wakwe?
28 ೨೮ ಇದಲ್ಲದೆ ನೀವು ಉಡುಪಿನ ವಿಷಯದಲ್ಲಿ ಚಿಂತೆಮಾಡುವುದೇಕೆ? ಅಡವಿಯ ಹೂವುಗಳು ಬೆಳೆಯುವ ರೀತಿಯನ್ನು ಯೋಚಿಸಿ ತಿಳಿದುಕೊಳ್ಳಿರಿ; ಅವು ದುಡಿಯುವುದಿಲ್ಲ, ನೂಲುವುದಿಲ್ಲ;
Niki nimukula nuwoa nuakutugala? Si sigiila maua nitula mumagunda nitulakula, shituma anga milimo, hangi shanga akitugalya.
29 ೨೯ ಆದಾಗ್ಯೂ ಆ ಹೂವುಗಳಲ್ಲಿ ಒಂದಕ್ಕಿರುವಷ್ಟು ಅಲಂಕಾರ ಅರಸನಾದ ಸೊಲೊಮೋನನಿಗೆ ಅವನು ತನ್ನ ಸಕಲ ವೈಭವದಿಂದಿರುವಾಗಲೂ ಸಹ ಇರಲಿಲ್ಲವೆಂದು ನಿಮಗೆ ಹೇಳುತ್ತೇನೆ.
Nkili kumuila kina ata Sulemani mugole wakwe wihi shautugawi ana nanso.
30 ೩೦ ಎಲೈ ಅಲ್ಪ ವಿಶ್ವಾಸಿಗಳೇ, ಈ ಹೊತ್ತು ಇದ್ದು ನಾಳೆ ಒಲೆಯ ಪಾಲಾಗುವ ಅಡವಿಯ ಹುಲ್ಲಿಗೇ ದೇವರು ಹೀಗೆ ಉಡಿಸಿದರೆ ಅದಕ್ಕಿಂತ ಎಷ್ಟೋ ಹೆಚ್ಚಾಗಿ ನಿಮಗೆ ಉಡಿಸಿ ತೊಡಿಸುವನಲ್ಲವೇ!
Ng'wi Itunda wiimatugalya imatutu na mumigunda nikie luhiku lung'wi numudau agung'we mumoto, aunye mkulaigaligwa uu, nimutite uhuili unino?
31 ೩೧ ಹೀಗಿರುವುದರಿಂದ, ‘ಏನು ಊಟಮಾಡಬೇಕು, ಏನು ಕುಡಿಯಬೇಕು, ಏನು ಧರಿಸಿಕೊಳ್ಳಬೇಕು’ ಎಂದು ಚಿಂತೆಮಾಡಬೇಡಿರಿ.
Kululo leki kutula nuwoa, kina kuulya ntuni? Angwe kutendwa ule? angwe kutugala ntuni?
32 ೩೨ ಇವೆಲ್ಲವುಗಳಿಗಾಗಿ ಅನ್ಯಜನಗಳು ತವಕಪಡುತ್ತಾರೆ. ಇದೆಲ್ಲಾ ನಿಮಗೆ ಅಗತ್ಯವಿದೆ ಎಂದು ಪರಲೋಕದಲ್ಲಿರುವ ನಿಮ್ಮ ತಂದೆಗೆ ತಿಳಿದಿದೆಯಷ್ಟೆ.
Kunsoko ianya kilungu akuduma yayo, nu Tata nyu nuakigulu uineu kina mtakile yayo.
33 ೩೩ ಹೀಗಿರುವುದರಿಂದ, ನೀವು ಮೊದಲು ದೇವರ ರಾಜ್ಯವನ್ನೂ ನೀತಿಯನ್ನೂ ಹುಡುಕಿರಿ. ಇವುಗಳ ಕೂಡ ಅವೆಲ್ಲವೂ ನಿಮಗೆ ದೊರಕುವವು.
Ingi gwa hanza upenzi utemi wakwe ni tai akwe nayi hii mukupegwa kitalakwe.
34 ೩೪ ಆದುದರಿಂದ ನಾಳಿನ ವಿಷಯವಾಗಿ ಚಿಂತೆ ಮಾಡಬೇಡಿರಿ; ನಾಳಿನ ದಿನವು ತನ್ನದನ್ನು ತಾನೇ ಚಿಂತಿಸಿಕೊಳ್ಳುವುದು. ಆ ಹೊತ್ತಿನ ಪಾಡೇ ಆ ಹೊತ್ತಿಗೆ ಸಾಕು.
Kululo leka kutula ninkiki nsoko amudau, aya namudau akizipiilya imenso. Kila uluhiku lutete ninkani yakwe.